Tag: ಬನ್ನೇರುಘಟ್ಟ ಜೈವಿಕ ಉದ್ಯಾನವನ

  • ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಣೆ – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಯಶಸ್ವಿ ಕಾರ್ಯ

    ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಣೆ – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಯಶಸ್ವಿ ಕಾರ್ಯ

    – ಪಶು ವೈದ್ಯಕೀಯ ಕ್ಷೇತ್ರದಲ್ಲಿ ಮೈಲಿಗಲ್ಲು

    ಆನೇಕಲ್: ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲನ್ನು ಯಶಸ್ವಿಯಾಗಿ ಜೋಡಣೆ ಮಾಡಿರುವ ಅಪರೂಪದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta National Park) ನಡೆದಿದೆ.

    ಬನ್ನೇರುಘಟ್ಟ ಜೈವಿಕ ಉದ್ಯಾನವನದ ವಸಿಕರನ್ ಎಂಬ ಕರಡಿಗೆ ವೈಲ್ಡ್ ಲೈಫ್ SOS ಸಂಸ್ಥೆ ಹಾಗೂ ಕರ್ನಾಟಕ ಅರಣ್ಯ ಇಲಾಖೆ (Forest Deparment) ಸಹಯೋಗದಲ್ಲಿ ಕಳೆದ ಮೂರು ದಿನಗಳಿಂದ ಕೈಗೊಂಡಿದ್ದ ಕೃತಕ ಕಾಲು ಜೋಡಣೆ ಕಾರ್ಯ ಯಶಸ್ವಿಯಾಗಿದ್ದು, ಇದೀಗ ಮೊದಲಿನಂತೆ ನಡೆಯಲು ಪ್ರಾರಂಭಿಸಿದೆ.ಇದನ್ನೂ ಓದಿ: ಕೆಲಸದಿಂದ ತೆಗೆದಿದ್ದಕ್ಕೆ ಸಿಟ್ಟು; ಫುಡ್ ಡೆಲಿವರಿ ನೆಪದಲ್ಲಿ ವೃದ್ಧೆ ಕೈ-ಕಾಲು ಕಟ್ಟಿಹಾಕಿ 8 ಲಕ್ಷ ದರೋಡೆ

    2019ರಲ್ಲಿ ಬೇಟೆಗಾರರ ಬಲೆಗೆ ಸಿಲುಕಿ ಜೀವನ್ಮರಣದ ಹೋರಾಟ ನಡೆಸಿದ್ದ ವಸಿಕರನ್ ಕರಡಿಯನ್ನು ಬಳ್ಳಾರಿ ಅರಣ್ಯ ಪ್ರದೇಶದಿಂದ ರಕ್ಷಣೆ ಮಾಡಲಾಗಿತ್ತು. ಈ ವೇಳೆ ಹಿಂಬದಿಯ ಎಡಗಾಲು ಮುರಿದು ಕರಡಿ ನರಳಾಡುತ್ತಿತ್ತು. ಗಾಯಗೊಂಡಿದ್ದ ವಸಿಕರನ್ ಅನ್ನು ಬನ್ನೇರುಘಟ್ಟ ಕರಡಿ ಆರೈಕೆ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆರೋಗ್ಯ ಸುಧಾರಣೆಯಾಗಿ, ಮೂರು ಕಾಲಿನಿಂದ ನಡೆಯಲು ಅಭ್ಯಾಸ ಮಾಡಿಕೊಂಡಿತ್ತು.

    ಈ ಸಮಯದಲ್ಲಿ ಪ್ರಾಣಿಗಳ ಜಾಗತಿಕ ಮೂಳೆ ತಜ್ಞರಾದ ಅಮೆರಿಕದ ಡೆರಿಕ್ ಕಂಪನಾ ಬನ್ನೇರುಘಟ್ಟಕ್ಕೆ ಭೇಟಿ ನೀಡಿದ್ದರು. ಆಗ ಕರಡಿ ವಸಿಕರನ್ ಓಡಾಡುವುದನ್ನ ಗಮನಿಸಿದ್ದರು. ಬಳಿಕ ಮಣ್ಣು ತೋಡಲು, ಮರ ಹತ್ತಲು, ಮೇವು ಸಂಗ್ರಹಕ್ಕೆ ಕೃತಕ ಕಾಲನ್ನು ಸಿದ್ಧಪಡಿಸಿದರು. ಸದ್ಯ ಇದೀಗ ಕರಡಿ ಕೃತಕ ಕಾಲಿನಿಂದ ಮೊದಲಿನ ಹಾಗೆ ಓಡಾಡುತ್ತಿದೆ.

    ಈ ಕುರಿತು ಡೆರಿಕ್ ಕಂಪನಾ ಅವರು ಪ್ರತಿಕ್ರಿಯಿಸಿದ್ದು, ಪ್ರಾಣಿ ಎಂಬುದು ನನಗೆ ಹೊಸ ವಿಷಯ ಕಲಿಸುತ್ತದೆ. ಆದರೆ, ವಸಿಕರನ್ ಪ್ರಕರಣದಲ್ಲಿ ಇದೊಂದು ಅತ್ಯದ್ಭುತವೇ ಹೌದು. ಕರಡಿಗೆ ಕೃತಕ ಕಾಲು ಸಿದ್ಧಪಡಿಸುವುದು ದೊಡ್ಡ ಸವಾಲಾಗಿತ್ತು. ಆದರೆ, ವಸಿಕರನ್ ನಡಿಗೆಯನ್ನು ಕಂಡು ನಮ್ಮ ಶ್ರಮಕ್ಕೆ ಬೆಲೆ ಸಿಕ್ಕಂತಾಗಿದೆ ಎಂದಿದ್ದಾರೆ. ಇದನ್ನೂ ಓದಿ: 579 ಕೋಟಿ ಜೆರ್ಸಿ ಪ್ರಾಯೋಜಕತ್ವ – ಪ್ರತಿ ಪಂದ್ಯಕ್ಕೆ ಬಿಸಿಸಿಐಗೆ ಸಿಗಲಿದೆ ಕೋಟಿ ಕೋಟಿ ರೂ.

  • ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

    ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

    ಬೆಂಗಳೂರು ಗ್ರಾಮಾಂತರ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ನಡುವೆ ಪ್ರಾಣಿ ಪ್ರಿಯರಿಗೆ ಸರ್ಕಾರ ಶಾಕ್‌ ನೀಡಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದ (Bannerghatta National Park) ಟಿಕೆಟ್ ದರವನ್ನು 20% ರಷ್ಟು ಸರ್ಕಾರ ಏರಿಕೆ ಮಾಡಿದ್ದು, ಆ.1 ರಿಂದ ಜಾರಿಗೆ ಬರಲಿದೆ.

    ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿನ ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು ಎಂದಿದೆ. 20% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಅಂತಿಮ ಆದೇಶ ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಲಿದೆ. ಆ.1 ರಿಂದ ಟಿಕೆಟ್ ದರ ಏರಿಕೆ ಅಧಿಕೃತವಾಗಲಿದೆ. ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನದ ಝೂ ವೀಕ್ಷಣೆಗೆ ವಯಸ್ಕರಿಗೆ ಹಾಲಿ ಟಿಕೆಟ್ ದರ 100 ರೂ. ಇದ್ದು, 120 ರೂ. ಆಗಲಿದೆ. ಮಕ್ಕಳಿಗೆ ಹಾಲಿ ದರ 50 ರೂ. ಇದ್ದು, 60 ರೂ. ಆಗಲಿದೆ. ಹಿರಿಯ ನಾಗರಿಕರಿಗೆ ಹಾಲಿ ಟಿಕೆಟ್ ದರ 60 ರೂ. ಇದ್ದು, 70 ರೂ. ಆಗಲಿದೆ. ಅಲ್ಲದೇ, ಸಫಾರಿ ಕಾಂಬೋ ಪ್ಯಾಕ್ ದರ ಕೂಡ ಹೆಚ್ಚಳವಾಗಿದ್ದು, ವಾರದ ದಿನಗಳಲ್ಲಿ 350 ರೂ. ಇದ್ದದ್ದು, 370 ರೂ. ಆಗಲಿದೆ. ವಾರದ ಕೊನೆ ದಿನಗಳಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ 400 ರೂ. ದರ 420 ರೂ. ಆಗಲಿದೆ. ಇದನ್ನೂ ಓದಿ: ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

