ಬೆಂಗಳೂರು: ಶಿವಮೊಗ್ಗದಲ್ಲಿ (Shivamogga) ಪಿಎಫ್‌ಐ ಸೇರಿ (Join PFI) ಎಂಬ ಪೋಸ್ಟರ್‌ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ಕಿಡಿಕಾರಿದರು.
ಮಹಾರಾಷ್ಟ್ರದ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸರಿ ಎನಿಸುತ್ತಿಲ್ಲ. ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ‍್ಯವಿದೆ ಎಂಬುದು ನಮಗೂ ತಿಳಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಬಂಧಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಿದೆ ಎಂದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿವಾದ- ಮುನಿಯಪ್ಪ, ರಮೇಶ್ ಕುಮಾರ್ ವಿರುದ್ಧ ಆಕ್ರೋಶ
ಗಡಿ ವಿವಾದ ಬಗೆಹರಿದಿದ್ದರೂ ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯ ಹೂಡಿದ್ದಾರೆ. ಕಾನೂನಾತ್ಮಕವಾಗಿ ಇಬ್ಬರೂ ಹೋರಾಡುತ್ತೇವೆ. ಆದರೆ ಎರಡೂ ರಾಜ್ಯದ ಜನರು ಸಾಮರಸ್ಯದಿಂದಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕದಡುವ ಯಾವುದೇ ಕೆಲಸ ಮಾಡಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ದಕ್ಷಿಣ ಭಾರತದ ಅತಿದೊಡ್ಡ ಅಗ್ನಿಪಥ ರ‍್ಯಾಲಿ ಇಂದಿನಿಂದ ಬೀದರ್‌ನಲ್ಲಿ ಆರಂಭ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ನಗರದಲ್ಲಿ ನಾಲ್ಕು ವರ್ಷಗಳ ಬಳಿಕ ಅತ್ಯಧಿಕ ಮಳೆ ದಾಖಲಾಗಿದ್ದು, ಈ ವರ್ಷ ವಾಡಿಕೆಗಿಂತ ಹೆಚ್ಚು ವರ್ಷಧಾರೆಯಾಗಿದೆ. ಅಕ್ಟೊಬರ್ 15 ರಂದು 281 ಮೀ.ಮೀ ಮಳೆಯಾಗಿತ್ತು. ನಿನ್ನೆ ವಾಡಿಕೆಗಿಂತ ಶೇ.60ರಷ್ಟು ಹೆಚ್ಚು ಮಳೆ ಸುರಿದಿತ್ತು. ಇದು ಬೆಂಗಳೂರಿನಲ್ಲಿ 2017ರ ಬಳಿಕ ಸುರಿದ ಅಧಿಕ ಮಳೆಯಾಗಿದೆ. ಇದನ್ನೂ ಓದಿ: ಮಹಾಮಳೆಯ ಭೂಕುಸಿತಕ್ಕೆ ತತ್ತರಿಸಿದ ದೇವರ ನಾಡು – ಅವಶೇಷಗಳಡಿ 26 ಶವ ಪತ್ತೆ
ನಿನ್ನೆ ಮಲ್ಲೇಶ್ವರಂ, ಯಶವಂತಪುರ, ಗೋರಗುಂಟೆ ಪಾಳ್ಯ, ರಾಜಕುಮಾರ್ ಸಮಾಧಿ, ಇಸ್ಕಾನ್ ಸೇರಿದಂತೆ ಹಲವೆಡೆ ಬೆಳಗಿನ ಜಾವವೇ ಮಳೆ ಆರಂಭವಾಗಿತ್ತು. ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿದರು. ಇಂದು ಮಳೆರಾಯ ಸ್ವಲ್ಪ ಮಟ್ಟಿನ ಬಿಡುವು ನೀಡಿದ್ದು, ಮುಂದಿನ ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದ ಹೊತ್ತಿಗೆ ಮತ್ತೆ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಮಳೆರಾಯನ ಆರ್ಭಟಕ್ಕೆ ಬೆಚ್ಚಿಬಿದ್ದ ಕೇರಳ – ಸಾವಿನ ಸಂಖ್ಯೆ 26ಕ್ಕೆ ಏರಿಕೆ
ಸಿಎಂ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಸ್ಥಳೀಯ ಶಾಸಕರಾದ ಸತೀಶ್ ರೆಡ್ಡಿ, ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್, ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಗೌರವ್ ಗುಪ್ತ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
– ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಸಿದ್ದರಾಮಯ್ಯಗೆ ನೈತಿಕ ಹಕ್ಕಿಲ್ಲ
ಬೆಂಗಳೂರು: ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ಆಯ್ಕೆ ಮಾಡುತ್ತಾರೆ. ಎರಡು ಮೂರು ದಿನಗಳಲ್ಲಿ ಎಲ್ಲವೂ ಅಂತಿಮ ಆಗಲಿದೆ ಎಂದು ಬಸವರಾಜ ಬೊಮ್ಮಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ ಮುಂದಿನ ಮುಖ್ಯಮಂತ್ರಿ ಯಾರಾಗಬಹುದೆಂಬ ಕುತೂಹಲ ಮತ್ತು ಚರ್ಚೆ ಆರಂಭವಾಗಿದೆ. ಈ ನಡುವೆ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಾಲಿ ಗೃಹ ಸಚಿವ ಬಸವರಾಜ ಬೊಮ್ಮಯಿ ಸಹ ಕೇಳಿ ಬಂದಿದೆ.
ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಕೋರ್ ಕಮಿಟಿ, ಪಾರ್ಲಿಮೆಂಟರಿ ಬೋರ್ಡ್‍ನಲ್ಲಿ ಸಭೆ ನಡೆಯುತ್ತಿದೆ. ಸಿಎಂ ಆಯ್ಕೆ ಸಂಬಂಧ ದೆಹಲಿಯಲ್ಲಿ ಸರಣಿ ಮೀಟಿಂಗ್ ನಡೀತಾ ಇವೆ. ಇನ್ನೂ ಎರಡು ಮೂರು ದಿನಗಳಲ್ಲಿ ಎಲ್ಲವೂ ಅಂತಿಮ ಆಗಲಿದೆ. ನನ್ನ ಹೆಸರೂ ಸಹ ಮಾಧ್ಯಮಗಳಲ್ಲಿ ಬರುತ್ತಿದೆ. ಹೈಕಮಾಂಡ್ ಸಭೆಯಲ್ಲಿ ಯಾವ ಆಯಾಮದಲ್ಲಿ ಚರ್ಚೆ ಆಗಿದೆ ಎಂಬ ಮಾಹಿತಿ ಸಿಕ್ಕಿಲ್ಲ ಎಂದಿದ್ದಾರೆ.ಇದನ್ನೂ ಓದಿ: ಎರಡು ತಿಂಗಳ ಹಿಂದೆಯೇ ರಾಜೀನಾಮೆ ಸಂಕಲ್ಪ ಮಾಡಿದ್ರು: ಬಿ.ವೈ.ರಾಘವೇಂದ್ರ
ಇವತ್ತು ಧರ್ಮೇಂದ್ರ ಪ್ರಧಾನ್ ಬರ್ತಾ ಇದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಬರುವ ಸಾಧ್ಯತೆ ಇದೆ. ಆದಷ್ಟು ಬೇಗ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮುಂದಿನ ಮೂರ್ನಾಲ್ಕು ದಿನದಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ. ಶಾಸಕಾಂಗ ಕಮಿಟಿ, ಕೋರ್ ಕಮಿಟಿ, ಪಾರ್ಲಿಮೆಂಟರಿ ಬೋರ್ಡ್ ಅಭಿಪ್ರಾಯದ ಮೇರೆಗೆ ಸಿಎಂ ಆಯ್ಕೆ ಅಂತಿಮ ಆಗುತ್ತೆ. ನನ್ನ ಜಿಲ್ಲೆಯ ಶಾಸಕರು ನನ್ನ ಸಿಎಂ ಆಗಬೇಕು ಅಂತ ಇಚ್ಛೆ ಪಡೋದ್ರಲ್ಲಿ ವಿಶೇಷ ಇಲ್ಲ. ಪಕ್ಷ ಏನ್ ನಿರ್ಧಾರ ಮಾಡುತ್ತದೆ ಅನ್ನೋದು ಮುಖ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್ – ಕೋದಂಡರಾಮ ಸಿನಿಮಾ ನಟಿಗೂ ಇದ್ಯಾ ಲಿಂಕ್?
