Tag: ಬಯಲು ಸೀಮೆ

  • ಜವಾರಿ ಭಾಷೆಯಲ್ಲಿ ರೆಡಿ ಆಯಿತು ‘ಬಯಲುಸೀಮೆ’ ಸಿನಿಮಾ

    ಜವಾರಿ ಭಾಷೆಯಲ್ಲಿ ರೆಡಿ ಆಯಿತು ‘ಬಯಲುಸೀಮೆ’ ಸಿನಿಮಾ

    ಭಾಷೆಯ ಗಡಿ ಎಂಬ ಎಲ್ಲೆಯನ್ನು ಮೀರಿದ್ದು ಸಿನಿಮಾ. ಅದರ ಉದ್ದೇಶ ಒಂದೇ ಮನರಂಜನೆ. ಇದೀಗ ಅದೇ ಮನರಂಜನೆ ಉದ್ದೇಶ ಇಟ್ಟುಕೊಂಡು ಉತ್ತರ ಕರ್ನಾಟಕದ ಜವಾರಿ ಭಾಷೆಯ ಘಮ ಹೊತ್ತ ‘ಬಯಲು ಸೀಮೆ’ ಸಿನಿಮಾ ರೆಡಿಯಾಗಿದೆ.  ವರುಣ್ ಕಟ್ಟೀಮನಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಬಯಲುಸೀಮೆ’ ಸಿನಿಮಾ ಹೆಸರೇ ಸೂಚಿಸುವಂತೆ ಪಕ್ಕಾ ಉತ್ತರ ಕರ್ನಾಟಕ ಸೊಗಡಿರುವ ಚಿತ್ರ. ರಗಡ್ ಕಥೆ ಈ ಸಿನಿಮಾದ ಜೀವಾಳ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಚಿತ್ರದ ಕಥಾವಸ್ತು. ಎಂಬತ್ತರ ದಶಕ ಹಾಗೂ ಈಗಿನ ಕಾಲಘಟ್ಟವನ್ನಿಟ್ಟುಕೊಂಡು ಕಥೆ ಹೆಣೆದು ನಿರ್ದೇಶನ ಮಾಡಿದ್ದಾರೆ ವರುಣ್ ಕಟ್ಟೀಮನಿ. ಕಥೆಗೆ ತಕ್ಕಂತೆ ಸಾಕಷ್ಟು ಟ್ವಿಸ್ಟ್ ಟರ್ನ್ ಗಳು ಚಿತ್ರದಲ್ಲಿದ್ದು, ನೋಡುಗರನ್ನು ಥ್ರಿಲ್ ಗೊಳಿಸುವ ಕಥಾಹಂದರ ಸಿನಿಮಾದಲ್ಲಿದೆ. ಈಗಾಗಲೇ ಸಿನಿಮಾದ ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆದಿವೆ. ಸೆನ್ಸಾರ್ ನಲ್ಲಿ ‘ಎ’ ಸರ್ಟಿಫಿಕೇಟ್ ಪಡೆದುಕೊಂಡಿರುವ ಈ ಸಿನಿಮಾ ಸದ್ಯದಲ್ಲೇ ತೆರೆ ಕಾಣೋದಕ್ಕೆ ರೆಡಿಯಾಗಿದೆ.

    ವರುಣ್ ಕಟ್ಟೀಮನಿ ನಿರ್ದೇಶನದ ಜೊತೆಗೆ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದ್ದಾರೆ. ಆರ್ಮುಗಂ ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕಲ್ನವರ್, ಪ್ರದೀಪ್ ರಾಜ್ ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.  ಇದನ್ನೂ ಓದಿ: ರಚನಾ ದಶರಥ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡ ಲೋಕೇಶ್ ಬಸವಟ್ಟಿ

    ಈ ಸಿನಿಮಾ ಉತ್ತರ ಕರ್ನಾಟಕದ ಖಡಕ್ ಖಾನಾವಳಿ ಊಟ ಇದ್ದಂಗೆ. ಕಂಪ್ಲೀಟ್ ಸಿನಿಮಾ ಉತ್ತರ ಕರ್ನಾಟಕ ಸ್ಲ್ಯಾಂಗ್ ಇರುತ್ತೆ. ಎಲ್ಲಾ ಕಲಾವಿದರು ಆ ಸ್ಲ್ಯಾಂಗ್ ನಲ್ಲೇ ಡಬ್ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದ ಪೊಲಿಟಿಕಲ್, ಕ್ರೈಂ,ಅಲ್ಲಿನ ಸಂಸ್ಕೃತಿ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಕಮರ್ಶಿಯಲ್ ಎಲಿಮೆಂಟ್ ಗಳನ್ನು ಇಟ್ಟುಕೊಂಡು ವಿಭಿನ್ನವಾಗಿ ಕಥೆಯನ್ನು ಹೇಳುವ ಪ್ರಯತ್ನ ಮಾಡಿದ್ದೇವೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ನಿರ್ದೇಶಕ ವರುಣ್ ಕಟ್ಟೀಮನಿ.

