Tag: ಬಸವರಾಜ ದಡೇಸಗೂರು

  • ದಡೇಸೂಗುರು ಪತ್ನಿ ಎಂದು ಹೇಳಿಕೊಂಡಿದ್ದ ಅಧಿಕಾರಿ ವಿರುದ್ಧ ಸ್ವಯಂ ಪ್ರೇರಿತ ಕೇಸ್

    ದಡೇಸೂಗುರು ಪತ್ನಿ ಎಂದು ಹೇಳಿಕೊಂಡಿದ್ದ ಅಧಿಕಾರಿ ವಿರುದ್ಧ ಸ್ವಯಂ ಪ್ರೇರಿತ ಕೇಸ್

    – ಹಣ ವರ್ಗಾವಣೆಗೆ ಸಮಂಜಸ ಉತ್ತರ ಕೊಡದ ಹಿನ್ನೆಲೆ ದೂರು

    ಬಳ್ಳಾರಿ: ವಿಜಯನಗರ (Vijayanagara) ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳಾಧಿಕಾರಿಯ ಮೇಲೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

    ಇಲಾಖೆಯ ಕಚೇರಿಗೆ ಭೇಟಿ ನೀಡಿದ ವೇಳೆ ಸಮರ್ಪಕ ಉತ್ತರ ನೀಡದ ಹಿನ್ನೆಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉಪಲೋಕಾಯುಕ್ತರು, ಮಹಿಳಾಧಿಕಾರಿ ಅವರ ಮೊಬೈಲ್ ವಹಿವಾಟನ್ನು ಗನ್‌ಮ್ಯಾನ್ ಮೂಲಕ ಚೆಕ್ ಮಾಡಿಸಿದ್ದರು. ಹೀಗೆ ಚೆಕ್ ಮಾಡಿಸಿದಾಗ ಅಧಿಕ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಅಂಬಿ ಮೊಮ್ಮಗನ ನಾಮಕರಣ ಸಂಭ್ರಮ: ಕಿಚ್ಚ ಸುದೀಪ್‌ ಭಾಗಿ

    ಹಣದ ವಹಿವಾಟಿನ ಕುರಿತು ಉಪಲೋಕಾಯುಕ್ತರು ಮಹಿಳಾಧಿಕಾರಿಯನ್ನು ವಿಚಾರಣೆ ನಡೆಸಿದಾಗ, ನನ್ನ ಗಂಡ ಕಳಿಸಿದ್ದಾರೆ. ನನ್ನ ಗಂಡ ರಾಜಕಾರಣಿ. ನನ್ನ ಪತಿ ಮಾಜಿ ಶಾಸಕ ಬಸವರಾಜ ದಡೇಸೂಗುರು. ಅವರೇ ಹಣ ಹಾಕಿದ್ದಾರೆ ಎಂದು ಹೇಳಿದ್ದರು. ಮಹಿಳಾಧಿಕಾರಿಯ ಈ ಉತ್ತರ ಸಮಾಧಾನ ತರದ ಹಿನ್ನೆಲೆ, ಭ್ರಷ್ಟಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿರುವುದರಿಂದ ಉಪಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಚಾಮರಾಜನಗರ| ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವು

    ಉಪಲೋಕಾಯುಕ್ತರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇನ್ನೂ ದಾಖಲಾತಿ ಪರಿಶೀಲಿಸಿದ ವೇಳೆ 107 ಬಾಲ್ಯವಿವಾಹ ಪ್ರಕರಣಗಳ ಪೈಕಿ 49 ಎಫ್‌ಐಆರ್ ದಾಖಲಿಸಲಾಗಿದೆ. ಕಚೇರಿ ಅಧೀಕ್ಷಕ ನಾಗಭೂಷಣ ಅವರ ಫೋನ್ ಪೇ, ಯುಪಿಐ ಹಿಸ್ಟರಿ ಪರಿಶೀಲಿಸಿದಾಗ ಡಿಲೀಟ್ ಮಾಡಿರುವುದು ಕಂಡುಬಂದಿದೆ.

  • ಪಿಎಸ್‍ಐ ಹಗರಣ: ನಾನು ಯಾವುದೇ ತಪ್ಪು ಮಾಡಿಲ್ಲ, ಆಡಿಯೋದಲ್ಲಿ ಮಾತನಾಡಿದ್ದು ನಾನಲ್ಲ: ಬಸವರಾಜ ದಡೇಸಗೂರು

    ಪಿಎಸ್‍ಐ ಹಗರಣ: ನಾನು ಯಾವುದೇ ತಪ್ಪು ಮಾಡಿಲ್ಲ, ಆಡಿಯೋದಲ್ಲಿ ಮಾತನಾಡಿದ್ದು ನಾನಲ್ಲ: ಬಸವರಾಜ ದಡೇಸಗೂರು

    ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆಡಿಯೋದಲ್ಲಿ ಮಾತನಾಡಿದ್ದು ನಾನಲ್ಲ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಪಿಎಸ್‍ಐ ಹಗರಣದಲ್ಲಿ (PSI Recruitment Scam) ತಮ್ಮ ಹೆಸರು ಕೇಳಿಬರುತ್ತಿರುವ ಹಿನ್ನೆಲೆ ಶಾಸಕ ಬಸವರಾಜ ದಡೇಸೂಗೂರು (Basavaraj Dadesugur) ಸ್ಪಷ್ಟೀಕರಣ ನೀಡಿದ್ದಾರೆ.

    ವಿಧಾನಭೆಯಲ್ಲಿ ಮಳೆಗಾಲದ ಅಧಿವೇಶನ ಹಿನ್ನೆಲೆ ವಿಧಾನಸೌಧದ (Vidhana Soudha)  ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ಆಡಿಯೋದಲ್ಲಿ ಮಾತನಾಡಿದ್ದು ನಾನಲ್ಲ. ಮಾಧ್ಯಮದಲ್ಲಿ ಬಂದಿರುವ ಆಡಿಯೋ 2020ರದ್ದು, ಈಗಿನದ್ದಲ್ಲ. ಪಿಎಸ್ಐ ಹಗರಣಕ್ಕೂ ಅದಕ್ಕೂ ಸಂಬಂಧ ಇಲ್ಲ. ನಮ್ಮ ಕ್ಷೇತ್ರದ ಮಾಜಿ ಶಾಸಕರು ನಾನು ಯಾವಾಗ್ಯಾವಗಲೋ ಮಾತಾಡಿರೋದನ್ನು ಕಟ್ ಮಾಡಿ ವೀಡಿಯೋ ಮಾಡಿದ್ದಾರೆ. ಎಡಿಟ್ ಮಾಡಿರುವ ಆಡಿಯೋ ಅದು. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಿಧು ಹತ್ಯಾ ಪ್ರಕರಣ – ಉತ್ತರ ಭಾರತದಾದ್ಯಂತ 50 ಕಡೆಗಳಲ್ಲಿ ಎನ್‌ಐಎ ದಾಳಿ

    ನಾನು ತಪ್ಪು ಮಾಡಿಲ್ಲ. ಆಡಿಯೋಗಳನ್ನು ಎಡಿಟ್ ಮಾಡಿ ಸುಳ್ಳು ಆರೋಪ ಹೊರಿಸಲಾಗಿದೆ. ರಾಜಕೀಯವಾಗಿ ದ್ವೇಷ ಸಾಧಿಸುತ್ತಿದ್ದಾರೆ. ಪಿಎಸ್‍ಐ ಕುರಿತಾಗಿ ಅಲ್ಲ. ನಾನು ಈ ಹಿಂದೆ ರಾಜಿ ಪಂಚಾಯಿತಿ ಸಂಬಂಧ ಮಾತನಾಡಿದ್ದೆ, ಅದು ಹಳೆಯ ಆಡಿಯೋ ಅದನ್ನು ಎಡಿಟ್ ಮಾಡಿ ಇದೀಗ ಹರಿಬಿಡಲಾಗಿದೆ. ನನ್ನ ಬಳಿ ಎಲ್ಲಾ ದಾಖಲೆಗಳಿವೆ. ನಿವೃತ್ತ ಪೊಲೀಸ್ ಕಾನ್ಸ್‌ಟೇಬಲ್ ಪರಸಪ್ಪನ ಮಗ ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿಲ್ಲ ಮತ್ತೆ ಹೇಗೆ ಪರೀಕ್ಷೆ ಬರೆಯಲು ಸಾಧ್ಯ? ನಾನು ದಾಖಲೆ ಸಮೇತ ಸದನಕ್ಕೆ ಬಂದಿದ್ದೇನೆ. ಸಿಡಿ ಕೂಡ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗುಂಡಿ ಮುಚ್ಚಲು ಕಟ್ಟಡ ತ್ಯಾಜ್ಯ ಬಳಸಿದ ಪಾಲಿಕೆ – BBMP ಕಳಪೆ ಕಾಮಗಾರಿಗೆ ಜನರ ಛೀಮಾರಿ

    ಪಿಎಸ್‍ಐ ಪ್ರಕರಣ ಸಂಬಂಧ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರು ಅವರ ಆಡಿಯೋ ಈ ಹಿಂದೆ ವೈರಲ್ ಆಗಿತ್ತು. ಪಿಎಸ್‍ಐ ಮಾಡಿಸ್ತೀನಿ ಎಂದು 15 ಲಕ್ಷ ರೂಪಾಯಿ ಲಂಚ ಪಡೆದಿರುವ ಆರೋಪವನ್ನು ದಡೇಸೂಗೂರು ಎದುರಿಸುತ್ತಿದರು. ಪರಸಪ್ಪ ಎಂಬುವವರ ಮಗನ ನೇಮಕಾತಿಗೆ ಹಣ ಪಡೆದಿದ್ದನ್ನು, ಸರ್ಕಾರಕ್ಕೆ ಆ ಹಣ ತಲುಪಿಸಿದ್ದೇನೆ ಎಂಬುದನ್ನು ಶಾಸಕರು ಫೋನ್‌ ಸಂಭಾಷಣೆಯಲ್ಲಿ ಒಪ್ಪಿಕೊಂಡಿದ್ದ ಆಡಿಯೋ ವೈರಲ್ ಆಗಿತ್ತು.

    Live Tv
    [brid partner=56869869 player=32851 video=960834 autoplay=true]