Tag: ಬದರಿನಾಥ್

  • ಚಾರ್ ಧಾಮ್ ಯಾತ್ರಾ 2024: ಬದರಿನಾಥದಲ್ಲಿ VIP ದರ್ಶನ ಸೌಲಭ್ಯ ಸ್ಥಗಿತ

    ಚಾರ್ ಧಾಮ್ ಯಾತ್ರಾ 2024: ಬದರಿನಾಥದಲ್ಲಿ VIP ದರ್ಶನ ಸೌಲಭ್ಯ ಸ್ಥಗಿತ

    – 26 ಲಕ್ಷ ದಾಟಿದೆ ನೋಂದಣಿ ಮಾಡಿಕೊಂಡವರ ಸಂಖ್ಯೆ

    ಡೆಹ್ರಾಡೂನ್:‌ ಚಾರ್ ಧಾಮ್ ಯಾತ್ರೆಗೆ (Char Dham Yatra 2024) ದೇಶ, ವಿದೇಶಗಳಿಂದ ಭಕ್ತರು ಹರಿದು ಬರುತ್ತಿದ್ದಾರೆ. ಯಾತ್ರೆಯ ನೋಂದಣಿ ಸಂಖ್ಯೆ ಈಗಾಗಲೇ 26 ಲಕ್ಷ ದಾಟಿದೆ. ಕಳೆದ ನಾಲ್ಕು ದಿನಗಳಲ್ಲಿ ಎರಡು ಲಕ್ಷಕ್ಕೂ ಅಧಿಕ ಯಾತ್ರಾರ್ಥಿಗಳು ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ವಿಐಪಿ (VIP) ದರ್ಶನ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಏಪ್ರಿಲ್ 15 ರಂದು ಚಾರ್ಧಾಮ್ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅಂದಿನಿಂದ ಇದುವರೆಗೆ ರಾಜ್ಯದಲ್ಲಿ 26 ಲಕ್ಷಕ್ಕೂ ಹೆಚ್ಚು ಯಾತ್ರಿಕರು ನೋಂದಾಯಿಸಿಕೊಂಡಿದ್ದಾರೆ. ಯಾತ್ರಾರ್ಥಿಗಳಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಶ್ರಮಿಸುತ್ತಿದೆ. ಎಲ್ಲಾ ಅಧಿಕಾರಿಗಳು ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಗಂಭೀರವಾಗಿ ಅನುಸರಿಸುತ್ತಿದ್ದಾರೆ ಎಂದು ಅವರು ಹೇಳಿದರು.

    ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮೇ ತಿಂಗಳಲ್ಲಿ ಕೇದಾರನಾಥ, ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಧಾಮಕ್ಕೆ ಯಾತ್ರೆಗಾಗಿ ಆನ್‌ಲೈನ್ ನೋಂದಣಿಗಳನ್ನು ಸಂಪೂರ್ಣವಾಗಿ ಬುಕ್ ಮಾಡಲಾಗಿದೆ. ಆನ್‌ಲೈನ್ ನೋಂದಣಿಗೆ ನಿಗದಿತ ಸಂಖ್ಯೆಯ ಸ್ಲಾಟ್‌ಗಳು ಲಭ್ಯವಿದೆ. ಪೂರ್ವ ನೋಂದಣಿ ಇಲ್ಲದೆ ಆಗಮಿಸುವ ಭಕ್ತರಿಗೆ ಅವಕಾಶ ಕಲ್ಪಿಸಲು, ರಾಜ್ಯ ಸರ್ಕಾರ ಮತ್ತು ಪ್ರವಾಸೋದ್ಯಮ ಇಲಾಖೆ ಹರಿದ್ವಾರ ಮತ್ತು ಋಷಿಕೇಶದಲ್ಲಿ ಅವರ ಅನುಕೂಲಕ್ಕಾಗಿ ಆಫ್‌ಲೈನ್ ನೋಂದಣಿ ಸೌಲಭ್ಯಗಳನ್ನು ಆಯೋಜಿಸಿದೆ.

    ಗಂಗೋತ್ರಿ ಯಾತ್ರಾ ಮಾರ್ಗದಲ್ಲಿ ಟ್ರಾಫಿಕ್: ಗೇಟ್ ವ್ಯವಸ್ಥೆ ಜಾರಿಯಿಂದಾಗಿ ಯಮುನೋತ್ರಿ ಮಾರ್ಗದಲ್ಲಿ ವ್ಯವಸ್ಥೆಗಳು ಸುಗಮವಾಗಿ ಕಾರ್ಯನಿರ್ವಹಿಸುತ್ತಿರುವಂತೆ ಕಂಡುಬಂದರೂ ಗಂಗೋತ್ರಿ ಮಾರ್ಗದಲ್ಲಿ ಸವಾಲುಗಳು ಎದುರಾಗಿವೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಸಂಚಾರ ವ್ಯವಸ್ಥೆ ಹದಗೆಟ್ಟಿದೆ. ಗಂಗೋತ್ರಿ ಯಾತ್ರಾ ಮಾರ್ಗದಲ್ಲಿ ಗಂಗನಾನಿ ಮತ್ತು ಗಂಗೋತ್ರಿ ನಡುವೆ ಸುಮಾರು 60 ಕಿ.ಮೀ ವ್ಯಾಪಿಸಿರುವ ಟ್ರಾಫಿಕ್ ಜಾಮ್‌ನಲ್ಲಿ ಹಲವು ಪ್ರಯಾಣಿಕರ ವಾಹನಗಳು ಸಿಲುಕಿವೆ.

