ಹುಬ್ಬಳ್ಳಿ: ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದ್ದು, ಇಡೀ ರಾಷ್ಟçದಲ್ಲಿ ಕೋವಿಡ್ ಹೆಚ್ಚಳವಾಗಿರುವ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 8-10 ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. ಆದ್ದರಿಂದ ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದೆ. ಕೋವಿಡ್ ತಜ್ಞರಿಂದಲೂ ಸೂಚನೆ ಸಿಕ್ಕಿದೆ. ಕೋವಿಡ್ 2ನೇ ಅಲೆ ಬಂದಾಗ ತುಂಬಾ ಗಂಭೀರವಾಗಿತ್ತು. ಆದರೀಗ ಒಮಿಕ್ರಾನ್ ಯಾವ ರೀತಿಯಲ್ಲಿದೆ ಅನ್ನೋದನ್ನು ಪರಿಶೀಲಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಆಮೀಷವೊಡ್ಡಿ ಮಹಿಳೆಯಿಂದ ವಂಚನೆ
ಇದೇ ವೇಳೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಇ-ಮೇಲ್ ಅನ್ನು ದುಬೈ, ಸೌದಿ ಅರೇಬಿಯಾದಿಂದಲೂ ಮೇಲ್ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ಕೇಂದ್ರ ಸರ್ಕಾರದ ಸಹಕಾರದಿಂದ ಪತ್ತೆಹಚ್ಚುವ ಕಾರ್ಯ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಪಿಎಸ್‌ಐ ನೇಮಕಾತಿಯ ಯಾವುದೇ ಬ್ಯಾಚ್‌ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನೂ ಕೇಳಿಲ್ಲ. ಆದರೆ, ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು? ಅವರ ಅರ್ಹತೆ ಏನೆಂಬುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನೂ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ ಬ್ಯಾಚ್‌ನವರಾಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್
ಇದೇ ವೇಳೆ `ಕಳೆದ 15 ದಿನಗಳ ಹಿಂದೆ ಶಾಲೆಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಇ-ಮೇಲ್ ಸಿರಿಯಾ ಹಾಗೂ ಪಾಕಿಸ್ತಾನದಿಂದ ಬಂದಿದೆ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಇ-ಮೇಲ್ ಮೂಲವನ್ನು ಪತ್ತೆಹಚ್ಚಲಾಗುವುದು. ಈ ಕುರಿತು ಇ-ಮೇಲ್ ಮೂಲವನ್ನು ಪತ್ತೆಹಚ್ಚಲು ಪೊಲೀಸ್ ಆಯುಕ್ತರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಯೂನಿಫಾರ್ಮ್ ಹಾಕ್ಕೊಂಡು ಬಿಲ್ಡಪ್
ಇವೆಲ್ಲವೂ ಆಗಾಗ್ಗೆ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನಗಳಾಗುತ್ತವೆ. ಕಳೆದ ವರ್ಷವೂ ಆಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇ-ಮೇಲ್ ಮೂಲವನ್ನು ಪತ್ತೆ ಹಚ್ಚಲಾಗುವುದು. ಯಾವ ದೇಶದಿಂದ ಬಂದಿದೆ ಎಂದು ಗೊತ್ತಾಗುತ್ತದೆ. ಕೆಲವು ಸಂದರ್ಭದಲ್ಲಿ ಆ ದೇಶದ ಅಧಿಕಾರಿಗಳಿಗೆ ತಿಳಿಸಿ, ಕೆಲವರನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು: ಹಿಜಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಅಲಿಯಾ ಅಸ್ಸಾದಿ ಎಂಬ ವಿದ್ಯಾರ್ಥಿನಿ, ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮತ್ತೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇದೇ ತಿಂಗಳ 22ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಲಿವೆ. ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ಇನ್ನೂ ನಿಮಗೆ ಅವಕಾಶವಿದೆ. ಹಾಗಾಗಿ ನಮಗೆ ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವ ನಿರ್ಧಾರ ಮಾಡಬೇಕು. ನಾವು ದೇಶದ ಭವಿಷ್ಯ ಎಂದು ಹೇಳಿಕೊಂಡಿದ್ದಾರೆ. ಹಿಜಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಅಲಿಯಾ ಅಸ್ಸಾದಿ ಕೂಡ ಒಬ್ಬರು. ಇತರ ಅರ್ಜಿದಾರರಲ್ಲಿ ಆಯಿಷಾ ಪಾಲವ್ಕರ್, ಆಯಿಷಾ ಹಜಾರಾ ಅಲ್ಮಾಸ್ ಮತ್ತು ಮುಸ್ಕಾನ್ ಜೈನಾಬ್ ಸೇರಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಎಕ್ಸಾಂಗೂ ಸಮವಸ್ತ್ರ ಕಡ್ಡಾಯ – ಹಿಜಬ್‍ಗಿಲ್ಲ ಅವಕಾಶ
ಶಾಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಪಾಲಿಸಬೇಕೆಂಬ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಷ್ಟೇ ಅಲ್ಲದೇ ಹಿಜಬ್ ಮುಸ್ಲಿಂ ಧರ್ಮದ ಕಡ್ಡಾಯ ಆಚರಣೆ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಆನಂತರ ಸುಪ್ರೀಂಕೋರ್ಟ್ 2 ಬಾರಿ ತುರ್ತು ವಿಚಾರಣೆಯನ್ನು ಮುಂದೂಡಿತು. ವಿದ್ಯಾರ್ಥಿನಿ ಆಯಿಷಾ ಪರ ವಕೀಲ ದೇವದತ್ ಕಾಮತ್ ತುರ್ತು ಅರ್ಜಿ ವಿಚಾರಣೆ ನಡೆಸಬೇಕು. ಶಾಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರೆ 1 ವರ್ಷ ಹಾಳಾಗುತ್ತದೆ. ಹಾಗಾಗಿ ಶೀಘ್ರ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಾಧೀಶ ರಮಣ ಪೀಠದಲ್ಲಿ ಮನವಿ ಮಾಡಿದ್ದರು. ಇದನ್ನೂಓದಿ: ಹಿಜಬ್‍ಗೂ ಪರೀಕ್ಷೆಗೂ ಸಂಬಂಧವಿಲ್ಲ, ತುರ್ತು ವಿಚಾರಣೆ ನಡೆಸಲ್ಲ: ಸುಪ್ರೀಂ
2nd PU exams are going to start from 22nd of this month. Hon'ble CM @BSBommai you still have a chance to stop our future from getting ruined. You can make a decision to allow us to write exams wearing hijab. Please consider this.We are the future of this country.#HijabisOurRight
ಇದಕ್ಕೆ ಅಸಮಧಾನಗೊಂಡ ಸಿಜೆಐ, ಪ್ರಕರಣಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಸ್ಯೆಯನ್ನು ಸೂಕ್ಷ್ಮಗೊಳಿಸಬೇಡಿ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿ ಮತ್ತೊಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು. ಈ ಹಿಂದೆಯೇ ತುರ್ತು ವಿಚಾರಣೆ ಕೈಗೊಳ್ಳುವಂತೆಯೂ ಮನವಿ ಮಾಡಿದಾಗ ಹೋಳಿ ಹಬ್ಬದ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಈ ನಡುವೆ ವಿದ್ಯಾರ್ಥಿಗಳು ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಅಲಿಯಾ ಅಸ್ಸಾದಿ ಮತ್ತೊಮ್ಮೆ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು: ಯಶವಂತಪುರ ವೃತ್ತದ ಬಳಿ ನಿರ್ಮಿಸಲಾಗಿರುವ ಪಟೇಲ್ ಭೈರಹನುಮಯ್ಯ ಬಹುಮಹಡಿ ವಸತಿ ನಿಲಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ.
ಅಂಬೇಡ್ಕರ್ 131ನೇ ಜಯಂತಿ ಹಿನ್ನೆಲೆಯಲ್ಲಿ ಮೊದಲು ಯಶವಂತಪುರ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ ಮಾಡಿದ್ದಾರೆ ನಂತರ ಬಹುಮಹಡಿ ವಸತಿ ನಿಲಯವನ್ನು ಲೋಕಾರ್ಪಣೆಗೊಳಿಸಿ ತೆರಳಿದ್ದಾರೆ. ಸಿಎಂಗೆ ಸಚಿವರಾದ ಅಶ್ವತ್ಥ್ ನಾರಾಯಣ, ಮುನಿರತ್ನ, ನಿರಾಣಿ, ಸಂಸದ ಸದಾನಂದಗೌಡ ಸೇರಿದಂತೆ ಪ್ರಮುಖ ಗಣ್ಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವುಂಟು ಮಾಡಿದೆ : ಯದುವೀರ್ ಒಡೆಯರ್
ಸುಮಾರು 5.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಹುಮಹಡಿ ಕಟ್ಟಡವು 60 ಮನೆಗಳನ್ನು ಒಳಗೊಂಡಿದೆ. ಇದೇ ವೇಳೆ ಸಿಎಂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೂ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ಮೈಸೂರು: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮಿಷಕ್ಕೊಂದು ಹೇಳಿಕೆ ನೀಡುತ್ತಿರುವ ಅರಗ ಜ್ಞಾನೇಂದ್ರ ಅವರು ಕಾಮಿಡಿ ರೋಲ್ ಮಾಡಲು ಗೃಹ ಸಚಿವರಾಗಿದ್ದಾರಾ? ಅಥವಾ ವಿಲನ್ ರೋಲ್ ಮಾಡುತ್ತೀದ್ದಿರಾ? ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾದ ಚಂದ್ರು ದಲಿತ ಸಮಾಜದ ಯುವಕ ಅಂತಾ ಗೃಹ ಸಚಿವರು ಹೇಳಿದ್ದಾರೆ. ಆದರೆ, ಇಂದು ನೀಡುತ್ತಿರುವ ಹೇಳಿಕೆಗಳು ಅವರ ಸಣ್ಣತನವನ್ನು ತೋರಿಸುತ್ತದೆ. ಸಮಾಜದ ಶಾಂತಿ ಕದಡುವ ವೇಳೆ, ಗೃಹ ಸಚಿವರಿಗೆ ತಮ್ಮ ಸ್ಥಾನದ ಜವಾಬ್ದಾರಿ ಅರಿವಿಲ್ಲದಂತಾಗಿದೆ. ಇದರಲ್ಲಿ ಯಾವುದು ಸತ್ಯ ಎಂಬುದು ತಿಳಿಯದೇ ಮಂತ್ರಿಯೇ ತನಿಖೆಗೆ ಮುನ್ನ ತೀರ್ಪು ಕೊಟ್ಟಿದ್ದಾರೆ. ಹಿಂದೂ ಮುಸ್ಲಿಂ ಮಧ್ಯೆ ಕಂದಕ ತರುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ದೂರಿದ್ದಾರೆ. ಇದನ್ನೂಓದಿ: ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ
ಮೌನ ಮುರಿಯಲಿ ಸಿಎಂ: ಮುಖ್ಯಮಂತ್ರಿಗಳ ಮೌನ ರಾಜ್ಯದಲ್ಲಿ ಅನಾಹುತ ಮಾಡುತ್ತದೆ. ಇಂತಹ ಘಟನೆಗಳನ್ನು ಸರ್ಕಾರ ಪ್ರಾರಂಭಿಕ ಹಂತದಿಂದಲೇ ಸರಿಪಡಿಸಬೇಕು. ಗೃಹಸಚಿವರ ಹೇಳಿಕೆಯಿಂದ ಹಿಂದೂ ಮುಸ್ಲಿಮರ ನಡುವೆ ಸಾಮರಸ್ಯ ಹಾಳಾಗುತ್ತಿದೆ. ಇದರಲ್ಲಿ ನಾನು ಯಾವುದೇ ಸಮಾಜದ ಓಲೈಕೆ ಮಾಡುತ್ತಿಲ್ಲ. ರಾಜ್ಯದ ಎಲ್ಲ ಜನರೂ ನನಗೆ ಮುಖ್ಯ. ಆದ್ದರಿಂದ ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ
ಸಿನಿಮಾಗಳೇ ಕೃತ್ಯಗಳಿಗೆ ಪ್ರೇರಣೆ: ಇತ್ತೀಚಿನ ದಿನಗಳಲ್ಲಿ ಸಿನಿಮಾಗಳೇ ಹುಡುಗರಿಗೆ ಈ ರೀತಿಯ ಕೃತ್ಯ ಎಸಗಲು ಪ್ರೇರಣೆ ನೀಡುತ್ತಿವೆ. ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಇಂತಹ ಸಿನಿಮಾಗಳನ್ನು ಮಾಡಂದತೆ ನಿರ್ದೇಶಕರಿಗೂ ಎಚ್ಚರ ವಹಿಸಬೇಕು. ಈ ಪ್ರಕರಣದಲ್ಲಿ ಮುಸ್ಲಿಂ ಯುವಕರು ಎಂದು ಕನಿಕರ ತೋರದೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಬೇರೆ ಬೇರೆ ವಿಚಾರಕ್ಕೆ ಕೊಲೆಯಾದವು, ಆದರೆ, ಕೊಲೆ ವಿಚಾರದಲ್ಲಿ ಬಿಜೆಪಿ ಸೆಲೆಕ್ಟಿವ್ ಆಗಿ ಕಾರ್ಯ ಪ್ರವೃತವಾಗುತ್ತದೆ ಇದು ಸರಿಯಲ್ಲ ಎಂದು ಕುಟುಕಿದರು.