    ಪ್ರಾಣಿಗಳ ಆಹಾರ, ನಿರ್ವಹಣೆ ಸಿಬ್ಬಂದಿ ವೇತನ ಹೆಚ್ಚಳವಾಗಿದೆ. ಆದರೆ, ಕಳೆದ ಐದು ವರ್ಷದಿಂದ ಮೃಗಾಲಯದ ಟಿಕೆಟ್ ದರ ಏರಿಕೆ ಆಗಿಲ್ಲ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಸ್ವಾಯತ್ತ ಸಂಸ್ಥೆಯಾಗಿದ್ದು, ಪ್ರವಾಸಿಗರ ಟಿಕೆಟ್ ಹಣವೇ ಆದಾಯದ ಮೂಲವಾಗಿದೆ. ಹಾಗಾಗಿ, 50% ರಷ್ಟು ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಸರ್ಕಾರ 20% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ.

    ಮೃಗಾಲಯ ಪ್ರಾಧಿಕಾರದ ಆದೇಶದಂತೆ ಆ.1 ರಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್ ತಿಳಿಸಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ಟಿಕೆಟ್ ದರ 20% ರಷ್ಟು ಏರಿಕೆಗೆ ಪ್ರವಾಸಿಗರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆ ಜನರನ್ನು ಕಂಗೆಡಿಸಿದೆ. ಇದರ ನಡುವೆ ದಿನನಿತ್ಯದ ಜಂಜಾಟದಿಂದ ರೋಸಿ ಹೋಗಿ ಮನರಂಜನೆಗಾಗಿ ಮಕ್ಕಳಿಗೆ ಅಪರೂಪದ ವನ್ಯಜೀವಿಗಳನ್ನು ಪರಿಚಯಿಸಲು ದೂರದ ಊರುಗಳಿಂದ ಕುಟುಂಬದೊಂದಿಗೆ ಪ್ರವಾಸಿಗರು ಬರ್ತಾರೆ. ದೇಶವಿದೇಶಗಳಿಂದಲೂ ಸಾಕಷ್ಟು ಪ್ರವಾಸಿಗರು ಬರ್ತಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಕಷ್ಟು ಹಣ ಕೂಡ ಸಂಗ್ರಹ ಆಗುತ್ತಿದೆ. ಆದರೂ, ಟಿಕೆಟ್ ದರ ಏರಿಕೆ ಮಾಡುತ್ತಿರುವುದರ ಬಿಸಿ ಪ್ರವಾಸಿಗರಿಗೆ ತಟ್ಟಲಿದೆ. ಈಗಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಭಿವೃದ್ಧಿ ಹೊಂದಿದೆ. ಪ್ರಾಣಿಗಳ ನಿರ್ವಹಣೆ ಮತ್ತು ಸಿಬ್ಬಂದಿ ವೇತನಕ್ಕೆ ಸರ್ಕಾರದಿಂದ ಅನುದಾನ ಪಡೆಯಲಿ ಎನ್ನುತಾರೆ. ಕೆಲ ಪ್ರವಾಸಿಗರು ವನ್ಯಜೀವಿಗಳ ನಿರ್ವಹಣೆಗಾಗಿ ಟಿಕೆಟ್ ದರ ಹೆಚ್ಚಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿರಡಿ ಸಾಯಿಬಾಬಾನ ದರ್ಶನ ಪಡೆದ ಡಿಕೆಶಿ – ಪ್ರಾರ್ಥನೆ ಫಲ ನೀಡಲಿದೆ ಅಂತ ಪೋಸ್ಟ್

    ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ ಹೆಚ್ಚಳದ ಬಗ್ಗೆ ಪ್ರವಾಸಿಗರಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಆದರೂ, ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಮತ್ತು ಮತ್ತಷ್ಟು ಅಪರೂಪದ ಪ್ರಾಣಿಗಳನ್ನು ಕಾಣುವಂತಾಗಬೇಕು ಎಂದು ಆಗ್ರಹ ಕೂಡ ಕೇಳಿ ಬರುತ್ತಿದೆ.

  • ಮೈಸೂರು ಮಹಾರಾಜರ ಕುಟುಂಬ ರಕ್ಷಿಸಿದ್ದ `ಶ್ಯಾಡೋ’ ಚಿರತೆ ದಿಢೀರ್ ಸಾವು

    ಮೈಸೂರು ಮಹಾರಾಜರ ಕುಟುಂಬ ರಕ್ಷಿಸಿದ್ದ `ಶ್ಯಾಡೋ’ ಚಿರತೆ ದಿಢೀರ್ ಸಾವು

    -3 ತಿಂಗಳಲ್ಲಿ ಚಿರತೆ, ಹುಲಿ ಸೇರಿ 20 ಅಪರೂಪದ ಪ್ರಾಣಿಗಳ ಸರಣಿ ಸಾವು

    ಆನೇಕಲ್: ಮೈಸೂರು ಮಹಾರಾಜರ ಕುಟುಂಬ ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta Biological Park) ಇರಿಸಿದ್ದ ಚಿರತೆ ದಿಢೀರ್ ಸಾವನ್ನಪ್ಪಿದ್ದು, ಬನ್ನೇರುಘಟ್ಟ ಪಾರ್ಕ್ ಅಧಿಕಾರಿಗಳ ವಿರುದ್ಧ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಂಡಿಪುರ ಅರಣ್ಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಚಿರತೆ ಮರಿಯನ್ನು ಮೈಸೂರು ಮಹಾರಾಜರ ಕುಟುಂಬ ರಕ್ಷಣೆ ಮಾಡಿತ್ತು. ಅದಕ್ಕೆ ಶ್ಯಾಡೋ ಎಂದು ಹೆಸರಿಟ್ಟು, ಮೈಸೂರು ಮೃಗಾಲಯಕ್ಕೆ ಹಸ್ತಾಂತರಿಸಿದ್ದರು. ಬಳಿಕ ಅಲ್ಲಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಇದೀಗ ಚಿರತೆ ದಿಢೀರ್ ಸಾವನ್ನಪ್ಪಿದೆ. ಚಿರತೆ ಸಾವನ್ನಪ್ಪಿದ್ದು ಯಾಕೆ? ಚಿರತೆಗೆ ಏನಾಯ್ತು ಎಂಬ ಪ್ರಶ್ನೆ ಮೂಡಿದೆ.ಇದನ್ನೂ ಓದಿ: ಮುಂಬೈ ದಾಳಿಕೋರ ತಹವ್ವೂರ್ ಅರ್ಜಿ ವಜಾ – ಶೀಘ್ರವೇ ಭಾರತಕ್ಕೆ ಹಸ್ತಾಂತರ

    ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ರೆಸ್ಕ್ಯೂ ಸೆಂಟರ್‌ಲ್ಲಿದ್ದ ಹೆಣ್ಣು ಚಿರತೆ ಶ್ಯಾಡೋ ದಿಢೀರ್ ಸಾವನ್ನಪ್ಪಿದೆ. ಆದರೆ ಆರೋಗ್ಯವಾಗಿದ್ದ ಚಿರತೆ ಸಾವಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅನುಭವಿ ವೈದ್ಯರು ಮತ್ತು ಅಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯಗಳು ಕಾರಣ ಎಂದು ಪ್ರಾಣಿ ಪ್ರಿಯರ ಆರೋಪವಾಗಿದೆ. ಇನ್ನೂ ಕಳೆದ ಮೂರು ತಿಂಗಳಲ್ಲಿ ಚಿರತೆ, ಹುಲಿ ಸೇರಿ 20 ಅಪರೂಪದ ಪ್ರಾಣಿಗಳ ಸರಣಿ ಸಾವನ್ನಪ್ಪಿದೆ.