ಬಿಜೆಪಿಯ ಮುಂದಿನ ಮುಖ್ಯಮಂತ್ರಿಯೂ ಭ್ರಷ್ಟಚಾರಿಯಾಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿದ್ದವರು. ಬಳಿಕ ಚುನಾವಣೆಯಲ್ಲಿ ಸೋತವರು. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ಈ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಹೊಸ ಮುಖ್ಯಮಂತ್ರಿ ಆಗದ ಸಂಧರ್ಭದಲ್ಲಿ, ಜನರಲ್ಲಿ ಇಂತಹ ಮನಸ್ಥಿತಿ ಹುಟ್ಟಿಸುವಂತ ಮಾತಗಳನ್ನ ಮಾಜಿ ಮುಖ್ಯಮಂತ್ರಿ ಆಡುವಂತದ್ದಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವದರ ಮೂಲಕ ಮಾಜಿ ಸಚಿವ ತನ್ವೀರ್ ಸೇಠ್ ಅವರು ಅಸಮಾಧಾನ ಹೊರಹಾಕಿದ್ದಾರೆ.
ಇತ್ತೀಚೆಗೆ ಅವರ ಮೇಲೆ ನಡೆದ ಹಲ್ಲೆ ವಿಚಾರವಾಗಿ ಗೃಹ ಸಚಿವರಿಗೆ ಪತ್ರ ಬರೆದ ತನ್ವೀರ್ ಸೇಠ್, ನನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಅನ್ನೋದು ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.
ನನ್ನ ಮೇಲೆ ಹಲ್ಲೆ ಮಾಡಿರುವ ಪ್ರಕರಣದಲ್ಲಿ ಸೂಕ್ತವಾಗಿ ತನಿಖೆ ನಡೆಯುತ್ತಿಲ್ಲ. ಈ ಪ್ರಕರಣದವನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ ಉದ್ದೇಶವನ್ನು ಪತ್ತೆ ಮಾಡಬೇಕು. ಇದರ ಹಿಂದೆ ಯಾರು ಇದ್ದಾರೆ ಎಂದು ಪತ್ತೆ ಹಚ್ಚಿ ನನಗೆ ನ್ಯಾಯ ಒದಗಿಸಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಯಿಗೆ ತನ್ವೀರ್ ಸೇಠ್ ಪತ್ರ ಬರೆದು ಮನವಿ ಮಾಡಿದ್ದಾರೆ. ಇದನ್ನು ಓದಿ: ತನ್ವೀರ್ ರೀತಿಯಲ್ಲೇ ಖಾದರ್ ಹತ್ಯೆಗೆ ಸಂಘಟನೆಯಿಂದ ಸ್ಕೆಚ್
ಕಳೆದ ವರ್ಷದ ನವೆಂಬರ್ 18ರಂದು ರಾತ್ರಿ 11 ಗಂಟೆ ಸುಮಾರಿನಲ್ಲಿ ಮೈಸೂರಿನ ಬನ್ನಿಮಂಟಪದಲ್ಲಿ ನೂರಾರು ಜನರ ಮುಂದೆಯೇ ಶಾಸಕರ ಮೇಲೆ ಕೊಲೆ ಯತ್ನ ನಡೆದಿತ್ತು. ಘಟನೆಯಲ್ಲಿ ಕುತ್ತಿಗೆ ಭಾಗಕ್ಕೆ ಮಚ್ಚಿನ ಪೆಟ್ಟು ಬಿದ್ದು ತನ್ವೀರ್ ಸೇಠ್ ಜೀವನ್ಮರಣ ಹೋರಾಟ ಆರಂಭಿಸಿದ್ದರು. ಹಲ್ಲೆಯ ನಂತರ ಮೈಸೂರಿನಲ್ಲಿ ಚಿಕಿತ್ಸೆ ಪಡೆದಿದ್ದ ಶಾಸಕ ತನ್ವೀರ್ ಸೇಠ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ಕಳುಹಿಸಲಾಗಿತ್ತು. ಚಿಕಿತ್ಸೆ ಸಂಪೂರ್ಣ ಯಶಸ್ವಿಯಾದ ನಂತರ ದುಬೈನಲ್ಲೇ ಅವರು ವಿಶ್ರಾಂತಿ ಪಡೆದಿದ್ದರು. ಬಳಿಕ ಭಾರತಕ್ಕೆ ವಾಪಸ್ ಬಂದಿದ್ದರು.
ಈ ಹಿಂದೆ ಈ ವಿಚಾರವಾಗಿ ಮಾತನಾಡಿದ್ದ ಅವರು, ನನ್ನ ಮೇಲೆ ನಡೆದ ಹಲ್ಲೆ ಪ್ರಕರಣ ಅನಿರೀಕ್ಷಿತ. ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರ ಪ್ರತಿಯನ್ನು ಪಡೆದುಕೊಂಡಿದ್ದೇನೆ. ತನಿಖೆ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರು ಯಾರು ಎಂಬುದು ಗೊತ್ತಿಲ್ಲ. ಇದೆಲ್ಲವು ಸಾರ್ವಜನಿಕವಾಗಿ ಬಹಿರಂಗವಾಗಬೇಕು. ಇದನ್ನು ಪೊಲೀಸರು ಜನರಿಗೆ ತಿಳಿಸಬೇಕು ಎಂದಿದ್ದರು.
– ಶ್ಯೂರಿಟಿ ಕೊಟ್ಟವರ ಬಗ್ಗೆ ಬಾಯ್ಬಿಡದ ಪೊಲೀಸರು
– ಗೃಹ ಸಚಿವ ಬೊಮ್ಮಾಯಿ ಮೇಲೆ ಹೈಕಮಾಂಡ್ ಸಿಟ್ಟು
ಹುಬ್ಬಳ್ಳಿ: ದೇಶದ್ರೋಹಿ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಸ್ಟೇಷನ್ ಬೇಲ್ ಕೊಟ್ಟ ಪ್ರಕರಣ ಹುಬ್ಬಳ್ಳಿ ಪೊಲೀಸರಿಗೆ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಉರುಳಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚಿದೆ. ದೇಶದ್ರೋಹಿಗಳಿಗೆ ಬೇಲ್ ಕೊಟ್ಟ ಪ್ರಕರಣವನ್ನು ಬಿಜೆಪಿ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.
ದೇಶದಲ್ಲಿ ದೇಶದ್ರೋಹ ಕೇಸ್‍ಗಳ ವಿರುದ್ಧ ವ್ಯಾಪಕ ಹೋರಾಟ ನಡೆಯುತ್ತಿದೆ. ಹಲವು ಬಾರಿ ದೇಶದ್ರೋಹ ಕೇಸ್ ದಾಖಲಿಸುವಂತೆ ಬಿಜೆಪಿಯೇ ಒತ್ತಾಯಿಸಿದೆ. ಆದ್ರೀಗ ಬಿಜೆಪಿ ಸರ್ಕಾರವೇ ಆಡಳಿತವಿರುವ ಕರ್ನಾಟಕದಲ್ಲೇ ದೇಶದ್ರೋಹಿಗಳಿಗೆ ಸ್ಟೇಷನ್ ಬೇಲ್ ಕೊಡಲಾಗಿದೆ. ಈ ಬೇಲ್ ಹಿಂದೆ ಯಾರೆಲ್ಲಾ ಇದ್ದಾರೆ? ಯಾರ ಒತ್ತಡವಿದೆ? ಎನ್ನುವ ಬಗ್ಗೆ ವಿವರಣೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹೈಕಮಾಂಡ್ ಸೂಚಿಸಿದೆ. ಆರ್‌ಎಸ್‍ಎಸ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
ಇಷ್ಟೆಲ್ಲಾ ಆದರೂ ಹುಬ್ಬಳ್ಳಿ ಪೊಲೀಸರು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ದೇಶದ್ರೋಹಿಗಳಿಗೆ ಬೇಲ್ ಕೊಟ್ಟವರ್ಯಾರು? ಅನ್ನೋದರ ಬಗ್ಗೆ ಕಿಂಚಿತ್ತೂ ಮಾಹಿತಿ ಸಿಗದಂತೆ ಮಾಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರನ್ನೆ ಪ್ರಶ್ನೆ ಕೇಳಿದರೆ ಪ್ರಕರಣ ತನಿಖಾ ಹಂತದಲ್ಲಿದೆ. ನೋ ಕಾಮೆಂಟ್ಸ್ ಎನ್ನುತ್ತಾರೆ. ಇನ್ನೊಂದೆಡೆ, ದೇಶದ್ರೋಹಿಗಳ ಭೇಟಿಗೆ ಬಂದ ಕುಟುಂಬಸ್ಥರನ್ನು ಮಾಧ್ಯಮಗಳ ಕಣ್ತಪ್ಪಿಸಿ ಜೀಪ್‍ನಲ್ಲಿ ಬೇರೆಡೆಗೆ ಕರೆದೊಯ್ಯಲಾಗಿದೆ. ಇವೆಲ್ಲಾ ಬೆಳವಣಿಗೆಗಳ ಮಧ್ಯೆ, ರಾತ್ರೋರಾತ್ರಿ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಹುಬ್ಬಳ್ಳಿ ಪೊಲೀಸರ ಪ್ರತಿಯೊಂದು ನಡೆಯೂ ಅನುಮಾನಗಳನ್ನು ಮೂಡಿಸುತ್ತಿದೆ. ಸಾರ್ವಜನಿಕ ವಲಯದಲ್ಲಿ ಎದ್ದಿರುವ ಒಂದಿಷ್ಟು ಪ್ರಶ್ನೆಗಳಿಗೆ ಪೊಲೀಸರು ಉತ್ತರ ಕೊಡಲೇಬೇಕಿದೆ.
ಪೊಲೀಸರೇ ಉತ್ತರ ಕೊಡಿ:
ಪಬ್ಲಿಕ್ ಪ್ರಶ್ನೆ 1 – ಸ್ಟೇಷನ್ ಬೇಲ್‍ಗೆ ಶ್ಯೂರಿಟಿ ಕೊಟ್ಟಿದ್ದು ಯಾರು? ಯಾಕೆ ಗೌಪ್ಯತೆ?
ಪಬ್ಲಿಕ್ ಪ್ರಶ್ನೆ 2 – ದೇಶದ್ರೋಹಿಗಳ ಕುಟುಂಬಸ್ಥರು ನೀಡಿದ್ರಾ? ಕಾಲೇಜಿನ ಮ್ಯಾನೇಜ್‍ಮೆಂಟ್ ನೀಡ್ತಾ?
ಪಬ್ಲಿಕ್ ಪ್ರಶ್ನೆ 3 – ತನಿಖೆ ದೃಷ್ಟಿಯಿಂದ ಬಹಿರಂಗಪಡಿಸುತ್ತಿಲ್ಲ ಅಂದ್ರೆ ಏನರ್ಥ?
ಪಬ್ಲಿಕ್ ಪ್ರಶ್ನೆ 4 – ಆರೋಪಿಗಳ ಪೋಷಕರು ಯಾರಿಗೂ ಸಿಗದಂತೆ ಗೌಪ್ಯ ಸ್ಥಳಕ್ಕೆ ಕರೆದೊಯ್ದಿದ್ಯಾಕೆ?
ಕೇವಲ ಪೊಲೀಸರ ಮೇಲೆ ಅಷ್ಟೇ ಅಲ್ಲ, ಗೃಹ ಸಚಿವ ಬಸವರಾಜ ಬೊಮ್ಮಯಿ ಅವರ ನಡೆಯೂ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಬೊಮ್ಮಾಯಿ ಅವರು ಕೂಡ ಸಾರ್ವಜನಿಕ ವಲಯದಲ್ಲಿ ಎದ್ದಿರುವ ಒಂದಿಷ್ಟು ಪ್ರಶ್ನೆಗಳಿಗೆ ಪೊಲೀಸರು ಉತ್ತರ ಕೊಡಲೇಬೇಕಿದೆ.
ಗೃಹ ಸಚಿವರೇ ಉತ್ತರ ಕೊಡಿ:
ಪಬ್ಲಿಕ್ ಪ್ರಶ್ನೆ 1 – ಹುಬ್ಬಳ್ಳಿ ಪ್ರಕರಣದಲ್ಲಿ ಮೃದು ಧೋರಣೆ ಏಕೆ ತಳೆದಿದ್ದೀರಿ?
ಪಬ್ಲಿಕ್ ಪ್ರಶ್ನೆ 2 – ಸ್ಟೇಷನ್ ಬೇಲ್‍ಗೆ ಮುನ್ನ ಪೊಲೀಸರು ನಿಮ್ಮ ಗಮನಕ್ಕೆ ತಂದಿರಲಿಲ್ವಾ?
ಪಬ್ಲಿಕ್ ಪ್ರಶ್ನೆ 3 – ಆಯುಕ್ತರ ವರದಿ ಕೇಳಿದ್ದೇನೆ ಎಂದಿದ್ರಿ? ವರದಿ ಬಂತಾ, ಇಲ್ವಾ?
ಪಬ್ಲಿಕ್ ಪ್ರಶ್ನೆ 4 – ಯಾರ ರಕ್ಷಣೆಗೆ ನಿಂತಿದ್ದೀರಿ? ಯಾರ ಹಿತಾಸಕ್ತಿ ಕಾಪಾಡುತ್ತಿದ್ದೀರಿ?
ಪಬ್ಲಿಕ್ ಪ್ರಶ್ನೆ 5 – ಬೀದರ್ ಮತ್ತು ಮೈಸೂರು ಪ್ರಕರಣದಲ್ಲಿ ವೀರಾವೇಶ ತೋರಿಸಿದ್ರಿ, ಈಗ್ಯಾಕೆ ಮೌನ?
ಹುಬ್ಬಳ್ಳಿ ಕೆಎಲ್‍ಇ ಪ್ರಕರಣ ವಿಧಾನಪರಿಷತ್ ಕಲಾಪದಲ್ಲಿಯೂ ಪ್ರತಿಧ್ವನಿಸಿದೆ. ದೇಶದ್ರೋಹಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ಯಾಕೆ? ಪೊಲೀಸರ ಮೇಲೆ ಒತ್ತಡ ಹೇರಿದವರು ಯಾರು? ಎಂದು ಜೆಡಿಎಸ್‍ನ ಬಸವರಾಜ ಹೊರಟ್ಟಿ ಪ್ರಶ್ನೆ ಮಾಡಿದರು. ಸಮಗ್ರ ತನಿಖೆಗೆ ಆಗ್ರಹಿಸಿದರು. ಇದಕ್ಕೆ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಅವರು ದನಿಗೂಡಿಸಿ, ಇಲ್ಲಿ ಪಾಕಿಸ್ತಾನ ಪರ ಕೆಲಸ ಆಗಿದೆ. ನಮ್ಮ ದೇಶಕ್ಕೆ ದ್ರೋಹವಾಗಿದೆ. ಇದರ ಹಿಂದಿನ ಹುನ್ನಾರ ಏನು ಎಂದು ಪ್ರಶ್ನಿಸಿದರು. ಕೂಡಲೇ ಪೊಲೀಸ್ ಕಮೀಷನರ್ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಬಳಿಕ ಸ್ಪಷ್ಟನೆ ಕೊಟ್ಟ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ದೇಶದ್ರೋಹಿಗಳನ್ನು ಸರ್ಕಾರ ಬಿಡುವ ಮಾತಿಲ್ಲ. ಅನಗತ್ಯವಾಗಿ ಬೇರೆ ಪ್ರಕರಣ ಪ್ರಸ್ತಾಪಿಸಿ ಪೊಲೀಸರ ಮೇಲೆ ಬೊಟ್ಟು ಮಾಡುವುದನ್ನು ಬಿಡಿ ಎಂದರು. ಆಗ ವಿಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದರು. ಈ ವೇಳೆ ಮಾತಿನ ಚಕಮಕಿ ನಡೀತು. ಆಡಳಿತ ಪಕ್ಷದ ವಿರೋಧದ ನಡೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ ಅಂತ ಕಾಂಗ್ರೆಸ್ ನಿಲುವಳಿ ಮಂಡಿಸಿತು. ಇತ್ತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ, ಪೊಲೀಸರನ್ನು ದೇವದಾಸಿಯರಿಗೆ ಹೋಲಿಸಿ ವಿವಾದ ಮೈಮೇಲೆ ಎಳೆದುಕೊಂಡರು.