Tag: ಬಸವರಾಜ ಬೊಮ್ಮಾಯಿ

  • ಮಹಾಸಭೆಯಿಂದ ಗೊಂದಲ ಸೃಷ್ಟಿ: ಬೊಮ್ಮಾಯಿ

    ಮಹಾಸಭೆಯಿಂದ ಗೊಂದಲ ಸೃಷ್ಟಿ: ಬೊಮ್ಮಾಯಿ

    ಬೆಂಗಳೂರು: ವೀರಶೈವ ಲಿಂಗಾಯತ ಮಹಾಸಭೆ (Veerashaiva Lingayat Mahasabha) ಸಂಪೂರ್ಣವಾಗಿ ಕಾಂಗ್ರೆಸ್‌ಮಯ ಆಗಿದೆ. ಮಹಾಸಭೆಗೆ ನನ್ನ ವಿನಂತಿ, ಕಾನೂನು, ಸಂವಿಧಾನ ಪ್ರಕಾರ ಸಲಹೆ ಮಾಡಬೇಕು. ಮಹಾಸಭೆ ಗೊಂದಲ ಸೃಷ್ಟಿಸಬಾರದು. ಗೊಂದಲ ಸೃಷ್ಟಿಸದೇ ಸೂಕ್ತ ಸಲಹೆ ಕೊಡಬೇಕೆಂದು ಬೊಮ್ಮಾಯಿ (Basavaraj Bommai) ಆಗ್ರಹಿಸಿದರು.

    ಒಂದು ಕಡೆ ಹೊಸ ಧರ್ಮ ಅಂತಾರೆ, ಇನ್ನೊಂದು ಕಡೆ ವೀರಶೈವ ಅಂತಾರೆ, ಲಿಂಗಾಯತ ಅಂತಾರೆ, ವೀರಶೈವ ಲಿಂಗಾಯತ ಅಂತಾರೆ. ಈ ಗೊಂದಲ ನಿವಾರಣೆ ಆಗಬೇಕು. ಇಲ್ಲದಿದ್ದರೆ ಜನ ತಮ್ಮ ತೀರ್ಮಾನ ಮಾಡುತ್ತಾರೆ. ನಾವೂ ಕೂಡಾ ಈ ವಿಚಾರದಲ್ಲಿ ಪಕ್ಷದ ಹಿರಿಯರು ಚರ್ಚೆ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ

    ಜಾತಿ ಜನಗಣತಿ ಸಮೀಕ್ಷೆಯಲ್ಲಿ ನಾಸ್ತಿಕ ಕಾಲಂ ಸೇರಿಸಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಕಾಲಂ ಅನ್ನು ಸಿದ್ದರಾಮಯ್ಯಗಾಗಿ ಮಾಡಿದ್ದಾರೆ ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು. ಇದನ್ನೂ ಓದಿ: ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000

    ಜನರ ಭಾವನೆ ಮುಖ್ಯ:
    ಭಾರತ – ಪಾಕ್ ನಡುವೆ ಇಂದು ಕ್ರಿಕೆಟ್ ಮ್ಯಾಚ್ ನಡೆಯುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಹಲ್ಗಾಂ ಹತ್ಯಾಕಾಂಡ, ಆಪರೇಷನ್ ಸಿಂಧೂರ, ಭಾರತ ಬಗ್ಗೆ ಪಾಕ್ ಹೇಳಿಕೆಗಳನ್ನು ಪರಿಗಣಿಸಬೇಕು. ಇದೆಲ್ಲದರ ಹಿನ್ನೆಲೆಯಲ್ಲಿ ಈ ಮ್ಯಾಚ್ ಅನ್ನು ನಡೆಸದಿದ್ದರೆ ಚೆನ್ನಾಗಿತ್ತು. ಕ್ರೀಡೆ ಇರಬೇಕು, ಆದರೆ ದೇಶ, ದೇಶದ ಜನರ ಭಾವನೆ ಬಹಳ ಮುಖ್ಯ, ಬಿಸಿಸಿಐ ದೇಶದ ಜನರ ಭಾವನೆಗಳಿಗೆ ತಕ್ಕ ನಿರ್ಧಾರ ತೆಗೆದುಕೊಂಡಿಲ್ಲ ಎಂದರು. ಇದನ್ನೂ ಓದಿ: ಪಾಕ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ವಿಶ್ವ ಹಿಂದೂ ರಕ್ಷಾ ಪರಿಷತ್‌ನಿಂದ ಹೋಮ-ಹವನ

    ಹೆಚ್ಚಿನ ಪರಿಹಾರ ಕೊಡಲಿ:
    ಹಾಸನ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು. ಹಿಂದೆ ನಡೆದ ಹಲವು ಪ್ರಕರಣಗಳಲ್ಲಿ ಇದೇ ಸಿಎಂ ಹೆಚ್ಚು ಪರಿಹಾರ ಕೊಟ್ಟಿದ್ದಾರೆ. ಹಾಸನದಲ್ಲಿ ಸತ್ತವರು ಅಮಾಯಕರು, ಯುವಕರು ಅವರ ಕುಟುಂಬಗಳು ಕಷ್ಟದಲ್ಲಿದ್ದಾರೆ, ಇದೆಲ್ಲ ನೋಡಿಕೊಂಡು ಹೆಚ್ಚು ಪರಿಹಾರ ಕೊಡಲಿ. ದಾಖಲೆ ಪ್ರಮಾಣದ ಪರಿಹಾರವನ್ನು ಸಿಎಂ ಕೊಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು. ಇದನ್ನೂ ಓದಿ: ತಮಾಷೆಗಾಗಿ ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಗಮ್ – 7 ಮಕ್ಕಳಿಗೆ ಮುಂದುವರಿದ ಚಿಕಿತ್ಸೆ

  • ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ

    ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ

    – ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ ಹೇಳಿದ್ದಾರೆ
    – ಜಾತಿ ಜನಗಣತಿ ಮರುಸಮೀಕ್ಷೆ 425 ಕೋಟಿ ಮೀಸಲು; ಬೊಮ್ಮಾಯಿ ಆಕ್ಷೇಪ

    ಬೆಂಗಳೂರು: ಪಹಲ್ಗಾಮ್ ಹತ್ಯಾಕಾಂಡ (Pahalgam Terror Attack), ಆಪರೇಷನ್‌ ಸಿಂಧೂರ ಬಳಿಕ ಪಾಕಿಸ್ತಾನದ (Pakistan) ಹೇಳಿಕೆಗಳನ್ನ ಗಮನಿಸಬೇಕು. ಬಿಸಿಸಿಐ ಭಾರತ-ಪಾಕ್ ಪಂದ್ಯವನ್ನು ನಡೆಸಬಾರದಿತ್ತು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಬೇಸರ ಹೊರಹಾಕಿದರು.

