ರಾಯಚೂರು: ಮಳೆ ಪ್ರಮಾಣ ಜಾಸ್ತಿಯಾದ ಹಿನ್ನೆಲೆ ಬಸವಸಾಗರ ಜಲಾಶಯಕ್ಕೆ (Basavasagar Dam) ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ರಾಯಚೂರಿನ (Raichuru) ಲಿಂಗಸುಗೂರು (Lingasuguru) ತಾಲೂಕಿನ ಶೀಲಹಳ್ಳಿ ಸೇತುವೆ ಪುನಃ ಮುಳುಗಡೆಯಾಗಿದೆ.ಇದನ್ನೂ ಓದಿ: ಗಣೇಶ ಚತುರ್ಥಿ – ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ, ಅಲಂಕಾರ
ಎರಡು ದಿನಗಳ ಹಿಂದೆಯಷ್ಟೇ ನದಿಯ ನೀರಿನ ಪ್ರಮಾಣ ಕಡಿಮೆಯಾಗಿ ಸೇತುವೆ ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 1.55 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ರಿಲೀಸ್ ಮಾಡಲಾಗಿದೆ. ಹೀಗಾಗಿ ಶೀಲಹಳ್ಳಿ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದರಿಂದ ಲಿಂಗಸುಗೂರು ತಾಲೂಕಿನ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದ್ದು, ಶೀಲಹಳ್ಳಿ, ಹಂಚಿನಾಳ, ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ.
ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿಂದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಡೆಯಾಗಿವೆ. ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಉಗ್ರನಿಗೆ ಜೈಲಲ್ಲಿ ಇಡಿ ಡ್ರಿಲ್
ಭಾರೀ ಮಳೆಯ ಪರಿಣಾಮ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದ ಸುರಕ್ಷತಾ ದೃಷ್ಟಿಯಿಂದ 1.60 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ರಿಲೀಸ್ ಮಾಡಲಾಗಿದೆ. ಪರಿಣಾಮ ರಾಯಚೂರಿನ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ, ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ.
ಶೀಲಹಳ್ಳಿ, ಹಂಚಿನಾಳ, ಯರಗೋಡಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ. ಇನ್ನೂ ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿAದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಿ ಹೋಗಿವೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಗ್ರಾಮಸ್ಥರಿಗೆ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹಾಗೂ ಹೆಚ್.ಡಿ ಕುಮಾರಸ್ವಾಮಿಯವರ (HD Kumarswamy) ಕೊಡುಗೆ ಏನು? ಇಬ್ಬರಿಗೂ ಆತ್ಮಸಾಕ್ಷಿಯಿದ್ದರೆ ನನ್ನ ಜೊತೆ ಬಹಿರಂಗ ಚರ್ಚೆಗೆ ಬರಲಿ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಕೇಂದ್ರ ಸಚಿವರಿಗೆ ಪಂಥಾಹ್ವಾನ ನೀಡಿದ್ದಾರೆ.
1 ವರ್ಷದಿಂದ ಏನ್ ಕಡೆದು ಕಟ್ಟೆ ಹಾಕಿದ್ದೀರಾ?
