Tag: ಬಸವ ಜಯಂತಿ

  • ಇಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ – ಬಸವ ಜಯಂತಿಯಲ್ಲಿ ‘ಕೈ’ ನಾಯಕರು ಭಾಗಿ

    ಇಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ – ಬಸವ ಜಯಂತಿಯಲ್ಲಿ ‘ಕೈ’ ನಾಯಕರು ಭಾಗಿ

    ಬಾಗಲಕೋಟೆ: ಭಾನುವಾರ ವಿಶ್ವಗುರು ಬಸವಣ್ಣನವರ ಜಯಂತಿ. ಲಿಂಗಾಯತರ ಪುಣ್ಯಕ್ಷೇತ್ರದಲ್ಲಿ ಮಹಾನ್ ಮಾನವತವಾದಿಯ ಜಯಂತಿ ಆಚರಣೆ ಅದ್ದೂರಿ ಆಗಿರುತ್ತದೆ. ಹೀಗಿರುವಾಗ ಜಯಂತಿ ಆಚರಣೆಯಲ್ಲಿ ಭಾಗಿಯಾಗಲು ಕಾಂಗ್ರೆಸ್ ನಾಯಕ ಬರಲಿದ್ದಾರೆ. ಚುನಾವಣೆ ವೇಳೆಯಲ್ಲಿ ರಾಹುಲ್ ಗಾಂಧಿ (Rahul Gandhi) ಲಿಂಗಾಯತರ ಪುಣ್ಯಕ್ಷೇತ್ರಕ್ಕೆ ಬರುತ್ತಿರುವುದು ಕುತೂಹಲ ಹೆಚ್ಚಿಸಿದೆ. ಅಲ್ಲದೇ ರಾಜ್ಯ ರಾಜಕೀಯ ಲೆಕ್ಕಾಚಾರ ಶುರುವಾಗಿದೆ.

    ಬಸವ ಜಯಂತಿ (Basava Jayanti) ಹಿನ್ನೆಲೆ ಬಸವಣ್ಣ ಐಕ್ಯವಾಗಿರುವ ಕೂಡಲಸಂಗಮ ಕ್ಷೇತ್ರದಲ್ಲಿ ಬಸವ ಉತ್ಸವ ಸಮಿತಿ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲು ಸಕಲ ಸಿದ್ಧತೆ ಆಗಿದೆ. ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಸವಣ್ಣನವರ ಐಕ್ಯ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಬಳಿಕ ಸಂಗಮನಾಥನ ದರ್ಶನ ಕೂಡಾ ಮಾಡಲಿದ್ದಾರೆ. ದರ್ಶನದ ಬಳಿಕ ಬಸವ ಮಂಟಪದಲ್ಲಿ ಬಸವ ಉತ್ಸವ ಸಮಿತಿ ಆಯೋಜಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಬಳಿಕ ಮಧ್ಯಾಹ್ನ 2:15 ರಿಂದ 4:15 ರವರೆಗೆ ಯಾತ್ರಿ ನಿವಾಸದಲ್ಲಿ ಪಕ್ಷದ ನಾಯಕರ ಜೊತೆ ಆಂತರಿಕ ಸಭೆ ಮಾಡಲಿದ್ದಾರೆ.

    ರಾಹುಲ್ ಗಾಂಧಿಗೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ. ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಬಾಲ್ಕಿಯ ಬಸವಲಿಂಗ ಪಟ್ಟದೇವರು, ಗದಗಿನ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ, ಇಳಕಲ್ ಮಹಾಂತ್ ಮಠದ ಗುರುಮಹಾಂತ್ ಶ್ರೀಗಳು, ಬಸವಧರ್ಮ ಪೀಠದ ಮಾದೇಶ್ವರ ಸ್ವಾಮೀಜಿ ಭಾಗಿಯಾಗಲಿದ್ದಾರೆ. ಲಿಂಗಾಯತ ಮುಖಂಡರ ಜೊತೆ ರಾಹುಲ್ ಗಾಂಧಿ ಸಭೆ ನಡೆಯೋ ಸಾಧ್ಯತೆ ಸಹ ಇದೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ 3 ದಿನಗಳ ಕಾಲ ಮಳೆ

    ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಲಿಂಗಾಯತರ ಮತಬುಟ್ಟಿಗೆ ಕೈ ಹಾಕಲು ನಾನಾ ರಣತಂತ್ರ ರೂಪಿಸುತ್ತಿವೆ. ಇದೀಗ ಬಸವ ಜಯಂತಿಯಲ್ಲೂ ಸಹ ರಾಜಕೀಯ ಪಕ್ಷಗಳು ಲಾಭ ನಷ್ಟದ ಲೆಕ್ಕಾಚಾರದಲ್ಲಿ ತೊಡಗಿದೆ. ಇದನ್ನೂ ಓದಿ: ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ

  • ಈದ್ ಉಲ್ ಫಿತರ್ ಅನ್ನು ಬಸವ ಜಯಂತಿಯಂತೆ ಆಚರಿಸಿದ್ದರೆ ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು: ಸಿಎಂಗೆ ಸಾಹಿತಿಗಳು, ಚಿಂತಕರಿಂದ ಪತ್ರ

    ಈದ್ ಉಲ್ ಫಿತರ್ ಅನ್ನು ಬಸವ ಜಯಂತಿಯಂತೆ ಆಚರಿಸಿದ್ದರೆ ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು: ಸಿಎಂಗೆ ಸಾಹಿತಿಗಳು, ಚಿಂತಕರಿಂದ ಪತ್ರ

    ಬೆಂಗಳೂರು: ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬಂದಿದೆ. ಸಾರ್ವಜನಿಕ ಶಾಂತಿಯ ತೋಟವನ್ನು ಮರುಸ್ಥಾಪನೆ ಮಾಡಬೇಕಿದೆ ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಸಾಹಿತಿಗಳು, ಚಿಂತಕರು ಸಿನಿ ಕ್ಷೇತ್ರದವರು ಹಾಗೂ ಎಡಪಂಥೀಯರು ಪತ್ರ ಬರೆದಿದ್ದಾರೆ.

    ಸಾಹಿತಿ ವೈದೇಹಿ, ಚಲನ ಚಿತ್ರ ನಿರ್ದೇಶಕ ಬಿ.ಸುರೇಶ್, ಗಿರೀಶ್ ಕಾಸರವಳ್ಳಿ, ಗಾಯಕಿ ಎಂಡಿ ಪಲ್ಲವಿ, ವಸುಂಧರ ಭೂಪತಿ, ನಾಗೇಶ್ ಹೆಗ್ಡೆ ಸೇರಿದಂತೆ ವಿವಿಧ ಕ್ಷೇತ್ರಗಳ 75 ಮಂದಿ ಪತ್ರ ಬರೆದಿದ್ದಾರೆ.

    ಪತ್ರದಲ್ಲೇನಿದೆ?
    ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಬಗ್ಗೆ ಕಾಳಜಿ ಹಾಗೂ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ತುರ್ತಾಗಿ ಮರುಸ್ಥಾಪಿಸುವುದರ ವಿಷಯದ ಬಗ್ಗೆ ಬರೆಯಲಾಗಿದೆ.

    ಕಳೆದ ಒಂದು ತಿಂಗಳಿಂದ ತಮ್ಮನ್ನು ಭೇಟಿ ಮಾಡಿ ಈ ಕೆಳಕಂಡ ಪತ್ರವನ್ನು ಸಲ್ಲಿಸಲು ತಮ್ಮ ಕಚೇರಿಯ ಮೂಲಕ ಪ್ರಯತ್ನಿಸಿದ್ದೇವೆ. ನಮ್ಮ ಪ್ರಯತ್ನಗಳು ವಿಫಲವಾಗಿರುವುದರಿಂದ, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಕೂಡಿರುವ ಈ ಪತ್ರವನ್ನು ಬಹಿರಂಗ ಪತ್ರವನ್ನಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ನಮ್ಮ ಕಾಳಜಿಯನ್ನೂ ಸಲಹೆಗಳನ್ನೂ ತಮ್ಮ ಗಮನಕ್ಕೆ ತರುವುದು ನಾಗರಿಕರಾಗಿ ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ತಾವು ಹಾಗೂ ತಮ್ಮ ಸರ್ಕಾರವು ಈ ಪತ್ರವನ್ನು ಗಂಭೀರವಾಗಿ ಪರಿಗಣಿಸುವಿರೆಂದು ನಂಬಿದ್ದೇವೆ.

    ನಾವು ಕರ್ನಾಟಕದಲ್ಲಿ ನೆಲೆಸಿರುವ ವಿವಿಧ ಕ್ಷೇತ್ರ ಮತ್ತು ವೃತ್ತಿಗಳಿಗೆ ಸೇರಿದ ಸಾರ್ವಜನಿಕ ಕಳಕಳಿಯುಳ್ಳ ನಾಗರಿಕರಾಗಿದ್ದೇವೆ. ಶಾಂತಿ, ಸಹಬಾಳ್ವೆ, ವೈವಿದ್ಯತೆ, ಬಹುತ್ವಕ್ಕೆ ಹೆಸರಾಗಿದ್ದ ಈ ನಾಡಿನಲ್ಲಿ ಇವುಗಳನ್ನೆಲ್ಲ ನಾಶಗೊಳಿಸುವಂತಹ ಇತ್ತೀಚಿನ ಬೆಳವಣಿಗೆಗಳನ್ನು ನೋಡಿ ಲಕ್ಷಾಂತರ ನಾಗರಿಕರಂತೆ ನಾವೂ ಸಹ ತೀವ್ರವಾಗಿ ವ್ಯಾಕುಲಗೊಂಡಿದ್ದೇವೆ. ಇಂತಹ ತಪ್ಪು ನಡೆಗಳನ್ನು ಸರಿಪಡಿಸಲು ಈಗಲೂ ಅವಕಾಶವಿದ್ದು ಅದಕ್ಕೆ ಅಗತ್ಯವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡುವುದು ನಾಗರಿಕರಾದ ನಮ್ಮ ಕರ್ತವ್ಯವೆಂದು ಭಾವಿಸಿ ಈ ಪತ್ರವನ್ನು ತಮಗೆ ಸಲ್ಲಿಸುತ್ತಿದ್ದೇವೆ. ಇದನ್ನೂ ಓದಿ: ಗಡಿಯಲ್ಲಿರುವಾಗಲೇ ಸೈನಿಕನಾದವನು ಚಿಂತೆಗೆ ಬೀಳಬೇಕು- ಅಗ್ನಿಪಥ್ ವಿರುದ್ಧ ನಲಪಾಡ್ ಕಿಡಿ

    ಕೋಮು ಸೌಹಾರ್ದತೆಯ ವಿಷಯದಲ್ಲಿ ನಮ್ಮ ರಾಜ್ಯಕ್ಕೆ ಭವ್ಯ ಪರಂಪರೆಯಿದೆ. 1956 ರಲ್ಲಿ ಕರ್ನಾಟಕ ಏಕೀಕರಣವಾಯಿತು. ಆದರೆ ಕರ್ನಾಟಕದ ಮತೀಯ ಸೌಹಾರ್ದತೆಯ ಇತಿಹಾಸ ಇದಕ್ಕಿಂತಲೂ ಹಳೆಯದು. ಹನ್ನೆರಡನೆಯ ಶತಮಾನದಲ್ಲಿಯೇ ಕವಿ-ದಾರ್ಶನಿಕ ಬಸವಣ್ಣನವರ ಪ್ರಯತ್ನಗಳಿಂದಾಗಿ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಯಲ್ಲಿ ನಮ್ಮ ಕನ್ನಡ ನಾಡು ಸೌಹಾರ್ದತೆಯ ಇತಿಹಾಸವನ್ನೇ ನಿರ್ಮಿಸಿದೆ. ಸಮ್ಮಿಶ್ರ ಸಂಪ್ರದಾಯಗಳಿಗೆ, ಹಿಂದು ಮುಸ್ಲಿಮರನ್ನು ಒಳಗೊಂಡಂತೆ ಜನಸಮುದಾಯಗಳ ನಡುವೆ ಶಾಂತಿಯುತ ಸಹಬಾಳ್ವೆಗೆ ನಮ್ಮ ನಾಡಿನ ಇತಿಹಾಸ ಸಾಕ್ಷಿಯಾಗಿದೆ. ಈ ಭವ್ಯ ಪರಂಪರೆಯ ಹಿನ್ನೆಲೆಯಲ್ಲೇ ನಮ್ಮ ರಾಷ್ಟ್ರಕವಿ ಕುವೆಂಪುರವರು 100 ವರ್ಷಗಳಷ್ಟು ಹಿಂದೆಯೇ ಈ ನಾಡನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ್ದಾರೆ.

    ಕರ್ನಾಟಕದ ಈ ಮುಕ್ತ ಮನಸ್ಸಿನ ಹಲನಡಾವಳಿಯ, ಸಂಸ್ಕೃತಿಯೇ ಈ ಕಾಲಘಟ್ಟದಲ್ಲಿ ಸೃಜನಶೀಲ ಮತ್ತು ಹೊಸತನ್ನರಸುವ ವ್ಯಕ್ತಿಗಳನ್ನು ರಾಷ್ಟ್ರದ ಎಲ್ಲೆಡೆಯಿಂದ ಸೂಜಿಗಲ್ಲಿನಂತೆ ಆಕರ್ಷಿಸಿದೆ. ಭಾರತದ ವಿವಿಧ ಪ್ರಾಂತ್ಯಗಳಿಗೆ ಸೇರಿದ ವಿಭಿನ್ನ ಜನಸಮುದಾಯಗಳ ಜನರು ಕರ್ನಾಟಕಕ್ಕೆ ಅಪಾರ ಸಂಖ್ಯೆಯಲ್ಲಿ ವಲಸೆ ಬಂದು ಇಲ್ಲಿ ನೆಲೆಸಿ ನಮ್ಮ ರಾಜ್ಯದ ಸಮೃದ್ಧ ವೈವಿಧ್ಯಮಯ ಸಂಸ್ಕೃತಿಯನ್ನು ಮೆಚ್ಚಿ ತಮ್ಮ ಬದುಕಿನಲ್ಲೂ ಅವುಗಳನ್ನು ಅಳವಡಿಸಿಕೊಂಡಿದ್ದಾರೆ. ತನ್ಮೂಲಕ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ರಕ್ಷಣೆ, ಉದ್ಯಮಶೀಲತೆ, ಸಾಹಿತ್ಯ, ಕಲೆ, ಸಾಮಾಜಿಕ, ಸಾಂಸ್ಕೃತಿಕ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ಚೈತನ್ಯಶೀಲ ರಾಜ್ಯವಾಗಿ ರೂಪಿಸಿದ್ದಾರೆ.

    ಇಂತಹ ಉಜ್ವಲ ಹಿನ್ನೆಲೆಯ ನಾಡಿನಲ್ಲಿ ಇತ್ತೀಚೆಗೆ ಮುಸ್ಲಿಂ, ಕ್ರೈಸ್ತ ಮತ್ತು ದಲಿತ ಸಮುದಾಯಗಳ ಮೇಲೆ ನಾನಾ ರೀತಿಯಲ್ಲಿ ಹಲ್ಲೆಗಳು ನಡೆಯುತ್ತಿವೆ. ಸರ್ವರನ್ನೂ ಒಳಗೊಳ್ಳುವ, ಒಪ್ಪಿ ಅಪ್ಪಿಕೊಳ್ಳುವ ಗುಣಲಕ್ಷಣದ ಕರ್ನಾಟಕ ರಾಜ್ಯದ ಬಗ್ಗೆ ಹೆಮ್ಮೆ, ಅಭಿಮಾನ ಹೊಂದಿರುವ ಜನರಲ್ಲಿ ಈ ಘಟನೆಗಳು ಆಘಾತ ಮೂಡಿಸಿವೆ. ಸಂಕುಚಿತ ಮತೀಯವಾದಿಗಳು ಹಾಗೂ ದ್ವೇಷಪೂರಿತ ಕೆಲ ವ್ಯಕ್ತಿಗಳು ಮತ್ತು ಗುಂಪುಗಳು ಧರ್ಮ ಮತ್ತು ಜಾತಿಯ ಆಧಾರದಲ್ಲಿ ಅಲ್ಪಸಂಖ್ಯಾತರನ್ನು ಪ್ರತ್ಯೇಕಿಸಿ ದೂರವಿಡುವ ಹಾಗೂ ಅವರನ್ನು ದಮನಗೊಳಿಸುವ ಕೃತ್ಯಗಳಲ್ಲಿ ತೊಡಗಿರುವುದು ಆತಂಕದ ವಿಷಯವಾಗಿದೆ.