    ಗಾಯಿತ್ರಿ ದೇವಿ ಕ್ರಿಯೇಷನ್ಸ್ ಮತ್ತು ಪಿ ಆರ್ ಎಸ್ ಕ್ರಿಯೇಷನ್ಸ್ ಬ್ಯಾನರ್ ನಡಿ ಲಕ್ಷ್ಮಣ್ ಸಾ ಶಿಂಗ್ರಿ, ಶ್ರೀಧರ್ ಬಿದರಳ್ಳಿ, ರಶ್ಮೀ ವರುಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗಜೇಂದ್ರಗಡ, ಬೀಳಗಿ, ಮುಂಬೈನಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದ್ದು, ಸುಜಯ್ ಕುಮಾರ್ ಬಾವಿಕಟ್ಟಿ ಕ್ಯಾಮೆರಾವರ್ಕ್, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಎತ್ತಿನಹೊಳೆ ಯೋಜನೆಗೆ ಮತ್ತಷ್ಟು ಹಣ ಬಿಡುಗಡೆ ಮಾಡಲು ಮುಂದಾದ ಸರ್ಕಾರ

    ಎತ್ತಿನಹೊಳೆ ಯೋಜನೆಗೆ ಮತ್ತಷ್ಟು ಹಣ ಬಿಡುಗಡೆ ಮಾಡಲು ಮುಂದಾದ ಸರ್ಕಾರ

    ಬೆಂಗಳೂರು: ಬಯಲು ಸೀಮೆ ಮಂದಿಗೆ ನೀರು ಒದಗಿಸುವ ಎತ್ತಿನಹೊಳೆ ಯೋಜನೆ(Yetthinahole Drinking Water Project) ಕಾಮಗಾರಿ ಆರಂಭವಾಗಿ ಶುರುವಾಗಿ 10 ವರ್ಷ ಕಳೆದಿದೆ. ಆದರೆ ಇದು ಪೂರ್ಣಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಆದರೆ ಈ ಯೋಜನೆ ಪೂರ್ಣಗೊಳಿಸಲು ಮತ್ತಷ್ಟು ಹಣ ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರ(Karnataka Government) ಮುಂದಾಗಿದೆ.

    ಕುಂಟುತ್ತಾ ನಡೆಯುತ್ತಿರುವ ಈ ಯೋಜನೆಯ ಶೇ.50ರಷ್ಟು ಕಾಮಗಾರಿ ಇಲ್ಲಿಯವರೆಗೆ ಪೂರ್ಣಗೊಂಡಿಲ್ಲ. ಯೋಜನೆಯ ಮೂಲ ವೆಚ್ಚ 8ಸಾವಿರ ಕೋಟಿ ರೂ. ಆಗಿತ್ತು. ನಂತರ ಇದನ್ನು 13ಸಾವಿರ ಕೋಟಿ ರೂ.ಗೆ ಹೆಚ್ಚಿಸಲಾಗಿತ್ತು. ಆದರೆ ಈ ಮೊತ್ತವೂ ಈಗ ಸಾಕಾಗುತ್ತಿಲ್ಲವಂತೆ. ಹೀಗಾಗಿ ಈ ಯೋಜನೆಗೆ ಮತ್ತೆ ಅನುದಾನ ಹೆಚ್ಚಿಸಲು ರಾಜ್ಯ ಸರ್ಕಾರ ಮುಂದಾಗಿದೆ.
    ಇದನ್ನೂ ಓದಿ: ಬೆಂಗಳೂರಿನಲ್ಲಿ ಇಮ್ರಾನ್ ಖಾನ್ ಪುಸ್ತಕ ಬಿಡುಗಡೆಗೆ ವಿರೋಧ – ಹಿಂದೂ ಸಂಘಟನೆ ದೂರು, ಕಾರ್ಯಕ್ರಮ ರದ್ದು

    ಈಗ ಎತ್ತಿನ ಹೊಳೆ ಯೋಜನೆಗೆ ಹೊಸ ಹಣಕಾಸು ಪ್ರಸ್ತಾವನೆ ಸಿದ್ದಪಡಿಸಲಾಗಿದೆ. ಯೋಜನೆ ಮುಗಿಸಲು 23,251 ಕೋಟಿ ರೂ. ಬೇಕಾಗುತ್ತದೆ. ಅನುಮತಿ ನೀಡಿ ಎಂದು ಆರ್ಥಿಕ ಇಲಾಖೆಗೆ ಕಡತ ರವಾನಿಸಿದೆ. ಮೂಲಗಳ ಪ್ರಕಾರ ಈ ಮೊತ್ತ ಕೂಡ ಸಾಕಾಗುವುದು ಅನುಮಾನ. ಇದನ್ನು 25 ಸಾವಿರ ಕೋಟಿಗೆ ಹಿಗ್ಗಿಸುವ ಪ್ರಯತ್ನಗಳು ಕೂಡ ನಡೆಯುತ್ತಿದೆ.