    ಹಿಂದಿರುಗಿದ ಭಕ್ತರು: ಸಂಚಾರ ದಟ್ಟಣೆಯಲ್ಲಿ ಸಿಲುಕಿದ ಅನೇಕ ಭಕ್ತರು ತಮ್ಮ ದರ್ಶನವನ್ನು ಪೂರ್ಣಗೊಳಿಸದೆ ಉತ್ತರಕಾಶಿಯಿಂದ ಹಿಂದಿರುಗಲು ನಿರ್ಧರಿಸಿದ್ದಾರೆ. ಕಳೆದ ಭಾನುವಾರ ಯಮುನೋತ್ರಿ ಯಾತ್ರಾ ಮಾರ್ಗದಲ್ಲಿ ಉಂಟಾದ ಭಾರೀ ಟ್ರಾಫಿಕ್‌ ಜಾಮ್‌ನಿಂದಾಗಿ ಭಕ್ತರು ಗಂಗೋತ್ರಿ ಧಾಮದ ಕಡೆಗೆ ಪ್ರಯಾಣ ಬೆಳೆಸಿದರು. ದಮ್ಲಾದಿಂದ ಪ್ರಾರಂಭವಾಗುವ ಬರ್ನಿಗಡ್ ಮತ್ತು ರಾಡಿ ಟಾಪ್ ಬೈಪಾಸ್‌ನಂತಹ ಪರ್ಯಾಯ ಮಾರ್ಗಗಳ ಮೂಲಕ ಪ್ರಯಾಣಿಕರು ಗಂಗೋತ್ರಿಯನ್ನು ತಲುಪಿದ್ದಾರೆ.

  • ಬದರಿನಾಥ್, ಕೇದಾರನಾಥಕ್ಕೆ ಮುಖೇಶ್ ಅಂಬಾನಿ ಭೇಟಿ – ದೇಗುಲದ ಟ್ರಸ್ಟ್‌ಗೆ 5 ಕೋಟಿ ದೇಣಿಗೆ

    ಬದರಿನಾಥ್, ಕೇದಾರನಾಥಕ್ಕೆ ಮುಖೇಶ್ ಅಂಬಾನಿ ಭೇಟಿ – ದೇಗುಲದ ಟ್ರಸ್ಟ್‌ಗೆ 5 ಕೋಟಿ ದೇಣಿಗೆ

    ಡೆಹ್ರಾಡೂನ್: ಖ್ಯಾತ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಖೇಶ್ ಅಂಬಾನಿ (Mukesh Ambani) ಅವರು ಗುರುವಾರ ಬದರಿನಾಥ್ (Badrinath) ಮತ್ತು ಕೇದಾರನಾಥ (Kedarnath) ಧಾಮಕ್ಕೆ ಭೇಟಿ ನೀಡಿದರು. ಈ ವೇಳೆ  ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಗೆ 5 ಕೋಟಿ ದೇಣಿಗೆ ನೀಡಿದ್ದಾರೆ.

    ದೇವಾಲಯಕ್ಕೆ ಭೇಟಿ ನೀಡಿದ ಅಂಬಾನಿ ಅವರ ಜೊತೆಗೆ ಪುತ್ರ ಅನಂತ್ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ರಾಧಿಕಾ ಮರ್ಚೆಂಟ್ ಅವರು ಆಗಮಿಸಿದ್ದರು. ಅಂಬಾನಿ ಅವರನ್ನು ದೇವಾಲಯದ ಅಧಿಕಾರಿಗಳು ಬರಮಾಡಿಕೊಂಡ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಹಿಜಬ್ ಭರವಸೆ ಬಲವಾಗಿದೆ – ನ್ಯಾ. ದುಲಿಯಾ ತೀರ್ಪಿಗೆ ಆಲಿಯಾ ಅಸ್ಸಾದಿ ಮೆಚ್ಚುಗೆ

    ಕಳೆದ ಕೆಲವು ವಾರಗಳಿಂದ ಹಲವಾರು ದೇವಸ್ಥಾನಗಳಿಗೆ ಅಂಬಾನಿ ಅವರು ಭೇಟಿ ನೀಡಿದ್ದಾರೆ. ಕಳೆದ ತಿಂಗಳು ಮೂರು ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ಮತ್ತು ದೇವಾಲಯದ ಟ್ರಸ್ಟ್‌ಗಳಿಗೆ ಇಷ್ಟೇ ಮೊತ್ತವನ್ನು ದೇಣಿಗೆ ನೀಡಿದರು. ಇದನ್ನೂ ಓದಿ: ಕೇರಳದಲ್ಲಿ ನರಬಲಿ ಕೇಸ್‌ – ಮಾಟ ಮಂತ್ರ ತಡೆಗೆ ಕಠಿಣ ಕಾನೂನು: ಕೇರಳ ಸರ್ಕಾರ ನಿರ್ಧಾರ

    Live Tv
    [brid partner=56869869 player=32851 video=960834 autoplay=true]

  • ಬದರಿನಾಥ್‍ನಲ್ಲಿ ಹೆಲಿಕಾಪ್ಟರ್ ಪತನ- ರೋಟರ್ ಬ್ಲೇಡ್‍ಗಳು ತಗುಲಿ ಎಂಜಿನಿಯರ್ ಸಾವು, ಇಬ್ಬರು ಪೈಲೆಟ್‍ಗಳಿಗೆ ಗಾಯ

    ಬದರಿನಾಥ್‍ನಲ್ಲಿ ಹೆಲಿಕಾಪ್ಟರ್ ಪತನ- ರೋಟರ್ ಬ್ಲೇಡ್‍ಗಳು ತಗುಲಿ ಎಂಜಿನಿಯರ್ ಸಾವು, ಇಬ್ಬರು ಪೈಲೆಟ್‍ಗಳಿಗೆ ಗಾಯ

    ಡೆಹ್ರಾಡೂನ್: ಉತ್ತರಾಖಂಡ್‍ನ ಬದರಿನಾಥ್‍ನಲ್ಲಿ ಇಂದು ಯಾತ್ರಿಕರನ್ನು ಕೊಂಡೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ಇಬ್ಬರು ಪೈಲೆಟ್‍ಗಳು ಗಾಯಗೊಂಡಿದ್ದಾರೆ.

    ಹೆಲಿಕಾಪ್ಟರ್‍ನ ಸಿಬ್ಬಂದಿವರ್ಗದ ಭಾಗವಾಗಿದ್ದ ಎಂಜಿನಿಯರ್ ಸಾವನ್ನಪ್ಪಿದ್ದು, ಇಬ್ಬರು ಪೈಲೆಟ್‍ಗಳಿಗೆ ಗಾಯವಾಗಿದೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮೃತ ಎಂಜಿನಿಯರ್ ವಿಕ್ರಮ್ ಲಂಬಾ ಅಸ್ಸಾಮ್ ನಿವಾಸಿಯಾಗಿದ್ದು, ರೋಟರ್ ಬ್ಲೇಡ್‍ಗಳು ತಗುಲಿದ ಪರಿಣಾಮ ಸಾವನ್ನಪ್ಪಿದ್ದಾರೆಂದು ಚಾಮೋಲಿಯ ಪೊಲೀಸ್ ವರಿಷ್ಠಾಧಿಕಾರಿ ತೃಪ್ತಿ ಭಟ್ ಹೇಳಿದ್ದಾರೆ.

    ಇಂದು ಬೆಳಿಗ್ಗೆ 7.45ರ ಸಮಯದಲ್ಲಿ ವಿಮಾನ ಟೇಕ್ ಆಫ್ ಆಗುವ ವೇಳೆ, ಅಗತ್ಯವಾದ ಗಾಳಿಯ ಒತ್ತಡವಿಲ್ಲದ ಕಾರಣ ಸಮತೋಲನ ಕಳೆದುಕೊಂಡು ಪತನಗೊಂಡಿದೆ. ಘಟನೆಯಲ್ಲಿ ಪುಣೆಯವರಾದ ಪೈಲೆಟ್ ಸಂಜಯ್ ವಾಸಿ ಅವರ ಬೆನ್ನಿಗೆ ಪೆಟ್ಟಾಗಿದೆ. ಕಾನ್ಪುರ ನಿವಾಸಿಯಾದ ಮತ್ತೊಬ್ಬ ಪೈಲೆಟ್ ಅಲ್ಕಾ ಶುಕ್ಲಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಲಿಕಾಪ್ಟರ್‍ನಲ್ಲಿದ್ದ ಯಾತ್ರಿಕರೆಲ್ಲರೂ ಗುಜರಾತ್‍ನ ವಡೋದರಾದವರಾಗಿದ್ದು, ಅವರವರ ಊರುಗಳಿಗೆ ತೆರಳಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಪತನಗೊಂಡ ಅಗಸ್ಟಾ 119 ಹೆಲಿಕಾಪ್ಟರ್ ಮುಂಬೈ ಮೂಲದ ಖಾಸಗಿ ಆಪರೇಟರ್ ಕ್ರೆಸ್ಟಲ್ ಏವಿಯೇಷನ್‍ಗೆ ಸೇರಿದ್ದಾಗಿದ್ದು, ಹರಿದ್ವಾರಕ್ಕೆ ಹೊರಟಿತ್ತು ಎಂದು ವರದಿಯಾಗಿದೆ. ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

