Tag: ಬರಾಕ್ ಒಬಾಮಾ

  • ನಾನು ಮನಮೋಹನ್ ಸಿಂಗ್‌ ದೊಡ್ಡ ಅಭಿಮಾನಿ ಎಂದಿದ್ದ ಒಬಾಮಾ!

    ನಾನು ಮನಮೋಹನ್ ಸಿಂಗ್‌ ದೊಡ್ಡ ಅಭಿಮಾನಿ ಎಂದಿದ್ದ ಒಬಾಮಾ!

    ಮಾಜಿ ಪಿಎಂ ಮನಮೋಹನ ಸಿಂಗ್ (Manmohan Singh) ಹಾಗೂ ಅಮೆರಿಕದ (America) ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (Barack Obama )ಅವರ ಸ್ನೇಹ ಬಹಳ ವಿಶೇಷವಾಗಿತ್ತು. ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಒಬಾಮಾ ಅಮೆರಿಕದ ಅಧ್ಯಕ್ಷರಾಗಿದ್ದರು. ಆ ವೇಳೆ, ಅಂದರೆ 2008ರಲ್ಲಿ, ಅಮೆರಿಕದಲ್ಲಿ ಮಹಾನ್ ಆರ್ಥಿಕ ಕುಸಿತ ಸಂಭವಿಸಿತ್ತು. ಅದರ ಪರಿಣಾಮ ಭಾರತದ ಮೇಲೂ ಆಗಿತ್ತು. ಆದರೆ ಭಾರತಕ್ಕೆ ಹೆಚ್ಚು ನಷ್ಟವಾಗದಂತೆ ಮನಮೋಹನ್ ಸಿಂಗ್ ತೆಗೆದುಕೊಂಡ ಕ್ರಮ ಒಬಾಮಾ ಅವರನ್ನು ಆಶ್ಚರ್ಯಚಕಿತರನ್ನಾಗಿಸಿತ್ತು.

    ಒಬಾಮಾ ಜೊತೆಗೆ ಐತಿಹಾಸಿಕ ಭಾರತ-ಅಮೆರಿಕ ಅಣು ಒಪ್ಪಂದ ಮಾಡಿಕೊಳ್ಳುವಲ್ಲಿ ಮನಮೋಹನ ಸಿಂಗ್ ಯಶಸ್ವಿಯಾಗಿದ್ದರು. ಈ ಮೂಲಕ ಇಬ್ಬರಲ್ಲೂ ವೈಯಕ್ತಿಕ ಬಾಂಧವ್ಯ ಬೆಳೆದಿತ್ತು. ಈ ಒಪ್ಪಂದವು 2008 ರಲ್ಲಿ ಜಾರಿಗೆ ಬಂತು. ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಕೆಲವರ ಆರಂಭಿಕ ಅಸಮ್ಮತಿಯ ನಡುವೆ ಮನಮೋಹನ್ ಸಿಂಗ್ ಇದನ್ನು ಸಮರ್ಥವಾಗಿ ನಿಭಾಯಿಸಿದ್ದರು. ಈ ಒಪ್ಪಂದವು 1998 ರ ಪೋಖ್ರಾನ್ 2 ಪರಮಾಣು ಪರೀಕ್ಷೆಗಳ ನಂತರ IAEA (The International Atomic Energy Agency) ಯ ಭಾಗಶಃ ನಿರ್ಬಂಧಗಳೊಂದಿಗೆ ಭಾರತದ ಮೇಲೆ ವಿಧಿಸಲಾದ ನಿರ್ಬಂಧಗಳ ಯುಗವನ್ನು ಕೊನೆಗೊಳಿಸಿತು.

    ಸಿಂಗ್‌ ಅವರನ್ನು ಜಗತ್ತಿನ ಶ್ರೇಷ್ಠ ಆರ್ಥಿಕ ತಜ್ಞರಲ್ಲಿ ಒಬ್ಬರು ಎಂದು ಒಬಾಮಾ ಅವರು ಸಿಂಗ್‌ರನ್ನು ಗೌರವಿಸುತ್ತಿದ್ದರು. ಒಂದು ಸಮಾರಂಭದಲ್ಲಿ ಮಾತನಾಡುವಾಗ ಒಬಾಮಾ, ‘ನಾನು ಸಿಂಗ್ ಅವರ ದೊಡ್ಡ ಅಭಿಮಾನಿ. ಅವರು ಭಾರತದ ಆರ್ಥಿಕತೆಗೆ ಅಡಿಪಾಯ ಹಾಕಿದವರು’ ಎಂದು ಹಾಡಿ ಹೊಗಳಿದ್ದರು.

  • ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ!

    ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ!

    ಬೆಳಗಾವಿ: ಸಿಎಂ ಸಿದ್ದರಾಮಯ್ಯನವರು (CM Siddaramaiah) ಈಗಾಗಲೇ ಬರಾಕ್ ಒಬಾಮಾ (Barack Obama) ಅವರನ್ನು ಆಹ್ವಾನಿಸಿ ಪತ್ರವನ್ನು ಬರೆದಿರುತ್ತಾರೆ. ಡಿಸೆಂಬರ್ 26-27 ಅಥವಾ ಜನವರಿ 2025 ರಿಂದ ಅಕ್ಟೋಬರ್-2025ರೊಳಗಾಗಿ ದಿನಾಂಕ‌ ನೀಡಲು ಕೋರಲಾಗಿದೆ. ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ (HK Patel) ತಿಳಿಸಿದರು.

    ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು. ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ. ಅಂತಾರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ. ಗಾಂಧೀಜಿಯ (Mahatma Gandhi) ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ಧೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯ ಎಂದರು. ಇದನ್ನೂ ಓದಿ: ದೀಪಾವಳಿಯಂದು ಕೆಎಸ್‌ಆರ್‌ಟಿಸಿಗೆ ಬಂಪರ್ – ಒಂದೇ ದಿನ ಬರೋಬ್ಬರಿ 5.59 ಕೋಟಿ ಆದಾಯ

    ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಕಾಂಗ್ರೆಸ್ (Congress) ಅಧಿವೇಶನದ ಶತಮಾನ ಆಚರಣೆ ಮೂಲಕ ಗಾಂಧೀಜಿಯವರ ತತ್ವ ಸಿದ್ಧಾಂತಗಳನ್ನು ಇನ್ನಷ್ಟು ಪ್ರಚುಪಡಿಸಲು ಹಾಗೂ ಮನೆ ಮನೆಗೆ ಗಾಂಧೀಜಿ ಸಿದ್ಧಾಂತಗಳನ್ನು ತಲುಪಿಸುವ ಉದ್ದೇಶ ಹೊಂದಲಾಗಿದೆ. ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧಿವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು. ಇನ್ನು ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ 25 ಕೋಟಿ ರೂ. ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

    ಬೆಳಗಾವಿಯ ವೀರಸೌಧ, ಹುದಲಿ ಸೇರಿ ಮತ್ತಿತರ ಸ್ಥಳಗಳಿಗೆ ಎಚ್.ಕೆ.ಪಾಟೀಲ್‌ ಸೇರಿ ಮತ್ತಿತರರು ಭೇಟಿ ನೀಡಲಿದ್ದಾರೆ. ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಮಿತಿಯ ರಾಜ್ಯ ಸಂಚಾಲಕ ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ, ಸದಸ್ಯ ಎನ್.ಆರ್.ವಿಶುಕುಮಾರ್, ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಸೇರಿ ಮತ್ತಿತರರು ಈ ವೇಳೆ ಇದ್ದರು.

     

  • ಮಂಡ್ಯಗೆ ಬರಾಕ್‌ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್‌, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ

    ಮಂಡ್ಯಗೆ ಬರಾಕ್‌ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್‌, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ

    ಬೆಂಗಳೂರು: ಬರಾಕ್‌ ಒಬಾಮಾ (Barack Obama) ದಂಪತಿ ಭೇಟಿ ನೀಡಲಿರುವ ಮಂಡ್ಯದ (Mandya) ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್‌ ಹಾಗೂ ಇತರೆ ಮೂಲಸೌಕರ್ಯ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಲಾಗಿದೆ.