ಇದೇ ವೇಳೆ ಸಮಾಜ ಹಾಳು ಮಾಡಿ, ಕುಟುಂಬಗಳ ಬೀದಿಗೆ ತಂದು ಮತ್ತೆ ಸಿಎಂ ಆಗುವ ಆಸೆ ನನಗೆ ಇಲ್ಲ. ನಾನು ಎರಡು ರಾಜಕೀಯ ಪಕ್ಷಗಳನ್ನು ಈ ರಾಜ್ಯದಿಂದ ಕಿತ್ತಾಕುವ ಸುಪಾರಿಯನ್ನು ಜನರಿಂದ ಪಡೆದಿದ್ದೇನೆ. ನಾನು ಯಾವ ಸಮಾಜದ ಓಲೈಕೆಗೂ ರಾಜಕಾರಣ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಹಲಾಲ್ ಕಟ್, ಜಟ್ಕಾ ಕಟ್ ಬಿಟ್ಟುಬಿಡಿ. ಬೆಲೆ ಏರಿಕೆ ವಿರುದ್ಧ ಹೋರಾಡಿ. ನಾನೂ ಕೇಸರಿ ಶಾಲು ಧರಿಸಿ ಹೋರಾಟಕ್ಕೆ ಬರುತ್ತೇನೆ. ಬೆಲೆ ಏರಿಕೆ ವಿರುದ್ಧ ಹೋರಾಟಕ್ಕೆ ರೆಡಿ ಇದ್ದೀರಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸ್ಲೀಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್, ಹಿಜಬ್ ವಿವಾದ ಸೇರಿದಂತೆ ಭಜರಂಗದಳ, ಹಿಂದೂಪರ ಸಂಘಟನೆಗಳ ವಿರುದ್ಧ ಟೀಕಾಪ್ರಹಾರ ಮುಂದುವರೆಸಿದರು.
ಎಲ್ಲಿ ಇತ್ತು ಜಾತಿ ವ್ಯವಸ್ಥೆ? ಎಲ್ಲಿ ಇತ್ತು ಹಿಂದೂ ದೇಶ? ಎಲ್ಲವೂ ನಮ್ಮನಮ್ಮ ಅನುಕೂಲಕ್ಕೆ ಮಾಡಿಕೊಂಡದ್ದು. ಧರ್ಮ ವಿಭಜನೆ ಮಾಡಿ ಮಜಾ ತಗೊಳ್ಳುವವರು, ಉರಿಯುವ ಮನೆಯಲ್ಲಿ ಗಳ ಇರಿಯೋ ಕಾಯಕ ಮಾಡ್ತಿದ್ದೀರಿ. ಬಿಜೆಪಿ ಹಿಂದೂ ಧರ್ಮದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡಿಲ್ಲ, ಅವರಿಗೆ ಬೇಕಾದಗ ಮಾತ್ರ ಒಟ್ಟಿಗೆ ತೆಗೆದುಕೊಳ್ಳುತ್ತಾರೆ. ಇದನ್ನೆಲ್ಲಾ ಇಲ್ಲಿಗೇ ನಿಲ್ಲಿಸಿ, ಬಡವರನ್ನ ರಕ್ಷಿಸಿ ಎಂದು ಕರೆನೀಡಿದ್ದಾರೆ. ಇದನ್ನೂ ಓದಿ: ಗಂಡಸ್ತನ ಪದ ಬಳಕೆಗೆ ಹೆಚ್.ಡಿ.ಕುಮಾರಸ್ವಾಮಿ ವಿಷಾದ
ಬಿಜೆಪಿ ಜನರನ್ನು ನಿರ್ಗತಿಕರನ್ನಾಗಿ ಮಾಡುತ್ತಿದೆ. ಇದರಲ್ಲಿ ಕಾಂಗ್ರೆಸ್ ಪಾಲೂ ಇದೆ ಎರಡು ರಾಷ್ಟ್ರೀಯ ಪಕ್ಷಗಳು 150ರ ರೋಡ್ ಮ್ಯಾಪ್ ಪ್ಲಾನ್ ಮಾಡಿಕೊಂಡು ಮನೆ ಮನೆಗೆ ಬೆಂಕಿ ಹಚ್ಚಲು ಹೊರಟ್ಟಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಬಿಜೆಪಿಯ ಬಿ-ಟೀಮ್ ಎಂದು ಸಾರಿದ್ದ ಸಿದ್ದರಾಮ್ಯಯ ಅವರೇ ಈಗೇನು ದೊಡ್ಡ ಸಾಧನೆ ಮಾಡಿದ್ದೀರಾ? ಹಿಜಬ್ ಹೆಸರು ಹೇಳ್ಬೇಡಿ ಹಿಂದೂ ಓಟ್ ಹೋಗುತ್ತೆ ಎಂದು ನಿಮ್ಮ ಅಧ್ಯಕ್ಷರೇ ಹೇಳಿದ್ದಾರೆ. ಹಿಂದೂ ಮುಸ್ಲಿಂ ನವರು ದಡ್ಡರಲ್ಲ. ವಿಶ್ವ ಹಿಂದೂ ಪರಿಷತ್‌ನವರು ಬೆಂಕಿ ಹಚ್ಚಲು ಬರುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬಹಳ ಸಲ ಗಂಡಸ್ತತನ ಪ್ರೂವ್ ಮಾಡಿದ್ದಾರೆ: ಸಿ.ಟಿ.ರವಿ
ಮೌನಿ ಬಾಬಾ ಬೊಮ್ಮಾಯಿ: ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮೌನದ ಬಗ್ಗೆ ಟೀಕಿಸಿರುವ ಹೆಚ್.ಡಿ.ಕುಮಾರಸ್ವಾಮಿ, ಇಷ್ಟೆಲ್ಲಾ ವಿವಾದ ಇದ್ದರೂ ಸಿಎಂ ಬಸವರಾಜ ಬೊಮ್ಮಾಯಿ ಮೌನಿ ಬಾಬಾ ಆಗಿದ್ದಾರೆ. ಮನ್ ಮೋಹನ್ ಸಿಂಗ್ ಮೌನಿ ಅನ್ನುತಿದ್ದರು ಈಗ ಬೊಮ್ಮಾಯಿ ಮೌನವಾಗಿದ್ದಾರೆ. ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ ರಿಮೋಟ್ ಕಂಟ್ರೋಲ್ ನಲ್ಲಿ ನಡೆಯುತ್ತಿದೆ ಎಂದು ಕಿಡಿಕಾರಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ರಾಜ್ಯದಲ್ಲಿ ಸೌಹಾರ್ದತೆಗೆ ಧಕ್ಕೆ ಬಂದಾಗ ಮೌನವಾಗಿದ್ದವರು ಯಾರು? ಅಧಿವೇಶನದಲ್ಲಿ ಸುಮ್ಮನೆ ಕೂತವರು ಯಾರು? ಮತಾಂತರ ಬಿಲ್ ಬಗ್ಗೆ ಬೆಳಗಾವಿಯಲ್ಲಿ ಎದುರಿಸಲಾಗದೇ ಪಲಾಯನ ಮಾಡಿದ್ದು ಯಾಕೆ? ಗೋಹತ್ಯೆ ಬಿಲ್ ಬಂದಾಗ ಸದನದಲ್ಲಿ ಗೊಂದಲ ಸೃಷ್ಟಿಸಿದ್ದು ಯಾರು? ಗೋಹತ್ಯೆ ನಿಷೇಧ ಕಾಯ್ದೆ ವಿರುದ್ದ ಮೊದಲು ರಾಷ್ಟ್ರಪತಿಗೆ ದೂರು ಕೊಟ್ಟಿದ್ದು ದೇವೇಗೌಡರು. ನಮ್ಮ ಪಕ್ಷವೇ ಮೊದಲು ಅದರ ಬಗ್ಗೆ ಧ್ವನಿ ಎತ್ತಿದ್ದು. ನಾವು ಅದರ ವಿರುದ್ಧ ಮತ ಚಲಾಯಿಸಲು ತಯಾರಿದ್ದೆವು. ಅವರ ತಪ್ಪು ಇಟ್ಕೊಂಡು ನಮ್ಮ ಬಗ್ಗೆ ಮತನಾಡಲು ಕಾಂಗ್ರೆಸ್‌ಗೆ ನೈತಿಕತೆ ಏನಿದೆ ಎಂದು ಹೇಳಿದರು. ಇದನ್ನೂ ಓದಿ: ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ: ಈಶ್ವರಪ್ಪ
ರಾಜ್ಯದಲ್ಲಿ ಬೆಂಕಿಹಚ್ಚಿದ್ದು ಕಾಂಗ್ರೆಸ್
ರಾಹುಲ್‌ಗಾಂಧಿ ಬಂದಾಗ ಸಿದ್ದರಾಮಯ್ಯ, ಹಲಾಲ್ ಹಾಗೂ ಹಿಜಬ್ ವಿಚಾರದಲ್ಲಿ ನಾವು ಮಾತನ್ನಾಡಬೇಕಿತ್ತು ಎಂದು ಹೇಳುತ್ತಾರೆ. ಇಷ್ಟಾದ ಮೇಲೂ ಜೆಡಿಎಸ್ ಬಿಜೆಪಿಯ ಬಿ-ಟೀಮ್ ಎಂದು ಹೇಳುತ್ತಾರೆ. ನೀವೆ ರಾಜ್ಯದಲ್ಲಿ ಬೆಂಕಿ ಹಚ್ಚಿದ್ದು, ನೀವೇ ಬಿಜೆಪಿ ಸರ್ಕಾರ ನಿರ್ಮಾಣ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು, ಇನ್ನಾದರೂ ಹಲಾಲ್, ಹಿಜಬ್ ವಿಚಾರದಲ್ಲಿ ಧೈರ್ಯವಾಗಿ ಎದುರಿಸಿ ಎಂದು ಕುಟುಕಿದರು.
ಅಲ್ಲದೆ, ಬಿಜೆಪಿಯವರು ನಾನು ದಾರ್ಶನಿಕ ಎನ್ನುತ್ತಾರೆ, ನಾನು ದಾರ್ಶನಿಕ ಎಂದು ಬೋರ್ಡ್ ಹಾಕಿಕೊಂಡಿಲ್ಲ, ನೀವೆ ಹಾಕಿಕೊಂಡಿರುವುದು.ನಾನು ಸಮಾಜ ಪರಿವರ್ತನಾಕಾರಕ ಅಲ್ಲ, ಇಂತ ವಿಷಯ ತೆಗೆದು ಮತಬ್ಯಾಂಕ್ ಮಾಡಲ್ಲ, ಬೆಂದ ಮನೆಯಲ್ಲಿ ಗಳ ಇಡುವ ಬುದ್ಧಿ ನನಗಿಲ್ಲ, ಕಂದಾಚಾರ ಇರುವ ನೀವು ನನಗೆ ಬುದ್ದಿ ಹೇಳುತ್ತೀರಾ? ಎಂದು ತಿರುಗೇಟು ನೀಡಿದ್ದಾರೆ.
ಯುಗಾದಿಗೆ ಇಷ್ಟು ಪ್ರಚಾರ ಯಾವತ್ತು ಸಿಕ್ಕಿರಲಿಲ್ಲ. ಒಳ್ಳೆಯ ಮನರಂಜನೆ ಸಿಕ್ಕಿತು. ಪ್ರತಿದಿನ ಯುಗಾದಿ ಮಾದರಿಯ ಸುದ್ದಿಗಳೇ ವಿಜ್ರಂಭಿಸಲಿದೆ. ಮುಂದಿನ ಚುನಾವಣೆ ವರೆಗೂ ಪರಿಸ್ಥಿತಿ ಹೀಗೆ ಇರಲಿದೆ.
ರಾಮನಗರ: ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಬೊಮ್ಮಾಯಿಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.
ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಪರಿಷತ್, ಭಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ? ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು ಅದೇ ಸಮಾಜದವರೇ ಬರಬೇಕು. ಈಗ ಹಲಾಲ್ – ಜಟ್ಕಾ ಕಟ್ ಅಂತಿದ್ದಾರೆ. ನಿಮ್ಮ ಜಟ್ಕಾ ಮಾಡುವುದಕ್ಕೆ, ಇನ್ನೊಂದು ಮಾಡುವುದಕ್ಕೂ ಅವರೇ ಬರಬೇಕು. ರೇಷ್ಮೆ, ಮಾವು ಬೆಳೆ ಮಾರಾಟಕ್ಕೆ ಈ ಪೋಲಿಸರು ಬರ್ತಾರಾ? ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ಅದನ್ನು ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ವಿಶ್ವ ಹಿಂದೂ ಪರಿಷತ್‍ನವರು ಭಜರಂಗದಳದವರು ಇವರ ಹೊಟ್ಟೆ ಮೇಲೆ ಹೊಡೆಯಲು, ದೇಶ ಹಾಳು ಮಾಡುವುದಕ್ಕೆ ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಇಷ್ಟು ವರ್ಷ ಹಲಾಲ್ ತಿಂದಿದ್ದೇವೆ, ನಮಗೆ ಏನಾಗಿದೆ ಚೆನ್ನಾಗಿದ್ದಿವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಗುತ್ತಾ, ನಮ್ಮ ದೇವರು ಮೆಚ್ಚಲ್ವಾ, ಹೀಗಂತ ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಹೇಳಿಲ್ಲವಲ್ಲ. ಹಲಾಲ್ ಈಗಿನಿಂದಲ್ಲ, ಹಲವಾರು ವರ್ಷಗಳಿಂದಲೂ ನಡೆಯುತ್ತಿದೆ. ಎಂದರು. ಇದೇ ವೇಳೆ ಕೊರೊನಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಆಗ ವಿಶ್ವ ಹಿಂದೂ ಪರಿಷತ್ – ಭಜರಂಗದಳದವರು ಎಲ್ಲಿ ಹೋಗಿದ್ದರು? ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಆಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಚಪ್ಪಲಿ ಏಟು ತಿನ್ನಬಹುದು ಆದರೆ, ದುಡ್ಡೇಟು ತಿನ್ನೋಕೆ ಆಗಲ್ಲ: ಡಿ.ಕೆ ಶಿವಕುಮಾರ್
ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬಸವರಾಜ ಬೊಮ್ಮಾಯಿಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು. ಸಮಾಜ ಹೊಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ. ನೀವು ಯಾವ ಸಂವಿಧಾನವನ್ನು ಗೌರವಿಸುತ್ತಿದ್ದೀರಾ, ಯಾಕೆ ಅಂಬೇಡ್ಕರ್ ಜಯಂತಿ ಆಚರಿಸುತ್ತೀರಿ ಎಂದು ತಿಳಿದುಕೊಳ್ಳಿ ಎಂದು ಕೆಂಡಕಾರಿದ್ದಾರೆ.
ನನಗೆ ಓಟ್ ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಬದುಕಬೇಕು. ಹಾಗಾಗಿ ನಾನು ಮೌನವಾಗಿರಲು ಸಾಧ್ಯವಿಲ್ಲ. ಈ ಬಗ್ಗೆ ಕಾಂಗ್ರೆಸ್‍ನವರಿಗೆ ಮಾತನಾಡಲು ತಾಕತ್ತಿಲ್ಲ. ಹಿಂದೂಗಳು ಓಟ್ ಹಾಕುತ್ತಾರೋ, ಇಲ್ಲವೋ ಎಂಬ ಭಯದಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ಪ್ರತಿಭಟನೆ
ದಾವಣಗೆರೆ: ಉಕ್ರೇನ್ ಯುದ್ಧಭೂಮಿಯಿಂದ 572 ಕನ್ನಡಿಗರನ್ನು ಕರೆತರುವ ಮೂಲಕ ವಿಶ್ವದಾದ್ಯಂತ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸು ಎಷ್ಟಿದೆ ಎಂಬುದು ಗೊತ್ತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧಭೂಮಿಯಲ್ಲಿ ಸೈನಿಕರನ್ನು ಕರೆತರುವುದೇ ಕಷ್ಟಸಾಧ್ಯ. ಅಂತಹದ್ದರಲ್ಲಿ ಸಂಬಂಧವಿಲ್ಲದ ದೇಶದಿಂದ 572 ಕನ್ನಡಿಗರನ್ನು ಹೊರತಂದಿರುವುದು ಸಾಮಾನ್ಯ ಕೆಲಸವಲ್ಲ. ಜೊತೆಗೆ ಇದು ಮೋದಿ ಅವರ ವರ್ಷಸ್ಸು ಹಾಗೂ ಅಂತಾರಾಷ್ಟ್ರೀಯ ಸಂಬಂಧವನ್ನು ತೋರಿಸುತ್ತದೆ ಎಂದು ಶ್ಲಾಘಿಸಿದರು.
Hon’ble @narendramodi ji with your efforts the mortal remains of Naveen Shekharappa Gyangoudar is reaching Bengaluru at 2:45 am on Monday.
ಅಮೇರಿಕಾ ಕೂಡಾ ತನ್ನ ನಾಗರಿಕರನ್ನು ಕೈ ಬಿಟ್ಟಿದೆ. ಆದರೆ, ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ 572 ಕನ್ನಡಿಗರನ್ನು ವಾಪಾಸ್ ತರಲಾಗಿದೆ. ದುರ್ದೈವ ನವೀನ್ ಒಬ್ಬರು ಮೃತಪಟ್ಟಿದ್ದಾರೆ. ಇದು ಮೋದಿಯವರ ಭಗೀರಥ ಪ್ರಯತ್ನ. ಉಕ್ರೇನ್‍ನಿಂದ ಕರೆತರುವಾಗ ಭಾರತೀಯರಿಗೇ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇಂಡಿಯನ್ ಫ್ಲ್ಯಾಗ್ ಹಿಡಿದರೆ ಸಾಕು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದರು. ನಾವು ವಿದೇಶಾಂಗ ಸಚಿವರೊಂದಿಗೆ, ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ನಿಂದ 22,500 ವಿದ್ಯಾರ್ಥಿಗಳು ವಾಪಸ್- ಆಪರೇಷನ್ ಗಂಗಾ ಪೂರ್ಣ
ನವೀನ್ ಮೃತಪಟ್ಟಾಗ ಘಟನೆ ನಡೆದಿದ್ದೇ ಒಂದು ಕಡೆ, ನವೀನ್ ಮೃತದೇಹ ಸಂರಕ್ಷಿಸಿ ಇಟ್ಟಿದ್ದೇ ಮತ್ತೊಂದು ಕಡೆ. ಇನ್ನೂ ಶೆಲ್ಲಿಂಗ್ ದಾಳಿ ನಡೆಯುತ್ತಿದ್ದರೂ ಈ ನಡುವೆ ನವೀನ್ ಪಾರ್ಥೀವ ಶರೀರವನ್ನು ತರಲಾಗಿದೆ. ಈಗ ನವೀನ್ ಬಾಡಿ ಹುಟ್ಟೂರು ತಲುಪಿದೆ ಎಂದ ಸಿಎಂ ನವೀನ್ ಸಾವು ನೆನೆದು ಭಾವುಕರಾದರು. ಇದನ್ನೂ ಓದಿ: ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಡಾ.ಪುನೀತ್ ರಾಜ್‍ಕುಮಾರ್‍ಗೆ ಇಂದು 47ನೇ ಹುಟ್ಟುಹಬ್ಬವಾಗಿದ್ದು, ಈ ವಿಶೇಷ ದಿನದಂದು ಅಪ್ಪುಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭಕೋರಿದ್ದಾರೆ.
ಅಪ್ಪು ಎಲ್ಲರನ್ನು ಅಗಲಿ ನಾಲ್ಕೂವರೆ ತಿಂಗಳಾಗುತ್ತಾ ಬಂದರೂ, ಪುನೀತ್ ನೆನಪು ಮಾತ್ರ ಎಲ್ಲರ ಮನದಲ್ಲಿ ಅಜರಾಮರವಾಗಿದೆ. ಇಂದು ಅಪ್ಪು ಹುಟ್ಟುಹಬ್ಬವನ್ನು ರಾಜ್ಯದೆಲ್ಲೆಡೆ ಅಭಿಮಾನಿಗಳು ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಈ ನಡುವೆ ಅನೇಕ ರಾಜಕೀಯ ಗಣ್ಯರು ಸಹ ಅಪ್ಪು ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ನೆನಪಿಸಿಕೊಳ್ಳುತ್ತಾ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ.
ಬಿ.ಎಸ್. ಯಡಿಯೂರಪ್ಪನವರು, ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.
ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು.
ಬಸವರಾಜ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್
ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು.
ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು. pic.twitter.com/OPkqanw9EV
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು, ನಮ್ಮ ನೆಚ್ಚಿನ ಪುನೀತ್ ರಾಜ್‍ಕುಮಾರ್ ಅವರ ಬದುಕಿನ ಸಾಧನೆಗಳನ್ನು ಪ್ರೇರಣೆಯಾಗಿ ಪಡೆದು ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿಸೋಣ. ಅವರಲ್ಲಿದ್ದ ಸಾಮಾಜಿಕ ಕಳಕಳಿ, ಶಿಕ್ಷಣ ಪ್ರೇಮ, ಆವಿಷ್ಕಾರಿ ಮನೋಭಾವ ಎಲ್ಲರ ಮನೆ-ಮನಗಳಲ್ಲೂ ಬೆಳಗಿಸಿ ಅವರನ್ನು ಅಮರರಾಗಿಸೋಣ ಎಂದು ಶುಭ ಕೋರಿದ್ದಾರೆ.
ನಮ್ಮ ನೆಚ್ಚಿನ ಪುನೀತ್ ರಾಜ್‍ಕುಮಾರ್ ಅವರ ಬದುಕಿನ ಸಾಧನೆಗಳನ್ನು ಪ್ರೇರಣೆಯಾಗಿ ಪಡೆದು ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿಸೋಣ.
— Dr. Ashwathnarayan C. N. (@drashwathcn) March 17, 2022
ಮತ್ತೊಂದೆಡೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ಬೆಟ್ಟದ ಹೂವಾಗಿ ಅರಳಿದೆ. ಎರಡು ನಕ್ಷತ್ರಗಳಾಗಿ ಮಿಂಚಿದೆ. ಅರಸುವಾಗಿ ಚಂದನವನದ ಯುವರತ್ನನಾದೆ. ವೀರ ಕನ್ನಡಿಗನಾಗಿ ಪೃಥ್ವಿಯ ಮೈತ್ರಿ ತೊರೆದು ಪರಮಾತ್ಮನ ಮಿಲನವಾದೆ. ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಪ್ಪು ನೆನಪು ಎಂದಿಗೂ ಅಮರ, ಅಪ್ಪು ಎಂದೆಂದಿಗೂ ಅಜರಾಮರ. ಹ್ಯಾಪಿ ಬರ್ತಡೇ ಅಪ್ಪು ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ರಾಜ್ಯದ 400 ಥಿಯೇಟರ್‌ಗಳಲ್ಲಿ ಜೇಮ್ಸ್ ರಿಲೀಸ್
ಬೆಟ್ಟದ ಹೂವಾಗಿ ಅರಳಿದೆ
ಎರಡು ನಕ್ಷತ್ರಗಳಾಗಿ ಮಿಂಚಿದೆ
ಅರಸುವಾಗಿ ಚಂದನವನದ ಯುವರತ್ನನಾದೆ
ವೀರ ಕನ್ನಡಿಗನಾಗಿ ಪೃಥ್ವಿಯ ಮೈತ್ರಿ ತೊರೆದು ಪರಮಾತ್ಮನ ಮಿಲನವಾದೆ
ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಪ್ಪು ನೆನಪು ಎಂದಿಗೂ ಅಮರ, ಅಪ್ಪು ಎಂದೆಂದಿಗೂ ಅಜರಾಮರ. ಹ್ಯಾಪಿ ಬರ್ತಡೇ ಅಪ್ಪು.