Tag: ಬಸವರಾಜ ಬೊಮ್ಮಾಯಿ

  • ಉದಯಗಿರಿ ಕಲ್ಲು ತೂರಾಟ, `ಕೈ’ ಸರ್ಕಾರದ ಮೇಲೆ ನೇರ ದಾಳಿ: ಬೊಮ್ಮಾಯಿ

    ಉದಯಗಿರಿ ಕಲ್ಲು ತೂರಾಟ, `ಕೈ’ ಸರ್ಕಾರದ ಮೇಲೆ ನೇರ ದಾಳಿ: ಬೊಮ್ಮಾಯಿ

    ಸಂವಿಧಾನ ಬದ್ಧವಾಗಿ ಆಡಳಿತ ಮಾಡುತ್ತಾರೋ? ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೋ?

    ನವದೆಹಲಿ: ಮೈಸೂರಿನಲ್ಲಿ ಪೊಲೀಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿಯಾಗಿದೆ. ಸಿಎಂ ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ನೋಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ, ನಮ್ಮ ಇಡೀ ದೇಶ ಹಾಗೂ ವ್ಯವಸ್ಥೆಯನ್ನು ಸವಾಲು ಮಾಡುವ ರೀತಿ ಕಾರ್ಯ ಚಟುವಟಿಕೆ ಮಾಡುತ್ತಿವೆ. ಪಿಎಫ್‌ಐ ನಿಷೇಧ ಆಗಿದೆ. ಆದರೂ ಕೂಡ ಆ ಸಂಸ್ಥೆಯ ಕಾರ್ಯಕರ್ತರು ಬೇರೆ ಬೇರೆ ಹೆಸರಿನಲ್ಲಿ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ ಎಂದರು.ಇದನ್ನೂ ಓದಿ: ‘ಸೀಟ್ ಎಡ್ಜ್’ ಚಿತ್ರದ ಫಸ್ಟ್ ಹಾಡು ರಿಲೀಸ್‌- ರವೀಕ್ಷಾ ಶೆಟ್ಟಿ ಜೊತೆ ಸಿದ್ದು ಮೂಲಿಮನಿ ರೊಮ್ಯಾನ್ಸ್

    ಮಂಗಳೂರು, ಕೆಜಿ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆಗಳಿಗೂ ಮೈಸೂರಿನಲ್ಲಿ ನಡೆದ ಘಟನೆಗೂ ಸಾಮ್ಯತೆ ಇದೆ. ನಮ್ಮ ಸರ್ಕಾರ ಇದ್ದಾಗ ಕಠಿಣ ಕ್ರಮ ಕೈಗೊಂಡು ಹಲವಾರು ಜನರನ್ನು ಜೈಲಿಗೆ ಹಾಕಿದ್ದೆವು. ಈ ಸರ್ಕಾರ ಬಂದ ಮೇಲೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ ಭಾಗಿಯಾದವರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆದು ಅವರೆಲ್ಲರೂ ಅಮಾಯಕರು ಎಂದು ಹೇಳಿದರು.

    ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸಿಕ್ಕಿದ್ದರೂ ಕೂಡ ಅವರನ್ನು ಅಮಾಯಕರು ಎಂದರು. ಅದರಿಂದ ಪ್ರೇರಣೆಗೊಂಡು ಈಗ ಮತ್ತೆ ಮೈಸೂರಿನಲ್ಲಿ ಪೊಲೀಸ್ ಸ್ಟೇಷನ್ ಮೇಲೆ ದಾಳಿ, ಪೊಲೀಸ್ ವಾಹನದ ಮೇಲೆ ದಾಳಿ ಮಾಡಿದ್ದಾರೆ. ಇದರಿಂದ ಪೊಲೀಸ್ ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ, ಡಿಸಿಪಿ ಕಾರ್ ಮೇಲೆಯೂ ದಾಳಿ ಮಾಡುವಷ್ಟು ಧೈರ್ಯ ಬಂದಿದೆ. ಈ ಧೈರ್ಯ ಎಲ್ಲಿಂದ ಬಂತು. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ, ರಾಜಕಾರಣಿಗಳ ಕುಮ್ಮಕ್ಕಿನಿಂದ ಈ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ ಎಂದು ಆರೋಪಿಸಿದರು.ಇದನ್ನೂ ಓದಿ: ಮಂಗಳೂರು: ಮನೆಗಳಿಗೆ ಬೆಂಕಿ ತಗುಲಿ ಭಾರಿ ಅಗ್ನಿ ಅವಘಡ

    ಇದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿಯೇ ಆಗಿದೆ. ಮುಖ್ಯಮಂತ್ರಿಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು. ಅವರು ಯಾವಾಗಲೂ ಸಂವಿಧಾನ, ರೂಲ್ ಆಫ್ ಲಾ ಅಂತ ಹೇಳುತ್ತಾರೆ. ಇವತ್ತು ರೂಲ್ ಆಫ್ ಲಾ ಪ್ರಕಾರ ಕ್ರಮ ಕೈಗೊಳ್ಳುತ್ತಾರಾ? ಅಥವಾ ತುಷ್ಟೀಕರಣಕ್ಕಾಗಿ ಸುಮ್ಮನಾಗುತ್ತಾರೊ ಎನ್ನುವುದನ್ನು ಜನರು ನೋಡುತ್ತಾರೆ.

    ಇವರು ಸಂವಿಧಾನ ಬದ್ಧವಾಗಿ ಆಡಳಿತ ಮಾಡುತ್ತಾರೋ ಅಥವಾ ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೊ ಎನ್ನುವುದನ್ನು ನೋಡಿ ಜನರು ಮುಂದಿನ ತೀರ್ಮಾನ ಮಾಡುತ್ತಾರೆ. ಘಟನೆಯ ವಿಡಿಯೋವನ್ನು ಇಡಿ ಜಗತ್ತೇ ನೋಡಿದೆ. ಆದರೆ ಕಾಂಗ್ರೆಸ್‌ನವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆಂದರೆ ಅವರು ಎಷ್ಟು ಭಂಡತನಕ್ಕೆ ಬಿದ್ದಿದ್ದಾರೆ ನೋಡಿ ಎಂದರು.

    ಹೈಕಮಾಂಡ್ ತೀರ್ಮಾನ ಅಂತಿಮ:
    ರಾಜ್ಯ ಬಿಜೆಪಿ ಗೊಂದಲ ಬಗೆಹರಿಸಲು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನಾವು ಅದಕ್ಕೆ ಬದ್ಧರಾಗಿದ್ದೇವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಏನು ನೋಟಿಸ್ ಬಂದಿದೆ. ಅದಕ್ಕೆ ಅವರು ಏನು ಉತ್ತರ ಕೊಟ್ಟಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಅಂತಿಮವಾಗಿ ಹೈಕಮಾಂಡ್ ಪ್ರವೇಶ ಮಾಡಿರುವುದರಿಂದ ಇದು ಸರಿಯಾದ ರೀತಿಯಲ್ಲಿ, ಸಮರ್ಪಕವಾಗಿ ಮುಗಿಯುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.ಇದನ್ನೂ ಓದಿ: ಮುಸ್ಲಿಂ ವೇಷದಲ್ಲಿ ಆರ್‌ಎಸ್‍ಎಸ್, ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ – ಹೊಸ ಬಾಂಬ್ ಸಿಡಿಸಿದ ಎಂ.ಲಕ್ಷ್ಮಣ್

  • ಪ್ರಧಾನಿ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬೊಮ್ಮಾಯಿ

    ಪ್ರಧಾನಿ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬೊಮ್ಮಾಯಿ

    – ಆಪ್ ಭ್ರಷ್ಟಾಚಾರದಿಂದ ಜನ ರೋಸಿ ಹೋಗಿದ್ದಾರೆ ಎಂದ ಸಂಸದ

    ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ (AAP) ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ದೆಹಲಿ ಚುನಾವಣೆ ಫಲಿತಾಂಶದ (Delhi Election Results) ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಮೂವತ್ತು ವರ್ಷದ ನಂತರ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲಿಸಿ ದೆಹಲಿ ಜನರು ಆಪ್‌ಗೆ ಬೆಂಬಲಿಸಿದ್ದರು. ಆದರೆ ಅವರ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿದ್ದಾರೆ. ಇನ್ನೊಂದೆಡೆ ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ. ಆಪ್ ಪ್ರತಿಯೊಂದರಲ್ಲೂ ಸುಳ್ಳು ಹೇಳುವುದು, ಹಲವಾರು ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ತಾವು ಮಾಡದಿರುವ ಕೆಲಸಕ್ಕೆ ಬೇರೆಯವರನ್ನು ದೂಷಿಸುತ್ತಿದ್ದರು. ರಸ್ತೆ, ಕುಡಿಯುವ ನೀರು ಕೊಡಲು ಆಗಿಲ್ಲ. ಆಯುಷ್ಮಾನ್ ಯೋಜನೆ ಜಾರಿಗೊಳಿಸದಿರುವುದು ಬಡವರಿಗೆ ಬೇಸರ ತರಿಸಿದೆ ಎಂದು ಹೇಳಿದರು. ಇದನ್ನೂ ಓದಿ: Delhi Election Results | ಬಜೆಟ್ ಡೇ ಸೂಪರ್ ಓವರ್‌ನಲ್ಲಿ ಸೀತಾರಾಮನ್ ʻಸಿಕ್ಸ್‌ʼ – ಬಿಜೆಪಿ ಚಾಂಪಿಯನ್‌!