    ಮಂಡ್ಯದ ಹಲ್ಲೆಗೆರೆಯ ಭೂತಾಯಿ ಟ್ರಸ್ಟ್‌ನ ಅಧ್ಯಕ್ಷ, ಅಮೆರಿಕದ ವೈದ್ಯ ಡಾ. ಲಕ್ಷ್ಮಿನರಸಿಂಹ ಮೂರ್ತಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ ನೇತೃತ್ವದ ನಿಯೋಗವು ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಇದನ್ನೂ ಓದಿ: ಪರಿಷತ್ ನೂತನ ಸದಸ್ಯರಾಗಿ ಮೂವರು ನಾಯಕರಿಂದ ಪ್ರಮಾಣ ವಚನ ಸ್ವೀಕಾರ

    ಟ್ರಸ್ಟ್‌ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ, ಟಿಬೆಟಿಯನ್ ಧರ್ಮಗುರು ದಲೈಲಾಮಾ (Dalai Lama) ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ, ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು ಮನವಿ ಮಾಡಿದೆ.

    ಈ ಕೇಂದ್ರವು ಹಲ್ಲೆಗೆರೆ, ಮಂಡ್ಯ ಜಿಲ್ಲೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ನಿಯೋಗದ ಸದಸ್ಯರು ಕೇಂದ್ರದ ಕಾರ್ಯ ಸ್ವರೂಪವನ್ನು ವಿವರಿಸಿದರು. ಮಾತ್ರವಲ್ಲ ಟ್ರಸ್ಟ್ ಮಾಡುತ್ತಿರುವ ಸಾಮಾಜಿಕ ಕಾರ್ಯವನ್ನು ವಿವರಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, “ನೀವು ಮಾಡುವ ಒಳ್ಳೆಯ ಕಾರ್ಯಗಳಿಗೆ ನಿಮ್ಮ ಜೊತೆ ನಾವಿದ್ದೇವೆ. ಬೇಕಾದ ಎಲ್ಲ ಬೆಂಬಲ ನೀಡಲಿದ್ದೇವೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ” ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳಿ ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಸಿಎಂ

    ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ, ಅಮೆರಿಕದ ಅಕ್ಕ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಮೂರ್ತಿ ಕಿಲಾರ ಮುಂತಾದವರು ನಿಯೋಗದಲ್ಲಿದ್ದು, ಸಿಎಂಗೆ ವಿವರಣೆ ನೀಡಿದರು.

    ಅಮೆರಿಕ ಹಾಲಿ ಅಧ್ಯಕ್ಷರಾದ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ. ವಿವೇಕ್ ಮೂರ್ತಿ ಭಾರತೀಯ ಮೂಲದವರು. ಡಾ.ವಿವೇಕ ಮೂರ್ತಿ ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು. ಡಾ.ವಿವೇಕ್ ಮೂರ್ತಿ ಅವರ ತಂದೆ, ಅನಿವಾಸಿ ಭಾರತೀಯ ಡಾ. ಲಕ್ಷ್ಮಿನರಸಿಂಹ ಮೂರ್ತಿ (ಎಲ್.ಎನ್.ಮೂರ್ತಿ) ಅವರು ತಮ್ಮ ಮಾತೃಭೂಮಿಯ ಅಭ್ಯುದಯಕ್ಕೆ ಪಣ ತೊಟ್ಟಿದ್ದಾರೆ.‌ ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೆಗೆರೆಯಾಗಿದ್ದು, ಇಲ್ಲಿ 13 ಎಕರೆ ಪಿತ್ರಾರ್ಜಿತ ಜಮೀನಿದೆ. ಅದರಲ್ಲಿ ಭೂತಾಯಿ ಟ್ರಸ್ಟ್‌ನಿಂದ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ‌ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಯೋಜಿಸಿ, ಕಾರ್ಯಪ್ರವೃತ್ತರಾಗಿದ್ದಾರೆ. ಭೂತಾಯಿ ಟ್ರಸ್ಟ್‌ನಿಂದ ಮೂರ್ತಿ ಕುಟುಂಬವು ಮಹತ್ತರ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿಗೆ ಬಿಎಲ್ ಸಂತೋಷ್ ಟಾನಿಕ್ – ವಲಸಿಗರ ಪರ ಬ್ಯಾಟಿಂಗ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮೋದಿಯನ್ನ ಕೇಳಬೇಕಿತ್ತು – ಬರಾಕ್ ಒಬಾಮಾ

    ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮೋದಿಯನ್ನ ಕೇಳಬೇಕಿತ್ತು – ಬರಾಕ್ ಒಬಾಮಾ

    ವಾಷಿಂಗ್ಟನ್: ಜೋ ಬೈಡನ್ ಅವರು ಭಾರತದಲ್ಲಿ ಅಲ್ಪಸಂಖ್ಯಾತರ (Muslim Minorities) ರಕ್ಷಣೆ ಬಗ್ಗೆ ಮೋದಿ ಅವರನ್ನ ಕೇಳಬೇಕಿತ್ತು ಎಂದು ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (Barack Obama) ಹೇಳಿದ್ದಾರೆ.

    ಯುಎಸ್ ಅಧ್ಯಕ್ಷ ಜೋ ಬೈಡನ್ (Joe Biden) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜಂಟಿ ಸುದ್ದಿಗೋಷ್ಠಿಗೆ ಕೆಲವೇ ಗಂಟೆಗಳಿಗೂ ಮುನ್ನ ಒಬಾಮಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ: ಮೋದಿಗಾಗಿ ಬೃಹತ್‌ ಔತಣ ಕೂಟ – ಮುಖೇಶ್‌ ಅಂಬಾನಿ, ಸುಂದರ್‌ ಪಿಚೈ ಸೇರಿ ಹಲವು VIP ಗಣ್ಯರು ಭಾಗಿ: ಇಲ್ಲಿದೆ ಫುಲ್‌ ಲಿಸ್ಟ್‌

    ಜೋ ಬೈಡನ್, ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ವಿಷಯವನ್ನ ಪ್ರಸ್ತಾಪಿಸಬೇಕಿತ್ತು ಎಂದಿದ್ದರಲ್ಲದೇ, ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ಏನಾಗುತ್ತದೆ? ಎಂಬುದನ್ನು ಕೇಳುವಂತೆ ಒಬಾಮ ಹೇಳಿದ್ದರು. ಇದನ್ನೂ ಓದಿ: ಮೊದಲ ಬಾರಿಗೆ ಪ್ರಧಾನಿಯಾಗಿ ಬಂದಾಗ ಭಾರತ 10ನೇ ಅತಿದೊಡ್ಡ ಆರ್ಥಿಕತೆಯಾಗಿತ್ತು, ಈಗ 5ನೇ ಸ್ಥಾನಕ್ಕೆ ಜಿಗಿದಿದೆ : ಅಮೆರಿಕದಲ್ಲಿ ಮೋದಿ

    ಮುಂದುವರಿದು, ಮೋದಿ ಅವರು ನನಗೆ ಚೆನ್ನಾಗಿ ಗೊತ್ತು. ಒಂದು ವೇಳೆ ನಾನು ಸಂವಾದ ನಡೆಸಿದ್ದರೆ ಕೇಳುತ್ತಿದೆ. ನೀವು ಭಾರತದಲ್ಲಿ ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳನ್ನ ರಕ್ಷಿಸದಿದ್ದರೆ, ಭಾರತವು ಒಂದು ಹಂತದಲ್ಲಿ ಬೇರ್ಪಡುವ ಬಲವಾದ ಸಾಧ್ಯತೆಯಿದೆ. ಅದು ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾಗಿರುತ್ತದೆ ಎಂಬುದನ್ನ ಹೇಳುತ್ತಿದೆ. ಏಕೆಂದರೆ ಬಹುಸಂಖ್ಯಾತ ಹಿಂದೂಗಳಿರುವ ರಾಷ್ಟ್ರ ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ರಕ್ಷಣೆಯು ಉಲ್ಲೇಖಿಸಬೇಕಾದ ಸಂಗತಿಯಾಗಿದೆ ಎಂದು ಅವರು ಹೇಳಿದ್ದರು. ಇದನ್ನೂ ಓದಿ: 2024ಕ್ಕೆ ನಾಸಾ-ಇಸ್ರೋ ಜಂಟಿ ಬಾಹ್ಯಾಕಾಶ ಯಾನ – ಭಾರತ-US ನಡುವೆ ಒಪ್ಪಂದ