ವಿಧಾನಸೌಧದಲ್ಲಿ ಮಾತನಾಡಿದ ಅವರು, NDA ಎಂದರೆ ನೇಷನ್ ಡೆಸ್ಟ್ರಾಯ್ ಅಲಾಯನ್ಸ್. ಕೇಂದ್ರ ಸಚಿವ ಜೋಶಿ ಮತ್ತು ಕುಮಾರಸ್ವಾಮಿಗೆ ರಾಜ್ಯದ ಮೇಲೆ ಪ್ರೀತಿ ಜಾಸ್ತಿಯಾಗಿದೆ. ಕಳೆದ 1 ವರ್ಷದಿಂದ ನೀವು ಇಬ್ಬರು ಕೇಂದ್ರದಲ್ಲಿ ಏನ್ ಕಡಿದು ಕಟ್ಟೆ ಹಾಕಿದ್ದೀರಾ? ಉತ್ತರ ಕೊಡಿ. ಆತ್ಮಸಾಕ್ಷಿ ಇದ್ದರೆ ಬಹಿರಂಗ ಚರ್ಚೆ ಇಬ್ಬರು ಬರಲಿ ಎಂದರು.ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು
ಕೇಂದ್ರ ಸರ್ಕಾರ (Central Government) ಏನು ಮಾಡಿದೆ ಎಂದು ತಿಳಿಯುವ ಕುತೂಹಲವಿದೆ. ನಮ್ಮ ರಾಜ್ಯ ಸರ್ಕಾರ 2 ವರ್ಷ ಏನು ಮಾಡಿದೆ ಎಂದು ನಾನು ಹೇಳುತ್ತೇನೆ. ಮೊದಲು ನೀವು ರಾಜ್ಯಕ್ಕೆ ಏನು ಮಾಡಿದ್ದೀರಾ ಹೇಳಿ? ನಮ್ಮ ಸರ್ಕಾರದ ಎಲ್ಲಾ ಸಚಿವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ನಾವು ಪ್ರತಿಭಟನೆ ಮಾಡಿದ್ದೇವೆ. ಆದರೂ ಕೇಂದ್ರ ನಮಗೆ ಏನ್ ಕೊಡ್ತಿಲ್ಲ. ರಾಜ್ಯದಿಂದ ಆಯ್ಕೆಯಾಗಿದ್ದಾರೆ ಎಂದ ಮೇಲೆ ಅವರಿಗೆ ಜವಾಬ್ದಾರಿ ಇದೆ. ಏನಾದ್ರು ಮಾತಾಡಿದ್ರೆ ಆಪರೇಷನ್ ಸಿಂಧೂರ ಅಂತಾರೆ. ಮೋದಿ ಅಂತಾರೆ. ನಿಮ್ಮ ರಿಪೋರ್ಟ್ ಏನು? ರಾಜ್ಯಕ್ಕೆ ಕೊಡುಗೆ ಏನು? ಬಹಿರಂಗಪಡಿಸಿ ಎಂದು ಆಗ್ರಹಿಸಿದರು.
ರಾಜ್ಯದಿಂದ ಭದ್ರಾ ಮೇಲ್ಡಂಡೆ, ಕೃಷ್ಡ ಮೇಲ್ಡಂಡೆ ಮಾಡಿ, ಬೇಡಿಕೆ ಈಡೇರಿಸಿದ್ದೇವೆ. ಯಾಕೆ ಹಣ ಕೊಡಲಿಲ್ಲ? ಕೇಂದ್ರದ ಎಲ್ಲಾ ಅನುದಾನ ರಾಜ್ಯಕ್ಕೆ ಕಡಿಮೆಯಾಗಿದೆ. ತೆರಿಗೆ ಪಾಲು ಸರಿಯಾಗಿ ಕೊಡ್ತಿಲ್ಲ. ಜಾಸ್ತಿ ಪಾಲು ಕೊಡಬೇಕು. ಕುಮಾರಸ್ವಾಮಿ, ಜೋಶಿ ಚರ್ಚೆಗೆ ಬರಲಿ. ನಾನು ಚರ್ಚೆಗೆ ಸಿದ್ಧ. ಕುಮಾರಸ್ವಾಮಿ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನ ಕೊಡ್ತೀನಿ. ಒಂದು ವರ್ಷದಿಂದ ರಾಜ್ಯಕ್ಕೆ ಏನ್ ಕೊಟ್ಟಿದ್ದೀರಾ ಹೇಳಿ. ಬಹಿರಂಗ ಚರ್ಚೆಗೆ ಜೋಶಿ, ಕುಮಾರಸ್ವಾಮಿ ಬರಲಿ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾಲಿ, ಶಿವಣ್ಣ
ರಾಯಚೂರು: ಕೃಷ್ಣಾ (Krishna River) ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಆಗಿರುವ ಹಿನ್ನೆಲೆ ಬಸವಸಾಗರ ಜಲಾಶಯದಿಂದ (Basavasagar Reservoir) ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ.
