Tag: ಬಯೋಗ್ರಫಿ

  • ಬಂಗ್ಲೆ ಶಾಮ ರಾವ್ ದ್ವಾರಕನಾಥ್, ದ್ವಾರಕೀಶ್ ಆಗಿದ್ದು ಹೇಗೆ?

    ಬಂಗ್ಲೆ ಶಾಮ ರಾವ್ ದ್ವಾರಕನಾಥ್, ದ್ವಾರಕೀಶ್ ಆಗಿದ್ದು ಹೇಗೆ?

    ನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ಅಂತಾನೇ ಫೇಮಸ್ ಆಗಿರುವ ದ್ವಾರಕೀಶ್ ಅವರ ಪೂರ್ಣ ಹೆಸರು ಬಂಗ್ಲೆ ಶಾಮ ರಾವ್ ದ್ವಾರಕನಾಥ್. ಹಾಸ್ಯ ನಟರಾಗಿ, ನಿರ್ಮಾಪಕರಾಗಿ, ಹಲವಾರು ಭಾಷೆಯಲ್ಲಿ ನಟಿಸಿರುವ ಇವರಿಗೆ ದ್ವಾರಕೀಶ್ (Dwarkeesh)  ಅಂತ ಹೆಸರು ಇಟ್ಟಿದ್ದು ಬೇರೆ ಯಾರೂ ಅಲ್ಲ ಕನ್ನಡ ಚಿತ್ರ ನಿರ್ಮಾಪಕ, ನಿರ್ದೇಶಕ ಸಿ.ವಿ ಶಿವಶಂಕರ್.

    ಕನ್ನಡ ಚಿತ್ರೋದ್ಯಮದಲ್ಲಿ ಏನಾದರೂ ಸಾಧನೆ ಮಾಡಬೇಕು ಅಂತ ಬಣ್ಣದ ಪ್ರಪಂಚಕ್ಕೆ ಬಂದ ದ್ವಾರಕೀಶ್, ಸಿನಿಮಾ ರಂಗದ ನಾನಾ ವಿಭಾಗದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡವರು. ಕೇವಲ ನಟರಾಗಿ ಮಾತ್ರ ಉಳಿಯದೇ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅನೇಕ ಕಲಾವಿದರನ್ನು ಚಿತ್ರೋದ್ಯಮಕ್ಕೆ ಪರಿಚಯಿಸಿದವರು.

    ಮೈಸೂರಿನ ಶಾರದಾ ವಿಲಾಸ್ ಮತ್ತು ಬಾನುಮಯ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ದ್ವಾರಕೀಶ್, ಸಿಪಿಸಿ ಪಾಲಿಟೆಕ್ನಿಕ್ ಜೊತೆ ಡಿಪ್ಲೋಮಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ಮೈಸೂರಿನಲ್ಲಿ ಭಾರತ್ ಆಟೋ ಸ್ಪೇರ್ಸ್ ಅಂಗಡಿಯಿಂದ ವ್ಯಾಪಾರ ಶುರು ಮಾಡಿದ್ದರು. ಆನಂತರ ಸಿನಿಮಾ ರಂಗಕ್ಕೆ ಬಂದವರು.

    ದ್ವಾರಕೀಶ್ ಅವರ ಚಿಕ್ಕಪ್ಪ ಹುಣಸೂರು ಕೃಷ್ಣಮೂರ್ತಿ ಅವರು. ಅವರನ್ನು ಒಪ್ಪಿಸುವ ಮೂಲಕ 1963ರಲ್ಲಿ ದ್ವಾರಕೀಶ್ ಸಿನಿಮಾ ರಂಗವನ್ನು ಪ್ರವೇಶ ಮಾಡಿದರು. ಹಾಸ್ಯನಟ, ಸಹನಟಾಗಿ ಕೆಲಸ ಮಾಡುತ್ತಿದ್ದವರು, ಏಕಾಏಕಿ 1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ನಿರ್ಮಾಪಕರಾದವರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತಿದ್ದಂತೆಯೇ ಮತ್ತೆ 1969ರಲ್ಲಿ ಮೇಯರ್ ಮುತ್ತಣ್ಣ ಚಿತ್ರವನ್ನು ತಮ್ಮದೇ ದ್ವಾರಕಾ ಫಿಲ್ಮ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದರು. ಈ ಸಿನಿಮಾದಲ್ಲಿ ಡಾ.ರಾಜ್ ಕುಮಾರ್ ಹೀರೋ, ಭಾರತಿ ನಾಯಕಿ. ಇದು ಕೂಡ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಪ್ರದರ್ಶನ ಮಾಡಿತು.