    ಭಾರತ ಸಂವಿಧಾನದ ಮೌಲ್ಯ ಮತ್ತು ಆಶಯಗಳನ್ನು ಅಕ್ಷರಶಃ ಎತ್ತಿ ಹಿಡಿಯುತ್ತೇವೆಂದು ಪ್ರಮಾಣವಚನ ಸ್ವೀಕರಿಸಿರುವ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜವಾಬ್ದಾರಿ ಹುದ್ದೆಗಳಲ್ಲಿರುವ ಹಲವರು ಈ ವಚನವನ್ನು ಬಹಿರಂಗವಾಗಿ ಉಲ್ಲಂಘಿಸಿ ಅಲ್ಪಸಂಖ್ಯಾತ ಸಮುದಾಯದವರನ್ನು ಭೀತರನ್ನಾಗಿಸುವುದು ಇದಕ್ಕಿಂತಲೂ ಕಳವಳದ ಹಾಗೂ ಹತಾಶೆಯ ಸಂಗತಿಯಾಗಿದೆ. ಇದಲ್ಲದೆ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಈ ಕೇರುಕೃತ್ಯಗಳನ್ನು ಸಮರ್ಥಿಸಿಕೊಳ್ಳುತ್ತಾ ಹಿಂಸೆ ದುರಾಕ್ರಮಣ ಕೃತ್ಯಗಳಿಗೆ ಉತ್ತೇಜನ ನೀಡುತ್ತಿರುವುದಂತೂ ಇನ್ನೂ ನೋವಿನ ಸಂಗತಿಯಾಗಿದೆ. ಇನ್ನೂ ಮುಂದುವರಿದು ಈ ಸಮುದಾಯಗಳ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರ ಹಾಕಿ ಅವರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಪರಿಗಣಿಸಿ ಅವರ ಸಾಂವಿಧಾನಿಕ ಹಕ್ಕುಗಳನ್ನು ಅನುಭವಿಸದಂತೆ ಹತ್ತಿಕ್ಕುತ್ತಿರುವುದು ಹೀನಾಯ ಕೃತ್ಯವಾಗಿದೆ.

    ಈ ಹಿನ್ನೆಲೆಯಲ್ಲಿ, ಭಾರತದ ಸಂವಿಧಾನದ ಅನುಚ್ಚೇದ 51A(e) ಯಲ್ಲಿ ‘ಭಾರತದ ಎಲ್ಲ ಜನರ ನಡುವೆ ಧಾರ್ಮಿಕ, ಭಾಷೆ, ಪ್ರಾದೇಶಿಕ ಹಾಗೂ ವರ್ಗಿಯ ವೈವಿಧ್ಯತೆಗಳನ್ನು ಮೀರಿ ಪರಸ್ಪರ ಸೌಹಾರ್ದತೆ ಮತ್ತು ಬಂಧುತ್ವವನ್ನು ಉತ್ತೇಜಿಸುವುದು’ ಪ್ರತಿಯೊಬ್ಬ ನಾಗರಿಕರ ಮೂಲಭೂತ ಕರ್ತವ್ಯ ಎಂದು ಹೇಳಿವೆ. ಅನುಚ್ಛೇದ 5A(1)ವು ‘ಸಮ್ಮಿಶ್ರ ಸಂಸ್ಕೃತಿಯನ್ನೊಳಗೊಂಡ ದೇಶದ ಭವ್ಯ ಪರಂಪರೆಗೆ ಪ್ರಾಮುಖ್ಯತೆ ನೀಡಿ ಅದನ್ನು ಉಳಿಸಬೇಕು’ ಎಂದು ಪ್ರತಿಯೊಬ್ಬ ನಾಗರಿಕರನ್ನು ಒತ್ತಾಯಿಸುತ್ತದೆ. ಆದರೆ ನಮ್ಮ ಚುನಾಯಿತ ಜನಪ್ರತಿನಿಧಿಗಳು ಇದನ್ನು ಮರೆತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

    ರಾಜ್ಯವು ಅಭಿವೃದ್ಧಿ ಹೊಂದಿ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಅಂದರೆ ‘ಎಲ್ಲರ ಜೊತೆ, ಎಲ್ಲರ ವಿಶ್ವಾನದೊಂದಿಗೆ, ಎಲ್ಲರ ಅಭಿವೃದ್ಧಿ’ಯನ್ನು ಸಾಧಿಸಬೇಕಾದರೆ ಶಾಂತಿ, ಸೌಹಾರ್ದತೆ ಮತ್ತು ನ್ಯಾಯದಾನಗಳು ಅತ್ಯಗತ್ಯ ಮೂಲ ಅಂಶಗಳಾಗಿವೆ. ಸರ್ವ ಜನರ ಸುಸ್ಥಿರ ಮತ್ತು ಉತ್ತಮ ಭವಿಷ್ಯದ ನೀಲ ನಕ್ಷೆಯೆಂಬಂತಿರುವ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ 16 ನೆಯ ಅಂಶವೂ ಸಹ ಇದನ್ನೇ ಹೇಳುತ್ತದೆ. ಏನೆಂದರೆ, ‘ಜಾಗತಿಕ ಸುಸ್ಥಿರ ಅಭಿವೃದ್ಧಿಯ ಯಾವುದೇ ಉದ್ದೇಶವನ್ನು ಈಡೇರಿಸುವಲ್ಲಿ ಮೊದಲ ಹೆಜ್ಜೆಯೆಂದರೆ, ಸಾಂಸ್ಥಿಕ ನಿರ್ಬಂಧಗಳ ಹೇರಿಕೆಯಿಂದ ನ್ಯಾಯವಂಚಿತರಾಗಿ ಅಥವಾ ನೇರ ದಂಗೆ ಹಿಂಸೆಗಳಿಂದಾಗಿ ತಮ್ಮ ಮೂಲಭೂತ ಸ್ವಾತಂತ್ರ‍್ಯಕ್ಕೆ ಅಪಾಯವನ್ನು ಎದುರಿಸುತ್ತಿರುವ ವ್ಯಕ್ತಿಗಳ ಜೀವ ರಕ್ಷಣೆ ಹಾಗೂ ಮಾನವ ಹಕ್ಕುಗಳನ್ನು ಸಂರಕ್ಷಿಸುವುದಾಗಿದೆ’.

    ಇತ್ತೀಚಿಗೆ ಕೆಲವು ವಿಭಜಕ ಕೃತ್ಯಗಳಿಂದ ನಿರ್ದಿಷ್ಟ ಸಮುದಾಯಗಳನ್ನು ಅನ್ಯಗೊಳಿಸಿ ಆ ಜನರನ್ನು ಮೂಲಭೂತ ಹಕ್ಕುಗಳಿಂದ ವಂಚಿತರನ್ನಾಗಿಸುವ ಪ್ರವೃತ್ತಿ ಕಂಡು ಬರುತ್ತಿದೆ. ಇದು ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸುವುದಷ್ಟೇ ಅಲ್ಲದೆ ನಮ್ಮ ರಾಜ್ಯದ ಕೀರ್ತಿಯನ್ನು ಸಹ ಕುಂದಿಸುವ ಜೊತೆಗೆ ಹೂಡಿಕೆದಾರರು ಮತ್ತು ಹೊಸತನ್ನರಸುವ ಉದ್ಯಮಿಗಳ ನಂಬಿಕೆ ಮತ್ತು ವಿಶ್ವಾಸವನ್ನು ಹುಸಿಗೊಳಿಸುತ್ತದೆ. ನಾಗರಿಕರಲ್ಲಿ ಅಪನಂಬಿಕೆ ಮಾತು ಅಸುರಕ್ಷಿತ ಭಾವನೆ ಮೂಡಿಸಿ ಭಯದ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ಸಮಾಜದ ಎಲ್ಲ ವರ್ಗಗಳಿಗೂ ಹಾನಿ ಉಂಟು ಮಾಡುವುದಲ್ಲದೆ ನಮ್ಮ ದೇಶದ ಸಮಗ್ರತೆಗೆ ಕೂಡ ಧಕ್ಕೆ ತರುತ್ತದೆ. ಇಂತಹ ‘ದಿಗಿಲು ಹುಟ್ಟಿಸುವ ಭಾರತ’ ಮತ್ತು ‘ಕಳಂಕಿತ ಭಾರತ’ದ ವಾತಾವರಣದಲ್ಲಿ ‘ಭಾರತದಲ್ಲಿ ತಯಾರಿಸು’ (Make in India) ಎನ್ನುವ ಘೋಷ ವಾಕ್ಯವನ್ನು ಸಾಕಾರಗೊಳಿಸುವುದು ಸಾಧ್ಯವಿಲ್ಲದ ಮಾತು.