    ಇನ್ನೂ 2 ಸಾವಿರಕ್ಕೂ ಅಧಿಕ ಅಪರೂಪದ ವ್ಯನ್ಯ ಜೀವಿಗಳ ತಾಣವಾಗಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ವರ್ಷಕ್ಕೆ 50 ಕೋಟಿ ರೂ.ಗಿಂತಲೂ ಅಧಿಕ ಹಣ ಸಂಗ್ರಹವಾಗುತ್ತಿದೆ. ಆದರೆ ಪ್ರಾಣಿಗಳ ಪಾಲನೆ ಪೋಷಣೆಗಿರುವುದು ಓರ್ವ ವೈದ್ಯ ಮಾತ್ರ. ನುರಿತ ವೈದ್ಯರ ಜೊತೆಗೆ ಇಬ್ಬರು ಆರ್‌ಎಫ್‌ಓ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆ ಖಾಲಿ ಇದೆ. ಡಿಆರ್‌ಎಫ್‌ಓಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಒತ್ತಡದಲ್ಲಿ ಕೆಲಸ ಮಾಡಿಸಲಾಗುತ್ತಿದೆ. ಅಲ್ಲದೆ 2024-25ನೇ ಸಾಲಿನಲ್ಲಿ 15 ಕೋಟಿ ರೂ.ಗೂ ಅಧಿಕ ಹಣವನ್ನು ಕಚೇರಿ (ಅಂದಾಜು 7ಕೋಟಿ ರೂ.) ಸೇರಿದಂತೆ ಅನಗತ್ಯ ಕಾಮಗಾರಿಗಳಿಗೆ ಹಣ ದುರ್ಬಳಕೆ ಮಾಡಲಾಗುತ್ತಿದೆ.

    ಈ ಬಗ್ಗೆ ಪ್ರಶ್ನಿಸಿದಾಗ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್ ಅವರು, 2,000ಕ್ಕೂ ಅಧಿಕ ಪ್ರಾಣಿಗಳಿರುವ ಉದ್ಯಾನವನದಲ್ಲಿ ವರ್ಷಕ್ಕೆ ನೂರಕ್ಕೂ ಅಧಿಕ ಪ್ರಾಣಿಗಳು ಸಾಯುವುದು ಸರ್ವೇ ಸಾಮಾನ್ಯವಾಗಿದೆ. ಕಾಮಗಾರಿಗಳನ್ನು ಪ್ರಾಧಿಕಾರದ ಅನುಮತಿ ಪಡೆದು ನಡೆಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಪ್ರಾಣಿಗಳು ಮತ್ತು ಪ್ರವಾಸಿಗರಿಗೆ ಆದ್ಯತೆ ನೀಡಬೇಕಿದ್ದ ಉದ್ಯಾನವನದ ಅಧಿಕಾರಿಗಳು ಕೋಟಿ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಇನ್ನಾದರೂ ಅಪರೂಪದ ಪ್ರಾಣಿಗಳ ಪಾಲನೆ ಪೋಷಣೆಗೆ ಹೆಚ್ಚು ಗಮನ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು

  • ಬೆಂಗಳೂರು ಸುತ್ತ ಪ್ರವಾಸಿ ತಾಣ ಬಂದ್- ಬನ್ನೇರುಘಟ್ಟಕ್ಕೆ ಸಾವಿರಾರು ಪ್ರವಾಸಿಗರ ಲಗ್ಗೆ

    ಬೆಂಗಳೂರು ಸುತ್ತ ಪ್ರವಾಸಿ ತಾಣ ಬಂದ್- ಬನ್ನೇರುಘಟ್ಟಕ್ಕೆ ಸಾವಿರಾರು ಪ್ರವಾಸಿಗರ ಲಗ್ಗೆ

    ಬೆಂಗಳೂರು: ರಾಜಧಾನಿ ಸುತ್ತ ಪ್ರವಾಸಿತಾಣಗಳ ನಿರ್ಬಂಧ ಹಿನ್ನಲೆಯಲ್ಲಿ ಮನರಂಜನಾ ಮನುಸ್ಸುಗಳು ಉದ್ಯಾನದತ್ತ ಮುಖಮಾಡಿವೆ. ಸಾವಿರಾರು ಪ್ರವಾಸಿಗರು ಬನ್ನೇರುಘಟ್ಟ ಉದ್ಯಾನವನಕ್ಕೆ ಲಗ್ಗೆ ಇಡುತ್ತಿದ್ದಾರೆ.

    ಭಾನುವಾರ ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ರಜಾದಿನ, ಮುಂದೆ ಶಾಲಾರಂಭ ಸಹ ಘೋಷಣೆಯಾಗಿದೆ ಮತ್ತು ರಜೆಯ ಅಂತಿಮ ದಿನಗಳ ಲೆಕ್ಕಚಾರದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರಾಣಿ ಪ್ರಿಯರು ಮತ್ತು ಪೋಷಕರು ಆಗಮಿಸುತ್ತಿದ್ದಾರೆ.

    ಬೆಳಗ್ಗೆಯಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಗೇಟ್ ಮುಂಭಾಗದಲ್ಲಿ ಸರತಿ ಸಾಲಿನಲ್ಲಿನಿಂತಿರುವ ಸಾವಿರಾರು ಪ್ರಾಣಿ ಪ್ರಿಯರು, ಜೀವ ಸಂಕುಲವನ್ನು ಕಾಣಲು ಮುಗಿಬಿದ್ದಿದ್ದಾರೆ. ಆನ್‍ಲೈನ್ ಸೇರಿದಂತೆ ಕೌಂಟರ್ ಗಳಲ್ಲಿ ಸಹ ಮಧ್ಯಾಹ್ನದವರೆಗೆ ಟಿಕೆಟ್ ಜೋರಾಗಿ ಮಾರಾಟವಾಗಿವೆ. ಬೆಳಗ್ಗೆಯಿಂದ ಸಂಜೆವರೆಗೆ 10,000 ಪ್ರವಾಸಿಗರು ಭೇಟಿ ನೀಡಿದ್ದಾರೆ.

    ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಗುಂಪು ಗುಂಪಾಗಿ ಜನ ಸೇರುತ್ತಿರುವುದು ಆತಂಕ ಮೂಡಿಸಿದೆ. ಜೊತೆಗೆ ಪಾರ್ಕ್ ನ ಸಿಬ್ಬಂದಿ ಮೈಕ್‍ನಲ್ಲಿ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚನೆ ನೀಡುತ್ತಿದ್ದರು. ಯಾವುದೇ ಪ್ರವಾಸಿಗರು ಆದೇಶ ಪಾಲನೆ ಮಾಡದೆ ಗುಂಪುಗುಂಪಾಗಿ ಸೇರಿ ಕೊರೊನಾ ಮತ್ತಷ್ಟು ಸ್ಫೋಟ ಆಗಲು ದಾರಿ ಮಾಡಿದಂಗೆ ಕಾಣುತ್ತಿತ್ತು.

  • ಸುಧಾ ಮೂರ್ತಿಗೆ ಗೌರವ- ಆನೆ ಮರಿಗೆ ‘ಸುಧಾ’ ಹೆಸರು ನಾಮಕರಣ

    ಸುಧಾ ಮೂರ್ತಿಗೆ ಗೌರವ- ಆನೆ ಮರಿಗೆ ‘ಸುಧಾ’ ಹೆಸರು ನಾಮಕರಣ

    ಬೆಂಗಳೂರು: ಬನ್ನೇರುಘಟ್ಟ ಉದ್ಯಾನವನದ ಆನೆ ಮರಿಗೆ ಸುಧಾ ಮೂರ್ತಿ ಅವರ ಹೆಸರಿಡುವ ಮೂಲಕ ಉದ್ಯಾನವದ ಸಿಬ್ಬಂದಿ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷರಿಗೆ ಗೌರವ ಸಲ್ಲಿಸಿದ್ದಾರೆ.

    ಇತ್ತೀಚೆಗೆ ಜೈವಿಕ ಉದ್ಯಾನವನದ ಎರಡು ಸಾಕಾನೆಗಳು ಮರಿಗಳಿಗೆ ಜನ್ಮ ನೀಡಿದ್ದವು. ಆಗಸ್ಟ್ 17 ರಂದು 45 ವರ್ಷ ವಯಸ್ಸಿನ ಸುವರ್ಣ ಆನೆ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಇದರೊಂದಿಗೆ ಶಿಬಿರ ಆನೆಗಳ ಸಂಖ್ಯೆ 25ಕ್ಕೇರಿತ್ತು.