    ನಟರಾಗಿ ಜನ್ಮ ರಹಸ್ಯ, ಮಂಕುತಿಮ್ಮ, ಪೆದ್ದ ಗೆದ್ದ, ಕಿಟ್ಟು ಪುಟ್ಟಿ, ಸಿಂಗಾಪುರದಲ್ಲಿ ರಾಜಾಕುಳ್ಳ, ಮನೆ ಮನೆ ಕಥೆ, ಆಫ್ರಿಕಾದಲ್ಲಿ ಶಿಲಾ, ಆಪ್ತಮಿತ್ರ, ಭಲೇ ಹುಡುಗ, ಬಂಗಾರದ ಮನುಷ್ಯ, ಗಲಾಟೆ ಸಂಸಾರ, ಪ್ರಪಂಚ ಕುಳ್ಳ, ಗುರು ಶಿಷ್ಯರು, ಕಳ್ಳ ಕಳ್ಳು ಹೀಗೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ.

     

    1974ರಲ್ಲಿ ವಿಷ್ಣುವರ್ಧನ್ ಅವರ ಜೊತೆಯಾಗಿ ಸಿನಿಮಾ ಮಾಡಲು ಮುಂದಾದರು. ಕಳ್ಳ ಕುಳ್ಳ ಸಿನಿಮಾದಿಂದ ಶುರುವಾದ ಇವರ ಜರ್ನಿ ಆಪ್ತಮಿತ್ರ ಚಿತ್ರದ ತನಕವೂ ಕರೆಕೊಂಡ ಬಂದಿತ್ತು. ಈ ನಡುವೆ ವಿಷ್ಣು ಮತ್ತು ದ್ವಾಕರೀಶ್ ಗಲಾಟೆ ಮಾಡಿಕೊಂಡು ಹತ್ತು ವರ್ಷಗಳ ಕಾಲ ದೂರವಿದ್ದರು.

  • ನಟಿ ರೇಖಾ ಬಯೋಗ್ರಫಿ: ಲೇಡಿ ಸೆಕ್ರೆಟರಿ ಜೊತೆ ಲಿವ್ ಇನ್ ಸಂಬಂಧ ಬಯಲು

    ನಟಿ ರೇಖಾ ಬಯೋಗ್ರಫಿ: ಲೇಡಿ ಸೆಕ್ರೆಟರಿ ಜೊತೆ ಲಿವ್ ಇನ್ ಸಂಬಂಧ ಬಯಲು

    ಬಾಲಿವುಡ್ (Bollywood) ನ ಖ್ಯಾತ ನಟಿ ರೇಖಾ (Rekha) ಅವರ ಬಯೋಗ್ರಫಿ (Biography) ಸಿದ್ದವಾಗಿದೆ. ‘ರೇಖಾ- ದಿ ಅನ್ಟೋಲ್ಡ್ ಸ್ಟೋರಿ’ ಹೆಸರಿನಲ್ಲಿ ಸಿದ್ಧವಾಗಿರುವ ಈ ಪುಸ್ತಕದಲ್ಲಿ ಭಯಾನಕ ಸತ್ಯವೊಂದನ್ನು ಅನಾವರಣಗೊಳಿಸಿದ್ದಾರೆ ಲೇಖಕರು. ಸ್ವತಃ ತನ್ನ ಕಾರ್ಯದರ್ಶಿ ಜೊತೆಯೇ ರೇಖಾ ಲಿವ್ ಇನ್ ರಿಲೇಷನ್ ಶಿಪ್ (Live in Relationship) ಹೊಂದಿದ್ದರು ಎಂದು ಲೇಖಕರು ಉಲ್ಲೇಖಿಸಿದ್ದಾರೆ. ರೇಖಾ ಪತಿಯ ಸಾವಿಗೆ ಇದು ಕೂಡ ಕಾರಣವಾಗಿತ್ತು ಎಂದು ಬರೆದಿದ್ದಾರೆ.

    ಯಾಸರ್ ಉಸ್ಮಾನ್ ಬರೆದ ಈ ಪುಸ್ತಕದಲ್ಲಿ ರೇಖಾ ಬಗೆಗಿನ ಸಾಕಷ್ಟು ಸಂಗತಿಗಳನ್ನು ಹೇಳಲಾಗಿದೆಯಂತೆ. ಅದರಲ್ಲೂ ತನ್ನ ಸೆಕ್ರೆಟರಿಯಾಗಿದ್ದ ಫರ್ಹಜಾನ್ (Farhajan) ಜೊತೆಗಿನ ಸಂಬಂಧ ಮತ್ತು ರೇಖಾ ಅವರನ್ನು ನಿಯಂತ್ರಿಸುವ ಶಕ್ತಿ ಈಕೆಗೆ ಮಾತ್ರ ಗೊತ್ತಿತ್ತು ಎಂದು ಪುಸ್ತಕದಲ್ಲಿ ಬರೆಯಲಾಗಿದೆ.

    ಬಾಲಿವುಡ್ ನ ಅನಭಿಷಿಕ್ತ ರಾಣಿಯಾಗಿ ಮೆರೆದವರು ರೇಖಾ. ಆ ಕಾಲದಲ್ಲೇ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟಿ ಕೂಡ ಅವರಾಗಿದ್ದರು. ಸೌಂದರ್ಯದ ಕಣಿಯೇ ಆಗಿದ್ದ ರೇಖಾಗೂ ಮತ್ತು ಅಮಿತಾಭ್ ಬಚ್ಚನ್ ನಡುವೆ ಪ್ರೇಮಾಂಕುರ ಆಗಿತ್ತು ಎನ್ನುವುದು ಗುಟ್ಟಿನ ಸಂಗತಿಯೇನಲ್ಲ. ಇಬ್ಬರ ಸಂಬಂಧ ಮುರಿದು ಬೀಳುತ್ತಿದ್ದಂತೆಯೇ ಉದ್ಯಮಿಯೊಬ್ಬರನ್ನು ರೇಖಾ ಮದುವೆಯಾದರು. ಆದರೆ, ಆ ಉದ್ಯಮಿ ಮದುವೆಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ.

    ರೇಖಾ ಅವರ ಜೀವನ ಚರಿತ್ರೆಯಲ್ಲಿ ಹೇಳಿದಂತೆ, ರೇಖಾ ಅವರ ಬೆಡ್ ರೂಮ್ ಒಳಗೆ ಅಷ್ಟು ಸಲೀಸಾಗಿ ಯಾರೂ ಹೋಗುವಂತೆ ಇರಲಿಲ್ಲ. ಕೇವಲ ಸೆಕ್ರೆಟರಿ ಮಾತ್ರ ಅಲ್ಲಿಗೆ ಹೋಗುತ್ತಿದ್ದರು. ಅಲ್ಲದೇ, ರೇಖಾ ಅವರ ಫೋನ್ ಕರೆಗಳನ್ನೂ ಆಕೆಯೇ ಸ್ವೀಕರಿಸುತ್ತಿದ್ದರು. ಅಷ್ಟರ ಮಟ್ಟಿಗೆ ರೇಖಾ ಅವರನ್ನು ಸೆಕ್ರೆಟರಿ ಹಿಡಿತದಲ್ಲಿ ಇಟ್ಟುಕೊಂಡಿದ್ದರು ಎಂದು ಪುಸ್ತಕದಲ್ಲಿ ದಾಖಲಾಗಿದೆಯಂತೆ.

