Tag: ಬನ್ವಾರಿಲಾಲ್ ಪುರೋಹಿತ್

  • ಪಂಜಾಬ್‌ ರಾಜ್ಯಪಾಲ ಸ್ಥಾನಕ್ಕೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ

    ಪಂಜಾಬ್‌ ರಾಜ್ಯಪಾಲ ಸ್ಥಾನಕ್ಕೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ

    ಚಂಡೀಗಢ: ವೈಯಕ್ತಿಕ ಕಾರಣ ನೀಡಿ ಪಂಜಾಬ್ ರಾಜ್ಯಪಾಲ (Punjab Governor) ಬನ್ವಾರಿಲಾಲ್ ಪುರೋಹಿತ್ (Banwarilal Purohit) ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಪುರೋಹಿತ್ ಅವರು ಭಾರತದ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, ವೈಯಕ್ತಿಕ ಮತ್ತು ಇತರ ಕೆಲವು ಬದ್ಧತೆಗಳ ಕಾರಣ ನಾನು ಪಂಜಾಬ್‌ನ ಗವರ್ನರ್ ಮತ್ತು ಆಡಳಿತಾಧಿಕಾರಿ, ಕೇಂದ್ರಾಡಳಿತ ಪ್ರದೇಶ, ಚಂಡೀಗಢದ ಹುದ್ದೆಗೆ ನನ್ನ ರಾಜೀನಾಮೆಯನ್ನು ನೀಡುತ್ತೇನೆ. ದಯವಿಟ್ಟು ಅದನ್ನು ಬಾಧ್ಯತೆಯ ಮೇಲೆ ಸ್ವೀಕರಿಸಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸ್‌ ಠಾಣೆಯಲ್ಲೇ ಮಹಾರಾಷ್ಟ್ರ ಸಿಎಂ ಪಕ್ಷದ ನಾಯಕನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ

    ಕೆಲವು ತಿಂಗಳುಗಳಿಂದ ರಾಜ್ಯಪಾಲರು ಮತ್ತು ರಾಜ್ಯದ ಸಿಎಂ ಭಗವಂತ್ ಮಾನ್ ನಡುವೆ ವಿವಿಧ ವಿಷಯಗಳ ಕುರಿತು ಮಾತಿನ ಸಮರ ನಡೆಯುತ್ತಿತ್ತು. ಕಳೆದ ವರ್ಷ ಆಗಸ್ಟ್‌ನಲ್ಲಿ ಬನ್ವಾರಿಲಾಲ್ ಪುರೋಹಿತ್ ಅವರು ಸಿಎಂಗೆ ಕಟುವಾದ ಪದ ಬಳಸಿ ಪತ್ರ ಬರೆದಿದ್ದರು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂದು ಎಚ್ಚರಿಸಿದ್ದರು.

    ರಾಜ್ಯಪಾಲದ ಪತ್ರಕ್ಕೆ ಪ್ರತ್ಯುತ್ತರವಾಗಿ ಪಂಜಾಬ್‌ ಸಿಎಂ ಭಗವಂತ್ ಮಾನ್, ರಾಜ್ಯಪಾಲರು ರಾಜ್ಯದ ಶಾಂತಿ ಪ್ರಿಯ ಜನರಿಗೆ ಬೆದರಿಕೆ ಹಾಕಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಎಲ್‌ಕೆ ಅಡ್ವಾಣಿಗೆ ಭಾರತ ರತ್ನ : ನರೇಂದ್ರ ಮೋದಿ ಘೋಷಣೆ

    ಅಕ್ಟೋಬರ್‌ನಲ್ಲಿ ಬನ್ವಾರಿಲಾಲ್ ಪುರೋಹಿತ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ತರ್ನ್ ತರಣ್ ‘ಅಕ್ರಮ’ ಗಣಿಗಾರಿಕೆ ಘಟನೆಯ ಬಗ್ಗೆ ಪತ್ರ ಬರೆದಿದ್ದರು. ಈ ಸಂಬಂಧ ವಿವರವಾದ ವರದಿ ಕೇಳಿದ್ದರು. ಪತ್ರದಲ್ಲಿ ಶಾಸಕರೊಬ್ಬರ ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆಯಲ್ಲಿ ಶಾಸಕರ ನಿಕಟವರ್ತಿ ಶಾಮೀಲು, ಪೊಲೀಸ್ ಅಧಿಕಾರಿಗಳ ಅಮಾನತು ಬಗ್ಗೆಯೂ ಅವರು ಆರೋಪಿಸಿದ್ದಾರೆ.

  • ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ, ಆತ್ಮಶೋಧನೆ ಅಗತ್ಯವಿದೆ – ಸುಪ್ರೀಂ ಕೋರ್ಟ್

    ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ, ಆತ್ಮಶೋಧನೆ ಅಗತ್ಯವಿದೆ – ಸುಪ್ರೀಂ ಕೋರ್ಟ್

    ನವದೆಹಲಿ: ವಿಷಯ ಸುಪ್ರೀಂಕೋರ್ಟ್‌ಗೆ (Supreme Court) ಬರುವ ಮೊದಲೇ ಆಯಾ ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ರಾಜ್ಯಪಾಲರು ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

    ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ವಿಧೇಯಕಗಳನ್ನು ಅನುಮೋದಿಸುವಲ್ಲಿ ವಿಳಂಬ ಮಾಡಿದ್ದರ ವಿರುದ್ಧ ಪಂಜಾಬ್ ಸರ್ಕಾರ (Punjab Govt) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ನೇತೃತ್ವದ ಪೀಠ, ವಿಷಯಗಳು ಸುಪ್ರೀಂಕೋರ್ಟ್‌ಗೆ ಬಂದಾಗ ಮಾತ್ರ ರಾಜ್ಯಪಾಲರು ಕಾರ್ಯನಿರ್ವಹಿಸಿದಾಗ ಇದು ಕೊನೆಗೊಳ್ಳಬೇಕು. ರಾಜ್ಯಪಾಲರಿಂದ ಸ್ವಲ್ಪ ಆತ್ಮಶೋಧನೆ ಅಗತ್ಯವಿದೆ. ಅವರು ಜನರ ಚುನಾಯಿತ ಪ್ರತಿನಿಧಿಗಳಲ್ಲ ಎಂದು ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

    ಇದೇ ವೇಳೆ ಪಂಜಾಬ್ ರಾಜ್ಯಪಾಲರು ಕೈಗೊಂಡ ಕ್ರಮಗಳ ಕುರಿತು ನವೀಕರಿಸಿದ ವರದಿಯನ್ನು ಸಲ್ಲಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿ ಪೀಠ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತು. ಇದನ್ನೂ ಓದಿ: ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ಇಂದಿನ ವಿಚಾರಣೆಯ ಸಂದರ್ಭದಲ್ಲಿ, ಪಂಜಾಬ್ ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಮೆಹ್ತಾ, ಪುರೋಹಿತ್ ಅವರು ತಮ್ಮ ಮುಂದೆ ಇಟ್ಟಿರುವ ಮಸೂದೆಗಳ ಮೇಲೆ ಕ್ರಮ ಕೈಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ಮನವಿಯು ಅನಗತ್ಯ ದಾವೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿದರು. ಈ ವೇಳೆ ಈ ವಾದಕ್ಕೆ ಹೆಚ್ಚಿನ ಮಾಹಿತಿ ನೀಡಿ ಎಂದು ಪೀಠ ಸೂಚಿಸಿತು.

    ವಿಚಾರಣೆಯ ಸಂದರ್ಭದಲ್ಲಿ, ಹಿರಿಯ ವಕೀಲ ಮತ್ತು ಭಾರತದ ಮಾಜಿ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು ಕೇರಳ ಮತ್ತು ತಮಿಳುನಾಡು ಸಲ್ಲಿಸಿದ ಇದೇ ರೀತಿಯ ಅರ್ಜಿಗಳನ್ನು ಪ್ರಸ್ತಾಪಿಸಿ, ಜನರ ಕಲ್ಯಾಣಕ್ಕಾಗಿ ಅಂಗೀಕರಿಸಿದ ಮಸೂದೆಗಳ ಬಗ್ಗೆ ರಾಜ್ಯಪಾಲರು ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

     

    ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ರಾಜ್ಯಪಾಲ ಆರ್‌ಎನ್ ರವಿ ವಿರುದ್ಧ ಅರ್ಜಿ ಸಲ್ಲಿಸಿದರೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು 8ಕ್ಕೂ ಹೆಚ್ಚು ಮಸೂದೆಗಳ ಪರಿಗಣನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಶುಕ್ರವಾರ ಎಲ್ಲ ಅರ್ಜಿಗಳು ಒಟ್ಟಿಗೆ ವಿಚಾರಣೆಗೆ ಬರಲಿವೆ.

