Tag: ಬಸನಗೌಡಾ ಪಾಟೀಲ್ ಯತ್ನಾಳ್

  • ಚಹಾ, ಸಿಗರೇಟ್ ತಂದುಕೊಡುವಂತಹ ರೌಡಿಗಳಿಂದ ನಾನೇನು ಕಲಿಯಬೇಕಿಲ್ಲ: ಯತ್ನಾಳ್

    ಚಹಾ, ಸಿಗರೇಟ್ ತಂದುಕೊಡುವಂತಹ ರೌಡಿಗಳಿಂದ ನಾನೇನು ಕಲಿಯಬೇಕಿಲ್ಲ: ಯತ್ನಾಳ್

    – ಮಾನ ಇದ್ದವರಿಗೆ ಮಾನನಷ್ಟ ಅಗುತ್ತೆ

    ವಿಜಯಪುರ: ಚಹಾ, ಸಿಗರೇಟ್ ತಂದುಕೊಡುವಂತಹ ರೌಡಿಗಳಿಂದ ನಾನೇನು ಕಲಿಯಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ ಕಿಡಿಕಾರಿದರು.

    ಡಿಕೆಶಿ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ ಒಂದು ಬಾರಿ ಮಾನನಷ್ಟ ಮೊಕದ್ದಮೆ ಹಾಕಿದ್ದಾನೆ. ಮತ್ತೇನು ಹಾಕ್ತಾನೆ. ಹಣ ಇದೆ ಹಾಕ್ತಾನೆ, ಹಾಕಲಿ ಅದರಿಂದ ಏನಾಗುತ್ತೆ. ಮಾನ ಇದ್ದವರಿಗೆ ಮಾನನಷ್ಟ ಆಗುತ್ತೆ. ಮಾನ ಇಲ್ಲದವರಿಗೆ ಏನು ಮಾನನಷ್ಟ ಆಗುತ್ತೆ. ಕೋತ್ವಾಲ್ ರಾಮಚಂದ್ರನಿಗೆ ಚಹಾ, ಸಿಗರೇಟ್ ತಂದುಕೊಡುವಂತಹ ರೌಡಿಗಳಿಂದ ನಾನೇನು ಕಲಿಯಬೇಕಾಗಿಲ್ಲ ಎಂದು ಟಾಂಗ್ ನೀಡಿದರು ಇದನ್ನೂ ಓದಿ: ಪತಿ ಆಸೆ ಈಡೇರಿಸಿದ ಪತ್ನಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

    ಧ್ವನಿವರ್ಧಕ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನಂತೆ ಧ್ವನಿವರ್ಧಕ ವಿಷಯದಲ್ಲಿ ನಡೆಯಬೇಕಾಗುತ್ತೆ. ಸರ್ಕಾರ ಇದನ್ನು ಪಾಲಿಸಬೇಕು. ಈ ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಸರಿಯಾಗಿ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು ಎಂದು ವಿವರಿಸಿದರು.

    ಉತ್ತರ ಪ್ರದೇಶದಲ್ಲಿ ಯಾವ ರೀತಿ ಕ್ರಮ ಜರುಗಿಸಿದ್ದಾರೆ. ಅದೇ ರೀತಿ ನಮ್ಮಲ್ಲಿ ಏಕೆ ಮಾಡುವುದಕ್ಕೆ ಆಗುವುದಿಲ್ಲ. ಗೃಹ ಸಚಿವರು ಈ ಕೂಡಲೇ ಕ್ರಮಕ್ಕೆ ಮುಂದಾಗಬೇಕು. ದೇವಸ್ಥಾನ, ಮಸೀದಿ, ಚರ್ಚ್ ಯಾವುದೇ ಇರಲಿ, ನಿಯಮ ಮೀರಿ ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದರು.

    ಒಂದು ವೇಳೆ ಅವರು ಹೇಳಿದಂತೆ ಕೇಳದೆ ಹೋದ್ರೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹೇಳಿದಂತೆ ದೇವಸ್ಥಾನಗಳಲ್ಲಿ ಹನುಮಾನ್ ಚಾಲಿಸಾ, ಸುಪ್ರಭಾತ, ಭಕ್ತಿಗೀತೆ 5 ಬಾರಿ ನುಡಿಸಬೇಕು ಎಂಬ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದರು. ಇದನ್ನೂ ಓದಿ:  ಧ್ವನಿವರ್ಧಕ ಗಲಾಟೆ ಮುಗಿದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಿದೆ: ಸಂಜಯ್ ರಾವತ್

  • ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಿಡಿದ ಯತ್ನಾಳ್

    ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಿಡಿದ ಯತ್ನಾಳ್

    ವಿಜಯಪುರ: ವರದಿ ತಿರಸ್ಕಾರ ಹಾಗೂ ಮಿಕ್ಕ ವಿಷಯವನ್ನು ಆಮೇಲೆ ಪರಿಶೀಲಿಸಿ. ಮೊದಲು ರಾಜ್ಯಕ್ಕೆ 5 ಸಾವಿರ ಕೋಟಿ ರೂ. ಪರಿಹಾರ ಹಣ ಬಿಡುಗಡೆ ಮಾಡಿ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಅಧಿಕಾರಿಗಳ ತಂಡದ ವರದಿ ತೆಗೆದುಕೊಂಡು ಏನು ಮಾಡುವುದು? ಖುದ್ದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಗೃಹ ಸಚಿವ ಅಮಿತ್ ಶಾ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಜನರ ಪರದಾಟವನ್ನ, ಕಷ್ಟವನ್ನ ಕಣ್ಣಾರೆ ನೋಡಿದ್ದಾರೆ. ಇಷ್ಟು ಸಾಕು ನಂತರ ರಾಜ್ಯದ ವರದಿ ಹಾಗೂ ಕೇಂದ್ರದ ವರದಿ ತರಿಸಿ ತಾಳೆ ಹಾಕಿ. ಮೊದಲು ಜನರಿಗೆ 5 ಸಾವಿರ ಕೋಟಿ ರೂ. ಪರಿಹಾರ ನೀಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದರು. ಇದನ್ನೂ ಓದಿ:6 ವರ್ಷ ಕಾಂಗ್ರೆಸ್ ಲೂಟಿ ಮಾಡಿ ಎಲ್ಲ ರೀತಿಯಲ್ಲೂ ರಾಜ್ಯ ದಿವಾಳಿಯಾಗಿತ್ತು – ಸಿದ್ದುಗೆ ರವಿ ತಿರುಗೇಟು

    ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ದಿವಾಳಿ ಎದ್ದಿಲ್ಲ. ಸಿಎಂ ಯಡ್ಡಿಯೂರಪ್ಪ ಅವರ ಜೊತೆ ಬೆಳಗ್ಗೆ ಮಾತನಾಡಿದ್ದೇನೆ, ನೆರೆ ಪರಿಹಾರಕ್ಕೆ ಕೊಡುವಷ್ಟು ಹಣ ಇಲ್ಲ. ಕೇಂದ್ರ ಸರ್ಕಾರದ ನೆರವು ಅಗತ್ಯವಿದೆ ಎನ್ನುವ ಅರ್ಥದಲ್ಲಿ ಅವರು ಹೇಳಿಕೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ದಿವಾಳಿ ಆಗಿದ್ದರೆ ನಮ್ಮ ಕ್ಷೇತ್ರಕ್ಕೆ 300 ಕೋಟಿ ಅನುದಾನ ಹೇಗೆ ನೀಡುತ್ತಿದ್ದರು ಎಂದು ಪ್ರಶ್ನಿಸಿದರು. ಹಾಗೆಯೇ ಬಿಎಸ್‍ವೈ ಅವರಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ. ಹಿಂದಿನವರು ಬೇಕಾಬಿಟ್ಟಿ ಸಾಲ ಮನ್ನಾ ಮಾಡಿ ದಿವಾಳಿ ಮಾಡಿದ್ದಾರೆ. 54 ಸಾವಿರ ಕೋಟಿ ರೂ. ಸಾಲ ಮನ್ನಾ ಎಂದು ಹೇಳಿ ಎಚ್‍ಡಿಕೆ ಓಡಿ ಹೋಗಿದ್ದಾರೆ. ಈಗ ಬಿಜೆಪಿ ಸರ್ಕಾರ ದಿವಾಳಿ ಮಾಡಿದೆ ಎಂದು ಸಿದ್ಧರಾಮಯ್ಯ ಹೇಳ್ತಾರೆ. ಅವರೆಲ್ಲ 6 ವರ್ಷ ಸೇರಿ ದಿವಾಳಿ ಮಾಡಿದ್ದಾರೆ. ಈಗ ಯಡಿಯೂರಪ್ಪ ಅವರು ಜಾದು, ಮಂತ್ರ ಮಾಡಲು ಬರಲ್ಲ ಎಂದು ಎಚ್‍ಡಿಕೆ ಹಾಗೂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ:ಬೇಜವಾಬ್ದಾರಿ ಹೇಳಿಕೆ ನೀಡಿದರೆ ಸುಮ್ಮನಿರಲ್ಲ – ತೇಜಸ್ವಿ ಸೂರ್ಯ ವಿರುದ್ಧ ಯತ್ನಾಳ್ ಕಿಡಿ

    ರಾಜ್ಯ ಸರ್ಕಾರಕ್ಕೆ ತನ್ನ ಸೀಮಿತ ಕೆಲಸ ಮಾಡಲು ಹಣ ಇದೆ. ಪ್ರವಾಹದ ಒಟ್ಟು ಪರಿಹಾರ ಹಣ ಭರಿಸಲು ಆಗಲ್ಲ ಎನ್ನುವ ಭಾವನೆಯಿಂದ ಸಿಎಂ ಹೇಳಿಕೆ ಕೊಟ್ಟಿದ್ದಾರೆ. ನೆರೆ ಪೀಡಿತ ಪ್ರದೇಶದ ಶಾಸಕರ ಮೇಲೆ ಜನರ ಒತ್ತಡವಿದೆ. ಶಾಸಕ ಆನಂದ ಮಾಮನಿ ಕೇಳಿದ್ದಕ್ಕೆ ಹಣದ ಕೊರತೆ ಇದೆ, ವ್ಯವಸ್ಥೆ ಮಾಡೋದಾಗಿ ಹೇಳಿದ್ದಾರಷ್ಟೇ ಎಂದು ಸಿಎಂ ಹೇಳಿಕೆಯನ್ನು ಯತ್ನಾಳ್ ಸಮರ್ಥಿಸಿಕೊಂಡರು. ಜೊತೆಗೆ ಕೇಂದ್ರ ಸರ್ಕಾರ ಕರ್ನಾಟಕದ ಜನರ ನೋವಿಗೆ ಸ್ಪಂದಿಸಿ ನೆರವಾಗುತ್ತೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

  • ಬಿಎಸ್‍ವೈ ನಂತ್ರ ಡೈನಾಮಿಕ್ ಲೀಡರ್ ನಾನೇ: ಯತ್ನಾಳ್

    ಬಿಎಸ್‍ವೈ ನಂತ್ರ ಡೈನಾಮಿಕ್ ಲೀಡರ್ ನಾನೇ: ಯತ್ನಾಳ್

    – ಎಂಬಿಪಿ ಬಿಜೆಪಿಗೆ ಬಂದ್ರೆ ಅವ್ರ ಪರ ನಾನು ನಿಲ್ತೀನಿ
    – ಸಿಎಂ ಆಗಲು ನನಗೆ ಅರ್ಹತೆ ಇದೆ

    ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷಕ್ಕೆ ಸ್ಥಾನಕ್ಕೆ ನಾನು ಟವೆಲ್ ಹಾಕಿದ್ದೇನೆ. ಹಾಗೇ ಉತ್ತರ ಕರ್ನಾಟಕದಿಂದ ಮುಖ್ಯಮಂತ್ರಿಯಾಗಲು ನನಗೂ ಅರ್ಹತೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಶಾಸಕರು, ನನ್ನ ವಿರುದ್ಧ ಯಾವುದೇ ಹಗರಣ, ಪ್ರಕರಣ ದಾಖಲಾಗಿಲ್ಲ. ಹೀಗಾಗಿ ನಾನು ಕೂಡ ಸಿಎಂ ಅಭ್ಯರ್ಥಿಯಾಗಲು ಅರ್ಹನಾಗಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬದುಕಿರುವವರೆಗೂ ಅವರೇ ಮುಖ್ಯಮಂತ್ರಿ ಆಗುತ್ತಾರೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ರಾಜ್ಯ ನಾಯಕರಿಂದ ಮಾಹಿತಿ ಪಡೆದಿದೆ. ಯಡಿಯೂರಪ್ಪ ಅವರ ನಂತರ ನಾನೇ ಡೈನಾಮಿಕ್ ಲೀಡರ್ ಎಂದು ಹೇಳಿದರು.

    ಮಂತ್ರಿಗಿರಿ ನೀಡಲಿಲ್ಲ ಅಂತ ಗೃಹ ಸಚಿವ ಎಂ.ಬಿ.ಪಾಟೀಲ್ ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು. ಆಗ ಅವರನ್ನು ಬಿಜೆಪಿಗೆ ತರುವ ಪ್ರಯತ್ನ ಮಾಡಿದ್ದೇವು. ಬಿಜೆಪಿಗೆ ಬಂದರೆ ಸಚಿವರಿಗೆ ಉತ್ತಮ ಭವಿಷ್ಯವಿದೆ ಎಂದರು.

    ಎಂ.ಬಿ.ಪಾಟೀಲ್ ಅವರು ಬಿಜೆಪಿಗೆ ಬರಲಿ. ಸಚಿವರ ಪರವಾಗಿ ನಾನು ನಿಲ್ಲುತ್ತೇನೆ. ನನಗೆ ಮಂತ್ರಿ ಸ್ಥಾನ ಬೇಡ. ಎಂ.ಬಿ.ಪಾಟೀಲರಿಗೆ ಬೇಕಾಗಿರುವ ನೀರಾವರಿ ಖಾತೆ ಜೊತೆಗೆ ಬೇರೆ ಖಾತೆಗೂ ಲಾಬಿ ಮಾಡುತ್ತೇನೆ. ಆದರೆ ಉತ್ತರ ಕರ್ನಾಟಕದ ಸಿಎಂ ಅಭ್ಯರ್ಥಿ ನಾನೇ ಎಂದು ತಿಳಿಸಿದರು.

  • ಬಿಜೆಪಿ ಸೇರದೇ, ಬಿಎಸ್‍ವೈಯನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸ್ತೀನಿ: ಬಸನಗೌಡ ಪಾಟೀಲ್ ಯತ್ನಾಳ್

    ಬಿಜೆಪಿ ಸೇರದೇ, ಬಿಎಸ್‍ವೈಯನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸ್ತೀನಿ: ಬಸನಗೌಡ ಪಾಟೀಲ್ ಯತ್ನಾಳ್

    ವಿಜಯಪುರ: ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಿದರೆ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸುತ್ತೇನೆ ಎಂದು ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮುಂದೇ ರಾಜ್ಯದ ಮುಖ್ಯಮಂತ್ರಿಯಾಗಲಿರುವ ಯಡಿಯೂರಪ್ಪನವರು ವಿಜಯಪುರದಿಂದ ಸ್ಪರ್ಧಿಸಿದರೆ ಜಿಲ್ಲೆಯ ಪಾಲಿಗೆ ಸೌಭಾಗ್ಯ ಸಿಗಲಿದೆ ಎಂದು ಹೇಳಿದರು.

    ಅಷ್ಟೇ ಅಲ್ಲದೇ ಯಡಿಯೂರಪ್ಪ ಅವರು ವಿಜಯಪುರ ನಗರದಿಂದ ಬಿಟ್ಟು ಜಿಲ್ಲೆಯ ಬೇರೆ ಯಾವುದೇ ಮತಕ್ಷೇತ್ರದಿಂದ ಸ್ಪರ್ಧಿಸಿದರೂ ನಾನು ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿ ತರುತ್ತೇನೆ. ಆದರೆ ನಾನು ಬಿಜೆಪಿ ಸೇರದೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

    ಉತ್ತರ ಕರ್ನಾಟಕ ಭಾಗದಲ್ಲಿ ವೀರಶೈವ – ಲಿಂಗಾಯತ ಸಮುದಾಯದ ಮತಗಳ ಮೇಲೆ ಕಣ್ಣು ಹಾಕಿರುವ ಬಿಜೆಪಿ ಯಡಿಯೂರಪ್ಪ ಅವರನ್ನು ಈ ಭಾಗದಿಂದ ಕಣಕ್ಕೆ ಇಳಿಸಲು ಮುಂದಾಗುತ್ತಿದೆ. ಹೀಗಾಗಿ ಸೋಮವಾರದಿಂದ ಬಿಎಸ್‍ವೈ ಮುಂದಿನ ಚುನಾವಣೆಯಲ್ಲಿ ಎಲ್ಲಿಂದ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಬಗ್ಗೆ ರಾಜಕೀಯ ವಲಯದಲ್ಲಿ ಜೋರು ಚರ್ಚೆ ನಡೆಯುತ್ತಿದೆ.

    ಇದನ್ನೂ ಓದಿ: ಒಂದೇ ಏಟಿಗೆ ಎರಡ್ಹಕ್ಕಿ ಹೊಡೆದ ಚಾಣಕ್ಯ-ಲಿಂಗಾಯತ ಮತವೂ ಅಬಾಧಿತ, ಬಿಎಸ್‍ವೈಯೂ ದುರ್ಬಲ!