Tag: ಬಸವರಾಜ್ ಮತ್ತಿಮೂಡ್

  • ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಶಾಸಕ ಬಸವರಾಜ್ ಮತ್ತಿಮೂಡ್ ನೆರವು

    ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಶಾಸಕ ಬಸವರಾಜ್ ಮತ್ತಿಮೂಡ್ ನೆರವು

    ಕಲಬುರಗಿ: ಪಬ್ಲಿಕ್ ಟಿವಿಯ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಕಲಬುರಗಿಯ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್ ಸಹ ಕೈ ಜೋಡಿಸಿದ್ದಾರೆ.

    ಶಾಸಕರ ಒಂದು ತಿಂಗಳ ಸಂಬಳ ಸೇರಿದಂತೆ ಒಟ್ಟು ಒಂದೂವರೆ ಲಕ್ಷ ರೂಪಾಯಿ ಹಣವನ್ನು ಪಬ್ಲಿಕ್ ಟಿವಿಯ ಚಾರಿಟೇಬಲ್ ಟ್ರಸ್ಟಿಗೇ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಪಬ್ಲಿಕ್ ಟಿವಿ ಎಸ್‍ಎಸ್‍ಎಲ್‍ಸಿ ಮಕ್ಕಳ ಹಿತ ದೃಷ್ಟಿಯಿಂದ ಒಳ್ಳೆಯ ಸಮಾಜಮುಖಿ ಕೆಲಸ ಮಾಡುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ.

    ಈ ಬಾರಿ ಶೈಕ್ಷಣಿಕ ವರ್ಷವೇ ಮುಗಿಯಿತು ಎಂದು ಎಸ್.ಎಸ್.ಎಲ್.ಸಿ ಮಕ್ಕಳು ನಿರಾಸೆಯನ್ನು ಹೊಂದಿದ್ದರು. ಇಂತಹ ಪರಿಸ್ಥಿತಿಯಲ್ಲಿ ಪಬ್ಲಿಕ್ ಟಿವಿ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಮೂಲಕ ಅವರ ಬಾಳಿನಲ್ಲಿ ಬೆಳಕು ಚೆಲ್ಲಿದ್ದಾರೆ. ಹೀಗಾಗಿ ನನದು ಸಹ ಅಳಿಲು ಸೇವೆ ಇರಲಿ ಎಂದು ಪಬ್ಲಿಕ್ ಟಿವಿಯ ಅಭಿಯಾನದ ಜೊತೆ ಕೈ ಜೋಡಿಸುತ್ತಿದ್ದೇನೆ ಎಂದು ಬಿಜೆಪಿ ಶಾಸಕ ಮತ್ತಿಮೂಡ್ ಹೇಳಿದ್ದಾರೆ.

  • ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್‍ಗೆ ಕೊರೊನಾ

    ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್‍ಗೆ ಕೊರೊನಾ

    ಕಲಬುರಗಿ: ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್ ಅವರಿಗೆ ಕೊರೊನಾ ಸೋಂಕು ತಗುಲಿದೆ.

    ಈ ಕುರಿತು ಶಾಸಕರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಕೊರೊನಾ ಗುಣಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಸೋಂಕು ತಗುಲಿರೋದು ಖಚಿತವಾಗಿದೆ. ಹಾಗಾಗಿ ನನ್ನ ಸಂಪರ್ಕದಲ್ಲಿ ಇದ್ದವರು ಹೋಂ ಕ್ವಾರಂಟೈನ್ ನಲ್ಲಿರಿ. ಗುಣಲಕ್ಷಣಗಳು ಕಂಡು ಬಂದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬಸವರಾಜ್ ಮತ್ತಿಮೂಡ್ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಸ್ವಂತ ಮನೆಯಲ್ಲಿಯೇ ಐಸೋಲೇಶನ್ ಆದ್ರೆ ಅಭಿಮಾನಿಗಳು ಆಗಮಿಸುವ ಸಾಧ್ಯತೆಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಶಾಸಕರು ಸಂಬಂಧಿಕರ ಮನೆಯಲ್ಲಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಶಾಸಕರ ಕುಟುಂಬಸ್ಥರು ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ.