Tag: ಬಜ್ಪೆ ಪೊಲೀಸ್ ಠಾಣೆ

  • ಸುಹಾಸ್ ಹತ್ಯೆಯಲ್ಲಿ ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್ ಭಾಗಿಯಾಗಿದ್ದಾರೆಂದು ಅವಹೇಳನ – ಇಬ್ಬರು ಹಿಂದೂ ಮುಖಂಡರ ವಿರುದ್ಧ FIR

    ಮಂಗಳೂರು: ಸುಹಾಸ್ ಶೆಟ್ಟಿ(Suhas Shetty) ಹತ್ಯೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ರಶೀದ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿ ಪೋಸ್ಟ್ ಹಾಕಿದ್ದ ಇಬ್ಬರು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಹಿಂದೂ ಮುಖಂಡ ಮೂಡಬಿದ್ರೆಯ(Moodabidri) ಸಮಿತ್ ರಾಜ್ ದರೆಗುಡ್ಡೆ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಉಲ್ಲಾಸ್ ಕೆ.ಟಿ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಹಾಕಲಾಗಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್‌ ಭಾಗಿ?

    ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಕೈವಾಡ ಇದೆ. ಯಾವಾಗ ಬಂಧನ ಎಂದು ಸಮಿತ್ ರಾಜ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಅಲ್ಲದೇ, ಹತ್ಯೆಯಲ್ಲಿ ಬಜಪೆ(Bajpe) ಠಾಣಾ ಹೆಡ್‌ಕಾನ್ಸ್‌ಟೇಬಲ್ ಪರೋಕ್ಷವಾಗಿ ಕೈ ಜೋಡಿಸಿದ್ದಾರೆ ಎಂದು ಉಲ್ಲಾಸ್ ಕೆ.ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಮೈನಿಂಗ್ ಕೇಸಲ್ಲಿ 7 ವರ್ಷ ಜೈಲು – ಶಾಸಕ ಸ್ಥಾನದಿಂದ ಅನರ್ಹರಾಗ್ತಾರಾ ರೆಡ್ಡಿ?

    ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ಎಳೆದು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೆಡ್‌ಕಾನ್ಸ್ಟೇಬಲ್ ರಶೀದ್ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

  • ಮಹಿಳೆಗೆ ಕಿರುಕುಳ ಕೊಟ್ಟ ಪೇದೆ ಕೋರ್ಟ್ ಕಟ್ಟಡದಿಂದ ಜಿಗಿದು ಸಾವು: ವಿಡಿಯೋ

    ಮಹಿಳೆಗೆ ಕಿರುಕುಳ ಕೊಟ್ಟ ಪೇದೆ ಕೋರ್ಟ್ ಕಟ್ಟಡದಿಂದ ಜಿಗಿದು ಸಾವು: ವಿಡಿಯೋ

    ಮಂಗಳೂರು: ಪಕ್ಕದ ಮನೆಯ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಬಂಧನವಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಅವಮಾನ ಸಹಿಸಲಾಗದೇ ಕೋರ್ಟ್ ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡವರು. ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಪ್ರವೀಣ್ ಪೊಕ್ಸೋ ಕಾಯ್ದೆಯಡಿ ಬಂಧಿತರಾಗಿದ್ದರು. ಪ್ರಕರಣ ಸಂಬಂಧ ಮಂಗಳೂರು ಜಿಲ್ಲಾ ಸತ್ರ 2ನೇ ನ್ಯಾಯಾಲಯಕ್ಕೆ ಹಾಜರುಪಡಿಸಲು ಬಜಪೆ ಪೊಲೀಸರು ಪ್ರವೀಣ್ ಅವರನ್ನು ಕರೆ ತಂದಿದ್ದರು. ಈ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಕೋರ್ಟ್‍ನ ನಾಲ್ಕನೇ ಮಹಡಿಯಿಂದ ಜಿಗಿದು ಪ್ರವೀಣ್ ಆತ್ಮಹತ್ಯೆಗೆ ಯತ್ನಿಸಿದ್ದರು. ಪರಿಣಾಮ ತೀವ್ರ ಗಾಯಗೊಂಡ ಪ್ರವೀಣ್ ರನ್ನು ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಪೊಲೀಸರ ವಿರುದ್ಧ ನಿರ್ಲಕ್ಷ್ಯದ ಆರೋಪ: ಕೋರ್ಟ್ ಕಟ್ಟಡದ ಮೇಲಿಂದ ಬಿದ್ದ ಆರೋಪಿ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಸುಮಾರು ಅರ್ಧ ಗಂಟೆಗಳ ಕಾಲ ಪೊಲೀಸರು ಆಸ್ಪತ್ರೆಗೆ ಸೇರಿಸದೆ ಅಮಾನವೀಯತೆ ತೋರಿದ್ದಾರೆ ಅಂತಾ ಇದೀಗ ಪೊಲೀಸರ ಮೇಲೆ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಪ್ರವೀಣ್ ಜೊತೆ ಇನ್ನಿಬ್ಬರ ಪೊಲೀಸರ ಹೆಸರೂ ಕೇಳಿ ಬಂದಿದ್ದು ಪ್ರಕರಣದ ಸಮಗ್ರ ತನಿಖೆ ನಡೆಸುವುದಾಗಿ ಮಂಗಳೂರು ಪೊಲೀಸ್ ಕಮೀಷನರ್ ಎಂ ಚಂದ್ರಶೇಖರ್ ಹೇಳಿದ್ದಾರೆ.

    https://www.youtube.com/watch?v=Hp8_36DAAzQ