    ಅಮೆರಿಕದಲ್ಲಿ ಮೋದಿ ಖಡಕ್ ನುಡಿ:
    ಅಮೆರಿಕದಲ್ಲಿ ಗುರುವಾರ ಭಾಷಣ ಮಾಡಿದ ಪ್ರಧಾನಿ ಮೋದಿ, ಪ್ರಜಾಪ್ರಭುತ್ವ ನಮ್ಮ ನರನಾಡಿಯಲ್ಲಿಯೇ ಇದೆ. ದೇಶದಲ್ಲಿ ಎಲ್ಲರನ್ನೂ ಸಮಾನವಾಗಿಯೇ ಕಾಣುತ್ತೇವೆ. ಜಾತಿ-ಧರ್ಮ ಆಧಾರದಲ್ಲಿ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ. 2 ಸೂಪರ್ ಪವರ್ ದೇಶಗಳ 2 ಮಹಾನ್ ಶಕ್ತಿಗಳ ಹಾಗೂ ಇಬ್ಬರು ಸ್ನೇಹಿತರ ಮಹಾ ಸಮ್ಮಿಲನ ಇದಾಗಲಿದೆ. ಗಡಿಯಾಚಿನ ಉಗ್ರವಾದ ನಿಗ್ರಹಕ್ಕೆ ಭಾರತ-ಅಮೆರಿಕ ಜಂಟಿಯಾಗಿ ಕೆಲಸ ಮಾಡಲಿದೆ. ಭಯೋತ್ಪಾದನೆ ವಿರುದ್ಧ ಒಟ್ಟಾಗಿ ಹೋರಾಡುತ್ತೇವೆ. ಎರಡೂ ದೇಶಗಳ ನಡುವೆ ಹೊಸ ಶಕೆ ಆರಂಭಗೊಂಡಿದೆ. ದೇಶಗಳ ನಡುವಿನ ಒಪ್ಪಂದ ದೇಶಕ್ಕಲ್ಲದೇ ಜಗತ್ತಿಗೆ ಅನುಕೂಲ ಆಗಲಿದೆ. ಆರ್ಥಿಕ, ಬಾಹ್ಯಾಕಾಶ, ಇಂಧನ ವಿಚಾರದಲ್ಲಿ ಒಪ್ಪಂದಗಳಾಗಿದ್ದು ಇದು ಇತರೆ ದೇಶಗಳಿಗೂ ಅನುಕೂಲ ಆಗಲಿದೆ ಎಂದು ಹೇಳಿದ್ದರು.

  • ಒಬಾಮಾ ಸೇರಿದಂತೆ 500 ಅಮೆರಿಕನ್ನರಿಗೆ ನಿರ್ಬಂಧ ಹೇರಿದ ರಷ್ಯಾ

    ಒಬಾಮಾ ಸೇರಿದಂತೆ 500 ಅಮೆರಿಕನ್ನರಿಗೆ ನಿರ್ಬಂಧ ಹೇರಿದ ರಷ್ಯಾ

    ಮಾಸ್ಕೋ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (US President Barack Obama) ಸೇರಿದಂತೆ 500 ಅಮೆರಿಕನ್ನರಿಗೆ ಪ್ರವೇಶವನ್ನು ನಿರ್ಬಂಧಿಸಿ ರಷ್ಯಾ (Rsussia) ಆದೇಶ ಪ್ರಕಟಿಸಿದೆ.

    ಜೋ ಬೈಡನ್‌ (Joe Biden) ಆಡಳಿತ ನಿರಂತರವಾಗಿ ರಷ್ಯಾದ ಮೇಲೆ ವಿಧಿಸುತ್ತಿರುವ ನಿರ್ಬಂಧಗಳಿಗೆ ಪ್ರತಿಯಾಗಿ ಅಮೆರಿಕದ 500 ಮಂದಿಗೆ ರಷ್ಯಾ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.  ಇದನ್ನೂ ಓದಿ: ಕುರಿ ಲೆಕ್ಕ ಹಾಕಲು ಬಾರದವನಿಗೆ ಹಣಕಾಸು ಖಾತೆ ಯಾಕೆ ಎಂದಿದ್ದವರಿಗೆ 13 ಬಜೆಟ್‌ ಮಂಡಿಸಿ ಠಕ್ಕರ್‌ ಕೊಟ್ಟ ‘ಟಗರು’!