    ಪ್ರಸ್ತುತ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಂಜಾಬ್ ವಿಧಾನಸಭೆ ಅಂಗೀಕರಿಸಿದ 27 ಮಸೂದೆಗಳಲ್ಲಿ 22ಕ್ಕೆ ಪುರೋಹಿತ್ ತಮ್ಮ ಒಪ್ಪಿಗೆ ನೀಡಿದ್ದಾರೆ. ಸದನದಲ್ಲಿ ಹಣದ ಮಸೂದೆ ಮಂಡಿಸಲು ರಾಜ್ಯಪಾಲರ ಒಪ್ಪಿಗೆ ಬೇಕು. ಈ ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದ್ದಾರೆ ಆಪ್‌ ಸರ್ಕಾರ ಆರೋಪಿಸಿದೆ.

  • ಟೊಮೆಟೋ ಬಳಕೆಯನ್ನೇ ನಿಲ್ಲಿಸಿ- ಪಂಜಾಬ್ ರಾಜ್ಯಪಾಲ ಕರೆ

    ಟೊಮೆಟೋ ಬಳಕೆಯನ್ನೇ ನಿಲ್ಲಿಸಿ- ಪಂಜಾಬ್ ರಾಜ್ಯಪಾಲ ಕರೆ

    ಚಂಡೀಗಢ: ದೇಶದಲ್ಲಿ ಕೆಂಪು ಸುಂದರಿ, ಕಿಚನ್ ಕ್ವೀನ್ ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಈ ನಡುವೆ ಪಂಜಾಬ್‍ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Punjab Governor Banwarilal Purohit) ಅವರು ಟೊಮೆಟೋ ಬಳಕೆ ಮಾಡುವುದನ್ನು ನಿಲ್ಲಿಸುವಂತೆ ಕರೆ ನೀಡಿದ್ದಾರೆ.

    ಪ್ರಸ್ತುತ ಕೆ.ಜಿ ಟೊಮೇಟೊ ಬೆಲೆ (Tomato Price) 200 ರೂಪಾಯಿಯ ಗಡಿದಾಟಿದೆ. ಮುಂದಿನ ದಿನಗಳಲ್ಲಿ ಇದರ ಬೆಲೆ 300 ರೂ. ಗಡಿ ದಾಟುವ ಸಾಧ್ಯತೆಗಳಿವೆ ಎಂದು ವ್ಯಾಪರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಜ್ಯದ ಜನತೆಗೆ ಈ ಕರೆ ನೀಡಿದ್ದಾರೆ.

    ಕಳೆದ ಕೆಲವು ವಾರಗಳಿಂದ ಪಂಜಾಬ್ ಮತ್ತು ಚಂಡೀಗಢದಲ್ಲಿಯೂ ಟೊಮೆಟೋ ಬೆಲೆ ಭಾರೀ ಏರಿಕೆಯಾಗುತ್ತಿದ್ದು, ಜನ ಕಂಗಾಲಾಗಿದ್ದಾರೆ. ಯಾಕೆಂದರೆ ಅಡುಗೆಗೆ ಟೊಮೆಟೋ ಬೇಕೇ ಬೇಕಾಗುತ್ತದೆ. ಭಾರೀ ಮಳೆ ಹೀಗೆ ಹವಾಮಾನ ವೈಪರೀತ್ಯದಿಂದಾಗಿ ಕೆಲ ತಿಂಗಳುಗಳಿಂದ ಟೊಮೆಟೋ ಬೆಲೆಗಳು ನಾಶವಾಗುತ್ತಿದ್ದು, ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಬೆಲೆ ದಿಢೀರ್ ಏರಿಕೆ ಕಂಡಿದೆ. ಇದನ್ನೂ ಓದಿ: ಟೊಮೆಟೋ ತಿನ್ನೋದನ್ನೇ ನಿಲ್ಲಿಸಿದ್ರೆ ಬೆಲೆ ಕಡಿಮೆಯಾಗುತ್ತೆ – ಯುಪಿ ಸಚಿವೆ ಸಲಹೆ

