Tag: ಬಸವಸಾಗರ

  • ಬಸವಸಾಗರ ಜಲಾಶಯ ಭರ್ತಿ – ಕೃಷ್ಣಾ ನದಿಗೆ 3.50ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    ಬಸವಸಾಗರ ಜಲಾಶಯ ಭರ್ತಿ – ಕೃಷ್ಣಾ ನದಿಗೆ 3.50ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    – ಎಂ ಕೊಳ್ಳೂರು ಬ್ರಿಡ್ಜ್ ಜಲಾವೃತ
    – ರಾಯಚೂರು, ಯಾದಗಿರಿ ರಸ್ತೆ ಸಂಪರ್ಕ ಕಡಿತ

    ಯಾದಗಿರಿ: ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಯಾದಗಿರಿಯ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿದೆ.

    ಶಹಪುರ ತಾಲೂಕಿನ ಯಾದಗಿರಿ ಗಡಿಯಲ್ಲಿ ಬರುವ ಎಂ ಕೊಳ್ಳೂರು ಬ್ರಿಡ್ಜ್ ರಾಯಚೂರು, ದೇವದುರ್ಗದಿಂದ ಯಾದಗಿರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ಆದರೆ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸವಸಾಗರ ಜಲಾಶಯ ಭರ್ತಿಯಾಗಿದ್ದು, 3.10 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಟ್ಟಿರುವ ಹಿನ್ನೆಲೆ ಎಂ ಕೊಳ್ಳೂರು ಬ್ರಿಡ್ಜ್ ಜಲಾವೃತಗೊಂಡು ರಾಯಚೂರು, ಯಾದಗಿರಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

    ಮತ್ತೊಂದೆಡೆ ನದಿ ಉಕ್ಕಿ ಹರಿಯುತ್ತಿರುವುದರಿಂದ ನದಿ ತೀರದ ಜಮೀನುಗಳಿಗೆ ನೀರು ನುಗ್ಗಿದ್ದು, ಪರಿಣಾಮ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಳೆದ ಬಾರಿ ಸೇತುವೆ ಮುಳುಗಡೆಯಾದಾಗ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಸೇತುವೆ ಎತ್ತರಕ್ಕೆ ನಿರ್ಮಿಸುವ ಭರವಸೆ ನೀಡಿದ್ದರು. ಆದರೆ ಸೇತುವೆ ಇನ್ನೂ ದುರಸ್ತಿಯಾಗದ ಕಾರಣ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ:ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