    ಇಂದು ನಡೆಯಲಿರುವ ಭಾರತ-ಪಾಕ್ ಕ್ರಿಕೆಟ್ ಪಂದ್ಯದ ಬಗ್ಗೆ ಮಾತನಾಡಿದ ಅವರು, ಬಿಸಿಸಿಐಯು (BCCI) ಪಹಲ್ಗಾಮ್ ಹತ್ಯಾಕಾಂಡ, ಆಪರೇಷನ್ ಸಿಂಧೂರ (Operation Sindoor) ಹಾಗೂ ಭಾರತ ಬಗ್ಗೆ ಪಾಕ್ ನೀಡಿರುವ ಹೇಳಿಕೆಗಳನ್ನು ಗಮನಿಸಬೇಕು. ಇವೆಲ್ಲದನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯವನ್ನು ನಡೆಸದೇ ಇದ್ದಿದ್ದರೆ ಚೆನ್ನಾಗಿತ್ತು. ಕ್ರೀಡೆ ಇರಬೇಕು, ಆದ್ರೆ ದೇಶ ಹಾಗೂ ದೇಶದ ಜನರ ಭರವಸೆ ಬಹಳ ಮುಖ್ಯ. ಬಿಸಿಸಿಐ ದೇಶದ ಜನರ ಭಾವನೆಗಳಿಗೆ ತಕ್ಕ ನಿರ್ಧಾರ ತಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: Hassan Tragedy | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ – ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

    ಮತಾಂತರಕ್ಕೆ ಮನ್ನಣೆ ಕೊಟ್ಟಿರೋದೇಕೆ?
    ಜಾತಿ ಜನಗಣತಿ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಸಂವಿಧಾನದಲ್ಲಿ ಕೇವಲ ಆರು ಧರ್ಮಗಳಿವೆ. ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾಂತರಗೊಂಡ ಕ್ರೈಸ್ತರು ಅನ್ನೋ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ. ಇದು ಕಾನೂನು ಬಾಹಿರ, ಸಂವಿಧಾನ ಬಾಹಿರ, ರಾಜಕೀಯ ಪ್ರೇರಿತವಾಗಿದೆ. ಎರಡೂ ಕಡೆಯೂ ಮತಾಂತರ ಆಗಿರುತ್ತದೆ. ಆದ್ರೆ ಸಿಎಂ ಕ್ರೈಸ್ತ ಧರ್ಮದ ಮತಾಂತರಕ್ಕೆ ಮಾತ್ರ ಮನ್ನಣೆ ಕೊಟ್ಟಿರೋದೇಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪ್ರಮೋದಾ ದೇವಿ ಒಡೆಯರ್‌ಗೆ ದಸರಾಗೆ ಅಧಿಕೃತ ಆಹ್ವಾನ ನೀಡಿದ ಹೆಚ್‌.ಸಿ ಮಹದೇವಪ್ಪ

    ಸಿಎಂ ಅವರು ಒಂದು ಹೆಜ್ಜೆ ಮುಂದೆ ಹೋಗಿ ಮತಾಂತರ ಅವರ ಹಕ್ಕು ಅಂದಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ ಹೇಳಿದ್ದಾರೆ. ಇದು ಸಮಾನತೆ ಪ್ರಶ್ನೆ ಅಲ್ಲ, ಆಸೆ ಆಮಿಷ ಒಡ್ಡಿ ಮತಾಂತರ ಮಾಡಲಾಗಿದೆ. ಅವರ ಬಡತನದ ದುರುಪಯೋಗ, ಶಿಕ್ಷಣ ಇಲ್ಲದಿರೋದನ್ನು ಗಮನಿಸಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿದರು.

    ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು?
    ಇವರಿಗೆ ಜಾತಿ ಕಾಲಂನಲ್ಲಿ ಮತಾಂತರಗೊಂಡವರಿಗೆ ಹೊಸ ಕಾಲಂ ಮಾಡಲು ಯಾರು ಅಧಿಕಾರ ಕೊಟ್ರು? ಯಾವ ಕಾನೂನಿನಲ್ಲಿದೆ? ಇದು ಧರ್ಮ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ, ಗಲಭೆ ಮಾಡಿಸುವ ಕೆಲಸವಾಗ್ತಿದೆ. ಈಗಾಗಲೇ ಒಂದು ಬಾರಿ ಜಾತಿ ಸಮೀಕ್ಷೆ ಹೆಸ್ರಲ್ಲಿ 350 ಕೋಟಿ ರೂ. ಪೋಲು ಮಾಡಿದರು. ಈಗ ಮತ್ತೆ ಜಾತಿ ಜನಗಣತಿ ಮರುಸಮೀಕ್ಷೆಗೆ 425 ಕೋಟಿ ರೂ. ಮೀಸಲಿಟ್ಟಿದ್ದಾರೆ. ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು ಎಂದು ಕಿಡಿಕಾರಿದರು.

    ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ
    ಡಿಸೆಂಬರ್‌ನಲ್ಲಿ ಜಾತಿ ಜನಗಣತಿ ವರದಿ (Caste Census Report) ಕೊಡಿ ಅಂತ ಆಯೋಗಕ್ಕೆ ಸಿಎಂ ಹೇಳಿದ್ದಾರೆ. ಈ ಕಡೆ ಡಿಸೆಂಬರ್‌ನಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಅಂತ ಡಿಕೆಶಿ ಟೀಮ್ ಹೇಳ್ತಿದೆ. ಡಿಕೆಶಿ ಸಿಎಂ ಆಗ್ತಾರೆ ಅಂತಿದ್ದಾರೆ. ಹೀಗಾಗಿ ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿಎಂ ಜಾತಿ ಸಮೀಕ್ಷೆ ವರದಿಯನ್ನು ರಾಜಕೀಯವಾಗಿ ಬಳಸಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಸೆ.22ಕ್ಕೆ ಹೈಕೋರ್ಟ್‌ನಲ್ಲಿ ಬೈಕ್ ಟ್ಯಾಕ್ಸಿ ಭವಿಷ್ಯ – ಚಾಲಕರಿಗೆ ಸಿಹಿ ಸುದ್ದಿ ಸಿಗುತ್ತಾ?

    ಜಾತಿ ಗಣತಿಯಲ್ಲಿ ನಾಸ್ತಿಕ ಕಾಲಂ ಸಿದ್ದರಾಮಯ್ಯಗೋಸ್ಕರ ಮಾಡಿದ್ದು
    ಜಾತಿ ಜನಗಣತಿ ಸಮೀಕ್ಷೆಯಲ್ಲಿ ನಾಸ್ತಿಕ ಕಾಲಂ ವಿಚಾರವಾಗಿ ಮಾತನಾಡಿದ ಅವರು ಜಾತಿ ಜನಗಣತಿಯಲ್ಲಿ ಸಮೀಕ್ಷೆಯಲ್ಲಿ ನಾಸ್ತಿಕ ಕಾಲಂ ಅನ್ನು ಸಿದ್ದರಾಮಯ್ಯಗೋಸ್ಕರ (Siddaramaiagh) ಮಾಡಿದ್ದಾರೆ ಲೇವಡಿ ಮಾಡಿದರು.

    ಹಾಸನ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಹೆಚ್ಚಿನ ಪರಿಹಾರಕ್ಕೆ ಆಗ್ರಹ
    ಹಿಂದೆ ನಡೆದ ಹಲವು ಪ್ರಕರಣಗಳಲ್ಲಿ ಇದೇ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚು ಪರಿಹಾರ ಕೊಟ್ಟಿದ್ದಾರೆ. ಹಾಸನದಲ್ಲಿ ದುರಂತದಲ್ಲಿ ಮೃತಪಟ್ಟವರು ಅಮಾಯಕರು ಹಾಗೂ ಯುವಕರು. ಅವರ ಕುಟುಂಬಗಳೂ ಕಷ್ಟದಲ್ಲಿವೆ. ಇದೆಲ್ಲವನ್ನು ನೋಡಿಕೊಂಡು ಸಿಎಂ ಹೆಚ್ಚಿನ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.