    ಕಾಂಗ್ರೆಸ್ ಬರೀ ಘೋಷಣೆ ಮೂಲಕ ಅಧಿಕಾರ ನಡೆಸಲು ಸಾಧ್ಯವಿಲ್ಲ. ಈಗ 21ನೇ ಶತಮಾನದಲ್ಲಿ ಯುವಕರು ಎಲ್ಲವನ್ನೂ ಗಮನಿಸುತ್ತಾರೆ. ಕಾಂಗ್ರೆಸ್ ಕೇವಲ ಘೋಷಣೆ ಮಾಡುವುದರಿಂದ ಜನರ ಮನಸ್ಸು ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ಸಾಮಾನ್ಯರ ಭಾವನೆ ಅರ್ಥ ಮಾಡಿಕೊಳ್ಳಬೇಕು. ದೆಹಲಿ ಒಂದು ನಗರದ ರಾಜ್ಯ, ಹೊರ ವಲಯದಲ್ಲಿರುವ ರೈತರು, ಹರಿಯಾಣದ ಜಾಟರು, ಪಂಜಾಬಿನ ಜನರು, ಉತ್ತರ ಪ್ರದೇಶ, ಬಿಹಾರದಿಂದ ಬಂದಿರುವ ದುಡಿಯುವ ವರ್ಗ, ಹಲವಾರು ಅಲ್ಪ ಸಂಖ್ಯಾತ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ರಾಷ್ಟ್ರೀಯತೆ ನಂಬಿರುವ ಅಲ್ಪ ಸಂಖ್ಯಾತರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ ಎಂದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಶಾಕ್- ಮೆಟ್ರೋ ದರ 46% ಏರಿಕೆ, ನಾಳೆಯಿಂದಲೇ ಜಾರಿ ಸಾಧ್ಯತೆ

    ಈ ಚುನಾವಣೆಯ ಒಟ್ಟು ಪರಿಣಾಮ ಹರಿಯಾಣ ಮಹಾರಾಷ್ಟ್ರ, ದೆಹಲಿ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯನ್ನು ಶಕ್ತಿಯುತವಾಗಿ ಮಾಡಿರುವುದು, ಇಂಡಿ ಒಕ್ಕೂಟದಲ್ಲಿ ಇನ್ನಷ್ಟು ಗೊಂದಲ ಸೃಷ್ಟಿಯಾಗಲಿದೆ. ಆಪ್‌ನವರು ತಮ್ಮನ್ನು ಸೋಲಿಸಲು ಕಾಂಗ್ರೆಸ್ ಪ್ರಯತ್ನ ಪಟ್ಟಿತ್ತು ಎಂದು ಮಾತನಾಡುತ್ತಿದ್ದಾರೆ. ಇದನ್ನು ನೋಡಿದರೆ ಇಂಡಿ ಒಕ್ಕೂಟದಲ್ಲಿ ಇನ್ನಷ್ಟು ಗೊಂದಲ ಸೃಷ್ಟಿಯಾಗುತ್ತದೆ ಎಂದು ಟೀಕಿಸಿದರು. ಇದನ್ನೂ ಓದಿ: ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ: ಅಮಿತ್ ಶಾ

  • ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ: ಬೊಮ್ಮಾಯಿ

    ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ: ಬೊಮ್ಮಾಯಿ

    ಬೆಂಗಳೂರು: ವಿಜಯೇಂದ್ರ (BY Vijayendra) ಬದಲಾವಣೆಗೆ ಯತ್ನಾಳ್ (Basangouda Patil Yatnal) ತಂಡದ ಜತೆ ಪ್ರತ್ಯೇಕ ಸಭೆ ನಡೆಸಿರುವ ವಿಚಾರವನ್ನು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ನಿರಾಕರಿಸಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೊಮ್ಮಾಯಿ, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದ್ದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ ಎಂದು ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ.

    ಪಕ್ಷದಲ್ಲಿನ ಭಿನ್ನಮತವನ್ನು ಮಾಜಿ ಮುಖ್ಯಮಂತ್ರಿ ಬಿ‌. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಬಗೆ ಹರಿಸಬೇಕು ಎಂದು ಇದೇ ವೇಳೆ ಬೊಮ್ಮಾಯಿ ಆಗ್ರಹಿಸಿದ್ದಾರೆ. ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ. ಆದರೆ ಪಕ್ಷದಲ್ಲಿ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ನಡೀತಿರೋದು ಅತ್ಯಂತ ದುರದೃಷ್ಟಕರ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬ್ಯಾಂಕ್‌ ವಂಚನೆ ಕೇಸ್‌ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು

     

    ಪ್ರಕಟಣೆಯಲ್ಲಿ ಏನಿದೆ?
    ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ‌.

    ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ‌. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು‌.

    ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

     

  • ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ – ಬೊಮ್ಮಾಯಿ ಬೇಸರ

    ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ – ಬೊಮ್ಮಾಯಿ ಬೇಸರ

    ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ವಿರುದ್ಧ ಸಮರ ಸಾರಬೇಕಾಗಿರುವ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಮಾತಿನ ಸಮರ ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.

    ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ ಎಂದರು.ಇದನ್ನೂ ಓದಿ: ಬೆಂಗಳೂರಿನಲ್ಲಿ ದುರಂತ| ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಬಲಿ

    ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆಯನ್ನು ಕಳೆದುಕೊಳ್ಳದೇ ಕರ್ನಾಟಕ ಬಿಜೆಪಿಯ ಸರ್ವೋಚ್ಛ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು.

    ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ವಾಲ್ಮೀಕಿ ಹಗರಣ | ಸಿಬಿಐ ತನಿಖೆ ಚುರುಕು ಮೂವರು ಆರೋಪಿಗಳಿಗೆ ನೋಟಿಸ್

  • ಕರ್ನಾಟಕ ಜಂಗಲ್ ರಾಜ್ಯ ಆಗಿದೆ – ಬೀದರ್ ಗುಂಡಿನ ದಾಳಿಗೆ ಬೊಮ್ಮಾಯಿ ದಿಗ್ಭ್ರಮೆ

    ಕರ್ನಾಟಕ ಜಂಗಲ್ ರಾಜ್ಯ ಆಗಿದೆ – ಬೀದರ್ ಗುಂಡಿನ ದಾಳಿಗೆ ಬೊಮ್ಮಾಯಿ ದಿಗ್ಭ್ರಮೆ

    ಬೆಂಗಳೂರು: ರಾಜ್ಯ ಜಂಗಲ್ ಆಗಿದೆ, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೀದರ್ (Bidar) ಘಟನೆಗೆ ಸಂಬಂಧಿಸಿದಂತೆ ಎಕ್ಸ್‌ದಲ್ಲಿ ಪ್ರತಿಕಿಯಿಸಿದ್ದು, ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ. ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದ್ದೂ ಭಯವಿಲ್ಲದಂತಾಗಿದೆ. ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು, ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಬೀದರ್ ದರೋಡೆಯ ಸುತ್ತ ಅನುಮಾನದ ಹುತ್ತ – ಇದು ಇದು ಪ್ರೀ ಪ್ಲಾನ್ ಎಂದ ಮೃತನ ಸಹೋದರಿ

    ಬೊಮ್ಮಾಯಿ ಎಕ್ಸ್‌ದಲ್ಲಿ ಏನಿದೆ?
    ಬೀದರ್‌ನಲ್ಲಿ ಹಾಡ ಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಅಪರಾಧ ಮಾಡುವವರಿಗೆ ಯಾರ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ.

    ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ.ಇದನ್ನೂ ಓದಿ: ಏ.16, 17ರಂದು ಸಿಇಟಿ ಪರೀಕ್ಷೆ: ಕೆಇಎ

  • ಹಸುಗಳ ಕೆಚ್ಚಲು ಕತ್ತರಿಸಿರುವ ಅಮಾನವೀಯ ಕೃತ್ಯ ಖಂಡನೀಯ: ಬೊಮ್ಮಾಯಿ

    ಹಸುಗಳ ಕೆಚ್ಚಲು ಕತ್ತರಿಸಿರುವ ಅಮಾನವೀಯ ಕೃತ್ಯ ಖಂಡನೀಯ: ಬೊಮ್ಮಾಯಿ

    – ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಬೆಂಗಳೂರು: ಚಾಮರಾಜಪೇಟೆಯ (Chamrajpet) ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು (Cow’s Udder) ಕೊಯ್ದ ದುರುಳರ ಕೃತ್ಯ ಅತ್ಯಂತ ಅಮಾನವೀಯವಾಗಿದ್ದು, ಈ ಹೀನ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಗೋಮಾತೆಯನ್ನು ತಾಯಿಯಂತೆ ಪೂಜಿಸುವ ನಮಗೆಲ್ಲ ಈ ಕೃತ್ಯ ಅತ್ಯಂತ ಘಾಸಿಯುಂಟು ಮಾಡಿದೆ. ಸುಗ್ಗಿಯ ಹಬ್ಬ ಮಕರ ಸಂಕ್ರಾತಿಯ ಸಂದರ್ಭದಲ್ಲಿ ರಾಜ್ಯದ ರಾಜ್ಯಧಾನಿಯಲ್ಲಿಯೇ ಇಂತಹ ಅಮಾನವೀಯ ಕೆಲಸ ಮಾಡಿರುವ ಪುಂಡರಿಗೆ ಈ ಸರ್ಕಾರದಲ್ಲಿ ಯಾವುದೇ ಭಯ ಇಲ್ಲದಂತೆ ಕಾಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೆಕ್ಕೆಜೋಳದ ರಾಶಿಗೆ ಬೆಂಕಿ – 10 ಲಕ್ಷಕ್ಕೂ ಅಧಿಕ ಮೌಲ್ಯದ ಮೆಕ್ಕೆಜೋಳ ಭಸ್ಮ

    ರಾಜ್ಯ ಕಾಂಗ್ರೆಸ್ ಸರ್ಕಾರ ಗೋವುಗಳಿಗೆ ಸರಿಯಾದ ರಕ್ಷಣೆ ನೀಡದಿರುವುದು, ಗೋಶಾಲೆಗಳಿಗೆ ಸರಿಯಾದ ಅನುದಾನ ನೀಡದೇ ನಿರ್ಲಕ್ಣ್ಯ ಮಾಡಿರುವುದರ ಪರಿಣಾಮ ಇಂತಹ ಹೃದಯಹೀನ ಕೃತ್ಯಗಳು ನಡೆಯಲು ಪ್ರೇರಣೆ ನೀಡಿದಂತಾಗಿದೆ. ಮೂಕ ಪ್ರಾಣಿಗಳ ಮೇಲೆ ಮಾಡಿರುವ ಇಂತಹ ಕೃತ್ಯವನ್ನು ಅಂತಃಕರಣ ಇರುವವರು ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಈ ಸರ್ಕಾರಕ್ಕೆ ಗೋಮಾತೆಯ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ಇಂತಹ ಹೇಯ ಕೃತ್ಯ ಮಾಡಿರುವ ಪುಂಡರನ್ನು ಪತ್ತೆ ಹಚ್ಚಿ ತಕ್ಷಣ ಬಂಧಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಗಾಯಗೊಂಡಿರುವ ಹಸುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಂದ್ಮೇಲೆ ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದಿರೋ ಗಿಫ್ಟ್ ಕೊಟ್ಟಿದ್ದಾರೆ: ಅಶೋಕ್ ಕಿಡಿ

  • ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬೊಮ್ಮಾಯಿ

    ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬೊಮ್ಮಾಯಿ

    – ಸಿಎಂ ಭ್ರಷ್ಟಾಚಾರ ನಿಯಂತ್ರಿಸಲು ಮುಂದಾದ್ರೆ ಕುರ್ಚಿಗೆ ಕಂಟಕವಾಗೋ ಆತಂಕ ಎಂದ ಮಾಜಿ ಸಿಎಂ

    ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳಬೇಗುದಿ ಆರಂಭದಿಂದಲೂ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವ ಪ್ರಶ್ನೆ ನಿರ್ಮಾಣವಾಗಿದ್ದು, ಕಾಲ ಸನ್ನಿಹಿತವಾಗಿದೆ. ಇದು ನಿರೀಕ್ಷಿತ ಬೆಳವಣಿಗೆ, ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿ ಅವರ ಸಹನೆ, ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ದಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಕರೆ ಮೇರೆಗೆ ಮುಂದೂಡಿಕೆಯಷ್ಟೇ – ಯಾರ ವಿರೋಧವೂ ಇಲ್ಲ: ಪರಮೇಶ್ವರ್

    ಕಾಂಗ್ರೆಸ್ ಮೇಲಿನ ಕಮಿಷನ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಎಲ್ಲದರಲ್ಲಿ ಕಮಿಷನ್, ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯೂಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್‌ಸಿ, ಎಸ್ಟಿ ಬೋರ್‌ವೆಲ್‌ಗಳಿಗೂ ಕಮಿಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮಿಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ. ಆದರೆ, ಕುಮಾರಸ್ವಾಮಿಯವರು ಹೇಳಿರುವುದು ಭ್ರಷ್ಟಾಚಾರ ಮಿತಿಮೀರಿದೆ ಎಂದು ಕಿಡಿಕಾಡಿದರು.

    ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್‌ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆಯುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಕಾಂಗ್ರೆಸ್ ದೆಹಲಿಯಲ್ಲಿ ಮಹಿಳೆಯರಿಗೆ ಪ್ಯಾರಿದೀದಿ ಯೋಜನೆ ಘೋಷಣೆ ಮಾಡಿರುವುದರಿಂದ ಅಲ್ಲಿನ ಜನರು ನಂಬುವುದಿಲ್ಲ. ಈಗಾಗಲೇ ಗ್ಯಾರಂಟಿ ಹೆಸರಿನಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕವನ್ನು ದಿವಾಳಿ ಮಾಡಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ದೆಹಲಿಯನ್ನೂ ದಿವಾಳಿ ಮಾಡುತ್ತಾರೆ. ಹೀಗಾಗಿ ಜನರು ಕಾಂಗ್ರೆಸನ್ನು ನಂಬುವುದಿಲ್ಲ ಎಂದರು.

    ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ. ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದರು.ಇದನ್ನೂ ಓದಿ: ಭಯೋತ್ಪಾದನೆ ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ – ವಿದೇಶಾಂಗ ಸಚಿವ ಜೈಶಂಕರ್

  • 40% ಆರೋಪಕ್ಕೆ ಕಾಂಗ್ರೆಸಿಗರು ಏನು ದಾಖಲೆ ಕೊಟ್ಟಿದ್ರು: ಬೊಮ್ಮಾಯಿ ಟಕ್ಕರ್

    40% ಆರೋಪಕ್ಕೆ ಕಾಂಗ್ರೆಸಿಗರು ಏನು ದಾಖಲೆ ಕೊಟ್ಟಿದ್ರು: ಬೊಮ್ಮಾಯಿ ಟಕ್ಕರ್

    ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಮ್ಮ ಆಡಳಿತದಲ್ಲಿ 40 % ಆರೋಪ ಮಾಡಿದ್ದರು. ಆಗ ಅವರು ಏನು ದಾಖಲೆ ಕೊಟ್ಟಿದ್ದರು? ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಶ್ನಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಈ ವೇಳೆ ಸರ್ಕಾರ ಯಾವ ರೀತಿ ನಡೆದುಕೊಳ್ಳತ್ತಿದೆ ಎಂದು ಗೊತ್ತು. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳಕುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಇಲ್ಲ. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಯಾವುದೇ ಇಲಾಖೆಯಲ್ಲಿ ಕೆಲಸ ಆಗತ್ತಿಲ್ಲ. ಜನಸಾಮಾನ್ಯರು, ಗುತ್ತಿಗೆದಾರರು, ಎಲ್ಲಾ ವರ್ಗದ ಜನರಿಗೆ ಭ್ರಷ್ಟಾಚಾರದ ಬಿಸಿ ಮುಟ್ಟಿದೆ. ಇನ್ನೂ ಏನೂ ಆಗಿಲ್ಲ ಎಂದು ಮುಖ್ಯಮಂತ್ರಿಗಳು ವರ್ತಿಸುತ್ತಿರುವುದು ಭ್ರಷ್ಟಾಚಾರ ಮುಚ್ಚಿ ಹಾಕುವ ಪ್ರಯತ್ನ ಎಂದು ಆರೋಪಿದ್ದಾರೆ.

    ಬಿಜೆಪಿಯೂ ಗ್ಯಾರಂಟಿ ಕೊಟ್ಟಿದೆ
    ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ ನೀವು ಏನು ಮಾಡಿದ್ದೀರಿ ಎಂಬ ಕಾಂಗ್ರೆಸ್ (Congress) ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಯೋಜನೆ ಜಾರಿ ಮಾಡಿದ್ದೇವೆ‌. ಹೆಣ್ಣು ಮಗು ಹುಟ್ಟಿದರೆ ಭಾಗ್ಯಲಕ್ಷೀ ಯೋಜನೆ ಜಾರಿ ಮಾಡಿದ್ದೇವೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೇವೆ. ಇವೆಲ್ಲವನ್ನು ಕಾಂಗ್ರೆಸ್ ಕೊಟ್ಟಿದಿಯಾ? ಆಶಾ, ಅಂಗನವಾಡಿ ಕಾರ್ಯಕರ್ತರಿಯೆ ಸಾಕಷ್ಟು ಸೌಲಭ್ಯ ಮಾಡಿದ್ದೇವೆ. ಇವರೇನು ಮಾಡಿದ್ದಾರೆ? ಒಂದು ರಸ್ತೆ ಸರಿ ಇಲ್ಲ ಎಂದು ಕಿಡಿಕಾರಿದ್ದಾರೆ.

    ಕಾಂಗ್ರೆಸ್ ಅಂಬೇಡ್ಕರ್ ವಿರೋಧಿ
    ಅಮಿತಾ ಶಾ ಅಂಬೇಡ್ಕರ್ ಕುರಿತಾದ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಅಂಬೇಡ್ಕರ್ ಅವರು ಬದುಕಿದ್ದಾಗ ಕಾಂಗ್ರೆಸ್ ಹೇಗೆ ನಡೆದುಕೊಂಡಿದೆ ಎನ್ನುವುದು ಇವತ್ತಿನ ಯುವಜನತೆಗೆ ಬಹಿರಂಗವಾಗಿದೆ. ಸಂಸತ್ತಿನಲ್ಲಿ ಎರಡು ದಿನ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ಸಂವಿಧಾನ ವಿರೋಧಿ ಹಾಗೂ ಅಂಬೇಡ್ಕರ್ ವಿರೋಧಿ ಎನ್ನುವುದು ಸ್ಪಷ್ಟವಾಗಿದೆ. ತಾವು ಮಾಡಿರುವ ಅಪರಾಧವನ್ನು ಮುಚ್ಚಿ ಹಾಕಿಕೊಳ್ಳಲು ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅಂಬೇಡ್ಕರ್ ಬಗ್ಗೆ ಗೌರವ ಇದ್ದರೆ, ಮೊದಲು ಅಂಬೇಡ್ಕರ್‌ಗೆ ಅವರ ಹಿರಿಯರು ಮಾಡಿರುವ ಅಪಮಾನಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲಿ ಎಂದಿದ್ದಾರೆ.

    ಜನ ವಿರೋಧಿ ತೀರ್ಮಾನ
    ಬಸ್ ದರ ಏರಿಕೆ ಜನ ವಿರೋಧಿ ತೀರ್ಮಾನ, ಜನರೇ ಈ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಅವರು ಶಕ್ತಿ ಯೋಜನೆ ಮಾಡಿ ಅದಕ್ಕೆ ನೀಡಬೇಕಾದ ಹಣ ಸರಿಯಾಗಿ ನೀಡುತ್ತಿಲ್ಲ. ಆ ಯೋಜನೆಯಿಂದ ಯುವಜನತೆಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೆಚ್ಚಿನ ಬಸ್‌ಗಳನ್ನೂ ನೀಡುತ್ತಿಲ್ಲ. ನಾನು ಸಿಎಂ ಆಗಿದ್ದಾಗ ಘೋಷಣೆ ಮಾಡಿರುವ ಬಸ್‌ಗಳೇ ಈಗ ಬರುತ್ತಿವೆ. ಸಾಲ ಅವರ ಕಾಲದಿಂದಲೂ ಇದೆ. ಕೊವಿಡ್ ಸಂದರ್ಭದಲ್ಲಿ ತೊಂದರೆ ಆದಾಗ ಯಡಿಯೂರಪ್ಪ ಅವರು ಸಹಾಯ ಮಾಡಿದ್ದರು. ನಮ್ಮ ಕಾಲದಲ್ಲಿ ಯಾವುದೇ ಹೊರೆಯಾಗದಂತೆ ನೋಡಿಕೊಳ್ಳಲಾಗಿತ್ತು. ಇವರು ಡಿಸೆಲ್ ದುಡ್ಡು ಕಟ್ಟಲು ಆಗದ ಪರಿಸ್ಥಿತಿಗೆ ತಂದಿದ್ದಾರೆ. ಅವರು ಗ್ಯಾರೆಂಟಿ ಯೋಜನೆಗಳಿಗೆ ಸರಿಯಾಗಿ ಸಂಪನ್ಮೂಲ ಕ್ರೋಢಿಕರಣ ಮಾಡಲಾಗದೇ ಜನರ ಮೇಲೆ ತೆರಿಗೆ ಭಾರ ಹಾಕುತ್ತಿದ್ದಾರೆ. ಕೇವಲ ಸಾರಿಗೆ ದರ ಹೆಚ್ಚಳವಲ್ಲ, ನೀರಿನ ದರ ಹೆಚ್ಚಳ, ವಿದ್ಯುತ್ ದರ ಹೆಚ್ಚಳ, ಹಾಲಿನ ದರ ಈಗಾಗಲೇ ಹೆಚ್ಚಳ ಮಾಡಿದ್ದಾರೆ. ಮತ್ತೆ ಮಾಡಲು ತೀರ್ಮಾನ ಮಾಡಿದ್ದಾರೆ. ಸ್ಟ್ಯಾಂಪ್ ಡ್ಯೂಟಿ, ಮೋಟರ್ ವೆಹಿಕಲ್ ತೆರಿಗೆ, ಪೆಟ್ರೋಲ್ ಡಿಸೇಲ್ ತೆರಿಗೆ ಹೆಚ್ಚಳ ಮಾಡಿದ್ದಾರೆ. ಜನಸಾಮಾನ್ಯರು ಬಳಸುವ ಜಲ್ಲಿಕಲ್ಲಿನ ಮೇಲೆ ತೆರಿಗೆ, ಪಶ್ಚಿಮ ಘಟ್ಟದಿಂದ ಬರುವ ನೀರಿನ ಮೇಲೆ ತೆರಿಗೆ ಹಾಕಲು ಯೋಚನೆ ಮಾಡಿದ್ದಾರೆ. ಗಾಳಿಗೆ ತೆರಿಗೆ ಹಾಕುವ ದಿನಗಳು ದೂರ ಇಲ್ಲ. ಇದೊಂದು ದುರಾಡಳಿತ, ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿರುವ ಅಭಿವೃದ್ದಿ ಶೂನ್ಯವಾಗಿರುವ ಪ್ರತಿಫಲದಿಂದ ತೆರಿಗೆಗಳ ಭಾರ ಕರ್ನಾಟಕದ ಜನರ ಮೇಲೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ವಿತಂಡವಾದ: ಬಸ್ ದರ ಏರಿಕೆಗೂ ರೈಲ್ವೆ ದರ ಏರಿಕೆಗೂ ಹೋಲಿಕೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ರೈಲ್ವೆಗೂ ಬಸ್ ದರ ಹೆಚ್ಚಳಕ್ಕೂ ಹೋಲಿಕೆ ಮಾಡಿ ವಿತಂಡವಾದ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಸಮಸ್ಯೆ ಬಗ್ಗೆ ಮಾತಾಡಲಿ. ರಾಜ್ಯದಲ್ಲಿ ರಸ್ತೆ ಗುಂಡಿಗಳು ಬಿದ್ದಿವೆ. ಚಂದ್ರನ ಮೇಲೂ ಗುಂಡಿಗಳಿವೆ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ಸೂಕ್ತ ತನಿಖೆಯಾಗಲಿ ಎಂದು ಇದೇ ವೇಳೆ ಆಗ್ರಹಿಸಿದ್ದಾರೆ.

  • ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆ – ರೈಲ್ವೆಗೆ ಬೊಮ್ಮಾಯಿ ಥ್ಯಾಂಕ್ಸ್

    ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆ – ರೈಲ್ವೆಗೆ ಬೊಮ್ಮಾಯಿ ಥ್ಯಾಂಕ್ಸ್

    ಹಾವೇರಿ: ವಿಜಯಪುರ-ಮಂಗಳೂರು (Vijayapura-Mangaluru) ನಡುವೆ ಸಂಚರಿಸುವ ಮಂಗಳೂರು ಎಕ್ಸ್‌ಪ್ರೆಸ್‌ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಧನ್ಯವಾದ ತಿಳಿಸಿದ್ದಾರೆ.ಇದನ್ನೂ ಓದಿ:ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ

    ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ವಿಜಯಪುರ-ಮಂಗಳೂರು ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ರಾಜ್ಯದ ಪ್ರಮುಖ ದೇವಸ್ಥಾನಗಳಾದ ಶ್ರೀ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗಲಿದೆ. ಬಂದರು ನಗರಿ ಮಂಗಳೂರು ನಗರಕ್ಕೆ ಈ ರೈಲು ನೇರ ಸಂಪರ್ಕವನ್ನು ಒದಗಿಸಲಿದ್ದು, ಇದರ ಸದುಪಯೋಗವನ್ನು ಪಡೆಯಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ. ನನ್ನ ಕೋರಿಕೆಗೆ ಸ್ಪಂದಿಸಿ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿದ ರೈಲ್ವೆ ಇಲಾಖೆಗೆ ಧನ್ಯವಾದಗಳು ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.

    ಯಲವಿಗಿ ರೈಲು ನಿಲ್ದಾಣದಲ್ಲಿ ವಿಜಯಪುರ – ಮಂಗಳೂರು ಎಕ್ಸ್‌ಪ್ರೆಸ್‌ ರೈಲು ಪ್ರತಿದಿನ ರಾತ್ರಿ 9:49 ಗಂಟೆಗೆ ನಿಲುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಮಾದಪ್ಪನ ಬೆಟ್ಟಕ್ಕೆ ಹೋಗುತ್ತಿದ್ದಾಗ ಕೆರೆಗೆ ಉರುಳಿದ ಕಾರು – ಇಬ್ಬರು ಸಾವು

  • ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವ್ದೇ ನಿರ್ಧಾರಕ್ಕೆ ಬರೋದು ತಪ್ಪು: ಬೊಮ್ಮಾಯಿ

    ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವ್ದೇ ನಿರ್ಧಾರಕ್ಕೆ ಬರೋದು ತಪ್ಪು: ಬೊಮ್ಮಾಯಿ

    – ಕರ್ನಾಟಕದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗ್ತಿದೆ ಎಂದ ಸಂಸದ

    ನವದೆಹಲಿ: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರು (CT Ravi) ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಆ ಬಳಿಕವಷ್ಟೆ ಕಾನೂನು ಕ್ರಮವಾಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದರು.

    ದೆಹಲಿಯಲ್ಲಿಂದು (New Delhi) ಮಾತನಾಡಿದ ಅವರು, ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ ಶಿಕ್ಷೆ ವಿಧಿಸಲಿಲ್ಲ. ಸಿ.ಟಿ.ರವಿಯವರು ತಾವು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾವು ನ್ಯಾಯ‌ಸಮರ್ಥವಾಗಿ ಮಾತನಾಡುತ್ತಿದ್ದೇವೆ. ನಾವೇನೂ ತನಿಖೆ ಬೇಡ ಎಂದು ಹೇಳಿಲ್ಲವಲ್ಲ. ಸತ್ಯಶೋಧನೆ ಆಗದೇ ತನಿಖೆಯಾಗದೇ ಯಾವುದೇ ಅಂತಿಮನಿರ್ಧಾರಕ್ಕೆ ಬರುವುದು ತಪ್ಪು ಎಂದರು.

    ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ:
    ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪೊಲೀಸ್ ರಾಜ್ಯ ನಡೆಯುತ್ತಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ. ವಿರೋಧ ಪಕ್ಷಗಳ ಮೇಲೆ ದ್ವೇಷ ಸಾಧಿಸಲು ಹಲವಾರು ಎಸ್‌ಐಟಿ ರಚನೆ ಮಾಡಿ ಹಲವಾರು ತನಿಖೆ ಮಾಡುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಅವರ ವಿರುದ್ಧವೇ ತನಿಖೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಪೊಲೀಸ್ ವ್ಯವಸ್ಥೆ ದುರ್ಬಳಕೆ ವಿಧಾನಸೌಧದವರೆಗೂ ತಲುಪಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.

    ಬೆಳಗಾವಿ ಅಧಿವೇಶನದಲ್ಲಿ ಮೊದಲು ರೈತ ಸಮುದಾಯವಾಗಿರುವ ಪಂಚಮಸಾಲಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿ ರಕ್ತ ಸುರಿಸಿದರು. ಹಲವಾರು ಬಾರಿ ರೈತರು, ಇದೇ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ಮಾಡಿದಾಗಲೂ ಈ ರೀತಿ ನಡೆದಿರಲಿಲ್ಲ. ಒಂದು ರೀತಿಯಲ್ಲಿ ಪೊಲೀಸರ ದಬ್ಬಾಳಿಕೆಯಿಂದಲೇ ಎಲ್ಲವನ್ನು ಮಾಡಬಲ್ಲೆ ಎಂಬ ಅಭಿಪ್ರಾಯ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಬಂದಂತಿದೆ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಯವರ ಬಂಧನ ಸದನದೊಳಗೆ ಆಗಿರುವ ಘಟನೆಯ ಬಗ್ಗೆ ಸಭಾಪತಿಯವರು ನಿರ್ಣಯ ಮಾಡಬೇಕು ಎಂದು ಹೇಳಿದರು.