Tag: ಬಸವಶ್ರೀ ಪ್ರಶಸ್ತಿ

  • 5 ಲಕ್ಷ ರೂ. ಚೆಕ್‌ನೊಂದಿಗೆ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ ಸಾಯಿನಾಥ್‌

    5 ಲಕ್ಷ ರೂ. ಚೆಕ್‌ನೊಂದಿಗೆ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ ಸಾಯಿನಾಥ್‌

    ಬೆಂಗಳೂರು: ಪತ್ರಕರ್ತ ಪಿ ಸಾಯಿನಾಥ್‌ ಅವರು ಚಿತ್ರದುರ್ಗದ ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

    ಸಾಯಿನಾಥ್‌ ಅವರಿಗೆ 2017 ರಲ್ಲಿ ಮುರುಘಾ ಮಠ ಬಸವಶ್ರೀ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು. ಈಗ ಪ್ರಶಸ್ತಿಯ ಜೊತೆ ಸಿಕ್ಕಿದ 5 ಲಕ್ಷ ರೂ. ಹಣವನ್ನು ವಾಪಸ್‌ ನೀಡುತ್ತಿದ್ದೇನೆ ಎಂದು ಸಾಯಿನಾಥ್‌ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಸಾಯಿನಾಥ್‌ ಹೇಳಿದ್ದೇನು?
    ಚಿತ್ರದುರ್ಗದ ಶ್ರೀ ಮುರುಘಾಮಠದ ಮಠಾಧೀಶರಾದ ಶ್ರೀ ಶಿವಮೂರ್ತಿ ಮುರುಘಾ ಶರಣರ ಕುರಿತಾದ ಮಾಧ್ಯಮ ವರದಿಗಳಿಂದ ತಿಳಿದು ನಾನು ಹೆಚ್ಚು ವಿಚಲಿತನಾಗಿದ್ದೇನೆ. ಅವರು ಈಗ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ.  ಇದನ್ನೂ ಓದಿ: ಮುರುಘಾ ಶ್ರೀ 4 ದಿನ ಪೊಲೀಸ್ ಕಸ್ಟಡಿಗೆ

    ಮಕ್ಕಳ ಮೇಲೆ ಎಸಗಿದ ಈ ಅಪರಾಧಗಳನ್ನು ಖಂಡಿಸಲು ಪದಗಳು ಸಾಲುತ್ತಿಲ್ಲ. ಈ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿಗಳ ಬೆಂಬಲಕ್ಕೆ ನಾನಿದ್ದೇನೆ. 2017 ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿ ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ. ಬಹುಮಾನದ ಮೊತ್ತವನ್ನು ಚೆಕ್ ಮೂಲಕ ಹಿಂದಿರುಗಿಸುತ್ತೇನೆ.

    ಈ ಪ್ರಕರಣವನ್ನು ಬೆಳಕಿಗೆ ತಂದ ಮೈಸೂರು ಮೂಲದ ಸರ್ಕಾರೇತರ ʼಒಡನಾಡಿʼ ಸಂಸ್ಥೆಯ ಪ್ರಯತ್ನ ಮತ್ತು ಅದರ ಸಾಮಾಜಿಕ ಅನಿಷ್ಟಗಳ ವಿರುದ್ಧ ದಶಕಗಳ ಹೋರಾಟದ ಬಗ್ಗೆ ನಾನು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕು ಮತ್ತು ಯಾವುದೇ ಕಾರಣಕ್ಕೂ ರಾಜಿಯಾಗಲು ಅವಕಾಶ ನೀಡದಂತೆ ಸರ್ಕಾರಕ್ಕೆ ನಾನು ಮನವಿ ಮಾಡುತ್ತಿದ್ದೇನೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ಪ್ರದಾನ

    ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ಪ್ರದಾನ

    ಟ ಪುನೀತ್ ರಾಜ್ ಕುಮಾರ್ ಅವರಿಗೆ ಚಿತ್ರದುರ್ಗದ ಮುರುಘಾಮಠ ನೀಡುವ ಬಸವಶ್ರೀ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು. ಮುರಾಘಮಠದ ಅನುಭವ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ : ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

    ಐದು ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುವ ಈ ಪ್ರಶಸ್ತಿಯನ್ನು ಈಗಾಗಲೇ ಹಲವು ಗಣ್ಯರಿಗೆ ನೀಡಲಾಗಿದೆ. ಸಿನಿಮಾ ಕ್ಷೇತ್ರದ ಸಾಧನೆಗಾಗಿ ಇದೇ ಮೊದಲು ನಟರೊಬ್ಬರಿಗೆ ಈ ಪ್ರಶಸ್ತಿ ಸಂದಿರುವುದು ವಿಶೇಷ. ಅಪ್ಪು ಅಭಿನಯದ ಹಾಡಿಗೆ ವೇದಿಕೆಯಲ್ಲಿ ಮಕ್ಕಳ ನೃತ್ಯ ಮಾಡುತ್ತಿರುವಾಗ  ವೇದಿಕೆಗೆ ಆಗಮಿಸಿದ ಅಶ್ವಿನಿ ಪುನೀತ್ ರಾಜಕುಮಾರ್, ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಪ್ರಶಸ್ತಿ ಸ್ವೀಕರಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ಈ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಎಂಎಲ್ ಸಿ ಕೆ.ಎಸ್.ನವೀನ್, ಡಿಸಿ ಕವಿತಾ ಮನ್ನಿಕೇರಿ, ಜಿ.ಪಂ. ಸಿಇಓ ಡಾ.ನಂದಿನಿದೇವಿ, ಎಸ್ಪಿ ಕೆ.ಪರಶುರಾಮ್ ಉಪಸ್ಥಿತರಿದ್ದರು. ವಚನ ಗಾಯನದೊಂದಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆರಂಭವಾಯಿತು. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಬಸವ ಜಯಂತಿ ಪ್ರಯುಕ್ತ ಸರ್ವ ಶರಣರ ಭಾವಚಿತ್ರಕ್ಕೆ ಮುರುಘಾಶ್ರೀ ನೇತೃತ್ವದಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ಅಶ್ವಿನಿ ಪುನೀತ್ ರಾಜಕುಮಾರ್, ಬಿ.ಸಿ.ಪಾಟೀಲ್ ಪುಷ್ಪನಮನ ಸಲ್ಲಿಸಿದರು.  ನಂತರ ಪ್ರಶಸ್ತಿ ಪಡೆಯುವ ವೇಳೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಭಾವುಕರಾದರು. ಬಳಿಕ ಮುರುಘಾಮಠಕ್ಕೆ ಧನ್ಯವಾದ ಅರ್ಪಸಿದರು.