Tag: ಬಲಿಪಾಡ್ಯಮಿ

  • ದೀಪಾವಳಿ 2025 – ಬಲಿಪಾಡ್ಯಮಿ ಹಬ್ಬದ ಮಹತ್ವ ಏನು?

    ದೀಪಾವಳಿ 2025 – ಬಲಿಪಾಡ್ಯಮಿ ಹಬ್ಬದ ಮಹತ್ವ ಏನು?

    ದೀಪ ಪ್ರತಿಪದ ಉತ್ಸವವೇ ದೀಪಾವಳಿ. ದೀಪ ಎಂದರೆ ಬೆಳಕು, ಪ್ರತಿಪದ ಎಂದರೆ ಆರಂಭ ಮತ್ತು ಉತ್ಸವ ಎಂದರೆ ಹಬ್ಬ. ದೀಪಾವಳಿ (Deepavali) ಒಂದೇ ದಿನಕ್ಕೆ ಮುಗಿಯುವ ಹಬ್ಬವಲ್ಲ. ಒಟ್ಟು ಮೂರು ದಿನ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಮೊದಲ ದಿನ ಮನೆಯವರೆಲ್ಲರೂ ಎಣ್ಣೆ ಸ್ನಾನ ಮಾಡುವ ನರಕ ಚತುದರ್ಶಿ, ಎರಡನೇ ದಿವಸ ಅಮಾವಾಸ್ಯೆ, ಮೂರನೇ ದಿನವೇ ಬಲಿ ಪಾಡ್ಯಮಿ. ದೀಪಾವಳಿ ಬಲಿಪಾಡ್ಯಮಿಯೊಂದಿಗೆ (Balipadyami) ಈ ಮೂರು ದಿನಗಳ ಹಬ್ಬ ಮುಗಿಯುತ್ತದೆ.

    ಅಮಾವಾಸ್ಯೆಯ ನಂತರದ ಪಾಡ್ಯದಂದು ರಾಕ್ಷಸರ ಅರಸನಾದ ಬಲೀಂದ್ರನ ಪೂಜೆಯನ್ನು ನಡೆಸುವುದರಿಂದ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯಲಾಗುತ್ತದೆ. ಹಿರಣ್ಯ ಕಶ್ಯಪುವಿನ ವಂಶಸ್ಥನಾದ ಇವನು ದಾನವನಾದರೂ ಈ ದಿನ ಬಲೀಂದ್ರನನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ.

    ಪ್ರಜೆಗಳನ್ನು ಬಹಳ ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಾನಶೂರ ದೈತ್ಯರಾಜ ಬಲಿ ಚಕ್ರವರ್ತಿ (Bali Maharaja) ಮಹಾವಿಷ್ಣುವಿನ ಮಹಾನ್‌ ಭಕ್ತ. ರಾಕ್ಷಸ ರಾಜನಾದರೂ ದಾನ ಧರ್ಮದಿಂದ ಹೆಸರುವಾಸಿಯಾಗಿದ್ದ ಬಲಿ ಮಹಾರಾಜನಿಗೆ ತನ್ನ ರೀತಿಯಲ್ಲಿ ಬೇರೆ ಯಾರು ಪ್ರಜೆಗಳನ್ನು ನೋಡಿಕೊಳ್ಳುವುದಿಲ್ಲ ಎಂಬ ಅಹಂಕಾರ ಇತ್ತು. ಬಲಿ ರಾಜನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದ. ಇವರ ಕಾಟ ಹೆಚ್ಚಾಗುತ್ತಿದ್ದಂತೆ ಹೇಗಾದರೂ ಮಾಡಿ ಬಲಿಯನ್ನು ಸಂಹಾರ ಮಾಡಬೇಕೆಂದು ದೇವತೆಗಳು ವಿಷ್ಣುವಿನ ಬಳಿ ಪ್ರಾರ್ಥನೆ ಮಾಡುತ್ತಾರೆ.  ಇದನ್ನೂ ಓದಿ:  ಭಾರತದಲ್ಲಿ ಮಾತ್ರವಲ್ಲ, ಈ ದೇಶಗಳಲ್ಲಿಯೂ ದೀಪಾವಳಿ ಆಚರಣೆ ಬಲು ಜೋರು!

    ದೇವತೆಗಳಿಗೆ ಅಭಯ ನೀಡಿದ ವಿಷ್ಣು ವಾಮನನ (ಬಾಲಕ) ರೂಪದಲ್ಲಿ ಬಲಿ ಮಹಾರಾಜನ ಬಳಿ ಬಂದು ದಾನವನ್ನು ಕೇಳುತ್ತಾನೆ. ಬಲೀಂದ್ರ ರಾಜ ಕೊಡುಗೈ ದಾನಿ. ನಿನಗೆ ಏನು ಬೇಕೆಂದು ಕೇಳು ಎಂದು ವಾಮನನಿಗೆ (Vamana) ಹೇಳುತ್ತಾನೆ. ಆಗ ವಾಮನ, ನನ್ನ ಮೂರು ಹೆಜ್ಜೆ ಊರುವಷ್ಟು ಭೂಮಿಯನ್ನು ದಾನವಾಗಿ ನೀಡಬಹುದೇ ಎಂದು ಕೇಳುತ್ತಾನೆ.

    ಪ್ರಜಾಪರಿಪಾಲನೆಯಲ್ಲಿ ಹೆಸರು ಮಾಡಿರುವ ನನಗೆ ಈ ಪುಟ್ಟ ಬಾಲಕನ ಬೇಡಿಕೆಯನ್ನು ಈಡೇರಿಸುವ ಯೋಗ್ಯತೆ ಇಲ್ವಾ ಎಂಬ ಅಹಂಕಾರದಿಂದ ಬಲೀಂದ್ರ ಮಹಾರಾಜ ವಾಮನನಿಗೆ, ನೀನು ಕೇಳಿದ ಮೂರು ಹೆಜ್ಜೆ ಊರುವಷ್ಟು ಜಾಗ ನೀಡುತ್ತೇನೆ ಎಂದು ವಚನವನ್ನು ಕೊಡುತ್ತಾನೆ.

     

    ಭೂಮಿಯನ್ನು ದಾನ ಪಡೆಯುವಾಗ ವಾಮನಮೂರ್ತಿ ಆಕಾಶದ ಉದ್ದಕ್ಕೂ ಬೆಳೆಯುತ್ತಾನೆ. ಒಂದು ಪಾದವನ್ನು ಭೂಮಿ ಮೇಲೆ, ಮತ್ತೊಂದು ಪಾದವನ್ನು ಆಕಾಶದ ಮೇಲೆ ಇರಿಸುತ್ತಾನೆ. ಇನ್ನೊಂದು ಪಾದ ಇಡಲು ಜಾಗ ಕಾಣುತ್ತಿಲ್ಲ ಎಲ್ಲಿ ಇಡಬೇಕು ಎಂದು ಕೇಳಿದಾಗ ಬಲಿ ಚಕ್ರವರ್ತಿಗೆ ಜ್ಞಾನೋದಯವಾಗಿ ನನ್ನ ತಲೆ ಮೇಲೆ ಪಾದ ಇಡು ಎಂದು ಹೇಳುತ್ತಾನೆ. ನನ್ನ ತಲೆ ಮೇಲೆ ನಿಮ್ಮ ಪಾದ ಇಡುವ ಮೂಲಕ ನನ್ನಲ್ಲಿರುವ ಅಹಂಕಾರವೆಲ್ಲ ನಾಶವಾಗಲಿ ಎಂದು ವಾಮನನ ಬಳಿ ಬಲಿ ಕ್ಷಮೆ ಕೇಳುತ್ತಾನೆ. ವಾಮನ ತನ್ನ ಪಾದವನ್ನು ಬಲೀಂದ್ರ ಮಹಾರಾಜನ ಮೇಲೆ ಇರಿಸಿ ಪಾತಾಳಕ್ಕೆ ಕಳುಹಿಸುತ್ತಾನೆ.

    ತಲೆ ಮೇಲೆ ಕಾಲನ್ನು ಇಡುವ ಮುನ್ನ ವಾಮನ ಬಳಿ ಬಲಿ, ನಾನು ನನ್ನ ಮಕ್ಕಳಂತೆ ಪ್ರಜೆಗಳನ್ನು ನೋಡಿದ್ದೇನೆ. ಹೀಗಾಗಿ ಪ್ರಜೆಗಳನ್ನು ನೋಡಲು ಅವಕಾಶ ನೀಡಬೇಕೆಂದು ಪ್ರಾರ್ಥನೆ ಮಾಡಿಕೊಳ್ಳುತ್ತಾನೆ. ಈ ಪ್ರಾರ್ಥನೆ ಸ್ವೀಕರಿಸಿದ ವಾಮನ ಅಸ್ತು ಎಂದು ಹೇಳಿ ತಲೆಯ ಮೇಲಿಟ್ಟು ಬಲಿ ಚಕ್ರವರ್ತಿಯನ್ನು ಪಾತಾಳಕ್ಕೆ ತುಳಿದುಬಿಡುತ್ತಾನೆ.