    ಜಾತಿ ಜನಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಫಲಾನುಭವಿಗಳ ಡೇಟಾ ಸಂಗ್ರಹಕ್ಕೆ ಸರ್ಕಾರ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೂ ಸಾಮಾಜಿ ಆರ್ಥಿಕ ಸಮೀಕ್ಷೆಗೂ ಏನು ಸಂಬಂಧ. ಇದು ರಾಜಕೀಯ ಪ್ರೇರಿತವಾದ ಸಮೀಕ್ಷೆ. ಗ್ಯಾರಂಟಿ ಫಲಾನುಭವಿಗಳ ಪರಿಶೀಲನೆಗೆ ಮಾಹಿತಿ ಸಂಗ್ರಹ ಜಾತಿ ಜನಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ ಮುಂದಾಗಿದೆ ಎಂದು ಹೇಳಿದರು.

  • ಹಾಲು ಉತ್ಪಾದಕರ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಿದರೆ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಬೊಮ್ಮಾಯಿ

    ಹಾಲು ಉತ್ಪಾದಕರ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಿದರೆ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಬೊಮ್ಮಾಯಿ

    ಹಾವೇರಿ: ಪ್ರಜಾಪಭುತ್ವ ಗಟ್ಟಿಗೊಳಿಸಲು ಸಹಕಾರಿ ರಂಗ ಹೆಚ್ಚು ಸಹಕಾರಿಯಾಗಿದ್ದು, ಮಹಾರಾಷ್ಟ್ರ ಹಾಗೂ ಗುಜರಾತ್ ರೀತಿಯಲ್ಲಿ ಸಹಕಾರ ರಂಗ ಸರ್ಕಾರದ ಮೇಲೆ ಹಿಡಿತ ಸಾಧಿಸುವಂತಾಗಬೇಕು. ಕೆಎಂಎಫ್ ಮಾದರಿಯಲ್ಲಿ ಹಾಲು ಉತ್ಪಾದಕರ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಿದರೆ ರೈತರ ಆರ್ಥಿಕ ಸ್ಥಿತಿ ಸುಧಾರಣೆ ಸಾಧ್ಯವಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ.

    ಹಾವೇರಿಯಲ್ಲಿ (Haveri) ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ ನಿಯಮಿತ, ಬೆಂಗಳೂರು ಹಾಗೂ ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಹಾವೇರಿ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ಆಡಳಿತ ಕಛೇರಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಗೌರವ ಉಪಸ್ಥಿತಿ ವಹಿಸಿ ಮಾತನಾಡಿದರು. ವಿಶ್ವದಲ್ಲಿ ಎರಡು ವ್ಯವಸ್ಥೆಗಳ ನಡುವೆ ಸದಾ ಸಂಘರ್ಷ ಇದೆ. ಕೆಲವು ದೇಶಗಳು ಕಮ್ಯುನಿಸ್ಟ್ ದೇಶಗಳಿವೆ. ಇನ್ನು ಕೆಲವು ಫೆಡರಲ್ ದೇಶಗಳಿವೆ. ಈ ಎರಡು ವಿಚಾರಧಾರೆಯ ಆಡಳಿತ ವಿಶ್ವದಲ್ಲಿದೆ. ಬಂಡವಾಳ ಶಾಹಿಗಳಿಗೆ ಮತ್ತು ಕಮ್ಯುನಿಸ್ಟ್ಗಳಿಗೆ ಪರ್ಯಾಯವಾಗಿರುವ ವ್ಯವಸ್ಥೆ ಸಹಕಾರ ತತ್ವ, ಕೋ ಆಪರೇಟಿವ್ ವ್ಯವಸ್ಥೆ ಜನರಿಂದ ಜನರಿಗೋಸ್ಕರ ಕಾರ್ಯ ನಿರ್ವಹಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ವಸ್ತುಗಳ ತೆರಿಗೆ ಭಾರೀ ಇಳಿಕೆ ಸಾಧ್ಯತೆ – ಜಿಎಸ್‌ಟಿಯಲ್ಲಿ ಇರಲಿದೆ ಎರಡೇ ಸ್ಲ್ಯಾಬ್‌!

    ಸಹಕಾರಿ ಸಂಘ ಯಶಸ್ವಿಯಾಗಲು ಎರಡು ಸಾಮಾನ್ಯ ತತ್ವ ಮುಖ್ಯ. ಒಂದು ಹಾಲು ಉತ್ಪಾದಕ, ಸಾಮಾನ್ಯ ನೇಕಾರ, ಸ್ವಾಭಿಮಾನದ ಮೂಲಕ ಸಹಕಾರ ರಂಗ ಕಟ್ಟುವ ಮೂಲಕ ಹೆಚ್ಚು ಬಂಡವಾಳ ಇಲ್ಲದೇ ಸಂಘ ಕಟ್ಟಬಹುದು. ಇನ್ನೊಂದು ಪ್ರಜಾಪಭುತ್ವ ಗಟ್ಟಿಗೊಳಿಸಲು ಸಹಕಾರಿ ರಂಗ ಹೆಚ್ಚು ಸಹಕಾರಿಯಾಗಿದೆ. ಸಹಕಾರ ಕ್ಷೇತ್ರ ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಿ ಹೆಚ್ಚು ಶಕ್ತಿಶಾಲಿಯಾಗಿದೆ. ಅಲ್ಲಿ ಸಹಕಾರ ರಂಗ ಸರ್ಕಾರದ ಮೇಲೆ ಹಿಡಿತ ಸಾಧಿಸುತ್ತದೆ. ಇಲ್ಲಿ ಸರ್ಕಾರ ಸಹಕಾರ ರಂಗದ ಮೇಲೆ ಹಿಡಿತ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.

    ನಾವೂ ಇಡೀ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ರೈತರ ಕೈಯಲ್ಲಿ ಇಟ್ಟುಕೊಳ್ಳಬೇಕು. ಭಾರತದ ಗೃಹ ಸಚಿವರು ಹೊಸದಾಗಿ ಆಗಿರುವ ಸಹಕಾರ ಇಲಾಖೆಯ ಸಚಿವರು, ಅಮಿತ್ ಶಾ ಅವರು ಇಷ್ಟು ವರ್ಷ ರಾಜಕಾರಣದಲ್ಲಿದ್ದಾರೆ. ಆದರೆ, ಅವರು ತಮ್ಮೂರಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಅಂದರೆ ಎಷ್ಟು ಮಹತ್ವದ್ದಾಗಿದೆ ಎಂದರ್ಥ. ಸಹಕಾರ ರಂಗದಲ್ಲಿ ಹಾಲು ಉತ್ಪಾದನೆಯ ಕ್ಷೀರ ಕ್ಷೇತ್ರ ಯಶಸ್ವಿಯಾಗಿದೆ. ಒಂದು ವ್ಯವಸ್ಥೆಯ ಮೂಲಕ ಆರ್ಥಿಕ ಚಟುವಟಿಕೆ, ವ್ಯಾಪಾರ, ವ್ಯವಹಾರ, ಆಧುನಿಕ ತಂತಜ್ಞಾನ ಬಳಸಿಕೊಂಡು ಯಶಸ್ವಿಯಾಗಿ ನಡೆಯುತ್ತದೆ ಎಂದು ತಿಳಿಸಿದ್ದಾರೆ.

    ಹಾಲು ಒಕ್ಕೂಟಕ್ಕೆ ಖಾಸಗಿಯವರಿಂದ ಬಹಳಷ್ಟು ಸ್ಪರ್ಧೆ ಇದೆ. ನಮ್ಮ ರೈತರು ಒಗ್ಗಟ್ಟಾಗಿ ಹಾವೇರಿ ಒಕ್ಕೂಟ ನನ್ನದು ಎಂದು ತೀರ್ಮಾನ ಮಾಡಿದರೆ ಹಾಲು ಒಕ್ಕೂಟ ಗಟ್ಟಿಯಾಗಿ ಬೆಳೆಯುತ್ತದೆ. ಇದು ರೈತರ ಆರ್ಥಿಕ ಸ್ಥಿತಿ ಸುಧಾರಣೆ ಮಾಡಲು ಬಹಳ ಉಪಯುಕ್ತವಾಗಿದೆ. ಕೇವಲ ಒಕ್ಕಲುತನ ಮಾಡಿದರೆ ಉದ್ಧಾರವಾಗಲು ಸಾಧ್ಯವಿಲ್ಲ. ಅದರ ಜೊತೆಗೆ ಉಪಕಸುಬು ಮಾಡುವ ಮೂಲಕ ಸಮಗ್ರ ಕೃಷಿ ಮಾಡಿದರೆ ರೈತರಿಗೆ ಆರ್ಥಿಕ ಸ್ಥಿತಿಯನ್ನು ಸುಧಾರಣೆ ಮಾಡಲು ಸುಲಭವಾಗಿ ಸಾಧ್ಯವಾಗುತ್ತದೆ. ಇದನ್ನು ಸರ್ಕಾರ ಮನಗಂಡು ಯಶಸ್ವಿಯಾಗಿ ನಡೆಸಿಕೊಂಡು ಹೋಗಲು ಸಾಧ್ಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಮಾಡಲಾಗುತ್ತಿದೆ: ಲಕ್ಷ್ಮಿ ಹೆಬ್ಬಾಳ್ಕರ್‌

    ನಾನು ಗೃಹ ಸಚಿವನಾಗಿದ್ದಾಗ ಹಾಗೂ ಸಿಎಂ ಆಗಿದ್ದಾಗ ಹಾಲು ಉತ್ಪಾದಕರ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಪಯತ್ನ ಮಾಡಿದ್ದೆವು. ಆದರೆ, ಆರ್‌ಬಿಐ ಅನುಮತಿ ಕೊಡಲಿಲ್ಲ. ಸಹಕಾರ ರಂಗದಲ್ಲಿ ರೆಸಲ್ಯೂಷನ್ ಮಾಡಿದರೆ ರಾಜ್ಯ ಮಟ್ಟದಲ್ಲಿ ಹಾಲು ಉತ್ಪಾದಕರ ಸಹಕಾರ ಬ್ಯಾಂಕ್ ಮಾಡಲು ಸಾಧ್ಯವಿದೆ. 50 ವರ್ಷದಲ್ಲಿ ನಮ್ಮ ದುಡ್ಡಿನಲ್ಲಿಯೇ ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದು. ಲಕ್ಷಾಂತರ ಹಾಲು ಉತ್ಪಾದಕರ ಬದುಕಿನಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ಹೇಳಿದ್ದಾರೆ.

    ಧಾರವಾಡ ಹಾಲು ಒಕ್ಕೂಟದಿಂದ ಬೇರ್ಪಡಿಸಲು ಒಗ್ಗಟ್ಟಾಗಿ ಹೋಗಿ ಪ್ರತ್ಯೇಕ ಹಾಲು ಒಕ್ಕೂಟ ಮಾಡಿಕೊಂಡೆವು. ಧಾರವಾಡ ಮತ್ತು ಹಾವೇರಿ ನಿರ್ದೇಶಕರ ಮಂಡಳಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಹಾಲು ಉತ್ಪಾದನೆ ಜೊತೆಗೆ ಇತರ ಉತ್ಪನ್ನ ಮಾಡಿದರೆ ಮಾದರಿ ಹಾಲು ಒಕ್ಕೂಟ ಮಾಡಲು ಸಾಧ್ಯ. ಪ್ರಸ್ತುತ 1 ಲಕ್ಷ 20 ಸಾವಿರದಿಂದ 1 ಲಕ್ಷ 50 ಸಾವಿರ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರು ಮನಸು ಮಾಡಿದರೆ 3 ಲಕ್ಷ ಲೀ. ಹಾಲು ಉತ್ಪಾದನೆ ಮಾಡಬಹುದು. ಮೆಗಾ ಡೈರಿಗೆ ನಾನು 70 ಕೋಟಿ ರೂ. ಕೊಟ್ಟಿದ್ದೇನೆ. ಆದಷ್ಟು ಬೇಗ ಮೆಗಾ ಡೈರಿ ಕಾರ್ಯ ಆರಂಭಿಸಬೇಕು. ಹಾವೇರಿಗೆ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಸಿಎಂ ಅವರನ್ನು ಕರೆಸಲು ತೀರ್ಮಾನಿಸಿದ್ದೇವೆ. ಅದೇ ಸಂದರ್ಭದಲ್ಲಿ ಮೆಗಾ ಡೈರಿ ಉದ್ಘಾಟನೆ ಮಾಡಲು ಪ್ರಯತ್ನ ಮಾಡೋಣ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್‌ ರಮೇಶ್‌

    ಈಗಿನ ನಿರ್ದೇಶಕ ಮಂಡಳಿಯವರು ಒಕ್ಕೂಟವನ್ನು ಎತ್ತಿ ಹಿಡಿಯಬೇಕು. ರೈತರಿಗೆ ಅನುಕೂಲ ಮಾಡಬೇಕು ಎನ್ನುವ ಕಳಕಳಿ ಇದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ರೈತ ಯಾವುದೇ ಪಕ್ಷಕ್ಕೆ ಸೇರಿಲ್ಲ. ಎಲ್ಲ ರಾಜಕೀಯ ಪಕ್ಷಗಳು ರೈತರಿಗೆ ಸೇರಿವೆ. ಹಿಂದಿನ ನಿರ್ದೇಶಕ ಮಂಡಳಿಯೂ ಬಹಳಷ್ಟು ಶ್ರಮವಹಿಸಿದೆ. ಅವರಿಗೂ ಕೂಡ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಾರಿ ಸವಾಲು ರೂಪದಲ್ಲಿದೆ. ಧಾರವಾಡ ಹಾಲು ಒಕ್ಕೂಟಕ್ಕಿಂತ ಎರಡು ಪಟ್ಟು ಹಾಲು ಉತ್ಪಾದನೆ ಹಾವೇರಿ ಒಕ್ಕೂಟದಿಂದ ಮಾಡೋಣ. ಈಗ ಕೆಎಂಎಫ್‌ನವರು ನಮ್ಮ ಸಹಾಯಕ್ಕೆ ಬಂದಿದ್ದಾರೆ. ಪ್ಯಾಕೇಜಿಂಗ್ ಯುನಿಟ್ ಪಾರಂಭ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ 5 ಕೋಟಿ ರೂ. ಹಣ ಆದಷ್ಟು ಬೇಗ ಬರುವಂತೆ ಸಚಿವರು ಮಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಿರೀಶ್ ಮಟ್ಟಣ್ಣನವರ್ ಹತ್ತಾರು ಎಕ್ರೆ ಪ್ರದೇಶದಲ್ಲಿ ರೆಸಾರ್ಟ್‌ ಮಾಡಿದ್ದಾನೆ – ಬ್ರಾಹ್ಮಣ ಪುರೋಹಿತ ಪರಿಷತ್‌ ಆರೋಪ

    ಆಡಳಿತ ಮಂಡಳಿ ಕಚೇರಿ ಪಾರಂಭವಾಗಿದೆ. ಒಳ್ಳೆಯ ವ್ಯವಸ್ಥೆ ಇದೆ. ಅದರಲ್ಲಿ ಕುಳಿತು ಹೇಗೆ ಆಡಳಿತ ಮಾಡಬೇಕು ಎನ್ನುವುದು ಮುಖ್ಯ. ಪ್ರತೀ ನಿರ್ಣಯ ಬಡ ರೈತನಿಗೆ ಅನುಕೂಲವಾಗಬೇಕು. ಹಾಲು ಮಾರುವವ ಎಷ್ಟೇ ಪ್ರಾಮಾಣಿಕವಾಗಿದ್ದರೂ ಹಾಲಿನಲ್ಲಿ ನೀರು ಹಾಕಿದ್ದೀಯಾ ಎಂದು ಕೇಳುತ್ತಾರೆ. ಆಲ್ಕೋಹಾಲಿನವರು ಹಾಗೇ ಕೊಟ್ಟರೂ ನೀರು ಹಾಕಿಕೊಂಡು ಕುಡಿಯುತ್ತಾರೆ. ಹಾವೇರಿಯಲ್ಲಿ ಮೆಗಾ ಡೈರಿ ಉದ್ಘಾಟನೆಯಾದ ದಿನ ಅತ್ಯಂತ ಸಂತೋಷವಾಗಲಿದೆ. ರೈತರ ಮುಖದಲ್ಲಿ ನಗು ಇರಬೇಕು. ರೈತ ರೇಷ್ಮೆ ಅಂಗಿ, ರೇಷ್ಮೆ ಧೋತರಾ ತೊಟ್ಟಿರಬೇಕು. ಕಾಲಾಗ ಝುರಕಿ ಚಪ್ಪಲಿ ಹಾಕಿರಬೇಕು. ರೈತ ನಕ್ಕೊಂತ ಇರಬೇಕು. ಆಗ ನಮ್ಮ ದೇಶ ಉದ್ಧಾರ ಆಗಿದೆ ಅಂತ ಅರ್ಥ ಎಂದಿದ್ದಾರೆ.

    ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ಶಾಸಕ ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ಮಾನೆ, ಪ್ರಕಾಶ್ ಕೋಳಿವಾಡ, ಮಾಜಿ ಶಾಸಕ ಎಸ್.ಆರ್ ಪಾಟೀಲ್, ವೀರುಪಾಕ್ಷಪ್ಪ ಬಳ್ಳಾರಿ, ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ್, ಉಪಾಧ್ಯಕ್ಷ ಉಜ್ಜನಗೌಡ ಮಾವೀನತೋಪ ಸೇರಿ ಹಲವರು ಉಪಸ್ಥಿತರಿದ್ದರು.

  • ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರ ಕಾಮಗಾರಿ ಆರಂಭಿಸಲು ಗಡ್ಕರಿಗೆ ಸಂಸದ ಬೊಮ್ಮಾಯಿ ಮನವಿ

    ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರ ಕಾಮಗಾರಿ ಆರಂಭಿಸಲು ಗಡ್ಕರಿಗೆ ಸಂಸದ ಬೊಮ್ಮಾಯಿ ಮನವಿ

    ನವದೆಹಲಿ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು (Karwar-Ilakal National Highway) ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಮನವಿ ಮಾಡಿದ್ದಾರೆ.

    ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಮಾಡಿರುವ ಅವರು, ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಿದ್ದು, ಯೋಜನೆಯ ಡಿಪಿಆರ್ ಸಲ್ಲಿಕೆಯಾಗಿದೆ ಹಾಗೂ ಭೂ ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ ಸಿಎಂ

    ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಕಾಮಗಾರಿ ಆರಂಭಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: 2-3 ದಿನಗಳಲ್ಲಿ SEP ವರದಿ ಸಿಎಂಗೆ ಸಲ್ಲಿಕೆ – ಡಾ.ಸುಧಾಕರ್

    ಅಲ್ಲದೇ ಇದಕ್ಕೆ ಹೊಂದಿಕೊಂಡ ಸಂಚರಿಸಲು ಸಾಧ್ಯವಾಗದಿರುವಂತಹ ಇತರ ಸಿಆರ್‌ಎಫ್ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ತಮ್ಮ ಅನುಭವದ ಆಧಾರದಲ್ಲಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೊಪ್ಪಳದ ಗವಿಸಿದ್ದಪ್ಪ ಕೊಲೆ ಕೇಸನ್ನ NIAಗೆ ವಹಿಸಿ – ಛಲವಾದಿ ನಾರಾಯಣಸ್ವಾಮಿ

  • ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ – ಬೊಮ್ಮಾಯಿ

    ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ – ಬೊಮ್ಮಾಯಿ

    ಗದಗ: ರಾಜ್ಯದಲ್ಲಿ ರೈತರಿಗೆ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು, ಸರ್ಕಾರ ಮುಂಚಿತವಾಗಿ ಸ್ಟಾಕ್ ಮಾಡಬೇಕಿತ್ತು. ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ಜಿಲ್ಲೆಯ ಸೊರಟೂರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೆಚ್ಚಿನ ಗೊಬ್ಬರ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಕೇಂದ್ರ ಕೃಷಿ ಸಚಿವರ ಜೊತೆ ಮಾತನಾಡಿ ಕೊಡಿಸುವಂತಹ ಪ್ರಯತ್ನ ಮಾಡುತ್ತೇನೆ. ರಾಜ್ಯದಲ್ಲಿದ್ದ ಗೊಬ್ಬರವನ್ನು ರೈತರಿಗೆ ಸಮರ್ಪಕವಾಗಿ ಸರ್ಕಾರ ಪೂರೈಕೆ ಮಾಡಲಿ ಎಂದರು.ಇದನ್ನೂ ಓದಿ: ಕಠಿಣ ಸಂದರ್ಭದಲ್ಲೂ ಅಭಿವೃದ್ಧಿಯ ದೀಪ ಬೆಳಗಿಸಬಹುದು – ಮಾಜಿ ಮಾವೋವಾದಿಗಳ ಮೀನು ಕೃಷಿಗೆ ಮೋದಿ ಶ್ಲಾಘನೆ

    ಇನ್ನೂ ನಾಲ್ವಡಿ ಕೃಷ್ಣರಾಜ ಒಡೆಯರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಹೋಲಿಕೆಗೆ ಅಸಾಧ್ಯವಾದದ್ದು. ಅವರ ತಂದೆ ಬಹಳ ಕೆಲಸ ಮಾಡಿದ್ದಾರೆಂದು ತೋರಿಸಲು ಹೋಲಿಕೆ ಮಾಡ್ತಿದ್ದಾರೆ. ಸೂರ್ಯನ ಜೊತೆಗೆ ಯಾವುದಾದರೂ ಸಣ್ಣ ಬೆಳಕನ್ನು ಹೋಲಿಕೆ ಮಾಡಲು ಸಾಧ್ಯನಾ? ಸಾಧ್ಯನೇ ಇಲ್ಲ. ಸೂರ್ಯ ಸೂರ್ಯನೇ ಎಂದು ಹೇಳಿದರು.

    ಮಹದಾಯಿ ವಿಚಾರವಾಗಿ ಮಾತನಾಡಿ, ಮಹದಾಯಿ ಏನಾದ್ರು ಪ್ರಗತಿಯಾಗಿದ್ರೆ ಅದಕ್ಕೆ ಕಾರಣ ಬಿಜೆಪಿ. ಮೋದಿ ಸರ್ಕಾರ ಬಂದ್ಮೇಲೆ ಮಹದಾಯಿ ಆದೇಶ ಹೊರಡಿಸಿದ್ದರು. ಮಾಡಿಸಿದ್ದ ಡಿಪಿಆರ್‌ನ್ನು ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಒಪ್ಪಿಗೆ ಪಡೆಯಿತು. ಕಾಂಗ್ರೆಸ್ ಏನು ಮಾಡಲಿಲ್ಲ. ಬರೀ ನಾವು ಮಾಡಿದ ಕೆಲಸಕ್ಕೆ ಅಡ್ಡಗೋಡೆ ಕಟ್ಟಿದ್ದಾರೆ. ಮಹದಾಯಿ ಮಲಪ್ರಭಾಗೆ ಹರಿಯಬಾರದು ಅಂತ ಗೋಡೆ ಕಟ್ಟಿದರು. ರಾಜ್ಯದ ವಿಷಯದಲ್ಲಿ ರಾಜಕಾರಣ ಬೇಡ. ನ್ಯಾಯ ಸಮ್ಮತವಾಗಿ ಕಾಂಗ್ರೆಸ್ ಸರ್ಕಾರ ನಡೆಯಲಿ. ಗೋವಾ ಸಿಎಂ ಹೇಳಿಕೆಯನ್ನು ನಾನು ಸಹ ಖಂಡಿಸುತ್ತೇನೆ. ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸೋನಿಯಾ ಗಾಂಧಿ ಗೋವಾ ಚುನಾವಣೆಯಲ್ಲಿ ಹನಿ ನೀರು ಮಹದಾಯಿಂದ ಮಲಪ್ರಭಾಗೆ ಕೊಡಲ್ಲ ಎಂದಿದ್ದರು. ಹೀಗಾಗಿ ಕಾಂಗ್ರೆಸ್‌ಗೆ ಯಾವ ನೈತಿಕ ಹಕ್ಕಿದೆ ಎಂದು ಕಿಡಿಕಾರಿದರು.

    ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜುಕುರುಡಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಇದನ್ನೂ ಓದಿ: Explained| ಬದಲಾದ ಮಾಲ್ಡೀವ್ಸ್‌ – ಇಂಡಿಯಾ ಔಟ್‌ ಹೇಳಿ ಈಗ ಮೋದಿಯನ್ನು ಆಹ್ವಾನಿಸಿದ್ದು ಯಾಕೆ?

  • ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

    ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

    – ಧರ್ಮಸ್ಥಳ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸ ಆಗಬಾರದು ಎಂದ ಸಂಸದ

    ಬೆಂಗಳೂರು: ಧರ್ಮಸ್ಥಳ ಪ್ರಕರಣದ (Dharmasthala Mass Burials) ಕುರಿತು ಎಸ್‌ಐಟಿ (SIT) ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲಮಿತಿಯಲ್ಲಿ ಕಾನೂಬದ್ಧವಾಗಿ ಎಸ್‌ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai)  ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು. ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ. ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

    ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೋಟಿಸ್ ಕೊಟ್ಟಿದ್ದು ಸಣ್ಣ ವ್ಯಾಪಾರಸ್ಥರಿಗೆ ದೊಡ್ಡ ಆಘಾತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೇಲೆ ಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ

    ಜಿಎಸ್‌ಟಿ ಕೌನ್ಸಿಲ್ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ಜವಾಬ್ದಾರಿ ಇದೆ. ರಾಜ್ಯದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹೊಣೆ ಮತ್ತು ನಿರ್ವಹಣೆಯನ್ನು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯವರು ನೋಡುತ್ತಾರೆ. ಈಗ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿರುವುದರಿಂದ ಅವರ ವ್ಯಾಪಾರ್ ಬಂದ್ ಆಗಿರುವುದು ದೊಡ್ಡ ಹೊಡೆತ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ವ್ಯಾಪಾರಸ್ಥ ಮುಖಂಡರನ್ನು ಕರೆದು ಮಾತನಾಡಬೇಕು. ಸಿಎಂ ಹಣಕಾಸು ಸಚಿವರಾಗಿದ್ದು, ಇದನ್ನು ಬಗೆ ಹರಿಸಬೇಕು. ಹಾಗೂ ಮುಂದಿನ ದಿನಗಳಲ್ಲಿ ವ್ಯಾಪಾರಸ್ಥರು ಕಾನೂನು ಬದ್ಧವಾಗಿ ತೆರಿಗೆ ಕಟ್ಟಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

    ಡಿಸಿಎಂ ಡಿಕೆಶಿವಕುಮಾರ್ ಅವರು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಎಲ್ಲ ಗೊತ್ತಿದ್ದು, ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳೇ ನೋಟಿಸ್ ಕೊಟ್ಟಿದ್ದಾರೆ. ಇಲ್ಲಿ ಯಾರೂ ಯಾರ ಬಾಯಿಗೆ ವರೆಸುವ ಪ್ರಶ್ನೆ ಇಲ್ಲ. ಅವರು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

    ಬೆಂಗಳೂರು ಮಹತ್ವ ಕಳೆದುಕೊಳ್ಳಬಾರದು:
    ಬೆಂಗಳೂರು ಐದು ಮಹಾನಗರ ಪಾಲಿಕೆಯಾಗಿ ವಿಭಜನೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೆಂಗಳೂರು ವಿಭಜನೆ ಮಾಡುವುದರಿಂದ ಅದರ ಮಹತ್ವ ಕಡಿಮೆ ಆಗಬಾರದು. ದೇಶದ ನಾಲ್ಕು ಮಹಾನಗರಕ್ಕಿಂತ ಪ್ರಖ್ಯಾತಿ ಇರುವ ನಗರ ಅಂದರೆ ಬೆಂಗಳೂರು. ವಿದೇಶದಲ್ಲಿಯೂ ಇದರ ಮಹತ್ವ ಇದೆ. ವಿಭಜನೆಯಿಂದ ಅಭಿವೃದ್ಧಿಯಲ್ಲಿ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕು. ಕೇವಲ ರಾಜಕೀಯ ಉದ್ದೇಶದಿಂದ ಪ್ರತ್ಯೇಕ ಪಾಲಿಕೆ ಮಾಡುವುದು ಸರಿಯಲ್ಲ. ಈಗಾಗಲೇ ಬಿಬಿಎಂಪಿಗೆ ನೂರಾಹತ್ತು ಹಳ್ಳಿಗಳನ್ನು ಸೇರಿಸಲಾಗಿತ್ತು. ಅವು ಇನ್ನೂ ಅಭಿವೃದ್ಧಿ ಆಗಿಲ್ಲ. ಈಗ ಅವೆಲ್ಲ ಒಂದೇ ಪಾಲಿಕೆಗೆ ಸೇರಿದರೆ ಅವು ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮುಡಾ ಕೇಸ್ | ಇಡಿ-ಬಿಜೆಪಿ ಪಾಲುದಾರಿಕೆಯ ಪ್ರಚಾರವನ್ನು ಸುಪ್ರೀಂ ರದ್ದುಗೊಳಿಸಿದೆ: ಸುರ್ಜೇವಾಲಾ

    ದೊಡ್ಡ ರಾಜಕೀಯ ಬದಲಾವಣೆ:
    ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಕುರಿತು ಮಾತನಾಡಿ, ಬರುವ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆ ಆಗುತ್ತದೆ. ಯಾರು ಏನೇ ಹೇಳಿದರೂ, ಆಗುವ ಬೆಳವಣಿಗೆಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಇದನ್ನೂ ಓದಿ: ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

    ಇದೇ ವೇಳೆ ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ಒಂದಾಗಿರುವ ಕುರಿತು ಪ್ರತಿಕ್ರಿಯಿಸಿ, ಅವರನ್ನು ಒಟ್ಟು ಗೂಡಿಸುವ ಅಗತ್ಯವಿಲ್ಲ. ಅವರು ಮೊದಲಿನಿಂದಲೂ ಒಟ್ಟಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲಿನಿಂದಲೂ ಅವರ ಸ್ನೇಹ ಗಾಢವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

  • ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬೊಮ್ಮಾಯಿ

    ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬೊಮ್ಮಾಯಿ

    – ಸರೋಜಾದೇವಿ ನಿಧನ ಕರ್ನಾಟಕ ಕಲಾಕ್ಷೇತ್ರಕ್ಕೆ ದುಃಖದ ದಿನ ಎಂದ ಸಂಸದ

    ಬೆಂಗಳೂರು: ಬಿ.ಸರೋಜಾದೇವಿ (B Saroja Devi) ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ಸೂಚಿಸಿದ್ದಾರೆ.

    ಬಿ.ಸರೋಜಾದೇವಿಯವರ ನಿಧನದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಭಿನಯ ಸರಸ್ವತಿ, ಚತುರ್ಭಾಷಾ ತಾರೆ ಪೌರಾಣಿಕ ಹಾಗೂ ಸಾಮಾಜಿಕ ಚಲನಚಿತ್ರಗಳಲ್ಲಿ ವಿಭಿನ್ನ ಪಾತ್ರವನ್ನು ಲೀಲಾಜಾಲವಾಗಿ ನಟಿಸುತ್ತಿದ್ದ ಸರೋಜಾದೇವಿ ಇನ್ನಿಲ್ಲ. ಒಂದು ಕಾಲದಲ್ಲಿ ಕನ್ನಡದ ಸೂಪರ್ ಸ್ಟಾರ್ ಆಗಿದ್ದ ಅವರು, ರಾಜಕುಮಾರ್ ಜೊತೆ, ತೆಲುಗಿನಲ್ಲಿ ಎನ್‌ಟಿಆರ್ ಜೊತೆ, ಹಿಂದಿಯಲ್ಲಿ ದಿಲೀಪ್ ಕುಮಾರ್ ಜೊತೆ ನಟಿಸಿ ಇಡೀ ದೇಶದಲ್ಲಿ ಪ್ರಖ್ಯಾತ ನಟಿ ಆಗಿದ್ದರು. ಕನ್ನಡದಲ್ಲಿ ಹೇಳಬೇಕಾದರೆ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರಕ್ಕೆ ನೈಜತೆ ತಂದಿದ್ದರು. ಚೆನ್ನಮ್ಮ ಅಂದರೆ ಹೀಗಿದ್ದರು ಅಂತ ಕಲ್ಪನೆ ಮೂಡಿಸಿದ್ದರು. ಅವರ ಅಭಿನಯ, ಕಲ್ಪನೆ ಇಂದಿಗೂ ಮನಸ್ಸಿನಲ್ಲಿ ಇದೆ. ಚೆನ್ನಮ್ಮ ಬ್ರಿಟೀಷರ ವಿರುದ್ಧ ಹೇಗೆ ಹೋರಾಟ ಮಾಡಿದ್ದರು ಅಂತ ಅವರ ನಟನೆ ಮೂಲಕ ತೋರಿಸಿದ್ದರು ಎಂದರು. ಇದನ್ನೂ ಓದಿ:  ಸತ್ಯನಾರಾಯಣ ದೇವರ ಪ್ರಸಾದದಿಂದ ನಾನು ಜನಿಸಿದ್ದೆ ಎಂದಿದ್ದ ಸರೋಜಾದೇವಿ

    ಮಲ್ಲಮ್ಮನ ಪವಾಡ ಇದೊಂದು ಮನೆಮನೆಯಲ್ಲಿ ಮನಮುಟ್ಟುವ ಚಿತ್ರವಾಗಿತ್ತು. ಲಕ್ಷ್ಮಿ ಸರಸ್ವತಿ, ಬಬ್ರುವಾಹನ, ಶ್ರೀನಿವಾಸ ಕಲ್ಯಾಣ ಸೇರಿದಂತೆ ನೂರಾರು ಚಿತ್ರಗಳಲ್ಲಿ ನಟನೆ ಮಾಡಿದ್ದರು. ಅಭಿನಯದ ಜೊತೆ ಗಂಭೀರತೆಯಲ್ಲಿ ಅಗ್ರಮಾನ್ಯರಾಗಿದ್ದರು. ಐದು ದಶಕದಿಂದ ಚಿತ್ರರಂಗದಲ್ಲಿ ನಟಿಸಿದ್ದು, ನಮ್ಮನ್ನೆಲ್ಲಾ ಅಗಲಿದ್ದಾರೆ. ಆದರೂ ಅವರ ಅಭಿನಯದ ಮೂಲಕ ನಮ್ಮ ಮನದಲ್ಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಸರೋಜಾದೇವಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು – ಬಿವೈವಿ

  • ಕಸ್ತೂರಿ ರಂಗನ್ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ

    ಕಸ್ತೂರಿ ರಂಗನ್ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ

    ಬೆಂಗಳೂರು: ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ (K Kasturi Rangan) ಅವರ ನಿಧನದ ಸುದ್ದಿ ಕೇಳಿ ಅತ್ಯಂತ ನೋವಾಯಿತು. ಇಸ್ರೋ (ISRO) ಅಧ್ಯಕ್ಷರಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ (India)  ಹೆಸರು ಉತ್ತುಂಗಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣ ಮಾಡಿದ್ರೆ ಸರ್ಕಾರದಿಂದಲೇ ಮುಟ್ಟುಗೋಲು – ಕೃಷ್ಣಬೈರೇಗೌಡ

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾ. ಕೆ.ಕಸ್ತೂರಿ ರಂಗನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾಗಿ, ಕರ್ನಾಟಕ (Karnataka) ಜ್ಞಾನ ಮಂಡಳಿ ಅಧ್ಯಕ್ಷರಾಗಿ, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಗೆ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. ರಾಜ್ಯಸಭಾ ಸದಸ್ಯರಾಗಿ, ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಅವರ ಸಾಧನೆ ಗುರುತಿಸಿ ಭಾರತ ಸರ್ಕಾರ (Indian Governmeent) ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

    ಅವರ ಅಗಲಿಕೆಯಿಂದ ಭಾರತ ಒಬ್ಬ ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿಯನ್ನು ಕಳೆದುಕೊಂಡು ಬಡವಾದಂತಾಗಿದೆ. ಭಗವಂತ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಾವು ಭಯೋತ್ಪಾದನೆಯನ್ನು ಬೆಂಬಲಿಸಿದ್ದೇವೆ – ಒಪ್ಪಿಕೊಂಡ ಪಾಕಿಸ್ತಾನ

  • ಪಹಲ್ಗಾಮ್ ದಾಳಿ ಭಯೋತ್ಪಾದನೆ ಮರುಸ್ಥಾಪಿಸುವ ಯತ್ನ: ಬೊಮ್ಮಾಯಿ

    ಪಹಲ್ಗಾಮ್ ದಾಳಿ ಭಯೋತ್ಪಾದನೆ ಮರುಸ್ಥಾಪಿಸುವ ಯತ್ನ: ಬೊಮ್ಮಾಯಿ

    ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ದಾಳಿ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ. ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಧರ್ಮದ ಹೆಸರು ಕೇಳಿ ಗುಂಡು ಹಾರಿಸಿರುವುದು ಭಾರತದ ವಿರೋಧಿ ಶಕ್ತಿಗಳ ಕೈವಾಡ ಇರುವುದು ಬಹಳ ಸ್ಪಷ್ಟ. ಇದನ್ನು ಕೂಡಲೇ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಮಟ್ಟ ಹಾಕಬೇಕು. ಜಮ್ಮು ಕಾಶ್ಮೀರ ಕಣಿವೆಯಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಎಲ್ಲ ವ್ಯವಸ್ಥೆಯನ್ನು ಮಾಡಬೇಕು. ಘಟನೆಯಲ್ಲಿ ಮೃತರಾದವರ ಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

    ಏನಿದು ಘಟನೆ?
    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶಿವಮೊಗ್ಗದ ಪ್ರವಾಸಿಗರೊಬ್ಬರು ಸಾವಿಗೀಡಾಗಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು.ಇದನ್ನೂ ಓದಿ: ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

  • ಸರ್ಕಾರದ ವಿರುದ್ಧದ 60% ಕಮಿಷನ್ ಆರೋಪ ಸೇರಿಸಿ ಎಸ್‌ಐಟಿ ತನಿಖೆ ನಡೆಸಲಿ: ಬೊಮ್ಮಾಯಿ

    ಸರ್ಕಾರದ ವಿರುದ್ಧದ 60% ಕಮಿಷನ್ ಆರೋಪ ಸೇರಿಸಿ ಎಸ್‌ಐಟಿ ತನಿಖೆ ನಡೆಸಲಿ: ಬೊಮ್ಮಾಯಿ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್‌ಐಟಿ (Special Investigation Team) ತನಿಖೆಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಆಗ್ರಹಿಸಿದರು.

    ರಾಜ್ಯ ಸರ್ಕಾರದ 40% ಕಮಿಷನ್ ಆರೋಪದ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಿರುವ ಕುರಿತು ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದರು. 40% ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಈಗಾಗಲೇ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು. ಈ ಸರ್ಕಾರ ಕದ್ದು ಮುಚ್ಚಿ ಯಾಕೆ ಮಾಡುತ್ತಾರೆ. ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ 60% ಆರೋಪ ಕೇಳಿ ಬಂದಿದೆ. ಅದನ್ನೂ ಸೇರಿಸಿ ಎಸ್‌ಐಟಿ ತನಿಖೆಗೆ ಕೊಡಲಿ ಎಂದು ಹೇಳಿದರು. ಇದನ್ನೂ ಓದಿ: IPL 2025 | ಗುಜರಾತ್‌ಗೆ ಮಾರ್ಕ್ರಮ್‌, ಪೂರನ್‌ ಪಂಚ್‌ – ಲಕ್ನೋಗೆ 6 ವಿಕೆಟ್‌ಗಳ ಸೂಪರ್‌ ಜಯ

    ರಾಜ್ಯ ಸರ್ಕಾರದಲ್ಲಿ 60% ಭ್ರಷ್ಟಾಚಾರ (Corruption) ನಡೆಯುತ್ತಿದೆ ಎಂದು ಪಿಡಬ್ಲೂಡಿ, ಅಬಕಾರಿ, ಎಲೆಕ್ಟ್ರಿಕ್ ಕಂಟ್ರಾಕ್ಟರ್ ಅಸೋಸಿಯೇಷನ್‌ನವರು ಬಹಿರಂಗ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪದ ಸಮೇತ ತನಿಖೆ ಮಾಡಬೇಕು. ರಾಜಕಿಯ ದ್ವೇಷದಿಂದ ನಮ್ಮ ಮೇಲೆ ಸುಳ್ಳು ಪ್ರಚಾರ ಮಾಡಿರುವುದಕ್ಕೆ ಎಲ್ಲಿ ದಾಖಲೆ ಸಿಗುತ್ತದೆ. ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ಕಂಪ್ಲೆAಟ್ ಕೊಡಿ ಎಂದು ಈಗ ಸಿಎಂ ಹಾಗೂ ಡಿಸಿಎಂ ಅವರು ಹೇಳುತ್ತಾರೆ. ನಾವು ಇದ್ದಾಗಲೂ ಲೋಕಾಯುಕ್ತಕ್ಕೆ ದೂರು ಕೊಡಿ ಅಂತ ಹೇಳಿದ್ದೆ ಕೊಡಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೆಎಲ್‌ ರಾಹುಲ್‌ ಬ್ಯಾಟಿಂಗ್‌ ಅಂದ್ರೆ ತುಂಬಾನೇ ಇಷ್ಟ: ಶಿವಣ್ಣ

    ಗುತ್ತಿಗೆದಾರರು ಮಾಡಿರುವ ಕಾಮಗಾರಿಗೆ ಹಿರಿತನದ ಆಧಾರದಲ್ಲಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ಮಾಡಿದ ಕೆಲಸಕ್ಕೆ ಕೊಡಲು ಹಣ ಇಲ್ಲ. ಹೀಗಾಗಿ ಗುತ್ತಿಗೆದಾರರು ಟೆಂಡರ್ ಆಗಿದ್ದರೂ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಎಂದು ಹೇಳಿದರು.

    ಜಾತಿಗಣತಿ ರಾಜಕಾರಣ
    ಈ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಜಾತಿಗಣತಿ (Caste Census) ರಾಜಕಾರಣ ಮಾಡುತ್ತಿದೆ. ಮೊದಲೇ ಗಣತಿ ಮಾಡುವ ಮುಂಚೆ ಜಾತಿಗಣತಿ ಅಂತ ಆದೇಶ ಮಾಡಬೇಕಿತ್ತು. ಸಾಮಾಜಿಕ ಆರ್ಥಿಕ ಸಮೀಕ್ಷೆ ಅಂತ ಹೇಳಿ ಜಾತಿ ಬರೆಸಿಕೊಂಡು ಬಂದಿದ್ದಾರೆ. ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರು ಕೊಟ್ಟ ವರದಿಗೆ ಕಾರ್ಯದರ್ಶಿ, ಸದಸ್ಯರು ಸಹಿ ಹಾಕಿಲ್ಲ. ಇನ್ಬೊಬ್ಬ ಅಧ್ಯಕ್ಷರು ಅದಕ್ಕೆ ತೇಪೆ ಹಚ್ಚಿರುವ ವರದಿ ನೀಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ಯ ಖರೀದಿಗೆ ಹಣ ಕೊಡಲಿಲ್ಲ ಅಂತ ತಂದೆಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಮಗ

    ಈ ಸರ್ಕಾರಕ್ಕೆ ಹಿಂದುಳಿದ ವರ್ಗದವರ ಬಗ್ಗೆ ಕಾಳಜಿ ಇದ್ದರೆ ವರದಿಯನ್ನು ಬಹಿರಂಗ ಮಾಡಿ, ಅವರಿಗಾಗಿ ಏನು ಯೋಜನೆ ಮಾಡುತ್ತಾರೆ ಅದನ್ನು ಹೇಳಬೇಕು. ನಿನ್ನೆಯ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಹೇಳಿದ್ದರು. ಈಗ ಮತ್ತೆ ಮುಂದಿನ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ಅದರ ಅಧ್ಯಯನಕ್ಕೆ ಮತ್ತೊಂದು ಸಂಪುಟ ಉಪಸಮಿತಿ ಮಾಡುತ್ತಾರೆ. ಮುಖ್ಯಮಂತ್ರಿಗಳು ಹಿಂದುಳಿದವರ ಬಗ್ಗೆ ಬರೀ ಭಾಷಣ ಮಾಡುವುದರಿಂದ ಹೊಟ್ಟೆ ತುಂಬಲ್ಲ. ಮುಖ್ಯಮಂತ್ರಿಗಳು ಸುಮಾರು ಮೂರ್ನಾಲ್ಕು ವರ್ಷದಿಂದ ಅದನ್ನೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಕಮಿಟ್‌ಮೆಂಟ್ ಇಲ್ಲ. ಎಲ್ಲಿ ಕಮಿಟ್‌ಮೆಂಟ್ ಇರುವುದಿಲ್ಲವೋ ಅಲ್ಲಿ ಕಮಿಟಿ ನೇಮಕ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.