    ಇತ್ತೀಚಿಗೆ ನಡೆದ ‘ಬಸವ ಜಯಂತಿ – 2022’ ಸಂದರ್ಭದಲ್ಲಿ ಬಸವಣ್ಣನವರ ಕನಸಿನ ಸಮಾನತೆಯ ಸೌಹಾರ್ದಯುತ ಸಮಾಜವನ್ನು ಕಟ್ಟುವುದು ನಮ್ಮ ಗುರಿ ಎಂದು ಸರ್ಕಾರದ ಜಾಹಿರಾತಿನಲ್ಲಿ ಪ್ರಕಟಿಸಲಾಗಿದೆ. ಸಾಮಾಜಿಕ ಸೌಹಾರ್ದತೆ, ಬ್ರಾತೃತ್ವ, ಏಕತೆ ಮತ್ತು ಅಂತಃಕರಣಕ್ಕೆ ಬಸವಣ್ಣನವರು ಒತ್ತು ನೀಡಿದ್ದರು ಎನ್ನುವ ನಮ್ಮ ಪ್ರಧಾನ ಮಂತ್ರಿಯವರ ಮಾತುಗಳನ್ನು ಸಹ ಇದರ ಜೊತೆ ಉದ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ಪವಿತ್ರ ರಂಜಾನ್ ಈದ್ ಉಲ್ ಫಿತರ್ ಹಬ್ಬವನ್ನು ಬಸವ ಜಯಂತಿಯಂತೆಯೇ ಆಚರಿಸಿ ಸತತವಾಗಿ ಕೋಮು ದ್ವೇಷಿಗಳ ದಾಳಿಗೆ ತುತ್ತಾಗುತ್ತಿರುವ ಮುಸ್ಲಿಂ ನಾಗರಿಕರನ್ನು ಉದ್ದೇಶಿಸಿ ಅವರ ರಕ್ಷಣೆ ಮತ್ತು ಸುರಕ್ಷತೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರೆ ಅದು ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು.

    ಶಾಂತಿ ಸೌಹಾರ್ದತೆ ಮತ್ತು ನ್ಯಾಯದಾನ ನೀಡುವ ಹೊಣೆಗಾರಿಕೆಯನ್ನು ಕರ್ನಾಟಕ ಸರ್ಕಾರವು ನಿರ್ವಹಿಸುತ್ತದೆ ಎನ್ನುವ ನಂಬಿಕೆಯಿಂದ ನಾವು ಮುಖ್ಯಮಂತ್ರಿಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಲ್ಲ ನಾಗರಿಕರ ಸೌಖ್ಯ ಮತ್ತು ವಿಶ್ವಾಸವನ್ನು ಪುನರ್ ಪ್ರತಿಷ್ಠಾಪಿಸಬೇಕೆಂದು ಮನವಿ ಮಾಡಿ ಕೊಳ್ಳುತ್ತೇವೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

    1. ರಾಜ್ಯ ಪೊಲೀಸ್ ಪಡೆಯು ತನ್ನ ಸಾಂವಿಧಾನಿಕ ಕರ್ತವ್ಯಕ್ಕೆ ಬದ್ಧವಾಗಿ ಕಾನೂನು ಪಾಲನೆಯನ್ನು ಎತ್ತಿ ಹಿಡಿದು ಸಮಾಜದ ದುರ್ಬಲ ವರ್ಗದ ನಾಗರಿಕರ ರಕ್ಷಣೆ ಮಾಡುವಂತೆ ಸೂಕ್ತ ನಿರ್ದೇಶನ ನೀಡಬೇಕು, ಮತೀಯವಾದಿ ಮತ್ತು ಜಾತಿವಾದಿ ಅಪರಾಧಗಳಿಗೆ ತುತ್ತಾಗುವ ನಾಗರಿಕರಿಗೆ ಪೂರ್ಣ ನ್ಯಾಯ ದೊರಕುವಂತೆಯೂ, ಇಂತಹ ಅಪರಾಧಗಳನ್ನು ಎಸಗುವವರ ವಿರುದ್ಧ ಸಾಕ್ಷಿದಾರರು ಧೈರ್ಯದಿಂದ ಮುಂದೆ ಬಂದು ಮುಕ್ತವಾಗಿ ತಮ್ಮ ಸಾಕ್ಷ್ಯವನ್ನು ನೀಡುವಂತೆಯೂ, ಅವರಿಗೆಲ್ಲಾ ಪೂರ್ಣ ರಕ್ಷಣೆ ಒದಗಿಸಿ ಅವರಲ್ಲಿ ವಿಶ್ವಾಸ ತುಂಬಿಸಬೇಕು.

    2. ಕೋಮುವಾದಿ ಗಲಭೆಗಳಿಂದಾಗಿ ಹಿಂಸೆ, ಸಾವು ಹಾಗೂ ಬದುಕು ನಷ್ಟವಾದಾಗ, ಸ್ಥಳೀಯ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಜವಾಬ್ದಾರರಾದ ಅಧಿಕಾರಿಗಳ ವಿರುದ್ಧ, ವಿಶೇಷವಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.

    3. ನಿರ್ದಿಷ್ಟ ಕೋಮಿನ ಜನರನ್ನು ನಿಂದಿಸಿ ಅಮಾನವೀಕರಣಗೊಳಿಸುವುದರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ದೈಹಿಕ ಹಿಂಸೆಗೆ ಪ್ರಚೋದನೆ ನೀಡುವಂತಹ ಪ್ರವೃತ್ತಿಗೆ ತಡೆಯೊಡ್ಡಿ ಅಲ್ಪಸಂಖ್ಯಾತರ ವಿರುದ್ಧ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳುಗೆಡುವುತ್ತಿರುವ ವ್ಯಕ್ತಿಗಳ ವಿರುದ್ಧ ಪ್ರಬಲ ಕಾನೂನು ಕ್ರಮ ಜರುಗಿಸಬೇಕು.

    4. ಸಾಮಾಜಿಕ ಜಾಲತಾಣಗಳು ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸಹ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಸುಳ್ಳು ಸುದ್ದಿಗಳು ಮತ್ತು ಗಾಳಿ ಸಮಾಚಾರಗಳನ್ನು ಹಬ್ಬಿಸುವ ಕೃತ್ಯ ನಡೆಯುತ್ತಿದೆ. ಇದರಿಂದ ಈ ಸಮುದಾಯಗಳನ್ನು ಅನ್ಯವಾಗಿಸುವ ಮತ್ತು ಅವರನ್ನು ಹಿಂಸೆಗೆ ಒಳಪಡಿಸುವ ಅಪಾಯ ಹೆಚ್ಚಾಗುತ್ತಿದೆ. ಇಂತಹ ಅಪರಾಧಗಳ ವಿರುದ್ಧ ಸರ್ಕಾರ ಬಹಿರಂಗವಾಗಿ ದನಿಯೆತ್ತಿ ಮಾತನಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.

    5. ನೀತಿಯುತ ಪತ್ರಿಕೋದ್ಯಮದ ತತ್ವಬದ್ಧ ಮೌಲ್ಯಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿಯ ಸುದ್ದಿ ಬಿತ್ತರಿಸುತ್ತಾ ಸಮಾಜದಲ್ಲಿ ಅಸಹಿಷ್ಣುತೆ, ದ್ವೇಷ, ಮತ್ತು ಹಿಂಸೆಯನ್ನು ಪ್ರಚೋದಿಸುತ್ತಿರುವ ಮಾಧ್ಯಮಗಳಲ್ಲಿನ ಹಲವರಿಗೆ ಅಂತಹ ಕರ್ತವ್ಯಲೋಪಗಳನ್ನು ನಿಗ್ರಹಿಸುವಂತೆ ಒತ್ತಾಯಿಸಬೇಕು. ರಾಜ್ಯದಲ್ಲಿನ ಸೌಹಾರ್ದಯುತ ವಾತಾವರಣವನ್ನು ನಿರ್ಭೀತರಾಗಿ ಹಾಳುಗೆಡವುತ್ತಿರುವುದು ಒಪ್ಪಿತವಲ್ಲವೆಂಬುದನ್ನು ಮನದಟ್ಟು ಮಾಡಬೇಕು.

    ಕರ್ನಾಟಕ ಸರ್ಕಾರ ಈ ಸಕ್ರಿಯ ಕ್ರಮಗಳನ್ನು ಕೈಗೊಂಡರೆ ಹಿಂಸೆಯಲ್ಲಿ ತೊಡಗಿರುವ ಹಾಗೂ ಹಿಂಸೆಗೆ ಪ್ರಚೋದನೆ ನೀಡುತ್ತಿರುವರಿಗೆ ಹಾಗೂ ನಾಗರಿಕರಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ಮೂಡಿಸುತ್ತಿರುವವರಿಗೆ ಇಂತಹ ಕಾನೂನು ಬಾಹಿರ ಹಾಗೂ ಒಪ್ಪಿತವಲ್ಲದ ವರ್ತನೆಗಳನ್ನು ಹಾಗೂ ದ್ವೇಷಪೂರಿತ ಅಪರಾಧಗಳನ್ನು ಸರ್ಕಾರ ಸಹಿಸುವುದಿಲ್ಲ ಎನ್ನುವ ಸ್ಪಷ್ಟ ಸಂದೇಶ ಸಾರಿದಂತಾಗುವುದು. ರಾಜ್ಯವು ಇಂತಹ ಸಂಕ್ರಮಣ ಸ್ಥಿತಿಯಲ್ಲಿರುವಾಗ ಮತೀಯ ಸೌಹಾರ್ದತೆಯನ್ನು ಮರುಪ್ರತಿಷ್ಠಾಪಿಸುವುದು ಪ್ರಾಮುಖ್ಯವಾದ ಮತ್ತು ಅತ್ಯಂತ ತುರ್ತಿನ ಕಾರ್ಯವೆಂದು ನಾವು ಪರಿಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ತಮ್ಮ ನೇತೃತ್ವದ ಸರ್ಕಾರವು ಮುನ್ನಡಿ ಇಡಬೇಕೆಂದು ಬಯಸುತ್ತೇವೆ. ಈ ಸಂದರ್ಭದಲ್ಲಿ ರಾಜ್ಯವು ಪ್ರಗತಿಯೆಡೆಗೆ ಸಾಗುವ ಬದಲಾಗಿ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ತಳಮಟ್ಟಕ್ಕಿಳಿಯಿತು ಎನ್ನುವ ಅಪಖ್ಯಾತಿಗೆ ತಾವು ಒಳಗಾಗಬಾರದು ಎನ್ನುವ ಆಶಯ ನಮ್ಮದು.

    ಈ ನಿಟ್ಟಿನಲ್ಲಿ ಸರ್ಕಾರದ ಪ್ರಬಲ, ಸ್ಪಷ್ಟ, ಅಧಿಕೃತ ಆದೇಶ ಕ್ರಮಗಳನ್ನು ನಾವು ನಿಮ್ಮಿಂದ ನಿರೀಕ್ಷಿಸುತ್ತಿದ್ದೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

    Live Tv

  • ಬಸವ ಜಯಂತಿ ಮೆರವಣಿಗೆಯಲ್ಲಿ ಕುಡುಕರ ಹಾಡು – ಸಾರ್ವಜನಿಕರಿಂದ ಟೀಕೆ

    ಬಸವ ಜಯಂತಿ ಮೆರವಣಿಗೆಯಲ್ಲಿ ಕುಡುಕರ ಹಾಡು – ಸಾರ್ವಜನಿಕರಿಂದ ಟೀಕೆ

    ದಾವಣಗೆರೆ: ಬಸವ ಜಯಂತಿಯಂದು ಕುಡುಕರ ಸಾಂಗ್ ಹಾಕಿ ಮೆರವಣಿಗೆಯಲ್ಲಿ ಬಸವಣ್ಣನವರಿಗೆ ಅವಮಾನ ಮಾಡಲಾಗಿದೆ.

    basavanna

    ಬಸವ ಜಯಂತಿ ಎಂದರೆ ಶ್ರದ್ಧಾ ಭಕ್ತಿಗಳಿಂದ ಬಸವಣ್ಣನವರ ವಚನಗಳನ್ನು ಅವರ ಅದರ್ಶಗಳನ್ನು ಜನರಿಗೆ ತಲುಪಿಸುವಂತಹ ಕೆಲಸ ಮಾಡಬೇಕು. ಆದರೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆಯ ಮಾಕುಂಟೆ ಗ್ರಾಮದಲ್ಲಿ ಬಸವಣ್ಣನವರಿಗೆ ಅವಮಾನ ಮಾಡುವ ರೀತಿ ಮೆರವಣೆಗೆ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

    ಪ್ರತಿ ವರ್ಷ ಬಸವ ಜಯಂತಿಯಂದು ಗ್ರಾಮದಲ್ಲಿ ಶ್ರೀ ಬಸವಣ್ಣನವರ ಭಾವಚಿತ್ರ ಹಿಡಿದು ಮೆರವಣೆಗೆ ಮಾಡುತ್ತಿರುವುದು ವಾಡಿಕೆ. ಆದರೆ ಮಾಕುಂಟೆ ಗ್ರಾಮದ ಮೆರವಣಿಗೆಯಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಎನ್ನುವ ಸಾಂಗ್‍ಗೆ ಬಾಟಲಿ ಹಿಡಿದು ಡ್ಯಾನ್ಸ್ ಮಾಡಿದ್ದಾರೆ.

    ಗ್ರಾಮದ ಮುಖಂಡರು ಸ್ಥಳದಲ್ಲಿಯೇ ಇದ್ದರೂ ಅದನ್ನು ವಿರೋಧಿಸುವ ಬದಲು ಅವರು ಕೂಡ ಸಂಭ್ರಮಿಸಿದ್ದಾರೆ. ವೀಡಿಯೋಗೆ ಸಾರ್ವಜನಕರಿಂದ ಟೀಕೆ ವ್ಯಕ್ತವಾಗಿದೆ.

  • ಎತ್ತುಗಳ ಮೆರವಣಿಗೆ ವೇಳೆ ಚಪ್ಪಲಿ ತೂರಿದ ಯುವಕನನ್ನು ಥಳಿಸಿದ ಗ್ರಾಮಸ್ಥರು

    ಎತ್ತುಗಳ ಮೆರವಣಿಗೆ ವೇಳೆ ಚಪ್ಪಲಿ ತೂರಿದ ಯುವಕನನ್ನು ಥಳಿಸಿದ ಗ್ರಾಮಸ್ಥರು

    ಹಾವೇರಿ: ಬಸವ ಜಯಂತಿ ಪ್ರಯುಕ್ತ ನಡೆದ ಎತ್ತುಗಳ ಮೆರವಣಿಗೆ ವೇಳೆ ಸವಣೂರು ತಾಲೂಕಿನ ಗ್ರಾಮದಲ್ಲಿ ಯುವಕನೊಬ್ಬ ಚಪ್ಪಲಿ ತೂರಿ ವಿಕೃತಿ ಮೆರೆದಿದ್ದಾನೆ.

    ಮಂಗಳವಾರ ರಾತ್ರಿ ಕಾರಡಗಿ ಗ್ರಾಮದಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಎತ್ತುಗಳ ಮೇಲೆ ಖಾಜಾಮುದ್ದೀನ್ ಕೋಲ್ಕಾರ(29) ಎಂಬಾತ ಚಪ್ಪಲಿ ತೂರಿದ್ದಾನೆ.

    ಚಪ್ಪಲಿ ತೂರಿದ್ದಕ್ಕೆ ಆಕ್ರೋಶಗೊಂಡ ಜನರು ಯುವಕನನ್ನು ಹಿಡಿದು ಕಟ್ಟಿ ಹಾಕಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಖಾಜಾಮುದ್ಧೀನ್‌ನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮೇ 6ರಂದು ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ ಸನ್ಯಾಸ ದೀಕ್ಷೆ ಸ್ವೀಕಾರ

    ಥಳಿತಕ್ಕೆ ಒಳಗಾದ ಆರೋಪಿ ತಲೆಗೆ ಗಾಯವಾದ ಹಿನ್ನೆಲೆಯಲ್ಲಿ ಈಗ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಸವ ಜಯಂತಿಯಂದೇ ಬಸವಣ್ಣನಿಗೆ ಅಪಮಾನ!

    ಬಸವ ಜಯಂತಿಯಂದೇ ಬಸವಣ್ಣನಿಗೆ ಅಪಮಾನ!

    ವಿಜಯಪುರ: ಬಸವ ಜಯಂತಿಯಂದೇ ಜಗಜ್ಯೋತಿ ಬಸವಣ್ಣನಿಗೆ ಅಪಮಾನ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

    ಜಗಜ್ಯೋತಿ ಬಸವೇಶ್ವರ ದಿನಾಚಾರಣೆಯನ್ನು ವಿಜಯಪುರದಲ್ಲಿ ಆದ್ಧೂರಿಯಾಗಿ ಆಚರಿಸಲಾಯಿತು. ನಗರದ ಬಸವೇಶ್ವರರ ಮೂರ್ತಿ ಎದುರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಪೂಜೆಯಲ್ಲಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಎಸ್ಪಿ ಆನಂದ ಕುಮಾರ ಸೇರಿದಂತೆ ಹಲವರು ಭಾಗಿ ಆಗಿದ್ದರು. ಇದೆ ವೇಳೆ ಬಸವೇಶ್ವರರಿಗೆ ಅಪಮಾನ ಮಾಡಿದ ಘಟನೆ ಕೂಡ ನಡೆಯಿತು. ಇದನ್ನೂ ಓದಿ: ಮಠದಲ್ಲಿ ರಂಜಾನ್‌, ಬಸವ ಜಯಂತಿ ಆಚರಣೆ – ಬಸವಣ್ಣ, ಮಹಮ್ಮದ್‌ ಪೈಗಂಬರ್‌ಗೆ ಜಯಘೋಷ

    ಸಂಸದ ರಮೇಶ ಜಿಗಜಿಣಗಿ ಶೂ ಧರಿಸಿ ಪೂಜೆಯಲ್ಲಿ ಪಾಲ್ಗೊಂಡರು‌. ಅಲ್ಲದೆ ಹಲವರು ಚಪ್ಪಲಿ, ಶೂ ಧರಿಸಿ ಪೂಜೆ ನೆರವೇರಿಸಿದರು. ಶೂ ಧರಿಸಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಮೇಶ ಜಿಗಜಿಣಗಿ ಕ್ಯಾಮೆರಾ ನೋಡುತ್ತಿದಂತೆ ಸ್ವಲ್ಪ ಸಮಯದ ನಂತರ ಹೊರಗಡೆ ಹೋಗಿ ಶೂ ತೆಗೆದು ಬಂದರು. ಆದರೆ ಇನ್ನೂ ಕೆಲವರು ಶೂ, ಚಪ್ಪಲಿ ಧರಿಸಿಯೇ ಆರತಿ ಬೆಳಗಿದರು.

  • ಮಠದಲ್ಲಿ ರಂಜಾನ್‌, ಬಸವ ಜಯಂತಿ ಆಚರಣೆ – ಬಸವಣ್ಣ, ಮಹಮ್ಮದ್‌ ಪೈಗಂಬರ್‌ಗೆ ಜಯಘೋಷ

    ಮಠದಲ್ಲಿ ರಂಜಾನ್‌, ಬಸವ ಜಯಂತಿ ಆಚರಣೆ – ಬಸವಣ್ಣ, ಮಹಮ್ಮದ್‌ ಪೈಗಂಬರ್‌ಗೆ ಜಯಘೋಷ

    ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣ ಹಾಗೂ ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದಲ್ಲಿ ವಿಭಿನ್ನವಾಗಿ ರಂಜಾನ್ ಹಾಗೂ 889ನೇ ಬಸವ ಜಯಂತಿ ಆಚರಿಸಲಾಯಿತು.

    ಗಜೇಂದ್ರಗಡ, ಸೂಡಿಯ ಮೈಸೂರು ಮಠದ ಶ್ರೀ ವಿಜಯ ಮಹಾಂತೇಶ್ವರ ಸ್ವಾಮೀಜಿ ಹಾಗೂ ಮೌಲ್ವಿ ನೇತೃತ್ವದಲ್ಲಿ ʻಭಾವೈಕ್ಯತೆ ನಡಿಗೆ ಸಾಮರಸ್ಯದ ಕಡೆಗೆʼ ಎಂಬ ವಿಭಿನ್ನ ಹಾಗೂ ವಿಶೇಷವಾದ ಪಾದಯಾತ್ರೆ ಮಾಡಲಾಯಿತು. ಈ ವೇಳೆ ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಮರಸ್ಯ ಬಿಂಬಿಸುವ ಪಾದಯಾತ್ರೆ ನಡೆಯಿತು. ಈ ಮೆರವಣಿಗೆಯಲ್ಲಿ ವಿಶ್ವ ಗುರು ಬಸವಣ್ಣ, ಪ್ರವಾದಿ ಮಹಮ್ಮದ್‌ ಪೈಗಂಬರ್‌ಗೆ ಜಯಘೋಷ ಕೂಗಿದರು. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ಪ್ರದಾನ

    ಧರ್ಮ ದೊಡ್ಡದಲ್ಲ ದಯೆ ದೊಡ್ಡದು, ಜಾತಿಗಿಂತ ನೀತಿ ಮೇಲು, ಮಾನವ ಜನ್ಮಕ್ಕೆ ಜಯವಾಗಲಿ, ದೇವನೊಬ್ಬ ನಾಮ ಹಲವು ಎಂಬ ಘೋಷವಾಕ್ಯದೊಂದಿಗೆ ಹಿಂದೂ-ಮುಸ್ಲಿಂ ನಾವೆಲ್ಲಾ ಒಂದು ಎಂಬ ಸಂದೇಶ ಸಾರಿದರು. ನಂತರ ಸಾಮೂಹಿಕವಾಗಿ ಪ್ರಾರ್ಥನೆ ಮಾಡಿದರು. ಈ ವೇಳೆ ವಿಜಯ ಮಹಾಂತೇಶ್ವರ ಶ್ರೀಗಳು, ಜಗತ್ತಿನಲ್ಲಿ ಶಾಂತಿ ಸಿಗಬೇಕು ಅಂದರೆ ಎಲ್ಲರೂ ಭಾವೈಕ್ಯತೆಯಿಂದ ನಡೆದುಕೊಳ್ಳಬೇಕು. ಇಂತಹ ಭಾವೈಕ್ಯ ಕಾರ್ಯಗಳಲ್ಲಿ ರಾಜಕೀಯ ವ್ಯಕ್ತಿಗಳು ಬೆರೆಯಬೇಕು. ಈಗ ರಾಜಕೀಯ ವ್ಯಕ್ತಿಗಳಲ್ಲಿ ಸಮಾಧಾನ ಶಾಂತಿ ಇಲ್ಲ. ಬರೀ ಪಾರ್ಟಿ, ಪಕ್ಷ ನೋಡ್ತಾರೆ. ಸಮಾಜ, ನಾಡಿನ ಜನತೆಯನ್ನು ನೋಡ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ದೇವರಿಗೆ ಜಾತಿಯ ಮಿತಿ ಇಲ್ಲ. ಜಾತಿ ಅಂದರೆ ವಿಷ. ಧರ್ಮ ಅಂದರೆ ಅಮೃತ. ಜಾತಿ ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದನ್ನು ಎಲ್ಲರೂ ಬಿಡಬೇಕು ಎಂದು ಶ್ರೀಗಳು ಮನವಿ ಮಾಡಿದರು. ಇದನ್ನೂ ಓದಿ: ರಾಯಚೂರಿನಲ್ಲಿ ರಂಜಾನ್ ಸಂಭ್ರಮ ಜೋರು: ಸಾವಿರಾರು ಜನರಿಂದ ಸಾಮೂಹಿಕ ಪ್ರಾರ್ಥನೆ

