Tag: ಬದಾಮಿ

  • ಸಮಸ್ಯೆ ಹೇಳಿದ ಗ್ರಾ.ಪಂ. ಸದಸ್ಯನನ್ನ ವೇದಿಕೆಯಿಂದ ಇಳಿಸಿದ ಸಿದ್ದರಾಮಯ್ಯ

    ಸಮಸ್ಯೆ ಹೇಳಿದ ಗ್ರಾ.ಪಂ. ಸದಸ್ಯನನ್ನ ವೇದಿಕೆಯಿಂದ ಇಳಿಸಿದ ಸಿದ್ದರಾಮಯ್ಯ

    ಬಾಗಲಕೋಟೆ: ಸಮಸ್ಯೆ ಹೇಳಿದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾಜಿ ಸಿಎಂ, ಬದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಬಲವಂತವಾಗಿ ವೇದಿಕೆಯಿಂದ ಕೆಳಗೆ ಇಳಿಸಿದ್ದಾರೆ.

    ಜಿಲ್ಲೆಯ ಬದಾಮಿ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಅಯೋಜಿಸಲಾಗಿತ್ತು. ಈ ಸಭೆಗೆ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದರು. ವೇದಿಕೆಯಲ್ಲೇ ಸಿದ್ದರಾಮಯ್ಯನವರ ಎದುರೇ ಕಿತ್ತಲಿ ಗ್ರಾಮದ ಗ್ರಾಪಂ ಸದಸ್ಯ ಸಂಗಣ್ಣ ಜಾಬಣ್ಣವರ್ ಅಸಮಧಾನ ಹೊರಹಾಕಿದರು.

    ಯಾರೂ ಸಹ ಹಳ್ಳಿ ಭಾಗದ ಕಡೆಗೆ ಬಂದಿಲ್ಲ. ನಮ್ಮ ಗ್ರಾಮದ ಆಶ್ರಯ ಮನೆಗಳು ಹಾಳಾಗಿ ಹೋಗಿವೆ. ಸಿದ್ದರಾಮಯ್ಯನವರು ಬಂದು ಪಿಡಿಒಗಳಿಗೆ ಎಚ್ಚರಿಕೆ ನೀಡಿದರೂ ಏನು ಬದಲಾವಣೆಯಾಗಿಲ್ಲ. ಹಳ್ಳಿಗಳ ಕಡೆಗೆ ಬಂದು ಜನ್ರು ಸಮಸ್ಯೆಯನ್ನ ಆಲಿಸಬೇಕು ಎಂದು ಭಾಷಣದದಲ್ಲಿ ಸಂಗಣ್ಣ ಜಾವಣ್ಣವರ್ ಹೇಳಿದರು.

    ಸಂಗಣ್ಣ ಜಾವಣ್ಣವರ್ ಸಮಸ್ಯೆ ಹೇಳುತ್ತಿದ್ದಂತೆ ಕೋಪಗೊಂಡ ಸಿದ್ದರಾಮಯ್ಯನವರು ಸದಸ್ಯನ ಬಳಿ ಬಂದು ಬಲವಂತವಾಗಿ ವೇದಿಕೆಯಿಂದ ಕೆಳಗೆ ಇಳಿಸಿದರು. ದಿಢೀರ್ ಘಟನೆಯಿಂದ ಕಾರ್ಯಕ್ರಮದಲ್ಲಿ ಗದ್ದಲ ಉಂಟಾಯಿತು.

  • ಬೈಕ್‍ನಿಂದ ಬಿದ್ದು ಕೊರೊನಾ ವಾರಿಯರ್ ಸಾವು- ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ

    ಬೈಕ್‍ನಿಂದ ಬಿದ್ದು ಕೊರೊನಾ ವಾರಿಯರ್ ಸಾವು- ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ

    ಬಾಗಲಕೋಟೆ: ಕೋವಿಡ್-19 ಕರ್ತವ್ಯಕ್ಕೆ ಆಗಮಿಸುವ ವೇಳೆ ಬೈಕ್‍ನಿಂದ ಬಿದ್ದ ಅಂಗನವಾಡಿ ಕಾರ್ಯಕರ್ತೆ ಮೃತಟಪಟ್ಟ ಘಟನೆ ಬದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ನಡೆದಿದೆ.

    ನಂದಿಕೇಶ್ವರ ಗ್ರಾಮದ ಪ್ರಭಾವತಿ ಪೂಜಾರಿ (52) ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆ. ಪ್ರಭಾವತಿ ಅವರು ಬಾದಾಮಿ ಪಟ್ಟಣದಲ್ಲಿ ಮನೆ ಮಾಡಿ ಕೊಂಡಿದ್ದರು. ನಿತ್ಯವೂ ಕೆಲಸಕ್ಕಾಗಿ ನಂದಿಕೇಶ್ವರ ಗ್ರಾಮಕ್ಕೆ ಬರುತ್ತಿದ್ದರು. ಮೇ 18ರಂದು ನಂದಿಕೇಶ್ವರ ಗ್ರಾಮಕ್ಕೆ ಬೈಕ್‍ನಲ್ಲಿ ತೆರಳುವ ವೇಳೆ ಮೂರ್ಛೆ ಹೋಗಿ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು.

    ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಕೋವಿಡ್-19 ಕೆಲಸದ ವೇಳೆ ಮೃತಪಟ್ಟ ಹಿನ್ನೆಲೆ ಪರಿಹಾರ ನೀಡುವಂತೆ ನಂದಿಕೇಶ್ವರ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

  • ಇಂದು 20 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ

    ಇಂದು 20 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ

    – ಗರ್ಭಿಣಿಯಿಂದ 13 ಮಂದಿಗೆ ಕೊರೊನಾ ಸೋಂಕು
    – ಬೆಂಗ್ಳೂರಿನ ಡೆಲಿವರಿ ಬಾಯ್‍ಗೆ ಕೊರೊನಾ
    – ಗುಣಮುಖರಾದ 23 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ 20 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ.

    ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಬುಲೆಟಿನ್‍ನಲ್ಲಿ, ಬಾಗಲಕೋಟೆಯಲ್ಲಿ 13, ಬೆಂಗಳೂರು 2, ದಕ್ಷಿಣ ಕನ್ನಡ 3, ಕಲಬುರಗಿ ಹಾಗೂ ವಿಜಯಪುರದಲ್ಲಿ ಒಬ್ಬರಿಗೆ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿ (ರೋಗಿ 607)ಯಿಂದಲೇ 13 ಮಂದಿಗೆ ಸೋಂಕು ತಗುಲಿದೆ. ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

    ಮಂಗಮ್ಮನಪಾಳ್ಯದ ಕೂಲಿ ಕಾರ್ಮಿಕ (ರೋಗಿ ನಂಬರ್ 654)ಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ಆತನ ಕುಟುಂಬಸ್ಥರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಕಾರ್ಮಿಕನ ಪುತ್ರ ಮತ್ತು ಪತ್ನಿಗೆ ಸೋಂಕು ತಗುಲಿದೆ. ಕಾರ್ಮಿಕನ ಪುತ್ರ ನಗರದಲ್ಲಿ ಡೆಲಿವರಿ ಬಾಯ್ (ರೋಗಿ ನಂಬರ್ 678) ಆಗಿ ಕೆಲಸ ಮಾಡಿಕೊಂಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದೀಗ ಆರೋಗ್ಯ ಇಲಾಖೆಗೆ ಡೆಲಿವರಿ ಬಾಯ್ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುವುದು ಮತ್ತು ಆತನ ಸಂಪರ್ಕದಲ್ಲಿರುವ ಜನರನ್ನು ಪತ್ತೆ ಹಚ್ಚುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

    ಸೋಂಕಿತರ ವಿವರ:
    1. ರೋಗಿ-674: ದಕ್ಷಿಣ ಕನ್ನಡದ 11 ವರ್ಷದ ಬಾಲಕಿ. ರೋಗಿ ನಂಬರ್ 536ರ ಜೊತೆ ಸಂಪರ್ಕ
    2. ರೋಗಿ-675: ದಕ್ಷಿಣ ಕನ್ನಡದ 35 ವರ್ಷದ ಮಹಿಳೆ. ರೋಗಿ 536ರ ಜೊತೆ ಸಂಪರ್ಕದಲ್ಲಿದ್ದರು.
    3. ರೋಗಿ-676: ದಕ್ಷಿಣ ಕನ್ನಡದ ಬಂಟ್ವಾಳದ 16 ವರ್ಷದ ಬಾಲಕಿ. ರೋಗಿ ನಂಬರ್ 390ರ ಜೊತೆ ಸಂಪರ್ಕ
    4. ರೋಗಿ-677: ಬೆಂಗಳೂರಿನ 40 ವರ್ಷದ ಮಹಿಳೆ. ರೋಗಿ-654ರ ಜೊತೆ ಸಂಪರ್ಕದಲ್ಲಿದ್ದರು.
    5. ರೋಗಿ-678: ಬೆಂಗಳೂರಿನ 25 ವರ್ಷದ ಯುವಕ. ರೋಗಿ-654ರ ಜೊತೆ ಸಂಪರ್ಕದಲ್ಲಿದ್ದರು.
    6. ರೋಗಿ-679: ಕಲಬುರಗಿಯ 52 ವರ್ಷದ ಪುರುಷ. ರೋಗಿ 610ರ ಜೊತೆ ಸಂಪರ್ಕದಲ್ಲಿದ್ದರು.
    7. ರೋಗಿ-680: ಬಾಗಲಕೋಟೆಯ ಬದಾಮಿ ತಾಲೂಕಿನ 18 ವರ್ಷದ ಯುವತಿ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.
    8. ರೋಗಿ-681: ಬಾಗಲಕೋಟೆಯ ಬದಾಮಿ ತಾಲೂಕಿನ 45 ವರ್ಷದ ಪುರುಷ. ರೋಗಿ-607ರ ಜೊತೆ ಸಂಪರ್ಕ.

    9. ರೋಗಿ-682: ಬಾಗಲಕೋಟೆಯ ಬದಾಮಿ ತಾಲೂಕಿನ 55 ವರ್ಷದ ಪುರುಷ. ರೋಗಿ-607ರ ಜೊತೆ ಸಂಪರ್ಕ.
    10. ರೋಗಿ-683: ಬಾಗಲಕೋಟೆಯ ಬದಾಮಿ ತಾಲೂಕಿನ 26 ವರ್ಷದ ಯುವಕ. ರೋಗಿ-607ರ ಜೊತೆ ಸಂಪರ್ಕ.
    11. ರೋಗಿ-684: ಬಾಗಲಕೋಟೆಯ ಬದಾಮಿ ತಾಲೂಕಿನ 47 ವರ್ಷದ ಪುರುಷ. ರೋಗಿ-607ರ ಜೊತೆ ಸಂಪರ್ಕ.
    12. ರೋಗಿ-685: ಬಾಗಲಕೋಟೆಯ ಬದಾಮಿ ತಾಲೂಕಿನ 30 ವರ್ಷದ ಮಹಿಳೆ. ರೋಗಿ-607ರ ಜೊತೆ ಸಂಪರ್ಕ.
    13. ರೋಗಿ-686: ಬಾಗಲಕೋಟೆಯ ಬದಾಮಿ ತಾಲೂಕಿನ 15 ವರ್ಷದ ಬಾಲಕ. ರೋಗಿ-607ರ ಜೊತೆ ಸಂಪರ್ಕ.
    14. ರೋಗಿ-687: ಬಾಗಲಕೋಟೆಯ ಬದಾಮಿ ತಾಲೂಕಿನ 40 ವರ್ಷದ ಮಹಿಳೆ. ರೋಗಿ-607ರ ಜೊತೆ ಸಂಪರ್ಕ.
    15. ರೋಗಿ-688: ಬಾಗಲಕೋಟೆಯ ಬದಾಮಿ ತಾಲೂಕಿನ 23 ವರ್ಷದ ಯುವಕ. ರೋಗಿ-607ರ ಜೊತೆ ಸಂಪರ್ಕ.
    16. ರೋಗಿ-689: ಬಾಗಲಕೋಟೆಯ ಬದಾಮಿ ತಾಲೂಕಿನ 10 ವರ್ಷದ ಬಾಲಕ. ರೋಗಿ-607ರ ಜೊತೆ ಸಂಪರ್ಕ.

    17. ರೋಗಿ-690: ಬಾಗಲಕೋಟೆಯ ಬದಾಮಿ ತಾಲೂಕಿನ 32 ವರ್ಷದ ಪುರುಷ.ರೋಗಿ-607ರ ಜೊತೆ ಸಂಪರ್ಕ.
    18. ರೋಗಿ-691: ಬಾಗಲಕೋಟೆಯ ಬದಾಮಿ ತಾಲೂಕಿನ 30 ವರ್ಷದ ಮಹಿಳೆ. ರೋಗಿ-607ರ ಜೊತೆ ಸಂಪರ್ಕ.
    19. ರೋಗಿ-692: ಬಾಗಲಕೋಟೆಯ ಬದಾಮಿ ತಾಲೂಕಿನ 16 ವರ್ಷದ ಬಾಲಕಿ. ರೋಗಿ-607ರ ಜೊತೆ ಸಂಪರ್ಕ.
    20. ರೋಗಿ-693: ವಿಜಯಪುರದ 35 ವರ್ಷದ ಮಹಿಳೆ. ರೋಗಿ-221ರ ಜೊತೆ ಸಂಪರ್ಕದಲ್ಲಿದ್ದರು.

    ಇಂದು ಡಿಸ್ಚಾರ್ಜ್:
    ಬೆಳಗಾವಿಯಲ್ಲಿ 8 ಮಂದಿ (ರೋಗಿ-224, 225, 243, 244, 245, 289, 294 298), ಬಾಗಲಕೋಟೆ ನಾಲ್ವರು (ರೋಗಿ-262, ಪಿ -263, 373, 379), ಮಂಡ್ಯದಲ್ಲಿ ನಾಲ್ವರು (ರೋಗಿ-237, 322, 322, 371), ಕಲಬುರಗಿಯಲ್ಲಿ ಐವರು ರೋಗಿ-394, 395, 421, 424, 425), ವಿಜಯಪುರ ಒಬ್ಬರು (ರೋಗಿ-428) ಹಾಗೂ ದಕ್ಷಿಣ ಕನ್ನಡ ಒಬ್ಬರು (ರೋಗಿ-325) ಸೇರಿ ಒಟ್ಟು ಇಂದು 23 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

    ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ಗರ್ಭಿಣಿಗೆ ಸೋಂಕು ತಗುಲಿರುವ ವಿಷಯ ತಿಳಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕಾರಣ ಕೆಲವು ದಿನಗಳ ಹಿಂದೆ ನಡೆದ ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮದ ಬಹುತೇಕರು ಭಾಗಿಯಾಗಿದ್ದರು. ಗರ್ಭಿಣಿಯ ಪತಿ ಸಾಂಪ್ರದಾಯಿಕ ಕಜ್ಜಾಯ ಭಿಕ್ಷೆಗಾಗಿ ಗ್ರಾಮದ ಪ್ರತಿ ಪ್ರತಿ ಮನೆಗಳಿಗೂ ತೆರಳಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

  • ಇಂದು 19 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 692ಕ್ಕೇರಿಕೆ

    ಇಂದು 19 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 692ಕ್ಕೇರಿಕೆ

    -ಬಾಗಲಕೋಟೆಯಲ್ಲಿ ಗರ್ಭಿಣಿಯಿಂದ 13 ಮಂದಿಗೆ ಕೊರೊನಾ ಸೋಂಕು
    -ಬೆಂಗಳೂರಿನ ಡೆಲಿವರಿ ಬಾಯ್‍ಗೆ ಕೊರೊನಾ

    ಬೆಂಗಳೂರು: ಇಂದು 19 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 692ಕ್ಕೇರಿಕೆಯಾಗಿದೆ. ಇಂದು ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ.

    ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ಬಾಗಲಕೋಟೆಯಲ್ಲಿ 13, ಬೆಂಗಳೂರು 2, ದಕ್ಷಿಣ ಕನ್ನಡ 3 ಮತ್ತು ಕಲಬುರಗಿಯಲ್ಲಿ 1 ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿ (ರೋಗಿ 607)ಯಿಂದಲೇ 13 ಮಂದಿಗೆ ಸೋಂಕು ತಗುಲಿದೆ. ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

    ಮಂಗಮ್ಮನಪಾಳ್ಯದ ಕೂಲಿ ಕಾರ್ಮಿಕನಿ(ರೋಗಿ ನಂಬರ್ 654)ಗೆ ಸೋಂಕು ತಗುಲಿರೋದು ದೃಢವಾಗ್ತಿದ್ದಂತೆ ಆತನ ಕುಟುಂಬಸ್ಥರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಕಾರ್ಮಿಕನ ಪುತ್ರ ಮತ್ತು ಪತ್ನಿಗೆ ಸೋಂಕು ತಗುಲಿದೆ. ಕಾರ್ಮಿಕನ ಪುತ್ರ ನಗರದಲ್ಲಿ ಡೆಲಿವರಿ ಬಾಯ್ (ರೋಗಿ ನಂಬರ್ 678) ಆಗಿ ಕೆಲಸ ಮಾಡಿಕೊಂಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದೀಗ ಆರೋಗ್ಯ ಇಲಾಖೆಗೆ ಡೆಲಿವರಿ ಬಾಯ್ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡೋದು ಮತ್ತು ಆತನ ಸಂಪರ್ಕದಲ್ಲಿರುವ ಜನರನ್ನು ಪತ್ತೆ ಹಚ್ಚೋದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

    ಸೋಂಕಿತರ ವಿವರ:
    1. ರೋಗಿ 674: ದಕ್ಷಿಣ ಕನ್ನಡದ 11 ವರ್ಷದ ಬಾಲಕಿ. ರೋಗಿ ನಂಬರ್ 536ರ ಜೊತೆ ಸಂಪರ್ಕ
    2. ರೋಗಿ 675: ದಕ್ಷಿಣ ಕನ್ನಡದ 35 ವರ್ಷದ ಮಹಿಳೆ. ರೋಗಿ 536ರ ಜೊತೆ ಸಂಪರ್ಕದಲ್ಲಿದ್ದರು.
    3. ರೋಗಿ 676: ದಕ್ಷಿಣ ಕನ್ನಡದ ಬಂಟ್ವಾಳದ 16 ವರ್ಷದ ಬಾಲಕಿ. ರೋಗಿ ನಂಬರ್ 390ರ ಜೊತೆ ಸಂಪರ್ಕ
    4. ರೋಗಿ 677: ಬೆಂಗಳೂರಿನ 40 ವರ್ಷದ ಮಹಿಳೆ. ರೋಗಿ ನಂಬರ್ 654ರ ಜೊತೆ ಸಂಪರ್ಕದಲ್ಲಿದ್ದರು.
    5. ರೋಗಿ 678: ಬೆಂಗಳೂರಿನ 25 ವರ್ಷದ ಯುವಕ. ರೋಗಿ ನಂಬರ್ 654ರ ಜೊತೆ ಸಂಪರ್ಕದಲ್ಲಿದ್ದರು.
    6. ರೋಗಿ 679: ಕಲಬುರಗಿಯ 52 ವರ್ಷದ ಪುರುಷ. ರೋಗಿ 610ರ ಜೊತೆ ಸಂಪರ್ಕದಲ್ಲಿದ್ದರು.
    7. ರೋಗಿ 680: ಬಾಗಲಕೋಟೆಯ ಬದಾಮಿ ತಾಲೂಕಿನ 18 ವರ್ಷದ ಯುವತಿ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.
    8. ರೋಗಿ 681: ಬಾಗಲಕೋಟೆಯ ಬದಾಮಿ ತಾಲೂಕಿನ 45 ವರ್ಷದ ಪುರುಷ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    9. ರೋಗಿ 682: ಬಾಗಲಕೋಟೆಯ ಬದಾಮಿ ತಾಲೂಕಿನ 55 ವರ್ಷದ ಪುರುಷ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    10. ರೋಗಿ 683: ಬಾಗಲಕೋಟೆಯ ಬದಾಮಿ ತಾಲೂಕಿನ 26 ವರ್ಷದ ಯುವಕ. ರೋಗಿ ನಂಬರ್ 607ರ ಜೊತೆ ಸಂಪರ್ಕ.

    11. ರೋಗಿ 684: ಬಾಗಲಕೋಟೆಯ ಬದಾಮಿ ತಾಲೂಕಿನ 47 ವರ್ಷದ ಪುರುಷ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    12. ರೋಗಿ 685: ಬಾಗಲಕೋಟೆಯ ಬದಾಮಿ ತಾಲೂಕಿನ 30 ವರ್ಷದ ಮಹಿಳೆ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    13. ರೋಗಿ 686: ಬಾಗಲಕೋಟೆಯ ಬದಾಮಿ ತಾಲೂಕಿನ 15 ವರ್ಷದ ಬಾಲಕ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    14. ರೋಗಿ 687: ಬಾಗಲಕೋಟೆಯ ಬದಾಮಿ ತಾಲೂಕಿನ 40 ವರ್ಷದ ಮಹಿಳೆ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    15. ರೋಗಿ 688: ಬಾಗಲಕೋಟೆಯ ಬದಾಮಿ ತಾಲೂಕಿನ 23 ವರ್ಷದ ಯುವಕ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    16. ರೋಗಿ 689: ಬಾಗಲಕೋಟೆಯ ಬದಾಮಿ ತಾಲೂಕಿನ 10 ವರ್ಷದ ಬಾಲಕ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    17. ರೋಗಿ 690: ಬಾಗಲಕೋಟೆಯ ಬದಾಮಿ ತಾಲೂಕಿನ 32 ವರ್ಷದ ಪುರುಷ.ರೋಗಿ ನಂಬರ್ 607ರ ಜೊತೆ ಸಂಪರ್ಕ.
    18. ರೋಗಿ 691: ಬಾಗಲಕೋಟೆಯ ಬದಾಮಿ ತಾಲೂಕಿನ 30 ವರ್ಷದ ಮಹಿಳೆ. ರೋಗಿ ನಂಬರ್ 607ರ ಜೊತೆ ಸಂಪರ್ಕ.
    19. ರೋಗಿ 692: ಬಾಗಲಕೋಟೆಯ ಬದಾಮಿ ತಾಲೂಕಿನ 16 ವರ್ಷದ ಬಾಲಕಿ. ರೋಗಿ ನಂಬರ್ 607ರ ಜೊತೆ ಸಂಪರ್ಕ.

    ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

    ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ಗರ್ಭಿಣಿಗೆ ಸೋಂಕು ತಗುಲಿರುವ ವಿಷಯ ತಿಳಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕಾರಣ ಕೆಲವು ದಿನಗಳ ಹಿಂದೆ ನಡೆದ ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮದ ಬಹುತೇಕರು ಭಾಗಿಯಾಗಿದ್ದರು. ಗರ್ಭಿಣಿಯ ಪತಿ ಸಾಂಪ್ರದಾಯಿಕ ಕಜ್ಜಾಯ ಭಿಕ್ಷೆಗಾಗಿ ಗ್ರಾಮದ ಪ್ರತಿ ಪ್ರತಿ ಮನೆಗಳಿಗೂ ತೆರಳಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

  • ಕೊರೊನಾ ಸೋಂಕಿತೆ ಗರ್ಭಿಣಿ ಪತಿಯಿಂದ ಗ್ರಾಮದ ಮನೆ ಮನೆಗೆ ತೆರಳಿ ಕಜ್ಜಾಯ ಭಿಕ್ಷೆ

    ಕೊರೊನಾ ಸೋಂಕಿತೆ ಗರ್ಭಿಣಿ ಪತಿಯಿಂದ ಗ್ರಾಮದ ಮನೆ ಮನೆಗೆ ತೆರಳಿ ಕಜ್ಜಾಯ ಭಿಕ್ಷೆ

    -ಡಾಣಕಶಿರೂರ ಗ್ರಾಮ ಸಂಪೂರ್ಣ ಸೀಲ್‍ಡೌನ್
    -ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿ
    -ಡ್ರೋಣ್ ಕ್ಯಾಮೆರಾದಿಂದ ಹದ್ದಿನ ಕಣ್ಣು

    ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

    ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ಗರ್ಭಿಣಿಗೆ ಸೋಂಕು ತಗುಲಿರುವ ವಿಷಯ ತಿಳಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕಾರಣ ಕೆಲವು ದಿನಗಳ ಹಿಂದೆ ನಡೆದ ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮದ ಬಹುತೇಕರು ಭಾಗಿಯಾಗಿದ್ದರು. ಗರ್ಭಿಣಿಯ ಪತಿ ಸಾಂಪ್ರದಾಯಿಕ ಕಜ್ಜಾಯ ಭಿಕ್ಷೆಗಾಗಿ ಗ್ರಾಮದ ಪ್ರತಿ ಪ್ರತಿ ಮನೆಗಳಿಗೂ ತೆರಳಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

    ಈಗಾಗಲೇ ಗರ್ಭಿಣಿ (ರೋಗಿ ನಂ.607) ಸಂಪರ್ಕದಲ್ಲಿದ್ದ 128 ಜನರನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ. ಎಲ್ಲ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಜಿಲ್ಲಾಡಳಿತ ವರದಿಗಾಗಿ ಕಾಯುತ್ತಿದೆ.

  • ಡಿನ್ನರ್‌ಗೆ ಹೋಗ್ತೀರಾ, ಕ್ಷೇತ್ರದ ಜನರ ಸಮಸ್ಯೆ ಕೇಳೋಕಾಗಲ್ವ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಕಿಡಿ

    ಡಿನ್ನರ್‌ಗೆ ಹೋಗ್ತೀರಾ, ಕ್ಷೇತ್ರದ ಜನರ ಸಮಸ್ಯೆ ಕೇಳೋಕಾಗಲ್ವ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಕಿಡಿ

    ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಓಡಾಡುತ್ತೀರಿ, ಡಿನ್ನರ್‌ಗೆ ಹೋಗುತ್ತೀರಿ. ಆದರೆ ಕ್ಷೇತ್ರದ ಜನರ ಸಮಸ್ಯೆ ಕೇಳುವುಕ್ಕೆ ಹೋಗಲು ನಿಮಗೇಕೆ ಆಗುತ್ತಿಲ್ಲ ಎಂದು ಶಾಸಕ ಶ್ರೀರಾಮುಲು ಅವರು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಬದಾಮಿಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಶಾಸಕರು, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿದ್ದರು. ರಾಜ್ಯದ ಯಾವ ಮೂಲೆಯಲ್ಲಿ ನಿಂತರೂ ಗೆಲ್ಲುತ್ತೇನೆ ಎಂಬ ಅಹಂನಲ್ಲಿ ಇದ್ದರು. ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುತ್ತೇನೆ ಎಂಬ ಭಯದಿಂದ ಬಾದಾಮಿಗೆ ಬಂದು ನಿಂತರು. ಇಲ್ಲಿನ ಜನರು ಅವರಿಗೆ ಪುನರ್ಜನ್ಮ ಕೊಟ್ಟಿದ್ದಾರೆ. ಅಂತಹ ಜನರು ಸಂಕಷ್ಟದಲ್ಲಿ ಸಿಲುಕ್ಕಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಭೇಟಿ ನೀಡುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

    ಆರೋಗ್ಯದಲ್ಲಿ ಏರು ಪೇರು ಆಗುವುದು ಸಹಜ. ಆದರೆ ಕಣ್ಣು ಚಿಕಿತ್ಸೆ ಅಂತ ಹೇಳಿ ದೆಹಲಿಗೆ ಹೋಗುತ್ತೀರಾ. ನಿಮ್ಮನ್ನು ಕ್ಷೇತ್ರದ ಜನ ನಿಮ್ಮ ಕ್ಷಮಿಸುತ್ತಾರಾ. ಬದಾಮಿ ಕ್ಷೇತ್ರಕ್ಕೆ ನಿಮ್ಮ ಪತ್ರ ಯತೀಂದ್ರ ಅವರು ಬಂದಿದ್ದಾರೆ. ಅದಕ್ಕೆ ನಾವು ಖುಷಿ ಪಡುತ್ತೇನೆ. ಆದರೆ ನೀವು ಹುಷಾರಿಲ್ಲ ಅಂತ ಹೇಳಿ ಬೇರೆ ಕಡೆ ಓಡಾಡುತ್ತಾ ಇದ್ದೀರಾ ಹೊರತು ಬದಾಮಿ ಕ್ಷೇತ್ರಕ್ಕೆ ಬರಲಿಲ್ಲ. ಇದು ಯಾವ ನ್ಯಾಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

    ರಾಜ್ಯದಲ್ಲಿ ಒಟ್ಟು 17 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು, 42 ಸಾವಿರ ಎಕ್ಟೇರ್ ಭೂಮಿ ಹಾನಿಯಾಗಿದೆ. ಸಾವಿರಾರು ಜನರು ಜೀವ ಕಳೆದುಕೊಂಡಿದ್ದಾರೆ. ಸಂತ್ರಸ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ. ಮಹಾ ಮಳೆಯಿಂದಾಗಿ ಮೃತ ಪಟ್ಟವರ ಕುಟುಂಬಕ್ಕೆ ಐದು ಲಕ್ಷ ರೂ. ಹಾಗೂ ನಿರಾಶ್ರಿತರಿಗೆ 10 ಸಾವಿರ ರೂ. ಪರಿಹಾರ ನೀಡಲಾಗುತ್ತದೆ. ಬಾಡಿಗೆ ಮನೆಯಲ್ಲಿ ಇರುವವರಿಗೆ 5 ಸಾವಿರ ರೂ. ಕೊಡುತ್ತೇನೆ ಅಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.

    ಬಿಜೆಪಿ ನಿಯೋಗ ತೆಗೆದುಕೊಂಡು ದೆಹಲಿಗೆ ಹೋಗಿ, ಶಾಶ್ವತ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ. ಇನ್ನೂ ಹೆಚ್ಚಿನ ಅನುದಾನ ನೀಡಿ ಅಂತ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಎಲ್ಲರೂ ಪಕ್ಷಭೇದ ಮರೆತು, ನೆರೆ ಸಂತ್ರಸ್ತರ ಬೆನ್ನಿಗೆ ನಿಂತು  ಮಾನವೀಯತೆ ಮೆರೆಯಬೇಕಾಗಿದೆ ಎಂದರು.

  • ಏನಯ್ಯಾ ಬಂಡಾರ ಇಷ್ಟೊಂದು ಬಳ್ಕೊಂಡಿದ್ದೀಯಾ ಸ್ವಲ್ಪ ಹಾಕ್ಕೊಂಡ್ ಬಾ – ಸಿದ್ದರಾಮಯ್ಯ ವ್ಯಂಗ್ಯ

    ಏನಯ್ಯಾ ಬಂಡಾರ ಇಷ್ಟೊಂದು ಬಳ್ಕೊಂಡಿದ್ದೀಯಾ ಸ್ವಲ್ಪ ಹಾಕ್ಕೊಂಡ್ ಬಾ – ಸಿದ್ದರಾಮಯ್ಯ ವ್ಯಂಗ್ಯ

    ಬಾಗಲಕೋಟೆ: ಬದಾಮಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜನರ ಬಳಿ ಅಹವಾಲು ಸ್ವೀಕರಿಸಿದರು. ಈ ವೇಳೆ ಕಾರ್ಯಕರ್ತನೊಬ್ಬ ಹಣೆತುಂಬಾ ಬಂಡಾರ ಬಳಿದುಕೊಂಡು ಬಂದಿದ್ದರು ಇದನ್ನು ಕಂಡ ಸಿದ್ದರಾಮಯ್ಯ ಏನಯ್ಯಾ ಬಂಡಾರ ಇಷ್ಟೊಂದು ಬಳ್ಕೊಂಡಿದ್ದೀಯಾ.? ಸ್ವಲ್ಪ ಹಾಕ್ಕೊಂಡ್ ಬಾ ಎಂದು ಹಾಸ್ಯ ಮಾಡಿದರು.

    ಇದೇ ವೇಳೆ ಸಾರಿಗೆ ನೌಕರರು ನಮ್ಮನ್ನು ಕಾಯಂಗೊಳಿಸಿ. ನೀವು ಮನಸ್ಸು ಮಾಡಿದರೆ ಆಗುತ್ತೆ ಎಂದು ಕೇಳಿದಾಗ, ಏಯ್ ಡೋಂಟ್ ಟಾಕ್ ಲೈಕ್ ದಟ್ ನಾನೇನು ಮುಖ್ಯಮಂತ್ರಿನ ಎಂದು ಗರಂ ಆದರು.

    ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಸಿದ್ದು, ಸಭೆಯಲ್ಲಿ ಅಧಿಕಾರಿಯೊಬ್ಬರು ಹೆಕ್ಟೇರ್ ಎಂದು ಹೇಳೋಕೆ ತಡಬಡಾಯಿಸಿದಾಗ, ಏಯ್ ಹೆಕ್ಟರ್ ಅಲ್ಲಾ, ಹೆಕ್ಟೇರ್. ಹೆಕ್ಟೇರ್ ಶಬ್ಧ ಸರಿಯಾಗಿ ಉಚ್ಛರಿಸಿ ಎಂದು ಹೇಳಿದರು.

    ಕ್ಷೇತ್ರದ ನಿಲುವಿಗಿ ಗ್ರಾಮದ ನಿವಾಸಿ ಲಕ್ಕವ್ವ ಗಾರವಾಡ ಪತಿ ಇತ್ತೀಚೆಗೆ ಸಿಡಿಲು ಬಡಿದು ಸಾವನ್ನಪ್ಪಿದ್ದರು. ಇದುವರೆಗೂ ಪರಿಹಾರ ಬಾರದ ಹಿನ್ನೆಲೆಯಲ್ಲಿ ಮಹಿಳೆ ಇಂದು ಸಿದ್ದರಾಮಯ್ಯ ಭೇಟಿಗೆ ಬಂದಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು ಸರ್ಕಾರದಿಂದ ಸಿಗಬೇಕಾದ ಸೌಲಭ್ಯವನ್ನು ಆದಷ್ಟು ಬೇಗ ಕಲ್ಪಿಸೋದಾಗಿ ಮಹಿಳೆಗೆ ಭರವಸೆ ನೀಡಿ 50 ಸಾವಿರ ಹಣವನ್ನು ನೆರವು ನೀಡಿದರು.

