Tag: ಬಸವರಾಜ ಬೊಮ್ಮಾಯಿ

  • ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರ ಪ್ರಭಾವ ದೊಡ್ಡದಿದೆ: ಬೊಮ್ಮಾಯಿ

    ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರ ಪ್ರಭಾವ ದೊಡ್ಡದಿದೆ: ಬೊಮ್ಮಾಯಿ

    ಹಾವೇರಿ: ಸಿಪಿ ಯೋಗೇಶ್ವರ್ (CP Yogeshwar) ಮನವೊಲಿಸಲು ಬಹಳ ಪ್ರಯತ್ನ ಮಾಡಿದ್ದೇವೆ. ಆದರೆ ಆಗಲಿಲ್ಲ. ಅವರು ಕಾಂಗ್ರೆಸ್ (Congress) ಸೇರಿರೋದು ದುರ್ದೈವದ ಸಂಗತಿ. ಕಾಂಗ್ರೆಸ್‌ಗೆ ಅಲ್ಲಿ ಅಭ್ಯರ್ಥಿಯೇ ಇರಲಿಲ್ಲ. ಅಲ್ಲಿ ಸುಲಭವಾಗಿ ಗೆಲ್ಲಬಹುದಿತ್ತು. ಆದರೂ ಚೆನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರ (HD Kumaraswamy) ದೊಡ್ಡ ಪ್ರಭಾವ ಇದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಈ ಕುರಿತು ಮಾತನಾಡಿದ ಅವರು, ಕಳೆದ ಬಾರಿ ಅಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ ಕುಮಾರಸ್ವಾಮಿ ಗೆದ್ದಿದ್ದರು. ಖಂಡಿತವಾಗಿ ಅಲ್ಲಿ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ. ಮೈತ್ರಿ ಅಭ್ಯರ್ಥಿ ಯಾರು ಅಂತ ನೀವು ಕುಮಾರಸ್ವಾಮಿಯವರನ್ನೇ ಕೇಳಬೇಕು. ಡಿಕೆ ಸುರೇಶ್ ಕಣಕ್ಕೆ ಇಳಿಸುವ ಬಗ್ಗೆ ಏನು ಗೊತ್ತಿಲ್ಲ. ಆದರೆ ಕಾಂಗ್ರೆಸ್‌ಗೆ ಅಲ್ಲಿ ಬೇಸ್ ಇಲ್ಲ ಅನ್ನೋದಂತೂ ಸ್ಪಷ್ಟ ಎಂದರು. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿಯನ್ನು ವಿದ್ಯುತ್‌ ತಂತಿಗೆ ನೂಕಿ ಹತ್ಯೆ ಆರೋಪ

    ವಿನಯ್ ಕುಲಕರ್ಣಿ ಪುತ್ರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿ, ಯಾರೇ ಆಗಲಿ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿನೇ. ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿಯೇ ಎದುರಿಸುತ್ತೇವೆ. ಸೌಹಾರ್ದ ಚುನಾವಣೆ ಮಾಡುತ್ತೇವೆ. ಅಸಮಾಧಾನ ಪ್ರತಿ ಚುನಾವಣೆಯಲ್ಲಿ ಇರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ತುಮಕೂರು| ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು

    ಬಿಜೆಪಿಯಲ್ಲಿ ಯಾವ ಬಂಡಾಯವೂ ಇಲ್ಲ. ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ ಬರುತ್ತಾರೆ. ಅಲ್ಲದೇ ರಾಜ್ಯ ಬಿಜೆಪಿ ನಾಯಕರೂ ಬರುತ್ತಾರೆ. ಮೆರವಣಿಗೆ ಮೂಲಕ ಅಕ್ಟೋಬರ್ 25 ರಂದು ನಾಮಪತ್ರ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಯೋಗೇಶ್ವರ್ ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು: ಕೋಟ ಶ್ರೀನಿವಾಸ ಪೂಜಾರಿ ಬೇಸರ

  • ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬೊಮ್ಮಾಯಿ

    ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬೊಮ್ಮಾಯಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaih) ಅವರು ಅಧಿಕಾರ ಕಳೆದುಕೊಳ್ಳುವ ಭಯದಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ. ಸಾರ್ವಜನಿಕ ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟಿದ್ದಾರೆ.

    ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಇದು ಜಾತಿ ಗಣತಿಯಲ್ಲ. ಸಾಮಾಜಿಕ ಆರ್ಥಿಕ ಸಮೀಕ್ಷೆ, ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಜನಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ (Supreme Court) ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಜನಗಣತಿಯ ಲೇಪನ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸರೋಜಕ್ಕ ಸಾಕ್ಷಾತ್ ಅನ್ನಪೂರ್ಣೇಶ್ವರಿ ಆಗಿದ್ದರು: ನಟ ಸುದೀಪ್ ತಾಯಿ ನಿಧನಕ್ಕೆ ಬೊಮ್ಮಾಯಿ ಸಂತಾಪ

    ಇನ್ನು ಈ ವರದಿ ವೈಜ್ಞಾನಿಕವಾಗಿಯೂ ಇಲ್ಲ, ಅಂಕಿ ಅಂಶ ಸಮರ್ಪಕವಾಗಿಲ್ಲ. ಹಲವು ಸಮುದಾಯಗಳಿಂದ ಆಕ್ಷೇಪಣೆ ಬಂದಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ಸಿದ್ಧಪಡಿಸಿದ್ದ ವರದಿ ಸಮರ್ಪಕವಾಗಿಲ್ಲ ಎಂದು ಅಂದಿನ ಆಯೋಗದ ಕಾರ್ಯದರ್ಶಿ ಹಾಗೂ ಸದಸ್ಯರು ಸಹಿ ಹಾಕಿರಲಿಲ್ಲ. ನಂತರ ಬಂದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗಡೆ ಅವರು, ಯಾವುದೇ ಸಮೀಕ್ಷೆ ನಡೆಸದೇ ಹಿಂದಿನ ಆಯೋಗದ ಅಧ್ಯಕ್ಷರು ಸಿದ್ಧಪಡಿಸಿದ್ದ ವರದಿಯನ್ನೇ ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ವರದಿಯನ್ನು ಒಕ್ಕಲಿಗ ಸಮುದಾಯದವರು ವಿರೋಧಿಸಿದ್ದಾರೆ. ಸ್ವತ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ (Congress) ಮುಖಂಡರು ಇದನ್ನು ವಿರೋಧಿಸಿದ್ದಾರೆ ಎಂದರು. ಇದನ್ನೂ ಓದಿ: UG-NEET: ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಕಾಲೇಜಿನಲ್ಲೇ ದಾಖಲೆ ಸಲ್ಲಿಸಿ – ಕೆಇಎ ಸೂಚನೆ

    ಇದನ್ನು ಅಖಿಲ ಭಾರತ ವೀರಶೈವ ಮಹಾಸಭೆ ಕೂಡ ವಿರೋಧಿಸಿದೆ. ಎಲ್ಲ ಸಮುದಾಯಗಳ ಅನುಮಾನ ದೂರ ಮಾಡುವ ಕೆಲಸ ಸಿಎಂ ಮಾಡುತ್ತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಲಿ. ಇಷ್ಟೆಲ್ಲ ವಿರೋಧ ಇದ್ದರೂ ಜಾರಿ ಮಾಡುತ್ತೇವೆ ಅಂತಿದ್ದಾರೆ. ಮೊದಲು ವರದಿ ಬಹಿರಂಗಪಡಿಸಲಿ, ಸಾರ್ವಜನಿಕವಾಗಿ ಚರ್ಚೆ ಆಗಲಿ. ಸಿಎಂ ಅವರು ವರದಿಯಲ್ಲಿ ಏನಿದೆ ಎಂದು ನೋಡಿಲ್ಲ ಅಂತಿದ್ದಾರೆ, ಆದರೆ ವರದಿ ತಯಾರಿ ಮಾಡಿಸಿದವರೇ ಸಿಎಂ. ದಿವಂಗತ ವಿ.ಪಿ. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಧಿಕಾರ ಹೋಗುವ ಸಂದರ್ಭದಲ್ಲಿ ಮಂಡಲ್ ವರದಿ ಜಾರಿ ಮಾಡಿದ್ದರು. ಅದೇ ರೀತಿ ಇವರು ಈಗ ಜಾತಿ ಗಣತಿ ಜಾರಿ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

    ಸಂವಿಧಾನಬದ್ಧ ತೀರ್ಮಾನ:
    ಪರಿಶಿಷ್ಟ ಜಾತಿ, ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳ, ಎಸ್‌ಸಿ ಮೀಸಲು ವರ್ಗೀಕರಣ, ಪಂಚಮಸಾಲಿ ಸಮುದಾಯದವರಿಗೆ ಪ್ರವರ್ಗ 2ಡಿಗೆ ಸೇರ್ಪಡೆ, ಮುಸ್ಲಿಮರಿಗೆ ಪ್ರತ್ಯೇಕ ಮೀಸಲು ರದ್ದು ಸೇರಿ ಎಲ್ಲವನ್ನು ನನ್ನ ಅವಧಿಯಲ್ಲಿ ಸಂವಿಧಾನಬದ್ಧವಾಗಿ ತೀರ್ಮಾನ ಮಾಡಲಾಗಿತ್ತು. ಬಿಜೆಪಿ ಸರ್ಕಾರ ಕೈಗೊಂಡ ಈ ನಿರ್ಧಾರಗಳನ್ನು ಪ್ರಶ್ನಿಸಿ ಕಾಂಗ್ರೆಸ್‌ನ ಕೆಲವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು. ವಿಧಾನಸಭೆ ಚುನಾವಣೆ ಹತ್ತಿರವಾಗಿದ್ದರಿಂದ ಮುಂದಿನ ವಿಚಾರಣೆವರೆಗೆ ಜಾರಿಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದ್ದನ್ನು ಸುಪ್ರೀಂ ಕೋರ್ಟ್ ಒಪ್ಪಿದೆಯೇ ಹೊರತು ತಡೆಯಾಜ್ಞೆ ನೀಡಿಲ್ಲವೆಂದು ಹೇಳಿದರು. ಇದನ್ನೂ ಓದಿ: ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

    ಎಸ್‌ಸಿ, ಎಸ್‌ಟಿ ಮೀಸಲು ಹೆಚ್ಚಳ, ಎಸ್‌ಸಿ ಒಳಮೀಸಲು, ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಮೀಸಲು ಕೊಡುವ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ನೈಜ ಕಾಳಜಿಯಿದ್ದರೆ ಈ ನಿಟ್ಟಿನಲ್ಲಿ ಮುಂದುವರಿಯಬೇಕು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ತಪ್ಪು ಮಾಹಿತಿ ನೀಡಿ ವಿವಿಧ ಸಮುದಾಯಗಳಿಗೆ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ಮಾಡಿದರು. ಇದನ್ನೂ ಓದಿ: ಕ್ಯಾಬಿನೆಟ್‍ಗೂ ಮುನ್ನವೇ ವೀರಶೈವ ಮುಖಂಡರ ಸಭೆ: ಶಾಮನೂರು ಶಿವಶಂಕರಪ್ಪ

    ಸೇಡಿಗಾಗಿ ರಾಜೀನಾಮೆ ಕೇಳುತ್ತಿದ್ದಾರೆ:
    ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ (Pralhad Joshi) ಅವರ ಸಹೋದರ ಗೋಪಾಲ್ ಜೋಷಿ ಬಂಧನವಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದವರು ಪ್ರಲ್ಹಾದ್ ಜೋಷಿಯವರ ರಾಜೀನಾಮೆ ಕೇಳುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಲ್ಹಾದ್ ಜೋಷಿಯವರು ಅವರ ಸೋದರನ ಜತೆ ಯಾವುದೇ ವ್ಯವಹಾರಿಕ ಹಾಗೂ ಕೌಟಿಂಬಿಕ ಸಂಬಂಧ ಇಟ್ಟುಕೊಂಡಿಲ್ಲ. ನನಗೆ ಅವರ ಕುಟುಂಬದ ಬಗ್ಗೆ ಚೆನ್ನಾಗಿ ಗೊತ್ತಿದೆ. ಕಾಂಗ್ರೆಸ್‌ನವರು ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಅವರ ವಿರುದ್ಧ ಯಾರು ಮಾತನಾಡುತ್ತಾರೆ ಅವರ ವಿರುದ್ಧ ಸೇಡಿಗಾಗಿ ಕಾಂಗ್ರೆಸ್‌ನವರು ಎಫ್‌ಐಆರ್ ಹಾಕಿಸುತ್ತಿದ್ದಾರೆ ಎಂದು ಹರಿಯಾಯ್ದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಗೆಲ್ಲುವ ಅಭ್ಯರ್ಥಿ ಸಿಪಿವೈ – ಬೆಲ್ಲದ್ ಬ್ಯಾಟಿಂಗ್

  • ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

    ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

    – ವೈಯಕ್ತಿಕ ಕಾರಣದಿಂದ ಪುತ್ರನ ಸ್ಪರ್ಧೆ ಬೇಡ ಎಂದಿದ್ದೇನೆಂದ ಸಂಸದ

    ನವದೆಹಲಿ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ‌.

    ದೆಹಲಿಯಲ್ಲಿ (New Dehli) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಬುಲಾವ್ ಮೇರೆಗೆ ದೆಹಲಿಗೆ ಬಂದಿದ್ದೇನೆ. ಅವರು, ಮಹಾರಾಷ್ಟ್ರ ಜಾರ್ಖಂಡ್ ಸಂಸದೀಯ ಮಂಡಳಿ ಸಭೆ ನಡೆಸಿ ಬಳಿಕ ನಮ್ಮಗೆ ಸಮಯ ನೀಡಲಿದ್ದಾರೆ. ಅವರನ್ನು ಭೇಟಿಯಾಗಿ ಶಿಗ್ಗಾಂವಿ (Shiggaon) ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಭಾರತ ಎಲ್ಲರಿಗಿಂತ ಮೊದಲು 6G ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಿದೆ: ಪಿಯೂಷ್ ಗೋಯಲ್

    ಶಿಗ್ಗಾಂವಿಯಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಆಧಾರದ ಮೇಲೆ ಅಭ್ಯರ್ಥಿಯ ನಿರ್ಧಾರ ಆಗುತ್ತದೆ. ನಾಳೆಯ ಸಭೆಯಲ್ಲಿ ಎಲ್ಲವೂ ಚರ್ಚೆಯಾಗಲಿದೆ. ಶಿಗ್ಗಾಂವಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಚನ್ನಪಟ್ಟಣದಲ್ಲಿ (Channapatna) ಎನ್‌ಡಿಎ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡಲಿದ್ದೇವೆ. ಇದೇ ಕಾರಣಕ್ಕೆ ಚರ್ಚಿಸಲು ಜೆ. ಪಿ ನಡ್ಡಾ ಅವರು ಕರೆದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Jharkhand Election | 70 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಜೆಎಂಎಂ ಮೈತ್ರಿಕೂಟ ಸ್ಪರ್ಧೆ ಫಿಕ್ಸ್‌

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ಬರಗಾಲ ಬಿದ್ದಾಗ ರಾಜ್ಯ ಸರ್ಕಾರ ಯಾವುದೇ ರೀತಿಯ ಸಹಾಯ ಮಾಡಲಿಲ್ಲ. ಈ ವರ್ಷ ಪ್ರವಾಹ ಬಂದಿದೆ. ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಸರ್ಕಾದದ ವಿರುದ್ದ ಹೇಳಿಕೆಗಳನ್ನು ಕೊಟ್ಟಿರುವುದನ್ನು ನಾವು ಗಮನಿಸುತ್ತಿದ್ದೇವೆ.

    ಹಣಕಾಸಿನ ಪರಿಸ್ಥಿತಿ ಬಹಳ ಶೋಚನೀಯವಾಗಿದೆ. ಹಲವಾರು ಅಧಿಕಾರಿಗಳು ತಮ್ಮ ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ. ಈ ಎಲ್ಲ ಹಿನ್ನೆಲೆಯ ಸಂದರ್ಭದಲ್ಲಿ ಉಪ ಚುನಾವಣೆಗಳು ನಡೆಯುತ್ತಿವೆ. ನಾವು ಒಂದು ರಾಷ್ಟ್ರೀಯ ಪಕ್ಷವಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಶಿಗ್ಗಾಂವಿ, ಸಂಡೂರು ಕ್ಷೇತ್ರಗಳನ್ನು ಬಿಜೆಪಿ ಅಭ್ಯರ್ಥಿಗಳು ಹಾಗೂ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ನಾವು ಕಾರ್ಯತಂತ್ರ ರೂಪಿಸುತ್ತೇವೆ. ಈ ಎಲ್ಲ ವಿಷಯಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯ To ಇಂಡಿಯಾ ಉದ್ಯೋಗ ಮೇಳ ಯಶಸ್ವಿ – 1,100 ಮಂದಿಗೆ ಉದ್ಯೋಗ

    ಶಿಗ್ಗಾಂವಿಯಲ್ಲಿ ಸ್ಥಳೀಯ ಮುಖಂಡರು ಭರತ್ ಬೊಮ್ಮಾಯಿಯವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ಜನರು ಮತ್ತು ನಾಯಕರ ನಡುವೆ ಏನು ಮಾತುಕತೆಯಾಗಿದೆಯೊ ಗೊತ್ತಿಲ್ಲ. ಆದರೆ, ನಾನು ಇಷ್ಟು ವರ್ಷ ಅಲ್ಲಿ ಉತ್ತಮ ಕೆಲಸ ಮಾಡಿರುವುದರಿಂದ ಅಲ್ಲಿನ ಜನರು ನನ್ನ ಮಗನ ಹೆಸರು ಹೇಳಿರಬಹುದು. ಆದರೆ, ನಾನು ವೈಯಕ್ತಿಕ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ಬೇಡ ಅಂತ ಅಂತ ಹೇಳಿದ್ದೇನೆ. ಅದೆಲ್ಲ ವಿಷಯವೂ ರಾಷ್ಟ್ರೀಯ ಅಧ್ಯಕ್ಷರಾ ದ ಜೆ.ಪಿ ನಡ್ಡಾ ಅವರ ಜೊತೆಗೆ ಚರ್ಚೆಯಾಗಲಿದೆ ಎಂದು ಹೇಳಿದರು.

  • ಉಪಚುನಾವಣೆಗಾಗಿ ಬಿಎಸ್‌ವೈ ಜೊತೆ ಚರ್ಚೆ, ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಲು ತೀರ್ಮಾನ: ಬೊಮ್ಮಾಯಿ

    ಉಪಚುನಾವಣೆಗಾಗಿ ಬಿಎಸ್‌ವೈ ಜೊತೆ ಚರ್ಚೆ, ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಲು ತೀರ್ಮಾನ: ಬೊಮ್ಮಾಯಿ

    ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ (BJP) ಚಟುವಟಿಕೆ ಬಿರುಸುಗೊಂಡಿದೆ.

    ಇಂದು (ಅ.17) ಬೆಳಗ್ಗೆ ಸಂಸದ ಬಸವರಾಜ ಬೊಮ್ಮಾಯಿಯವರು (Basavaraj Bommai) ಮಾಜಿ ಸಿಎಂ ಯಡಿಯೂರಪ್ಪನವರನ್ನು (BS Yediyurappa) ಬೆಂಗಳೂರಿನಲ್ಲಿ ಭೇಟಿ ಮಾಡಿ ಶಿಗ್ಗಾಂವಿ (Shiggavi) ಟಿಕೆಟ್ ಬಗ್ಗೆ ಚರ್ಚಿಸಿದರು. ಬಿಎಸ್‌ವೈಯವರ ಧವಳಗಿರಿ ನಿವಾಸಕ್ಕೆ ಆಗಮಿಸಿ ಬೊಮ್ಮಾಯಿ ಸುಮಾರು ಅರ್ಧಗಂಟೆಗಳ ಕಾಲ ಮಾತುಕತೆ ನಡೆಸಿದರು.

    ಸದ್ಯ ಶಿಗ್ಗಾಂವಿ ಕ್ಷೇತ್ರದಲ್ಲಿ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹಾಗೂ ಮಾಜಿ ಸಚಿವ ನಿರಾಣಿ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿವೆ. ತಮ್ಮ ಪುತ್ರನಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ಬೊಮ್ಮಾಯಿಯವರು ಸೇಫ್ ಗೇಮ್‌ಗೆ ಮೊರೆ ಹೋಗಿದ್ದಾರೆ. ನೇರವಾಗಿ ಯಾವುದನ್ನೂ ವ್ಯಕ್ತಪಡಿಸದೇ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದಾರೆ. ಈ ಮಧ್ಯೆ ಇಂದು ಬಿಎಸ್‌ವೈಯವರನ್ನು ಭೇಟಿ ಮಾಡಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.

    ಬಿ.ಎಸ್.ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಚುನಾವಣೆಯ ಬಗ್ಗೆ ಬಂದು ಮಾತನಾಡು ಎಂದಿದ್ದರು. ಅವರೊಂದಿಗೆ ಮಾತನಾಡಿದ್ದೇನೆ. ಶಿಗ್ಗಾಂವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಎನ್ನುವ ಕುರಿತು ಕೇಳಿದರು. ಮಾಡಿಕೊಂಡಿರುವ ಎಲ್ಲ ಸಿದ್ಧತೆಗಳ ಕುರಿತು ತಿಳಿಸಿದ್ದೇನೆ. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆಯಾಗಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಎಂದು ತೀರ್ಮಾನವಾಗಿದೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುವುದಕ್ಕೆ ಪ್ರಯತ್ನ ಮಾಡೋಣ ಎಂದಿದ್ದಾರೆ. ದೆಹಲಿಗೆ ಅ.19ರ ನಂತರ ಹೋಗುತ್ತೇನೆ ಎಂದು ಹೇಳಿದರು.

    ಚನ್ನಪಟ್ಟಣ ಟಿಕೆಟ್ ಕುರಿತು ಮಾತನಾಡಿದ ಅವರು ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

  • ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ – ಮುರುಗೇಶ್ ನಿರಾಣಿ

    ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ – ಮುರುಗೇಶ್ ನಿರಾಣಿ

    ನವದೆಹಲಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ (ByElection) ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ. ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೆಸರು ಕೇಳಿ ಬಂದಿದೆ.

    ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ಶಿಗ್ಗಾಂವಿ (Shiggaon) ಕ್ಷೇತ್ರ ಸ್ಪರ್ಧೆಗೆ ನನ್ನ ಹೆಸರು ಕೇಳಿ ಬರುತ್ತಿದೆ. ಮತ್ತೊಂದು ಜಿಲ್ಲೆಗೆ ಹೋಗಿ ನಾನು ಸ್ಪರ್ಧೆ ಮಾಡುವುದು ಸರಿ ಅಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಭರತ್ ಬೊಮ್ಮಾಯಿ ಸೇರಿ 60 ಮಂದಿ ಸ್ಪರ್ಧೆಗೆ ಅರ್ಜಿ ಹಾಕಿದ್ದಾರೆ. ಆ ಕ್ಷೇತ್ರದಲ್ಲೂ ಪಂಚಮಸಾಲಿ ಸಮಾಜದವರು ಇದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಅಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಕಲಬುರಗಿ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

    ಪಕ್ಷಕ್ಕಾಗಿ ದುಡಿದವರು ಅಲ್ಲಿದ್ದಾರೆ. ಹೀಗಾಗಿ ಪಕ್ಷದ ನಾಯಕರು ಅಥಾವ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ನಾನು ಅಲ್ಲಿಂದ ಸ್ಫರ್ಧೆ ಬಯಸುವುದಿಲ್ಲ, ಹೈಕಮಾಂಡ್ ಹಾಕುವ ಅಭ್ಯರ್ಥಿಯನ್ನು ಅಂತಿಮವಾಗಿ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನಮ್ಮದು, ನಾವು ಆ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

    ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದು, ನ.23 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಮದುವೆಯಾದ 12 ವರ್ಷಗಳ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ರಾಧಿಕಾ ಆಪ್ಟೆ

  • ಎನ್‌ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

    ಎನ್‌ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

    – ಹುಬ್ಬಳ್ಳಿ ಕೇಸ್‌ ವಾಪಸ್ ಪಡೆದದ್ದು ರಾಜ್ಯ ಸರ್ಕಾರದಿಂದ ತುಷ್ಟ್ರೀಕರಣದ ರಾಜಕಾರಣ

    ಬೆಂಗಳೂರು: ರಾಜ್ಯ ಸರ್ಕಾರ ಹುಬ್ಬಳ್ಳಿಯ ಪೊಲೀಸ್‌ ಸ್ಟೇಷನ್ ಮೇಲೆ ದಾಳಿ ಮಾಡಿರುವ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ವಾಪಸ್‌ ಪಡೆಯುವ ಮೂಲಕ ತುಷ್ಠಿಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

    ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಸ್ಟೇಷನ್ ಮೇಲೆ ದಾಳಿ ಮಾಡಿದ್ದು, ರಾಜ್ಯದ ಮೇಲಿನ ದಾಳಿಯಾಗಿದೆ. ಇದು ಗಂಭೀರವಾದ ಪ್ರಕರಣ. ಇದನ್ನು ಎನ್‌ಐಎಗೆ ನೀಡಲಾಗಿದ್ದು, ಚಾರ್ಜ್‌ಶೀಟ್ ಆಗಿದೆ. ಯುಎಪಿಐ ಅಡಿ ಎನ್‌ಐಎಗೆ ತನಿಖೆಗೆ ನೀಡುವಂತಹ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಈಗ ಇವರು ಸಮಾಜವನ್ನು ಸಂತುಷ್ಟಿ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಎನ್‌ಐಎಗೆ (NIA) ನೀಡಿರುವ ಪ್ರಕರಣವನ್ನು ವಾಪಸ್ ಪಡೆಯಲು ಬರುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೂ ಗೊತ್ತಿದೆ. ಆದರೂ, ತುಷ್ಠೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ವಿಜಯೇಂದ್ರ ಏನು ಪುರೋಹಿತನಾ, ಜ್ಯೋತಿಷಿನಾ?: ಸಿಎಂ ಸಿದ್ದರಾಮಯ್ಯ

    ರಾಜ್ಯ ಸರ್ಕಾರ ದೊಡ್ಡ ತಪ್ಪು ಸಂದೇಶ ರವಾನೆ ಮಾಡುತ್ತಿದೆ. ರಾಜ್ಯದಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣ, ಮಂಗಳೂರಿನಲ್ಲಿ ಗಲಭೆ, ಹುಬ್ಬಳ್ಳಿಯಲ್ಲಿ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಲಾಗಿದೆ. ಹಾಗಿದ್ದರೆ ಇನ್ನು ಮುಂದೆ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ತಮ್ಮ ರಕ್ಷಣೆ ಮಾಡಿಕೊಳ್ಳದಂತಹ ಪರಿಸ್ಥಿತಿಗೆ ಬಂದಿದೆ. ನನ್ನ ಪ್ರಕಾರ ಕಾನೂನು ಸುವ್ಯವಸ್ಥೆ ಕಿತ್ತು ಹೋಗಿದೆ. ಈ ಥರ ಒಂದು ಕಾನೂನಾತ್ಮಕ ಚಿಂತನೆಯನ್ನೂ ರಾಜ್ಯ ಸರ್ಕಾರ ಕಳೆದುಕೊಂಡಿದೆಯಲ್ಲ ಎಂದು ಖೇದ ಅನಿಸುತ್ತಿದೆ. ತಮ್ಮ ತಪ್ಪು ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಈ ರೀತಿಯ ಆತುರದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

    ಸರ್ಕಾರ ಹುಬ್ಬಳ್ಳಿ ಕೇಸ್‌ (Hubballi Riots) ವಾಪಸ್‌ ಪಡೆದಿರುವುದನ್ನು ವಿರೋಧಿಸಿ ಬಿಜೆಪಿಯವರು ಶಾಂತಿಯುತವಾಗಿ ಮನವಿ ಸಲ್ಲಿಸಲು ತೀರ್ಮಾನಿಸಿದ್ದರೂ, ಪೊಲೀಸರು ಅನುಮತಿ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಪೊಲೀಸ್ ರಾಜ್ಯವಾಗಿದೆ. ಇಲ್ಲಿ ಪಜಾಪಭುತ್ವ ಇಲ್ಲದಾಗಿದೆ ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದು ಸಿಎಂ ಭಯೋತ್ಪಾದಕರ ಬೆಂಬಲಿಗ: ಜೋಶಿ ವಾಗ್ದಾಳಿ

    ರಾಜ್ಯ ಸರ್ಕಾರ ದುಷ್ಟರ ಸಂಹಾರ ಮಾಡುವ ಬಗ್ಗೆ ಜಾಹೀರಾತು ನೀಡಿರುವ ಕುರಿತು ಪ್ರತಿಕ್ರಿಯಿಸಿ, ಇದು ಅಪರಾಧಿ ಮನೋಭಾವ. ತಾವು ಏನೂ ತಪ್ಪು ಮಾಡಿಲ್ಲ ಎಂಬ ಭಾವನೆ ಮೂಡಿಸುವ ಸಲುವಾಗಿ ಇತರರನ್ನು ದುಷ್ಟರು ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಹಿಂದೆ ಆಗಿರಲಿಲ್ಲ. ಸರ್ಕಾರಿ ಜಾಹೀರಾತನ್ನು ತಮ್ಮ ಸ್ವಂತ ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಪಥಮ. ಇದು ಅತ್ಯಂತ ಖಂಡನೀಯ ಎಂದು ಬೇಸರಿಸಿದರು.

  • ಹರಿಯಾಣದ ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ: ಬಸವರಾಜ ಬೊಮ್ಮಾಯಿ

    ಹರಿಯಾಣದ ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ: ಬಸವರಾಜ ಬೊಮ್ಮಾಯಿ

    ಬೆಂಗಳೂರು: ಹರಿಯಾಣದ (Haryana) ಜನ ಕಾಂಗ್ರೆಸ್‌ನ ಜಾತಿ ರಾಜಕಾರಣ ತಿರಸ್ಕರಿಸಿದ್ದಾರೆ. ಬಿಜೆಪಿ ಸಂಪೂರ್ಣ ವಿಜಯದತ್ತ ದಾಪುಗಾಲು ಹಾಕ್ತಿದೆ. ಮೋದಿಯವರ ವರ್ಚಸ್ಸು, ಕಾರ್ಯಕರ್ತರ ಶ್ರಮ ವಿಜಯ ತಂದುಕೊಟ್ಟಿದೆ. ಇಡೀ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗ್ತಿದೆ ಅನ್ನೋದಕ್ಕೆ ಇದು ದಿಕ್ಸೂಚಿ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಈ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸಿನ (Congress) ಜಾತಿ ರಾಜಕಾರಣವನ್ನು ಹರಿಯಾಣದ ಜನ ತಿರಸ್ಕರಿಸಿದ್ದಾರೆ. ಹೀಗಾಗಿ ಮತ್ತೊಮ್ಮೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಶ್ರೇಷ್ಠ ಭಾರತ್, ಅಮೃತ್ ಕಾಲ್ ಈ ವಿಚಾರಕ್ಕೆ ಜನ ಸಾಥ್ ಕೊಟ್ಟಿದ್ದಾರೆ. ಮಹಾರಾಷ್ಟ್ರದಲ್ಲೂ ಮುಂದೆ ಇದೇ ಫಲಿತಾಂಶ ಬರಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

    ಇನ್ನೂ ಜಾತಿಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಮಾತನಾಡಿ, ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಬಾರದು. ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡಬೇಕು. ನಾಳೆ ಸಮಾಜದಲ್ಲಿ ಅದು ಗೊಂದಲವನ್ನು ಉಂಟುಮಾಡುವಂತೆ ಇರಬಾರದು ಎಂದು ನಾವು ಈಗಾಗಲೇ ಸೂಚಿಸಿದ್ದೇವೆ. ಆದರೆ ಕಾಂಗ್ರೆಸ್‌ನವರು ಡಬಲ್ ಗೇಮ್ ಆಡ್ತಿದ್ದಾರೆ. ಸುಪ್ರೀಂಕೋರ್ಟ್ ಆದೇಶ ಬಂದ ನಂತರ ಒಳಮೀಸಲಾತಿ ವಿಚಾರದಲ್ಲಿ ನಾಟಕ ಮಾಡುತ್ತಿದ್ದಾರೆ. ಕಾಂಗ್ರೆಸ್‌ಗೆ ದಲಿತರು, ಒಬಿಸಿ ವರ್ಗಗಳ ಮೇಲೆ ಯಾವುದೇ ಕಾಳಜಿ ಇಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಮೋದಿ ಹಳ್ಳಿ-ಹಳ್ಳಿಗೆ ಹೋಗಿ ಕರ್ನಾಟಕದ ವಿಚಾರ ಪ್ರಚಾರ ಮಾಡ್ತಾರೆ, ಅದ್ಕೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತೆ: ಕೋಳಿವಾಡ

    ಹಿಂದುಳಿದ ವರ್ಗಗಳ ಚಾಂಪಿಯನ್ ಅಂತ ಸಿದ್ದರಾಮಯ್ಯ ಕರೆಸಿಕೊಂಡಿದ್ದಾರೆ. ಅವರ ಕಾಲದಲ್ಲೇ ಕಾಂತರಾಜ್ ವರದಿ ಸಲ್ಲಿಕೆ ಆಯ್ತು. ಆಗ ಯಾಕೆ ಅವರು ವರದಿ ಜಾರಿ ಮಾಡಲಿಲ್ಲ? ಜಯಪ್ರಕಾಶ್ ಹೆಗಡೆ ಅಧ್ಯಯನ ಮಾಡದೇ ಕಾಂತರಾಜ್ ಡೇಟಾ ತಗೊಂಡು ವರದಿ ಸಲ್ಲಿಸಿದ್ದಾರೆ. ಇದರಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಎಷ್ಟರ ಮಟ್ಟಿಗೆ ಸಿಗುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: Haryana Election Results | ಆಪ್‌ನಿಂದ ಬಿಜೆಪಿ ಮುನ್ನಡೆ?