    ಉದ್ಯಾನವನದ ಅಧಿಕಾರಿಗಳು ಆನೆ ಮರಿಗೆ ಹೆಸರಿಡಲು ಸಾರ್ವಜನಿಕರಿಂದ ಆನ್‍ಲೈನ್‍ನಲ್ಲಿ ಹೆಸರು ಸೂಚಿಸುವಂತೆ ಮನವಿ ಮಾಡಿದ್ದರು. ಈ ವೇಳೆ ಬಹುತೇಕರು ಸುಧಾ ಮೂರ್ತಿ ಅವರ ಹೆಸರನ್ನು ಸೂಚಿಸಿದ್ದರು. ಇದೇ ಆಗಸ್ಟ್ 19 ರಂದು ಸುಧಾಮೂರ್ತಿ ಅವರು 70ನೇ ವಸಂತಕ್ಕೆ ಕಾಲಿಟ್ಟಿದ್ದರು.

    ಈ ಕುರಿತು ಮಾಹಿತಿ ನೀಡಿರುವ ಬನ್ನೇರುಘಟ್ಟ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ಬಿಪಿನ್ ಸಿಂಗ್ ಅವರು, ಆನೆ ಮರಿಗೆ ‘ಸುಧಾ’ ಎಂದು ನಾಮಕರಣ ಮಾಡಿರುವುದಾಗಿ ತಿಳಿಸಿದ್ದರು. ಅಲ್ಲದೇ ಹಲವು ಬಾರಿ ಸುಧಾ ಮೂರ್ತಿ ಅವರೇ ವೈಯಕ್ತಿಕವಾಗಿ ಉದ್ಯಾನವನಕ್ಕೇ ಭೇಟಿ ನೀಡಿ ಕೆಲಸ ಮೇಲ್ವಿಚಾರಣೆ ಮಾಹಿತಿ ಪಡೆಯುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ. ಗದಗ ಬಳಿ ಇರುವ ಬನ್ನೇರುಘಟ್ಟ ಉದ್ಯಾನವನದ ಮಿನಿ ಮೃಗಾಲಯದ ಅಭಿವೃದ್ಧಿಗೆ ಸುಧಾ ಮೂರ್ತಿ ಅವರು ಸಹಾಯ ಹಸ್ತಚಾಚಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

  • ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿದ್ದ `ಸಿಂಹಿಣಿ’ ಸಾವು

    ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿದ್ದ `ಸಿಂಹಿಣಿ’ ಸಾವು

    ಬೆಂಗಳೂರು: ಯುಗಾದಿ ಹಬ್ಬದಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಂಹಿಣಿಯೊಂದು ಮೃತಪಟ್ಟಿದೆ.

    ಇಲ್ಲಿನ ಸಿಂಹ ಸಫಾರಿಯಲ್ಲಿದ್ದ 25 ವರ್ಷ ವಯಸ್ಸಿನ ಸಿಂಹಿಣಿ ಮೃತಪಟ್ಟಿದ್ದು, ವಯೋಸಹಜ ಕಾಯಿಲೆ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ವೈದ್ಯರು ತಿಳಿಸಿದ್ದಾರೆ.

    ಸಿಂಹಿಣಿಯನ್ನು 8 ನೇ ವಯಸ್ಸಿನಲ್ಲಿ ಮಹಾರಾಷ್ಟ್ರದ ಸಾಂಗ್ಲಿಯಿಂದ ಪ್ರಾಣಿ ವಿನಿಮಯದಡಿಯಲ್ಲಿ ಬನ್ನೇರುಘಟ್ಟಕ್ಕೆ ತರಲಾಗಿತ್ತು. ಈಗಾಗಲೇ ಜೈವಿಕ ಉದ್ಯಾನವನದಲ್ಲಿ ಹಲವು ಪ್ರಾಣಿಗಳು ಸಾವನ್ನಪ್ಪಿದ್ದು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಇದೀಗ ಸಿಂಹಿಣಿ ಸಾವು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.