    ಸರ್ಕಾರದ ಹೊಸ ಲೆಕ್ಕದ ಪ್ರಕಾರ 1 ಟಿಎಂಸಿ ನೀರನ್ನು ಪಶ್ಚಿಮಘಟ್ಟಗಳಿಂದ ಬಯಲು ಸೀಮೆಗೆ ತರಲು 1 ಸಾವಿರ ಕೋಟಿ ಹಣ ಖರ್ಚಾಗುತ್ತಿದೆ. ಇಂತಹ ದುಬಾರಿ ಯೋಜನೆ ಜನರಿಗೆ ಬೇಕಾ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಕೇಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವರ್ಷಕ್ಕೆ 8-10 ಬಾರಿ ಬಂದ್ ಮಾಡಿದ್ರೆ ಆಗೋ ನಷ್ಟಕ್ಕೆ ಹೊಣೆ ಯಾರು: ಕರ್ನಾಟಕ ಯುವ ಶಕ್ತಿ ವೇದಿಕೆ

    ವರ್ಷಕ್ಕೆ 8-10 ಬಾರಿ ಬಂದ್ ಮಾಡಿದ್ರೆ ಆಗೋ ನಷ್ಟಕ್ಕೆ ಹೊಣೆ ಯಾರು: ಕರ್ನಾಟಕ ಯುವ ಶಕ್ತಿ ವೇದಿಕೆ

    ಬೆಂಗಳೂರು: ಜೂನ್ 12 ರ ಕರ್ನಾಟಕ ಬಂದ್‍ಗೆ ನಮ್ಮ ಬೆಂಬಲವಿಲ್ಲ. ಇದಕ್ಕೆ ನಮ್ಮ ವಿರೋಧವಿದೆ ಎಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷ ಲಿಂಗೇಗೌಡ ಹೇಳಿದ್ದಾರೆ.

    ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವರ್ಷಕ್ಕೆ 8-10 ಬಾರಿ ಕರ್ನಾಟಕ ಬಂದ್‍ಗೆ ಕರೆ ಮಾಡುವುದರಿಂದ ಜನಸಾಮಾನ್ಯರಿಗೆ ಆಗುವ ನಷ್ಟಕ್ಕೆ ಹೊಣೆ ಯಾರು ಎಂದು ಪ್ರಶ್ನಿಸಿದ ಅವರು, ‘ಬಂದ್ ಬಂದ್ ಬಂದ್’ ಅಂತಾ ಮೂರು ಸಾರಿ ಹೇಳಿದ್ರೆ ಎಲ್ಲರೂ ಜೊತೆಗಿದ್ದಾರೆ  ಅಂದುಕೊಂಡರೆ  ಆಗಲ್ಲ, ಕೇವಲ ನಾಲ್ಕು ಜನರಿಗೆ ಬಂದ್ ಕರೆ ಕೊಟ್ಟರೆ ಸಾಲದೆಂದು ಆಕ್ರೋಶ ವ್ಯಕ್ತಪಡಿಸಿದರು.

    ಜೂನ್ 11 ರಂದು ಬಯಲು ಸೀಮೆ ಶಾಶ್ವತ ನೀರಾವರಿ ಯೋಜನೆಗೆ ಬೆಂಬಲ ಸೂಚಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಟೌನ್ ಹಾಲ್ ಬಳಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಹೇಳಿದರು.

    ಬಂದ್ ಮಾಡ್ತೀವಿ: ಏನೇ ಆಗಲಿ ಜೂನ್ 12ರಂದು ಕರ್ನಾಟಕ ಬಂದ್ ಮಾಡೇ ಮಾಡ್ತೀವಿ. ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ಅನೇಕ ಬೇಡಿಕೆಗಳನ್ನ ಈಡೇರಿಸಲು ಬಂದ್ ಅತ್ಯಗತ್ಯ ಅಂತಾ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

    ಇದನ್ನೂ ಓದಿ: ಜೂನ್ 12 ರಂದು ಈ ಎಲ್ಲ ಕಾರಣಕ್ಕಾಗಿ ಬಂದ್ ಅಗತ್ಯ: ವಾಟಾಳ್ ನಾಗರಾಜ್