     

    ರೇಖಾ ಅವರ ಪುಸ್ತಕ ಇನ್ನೂ ಬಿಡುಗಡೆ ಆಗಿಲ್ಲ. ಆದರೆ, ಆಗಲೇ ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಈ ಪುಸ್ತಕವನ್ನು ಖರೀದಿಸಲು ರೇಖಾ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನೆಷ್ಟು ಸತ್ಯಗಳು ಆಚೆ ಬರಲಿವೆ ಎನ್ನುವುದನ್ನು ಕಾಯುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಗ್ಗೇಶ್ ಕುರಿತಾದ ಬಯೋಗ್ರಫಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟ

    ಜಗ್ಗೇಶ್ ಕುರಿತಾದ ಬಯೋಗ್ರಫಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟ

    ನಿನ್ನೆಯಷ್ಟೇ ತಮ್ಮ 60ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ ನಟ ಜಗ್ಗೇಶ್ (Jaggesh). ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಸದ್ಯದಲ್ಲೇ ತಮ್ಮ ಜೀವನಕಥನ  (Biography) ಪುಸ್ತಕ (Book) ರೂಪದಲ್ಲಿ ಬರಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಪತ್ರಿಕೆಯಲ್ಲಿ ಬಂದ ಹಳೆಯ ಲೇಖಕನವೊಂದನ್ನು ಹಂಚಿಕೊಂಡಿರುವ ಅವರು, ಸಹೋದರಿ ತುಂಗರೇಣುಕಾ (Tungarenuka) ಅವರು ನನ್ನ ಕುರಿತಾಗಿ ಪುಸ್ತಕ ಬರೆಯುತ್ತಿದ್ದಾರೆ. ಶೀಘ್ರದಲ್ಲೇ ನಿಮ್ಮ ಮುಂದೆ ಎಂದು ಬರೆದುಕೊಂಡಿದ್ದಾರೆ.

    ಹಿರಿಯ ಪತ್ರಕರ್ತೆ ತುಂಗರೇಣುಕಾ ಅವರು ಜಗ್ಗೇಶ್ ಕುರಿತಾಗಿ ಪುಸ್ತಕವೊಂದನ್ನು ಬರೆಯುತ್ತಿದ್ದು, ಈ ವಿಷಯವನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ. ತಮ್ಮ ಬದುಕಿನ ನಾನಾ ಘಟನೆಗಳನ್ನು ಈ ಪುಸ್ತಕದಲ್ಲಿ ತುಂಗರೇಣುಕಾ ಹಿಡಿದಿಟ್ಟಿರುವ ಕುರಿತಾಗಿಯೂ ಅವರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಈ ಪುಸ್ತಕ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುರಿತು ಅವರು ವಿವರಣೆ ನೀಡಿಲ್ಲ. ಆದರೆ, ಜೀವನಕಥನ ಪುಸ್ತಕವಾಗಿ ಬರುತ್ತಿರುವುದನ್ನು ಹುಟ್ಟು ಹಬ್ಬದಂದು ರಿವೀಲ್ ಮಾಡಿದ್ದಾರೆ.

    ನಿನ್ನೆಯಷ್ಟೇ ಜಗ್ಗೇಶ್ ನಟಿಸಿದ ಸಿನಿಮಾ ತಂಡದವರು ಸರ್  ಪ್ರೈಸ್ ರೀತಿಯಲ್ಲಿ ಉಡುಗೊರೆಯನ್ನು ನೀಡಿದ್ದಾರೆ. ಗುರು ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದ ‘ರಂಗನಾಯಕ’ ಚಿತ್ರ ತಂಡ ಮತ್ತು ಸಂತೋಷ್ ಆನಂದ್ ರಾಮ್ ನಿರ್ದೇಶನದ ರಾಘವೇಂದ್ರ ಸ್ಟೋರ್ಸ್ ಚಿತ್ರತಂಡ ಇಂದು ವಿಭಿನ್ನ ರೀತಿಯಲ್ಲಿ ಜಗ್ಗೇಶ್ ಹುಟ್ಟು ಹಬ್ಬ ಆಚರಿಸಿವೆ. ಇದನ್ನೂ ಓದಿ: ಪವನ್ ಕಲ್ಯಾಣ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಆರ್.ಚಂದ್ರು

    ಗುರು ಪ್ರಸಾದ್ ನಿರ್ದೇಶನದಲ್ಲಿ ತಯಾರಾದ ‘ರಂಗನಾಯಕ’ ಚಿತ್ರದ ಹೊಸ ಪೋಸ್ಟರ್ ಅನ್ನು ಜಗ್ಗೇಶ್ ಹುಟ್ಟು ಹಬ್ಬಕ್ಕಾಗಿಯೇ ರಿಲೀಸ್ ಮಾಡಿದ್ದು, ಸಂತೋಷ್ ಆನಂದ್ ರಾಮ್ ನಿರ್ದೇಶನದ, ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾದ ರಿಲೀಸ್ ಡೇಟ್ ಘೋಷಣೆಯಾಗಿದೆ. ಏಪ್ರಿಲ್ 28 ರಂದು ರಾಜ್ಯಾದ್ಯಂತ ಈ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

    ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು ಜಗ್ಗೇಶ್. ಕುಟುಂಬ ಸಮೇತ ಪ್ರಧಾನಿಯನ್ನು ಭೇಟಿ ಮಾಡಿ, ಅವರ ಆರ್ಶಿವಾದ ಪಡೆದಿದ್ದರು. ತಾವು ಆರಾಧಿಸುವ ರಾಯರ ಮೂರ್ತಿಯನ್ನು ಮೋದಿಗೆ ಉಡುಗೊರೆಯಾಗಿ ನೀಡಿ ಬಂದಿದ್ದರು. ಆ ಕ್ಷಣವನ್ನು ಅವರು ಸೋಷಿಯಲ್ ಮೀಡಿಯಾದಲ್ಲೂ ಬರೆದುಕೊಂಡಿದ್ದರು.

    ಈ ಬಾರಿಯ ಹುಟ್ಟು ಹಬ್ಬದ ಮತ್ತೊಂದು ವಿಶೇಷ ಎಂದರೆ ಜಗ್ಗೇಶ್ ಇದೀಗ 60ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅರವತ್ತನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರು ವಿಶೇಷ ಪೂಜೆ ಮತ್ತು ರಾಯರ ದರ್ಶನಕ್ಕೂ ಹೋಗಿ ಬಂದಿದ್ದಾರೆ. ಜಗ್ಗೇಶ್ ಅವರಿಗೆ ಇಡೀ ಚಿತ್ರತಂಡ ಶುಭಾಶಯ ತಿಳಿಸಿದೆ.

  • ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪುನೀತ್ ರಾಜಕುಮಾರ್

    ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪುನೀತ್ ರಾಜಕುಮಾರ್

    ವಾರದ ಹಿಂದೆಯಷ್ಟೇ ಪುನೀತ್ ರಾಜಕುಮಾರ್ (Puneeth Rajkumar) ಬಯೋಗ್ರಫಿ ‘ನೀನೇ ರಾಜಕುಮಾರ’ ನಾಲ್ಕನೇ ಆವೃತ್ತಿಯನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಅಭಿಮಾನಿಗಳು ಕೂಡ ಸಂಭ್ರಮಿಸಿದ್ದರು. ಈ ಸಂಭ್ರಮದ ಬೆನ್ನಲ್ಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದ್ದು, ಬೆಂಗಳೂರು ವಿಶ್ವವಿದ್ಯಾಲಯವ (Bangalore University) ಪುನೀತ್ ಅವರ ಬದುಕನ್ನು ಹಿಡಿದಿಟ್ಟ ಕೃತಿ ‘ನೀನೇ ರಾಜಕುಮಾರ’ ಪುಸ್ತಕದ ಒಂದು ಅಧ್ಯಾಯವನ್ನು ಪಠ್ಯವಾಗಿಸಿದೆ.

    ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ ನಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಪತ್ರಕರ್ತ ಡಾ.ಶರಣು ಹುಲ್ಲೂರು (Sharanu Hullur) ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ್’ (Neene Rajkumar) ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದ’ ಭಾಗವನ್ನು ಪಠ್ಯದಲ್ಲಿ ಬಳಸಿಕೊಂಡಿದೆ ಬೆಂಗಳೂರು ವಿಶ್ವವಿದ್ಯಾಲಯ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ (Textbook) ಪ್ರಧಾನ ಸಂಪಾದಕರಾಗಿದ್ದು, ಡಾ.ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ.ರಘುನಂದನ್ ಬಿ.ಆರ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.

    ಮೊನ್ನೆಯಷ್ಟೇ ‘ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈನ್ ನಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೂ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಲೇಖಕ, ಪತ್ರಕರ್ತ ಶರಣು ಹುಲ್ಲೂರು ಬರೆದ ಪುನೀತ್ ರಾಜ ಕುಮಾರ ಕುರಿತಾದ ಬಯೋಗ್ರಫಿ ‘ನೀನೇ ರಾಜಕುಮಾರ್’ ಪುಸ್ತಕದ 4ನೇ ಆವೃತ್ತಿ ಬಿಡುಗಡೆ ಇಂದು ಬೆಂಗಳೂರಿನಲ್ಲಿ ನಡೆಯಿತು. ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಈ ಕೃತಿಯನ್ನು ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಪುಸ್ತಕದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಅವರು, ಪುಸ್ತಕದೊಳಗಿನ ಹಲವಾರು ವಿಷಯಗಳಿಗೆ ಕಿವಿಯಾದರು. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಅವರು ಕೂಡ ಹಾಜರಿದ್ದರು.

    15 ಮಾರ್ಚ್ 2022ರಂದು ಮೊದಲ ಬಾರಿಗೆ ಈ ಪುಸ್ತಕವನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು. ಆನಂತರ ಈ ಪುಸ್ತಕವು ಅಮೆಜಾನ್, ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಪಟ್ಟಿಯಲ್ಲಿ ದಾಖಲಾಗಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು ಇನ್ನೂ ದಾಖಲೆ ರೀತಿಯಲ್ಲೇ ಮಾರಾಟವಾಗುತ್ತಿದೆ. ಅಲ್ಲದೇ, ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.

    ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಯಲ್ಲಿ ಹೆಚ್ಚು ಮಾರಾಟಕಂಡ ಪುಸ್ತಕ ಎನ್ನುವ ಹೆಗ್ಗಳಿಕೆ ‘ನೀನೇ ರಾಜಕುಮಾರ’ ಪುಸ್ತಕದ್ದು. ಪುನೀತ್ ಅವರ ಬಾಲ್ಯದಿಂದ ಅವರ ನಿಧನದವರೆಗೂ ಅವರ ಬದುಕನ್ನು ಲೇಖಕರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಪುನೀತ್ ಅವರ ಸಿನಿಮಾ, ಅವರ ಸಮಾಜಸೇವೆ, ಅವರ ಜೀವನದಲ್ಲಿ ನಡೆದ ಘಟನೆಗಳು ಮತ್ತು ಪುನೀತ್ ಅವರ ಜೀವನದ ಜೊತೆಗೆ ಕನ್ನಡ ಸಿನಿಮಾ ರಂಗದ ಸಂಕ್ಷಿಪ್ತ ಚರಿತ್ರೆ ಕೂಡ ಈ ಪುಸ್ತಕದಲ್ಲಿದೆ. ಅಲ್ಲದೇ, ಅಪರೂಪದ ಫೋಟೋಗಳನ್ನು ನೋಡಬಹುದಾಗಿದೆ.

    ಪುನೀತ್ ಅವರ ಸಾಕಷ್ಟು ಸಂದರ್ಶನಗಳನ್ನು ಮಾಡಿದ್ದ ಪತ್ರಕರ್ತ ಶರಣು ಹುಲ್ಲೂರು, ಪುನೀತ್ ಅವರ ಕುರಿತಾಗಿ ಅನೇಕ ಅಪರೂಪದ ಸಂಗತಿಗಳನ್ನು ಈ ಪುಸ್ತಕದಲ್ಲಿ ಬರೆಯುತ್ತಾ ಹೋಗಿದ್ದಾರೆ. ಖ್ಯಾತ ಪತ್ರಕರ್ತರಾದ ಮುರಳಿಧರ ಖಜಾನೆ ಅವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರೆ, ಜೋಗಿ ಅವರು ಹಿನ್ನುಡಿ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಾರುಖ್ ಖಾನ್ ಜೊತೆ ತಮಗೆ ಸಂಬಂಧವಿದೆ ಎಂದಾಗ ತುಂಬಾ ನೋವು ಮಾಡಿಕೊಂಡಿದ್ದರಂತೆ ಕರಣ್ ಜೋಹಾರ್

    ಶಾರುಖ್ ಖಾನ್ ಜೊತೆ ತಮಗೆ ಸಂಬಂಧವಿದೆ ಎಂದಾಗ ತುಂಬಾ ನೋವು ಮಾಡಿಕೊಂಡಿದ್ದರಂತೆ ಕರಣ್ ಜೋಹಾರ್

    ಬಾಲಿವುಡ್ ನಟ ಶಾರುಖ್ ಖಾನ್ ವೃತ್ತಿ ಬದುಕಿನಲ್ಲಿ ನಿರ್ದೇಶಕ ಕಂ ನಿರ್ಮಾಪಕ ಕರಣ್ ಜೋಹಾರ್ ಪಾಲು ದೊಡ್ಡದಿದೆ. ಶಾರುಖ್ ಖಾನ್ ನಟನೆಯ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಇದೇ ಕರಣ್. ಹಾಗಾಗಿ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯವಿತ್ತು. ಹಾಗಾಗಿ ಎಲ್ಲ ಕಡೆಯೂ ಇಬ್ಬರೂ ಓಡಾಡುತ್ತಿದ್ದರು. ಒಟ್ಟೊಟ್ಟಿಗೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಇಂತಹ ವೇಳೆಯಲ್ಲಿ ಬಾಲಿವುಡ್ ಆಡಿದ ಆ ಮಾತು ಕರಣ್ ಅವರಿಗೆ ತುಂಬಾ ನೋವನ್ನುಂಟು ಮಾಡಿತ್ತಂತೆ.

    ಬಾಲಿವುಡ್ ನಲ್ಲಿ ಡೇಟಿಂಗ್ ಮಾಡುವುದು ಕಾಮನ್ ಎನ್ನುವಂತಾಗಿದೆ. ಆದರೆ, ಹುಡುಗ ಹುಡುಗರ ಜೊತೆಯೇ ಡೇಟಿಂಗ್ ಸ್ವಲ್ಪ ಅರಗಿಸಿಕೊಳ್ಳುವುದು ಮತ್ತು ಒಪ್ಪಿಕೊಳ್ಳುವುದು ಕಷ್ಟ. ಇಂತಹ ವೇಳೆಯಲ್ಲಿ ಶಾರುಖ್ ಖಾನ್ ಜೊತೆ ಕರಣ್ ಜೋಹಾರ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗಿತ್ತಂತೆ. ಶಾರುಖ್ ಖಾನ್ ಜೊತೆಗೆ ಈ ರೀತಿ ಹೋಲಿಸಿ ಮಾತನಾಡುತ್ತಿರುವುದು ತಮಗೆ ತುಂಬಾ ನೋವು ಮತ್ತು ದುಃಖ ತಂದಿತ್ತು ಎಂದು ಕರಣ್ ಜೋಹಾರ್ ತಮ್ಮ ಆತ್ಮಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ:ನಿರೂಪಕಿ ಅನುಶ್ರೀಗೆ ಗಿಫ್ಟ್ ನೀಡಿದ ಶಿವರಾಜ್‌ಕುಮಾರ್

    ಕರಣ್ ಜೋಹಾರ್ ‘ಅನ್ ಸೂಟಬಲ್ ಬಾಯ್’ ಹೆಸರಿನಲ್ಲಿ ಆತ್ಮಚರಿತ್ರೆ ಬರೆದುಕೊಂಡಿದ್ದು, ಈ ಪುಸ್ತಕದಲ್ಲಿ ಅನೇಕ ಸಂಗತಿಗಳನ್ನು ಬರೆದಿದ್ದಾರೆ. ಅಲ್ಲದೇ, ಶಾರುಖ್ ಖಾನ್ ನನ್ನ ತಂದೆ ಸಮಾನರು ಎಂದು ಅವರು ಗೌರವ ಸೂಚಿಸಿದ್ದಾರೆ. ಸಲ್ಲದ ಮಾತುಗಳಿಂದ ಅವರು ಎಷ್ಟೊಂದು ಸಂಕಟಗಳನ್ನು ಅನುಭವಿಸಿದರು ಎನ್ನುವುದನ್ನೂ ಅವರು ಬರೆದಿದ್ದಾರೆ. ಅಲ್ಲಿಗೆ ಶಾರುಖ್ ಖಾನ್ ಜೊತೆಗಿನ ಗಾಸಿಪ್ ಗೆ ತೆರೆ ಎಳೆದಿದ್ದಾರೆ.

    Live Tv