    ಸದ್ಯ ಈ ಪರಿಸ್ಥಿತಿಯು ಸಾಮಾನ್ಯ ಜನರ ಮೇಲೆ ಭಾರೀ ಹೊರೆಯನ್ನುಂಟು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು, ಗಗನಕ್ಕೇರುತ್ತಿರುವ ಟೊಮೆಟೋ ಬೆಲೆಗಳಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಮ್ಮ ಮನೆಯಲ್ಲಿಯೂ ಟೊಮೆಟೋ ಬಳಸದಂತೆ ಹೇಳಿರುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ಅನ್ನಭಾಗ್ಯ ಹಣ ವರ್ಗಾವಣೆ- ಕೆ.ಎಚ್ ಮುನಿಯಪ್ಪ

    ಒಂದು ವಸ್ತುವಿನ ಬಳಕೆಯನ್ನು ನಿಲ್ಲಿಸುವುದು ಅಥವಾ ಕಡಿಮೆ ಮಾಡುವುದು ಅದರ ಮೇಲಿನ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಬೇಡಿಕೆಯನ್ನು ಕಡಿಮೆ ಮಾಡುವುದರಿಂದ ತನ್ನಿಂದ ತಾನೇ ಬೆಲೆ ಕಡಿಮೆಯಾಗುತ್ತದೆ. ಜನರು ಸದ್ಯಕ್ಕೆ ತಮ್ಮ ಮನೆಯಲ್ಲಿ ಟೊಮೆಟೋಗೆ ಪರ್ಯಾಯಗಳನ್ನು ಬಳಸುತ್ತಿದ್ದಾರೆ. ಈ ಮೂಲಕ ಟೊಮೆಟೋ ಬೆಲೆ ಏರಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತಿದ್ದಾರೆ ಎಂದು ನಾನು ಭಾವಿಸಿರುವುದಾಗಿ ರಾಜ್ಯಪಾಲರು ತಾವು ಹೊರಡಿಸಿರುವ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶೇಷ ಅಧಿವೇಶನ ನಡೆಸಲು ಕೊನೆಗೂ ಒಪ್ಪಿಗೆ ನೀಡಿದ ಪಂಜಾಬ್ ಗವರ್ನರ್

    ವಿಶೇಷ ಅಧಿವೇಶನ ನಡೆಸಲು ಕೊನೆಗೂ ಒಪ್ಪಿಗೆ ನೀಡಿದ ಪಂಜಾಬ್ ಗವರ್ನರ್

    ಚಂಡೀಗಢ: ಸೆಪ್ಟೆಂಬರ್ 22 ರಂದು ವಿಶ್ವಾಸಮತ ಚಲಾಯಿಸಲು ಪಂಜಾಬ್‌ನ (Punjab) ಆಮ್ ಆದ್ಮಿ ಪಕ್ಷ (AAP) ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶವನ್ನು (One Day Special Session) ಪಂಜಾಬ್‌ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ರದ್ದುಗೊಳಿಸಿದ್ದರು. ಇದೀಗ ಸೆಪ್ಟೆಂಬರ್ 27ರಂದು 1 ದಿನದ ವಿಧಾನಸಭೆ ಅಧಿವೇಶನ ನಡೆಸುವ ಸರ್ಕಾರದ ಮನವಿಯನ್ನು ಅವರು ಅಂಗೀಕರಿಸಿದ್ದಾರೆ.

    ಭಗವಂತ್ ಮಾನ್ (Bhagwant Mann) ನೇತೃತ್ವದ ಎಎಪಿ ಸರ್ಕಾರ ಸರಕು ಸೇವಾ ತೆರಿಗೆ, ವಿದ್ಯುತ್ ಪೂರೈಕೆಯಂತಹ ವಿಷಯಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 27ರಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ನಡೆಸಲಿದೆ. ಇದಕ್ಕೆ ರಾಜ್ಯಪಾಲರು ಅನುಮತಿ ನೀಡಿರುವುದಾಗಿ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವನ್ ಭಾನುವಾರ ತಿಳಿಸಿದ್ದಾರೆ.

    Bhagwant Mann

    ಪಂಜಾಬ್‌ನ ಎಎಪಿ ಸರ್ಕಾರ ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿತ್ತು. ಇದಾದ ಬಳಿಕ ಮಾನ್ ವಿಶ್ವಾಸ ಮತ ಪಡೆಯಲು ಸೆಪ್ಟೆಂಬರ್ 22 ರಂದು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದ್ದರು. ಇದನ್ನೂ ಓದಿ: ಎಸ್.ಎಂ ಕೃಷ್ಣ ಚೇತರಿಸಿಕೊಳ್ಳುತ್ತಿದ್ದು, ಗಾಬರಿ ಬೇಡ: ಬಸವರಾಜ್ ಬೊಮ್ಮಾಯಿ

    ಅಧಿವೇಶನ ನಡೆಸಲು ರಾಜ್ಯಪಾಲರು ಮೊದಲಿಗೆ ಅನುಮತಿ ನೀಡಿದರೂ ಬಳಿಕ ಅದನ್ನು ಹಿಂತೆಗೆದುಕೊಂಡರು. ಇದಾದ ಬಳಿಕ ಪಂಜಾಬ್ ಸಿಎಂ ರಾಜಭವನದ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವುದಾಗಿ ತಿಳಿಸಿದ್ದರು. ಇದೀಗ ಸೆಪ್ಟೆಂಬರ್ 27ರಂದು ಅಧಿವೇಶನ ನಡೆಸಲು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಇದನ್ನೂ ಓದಿ: PFI ಶಂಕಿತರ ಮೊಬೈಲ್‌ನಲ್ಲಿತ್ತು ಸಾಕ್ಷಿಗಳನ್ನೇ ನಾಶ ಮಾಡುವ ಆಪ್

    Live Tv
    [brid partner=56869869 player=32851 video=960834 autoplay=true]

  • ಭಗವಂತ್ ಮಾನ್ ವಿಶೇಷ ಅಧಿವೇಶನದ ಬೇಡಿಕೆಯನ್ನು ತಿರಸ್ಕರಿಸಿದ ಪಂಜಾಬ್ ಗವರ್ನರ್

    ಭಗವಂತ್ ಮಾನ್ ವಿಶೇಷ ಅಧಿವೇಶನದ ಬೇಡಿಕೆಯನ್ನು ತಿರಸ್ಕರಿಸಿದ ಪಂಜಾಬ್ ಗವರ್ನರ್

    ಚಂಡೀಗಢ: ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ತಮ್ಮ ಬಹುಮತವನ್ನು ಸಾಬೀತುಪಡಿಸಲು ವಿಶೇಷ ಅಧಿವೇಶನವನ್ನು (Special Session) ಕರೆದಿದ್ದರು. ಆದರೆ ಪಂಜಾಬ್‌ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ಇದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ.

    ರಾಜ್ಯದಲ್ಲಿ ಬಿಜೆಪಿ (BJP) ತನ್ನ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ (AAP) ಈ ಹಿಂದೆ ಆರೋಪಿಸಿತ್ತು. ಈ ಹಿನ್ನೆಲೆ ಸೋಮವಾರ ಭಗವಂತ್ ಮಾನ್ ಅವರು ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ಹೇಳಿದ್ದರು. ಆದರೆ ವಿಶ್ವಾಸಮತ ಸಾಬೀತುಪಡಿಸಲು ಕರೆದಿರುವ ಅಧಿವೇಶನ ನಿಯಮಾನುಸಾರವಾಗಿಲ್ಲ ಎಂದು ರಾಜಭವನ ವಿಶೇಷ ಅಧಿವೇಶನದ ಆದೇಶವನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ʼPAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ

    ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ, ಕಾಂಗ್ರೆಸ್ ನಾಯಕ ಸುಖಪಾಲ್ ಸಿಂಗ್ ಖೈರಾ ಹಾಗೂ ಪಂಜಾಬ್ ಬಿಜೆಪಿ ಮುಖ್ಯಸ್ಥ ಅಶ್ವನಿ ಶರ್ಮ ಅವರು ಕೇವಲ ವಿಶ್ವಾಸ ನಿರ್ಣಯ ಮಂಡಿಸಲು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲು ಯಾವುದೇ ಕಾನೂನು ಅವಕಾಶವಿಲ್ಲ ಎಂದು ವಾದಿಸಿದ್ದಾರೆ. ಈ ಹಿನ್ನೆಲೆ ರಾಜ್ಯಪಾಲರು ಈ ನಿರ್ಣಯವನ್ನು ಕೈಗೊಂಡಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ – ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್

    ಈ ಬೆಳವಣಿಗೆಯ ಬಳಿಕ ಟ್ವೀಟ್ ಮಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಂಪುಟ ಕರೆದ ಅಧಿವೇಶನವನ್ನು ರಾಜ್ಯಪಾಲರು ಹೇಗೆ ನಿರಾಕರಿಸಲು ಸಾಧ್ಯ? ಪ್ರಜಾಪ್ರಭುತ್ವ ಕೊನೆಗೊಂಡಿದೆ ಎನ್ನಲು ಇದುವೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]