  • ಈಶ್ವರಪ್ಪ ಪೆದ್ದ, ಬಿಜೆಪಿಯಲ್ಲಿ ಗುಲಾಮಗಿರಿ ಇದೆ: ಸಿದ್ದರಾಮಯ್ಯ

    ಈಶ್ವರಪ್ಪ ಪೆದ್ದ, ಬಿಜೆಪಿಯಲ್ಲಿ ಗುಲಾಮಗಿರಿ ಇದೆ: ಸಿದ್ದರಾಮಯ್ಯ

    ಬಾಗಲಕೋಟೆ: ಬಿಜೆಪಿಯಲ್ಲಿ ಗುಲಾಮಗಿರಿ ಇದೆ. ಹೀಗಾಗಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಬಾಗಲಕೋಟೆಗೆ ಬಂದು ಏನಾದ್ರೂ ಮಾತನಾಡಿ ಹೋಗುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

    ಬದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ, ಈಶ್ವರಪ್ಪ ಪೆದ್ದ. ಪಾಪ ಅವರಿಗೆ ರಾಜಕೀಯವೇ ಗೊತ್ತಿಲ್ಲ. ದಲಿತರು, ಹಿಂದುಳಿದ ವರ್ಗಗಳ ಪರವಾಗಿ ಕೆಲಸ ಮಾಡಿದವರು ಕಾಂಗ್ರೆಸ್ಸಿಗರು. ನಮ್ಮ ಸರ್ಕಾರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆ.ಎಸ್.ಈಶ್ವರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

    ಕೆ.ಎಸ್.ಈಶ್ವರಪ್ಪ ಅವರಿಗೂ ಬಾಗಲಕೋಟೆಗೂ ಏನು ಸಂಬಂಧ? ನಾನು ಬದಾಮಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದೇನೆ ಎಂದ ಮಾಜಿ ಸಿಎಂ, ಬಾಗಲಕೋಟೆಗೆ ಈಶ್ವರಪ್ಪನ ಕೊಡುಗೆ ಏನು? ಅವರಿಗೆ ಚುನಾವಣಾ ಮೇಲುಸ್ತುವಾರಿ ಕೊಟ್ಟಿದ್ದಾರೆ. ಅದಕ್ಕೆ ಇಲ್ಲಿಗೆ ಬಂದು ಮಾತನಾಡಿ ಹೋಗುತ್ತಾರೆ. ಬಿಜೆಪಿಯಲ್ಲಿರುವ ಗುಲಾಮಗಿರಿಯಿಂದಲೇ ಹೀಗೆ ಮಾತಾಡುತ್ತಿರಬೇಕು ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಮೀರ್ ಅಹ್ಮದ್ ಕೆಲಸ ಮಾಡೋ ವ್ಯಕ್ತಿ, ಅದಕ್ಕೆ ಮಂತ್ರಿ ಮಾಡಿದೆ: ಸಿದ್ದರಾಮಯ್ಯ

    ಜಮೀರ್ ಅಹ್ಮದ್ ಕೆಲಸ ಮಾಡೋ ವ್ಯಕ್ತಿ, ಅದಕ್ಕೆ ಮಂತ್ರಿ ಮಾಡಿದೆ: ಸಿದ್ದರಾಮಯ್ಯ

    – ಎಲ್ಲರ ಜೊತೆ ಬೆರೆತು ಕೆಲಸ ಮಾಡುವ ಹೃದಯವಂತ ಜಮೀರ್
    – ಮುಸ್ಲಿಂರನ್ನ, ಕ್ರಿಶ್ಚಿಯನ್‍ರನ್ನು ಕಡೆಗಣಿಸಿದ ಬಿಜೆಪಿಯಿಂದ ‘ಸಬ್ ಕಾ ವಿಕಾಸ್’ ಜಪ

    ಬಾಗಲಕೋಟೆ: ಸಚಿವ ಜಮೀರ್ ಅಹ್ಮದ್ ಅವರನ್ನು ಮಂತ್ರಿ ಮಾಡಲು ಬೇರೆಯವರು ಅಸಮಾಧಾನ ಆಗುತ್ತಾರೆಂದು ಕೆಲವರು ಹೇಳಿದರು. ಆದರೂ ಅವರನ್ನೇ ಸಚಿವರನ್ನಾಗಿ ಮಾಡಿದೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಆಹಾರ ಹಾಗೂ ನಾಗರಿಕ ಸಬರಾಜು ಸಚಿವರ ಪರ ಬ್ಯಾಟ್ ಬೀಸಿದ್ದಾರೆ.

    ಬಾದಾಮಿಯಲ್ಲಿ ನಡೆದ ಅಂಜುಮ್ ಎ ಇಸ್ಲಾಂ ಸಂಸ್ಥೆಗಳ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಾಜಿ ಸಿಎಂ, ಸಚಿವ ಜಮೀರ್ ಅಹ್ಮದ್ ಎಲ್ಲರ ಜೊತೆ ಬೆರೆತು ಕೆಲಸ ಮಾಡುವ ಹೃದಯವಂತ. ಜಮೀರ್ ಅವರೊಂದಿಗೆ ಒಟ್ಟು ಏಳು ಜನರು ಕಾಂಗ್ರೆಸ್ ಸೇರಿದ್ದರು. ಎಲ್ಲರಿಗೂ ವಿಧಾನಸಭಾ ಚುನಾವಣೆ ಟಿಕೆಟ್ ಕೊಟ್ಟಿದ್ದೆ. ಅವರಲ್ಲಿ ಮೂವರು ಗೆದ್ದರು. ಜಮೀರ್ ಅಹ್ಮದ್ ಅವರು ಮಂತ್ರಿ ಮಾಡುವಂತೆ ಕೇಳಿಕೊಂಡು ಬರಲಿಲ್ಲ. ಆದರೂ ಕಾಂಗ್ರೆಸ್ ಪಕ್ಷ ಅವರನ್ನ ಮಂತ್ರಿ ಮಾಡಿದೆ ಎಂದು ಸಚಿವರನ್ನು ಹೊಗಳಿದರು. ಇದನ್ನು ಓದಿ: ಪುಟ್ಟರಂಗಶೆಟ್ಟಿ ಹ್ಯಾಟ್ರಿಕ್ ಹೀರೋ: ಸಿದ್ದರಾಮಯ್ಯ