    ಬಲಿಯ ಭಕ್ತಿಯನ್ನು ಮತ್ತು ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಅದೇನೆಂದರೆ ಆಶ್ವಯುಜ ಮಾಸದಲ್ಲಿ ಮೂರು ದಿವಸಗಳ ಕಾಲ ನೀನು ಭೂಲೋಕಕ್ಕೆ ಬರಬಹುದು. ಅಲ್ಲಿ ನಿನ್ನನ್ನು ಜನತೆ ಪೂಜೆ ಮಾಡುವರು. ಇದರ ಫಲವಾಗಿಯೇ ದೀಪಾವಳಿ ಸಮಯದಲ್ಲಿ ಎಲ್ಲರೂ ದೀಪ ಹಚ್ಚಿ ಬಲೀಂದ್ರ ಪೂಜೆ ಕೈಗೊಳ್ಳುತ್ತಾರೆ. ಆಶ್ವಯುಜ ಕೃಷ್ಣ ಚತುರ್ದಶಿ, ಅಮಾವಾಸ್ಯೆ ಮತ್ತು ಕಾರ್ತಿಕ ಶುದ್ಧ ಪಾಡ್ಯ. ಇದನ್ನು ಬಲಿರಾಜ್ಯವೆಂದು ಹೇಳುತ್ತಾರೆ. ಆ ರೀತಿ ಆಚರಿಸಲ್ಪಡುವ ಕೊನೆಯ ದಿನವೇ ಬಲಿಪಾಡ್ಯಮಿ. ಈ ಅವಧಿಯಲ್ಲಿ ಬಲಿ ಚಕ್ರವರ್ತಿ ಪಾತಾಳದಿಂದ ಭೂಲೋಕ ಸಂಚಾರಕ್ಕೆ ಬರುತ್ತಾನೆಂಬ ನಂಬಿಕೆಯಲ್ಲಿ ಬಲೀಂದ್ರ ಪೂಜೆ ನಡೆಯುತ್ತದೆ.

    ದೀಪಾವಳಿಯ ದಿನದಂದು ಪ್ರಜೆಗಳನ್ನು ನೋಡಲು ಬಲೀಂದ್ರ ಮಹಾರಾಜ ಬರುತ್ತಾನೆ ಎಂಬ ನಂಬಿಕೆಯಿಂದ ಜನರು ಅಭ್ಯಂಜನ ಸ್ನಾನಾದಿಗಳನ್ನು ಮಾಡಿಕೊಂಡು ಮನೆಯ ಎಲ್ಲ ಪಾತ್ರೆಗಳಲ್ಲಿ ಶುದ್ಧವಾದ ನೀರನ್ನು ತುಂಬಿಸುತ್ತಾರೆ. ಎಣ್ಣೆ ಸ್ನಾನ ಮಾಡುವಾಗ ಸಪ್ತ ಚಿರಂಜೀವಿಗಳನ್ನು ಹೇಳುವ ಅಶ್ವತ್ಥಾಮೋ ಬಲಿರ್ವ್ಯಾಸೋ ಹನೂಮಾಶ್ಛ ವಿಭೀಷಣಃ | ಕೃಪಃ ಪರಶುರಾಮಶ್ಚ ಸಪ್ತೇತೇಃ ಚಿರಂಜೀವಿನಃ | ಶ್ಲೋಕವನ್ನು ಹೇಳುತ್ತಾರೆ. ಹಿಂದೂ ಪುರಾಣಗಳ ಪ್ರಕಾರ ರಾಮಾಯಣ ಮತ್ತು ಮಹಾಭಾರತಗಳಿಗೆ ಸಂಬಂಧಿಸಿದ ಏಳು ಪೌರಾಣಿಕ ವ್ಯಕ್ತಿಗಳನ್ನು ಚಿರಂಜೀವಿಗಳು ಎಂದು ನಂಬಲಾಗಿದೆ. ಅಶ್ವತ್ಥಾಮ, ಬಲೀಂದ್ರ, ವೇದವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯ, ಪರಶುರಾಮನನ್ನು ಸ್ತುತಿಸಿದರೆ ಆಯಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯಿದೆ.

  • ದೀಪಾವಳಿ| ಕರಾವಳಿಯಲ್ಲಿ ಗೋಪೂಜೆ ಮಹತ್ವ ಏನು?

    ದೀಪಾವಳಿ| ಕರಾವಳಿಯಲ್ಲಿ ಗೋಪೂಜೆ ಮಹತ್ವ ಏನು?

    ಗೋವನ್ನು ಮಾತೆಯೆಂದು ನಾವೆಲ್ಲರೂ ಪೂಜಿಸುತ್ತೇವೆ. ಬಲಿಪಾಡ್ಯಮಿಯಂದು ಗೋಪೂಜೆಯನ್ನು ಮಾಡಲಾಗುತ್ತದೆ. ಹಿಂದೆ ಹಳ್ಳಿಗಳಲ್ಲಿ ದುಡಿಮೆಯ ಅವಿಭಾಜ್ಯ ಅಂಗವಾಗಿರುವ ಕೃಷಿಗೆ ಜಾನುವಾರುಗಳೇ ಆಧಾರವಾಗಿದ್ದವು. ಎತ್ತು, ಕೋಣಗಳನ್ನು ಗದ್ದೆ ಉಳುಮೆ ಮಾಡಲು ಬಳಸುತ್ತಿದ್ದರು. ಈಗಲೂ ಹಳ್ಳಿಗಳಲ್ಲಿ ಹೆಚ್ಚಿನ ಕಡೆ ಗದ್ದೆಯನ್ನು ಕೋಣಗಳನ್ನು ಬಳಸಿ ಉಳುಮೆ ಮಾಡುತ್ತಾರೆ.

    ದೀಪಾವಳಿ (Diwali) ಸಮಯದಲ್ಲಿ ಮೂರು ದಿನ ಕೃಷಿ ಕೆಲಸಕ್ಕೆ ವಿರಾಮ ಎಂಬುದು ತುಳುನಾಡಿನ ಜನರ ನಿಯಮವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಪೂಜೆ ಮತ್ತು ಗದ್ದೆಗಳಿಗೆ ದೀಪ ಇಡುವ ಕ್ರಮ ಬಲಿಪಾಡ್ಯಯಂದೇ ನಡೆಯುತ್ತದೆ. ಬೆಳಗ್ಗೆ ಗೋಪೂಜೆ ಮಾಡಿ ಸಂಜೆ ಗದ್ದೆಗಳಿಗೆ ದೀಪ ಇಟ್ಟು, ರಾತ್ರಿ ಜಾನುವಾರುಗಳಿಗೆ ‘ತುಡಾರ್’, (ದೀಪ) ತೋರಿಸುವ ಕ್ರಮ ಹಿಂದಿನಿಂದಲೂ ನಡೆದು ಬಂದಿದೆ.

    ಗೋಪೂಜೆ ದಿನ ಬೆಳಗ್ಗೆ ಗೋವುಗಳನ್ನು ಚೆನ್ನಾಗಿ ಸ್ನಾನ ಮಾಡಿಸಿ ಸ್ವಚ್ಛಗೊಳಿಸುತ್ತಾರೆ. ಕೋಣಗಳಿಗಾದರೆ ಅವುಗಳ ಮೈ ಪೂರ್ತಿ ತೆಂಗಿನ ಎಣ್ಣೆ ಹಚ್ಚಿ ಸ್ವಲ್ಪ ಹೊತ್ತು ಬಿಟ್ಟು ಸ್ನಾನ ಮಾಡಿಸುತ್ತಾರೆ. ಬಳಿಕ ಶೃಂಗಾರ ಮಾಡಲಾಗುತ್ತದೆ. ಸಂಜೆಯ ವೇಳೆ ಗದ್ದೆಗಳಿಗೆ ದೀಪ ಇರಿಸಿದ ಬಳಿಕ ತುಡಾರ್ ತೋರಿಸಿ ತಲೆಗೆ ತೆಂಗಿನ ಎಣ್ಣೆ ಹಾಕಿ ಕುಂಕುಮ ಹಚ್ಚಿ ಪ್ರಾರ್ಥಿಸಲಾಗುತ್ತದೆ. ರಾತ್ರಿ ಜಾನುವಾರುಗಳಿಗೆ ಕೊರಳಿಗೆ ಹೂವಿನ ಹಾರ ಹಾಕಿ, ಸಣ್ಣ ಕರುಗಳಿಗೆ ನಾಮಕರಣವನ್ನು ಈ ದಿನ ಮಾಡುತ್ತಾರೆ. ಇದಾದ ಬಳಿಕ ರಾತ್ರಿ ಮನೆಮಂದಿಯೆಲ್ಲ ಸೇರಿ ಅಕ್ಕಿಯಿಂದ ತಯಾರಿಸಿದ ಉದ್ದಿನ ದೋಸೆಯನ್ನು ಜಾನುವಾರುಗಳಿಗೆ ನೀಡಲಾಗುತ್ತದೆ. ಮರುದಿನ ಬೆಳಗ್ಗೆ ಕೂಡ ಸಿಹಿ ನೀಡಿ ವಿಶೇಷವಾದ ಅಕ್ಕಿ ಗಂಜಿಯನ್ನು ಎಲ್ಲ ಜಾನು ವಾರುಗಳಿಗೆ ನೀಡಲಾಗುತ್ತದೆ. ಈ ಮೂಲಕ ಕರಾವಳಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆಯು ವಿಶೇಷವಾಗಿ ಆಚರಿಸಲಾಗುತ್ತದೆ. ಪ್ರದೇಶದಿಂದ ಪ್ರದೇಶಕ್ಕೆ ಆಚರಣೆಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳು ಆಗುತ್ತವೆ.

    ದೀಪಾವಳಿಯಂದು ಕೃಷ್ಣನು ನರಕಾಸುರನ ವಧೆ ಮಾಡಿದ ಮತ್ತು ಬಲಿಯನ್ನು ಉದ್ಧರಿಸಿದ ಕಾರಣ ವಿಷ್ಣು ಪೂಜೆ, ಬಲೀಂದ್ರ ಪೂಜೆ, ಧನದ ದೇವನಾದ ಕುಬೇರನ ಪೂಜೆ, ಯಮನ ಪೂಜೆ, ಗೋಪೂಜೆ, ಮಹಾಲಕ್ಷ್ಮೀ ಪೂಜೆ, ಮಹಾದೇವನ ಪೂಜೆ ಮಾಡಲಾಗುತ್ತದೆ. ಯಾಕೆಂದರೆ ಬಲಿಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು. ಅದಕ್ಕೆ ಪೂಜೆಗಳನ್ನು, ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋವುಗಳಿಗೆ ಪೂಜೆ ಮಾಡಲಾಗುತ್ತದೆ.

  • ಬಲಿಪಾಡ್ಯಮಿ; ಮಂತ್ರಾಲಯ ಮಠದಲ್ಲಿ ಶ್ರೀಗಳಿಂದ ವಿಶೇಷ ಮಹಾಭಿಷೇಕ

    ಬಲಿಪಾಡ್ಯಮಿ; ಮಂತ್ರಾಲಯ ಮಠದಲ್ಲಿ ಶ್ರೀಗಳಿಂದ ವಿಶೇಷ ಮಹಾಭಿಷೇಕ

    ರಾಯಚೂರು: ದೀಪಾವಳಿಯ (Deepavali) ಬಲಿಪಾಡ್ಯಮಿ (Balipadyami) ಹಿನ್ನೆಲೆಯಲ್ಲಿ ಗುರುರಾಯರ ಸನ್ನಿಧಿ ಮಂತ್ರಾಲಯ (Mantralaya) ರಾಯರ ಮಠದಲ್ಲಿ ವಿಶೇಷ ಮಹಾಭಿಷೇಕ ಜರುಗಿತು.

    ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ವಿಶೇಷ ಪೂಜಾ ಕೈಂಕರ್ಯಗಳನ್ನ ನೆರವೇರಿಸಿದರು. ಮಠದಲ್ಲಿ ಶ್ರೀಬ್ರಹ್ಮ ಕರಾರ್ಚಿತ ಶ್ರೀಮೂಲ ರಾಮದೇವರು ಮತ್ತು ಇತರ ಸಂಸ್ಥಾನದ ವಿಗ್ರಹಗಳಿಗೆ ಮಹಾಭಿಷೇಕ ನೆರವೇರಿಸಿದರು. ಇದನ್ನೂ ಓದಿ: ದೀಪಾವಳಿ ವಿಶೇಷ – ಬಲಿಪಾಡ್ಯಮಿಯನ್ನು ಯಾಕೆ ಆಚರಿಸಲಾಗುತ್ತದೆ? ಏನಿದು ಪುರಾಣ ಕಥೆ?

    ವರ್ಷಕ್ಕೆ ಎರಡು ಬಾರಿ ಮಾತ್ರ ಈ ಮಹಾಭಿಷೇಕ ನೆರವೇರಿಸಲಾಗುತ್ತದೆ. ಶ್ರೀರಾಮ ನವಮಿ ಹಾಗೂ ಬಲಿಪಾಡ್ಯಮಿಯ ದಿನ ಮಾತ್ರ ವಿಶೇಷ ಮಹಾಭಿಷೇಕ ನಡೆಯುತ್ತದೆ. ಈ ವೇಳೆ ಮಠದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

    ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಮನೆಯಲ್ಲಿ ದೀಪಗಳ ಅಲಂಕಾರ ಮಾಡಿ ಪಟಾಕಿ ಸಿಡಿಸಿ ಜನ ಸಂಭ್ರಮಿಸುತ್ತಿದ್ದಾರೆ. ಪರಸ್ಪರ ಸಿಹಿ ಹಂಚಿಕೊಂಡು ದೀಪಾವಳಿ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಕಾರ್ತಿಕ ದೀಪೋತ್ಸವಂದು ದೀಪ ಬೆಳಗುವುದು ಯಾಕೆ? ಮಹತ್ವ ಏನು?

    ದೀಪಾವಳಿಯನ್ನು (Deepavali) ಒಟ್ಟು ಮೂರು ದಿನ ಆಚರಿಸಲಾಗುತ್ತದೆ. ಮೊದಲ ದಿನ ಮನೆಯವರೆಲ್ಲರೂ ಎಣ್ಣೆ ಸ್ನಾನ ಮಾಡುವ ನರಕ ಚತುದರ್ಶಿ, ಮರು ದಿವಸ ಅಮಾವಾಸ್ಯೆ, ಮೂರನೇ ದಿನವೇ ಬಲಿಪಾಡ್ಯಮಿ. ದೀಪಾವಳಿ ಬಲಿಪಾಡ್ಯಮಿಯೊಂದಿಗೆ (Balipadyami) ಈ ಮೂರು ದಿನಗಳ ಹಬ್ಬ ಮುಗಿಯುತ್ತದೆ. ಅಮಾವಾಸ್ಯೆಯ ನಂತರದ ಪಾಡ್ಯದಂದು ದಾನವ ಅರಸನಾದ ಬಲೀಂದ್ರನ ಪೂಜೆಯನ್ನು ನಡೆಸುವುದರಿಂದ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯಲಾಗುತ್ತದೆ. ಹಿರಣ್ಯ ಕಶ್ಯಪುವಿನ ವಂಶಸ್ಥನಾದ ಇವನು ದಾನವನಾದರೂ ಈ ದಿನ ಬಲೀಂದ್ರನನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ.

  • ದೀಪಾವಳಿಯಲ್ಲಿ ಗೋಪೂಜೆಯ ಮಹತ್ವವೇನು?

    ದೀಪಾವಳಿಯಲ್ಲಿ ಗೋಪೂಜೆಯ ಮಹತ್ವವೇನು?

    ದೀಪಾವಳಿ (Deepavali) ಎಂದರೆ ದೀಪಗಳ ಹಬ್ಬ ಎಂದು ಎಲ್ಲರಿಗೂ ಗೊತ್ತೇ ಇದೆ. ಈ ದೀಪಾವಳಿಯ ಬಲಿಪಾಡ್ಯಮಿಯಂದು ಗೋವುಗಳಿಗೆ ಪೂಜೆಯನ್ನೂ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಶಾಸ್ತ್ರೋಕ್ತ ಪೂಜೆ ಮಾಡಿ, ತಿಂಡಿ- ತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ಇದೆ. ನಾವು ಆಚರಿಸುವ ಪ್ರತಿಯೊಂದು ಸಂಪ್ರದಾಯಕ್ಕೂ ಒಂದೊಂದು ಹಿನ್ನೆಲೆ ಇರುವಂತೆ ದೀಪಾವಳಿಯ ಸಮಯದಲ್ಲಿನ ಗೋ ಆರಾಧನೆಗೂ ಒಂದು ಪೌರಾಣಿಕ ಹಿನ್ನೆಲೆ ಇದೆ.

    ದೀಪಾವಳಿಯ ವೇಳೆ ಒಂದು ದಿನವನ್ನು ಬಲಿಪಾಡ್ಯಮಿ ಎಂದು ಬಲಿ ಚಕ್ರವರ್ತಿಯ ನೆನಪಿಗಾಗಿ ಆಚರಿಸಲಾಗುತ್ತದೆ. ಈ ದಿನ ಲಕ್ಷ್ಮೀ ಪೂಜೆ, ಗೋ ಪೂಜೆ (Go Pooja) ಇವುಗಳನ್ನು ಮಾಡಲಾಗುವುದು. ಯಾಕೆಂದರೆ ಬಲಿಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು. ಅದಕ್ಕೆ ಪೂಜೆಗಳನ್ನು, ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋವುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.

    ಕೃಷ್ಣ ನಂದಗೋಕುಲದಲ್ಲಿದ್ದಾಗ ಅಲ್ಲಿದ್ದ ಗೋಪ, ಗೋಪಿಯರು ಪ್ರತಿವರ್ಷ ಮಳೆ ಬರಲಿ ಎಂದು ಎಲ್ಲರು ಇಂದ್ರದೇವನ ಪೂಜೆಯನ್ನು ಮಾಡುತ್ತಿದ್ದರು. ಇದರಿಂದಾಗಿ ಇಂದ್ರನಿಗೆ ನಾನು ಮಳೆ ಬರಿಸುವುದರಿಂದಲೇ ಪ್ರಪಂಚದಲ್ಲಿ ಎಲ್ಲವೂ ನಡೆಯುತ್ತಿದೆ ಎಂದು ಗರ್ವದಿಂದ ಬೀಗಿದ. ಇಂದ್ರ ತಾನು, ತನ್ನಿಂದ ಎಂದು ಗರ್ವದಲ್ಲಿ ಬೀಗುತ್ತಿರುವ ವಿಚಾರ ಕೃಷ್ಣನಿಗೆ ತಿಳಿಯುತ್ತದೆ. ಈ ಕಾರಣಕ್ಕೆ ಈತನ ಗರ್ವ ಇಳಿಸಲು ಇಂದ್ರನಿಗೆ ಪೂಜೆ ಮಾಡದೇ ಗೋವರ್ಧನ ಪರ್ವತಕ್ಕೆ ಪೂಜೆ ಮಾಡಬೇಕೆಂದು ಗೋಪಾಲಕರಿಗೆ ಸೂಚಿಸಿದ. ನಮಗೆ ಮಳೆ ಗೋವರ್ಧನ ಪರ್ವತದಿಂದ ಬರುತ್ತಿದೆ, ಅದಕ್ಕಾಗಿ ನಾವು ಇನ್ನು ಮುಂದೆ ಗೋವರ್ಧನ ಪರ್ವತವನ್ನು ಪೂಜೆ ಮಾಡಬೇಕೇ ವಿನಾಃ ಇಂದ್ರದೇವನ ಪೂಜೆ ಮಾಡುವುದು ಬೇಡ ಎಂದು ಸೂಚಿಸಿದ. ಇದನ್ನೂ ಓದಿ: ನರಕ ಚತುರ್ದಶಿ ಏಕೆ ಆಚರಿಸ್ತಾರೆ?

    ಕೃಷ್ಣನ ಸೂಚನೆಯ ಹಿನ್ನೆಲೆಯಲ್ಲಿ ಗೋವರ್ಧನ ಪರ್ವತದ ಪೂಜೆ ಮಾಡಲು ಶುರು ಮಾಡಿದರು. ನನಗೆ ಪೂಜೆ ಮಾಡುವುದನ್ನು ಬಿಟ್ಟು ಗೋವರ್ಧನ ಪರ್ವತಕ್ಕೆ ಪೂಜೆ ಮಾಡುವುದನ್ನು ನೋಡಿ ಇಂದ್ರನಿಗೆ ಕೋಪ ಬಂತು. ಗೋಪಾಲರಿಗೆ ಪಾಠ ಕಲಿಸಲು ಇಂದ್ರನು ತುಂಬಾ ರಭಸವಾಗಿ ಮಳೆಯನ್ನು ಸುರಿಸಲು ಪ್ರಾರಂಭಿಸಿದನು. ಇದರಿಂದಾಗಿ ನದಿಯು ತುಂಬಿ ಹರಿಯಲಾರಂಭಿಸಿತು. ಎಲ್ಲ ಜನರು ಗಾಬರಿಯಿಂದ ಶ್ರೀಕೃಷ್ಣನ ಬಳಿಗೆ ಸಹಾಯ ಕೇಳಲು ಓಡಿದರು.

    ಆಗ ಶ್ರೀಕೃಷ್ಣನು, ನೀವು ಯಾರು ಭಯ ಪಡುವ ಅಗತ್ಯವಿಲ್ಲ. ಎಲ್ಲರೂ ಒಟ್ಟು ಸೇರೋಣ. ನಾವು ಪೂಜಿಸಿದ ಗೋವರ್ಧನ ಪರ್ವತವೇ ನಮ್ಮನ್ನು ರಕ್ಷಿಸುತ್ತದೆ ಎಂದು ಅಭಯವನ್ನು ಇತ್ತ. ಎಲ್ಲ ಜನ ಸೇರಿದ ನಂತರ ಕೃಷ್ಣ ತನ್ನ ಕಿರು ಬೆರಳಿನಿಂದ ಗೋವರ್ಧನ ಪರ್ವತವನ್ನು ಎತ್ತಿ ಹಿಡಿದು ಗ್ರಾಮಸ್ಥರನ್ನು ರಕ್ಷಿಸಿದ. ಬಲಿ ಪಾಡ್ಯಮಿಯಂದು ಕೃಷ್ಣ ಗೋವರ್ಧನ ಪರ್ವತವನ್ನು ಎತ್ತಿದ ಹಿನ್ನೆಲೆಯಲ್ಲಿ ಈ ದಿನ ಈಗಲೂ ಗೋವುಗಳಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.

    ಹೆಚ್ಚಿನ ಕಡೆಗಳಲ್ಲಿ ಆ ದಿನದಂದು ಹಸುವಿನ ಹಾಲನ್ನೂ ಕರೆಯಬಾರದೆಂಬ ಪ್ರತೀತಿ ಇದೆ. ಕರುಗಳು ಬೇಕಾದಷ್ಟು ಹಾಲು ಕುಡಿದು ಸಂತೋಷವಾಗಿರಬೇಕೆಂಬುದು ಇದರ ಉದ್ದೇಶ. ಸರ್ವಸಮೃದ್ಧಿಯುಂಟಾಗಿ, ಧನಕನಕಗಳು ವೃದ್ಧಿಯಾಗುವಂತೆ ಇದೇ ದಿನ ಧನಲಕ್ಷ್ಮಿ ಪೂಜೆಯ ಮೂಲಕ ಲಕ್ಷ್ಮಿಯನ್ನು ಒಲಿಸಿಕೊಳ್ಳಲಾಗುತ್ತದೆ. ಈ ರೀತಿ ಮಾಡುವುದರಿಂದ ಬಲಿ ಚಕ್ರವರ್ತಿಯ ರಾಜ್ಯದಲ್ಲಿದ್ದಂತೆ ಎಲ್ಲಾ ಸುಖೋಪಭೋಗಗಳು ದೊರೆಯುವುದು ಎಂಬ ನಂಬಿಕೆ ಜನರಲ್ಲಿದೆ. ಒಟ್ಟಾರೆ ಮೂರು ದಿನಗಳ ಕಾಲ ನಡೆಯುವ ದೀಪಾವಳಿ ಸಂಭ್ರಮದಲ್ಲಿ ಗೋ ಪೂಜೆ ಕೂಡ ಪ್ರಾಮುಖ್ಯತೆ ಪಡೆದುಕೊಂಡಿದ್ದು, ಇದು ಭೂಲೋಕದ ಕಾಮಧೇನುವಿಗೆ ನೀಡಿದ ಮಹತ್ವವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

  • ಬಲಿಪಾಡ್ಯಮಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ

    ಬಲಿಪಾಡ್ಯಮಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ

    ಹೊಸಕೋಟೆ: ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಬಲಿಪಾಡ್ಯಮಿ ದಿನದಂದು ರಾಜ್ಯದ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದ್ದಾರೆ.

    GOVU POOJA

    ಗೋವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತಂದು ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಲಾಗುವುದು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಿ ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆ ಮಾಡಲಾಗುವುದು. ಅಂದು ಸಂಜೆ 5:30 ರಿಂದ 6:30 ರವರೆಗೆ ಗೋಧೋಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಮಾಡಿ ಸ್ಪೆಷಲ್ ಬರ್ಫಿ

    FIRECRACKERS

    ಗೋಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಕ್ರಮವಹಿಸುವುದರ ಜೊತೆಯಲ್ಲಿ ಗೋವುಗಳನ್ನು ದೇವಸ್ಥಾನಕ್ಕೆ ಕರೆತರುವುದು ಹಾಗೂ ಕಳುಹಿಸುವ ಪೂಜೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾವುದು. ಇದನ್ನೂ ಓದಿ: ಶೇರ್‌ ಮಾಡೋದನ್ನು ನಿಲ್ಲಿಸಿ – ವೈರಲ್ ಆಗಿರುವ ಅಪ್ಪು ಫೋಟೋ ಸೀಕ್ರೆಟ್ ರಿವಿಲ್

    ಗೋವುಗಳು ಅಲಭ್ಯವಾದಲ್ಲಿ ಸ್ಥಳೀಯ ಗೋಶಾಲೆ ಮಠದಲ್ಲಿರುವ ಇಲಾಖೆಯ ಗೋವುಗಳು ಅಥವಾ ಹತ್ತಿರದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಸಂಪರ್ಕಿಸುವುದು. ಪೂಜಾ ಸಂದರ್ಭದಲ್ಲಿ ಅಧಿಕಾರಿ/ ಸಿಬ್ಬಂದಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಮಾಡುವುದು ಕಡ್ಡಾಯ ಎಂದು ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

    GOVU

    ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೆನಡಾ ರಕ್ಷಣಾ ಸಚಿವರಾಗಿ ಭಾರತ ಮೂಲದ ಅನಿತಾ ಆನಂದ್ ಆಯ್ಕೆ

    ಆ ದಿನ ಗೋವುಗಳನ್ನು ದೇವಾಲಯಕ್ಕೆ ಕರೆತಂದು ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಬೇಕು. ನಂತರ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸುಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಬೇಕು ಎಂದು ತಿಳಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.

    GOVU POOJA

    ಅನಾದಿಕಾಲದಿಂದಲೂ ನಮ್ಮ ಪೂರ್ವಿಕರು ಗೋವಿನ ಪೂಜೆ ಮಾಡುತ್ತಿದ್ದರು. ಇದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ಕರ್ನಾಟಕದಲ್ಲೂ ಹಿಂದಿನಿಂದಲೂ ಗೋಪೂಜೆ ಮಾಡುವ ಪದ್ಧತಿ ಇತ್ತು. ಆದರೆ ಆಧುನಿಕ ಕಾಲದಲ್ಲಿ ನಮ್ಮ ಜನತೆ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಅಧಿಕೃತ ಅರ್ಜಿ ಸಲ್ಲಿಕೆ

    ಬಲಿಪಾಡ್ಯಮಿ ದಿನ ಗೋಪೂಜೆ ಮಾಡುವುದು ಶ್ರೇಷ್ಠ. ಈ ಪದ್ಧತಿಯನ್ನು ನಾಡಿನ ಜನತೆ ಮರೆಯಬಾರದು ಎಂದು ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.