ರಾಯಚೂರಿನ (Raichur) ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.75 ಲಕ್ಷ ಕ್ಯುಸೆಕ್ ಒಳಹರಿವಿದೆ. ಈ ಹಿನ್ನೆಲೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಲಾರಿ ಡಿಕ್ಕಿ ಹೊಡೆದು ಸೈಕಲ್ ಸವಾರ ಸ್ಥಳದಲ್ಲೆ ಸಾವು
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂ (Basava Sagara Dam) ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಕೃಷ್ಣಾ ನದಿ (Krishna River) ತೀರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.
ಡ್ಯಾಂನ 25 ಗೇಟ್ ಓಪನ್ ಮಾಡಿ ಕೃಷ್ಣಾ ನದಿಗೆ 1,20,800 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯಕ್ಕೆ 1,10,000 ಕ್ಯುಸೆಕ್ ನೀರು ಒಳಹರಿವಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 30.83 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಳ ಹಿನ್ನಲೆ ನೀರು ಬಿಡುಗಡೆ ಪ್ರಮಾಣ ಏರಿಕೆಯಾಗಿದೆ. ಇದನ್ನೂ ಓದಿ: ಕಿಲ್ಲಿಂಗ್ ಸ್ಟಾರ್ ಬಿಂದಾಸ್ ಲೈಫ್- ಜೈಲು ನಿಯಮ ಏನು ಹೇಳುತ್ತೆ?
ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದರೂ ಡ್ಯಾಂ ಮುಂಭಾಗದಲ್ಲಿಯೇ ಮೀನುಗಾರರು ಹುಚ್ಚಾಟ ನಡೆಸಿದ್ದಾರೆ. ಉಕ್ಕಿ ಹರಿಯುವ ನದಿಯಲ್ಲಿಯೇ ಮೀನು ಹಿಡಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಡೋಂಟ್ ಕೇರ್ ಎಂದು ಮೀನು ಹಿಡಿಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಇದನ್ನೂ ಓದಿ: ಇಂದು ಮಂಡ್ಯದಲ್ಲಿ ಹೆಚ್‌ಡಿಕೆ ಮೊದಲ ದಿಶಾ ಸಭೆ
ಯಾದಗಿರಿ: ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆ ನಾರಾಯಣಪುರದ ಬಸವಸಾಗರ ಜಲಾಶಯ (Basava Sagara Dam) ಸದ್ಯ ಬಹುತೇಕ ಭರ್ತಿಯಾಗಿದೆ.
ಆಲಮಟ್ಟಿ ಜಲಾಶಯವೂ ಭರ್ತಿ:
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಾಹ್ದೂರ್ ಶಾಸ್ತ್ರಿ ಜಲಾಶಯವೂ (Almatti Dam) ಬಹುತೇಕ ಭರ್ತಿ ಆಗಿದೆ. ಮುಂಗಾರು ಮಳೆ ಕೈ ಕೊಟ್ಟ ಕಾರಣ ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆ ಜನರು ಆತಂಕಕ್ಕೆ ಒಳಗಾಗಿದ್ದರು. ಆದ್ರೆ ತಡವಾಗಿಯಾದರೂ ಜಲಾಶಯ ಭರ್ತಿ ಆಗಿದ್ದಕ್ಕೆ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
– ರಾಯಚೂರಿನ ಶೀಲಹಳ್ಳಿ ಸೇತುವೆ ಮುಳುಗಡೆ; ಜನರಿಗೆ ಪ್ರವಾಹದ ಭೀತಿ
ಯಾದಗಿರಿ/ರಾಯಚೂರು: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಜಿಲ್ಲೆಯ (Yadgir) ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ (Basava Sagar Dam) ಜೀವಕಳೆ ಬಂದಿದೆ. ಡೆಡ್ ಸ್ಟೋರೇಜ್ ದಾಟಿದ್ದ ಜಲಾಶಯ ಈಗ 80% ಭರ್ತಿಯಾಗಿದೆ.