    ನಾನು ಹಾಗೂ ಸಚಿವ ಜಮೀರ್ ಅಹ್ಮದ್ ಎಲ್ಲ ವರ್ಗದ ಜನರ ಪರವಾಗಿದ್ದೇವೆ. ವಿಶೇಷವಾಗಿ ಎಲ್ಲ ಜಾತಿಯ ಬಡ ಜನತೆಯ ಅಭಿವೃದ್ಧಿಗೆ ಶ್ರಮಿಸುತ್ತೇವೆ. ನಾನು ಅಕ್ಕಿ, ಹಾಲು ಕೊಟ್ಟೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನಿಧಿ ನೀಡಿರುವೆ ಎಂದ ಅವರು, ಇಲ್ಲಿ ಯಾರು ಯಾರ ಗುಲಾಮರಲ್ಲ. ಅಧಿಕಾರ ಸಿಕ್ಕಾಗ ಜನರ ಸೇವೆ ಮಾಡುವುದನ್ನು ಕಲಿಯಬೇಕು. ಇದು ನಮ್ಮ ಕರ್ತವ್ಯ ಕೂಡ ಎಂದು ಮಾಜಿ ಸಿಎಂ ಹೇಳಿದರು.

    ದೇಶದ ಶೇ. 14 ಮುಸ್ಲಿಮರು, ಶೇ. 2 ರಷ್ಟು ಕ್ರಿಶ್ಚಿಯನ್ ರನ್ನ ಬಿಟ್ಟು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಬಿಜೆಪಿಯವರು ಹೇಳುತ್ತಾರೆ. ಇದು ಯಾವ ರೀತಿಯ ಸಬ್ ಕಾ ವಿಕಾಸ್ ರೀ ಮಿಸ್ಟರ್ ಮೋದಿ ಅವರೇ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.

    ನನ್ನ ಅಧಿಕಾರ ಅವಧಿಯಲ್ಲಿ ಅನೇಕ ಜಯಂತಿಗಳನ್ನು ಜಾರಿಗೆ ತಂದಿದ್ದೇನೆ. ಆದರೆ ಟಿಪ್ಪು ಜಯಂತಿಗೆ ಕೆಲವರು ವಿರೋಧ ಮಾಡಿದರು. ಅವರು ಆರೋಪಿಸುವಂತೆ ಟಿಪ್ಪು ಮತಾಂದನಾಗಿಲ್ಲ. ಟಿಪ್ಪು ದೇಶಪ್ರೇಮಿ, ಸ್ವತಂತ್ರ ಪ್ರೇಮಿ. ಆದರೂ ಅವರ ಬಗ್ಗೆ ಸುಮ್ನೆ ಅಪಪ್ರಚಾರ ಮಾಡಿದರು. ಬಿಜೆಪಿಯವರು ಡೋಂಗಿಗಳು ಟಿಪ್ಪು ಜಯಂತಿಗೆ ಬಿಡಲ್ಲ ಎನ್ನುತ್ತಾರೆ. ಅದೇನೇ ಆಗಲಿ ಎಲ್ಲ ಜಯಂತಿ ರೀತಿ ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದು ಸವಾಲು ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ, ಎಲ್ಲೂ ಹೋಗಲ್ಲ- ಸಿದ್ದರಾಮಯ್ಯ

    ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ, ಎಲ್ಲೂ ಹೋಗಲ್ಲ- ಸಿದ್ದರಾಮಯ್ಯ

    ಬಾಗಲಕೋಟೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ. ಅವರು ಪಕ್ಷ ಬಿಟ್ಟು ಹೋಗಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಬದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ, ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೋಗಲ್ಲ. ಕಾಂಗ್ರೆಸ್‍ನಲ್ಲಿಯೇ ಇರುತ್ತಾರೆ. ದೆಹಲಿ ಪ್ರವಾಸ ಸುಳ್ಳು ಮಾಹಿತಿಯಾಗಿದ್ದು, ಅವರು ಬೆಳಗಾವಿಯಲ್ಲೇ ಇದ್ದಾರೆ. ಆದರೆ ಫೋನ್‍ಗೆ ಸಿಗುತ್ತಿಲ್ಲ ಅಷ್ಟೇ. ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ಜೊತೆಗೆ ನಾನು ಮಾತಾಡಿದ್ದೇನೆ. ಸಚಿವ ಸ್ಥಾನ ಕಳೆದುಕೊಂಡಿದ್ದಕ್ಕೆ ಅವರಿಗೆ ಸ್ವಲ್ಪ ಅಸಮಾಧಾನ ಇದೆ. ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದರು. ಇದನ್ನು ಓದಿ: ಇರೋ ಒಬ್ಬ ಮಗನ ಮೇಲಾಣೆ ಸಾಲಮನ್ನಾ ಮಾಡ್ತೀನಿ: ಸಿಎಂ

    ರಮೇಶ್ ಜಾರಕಿಹೊಳಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗುತ್ತಿದ್ದಾರೆ ಎನ್ನುವುದು ಸುಳ್ಳು. ಬಿಜೆಪಿಯವರು ಸುಳ್ಳು ಹೇಳುತ್ತಾರೆ. ಅದಕ್ಕೆಲ್ಲಾ ಪ್ರತಿಕ್ರಿಯೆ ಕೊಡಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.

    ವಿವಿಧ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಹಾಕೂಟದಲ್ಲಿ ಆಯೋಜಿಸಿದ್ದ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಭಾಗವಹಿಸಲು ಇಂದು ಬದಾಮಿಗೆ ಆಗಮಿಸಿದ್ದರು. ಈ ವೇಳೆ ಬದಾಮಿ ಗೃಹ ಕಚೇರಿಯಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv