Tag: ಬಸವರಾಜ ಹೊರಟ್ಟಿ

  • ಬಾರ್ಬಡೋಸ್ ಸಂಸತ್ತಿಗೆ ಹೊರಟ್ಟಿ, ಖಾದರ್ ಭೇಟಿ

    ಬಾರ್ಬಡೋಸ್ ಸಂಸತ್ತಿಗೆ ಹೊರಟ್ಟಿ, ಖಾದರ್ ಭೇಟಿ

    ಬ್ರಿಡ್ಜ್‌ಟೌನ್‌: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಮತ್ತು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ (UT Khader) ಬಾರ್ಬಡೋಸ್  ಸಂಸತ್ತಿಗೆ (Barbados Parliament) ಭೇಟಿ ನೀಡಿದ್ದಾರೆ.

    68ನೇ ಅಂತರರಾಷ್ಟ್ರೀಯ ಕಾಮನ್‌ವೆಲ್ತ್ (Commonwealth) ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‌ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಬಸವರಾಜ ಹೊರಟ್ಟಿ ಯು.ಟಿ.ಖಾದರ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು. ಇದನ್ನೂ ಓದಿ: ಗಾಜಾ ಯುದ್ಧ ಅಂತ್ಯ | ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆ ಮಾಡಿದ ಹಮಾಸ್

    ಬಾರ್ಬಡೋಸ್ ಸಂಸತ್ತಿನ ಸಭಾಧ್ಯಕ್ಷರ ಪೀಠವು ಭಾರತದಿಂದ ಕೊಡಲ್ಪಟ್ಟಿದೆ. ಇದು ಭಾರತ ಮತ್ತು ಬಾರ್ಬಡೋಸ್ ನಡುವಿನ ಸ್ನೇಹ ಮತ್ತು ಸಂಸತ್ತೀಯ ಸಹಕಾರದ ಸಂಕೇತವಾಗಿದೆ.

    ಈ ಸಮ್ಮೇಳನವು ಬಾರ್ಬಡೋಸ್ ಶಾಸಕಾಂಗದ ಕಾರ್ಯನಿರ್ವಹಣೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಅಂತರ-ಸಂಸದೀಯ ಸಂಬಂಧಗಳನ್ನು ಬಲಪಡಿಸಲು ಮಹತ್ವದ ಅವಕಾಶವನ್ನು ಒದಗಿಸಿತು.

  • ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ನಲ್ಲಿರುವ ನಾಸಾ (NASA) ಬಾಹ್ಯಾಕಾಶ ಕೇಂದ್ರಕ್ಕೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಹಾಗೂ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ (UT Khader) ಭೇಟಿ ನೀಡಿದ್ದಾರೆ.

    ಬಾರ್ಬಡೋಸ್‌ನಲ್ಲಿ ನಡೆಯುವ 68ನೇ ಅಂತರಾಷ್ಟ್ರೀಯ ಕಾಮನ್ವೆಲ್ತ್ ಸ್ಪೀಕರ್ಸ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ತೆರಳಿರುವ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಭಾಧ್ಯಕ್ಷ ಯು.ಟಿ.ಖಾದರ್ ರವರು ಅಧ್ಯಯನ ಪ್ರವಾಸದ ಭಾಗವಾಗಿ ಅಮೇರಿಕಾದಲ್ಲಿರುವ NASA ಕಛೇರಿಗೆ ಭೇಟಿ ನೀಡಿದರು. ಇದನ್ನೂ ಓದಿ:  4 ವರ್ಷದಿಂದ ಗೋಕರ್ಣ ಮಹಾಬಲೇಶ್ವರ ದೇವರಿಗಿಲ್ಲ ಭಕ್ತರಿಂದ ವಿಶೇಷ ಪೂಜೆ

  • ವಿಧಾನ ಮಂಡಲದಲ್ಲಿಯ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ಬಸವರಾಜ ಹೊರಟ್ಟಿ

    ವಿಧಾನ ಮಂಡಲದಲ್ಲಿಯ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ಬಸವರಾಜ ಹೊರಟ್ಟಿ

    ಬೆಂಗಳೂರು: ವಿಧಾನ ಮಂಡಲಗಳಲ್ಲಿ (Legislative Assembly) ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅಭಿಮತ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ನಡೆಯುತ್ತಿರುವ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನದಲ್ಲಿ ವಿಧಾನ ಮಂಡಲದ ಚರ್ಚೆಗಳು ಜನರ ವಿಶ್ವಾಸಗಳಿಸುವುದರೊಂದಿಗೆ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿಯ ಪಾತ್ರ ಕುರಿತ ವಿಚಾರ ಮಂಡಿಸಿದ ಬಸವರಾಜ ಹೊರಟ್ಟಿ, ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕ ಕಾಳಜಿಗಳನ್ನು ಚರ್ಚಿಸಲು ಸರ್ಕಾರಿ ನೀತಿಗಳನ್ನು ಪರಿಶೀಲಿಸಲು ಮತ್ತು ಕಾನೂನು ರಚನೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿಧಾನ ಮಂಡಲ ಪರಿಣಾಮಕಾರಿ ವೇದಿಕೆಯಾಗಿದ್ದು, ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದರು. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್‌ಚೇರ್‌ನಲ್ಲೇ ಆಸ್ಪತ್ರೆಗೆ ಬಂದ ಹೆಚ್‌ಡಿಡಿ

    ಸದನವು ಕ್ರಮಬದ್ಧವಾಗಿಲ್ಲದಿದ್ದಾಗ ಮತ್ತು ಅರ್ಥಪೂರ್ಣ ಚರ್ಚೆಯಿಲ್ಲದೆ ಕಾನೂನುಗಳನ್ನು ಅಂಗೀಕರಿಸಿದಾಗ ನಮ್ಮ ಮೇಲಿನ ಜನರ ನಂಬಿಕೆಗಳು ಕ್ಷೀಣಿಸುವ ಸಂದರ್ಭ ಬರಬಹುದೆನ್ನುವ ಎಚ್ಚರಿಕೆ ಜನಪ್ರತಿನಿಧಿಗಳಿಗಿರಬೇಕು ಎಂದು ಹೇಳಿದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋಕೆ ಬಿಡಲ್ಲ: ಮಧು ಬಂಗಾರಪ್ಪ

    ಸದನ ಕಲಾಪಗಳ ಪ್ರಧಾನ ಅಂಶಗಳಾದ ಪ್ರಶ್ನೋತ್ತರ ಅವಧಿ, ಶೂನ್ಯವೇಳೆ ಚರ್ಚೆ, ಅರ್ಧಗಂಟೆಯ ಚರ್ಚೆ, ಕಿರುಸೂಚನೆ ಪ್ರಶ್ನೆಗಳು ಮತ್ತು ಸದನದ ಗಮನ ಸೆಳೆಯುವ ಪ್ರಸ್ತಾವಗಳ ಮೂಲಕ ಪ್ರತಿಯೊಬ್ಬ ಸದಸ್ಯರು ಸದನದಲ್ಲಿನ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಮೂಲಕ ಸುಗಮ ಮತ್ತು ರಾಜತಾಂತ್ರಿಕ ಮಾರ್ಗಗಳನ್ನು ಪ್ರತಿನಿಧಿಗಳು ಯಾವಾಗಲೂ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಇದನ್ನೂ ಓದಿ: ಭಾರತ-ಪಾಕ್‌ ಪಂದ್ಯ ಬಾಯ್ಕಾಟ್‌ಗೆ ಕರೆ – ಪಾಕ್‌ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಎಎಪಿ ಪ್ರತಿಭಟನೆ

    ಶಾಸಕಾಂಗ ಸದನಗಳಲ್ಲಿ ನನ್ನ 45 ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್ತಿನ ಸಭಾಪತಿಯಾಗಿ 3ನೇ ಬಾರಿಗೆ ಪಡೆದ ಅನುಭವದ ಮೂಲಕ ಹೇಳುವುದಾದರೆ, ಸಾರ್ವಜನಿಕ ಪ್ರತಿನಿಧಿಗಳು ಜನಪರ ಮಹತ್ವದ ವಿಷಯಗಳಿಗೆ ಮಹತ್ವ ನೀಡುವುದರ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು ಎಂದು ನುಡಿದರು. ಇದನ್ನೂ ಓದಿ: ಧಾರವಾಡ ಕೃಷಿ ವಿವಿಯ ಮೇಳದಲ್ಲಿ ಟ್ರ‍್ಯಾಕ್ಟರ್ ಮೈಮೇಲೆ ಬಿದ್ದು ವ್ಯಕ್ತಿ ಸಾವು

  • ಆ.4 ರಿಂದ ಅಮೆರಿಕದಲ್ಲಿ ಶಾಸಕಾಂಗ ಶೃಂಗಸಭೆ – ಸಭಾಪತಿ ಹೊರಟ್ಟಿ ನೇತೃತ್ವದಲ್ಲಿ MLCಗಳ ನಿಯೋಗ ಭಾಗಿ

    ಆ.4 ರಿಂದ ಅಮೆರಿಕದಲ್ಲಿ ಶಾಸಕಾಂಗ ಶೃಂಗಸಭೆ – ಸಭಾಪತಿ ಹೊರಟ್ಟಿ ನೇತೃತ್ವದಲ್ಲಿ MLCಗಳ ನಿಯೋಗ ಭಾಗಿ

    ಬೆಂಗಳೂರು: ಮುಂದಿನ ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೆರಿಕದ ಬೋಸ್ಟನ್ ನಗರದಲ್ಲಿ (Boston City) ʻಶಾಸಕಾಂಗ ಶೃಂಗಸಭೆ 2025ʼ (Legislative Summit 2025) ನಡೆಯಲಿದ್ದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ.

    ʻರಾಜ್ಯ ಶಾಸಕರ ರಾಷ್ಟೀಯ ಸಮಾವೇಶʼ ಹಾಗೂ ʻರಾಷ್ಟ್ರೀಯ ಶಾಸಕರ ಸಮಾವೇಶʼ ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಈ ಶೃಂಗಸಭೆಯಲ್ಲಿ ಭಾರತದ ಸಂಸದರು (Indian MPs), ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ (Summit) ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಶೃಂಗ ಸಭೆಯಲ್ಲಿ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ. ಇದನ್ನೂ ಓದಿ: ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಅಂತಿಮ ವರದಿ ಸಲ್ಲಿಕೆಗೆ ಜು.31ರವರೆಗೆ ಅವಧಿ ವಿಸ್ತರಣೆ

    ಶಾಸಕಾಂಗ ಶೃಂಗಸಭೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಉಪಸಭಾಪತಿ ಎಂ.ಕೆ ಪ್ರಾಣೇಶ್, ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಸಭಾನಾಯಕರು ಹಾಗೂ ಸಣ್ಣ ನೀರಾವರಿ ಸಚಿವರಾದ ಮಾನ್ಯ ಎನ್.ಎಸ್ ಭೋಸ್‌ರಾಜು, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ವಿಧಾನ ಪರಿಷತ್ ಶಾಸಕರಾದ ಭಾರತಿ ಶೆಟ್ಟಿ, ಭಲ್ಕೀಸ್ ಬಾನು, ಹೇಮಲತಾ ನಾಯಕ್, ಮತ್ತು ಮಂಜುನಾಥ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: NCERT 8ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ – ದೆಹಲಿ ಸುಲ್ತಾನರ ಕ್ರೌರ್ಯ, ಮೊಘಲರ ಅಸಹಿಷ್ಣುತೆ ಉಲ್ಲೇಖ

    ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಸಭಾಪತಿ ಬಸವರಾಜ ಹೊರಟ್ಟಿರವರ ನೇತೃತ್ವದ ತಂಡ ಶಾಸಕಾಂಗ ಶೃಂಗಸಭೆಯಲ್ಲಿ ಭಾಗವಹಿಸಿ ಪ್ರಸ್ತುತ ರಾಜಕೀಯ ಬೆಳವಣಿಗೆ ಮತ್ತು ನಾಡಿನ ಅಭಿವೃದ್ದಿಯಲ್ಲಿ ಶಾಸಕಾಂಗದ ಪಾತ್ರದ ಬಗ್ಗೆ ಅನೇಕ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಸದರಿ ಶೃಂಗಸಭೆಗೆ ದೇಶಾದ್ಯಂತ ನಾಮ ನಿರ್ದೇಶಿತ ಸಂಸದರು ಮತ್ತು ವಿಧಾನ ಮಂಡಲದ ಶಾಸಕರು, ಸಚಿವರು ಭಾಗವಹಿಸಲಿದ್ದಾರೆ. ಇದೇ ರೀತಿ ಜಗತ್ತಿನಾದ್ಯಂತ ರಾಜಕೀಯ ಧುರೀಣರು ಮತ್ತು ನೀತಿ ನಿರೂಪಕರು ಸೇರಿಂದತೆ ಸುಮಾರು 15,000ಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ಶೃಂಗಸಭೆಯಲ್ಲಿ ವಿವಿಧ ಪ್ರಕಾರದ ವಿಷಯಾಧಾರಿತ ಗೋಷ್ಠಿಗಳಲ್ಲಿ ಜಾಗತಿಕ ಪ್ರಸ್ತುತ ರಾಜಕೀಯ ವಿದ್ಯಾಮಾನಗಳು – ಯುವಕರ ಪಾತ್ರ, ಆಧುನಿಕ ತಂತ್ರಜ್ಞಾನದ ಆಧಾರಿತ ಬೆಳವಣಿಗೆಗಳ ಬಗ್ಗೆ ಚರ್ಚೆಗಳು ನಡೆಯಲಿವೆ.

    ಶೃಂಗಸಭೆಯಲ್ಲಿ ನಡೆಸಲಾಗುವ ಚರ್ಚೆಗಳು ಮತ್ತು ವಿಚಾರ ಮಂಥನಗಳಿಂದ ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಶಾಸನ ಸಭೆಗಳಲ್ಲಿ ಧನಾತ್ಮಕ ಬದಲಾವಣೆಗಳನ್ನು ನಿರೀಕ್ಷಿಸಬಹುದಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿಯವರಾದ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಒಡಿಶಾ ವಿಧಾನಸೌಧ ಬಳಿ ಭುಗಿಲೆದ್ದ ಆಕ್ರೋಶ

  • ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

    ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ – ಹೊರಟ್ಟಿ

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ಅವಹೇಳನಕಾರಿ ಮಾತಾಡಿರೋ ಬಿಜೆಪಿ MLC ರವಿಕುಮಾರ್ ವಿರುದ್ಧ ಕ್ರಮಕ್ಕೆ ಪ್ರದೇಶ ಕಾಂಗ್ರೆಸ್ ಕಮಿಟಿಯಿಂದ ದೂರು ಬಂದಿದೆ ಅಂತ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ (Congress) ನನಗೆ ದೂರು ಕೊಟ್ಟಿದ್ದಾರೆ. ರವಿಕುಮಾರ್ (N Ravikumar) ಅವರು ಸಿಎಸ್‌ಗೆ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ. ಅವರ ಮೇಲೆ ಕ್ರಮಕ್ಕೆ ಮನವಿ ಮಾಡಿದ್ದಾರೆ. MLC ಸ್ಥಾನದಿಂದ ಅಮಾನತು ಮಾಡಬೇಕು ಅಂತ ಕೇಳಿದ್ದಾರೆ. ರವಿಕುಮಾರ್‌ಗೆ ನಾನು ಪತ್ರ ಬರೆದಿದ್ದೇನೆ. ಹೀಗೆ ದೂರು ಬಂದಿದೆ. ನಿಮ್ಮ ಅಭಿಪ್ರಾಯ ‌ಕೊಡಿ ಅಂತ ಕೇಳಿದ್ದೀನಿ. ಅವರು ಅಭಿಪ್ರಾಯ ಕೊಟ್ಟ ಮೇಲೆ ಮುಂದಿನ ತೀರ್ಮಾನ ಮಾಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ಸಿಎಸ್‌ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ

    ರವಿಕುಮಾರ್ ಅವರ ಸದಸ್ಯತ್ವ ರದ್ದು ಮಾಡೋ ಅಧಿಕಾರ ನನಗೆ ಇಲ್ಲ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ವಿಧಾನ ಪರಿಷತ್ ನಿಯಮದ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ತೀವಿ. ರವಿಕುಮಾರ್ ಅಭಿಪ್ರಾಯ ಪಡೆಯದೇ ನಾನೇನು ಕ್ರಮ ತೆಗೆದುಕೊಳ್ಳಲು ಆಗಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

    ಇದು ವಿಧಾನಸೌಧದ ಪರಿಮಿತಿಯಲ್ಲಿ ನಡೆದಿದೆ. ಅದಕ್ಕೆ ನಾನು ರವಿಕುಮಾರ್‌ಗೆ ಪತ್ರ ಬರೆದಿದ್ದೇನೆ. ಪತ್ರಕ್ಕೆ ಅವರ ಅಭಿಪ್ರಾಯ ಬರಲಿ, ರಾಜ್ಯಸಭೆ ಸೆಕ್ರೆಟರಿ ಜನರಲ್ ಅವರ ಅಭಿಪ್ರಾಯ ಪಡೆಯುತ್ತೇನೆ. ಪೊಲೀಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ. ಶಾಸಕರನ್ನ ಅರೆಸ್ಟ್ ಮಾಡಿದ್ರೆ ನಮಗೆ ಮಾಹಿತಿ ಕೊಡಬೇಕು ಅಷ್ಟೆ. ನಾವು ರವಿಕುಮಾರ್ ಅಭಿಪ್ರಾಯ ಪಡೆದು ನಿಯಮದ ಪ್ರಕಾರ ಕ್ರಮ ತೆಗೆದುಕೊಳ್ತೀನಿ ಅಂತ ತಿಳಿಸಿದ್ದಾರೆ. ಇದನ್ನೂ ಓದಿ:  SKSSF ಅಬುಧಾಬಿ ಕರ್ನಾಟಕ & ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಆಶ್ರಯದಲ್ಲಿ 4ನೇ ಯಶಸ್ವಿ ರಕ್ತದಾನ ಶಿಬಿರ

  • ರಾಜೀನಾಮೆ ಕೊಡಬೇಕು ಅನ್ನೋ ನಿರ್ಧಾರ ಮಾಡಿದ್ದು ನಿಜ: ಬಸವರಾಜ್ ಹೊರಟ್ಟಿ

    ರಾಜೀನಾಮೆ ಕೊಡಬೇಕು ಅನ್ನೋ ನಿರ್ಧಾರ ಮಾಡಿದ್ದು ನಿಜ: ಬಸವರಾಜ್ ಹೊರಟ್ಟಿ

    – ಕಳೆದ ಮೂರು ವರ್ಷಗಳಿಂದ ಅಸಮಾಧಾನ ಇದೆ ಎಂದ ಸಭಾಪತಿ

    ಹುಬ್ಬಳ್ಳಿ: ರಾಜೀನಾಮೆ ( Resignation) ಕೊಡಬೇಕು ಎಂಬ ನಿರ್ಧಾರ ಮಾಡಿದ್ದು ನಿಜ. ಆದರೆ ಇದೀಗ ಬಹಳ ಜನ ನನಗೆ ಕಾಲ್ ಮಾಡಿ ಬೇಡ ಅನ್ನುತ್ತಿದ್ದಾರೆ ಎಂದು ರಾಜೀನಾಮೆ ವಿಚಾರವಾಗಿ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಸ್ಪಷ್ಟನೆ ನೀಡಿದ್ದಾರೆ.

    ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ಪತ್ರ ವೈರಲ್ ಆಗುತ್ತಿರುವ ವಿಚಾರದ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿ.ಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಈ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕಾಲ್ ಮಾಡುತ್ತಿದ್ದಾರೆ. ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ ಎಂದರು. ಇದನ್ನೂ ಓದಿ: ಬಿಗ್‌ ಬಾಸ್‌ ಮಾಜಿ ಸ್ವರ್ಧಿಗಳಾದ ರಜತ್, ವಿನಯ್ ಗೌಡ ವಿರುದ್ಧ ಎಫ್‌ಐಆರ್

    ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ನಾನು ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೆ. ಕೆಲವರ ನಡುವಳಿಕೆ ನನ್ನ ಮನಸಿಗೆ ಸಮಾಧಾನವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಅಸಮಾಧಾನವಾಗಿದೆ. ರಾಜ್ಯದ ಎಲ್ಲಾ ಕಡೆಯಿಂದ ಕರೆ ಬಂದಿದೆ, ಮಾನಸಿಕ ನೆಮ್ಮದಿ ಹಾಳಗಿದೆ. ನಾಳೆ ಒಂದು ದಿನ ಕುಳಿತು ವಿಚಾರ ಮಾಡುತ್ತೇನೆ. ಆತ್ಮೀಯರ ಮಾತು ಕೇಳಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಈ ಮೊದಲು ಮಾತನಾಡಿದ್ದ ಹೊರಟ್ಟಿ, ನಾನು ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ. ಸಾಕಾಗಿದೆ, ಇನ್ನೂ ಸ್ವಲ್ಪ ಟೆಕ್ನಿಕಲ್ ಸಮಸ್ಯೆ ಇದೆ. ಜನರಿಗೆ ಮೋಸ ಮಾಡೋ ಟ್ರೆಂಡ್ ಬಂದಿದೆ. ಇದೀಗ ವಿಧಾನ ಮಂಡಲಕ್ಕೆ ಬಂದಿದೆ. ರಾಜಕಾರಣ ಬಹಳ ಕಲುಷಿತ ಆಗಿದೆ. ಕಾಲ ಕೆಟ್ಟಿದೆ, ಸದನದ ಗೌರವ ಹೋಗಿ ಬಹಳ ದಿನ ಆಗಿದೆ. ಚುನಾವಣೆಯಲ್ಲಿ ಸೋಲಿಸೋಕೆ ಆಗಿದಿದ್ರೆ ಈ ತರಹ ಟಾರ್ಗೆಟ್ ಮಾಡೋದು ಸರಿಯಲ್ಲ. ಇದೆಲ್ಲ ದುರ್ದೈವ. ಇತ್ತಿಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸಿಗೆ ಬೇಸರ ತರಿಸಿದೆ. ಈ ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ಬಂದಿದೆ. ಸದನದಲ್ಲಿ ನಡೆದ ಬೆಳವಣಿಗೆ ನಿಯಂತ್ರಿಸುವಲ್ಲಿ ನಾನು ವಿಫಲವಾಗಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

    ಮೇಲೆಮನೆ ಚಿಂತಕರ ಛವಾಡಿ ಎಂದು ಕರೆಯುತ್ತೇವೆ. ಆದರೆ ಸದನದಲ್ಲಿ ಪ್ಲೇಕಾರ್ಡ್ ಹಿಡಿದು ಬಂದ್ರು, ಘೋಷಣೆ ಕೂಗಿದರು. ಗದ್ದಲದಲ್ಲಿ ಕೆಲ ಬಿಲ್‌ಗಳು ಪಾಸ್ ಆಗಿವೆ. ಏನೂ ಚರ್ಚೆಯೇ ಆಗದೆ ಬಿಲ್ ಪಾಸ್ ಆಗುತ್ತಿವೆ. ಮುಸ್ಲಿಂ ಮೀಸಲಾತಿ ವಿಚಾರದ ಬಗ್ಗೆ ಸಣ್ಣದೊಂದು ಚರ್ಚೆ ಆಗಿದ್ದು ಬಿಟ್ಟರೆ, ಯಾವುದೇ ಬಿಲ್ ಬಗ್ಗೆ ಚರ್ಚೆಯೇ ಆಗಲಿಲ್ಲ. ಇನ್ನೂ ನಾನು ಸದನದಲ್ಲಿ ಇದ್ದು ಏನು ಪ್ರಯೋಜನ? ಹುದ್ದೆಗೆ ಘನತೆ ಗೌರವ ಇಲ್ಲದಿದ್ದ ಮೇಲೆ ಅಲ್ಲಿ ಇರಬಾರದು ಎಂದು ತೀರ್ಮಾನಕ್ಕೆ ಬಂದಿದ್ದೇನೆ ಎಂದು ಅತ್ಯಂತ ಭಾವುಕರಾಗಿ ಮಾತನಾಡಿದ್ದರು. ಇದನ್ನೂ ಓದಿ: ಶಿರಸಿ: ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

    ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ರಾಜೀನಾಮೆ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಫೇಕ್ ರಾಜೀನಾಮೆ ಪತ್ರ ವೈರಲ್ ಆಗಿದೆ. ಬಸವರಾಜ ಹೊರಟ್ಟಿ ಲೆಟರ್ ಹೆಡ್‌ನಲ್ಲಿ ರಾಜೀನಾಮೆಯ ನಕಲಿ ಪತ್ರ ವೈರಲ್ ಆಗಿತ್ತು. ಆದರೆ ಇದು ಸುಳ್ಳು ಎಂದು ಹೊರಟ್ಟಿ ಕಚೇರಿಯ ಸಿಬ್ಬಂದಿ ವರ್ಗ ‘ಪಬ್ಲಿಕ್ ಟಿವಿ’ಗೆ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: IPL 2025: ಗಾಯಕ್ವಾಡ್‌, ರಚಿನ್‌ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್‌ಗಳ ಜಯ

  • ಪೊಲೀಸರೇ ಜೈಲಿಗೆ ಹೋಗ್ಬೇಕಾಗುತ್ತೆ – ಸ್ಫೀಕರ್‌ ವಾರ್ನಿಂಗ್‌ ಬೆನ್ನಲ್ಲೇ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಸಂವಿಧಾನಿಕ ಸಂಘರ್ಷ?

    ಪೊಲೀಸರೇ ಜೈಲಿಗೆ ಹೋಗ್ಬೇಕಾಗುತ್ತೆ – ಸ್ಫೀಕರ್‌ ವಾರ್ನಿಂಗ್‌ ಬೆನ್ನಲ್ಲೇ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಸಂವಿಧಾನಿಕ ಸಂಘರ್ಷ?

    ಬೆಂಗಳೂರು: ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಪೊಲೀಸರಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸಿಟಿ ರವಿ (CT Ravi) ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸಂವಿಧಾನಿಕ ಸಂಘರ್ಷ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಹೌದು. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಒಳಗೆ ನಡೆಯುವ ವಿಚಾರಗಳಿಗೆ ಪೊಲೀಸರು (Police) ಹಸ್ತಕ್ಷೇಪ ಮಾಡುವಂತಿಲ್ಲ. ಮಹಜರು ನಡೆಸಲು ನಾನು ಅನುಮತಿ ನೀಡಿಲ್ಲ. ಯಾವುದೇ ಕಾರಣಕ್ಕೂ ಸದನದ ಒಳಗೆ ಬರಬಾರದು ಎಂದು ಎಚ್ಚರಿಕೆ ನೀಡಿದ್ದೇನೆ. ನನ್ನ ಆದೇಶವನ್ನು ಧಿಕ್ಕರಿಸಿದರೆ ಪೊಲೀಸರೇ ಜೈಲಿಗೆ ಹೋಗ್ಬೇಕಾಗುತ್ತೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಸಿ.ಟಿ.ರವಿ, ಹೆಬ್ಬಾಳ್ಕರ್ ಕೇಸ್ ಮುಗಿದ ಅಧ್ಯಾಯವಾಗಿದ್ದು 19 ರಂದೇ ಸದನದಲ್ಲಿ ರೂಲಿಂಗ್ ಕೊಟ್ಟಿದ್ದೇನೆ. ಅನಿರ್ದಿಷ್ಟಾವಧಿಗೆ ಸದನ ಮುಂದೂಡಿಕೆ ಆಗಿದೆ. ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ನಮ್ಮ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿಲ್ಲ. ಅದೆಲ್ಲ ಫೇಕ್ ವಿಡಿಯೋ ಇರಬೇಕು. ದಾಖಲೆ ಇದ್ದರೆ ದೂರು ಕೊಡಲಿ ಎಫ್‌ಎಸ್‌ಎಲ್‌ಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.

    ಹೊರಟ್ಟಿ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೆ ಹೀರೆಬಾಗೇವಾಡಿ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ (FIR) ತನಿಖೆ ಹೇಗೆ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಅಧಿವೇಶನ ನಡೆಯುತ್ತಿರುವಾವಾಗಲೇ ಜನಪ್ರತಿನಿಧಿ ಬಂಧಿಸುವುದು ಅಷ್ಟು ಸುಲಭವಲ್ಲ. ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಮತ್ತು ಕಲಾಪ ನಿಯಮಾವಳಿಯ ಅನ್ವಯ ಸಭಾಧ್ಯಕ್ಷರ ಅನುಮತಿ ಇಲ್ಲದೇ ಬಂಧನ ಮಾಡುವಂತಿಲ್ಲ. ಆದರೆ ಈ ಪ್ರಕರಣದಲ್ಲಿ ಸ್ಪೀಕರ್‌ ಅವರ ಅನುಮತಿ ಪಡೆಯದೇ ಬಂಧಿಸಲಾಗಿದೆ. ಇದನ್ನೂ ಓದಿ: ಸಿಟಿ ರವಿ ಕೇಸ್‌ – ಪ್ರತಿಷ್ಠೆಗೆ ಬಿದ್ದು ಏನೋ ಮಾಡಲು ಹೋಗಿ ಯಡವಟ್ಟು ಮಾಡಿತಾ ಸರ್ಕಾರ?

    ನಮ್ಮ ಕ್ಯಾಮೆರಾದಲ್ಲಿ ಸೆರೆಯಾದ ಆಡಿಯೋದಲ್ಲಿ ಸಿಟಿ ರವಿ ಅಸಂವಿಧಾನಿಕ ಪದ ಬಳಸಿದ್ದು ಕೇಳಿಲ್ಲ ಎಂದು ಹೊರಟ್ಟಿ ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ಯಾವ ವಿಡಿಯೋ, ಆಡಿಯೋವನ್ನು ಪರಿಗಣಿಸಿ ಎಫ್‌ಐಆರ್‌ ದಾಖಲಿಸಿದ್ದಾರೆ ಎಂಬ ಪ್ರಶ್ನೆ ಎದ್ದಿದೆ. ಏನೋ ಮಾಡಲು ಹೋಗಿ ಏನೋ ಮಾಡಿ ಪೊಲೀಸರು ಈಗ ಇಕ್ಕಟ್ಟಿನಲ್ಲಿ ಸಿಲುಕಿದಂತೆ ಕಾಣುತ್ತಿದೆ.

     

    ಸರ್ಕಾರ ಪೊಲೀಸ್‌ ತನಿಖೆಗೆ ಆಸಕ್ತಿ ತೋರಿಸಿದೆ. ಸ್ಪೀಕರ್‌ ಸದನದ ಒಳಗಡೆ ನಡೆದ ವಿಚಾರಕ್ಕೆ ಪೊಲೀಸ್‌ ತನಿಖೆ ಸಾಧ್ಯವಿಲ್ಲ ಎಂದಿದ್ದಾರೆ. ಹೀಗಾಗಿ ಈ ಪ್ರಕರಣ ಹೇಗೆ ಮುಂದೆ ಸಾಗುತ್ತದೆ ಎನ್ನುವುದೇ ದೊಡ್ಡ ಕುತೂಹಲ ಮೂಡಿಸಿದೆ.  ಇದನ್ನೂ ಓದಿ: ಸದನದೊಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ: ಬಸವರಾಜ ಹೊರಟ್ಟಿ

     

  • ಸದನದೊಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ: ಬಸವರಾಜ ಹೊರಟ್ಟಿ

    ಸದನದೊಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ: ಬಸವರಾಜ ಹೊರಟ್ಟಿ

    – ಮಹಜರಿಗೆ ಅನುಮತಿ ಕೇಳಿದ ಪೊಲೀಸರ ಮೇಲೆ ಸಭಾಪತಿ ಗರಂ
    – ನಮ್ಮಲ್ಲಿ ವಿಡಿಯೋ ರೆಕಾರ್ಡ್ ಆಗಿಲ್ಲ, ಫೇಕ್ ಇರಬೇಕು ಎಂದ ಹೊರಟ್ಟಿ

    ಬೆಂಗಳೂರು: ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಪೊಲೀಸರ ವಿರುದ್ಧ ಫುಲ್‌ ಗರಂ ಆಗಿದ್ದಾರೆ.

    ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿ.ಟಿ ರವಿ (CT Ravi) – ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕೇಸ್ ಮುಗಿದ ಅಧ್ಯಾಯ. ಡಿ.19ರಂದೇ ಸದನದಲ್ಲಿ ರೂಲಿಂಗ್ ಕೊಟ್ಟಿದ್ದೇನೆ. ಅನಿರ್ದಿಷ್ಟಾವಧಿ ವರೆಗೆ ಮುಂದೂಡಿಕೆ ಆಗಿದೆ. ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುವರ್ಣಸೌಧದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ – ಹೆಬ್ಬಾಳ್ಕರ್‌ ಆಪ್ತ ಸೇರಿ 10 ಜನರ ವಿರುದ್ಧ FIR

    ಮಹಜರು ಮಾಡ್ತೀನಿ ಅಂತಾ ಪೊಲೀಸರು ಕೇಳಿದ್ರು, ಅದಕ್ಕೆ ನಾವು ಅನುಮತಿ ಕೊಟ್ಟಿಲ್ಲ, ಬಾಗಿಲು ಹಾಕಿದ್ದೇವೆ. ಸದನದಲ್ಲಿ ಮಹಜರು ಮಾಡಲು ಬರಲ್ಲ ಅಂತಾ ಪೊಲೀಸರಿಗೆ ತಿಳಿಸಿದ್ದೇನೆ. ಅವರು ಹೊರಗಿನ ವಿಚಾರಕ್ಕೆ ದೂರು ಕೊಟ್ಟಿದ್ರೆ, ಅದರ ಬಗ್ಗೆ ನಾವು ಹಸ್ತಕ್ಷೇಪ ಮಾಡಲ್ಲ. ಆದ್ರೆ ಆ ದಿನ ರಾತ್ರಿ 1 ಗಂಟೆ ತನಕವೂ ಸಿ.ಟಿ ರವಿ ಜೊತೆ ಸಂಪರ್ಕದಲ್ಲಿ ಇದ್ದೆ. ಪೊಲೀಸ್ ಆಯುಕ್ತರ ಜೊತೆಗೆ ಮಾತನಾಡಿ ಎಚ್ಚರಿಕೆ ಕೊಟ್ಟಿದ್ದೆ. ಏನಾದರೂ ಆದ್ರೆ ಸುಮ್ಮನೆ ಬಿಡಲ್ಲ ಅಂತ ಹೇಳಿದ್ದೆ. ಬೆಳಗ್ಗೆ ತನಕವೂ ನಾನು ಟ್ರ‍್ಯಾಕ್ ಮಾಡಿದ್ದೆ, ಬೆಳಗ್ಗೆ 5 ಗಂಟೆಗೆ ಎಸ್ಪಿಗೂ ಕೂಡ ಮಾತಾಡಿದ್ದೆ. ಅಲ್ಲದೇ ಈಗಾಗಲೇ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ವಿವರಿಸಿದ್ದಾರೆ.

    ಇನ್ನೂ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಪರಿಷತ್‌ನಲ್ಲಿ ನಿಂದನೆ ಆರೋಪ ಪ್ರಕರಣದಲ್ಲಿ ಮಹಿಳಾ ಆಯೋಗ ಎಂಟ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಹಿಳಾ ಆಯೋಗಕ್ಕೆ ಸಭಾಪತಿಗೆ ಕೇಳುವ ಅಧಿಕಾರ ಇಲ್ಲ, ಅವರು ಪತ್ರ ಬರೆಯಲಿ, ಆದ್ರೆ ಅದಕ್ಕೆ ನಾನು ಉತ್ತರ ಕೊಡಬೇಕಾಗಿಯೂ ಇಲ್ಲ. ಬೇಕಿದ್ರೆ, ಬೇರೆಯವರಿಗೆ ನೋಟೀಸ್ ಕೊಡಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವೈಟ್ ಹೌಸ್ AI ವಿಭಾಗದ ನೀತಿ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ್‌ ಕೃಷ್ಣನ್ ನೇಮಕ

    ಇನ್ನೂ ಸಿ.ಟಿ ರವಿ ಪ್ರಾಸ್ಟಿ** ಹೇಳಿಕೆ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌ ಆಗಿರುವ ಕುರಿತು ಮಾತನಾಡಿ, ನಮ್ಮಲ್ಲಿ ವಿಡಿಯೋ ರೆಕಾರ್ಡ್ ಆಗಿಲ್ಲ. ಅದೆಲ್ಲ ಫೇಕ್ ವಿಡಿಯೋ ಇರಬೇಕು, ಇದ್ದರೆ ದೂರು ಕೊಡಲಿ ಎಫ್‌ಎಸ್‌ಎಲ್‌ಗೆ ಕೊಡ್ತೀವಿ, ಆ ಬಳಿಕ ಏನ್ ಮಾಡಬೇಕು ತೀರ್ಮಾನ ಮಾಡ್ತೀನಿ ಎಂದಿದ್ದಾರೆ. ಇದನ್ನೂ ಓದಿ:  ಚಿನ್ನದಂಗಡಿ ಮಾಲೀಕರಿಗೆ ಮಹಿಳೆಯಿಂದ ವಂಚನೆ – ಇಂದು ವರ್ತೂರ್ ಪ್ರಕಾಶ್ ವಿಚಾರಣೆಗೆ ಹಾಜರು

  • ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ

    ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ

    ಹುಬ್ಬಳ್ಳಿ/ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna By Election) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ ಯೋಗೇಶ್ವರ್ ಅವರಿಂದು ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

    ಸಂಜೆ ನಾಲ್ಕು ಗಂಟೆ ಸುಮಾರಿಗೆ ಹುಬ್ಬಳ್ಳಿಗೆ (Hubballi) ತೆರಳಿದ ಯೋಗೇಶ್ವರ್, ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಯೋಗೇಶ್ವರ್‌ ಗುಡ್‌ಬೈ – ಕಾಂಗ್ರೆಸ್‌ನಿಂದ ಕೊನೆ ಕ್ಷಣದ ಕಸರತ್ತು ಆರಂಭ

    ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸಿಪಿವೈ ನಿರ್ಧರಿಸಿದ್ದರು. ಕೊನೇ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಹಾಗಾಗಿ ವಿಧಾನ ಪರಿಷತ್ ಸದಸ್ಯತ್ವಕ್ಕೆ (MLC) ರಾಜೀನಾಮೆ ನೀಡಿದ್ದಾರೆ.

    ಈ ನಡುವೆ ಫುಲ್ ಅಲರ್ಟ್ ಆಗಿರುವ ಕಾಂಗ್ರೆಸ್, ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಿದೆ ಎಂದು ಹೇಳಲಾಗುತ್ತಿದೆ. ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾದರೆ, ಕಾಂಗ್ರೆಸ್‌ನಿಂದಲೇ ಚನ್ನಪಟ್ಟಣ ಅಖಾಡಕ್ಕೆ ಇಳಿಯುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಸನಾಂಬ ಉತ್ಸವಕ್ಕೆ ಕ್ಷಣಗಣನೆ – ಜಿಲ್ಲಾ ಖಜಾನೆಯಿಂದ ದೇವಾಲಯಕ್ಕೆ ಒಡವೆಗಳ ರವಾನೆ

    ರಾಜೀನಾಮೆ ನೀಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿ.ಪಿ ಯೋಗೇಶ್ವರ್, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.

  • ಜು.15ರಿಂದ ವಿಧಾನಸಭೆ ಅಧಿವೇಶನ ಶುರು; ವಿಧಾನಸೌಧ ವಾಸ್ತುಪ್ರಕಾರವಾಗಿಯೇ ಇದೆ ಎಂದ ಹೊರಟ್ಟಿ

    ಜು.15ರಿಂದ ವಿಧಾನಸಭೆ ಅಧಿವೇಶನ ಶುರು; ವಿಧಾನಸೌಧ ವಾಸ್ತುಪ್ರಕಾರವಾಗಿಯೇ ಇದೆ ಎಂದ ಹೊರಟ್ಟಿ

    – ವಿಧಾನಸೌಧ ಕೊಠಡಿ ನವೀಕರಣಕ್ಕೆ ಅವಕಾಶವಿಲ್ಲ: ಸಭಾಪತಿ

    ಬೆಂಗಳೂರು: ಇದೇ ಜುಲೈ 15ರಿಂದ ಜು.26ರ ವರೆಗೆ 16ನೇ ವಿಧಾನಸಭೆಯ 4ನೇ ಅಧಿವೇಶನ (Karnataka Assembly Session) ನಡೆಯಲಿದೆ. ಒಟ್ಟು 9 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಯಾಲೋಚನೆಗೆ ಒಳಪಡಿಸುವುದು ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳುವುದಾಗಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ (UT Khader) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿಂದು (Vidhana Soudha) ಮಾತನಾಡಿದ ಅವರು, 9 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರೊಂದಿಗೆ ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರ ಕಾರ್ಯಕಲಾಪಗಳನ್ನ ನಡೆಸಲಾಗುವುದು. ಅಲ್ಲದೇ 2024-24ನೇ ಸಾಲಿನ ವಿಧಾನ ಮಂಡಲ ಅಥವಾ ವಿಧಾನಸಭೆಯ ಸ್ಥಾಯಿ ಸಮಿತಿಗಳ ಅವಧಿ ಆಗಸ್ಟ್ 8ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿಗೆ ಹೊಸದಾಗಿ ಸಮಿತಿಗಳನ್ನ ರಚಿಸುವ ಸಂಬಂಧ ಚುನಾವಣಾ ಪ್ರಸ್ತಾವವನ್ನ ಮಂಡಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪೀಕರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನ

    ಮುಂದುವರಿದು ಮಾತನಾಡಿ, `ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆ ಸಮಿತಿ’ ರಚನೆಯಾಗಿದೆ. ಈ ಬಾರಿ ಅತ್ಯುತ್ತಮ ಶಾಸಕರಿಗೆ ಪ್ರಶಸ್ತಿ ನೀಡುತ್ತಿದ್ದೇವೆ. ಸಭೆಗೆ ಬೇಗ ಹಾಜರಾಗುವ ಶಾಸಕರಿಗೆ ಟೀ ಕಪ್ ವಿತರಿಸಲಾಗುತ್ತದೆ. ಕಳೆದ ಬಾರೀ ನೀಡಿದ ಅವಕಾಶವನ್ನು ಶಾಸಕರಿಗೆ ಈ ಬಾರಿಯೂ ನೀಡಲಾಗುತ್ತದೆ. ಇಡೀ ದಿನ ಇರುವ ಸದಸ್ಯರಿಗೆ ವಿಶೇಷ ಅವಕಾಶ ನೀಡಲಾಗುತ್ತೆ. ಅವರು ಎಷ್ಟೊತ್ತಿಗೆ ಬರುತ್ತಾರೆ, ಹೋಗುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾಲಾವಕಾಶ ನೀಡುತ್ತೇವೆ. ಕಲಾಪ ವೀಕ್ಷಣೆಗೆ ಬರುವ ಮಕ್ಕಳು, ವಿದ್ಯಾರ್ಥಿಗಳಿಗೆ ಎಂದಿನಂತೆ ವ್ಯವಸ್ಥೆ ಇರಲಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: 

    ಇದೇ ವೇಳೆ ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಮಾತನಾಡಿ, 2022-23ನೇ ಸಾಲಿನ ಅತ್ಯುತ್ತಮ ಶಾಸಕರ ಪ್ರಶಸ್ತಿ ಬಹುತೇಕ ಆಯ್ಕೆ ಆಗಿದೆ. ಮೊದಲ ದಿನದ ಅಧಿವೇಶನ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ವರ್ಷಕ್ಕೆ 60 ದಿನ ಅಧಿವೇಶನ ನಡೆಯಬೇಕು, ಆದರೆ ಇತ್ತೀಚಿನ ದಿನಗಳಲ್ಲಿ ಆಗುತ್ತಿಲ್ಲ. ಸಿಎಂ ಬಳಿ ಈ ಬಗ್ಗೆ ಚರ್ಚೆ ಮಾಡ್ತೀವಿ, ಸಭೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 

    ಇನ್ನೂ ಸಚಿವರಿಂದ ಕೊಠಡಿ ನವೀಕರಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಧಾನಸೌಧದಲ್ಲಿರೋ ಸಚಿವರ ಕೊಠಡಿಗಳಿಗೆ ಅನುಮತಿ ಪಡೆದು ಸುಣ್ಣ-ಬಣ್ಣ ಬಳಿಸಲು ಅವಕಾಶ ಇದೆ. ಆದ್ರೆ ಹೇಗೆ ಬೇಕೋ ಹಾಗೆ ನವೀಕರಣ ಮಾಡಲು ಅವಕಾಶವಿಲ್ಲ. ವಿಧಾನಸೌಧ ವಾಸ್ತು ಪ್ರಕಾರವಾಗಿಯೇ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.