ನಿರಂತರ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಸುಮಾರು 1.50 ಲಕ್ಷ ಕ್ಯೂಸೆಕ್ ನೀರನ್ನು ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಕೃಷ್ಣಾ ನದಿಗೆ ಬಸವಸಾಗರ ಜಲಾಶಯದ 24 ಗೇಟ್‍ಗಳ ಮೂಲಕ 1.80 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ (Krishna River) ರಿಲೀಸ್ ಮಾಡಲಾಗಿದೆ.ಇದನ್ನೂ ಓದಿ: ಸಿರಿಯಾದಲ್ಲಿ ಸ್ಫೋಟ – 6 ಮಂದಿ ಸಾವು, 23 ಜನರಿಗೆ ಗಾಯ
ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಭೀತಿ
ಕೃಷ್ಣಾ ಎಡ ಹಾಗೂ ಬಲ ದಂಡೆಯ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಇದರಿಂದಾಗಿ ಯಾದಗಿರಿ ಹಾಗೂ ರಾಯಚೂರು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ. ಜೊತೆಗೆ ನದಿ ತೀರದ ಗ್ರಾಮಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಆಡಳಿತಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲ್ಲದೇ ಮೈಕ್ ಮೂಲಕ ಜಾನುವಾರುಗಳನ್ನು ನದಿ ಸಮೀಪಕ್ಕೆ ಬಿಡದಂತೆ, ಜನರು ನದಿಗೆ ಇಳಿಯದಂತೆ, ನದಿ ತೀರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಮುನ್ನೆಚ್ಚರಿಕೆ ನೀಡಿದ್ದಾರೆ.
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆಗೂ ಮುನ್ನ ಅಧಿಕಾರಿಗಳು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ಬಸವಸಾಗರಕ್ಕೆ 1 ಲಕ್ಷದ 50 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದೆ. ಇದರಿಂದ ಇಂದು (ಶುಕ್ರವಾರ) ಬೆಳಿಗ್ಗೆ ಜಲಾಶಯದ 12 ಕ್ರಸ್ಟಗೇಟ್‍ಗಳನ್ನು ತೆರದು 1.80 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.
ಕಳೆದ 10 ದಿನದ ಹಿಂದೆ ಡೆಡ್ ಸ್ಟೋರೆಜ್ ಮಟ್ಟಕ್ಕೆ ಬಸವಸಾಗರ ಜಲಾಶಯ ತಲುಪಿತ್ತು. ಇದರಿಂದ ಕುಡಿಯಲು ಸಹ ನೀರು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಜಲಾಶಯ ಒಟ್ಟು 492.25 ಮೀಟರ್ ಇದ್ದು, ಸದ್ಯ 490 ಮೀ ನೀರು ತುಂಬಿದೆ. 33.31 ಟಿಎಂಸಿ ಯಷ್ಟು ಸಾಮರ್ಥ್ಯ ಹೊಂದಿರುವ ಡ್ಯಾಂ ಈಗ 26.70 ಟಿಎಂಸಿ ನೀರು ತುಂಬಿದೆ.
ಸೇತುವೆ ಮುಳುಗಡೆ
ಬಸವಸಾಗರ ಡ್ಯಾಂನಿಂದ ಭಾರೀ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಿರುವುದರಿಂದ ರಾಯಚೂರಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದಾಗಿ ಶೀಲಹಳ್ಳಿ, ಹಂಚಿನಾಳ, ಯರಗೋಡಿ, ಯಳಗುಂದಿ, ಕಡದರಗಡ್ಡಿ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅಲ್ಲದೇ ಲಿಂಗಸುಗೂರು ತಾಲೂಕಿನ ನಡುಗಡ್ಡೆ ಗ್ರಾಮಗಳ ಸಂಪರ್ಕ ಸಹ ಕಡಿತಗೊಂಡಿದೆ.
ಯಾದಗಿರಿ: ಮತ್ತೊಮ್ಮೆ ಬಸವಸಾಗರ ಡ್ಯಾಂ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಡ್ಯಾಂನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಸಮೀಪದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಕ್ರಸ್ಟ್ ಗೇಟ್‍ಗಳ ಮೂಲಕ 1.1 ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಇದನ್ನೂ ಓದಿ: ಎರಡೂವರೆ ತಿಂಗಳಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ- ಆರೋಪಿ ಬಂಧನ
ಸದ್ಯದ ಡ್ಯಾಂಗೆ 85 ಸಾವಿರ ಕ್ಯೂಸೆಕ್ ನೀರು ಇದೆ. 492.25 ಮೀ. ಎತ್ತರದ ಜಲಾಶಯದಲ್ಲಿ ಸದ್ಯ 492.01 ಮೀಟರ್ ಅಂದರೆ 31 ಟಿಎಂಸಿ ಸದ್ಯ ನೀರು ಸಂಗ್ರಹವಾಗಿದೆ. ಹೀಗಾಗಿ ನೀರನ್ನು ಹೊರಬಿಡಲಾಗಿದೆ. ನದಿ ಪಾತ್ರದ ಜನರಲ್ಲಿ ಇದೀಗ ಮತ್ತೆ ಭಯ ಶುರುವಾಗಿದೆ.
– ಶೆಳ್ಳಗಿ, ಮುಷ್ಠಳ್ಳಿಯ 13 ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ
ಯಾದಗಿರಿ: ಬಸವಸಾಗರ ಜಲಾಶಯದಿಂದ ಮತ್ತೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕೃಷ್ಣಾ ನದಿ ತೀರದ ದೇಗುಲಗಳು ಜಲಾವೃತಗೊಂಡಿವೆ.
ಜಲಾಶಯದಿಂದ ಕೃಷ್ಣಾ ನದಿಗೆ 4,17,740 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದ್ದು, ಸುರಪುರ ತಾಲೂಕಿನ ಮುಷ್ಠಳ್ಳಿ ಸಮೀಪದ ರಾಮಮಂದಿರ ಜಲದಿಗ್ಬಂಧನವಾಗಿದೆ. ದೇವಸ್ಥಾನ ಸುತ್ತಲೂ ನದಿಯ ನೀರು ಆವರಿಸಿದೆ. ನದಿ ತೀರದ ಗ್ರಾಮಗಳ ಸಮೀಪದಲ್ಲಿ ನದಿ ನೀರು ಬರುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶೆಳ್ಳಗಿ, ಮುಷ್ಠಳ್ಳಿಯ 13 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಬಿಡು ಬಿಟ್ಟಿದ್ದಾರೆ.
ಅಪಾರ ಪ್ರಮಾಣದ ಬೆಳೆ ಹಾನಿ:
ಕೃಷ್ಣಾ ನದಿಯ ಅಬ್ಬರಕ್ಕೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಅನ್ನದಾತರು ಕಣ್ಣೀರು ಹಾಕುವಂತಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 4,17,740 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆ ನದಿಯ ಹಿನ್ನೀರು ರೈತರ ಜಮೀನಿಗೆ ನುಗ್ಗಿ ಭತ್ತ, ಹತ್ತಿ ಬೆಳೆ ನೀರು ಪಾಲಾಗಿ, ಅನ್ನದಾತರ ಬದುಕು ಕೊಚ್ಚಿ ಹೋಗಿದೆ. ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ, ಶೆಳ್ಳಗಿ, ಮುಷ್ಠಳ್ಳಿ ಗ್ರಾಮದ ಸಾವಿರಾರು ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ.
ಮತ್ತೊಂದು ಕಡೆ ಯಾದಗಿರಿ ಮತಕ್ಷೇತ್ರದ ವಡಗೇರಾ ತಾಲೂಕಿನ ಯಕ್ಷಂತಿ, ಗೌಡೂರು, ಎಂ ಕೊಳ್ಳೂರು ಗ್ರಾಮದ ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಇಷ್ಟಾದರೂ ಜನರ ನೋವು ಆಲಿಸಲು ಯಾವುದೇ ಜನ ಪ್ರತಿನಿಧಿಗಳು ಬಂದಿಲ್ಲ, ಇದರಿಂದಾಗಿ ರೈತರು ಹಿಡಿ ಶಾಪ ಹಾಕುತ್ತಿದ್ದಾರೆ.
ಯಾದಗಿರಿ: ಬಸವಸಾಗರ ಜಲಾಶಯದಿಂದ 4 ಲಕ್ಷ ಕ್ಯೂಸೆಕ್ ಕ್ಕೂ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದು, ಕೃಷ್ಣಾ ನದಿಯ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ.
ಅಪಾರ ಪ್ರಮಾಣದ ನೀರು ಬರುತ್ತಿರುವುದರಿಂದ ತಿಂಥಣಿ ಗ್ರಾಮ ಜಲಾವೃತ ಭೀತಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಸ್ಥರು ಮನೆ ಖಾಲಿ ಮಾಡುತ್ತಿದ್ದಾರೆ. ಹಯ್ಯಾಳ, ಹತ್ತಿಗೂಡರು ರಸ್ತೆಯ ಮಧ್ಯದಲ್ಲಿನ ಸೇತುವೆ ಜಲಾವೃತಗೊಂಡಿದೆ. ಇನ್ನೂ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮದ ಸಂಪರ್ಕ ಸೇತುವೆ ಕೃಷ್ಣಾ ನದಿಯ ಪ್ರವಾಹಕ್ಕೆ ಸಂಪರ್ಕ ಕಳೆದುಕೊಂಡಿದೆ. ಸೇತುವೆಗೆ ಅಂಟಿಕೊಂಡು ನೀರು ಹರಿಯುತ್ತಿರುವ ಜೊತೆ ಕೆಲ ಕಡೆ ಸೇತುವೆ ಮೇಲ್ಭಾಗದಲ್ಲಿ ನೀರು ಹರಿದು ಹೋಗುತ್ತಿದೆ.
ಸೇತುವೆ ಕೊಚ್ಚಿಕೊಂಡು ಹೋಗುವ ಆತಂಕ ಹಿನ್ನೆಲೆ ಸೇತುವೆ ಮೇಲೆ ತೆರಳಲು ನಿರ್ಬಂಧ ಹಾಕಲಾಗಿದೆ. ಸರ್ಕಾರ ನೀಲಕಂಠರಾಯನಗಡ್ಡಿ ಜನರಿಗೆ ಕೃಷ್ಣಾ ನದಿಯ ಪ್ರವಾಹ ಸಂದರ್ಭದಲ್ಲಿ ಊರಿಗೆ ತೆರಳಲು ಅನುಕೂಲವಾಗಲು ಪಾದಚಾರಿ ಸಂಪರ್ಕ ಸೇತುವೆ ನಿರ್ಮಾಣ ಮಾಡಿತ್ತು. ಕಳೆದ ವರ್ಷ ಕೂಡ ಕೃಷ್ಣಾ ನದಿಯ ಅಬ್ಬರಕ್ಕೆ ಸೇತುವೆ ಕೆಲ ಭಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿತ್ತು. ಇದನ್ನೂ ಓದಿ:ರಾಕಿಂಗ್ ಪುತ್ರಿಯ ಸಂದೇಶ
ದುರಸ್ತಿ ಕಾರ್ಯ ಮಾಡಿದರು ಬಸವಸಾಗರ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡುತ್ತಿರುವ ಪರಿಣಾಮ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಭೀತಿಯಿದೆ. ಗ್ರಾಮಕ್ಕೆ ತಹಶೀಲ್ದಾರ ಸುಬ್ಬಣ್ಣ ಜಮಖಂಡಿ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಿದ್ದಾರೆ. ಗಡ್ಡಿಯಲ್ಲಿ 150 ಜನರು ವಾಸ ಮಾಡುತ್ತಿದ್ದು ಜಿಲ್ಲಾಡಳಿತ ಮುಂಜಾಗ್ರತೆ ವಹಿಸಿ ಈಗಾಗಲೇ ಆಹಾರ ಕಿಟ್ ವಿತರಣೆ ಮಾಡುವ ಜೊತೆ ಇಬ್ಬರು ಗರ್ಭಿಣಿಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಸ್ಟ್ರಾಂಗ್ ಎಂದ ಅನಂತ್ ಕುಮಾರ್ ಪುತ್ರಿ, ತೆನೆ ಹೊರುತ್ತಾರಾ?