    ವರದಿ ವೈಜ್ಞಾನಿಕವಾಗಿ ನಡೆದಿರಬೇಕು, ಎಲ್ಲರಿಗೂ ನ್ಯಾಯ ಸಿಗಬೇಕು ಎಂಬ ನಮ್ಮ ನಿಲುವು ಸ್ಪಷ್ಟವಾಗಿದೆ. ಈಗ ಸಿದ್ದರಾಮಯ್ಯ (CM Siddaramaiah) ತಮ್ಮ ಮೇಲಿನ ಹಗರಣ ಮರೆಮಾಚಲು ಜಾತಿ ಜನಗಣತಿ ವರದಿ ಬಳಕೆ ಮಾಡ್ಕೊಳ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಜನ ನೋಡಿಕೊಳ್ಳಬೇಕು ಎಂದು ಹೇಳಿದರು.  ಇದನ್ನೂ ಓದಿ: ಹರಿಯಾಣದಲ್ಲಿ ನಮ್ದೇ ಸರ್ಕಾರ, 50 ಸೀಟ್‌ ಪಕ್ಕಾ ಅಂತ ಆಂತರಿಕ ಸಮೀಕ್ಷೆ ಹೇಳಿದೆ: ಪರಮೇಶ್ವರ್‌

  • ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರು ಸಿಎಂ ಬದಲಾವಣೆ ಅವಸರದಲ್ಲಿದ್ದಾರೆ- ಬಸವರಾಜ ಬೊಮ್ಮಾಯಿ

    ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರು ಸಿಎಂ ಬದಲಾವಣೆ ಅವಸರದಲ್ಲಿದ್ದಾರೆ- ಬಸವರಾಜ ಬೊಮ್ಮಾಯಿ


    ಗದಗ: ಕಾಂಗ್ರೆಸ್ (Congress) ಆಡಳಿತ ಪಕ್ಷದಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ. ಕಳೆದ 1 ತಿಂಗಳಿಂದ ಹಿರಿಯ ಸಚಿವರ ಚಟುವಟಿಕೆ ಗಮನಿಸಿದಾಗ, ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರು ಮುಖ್ಯಮಂತ್ರಿಗಳ ಬದಲಾವಣೆ ಅವಸರದಲ್ಲಿದ್ದಾರೆ ಅಂತ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ನಗರದ ಸರಾಫ್ ಬಜಾರ್‌ನಲ್ಲಿರುವ ಅಂಬಾಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಿನ ಮುಖ್ಯಮಂತ್ರಿಯನ್ನು ತೆಗೆದರೆ ತಮಗೆ ಅವಕಾಶ ಇದೆ ಎಂದು ಅವರದ್ದೇ ಪಕ್ಷದ ಬಹಳ ಹಿರಿಯ ಸಚಿವರು ಅಂದುಕೊಂಡಿದ್ದಾರೆ. ಮುಂದೆ ನಮ್ಮ ಸರ್ಕಾರ ಬರೋದಿಲ್ಲ ಎಂಬುದು ಅವರಿಗೆ ಗೊತ್ತಿದೆ. ಈ ನಿಟ್ಟಿನಲ್ಲಿ ಅವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಇದರ ಒಟ್ಟು ಪರಿಣಾಮದಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಸ್ಥಗಿತವಾಗಿದೆ ಎಂದರು. ಇದನ್ನೂ ಓದಿ: Kolar | ಪತಿಯಿಂದ ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

    ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಯಾವುದಕ್ಕೂ ಹಣ ಬಿಡುಗಡೆ ಆಗುತ್ತಿಲ್ಲ. ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ನಿಂತು ಹೋಗಿವೆ. ಇದರಿಂದ ರಾಜ್ಯ ಇನ್ನಷ್ಟು ಹಿನ್ನಡೆ ಆಗುತ್ತಿದೆ. ಕಳೆದ 2-3 ತಿಂಗಳಿಂದ ಹಗರಣಗಳ ಸುರಿಮಳೆ ಆಗುತ್ತಿದೆ. ಮುಡಾ ಹಗರಣದಲ್ಲಿಯೇ (MUDA Scam) ಕಾಲ ಕಳೆದು ಹೊಯ್ತು. ಇಂತಹ ಒಂದು ಸರ್ಕಾರ ಪಡೆದುಕೊಂಡಿದ್ದು ಕರ್ನಾಟಕದ ದೌರ್ಭಾಗ್ಯ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಜಾತಿಗಣತಿ ವರದಿ ಬಗ್ಗೆ ಅಭಿಪ್ರಾಯ ಹೇಳ್ತೀನಿ – ಈಶ್ವರ್ ಖಂಡ್ರೆ

    ವಿಜಯೇಂದ್ರವರು (B Y Vijayendra) ಜಾರಕಿಹೊಳಿ ಭೇಟಿ ವಿಚಾರವಾಗಿ ಮಾತನಾಡಿ, ಅವರ ಬೇರೆ ಕೆಲಸಗಳಿಗೆ ಭೇಟಿ ಆಗಿರಬಹುದು. ಈ ಸರ್ಕಾರವನ್ನು ಅಭದ್ರಗೊಳಿಸುವ ಪ್ರಯತ್ನ ನಾವು ಮಾಡುತ್ತಿಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ವಿನಹ ಈ ಸರ್ಕಾರ ಅಭದ್ರಗೊಳಿಸುವಂತಹದ್ದು ಯಾವುದು ಇಲ್ಲ. ದಸರಾ (Dasara) ನಂತರ ಸಿಎಂ ಬದಲಾವಣೆ ಆಗ್ತಾರೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ಅವರ ಲೆಕ್ಕಾಚಾರ ಇರಬಹುದು. ಆದ್ರೆ ಸಿಎಂ ಆತ್ಮಸಾಕ್ಷಿಯ ಬಗ್ಗೆ ಮಾತನಾಡ್ತಾರೆ. ಅವರ ಮಾತುಗಳ ನೋಡಿದಾಗ ರಾಜೀನಾಮೆ ಕೊಡಲು ಮಾನಸಿಕವಾಗಿ ತಯಾರು ಆಗಿದ್ದಾರೆ ಅನಿಸುತ್ತೆ ಎಂದರು. ಇದನ್ನೂ ಓದಿ: ಸಿಎಂ ಹುದ್ದೆ ಕನಸು ಕಂಡರೆ ಹೇಳುವೆ, ಸದ್ಯಕ್ಕೆ ಬೇಡ – ಸಿಎಂ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ವಿಜಯೇಂದ್ರ

    ಜಾತಿಗಣತಿ ಬಿಡುಗಡೆ ವಿಚಾರದಲ್ಲಿ ಬಿ.ಕೆ ಹರಿಪ್ರಸಾದ್ ಹೇಳಿಕೆ ನೋಡಿದ್ರೆ ಅವರ ಮನದಾಳದ ಮಾತು ಹೇಳಿದ್ದಾರೆ. ಜಾತಿಗಣತಿ ಬರುವುದು ಮುಖ್ಯನಾ? ಸರ್ಕಾರ ಬಿಳುವುದು ಮುಖ್ಯನಾ ಅನ್ನುವುದನ್ನು ಅವರೇ ಸ್ಪಷ್ಟೀಕರಣ ಕೊಡಬೇಕು ಎಂದರು. ನಿಖರವಾಗಿ ಜಾತಿಗಣತಿ ಆದೇಶ ಅದರಲ್ಲಿ ಇಲ್ಲ. ಕಾಂತರಾಜ್ ಕೊಟ್ಟ ವರದಿ ಆಗ ಸ್ವೀಕರಿಸಲಿಲ್ಲ. 2018 ರಲ್ಲಿ ವರದಿ ಕೊಟ್ಟಿದ್ರು ಆಗ ಯಾಕೆ ಮಾಡಲಿಲ್ಲ? ಯಾಕೆ ಪೆಂಡಿಂಗ್ ಇಟ್ರು? ಜಯಪ್ರಕಾಶ್ ಹೆಗ್ಡೆ 2-3 ತಿಂಗಳಲ್ಲಿ ಹೇಗೆ ವರದಿ ಕೊಡ್ತಾರೆ ಎಂದು ಪ್ರಶ್ನಿಸಿದರು. ಅವರು ಮೂರು ವರ್ಷ ಡೇಟಾ ತೆಗೆದುಕೊಂಡಿದ್ರು. ಇವರು ಏನಿಲ್ಲದೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ತೇಪೆ ಹಚ್ಚಿದ ಆ ವರದಿ ತೆಗೆದುಕೊಂಡು ಹಿಂದುಳಿದ ವರ್ಗ ಅಭಿವೃದ್ಧಿ ಮಾಡ್ತೆವಿ ಅಂತಿದ್ದಾರೆ. ಇದು ಬಹಳ ಗೊಂದಲವಿದೆ, ಈ ಗೊಂದಲ ಸ್ಪಷ್ಟವಾಗಬೇಕು. ಅದಕ್ಕಾಗಿ ಜಾತಿಗಣತಿ ಬಿಡುಗಡೆ ಮಾಡ್ರಿ ಅಂತ ನಾನು ಹೇಳಿದ್ದೆನೆ ಎಂದು ಹೇಳಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳ| ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ- 7 ಮಂದಿ ಸಾವು, ಹಲವರಿಗೆ ಗಾಯ

    ಕಾಂಗ್ರೆಸ್ ಪಕ್ಷದಲ್ಲಿಯೇ ಮೊದಲಿಂದಲೂ ವಿರೋಧವಿದೆ. ಡಿಕೆ ಶಿವಕುಮಾರ್, ಶಾಮನೂರು ಶಿವಶಂಕ್ರಪ್ಪ, ಎಂ.ಬಿ ಪಾಟೀಲ ಎಲ್ಲರು ಮಾಹಿತಿ ಕೊಟ್ಟಿದ್ದಾರೆ. ಅವರಿಲ್ಲಿಯೇ ಹೊಂದಾಣಿಕೆ, ಸ್ಪಷ್ಟತೆ ಇಲ್ಲ. ಎಲ್ಲಾ ಗೊಂದಲ ನಿವಾರಣೆ ಮಾಡಿ ಜಾತಿಗಣತಿ ಆದಷ್ಟು ಬೇಗನೆ ಹೊರಗೆ ಬರಲಿ. ಇನ್ನು ಉಪಚುನಾವಣೆ ಕುರಿತು ಚನ್ನಪಟ್ಟಣದಲ್ಲಿ ಮೈತ್ರಿ ಗೊಂದಲ ನಿವಾರಣೆ ಆಗುತ್ತೆ. ಕಾಯ್ದು ನೋಡಿ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಕೇಳೋ ಮೊದಲು ವಿಜಯೇಂದ್ರ ರಾಜೀನಾಮೆ ನೀಡಲಿ: ಈಶ್ವರ್ ಖಂಡ್ರೆ

    ಈ ವೇಳೆ ಬಿಜೆಪಿ (BJP) ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಅನಿಲ ಅಬ್ಬಿಗೇರಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು. ಇದನ್ನೂ ಓದಿ: ವಿಜಯೇಂದ್ರ ಏನು ಹೈಕಮಾಂಡಾ? – ಸಿಎಂ ರಾಜೀನಾಮೆ ಹೇಳಿಕೆಗೆ ಜಮೀರ್ ತಿರುಗೇಟು

  • ಸೈಟ್ ವಾಪಸ್ ಕೊಟ್ಟು ಸಿಎಂ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ : ಬೊಮ್ಮಾಯಿ

    ಸೈಟ್ ವಾಪಸ್ ಕೊಟ್ಟು ಸಿಎಂ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ : ಬೊಮ್ಮಾಯಿ

    ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ (MUDA Site) ವಾಪಸ್ ಕೊಟ್ಟಿರುವ ವಿಚಾರವಾಗಿ ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು ಎಂದು ಪ್ರತಿಕ್ರಿಯೆ ನೀಡಿದರು.ಇದನ್ನೂ ಓದಿ: ರಾಯಚೂರಿನಿಂದ ಬೀದರ್‌ಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 6 ಲಾರಿಗಳ ಜಪ್ತಿ

    ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ, ಈಗ ತನಿಖೆ ಆರಂಭವಾಗಿದೆ. ಈಗ ಸೈಟ್ ವಾಪಸ್ ಕೊಟ್ಟಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ. ವಾಪಸ್ ಕೊಡುವ ಮೂಲಕ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ. ಎಫ್‌ಐಆರ್ ಆದ ಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್‌ಐಆರ್ ಮಾಡಿಕೊಂಡು ತನಿಖೆ ಮಾಡುತ್ತಿದೆ. ಕಾಂಗ್ರೆಸ್ (Congress) ನಾಯಕರು ತಪ್ಪೇ ನಡೆದಿಲ್ಲ ಎಂದು ಹೇಳುತ್ತಿದ್ದರು ಎಂದು ತಿಳಿಸಿದರು.

    ಸೈಟ್ ವಾಪಸ್ ಕೊಡುವ ಮೂಲಕ ತಪ್ಪಾಗಿದೆ ಎನ್ನುವುದು ಒಪ್ಪಿಕೊಂಡಂತಾಗಿದೆ. ಈ ಹಿಂದೆ ಯಡಿಯೂರಪ್ಪ ಸೈಟ್ ವಾಪಸ್ ಮಾಡಿದಾಗ ಇದೇ ಸಿದ್ದರಾಮಯ್ಯ ಏನು ಹೇಳಿದ್ದರು ಎಂದು ನೆನಪಿಸಿಕೊಳ್ಳಲಿ. ಆಗ ಸಿದ್ದರಾಮಯ್ಯ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು. ಇದೇ ಮಾತು ಈಗ ಸಿದ್ದರಾಮಯ್ಯ ಅವರಿಗೂ ಅನ್ವಯ ಆಗುತ್ತದೆ. ಸೈಟ್ ವಾಪಸ್‌ನೊಂದಿಗೆ ಸೈಟು ಹಂಚಿಕೆ ಕಾನೂನುಬಾಹಿರವಾಗಿ ಹಾಗೂ ಅಕ್ರಮವಾಗಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ಯುಕೆ ಸಂಸತ್‌ನಲ್ಲಿ ಬಸವಣ್ಣನ `ಇವನ್ಯಾರವ’ ವಚನ ಪಠಿಸಿ ಕನ್ನಡ ಪ್ರೇಮ ಮೆರೆದ ಆದೀಶ್

  • ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

    ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

    ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು (Brand Bengaluru) ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ ಕಲ್ಪಿಸಿದ್ದಾರೆ. ಹೀಗಾಗಿ ಇದು ಬ್ರ್ಯಾಂಡ್ ಬೆಂಗಳೂರು ಆಗುತ್ತದೊ, ಬ್ಯಾಂಡ್ ಬೆಂಗಳೂರು ಆಗುತ್ತದೊ ಗೊತ್ತಿಲ್ಲ. ಬೆಂಗಳೂರನ್ನು ಸ್ವಚ್ಛ ಬೆಂಗಳೂರನ್ನಾಗಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಸೋಮಕ್ಷತ್ರಿಯ ಗಾಣಿಗ ಸಮುದಾಯದ ಶ್ರೀ ವೇಣುಗೋಪಾಲಕೃಷ್ಣ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಗಾಣಿಗ ಸಮಾಜ ತನ್ನದೇ ಆದ ಇತಿಹಾಸ ಪರಂಪರೆ ಹೊಂದಿದೆ. ಚಿಂತನೆಯಲ್ಲಿ ಬಹಳ ಶ್ರೇಷ್ಠವಾಗಿದೆ. ವಿಜಯನಗರ ಕಾಲದಿಂದಲೂ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡು ಬಂದಿದೆ. ಯಾರಿಗೆ ಸ್ವಾಭಿಮಾನದ ಬದುಕು ಬದುಕಲು ಸಾಧ್ಯವಿಲ್ಲವೋ ಅವರಿಗೆ ಬದುಕು ಕಟ್ಟುವ ಕೆಲಸ ಮಾಡುವುದು ಮುಖ್ಯ. ಬಡತನದಿಂದ ಬಂದು ಬಡವರ ಪರವಾಗಿ ಕೆಲಸ ಮಾಡುವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರು. ಅವರು ಗಾಣಿಗ ವೃತ್ತಿ ಮಾಡುತ್ತ ಬೆಳೆದವರು. ಅವರನ್ನು ನೋಡಿದಾಗ ಈ ಸಮಾಜದ ಶಕ್ತಿ ಎಷ್ಟಿದೆ ಅಂತಾ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ

    ಒಂದು ಕಾಲ ಇತ್ತು. ಭೂಮಿ ಇದ್ದವರು ಜಗತ್ತು ಆಳುತ್ತಿದ್ದರು. ನಂತರ ಹಣ ಇದ್ದವರು ಜಗತ್ತು ಆಳುತ್ತಿದ್ದರು. ಈಗ 21 ನೇ ಶತಮಾನ, ಇದು ಜ್ಞಾನದ ಯುಗ. ಜ್ಞಾನ ಎಲ್ಲಿದೆಯೋ ಅವರು ಜಗತ್ತನ್ನು ಆಳುತ್ತಾರೆ. ಅನೇಕ ವಿದೇಶಿಗರು ಭಾರತಕ್ಕೆ ಬಂದರೆ ಮೊದಲು ಬೆಂಗಳೂರಿಗೆ ಬರುತ್ತಾರೆ. ಅವರು ಬಂದು ವಿಧಾನಸೌಧಕ್ಕೆ ಬರುವುದಿಲ್ಲ. ಇನ್ಫೊಸಿಸ್ ಹಾಗೂ ವಿಪ್ರೋ ಕಡೆಗೆ ಹೋಗುತ್ತಾರೆ ಎಂದು ತಿಳಿಸಿದರು.

    ಗಾಣಿಗ ಸಮಾಜ ಉತ್ತಮ ಐಕ್ಯೂ ಇರುವ ಸಮಾಜ. ಬುದ್ದಿವಂತರ ಸಮಾಜ. ಕಾರ್ಪೋರೇಷನ್ ಬ್ಯಾಂಕ್ ಅಧ್ಯಕ್ಷರಾಗಿದ್ದ ಅಣ್ಣಿಗೇರಿಯವರು ದೊಡ್ಡ ಬ್ಯಾಂಕ್ ನಡೆಸಿದರು. ಈ ಸಮಾಜದ ಮಕ್ಕಳಲ್ಲಿ ಪ್ರತಿಭೆ ಇದೆ. ಈ ಕಟ್ಟಡ ಕಟ್ಟಿರುವುದು ಒಳ್ಳೆಯದು. ಇದರಿಂದ ಬರುವ ಆದಾಯ ನಿಮ್ಮ ಮಕ್ಕಳ ಬವಿಷ್ಯಕ್ಕೆ ಬಳಸಿಕೊಳ್ಳಿ. ಎಸ್.ಎಂ.ಕೃಷ್ಣ ಅವರು ಜಮೀನು ಕೊಟ್ಟಿದ್ದಕ್ಕೆ ಈ ಕಟ್ಟಡ ಕಟ್ಟಲು ಸಾಧ್ಯವಾಗಿದೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದರು. ಇದನ್ನೂ ಓದಿ: ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ

    ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ಜನೋಪಯೋಗಿ ಶಾಸಕರಾಗಿದ್ದಾರೆ. ಅವರು ಕೇಳಿದ ಕೆಲಸಗಳಿಗೆಲ್ಲ ಹಣ ಕೊಟ್ಟಿದ್ದೇನೆ. ಈ ಭಾಗದಲ್ಲಿ ರಸ್ತೆ ಮಾಡಲು ಮಾಲೀಕರು ಜಮೀನು ನೀಡಲು ನಿರಾಕರಿಸಿದಾಗ ಮುನಿರತ್ನ ಅವರು ತಮ್ಮ ಬಾಂಡ್ ಪೇಪರ್‌ನಲ್ಲಿ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಬರೆದು ಕೊಟ್ಟರು. ಮುನಿರತ್ನ ಅವರು ಕೋವಿಡ್ ಸಂದರ್ಭದಲ್ಲಿ ಜನರಿಗೆ ಮಾಡಿರುವ ಕೆಲಸದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಮುನಿರತ್ನ ಅವರು ಕ್ಷೇತ್ರವನ್ನು ಸ್ವಚ್ಛವಾಗಿ ಇಟ್ಟುಕೊಂಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ, ಮಾಜಿ ಸಭಾಪತಿ ವಿ.ಆರ್. ಸುದರ್ಶನ, ಬಿಜೆಪಿ ಯುವ ಮುಖಂಡ ಭರತ ಬೊಮ್ಮಾಯಿ, ಚನ್ನಮ್ಮ ಬಸವರಾಜ ಬೊಮ್ಮಾಯಿ, ಮಂಜುನಾಥ ಉಡುಪಿ ಸೇರಿದಂತೆ ಗಾಣಿಗ ಸಮುದಾಯದ ಮುಖಂಡರು ಹಾಜರಿದ್ದರು.