    ಮುಂಡರಗಿ ಪಟ್ಟಣದ ಶ್ರೀ ಅನ್ನದಾನೀಶ್ವರ ಮಠದಲ್ಲೂ ಪವಿತ್ರ ರಂಜಾನ್ ಹಬ್ಬ ಹಾಗೂ ವಿಶ್ವಗುರು ಬಸವಣ್ಣನವರ 889ನೇ ಜಯಂತಿಯನ್ನು ಒಟ್ಟಾಗಿ ಭಾವೈಕ್ಯತೆಯಿಂದ ಆಚರಿಸಲಾಯಿತು. ಎಲ್ಲೆಡೆ ಧರ್ಮ ಧಂಗಲ್ ನಡೆಯುವ ಸಂದರ್ಭದಲ್ಲಿ ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದಲ್ಲಿ ಹಿಂದೂ-ಮುಸ್ಲಿಮರು ಒಟ್ಟಾಗಿ ಬಸವ ಜಯಂತಿ ಹಾಗೂ ರಂಜಾನ್ ಆಚರಿಸಿದರು. ನಾಡೋಜ ಶ್ರೀ ಅಭಿನವ ಅನ್ನದಾನೀಶ್ವರ ಮಹಾಸ್ವಾಮೀಜಿ, ಬೈರನಹಟ್ಟಿ ದೊರೆಸ್ವಾಮಿ ಮಠದ ಶಿವಶಾಂತವೀರ ಶ್ರೀಗಳು ಹಾಗೂ ಮೌಲ್ವಿಗಳ ನೇತೃತ್ವದಲ್ಲಿ ಈ ಕೋಮುಸೌಹಾರ್ದತೆ ಕಾರ್ಯಕ್ರಮ ಜರುಗಿತು.

    ಬಸವಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಹಿಂದೂ-ಮುಸ್ಲಿಂ ಸಮಾಜದ ಬಾಂಧವರು ಒಟ್ಟಾಗಿ ಬಸವಣ್ಣ ಹಾಗೂ ಮಹಮ್ಮದ್ ಪೈಗಂಬರ್ ಪ್ರಾರ್ಥನೆ, ಪೂಜೆ, ಜಪತಪ ಮಾಡಿ ಜಯಘೋಷ ಕೂಗಿದರು. ಈ ವೇಳೆ ಮುಸ್ಲಿಮರು ಹಾಗೂ ಬಸವಣ್ಣನ ಅಯಾಯಿಗಳನ್ನು ಒಟ್ಟಾಗಿ ಸನ್ಮಾನಿಸಲಾಯಿತು‌. ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ವೈ.ಎನ್.ಗೌಡರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ರಂಜಾನ್ ಮುನ್ನಾ ದಿನವೇ ಎರಡು ಗುಂಪುಗಳ ಮಧ್ಯೆ ಗಲಾಟೆ – ಇಂಟರ್ನೆಟ್ ಸ್ಥಗಿತ

  • ಅಮಿತ್ ಶಾರೊಂದಿಗೆ ಸಚಿವರಿಗೂ ಊಟಕ್ಕೆ ಆಹ್ವಾನ – ಕುತೂಹಲ ಮೂಡಿಸಿದ ಬೊಮ್ಮಾಯಿ ನಡೆ

    ಅಮಿತ್ ಶಾರೊಂದಿಗೆ ಸಚಿವರಿಗೂ ಊಟಕ್ಕೆ ಆಹ್ವಾನ – ಕುತೂಹಲ ಮೂಡಿಸಿದ ಬೊಮ್ಮಾಯಿ ನಡೆ

    ಬೆಂಗಳೂರು: ಆಡಳಿತ ಸರ್ಕಾರ ಬಿಜೆಪಿ ಪಾಳಯದಲ್ಲಿ ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ, ಬಸವ ಜಯಂತಿ ದಿನದಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಿಎಂ ನಿವಾಸದಲ್ಲಿ ಏರ್ಪಡಿಸಲಿರುವ ಮಧ್ಯಾಹ್ನ ಊಟಕ್ಕೆ ಸಚಿವರಿಗೂ ಆಹ್ವಾನ ನೀಡಿರುವುದು ಕುತೂಹಲ ಮೂಡಿಸಿದೆ.

    ಬಸವ ಜಯಂತಿ ದಿನದ ವಿಶೇಷ ಭೋಜನ ಕೂಟದಲ್ಲಿ ಯಾರಿಗೆ ಹೆಚ್ಚು ಸಿಹಿ ಸಿಗಲಿದೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿದೆ. ಈಗಾಗಲೇ ರೇಸ್‌ಕೋರ್ಸ್ ರಸ್ತೆಯ ರೇಸ್ ವ್ಯೂವ್ ಕಾಟೇಜ್‌ನಲ್ಲಿ ಭರತ ಸಿದ್ಧತೆ ನಡೆದಿದೆ. ಎಸ್‌ಪಿಜಿ ಟೀಂಗೆ ಅಮಿತ್ ಶಾ ಲಂಚ್‌ಗೆ ಆಗಮಿಸುವವರ ಪಟ್ಟಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರಿಗೂ ಆಸನದ ವ್ಯವಸ್ಥೆಯನ್ನು ಸಿಎಂ ಕಚೇರಿ ಕಲ್ಪಿಸಿದೆ. ಇದನ್ನೂ ಓದಿ: ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು: ಡಿ.ಕೆ.ಶಿವಕುಮಾರ್

    ಮಂಗಳವಾರ ಬಸವ ಜಯಂತಿ ಹಿನ್ನೆಲೆಯಲ್ಲಿ ಚಾಲುಕ್ಯ ವೃತ್ತದಲ್ಲಿ ಅಮಿತ್ ಶಾ ಅವರು ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಸವ ಪ್ರತಿಮೆ ಬಳಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಬಳಿಕ ಅಮಿತ್ ಶಾ ಅವರು ಮಹತ್ವದ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿ.ಟಿ.ರವಿ ಜೊತೆ ಶಾಸಕ ರಾಜುಗೌಡ ಇದ್ದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

    ಬಿಜೆಪಿಯಲ್ಲಿ ಬದಲಾವಣೆ ಮಾತು ಕೇಳಿಬರುತ್ತಿದೆ. ಈ ವೇಳೆ ಶಾಸಕರು, ಸಚಿವರು, ಪರಿಷತ್ ಸದಸ್ಯರು, ಪಕ್ಷದ ಹಿರಿಯ ಸದಸ್ಯರನ್ನೂ ಸಿಎಂ ಭೋಜನ ಕೂಟಕ್ಕೆ ಆಹ್ವಾನಿಸಿದ್ದಾರೆ.

    ರಾಜ್ಯ ಪ್ರವಾಸ ಕೈಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, ಬಿಜೆಪಿ ನಾಯಕತ್ವ ಬದಲಾವಣೆ, ಹೊಸ ಮುಖಗಳಿಗೆ ಮಣೆ ಎನ್ನುವಂತಹ ವಿಚಾರಗಳನ್ನು ಪ್ರಸ್ತಾಪಿಸಿ ಬಿರುಗಾಳಿ ಎಬ್ಬಿಸಿ ದೆಹಲಿಗೆ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರೂ ಈ ಸರ್ಕಾರವನ್ನು ಮೆಚ್ಚುವುದಿಲ್ಲ: ಎಚ್.ವಿಶ್ವನಾಥ್

  • ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು

    ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು

    ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

    ಕೊರೊನಾ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರಗಳು ಮತ್ತು ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಹಲವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಾಮಾಜಿಕ ಅಂತರವನ್ನೇ ಮರೆತಿದ್ದರು.

