Tag: ಬಯೋಮೆಟ್ರಿಕ್ ಹಾಜರಾತಿ

  • ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಚಾಟೀ ಬೀಸಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು (Government Employees) ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.

    ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು (Public Work) ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.

    ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ (Biometric) ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.

    ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಾಕೀತು ಮಾಡಿದೆ. ಹಿರಿಯ ಅಧಿಕಾರಿಗಳು ನೌಕರರ ಹಾಜರಾತಿ ಮತ್ತು ಸಮಯಪ್ರಜ್ಞೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸುತ್ತೊಲೆಯಲ್ಲಿ ಹೇಳಲಾಗಿದೆ.

    GOVT EMPLOYEES
    ಸಾಂದರ್ಭಿಕ ಚಿತ್ರ

    2014 ರಲ್ಲಿ ನರೇಂದ್ರ ಮೋದಿ ಮೊದಲ ಬಾರಿ ಪ್ರಧಾನಿಯಾದ ಬಳಿಕ ಕಚೇರಿ ಸಮಯವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಪ್ರಯತ್ನಿಸಿತು‌. ಇದನ್ನು ನೌಕರರು ವಿರೋಧಿಸಿದ್ದರು. ಅವರಲ್ಲಿ ಹಲವರು ದೂರದ ಪ್ರಯಾಣ ಮಾಡುತ್ತಾರೆ ಎಂದು ವಾದಿಸಿದ್ದರು. ಬಳಿಕ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ, ಹಾಜರಾತಿ ಖಚಿತಪಡಿಸಿಕೊಳ್ಳಲು, ಮೇಲ್ವಿಚಾರಣೆ ಮಾಡಲಾಯಿತು ಸೂಚಿಸಿತ್ತು. ಕೋವಿಡ್ ಬಳಿಕ ಈ ವ್ಯವಸ್ಥೆ ಮತ್ತೆ ಹಾದಿ ತಪ್ಪಿದೆ ಎನ್ನಲಾಗಿದೆ‌.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್-ವರದಿ ಸತ್ಯ ಎಂದ ಪಾಲಿಕೆ ವಿಶೇಷ ಆಯುಕ್ತ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್-ವರದಿ ಸತ್ಯ ಎಂದ ಪಾಲಿಕೆ ವಿಶೇಷ ಆಯುಕ್ತ

    -10 ಗಂಟೆಗೆ ಯಾರು ಕಚೇರಿಗೆ ಬರಲ್ಲ

    ಬೆಂಗಳೂರು: ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಬಿಬಿಎಂಪಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರಲ್ಲ. ಬಯೋಮೆಟ್ರಿಕ್ ಯಂತ್ರದಲ್ಲಿ 15 ನಿಮಿಷಕ್ಕೂ ಹೆಚ್ಚು ಸಮಯವನ್ನು ತಡವಾಗಿ ಇಟ್ಟಿದ್ದಾರೆ ಎಂದು ಪಾಲಿಕೆ ವಿಶೇಷ ಆಯುಕ್ತ ರಣ್‍ದೀಪ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪಾಲಿಕೆಯ ವಿಶೇಷ ಆಯುಕ್ತರು, ಸಿಬ್ಬಂದಿ ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎಂಬ ವಿಷಯ ನನ್ನ ಗಮನಕ್ಕೂ ಬಂದಿದೆ. ಬೆಳಗ್ಗೆ 10.15ಕ್ಕೆ ನಾನು ಕಚೇರಿಗೆ ಬಂದಾಗ ಅರ್ಧಕ್ಕೂ ಹೆಚ್ಚು ಸಿಬ್ಬಂದಿ ಬಂದಿರಲ್ಲ. ಹೀಗಾಗಿಯೇ ಫೇಸ್ ರಿಕ್ಗನೈಜೇಷನ್ ಮತ್ತು ಬಯೋಮೆಟ್ರಿಕ್ ಹಾಜರಾತಿಯನ್ನು ತರಲಾಗಿತ್ತು. ಕಚೇರಿಯ ಅರ್ಧಕ್ಕೂ ಹೆಚ್ಚು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿಲ್ಲ ಎಂದರು.

    ಪಬ್ಲಿಕ್ ಟಿವಿ ಹೇಳಿದಂತೆ ಬಯೋಮೆಟ್ರಿಕ್ ಯಂತ್ರದಲ್ಲಿ ಸಮಯ ವ್ಯತ್ಯಾಸ ಕಂಡು ಬಂದಿದೆ. ಈ ಕೂಡಲೇ ಸಮಯ ಸರಿಯಾಗಿ ನಿಗದಿ ಮಾಡುವಂತೆ ಆದೇಶಿಸಿದ್ದೇನೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದುಕೊಳ್ಳಲಾಗುತ್ತದೆ. ದುರುದ್ದೇಶದಿಂದ ಮಷೀನ್ ನಲ್ಲಿ ಟೈಮ್ ಬದಲಿಸಿದ್ದರೆ ಸೂಕ್ತ  ಕ್ರಮ ತೆಗೆದುಕೊಳ್ಳಲಾಗುತ್ತದೆ. ಬಯೋಮೆಟ್ರಿಕ್ ಹಾಜರಾತಿ ಜೊತೆ ಸಿಬ್ಬಂದಿಯ ಸಂಬಳದ ಸ್ಲಿಪ್ ಲಿಂಕ್ ಮಾಡಲಾಗುತ್ತದೆ. 10.30ರೊಳಗೆ ಪಂಚ್ ಮಾಡಬೇಕು ಮತ್ತು 5.30ರೊಳಗೆ ಪಂಚ್ ಮಾಡಿ ಹೋದ್ರೆ ಅಂತಹವರ ಅರ್ಧ ಸಂಬಳ ಕಡಿತಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

  • ಆಫೀಸ್ ವ್ಯವಸ್ಥೆ ಸುಧಾರಣೆಗೆ ಯೋಗಿಯಿಂದ ಮತ್ತೊಂದು ಖಡಕ್ ಆದೇಶ

    ಆಫೀಸ್ ವ್ಯವಸ್ಥೆ ಸುಧಾರಣೆಗೆ ಯೋಗಿಯಿಂದ ಮತ್ತೊಂದು ಖಡಕ್ ಆದೇಶ

    ಲಕ್ನೋ: ಸಾಮಾನ್ಯ ಕೈದಿಗಳಿಗೆ ನೀಡುವ ಆಹಾರವನ್ನೇ ಡಾನ್‍ಗಳಿಗೆ ನೀಡಬೇಕೆಂದು ಸೂಚಿಸಿದ್ದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಈಗ ಸರ್ಕಾರ ಎಲ್ಲ ಕಚೇರಿಗಳಲ್ಲಿ ಬಯೋಮಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವಂತೆ ಆದೇಶಿಸಿದ್ದಾರೆ.

    ಶನಿವಾರ ರಾತ್ರಿ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಯೋಗಿ, ಆಫೀಸ್‍ನಿಂದ ಆರಂಭವಾಗಿ ಬ್ಲಾಕ್ ಹಂತದ ಆಫೀಸ್ ವರೆಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಹೊರತಾಗಿ ಎಲ್ಲ ಗ್ರಾಮ ಪಂಚಾಯತ್‍ಗಳಲ್ಲಿ ಪ್ರಸ್ತುತ ಆಯ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸದ ಮಾಹಿತಿ ಮತ್ತು ಗ್ರಾಮದ ಪಂಚಾಯತ್‍ನ ಪ್ರಧಾನ್ ಸಂಪರ್ಕ ವಿಳಾಸವನ್ನು ಬೋರ್ಡ್ ಮೂಲಕ ಪ್ರಕಟಿಸಬೇಕೆಂದು ಸೂಚಿಸಿದ್ದಾರೆ.

    ಅಷ್ಟೇ ಅಲ್ಲದೇ ಪ್ರಧಾನ ಮಂತ್ರಿ ಅವಾಸ್ ಯೋಜನದ ಗುರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಮಹತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕೆಲಸಗಾರರ ಹೆಸರುಗಳು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ ಸೇರ್ಪಡೆಯಾಗಬೇಕು ಎಂದು ಯೋಗಿ ಹೇಳಿದ್ದಾರೆ.

    ಇದನ್ನೂ ಓದಿ: ಸಾಮಾನ್ಯ ಕೈದಿಗಳಿಗೆ ನೀಡೋ ಆಹಾರವನ್ನೇ ಡಾನ್‍ಗಳಿಗೂ ನೀಡಿ: ಯೋಗಿ ಆದಿತ್ಯನಾಥ್