  • ಬದರಿನಾಥದ ವಿಷ್ಣುಪ್ರಯಾಗ ಬಳಿ ಭಾರೀ ಭೂಕುಸಿತ- ಸಂಕಷ್ಟದಲ್ಲಿ ಸಾವಿರಾರು ಕನ್ನಡಿಗರು

    ಬದರಿನಾಥದ ವಿಷ್ಣುಪ್ರಯಾಗ ಬಳಿ ಭಾರೀ ಭೂಕುಸಿತ- ಸಂಕಷ್ಟದಲ್ಲಿ ಸಾವಿರಾರು ಕನ್ನಡಿಗರು

    ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಪ್ರಯಾಗ ಬಳಿ ಭಾರೀ ಭೂ ಕುಸಿತ ಸಂಭವಿಸಿದೆ. ರಿಷಿಕೇಶ್ ಹಾಗೂ ಬದರೀನಾಥ್ ಸಂಪರ್ಕ ಕಲ್ಪಿಸುವ ಹೈವೇಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಕನ್ನಡಿಗರು ಸೇರಿದಂತೆ ಸಾವಿರಾರು ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ.

    ಹಾಥಿ ಪಹಾರ್ ಪರ್ವತದಿಂದ ಭಾರಿ ಗಾತ್ರದ ಬಂಡೆಗಳು ರಸ್ತೆಗೆ ಕುಸಿದು ಬಿದ್ದಿವೆ. ಚಮೋಲಿ ಜಿಲ್ಲೆಯ ಜೋಶಿ ಮಠದಿಂದ 5 ಕಿ.ಮೀ ದೂರದಲ್ಲಿ ಈ ಅನಾಹುತ ನಡೆದಿದೆ.

    ದೇವಾಲಯಕ್ಕೆ ತೆರಳುವ ದಾರಿ ಸಂಪೂರ್ಣ ಬಂದ್ ಆಗಿ ಎರಡೂ ಕಡೆಗಳಲ್ಲಿ ಸಾವಿರಕ್ಕೂ ಹೆಚ್ಚು ವಾಹನಗಳು ನಿಂತಿವೆ. ಜೋಶಿಮಠ, ಕರ್ಣಪ್ರಯಾಗ, ಪೀಪಲ್‍ಕೋಟಿ, ಗೋವಿಂದಘಾಟ್ ಮತ್ತು ಬದರಿನಾಥದಲ್ಲಿರುವ 20 ಸಾವಿರದಿಂದ 25 ಸಾವಿರ ಯಾತ್ರಿಕರಿಗೆ ಎಲ್ಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

    ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಕಲ್ಲು-ಮಣ್ಣು ತೆರವು ಕಾರ್ಯ ಸಮರೋಪಾದಿಯಲ್ಲಿ ಸಾಗಿದ್ದು, ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲು ಹರ ಸಾಹಸ ನಡೆಯುತ್ತಿದೆ. ಇದೊಂದು ಭಾರೀ ಪ್ರಮಾಣದ ಭೂಕುಸಿತವಾಗಿದ್ದು, ದೊಡ್ಡ ದೊಡ್ಡ ಕಲ್ಲುಬಂಡೆಗಳು ರಸ್ತೆಯ ಮೇಲೆ ಬಿದ್ದಿವೆ. ಈ ಭೂ ಕುಸಿತವನ್ನು ತೆರವು ಮಾಡಲು ಇನ್ನೂ 2 ದಿನಗಳು ಬೇಕಾಗಬಹುದು. ಆದರೂ, ನಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದೇವೆ ಎಂದು ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿರುವ ಗಡಿ ರಸ್ತೆ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

    ಸಿಎಂ ಸೂಚನೆ: ಅಪಾಯಕ್ಕೆ ಸಿಲುಕಿರುವ ಕನ್ನಡಿಗರ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಈ ಸಂಬಂಧ ಉತ್ತರಾಖಂಡ್ ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸುವಂತೆ ತಿಳಿಸಿದ ಅವರು, ಅಗತ್ಯವಿದ್ರೆ ಅಧಿಕಾರಿಗಳ ತಂಡವನ್ನು ಕಳುಹಿಸಿ ಎಂದು ಸೂಚಿಸಿದ್ದಾರೆ.