    ಶಾಸಕ ಶಿವರಾಜ್ ಪಾಟೀಲ್ ಹಾಗೂ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ನಿಂತು ಫೋಟೋ ತೆಗೆಸಿಕೊಂಡರು. ಸುಮಾರು ಹೊತ್ತು ಒಟ್ಟಾಗಿ ಕುಳಿತು ಮಾತನಾಡಿದರು. ಸಾಮಾಜಿಕ ಅಂತರ ಕಾಪಾಡುವಂತೆ ಪೊಲೀಸರು ಮೈಕ್ ನಲ್ಲಿ ಅನೌನ್ಸ್ ಮಾಡಿದರೂ ತಿಳಿದುಕೊಳ್ಳದ ರಾಜಕಾರಣಿಗಳು ಗುಂಪುಗುಂಪಾಗಿ ಓಡಾಡಿ ಬಳಿಕ ಅಲ್ಲಿಂದ ತೆರಳಿದರು.

  • ಗ್ರಾಮಸ್ಥರಲ್ಲಿ ಸಂಕ್ರಾಂತಿ ಅಂದ್ರೆ ಭಯ- ಹಬ್ಬದ ಬದಲಿಗೆ ಬಸವ ಜಯಂತಿ ಆಚರಣೆ

    ಗ್ರಾಮಸ್ಥರಲ್ಲಿ ಸಂಕ್ರಾಂತಿ ಅಂದ್ರೆ ಭಯ- ಹಬ್ಬದ ಬದಲಿಗೆ ಬಸವ ಜಯಂತಿ ಆಚರಣೆ

    ಕೋಲಾರ: ಸಂಕ್ರಾಂತಿ ವರ್ಷದ ಮೊದಲ ಹಬ್ಬವಾದ ಕಾರಣ ನಾಡಿನ ಎಲ್ಲೆಡೆ ರೈತರು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ಆದರೆ ಕೋಲಾರ ಅರಾಭಿಕೊತ್ತನೂರು ಗ್ರಾಮಸ್ಥರಲ್ಲಿ ಸಂಕ್ರಾಂತಿ ಎಂದರೇ ಭಯ, ಆತಂಕ ಎದುರಾಗುತ್ತದೆ. ಸಂಕ್ರಾಂತಿ ಹಬ್ಬ ಮಾಡಿದರೆ ಗ್ರಾಮಕ್ಕೆ ಕೇಡಾಗುತ್ತದೆ, ದನ-ಕರುಗಳು ಒಂದೊಂದಾಗಿ ಸಾಯುತ್ತವೆ ಎಂಬ ನಂಬಿಕೆ ಗ್ರಾಮಸ್ಥರಲ್ಲಿ ಮೂಡಿದೆ.

    ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಇತ್ತೀಚೆಗಂತೂ ಗ್ರಾಮದ ಹಲವರು ಉತ್ತಮ ಶಿಕ್ಷಣ ಪಡೆದು ಉದ್ಯೋಗಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಸಂಕ್ರಾಂತಿ ಹಬ್ಬವನ್ನು ಮಾಡಿದ್ರೆ ಊರಿಗೆ ಕೆಟ್ಟದಾಗುತ್ತದೆ ಎಂಬ ಹಿರಿಯ ನಂಬಿಕೆಯಂತೆ ಇಂದಿಗೂ ಈ ಗ್ರಾಮದಲ್ಲಿ ಹಬ್ಬ ಆಚರಣೆ ಮಾಡುವುದಿಲ್ಲ.

    ಪಕ್ಕದ ಗ್ರಾಮಗಳಲ್ಲಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರೂ ಅರಾಭಿಕೊತ್ತನೂರಲ್ಲಿ ಮಾತ್ರ ಅಂದು ಯಾವುದೇ ವಿಶೇಷ ಆಚರಣೆ ಮಾಡುವುದಿಲ್ಲ. ಕಳೆದ 300 ವರ್ಷಗಳ ಹಿಂದೆ ಅರಾಭಿಕೊತ್ತನೂರು ಗ್ರಾಮದಲ್ಲಿ ಕಾಯಿಲೆಯೊಂದು ಕಾಣಿಸಿಕೊಂಡು ಊರಲ್ಲಿದ್ದ ದನ-ಕರುಗಳು ಇದ್ದಕ್ಕಿಂದ್ದಂತೆ ಸಾವನ್ನಪ್ಪುತ್ತಿದ್ದವು. ಈ ವೇಳೆ ದಿಕ್ಕು ತೋಚದಂತಾದ ಊರಿನ ಹಿರಿಯರು ಅನಾಹುತವನ್ನು ತಪ್ಪಿಸುವಂತೆ ಊರಿನ ಬಸವಣ್ಣನಲ್ಲಿ ಮನವಿ ಮಾಡಿದ್ದರು. ಕಾಯಿಲೆ ನಿಯಂತ್ರಣಕ್ಕೆ ಬಂದು ಜಾನುವಾರುಗಳ ಸಾವು ನಿಂತರೆ ಸಂಕ್ರಾಂತಿ ಹಬ್ಬದಂದು ದನ-ಕರುಗಳಿಗೆ ಮಾಡುವ ಪೂಜೆಯನ್ನು ನಿಲ್ಲಿಸಿ ಬೇರೊಂದು ದಿನ ಬಸವಣ್ಣನಿಗೆ ಪೂಜೆ ಮಾಡುವುದಾಗಿ ಪ್ರಾರ್ಥನೆ ಮಾಡಿಕೊಂಡಿದ್ದರಂತೆ.

    ಹಿರಿಯರ ಪ್ರಾರ್ಥನೆ ಬಳಿಕ ರಾಸುಗಳ ಸಾವು ನಿಯಂತ್ರಣಕ್ಕೆ ಬಂದಿತ್ತು. ಅಂದಿನಿಂದಲೂ ಈ ಗ್ರಾಮದಲ್ಲಿ ಸಂಕ್ರಾಂತಿಯಂದು ಜಾನುವಾರುಗಳಿಗೆ ಯಾವುದೇ ಪೂಜೆ ಮಾಡದೆ, ಸಂಕ್ರಾಂತಿ ಬಳಿಕ ಗ್ರಾಮದಲ್ಲಿರುವ ಬಸವಣ್ಣನ ದೇವಸ್ಥಾನಕ್ಕೆ ರಾಸುಗಳನ್ನು ಅಲಂಕಾರ ಮಾಡಿಕೊಂಡು ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತಾರೆ. ಇಂದಿಗೂ ಇದೇ ಪದ್ದತಿಯನ್ನು ಗ್ರಾಮಸ್ಥರು ಪಾಲಿಸಿಕೊಂಡು ಬರುತ್ತಿದ್ದಾರೆ.

  • ತಮಟೆ ತಾಳಕ್ಕೆ ಸಚಿವ ಜಿಟಿಡಿಯಿಂದ ಬಿಂದಾಸ್ ಸ್ಟೆಪ್ಸ್

    ತಮಟೆ ತಾಳಕ್ಕೆ ಸಚಿವ ಜಿಟಿಡಿಯಿಂದ ಬಿಂದಾಸ್ ಸ್ಟೆಪ್ಸ್

    ಮೈಸೂರು: ಬಸವ ಜಯಂತಿ ಮೆರವಣಿಗೆಯಲ್ಲಿ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.

    ಇಂದು ಮೈಸೂರಿನಲ್ಲಿ ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಈ ವೇಳೆ ಅಲ್ಲಿ ಬಾರಿಸಿದ ತಮಟೆ ತಾಳಕ್ಕೆ ಜಿ. ಟಿ ದೇವೇಗೌಡರು ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಜಿಟಿಡಿ ಅವರಿಗೆ ಪಾಲಿಕೆ ಸದಸ್ಯ ಬಿ.ವಿ ಮಂಜುನಾಥ್ ಕೂಡ ಸಾಥ್ ನೀಡಿದರು.

    ಇಂದು ಮೈಸೂರಿನಲ್ಲಿ ಗಣ್ಯರು ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸುತ್ತೂರು ಶ್ರೀ, ಸಚಿವ ಜಿಟಿ ದೇವೇಗೌಡ, ಶಾಸಕ ಎಲ್. ನಾಗೇಂದ್ರ ಅವರು ಗನ್ ಹೌಸ್ ಬಳಿ ಇರುವ ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ಕಾರ್ಯಕ್ರಮ ಸುತ್ತೂರು ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿದ್ದು, ವಿವಿಧ ವೀರಶೈವ ಸಂಘ ಸಂಸ್ಥೆಗಳಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.