    ಉಕ್ರೇನ್‌ (Ukraine) ಮೇಲೆ ದಾಳಿ ಮಾಡುತ್ತಿರುವ ರಷ್ಯಾವನ್ನು ಆರ್ಥಿಕವಾಗಿ ಕುಗ್ಗಿಸಲು ಅಮೆರಿಕ ಮತ್ತು ಯುರೋಪ್‌ ದೇಶಗಳು ನಾನಾ ಕ್ರಮಗಳನ್ನು ಜಾರಿ ಮಾಡುತ್ತಿವೆ. ಈ ಕ್ರಮದ ಭಾಗವಾಗಿ ಶುಕ್ರವಾರ ಅಮೆರಿಕ ರಷ್ಯಾದ ನೂರಕ್ಕೂ ಅಧಿಕ ಕಂಪನಿಗಳನ್ನು ವ್ಯಕ್ತಿಗಳನ್ನು ನಿರ್ಬಂಧ ಪಟ್ಟಿಗೆ ಸೇರಿಸಿದೆ. ಈ ಕ್ರಮಕ್ಕೆ ತಿರುಗೇಟು ಎನ್ನುವಂತೆ ರಷ್ಯಾ ಈಗ ಅಮೆರಿಕದ 500 ಮಂದಿಗೆ ನಿರ್ಬಂಧ ಹೇರಿದೆ.

     
    ಏಪ್ರಿಲ್‌ನಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ವಿಶ್ವಸಂಸ್ಥೆಗೆ ಪ್ರಯಾಣಿಸುವ ಪತ್ರಕರ್ತರಿಗೆ ವೀಸಾಗಳನ್ನು ನೀಡಲು ಅಮೆರಿಕ ನಿರಾಕರಿಸಿತ್ತು.

  • ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೊರೊನಾ

    ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೊರೊನಾ

    ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಭಾನುವಾರ ಕೋವಿಡ್-19 ಸೋಂಕು ದೃಢಪಟ್ಟಿದೆ.

    ನನಗೆ ಒಂದೆರಡು ದಿನಗಳಿಂದ ಗಂಟಲು ಕಟ್ಟಿಕೊಂಡಿದೆ. ಅದನ್ನು ಬಿಟ್ಟರೆ ನಾನು ಕ್ಷೇಮವಾಗಿದ್ದೇನೆ. ಮಿಚೆಲ್ ಮತ್ತು ನಾನು ಲಸಿಕೆಯನ್ನು ಹಾಕಿಸಿಕೊಂಡಿದ್ದು ಒಳ್ಳೆಯದಾಯಿತು. ಇದರಿಂದ ಅವರಿಗೆ ಕೊರೊನಾ ಟೆಸ್ಟ್ ಮಾಡಿದಾಗ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ. ನೀವು ಈಗಲೂ ಲಸಿಕೆ ಹಾಕಿಸಿಕೊಳ್ಳದಿದ್ದರೆ, ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಸಹ ಲಸಿಕೆ ಹಾಕಿಸಿಕೊಳ್ಳುವುದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಷಿಪಣಿ ಬಗ್ಗೆ ಭಾರತಕ್ಕೆ ಪ್ರತ್ಯುತ್ತರ ನೀಡೋ ಬದಲು ಪಾಕಿಸ್ತಾನ ಸಂಯಮ ಬಯಸುತ್ತೆ: ಇಮ್ರಾನ್ ಖಾನ್

    ಒಬಾಮಾ ಅವರು 2008 ಮತ್ತು 2016ರ ನಡುವೆ ಸತತ ಎರಡು ಬಾರಿ ಅಮೆರಿಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. 2020ರ ಅಮೆರಿಕ ಸಾರ್ವಜನಿಕರು ಮತ ಚಲಾಯಿಸುವ ಮುನ್ನ 2016ರಲ್ಲಿ ಡೊನಾಲ್ಡ್ ಟ್ರಂಪ್ ಉತ್ತರಾಧಿಕಾರಿಯಾಗಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ


    America, Former President, Barack Obama, Corona Virus

  • ಆತ್ಮಚರಿತ್ರೆಯಲ್ಲಿ ರಾಹುಲ್ ಗಾಂಧಿ ವ್ಯಕ್ತಿತ್ವ ಬಣ್ಣಿಸಿದ ಒಬಾಮಾ

    ಆತ್ಮಚರಿತ್ರೆಯಲ್ಲಿ ರಾಹುಲ್ ಗಾಂಧಿ ವ್ಯಕ್ತಿತ್ವ ಬಣ್ಣಿಸಿದ ಒಬಾಮಾ

    – ಶಿಕ್ಷಕರನ್ನು ಮೆಚ್ಚಿಸಲು ನೋಡೋ ವಿದ್ಯಾರ್ಥಿಯಂತೆ

    ವಾರ್ಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ತಮ್ಮ ರಾಜಕೀಯ ಅನುಭವ ಹಾಗೂ ಜೀವನದ ಕೆಲ ಸ್ಮರಣೀಯ ನೆನಪುಗಳನ್ನು ‘ಎ ಪ್ರಾಮಿಸ್ಡ್‌ ಲ್ಯಾಂಡ್’ ಪುಸ್ತಕದ ರೂಪದಲ್ಲಿ ಹೊರ ತರುತ್ತಿದ್ದು, ನವೆಂಬರ್ 17 ರಂದು ಪುಸ್ತಕ ಬಿಡುಗಡೆಯಾಗಲಿದೆ.

    ಪುಸ್ತಕದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕುರಿತು ಒಬಾಮಾ ಆಸಕ್ತಿಕರ ಹೇಳಿಕೆಗಳನ್ನು ನೀಡಿದ್ದಾಗಿ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

    ರಾಹುಲ್ ಗಾಂಧಿಯಲ್ಲಿ ಭಯವೆಂಬ ತಿಳಿಯದ ಗುಣವಿದೆ. ತರಗತಿಯಲ್ಲಿ ಶಿಕ್ಷಕರನ್ನು ಮೆಚ್ಚಿಸುವ ವಿದ್ಯಾರ್ಥಿಯಂತೆ ಅತುರವಾಗಿರುತ್ತಾರೆ. ಆದರೆ ಒಂದು ವಿಷಯದ ಕುರಿತು ಆಳವಾಗಿ ಕಲಿತುಕೊಳ್ಳಬೇಕೆಂಬ ಉತ್ಸಾಹ ಮತ್ತು ಅಭಿರುಚಿಯ ಕೊರತೆ ಇದೆ ಎಂದು ಒಬಾಮಾ ಬರೆದುಕೊಂಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

    ಒಟ್ಟಾರೆ 768 ಪುಟಗಳ ಈ ಪುಸ್ತಕದಲ್ಲಿ ಒಬಾಮಾ ತಮ್ಮ ಬಾಲ್ಯದ ಘಟನೆಗಳು, ನೆನಪು, ರಾಜಕೀಯ ಬದುಕು, 2008ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಗೆಲುವು ಹೀಗೆ ಅನೇಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಆಫ್ರಿಕನ್ ಅಮೆರಿಕನ್ ಎಂಬ ಇತಿಹಾಸ ಸೃಷ್ಟಿ ಮಾಡಿರೋ ಒಬಾಮಾ, 2010 ಮತ್ತು 2015 ರಲ್ಲಿ ಭಾರತದ ಪ್ರವಾಸ ಕೈಗೊಂಡಿದ್ದರು. 2009ರ ಜನವರಿಯಿಂದ 2017ರ ಜನವರಿವರೆಗೂ 2 ಅವಧಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ರು. ಉಳಿದಂತೆ 2017 ರಲ್ಲಿ ಭಾರತಕ್ಕೆ ಒಬಾಮಾ ಆಗಮಿಸಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು.