Tag: ಬಸವ ಜಯಮೃತ್ಯುಂಜಯ ಸ್ವಾಮೀಜಿ

  • ಬೆಳಗಾವಿ ಅಧಿವೇಶನಕ್ಕೆ ತಟ್ಟಲಿದೆಯಾ ಪಂಚಮಸಾಲಿ ಹೋರಾಟದ ಬಿಸಿ?

    ಬೆಳಗಾವಿ ಅಧಿವೇಶನಕ್ಕೆ ತಟ್ಟಲಿದೆಯಾ ಪಂಚಮಸಾಲಿ ಹೋರಾಟದ ಬಿಸಿ?

    ಬೆಳಗಾವಿ: ತಾಲೂಕಿನ ಸುವರ್ಣಸೌಧ (Suvarna Soudha) ಹೊರವಲಯದಲ್ಲಿ ಡಿಸೆಂಬರ್ 22 ರಂದು ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ (Panchamasali Reservation) ಆಗ್ರಹಿಸಿ ಅಂತಿಮ ಹಂತದ ಹೋರಾಟ ಹಿನ್ನೆಲೆ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ (Jayamruthyunjaya Swamiji) ಸ್ಥಳ ಪರಿಶೀಲನೆ ನಡೆಸಿದರು.

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಡಿಸೆಂಬರ್ 19 ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡುವಂತೆ ಮತ್ತೊಮ್ಮೆ ಆಗ್ರಹಿಸಿದ್ದಾರೆ. ಡಿಸೆಂಬರ್ 19 ರೊಳಗೆ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆದು ಮೀಸಲಾತಿ ಘೋಷಣೆ ಮಾಡಬೇಕು. ಒಂದು ವೇಳೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸದಿದ್ರೆ ಡಿಸೆಂಬರ್ 22 ರಂದು ವಿರಾಟ್ ಪಂಚಶಕ್ತಿ ಸಮಾವೇಶ ಮಾಡಲಾಗುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ. ಮೀಸಲಾತಿ ಘೋಷಿಸಿದ್ರೂ, ಘೋಷಿಸದಿದ್ದರೂ 25 ಲಕ್ಷ ಪಂಚಮಸಾಲಿ ಸಮುದಾಯದ ಜನರ ಸೇರಿಸಲು ಸಿದ್ಧತೆ ನಡೆಸಲಾಗಿದ್ದು, ಸುವರ್ಣಸೌಧ ಬಳಿ ನೂರು ಎಕರೆ ಸ್ಥಳದಲ್ಲಿ ಪಂಚಮಸಾಲಿ ಸಮಾವೇಶಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗಡಿ ವಿವಾದದ ನಡುವೆಯೂ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಭೇಟಿ

    ಮೀಸಲಾತಿ ನೀಡಿದರೆ ಡಿಸೆಂಬರ್ 22 ರಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸನ್ಮಾನ ಮಾಡಲಾಗುವುದು. ಇಲ್ಲವಾದಲ್ಲಿ ಡಿಸೆಂಬರ್ 22 ರಂದು ಅಂತಿಮ ಹಂತದ ಹೋರಾಟ ನಡೆಸುವುದಾಗಿ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಡಿಸೆಂಬರ್ 19ರ ಸಂಜೆ ಸವದತ್ತಿಯಲ್ಲಿ ಪಂಚಮಸಾಲಿ ಸಮಾವೇಶ ನಡೆಯಲಿದ್ದು, ಅಂದೇ ಸವದತ್ತಿಯಿಂದ ಪಾದಯಾತ್ರೆ ಮೂಲಕ ಬೆಳಗಾವಿಯ ಸುವರ್ಣಸೌಧಕ್ಕೆ ಬರಲು ನಿರ್ಧರಿಸಿರುವುದಾಗಿ ಬಸವ ಜಯಮೃತ್ಯುಂಜಯ ಸ್ಚಾಮೀಜಿ ಹೇಳಿದರು. ಇದನ್ನೂ ಓದಿ: 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ – ಶಿಕ್ಷಣ ಇಲಾಖೆ ಆದೇಶ

    ಡಿಸೆಂಬರ್ 19ರ ರಾತ್ರಿಯಿಂದ ಡಿಸೆಂಬರ್ 22ರ ಬೆಳಗ್ಗೆವರೆಗೆ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದ್ದು, ಈ ಮೂಲಕ ಸುವರ್ಣಸೌಧಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ಡಿಸೆಂಬರ್ 22ರಂದು 25 ಲಕ್ಷ ಜನರ ಸೇರಿಸಲು ತಯಾರಿ ನಡೆಸುತ್ತಿರುವುದಾಗಿ ಹೇಳಿದ ಅವರು, ಕಮಕಾರಟ್ಟಿ ಗ್ರಾಮದ ಬಳಿ 60 ಎಕರೆ ವಿಸ್ತೀರ್ಣದಲ್ಲಿರುವ ನಿರ್ಮಾಣ ಹಂತದ ರಾಘವೇಂದ್ರ ಬಡಾವಣೆಯಲ್ಲಿ ಸಮಾವೇಶಕ್ಕೆ ತಯಾರಿ ನಡೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ವಿರಾಟ್ ಪಂಚಶಕ್ತಿ ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ್, ಕಾರ್ಯಾಧ್ಯಕ್ಷರಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕೋಶಾಧ್ಯಕ್ಷರಾಗಿ ಈರಣ್ಣ ಕಡಾಡಿ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೇ ಸಮುದಾಯದ ಹಾಲಿ ಮತ್ತು ಮಾಜಿ ಶಾಸಕರಿಗೆ ವಿವಿಧ ಜವಾಬ್ದಾರಿ ಹಂಚಿಕೆಗಳನ್ನು ಈಗಾಗಲೇ ನೀಡಲಾಗಿದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಯತ್ನಾಳ್, ಬೆಲ್ಲದ್‍ಗೆ ಅಭಿನಂದನೆ ಸಲ್ಲಿಸಿದ ಜಯಮೃತ್ಯುಂಜಯ ಸ್ವಾಮೀಜಿ

    ಯತ್ನಾಳ್, ಬೆಲ್ಲದ್‍ಗೆ ಅಭಿನಂದನೆ ಸಲ್ಲಿಸಿದ ಜಯಮೃತ್ಯುಂಜಯ ಸ್ವಾಮೀಜಿ

    ಬೆಳಗಾವಿ: ಇಂದು 29ನೇ ದಿವಸಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ಕಾಲಿಟ್ಟಿದೆ ಎಂದು ಬೆಳಗಾವಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

    ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಧ್ವನಿ ಎತ್ತಿದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರ ಶಾಸಕರಿಗೆ ಈ ಮೂಲಕ ಅಭಿನಂದನೆಯನ್ನು ತಿಳಿಸಿದರು.

    ಮೀಸಲಾತಿ ನೀಡುವ ಬಗ್ಗೆ ಮಾರ್ಚ್ 15ರಂದು ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರ ಮಾತು ಕೊಟ್ಟಿತ್ತು. ಸರ್ಕಾರ ಕೊಟ್ಟ ಮಾತು ಸೆಪ್ಟೆಂಬರ್ 15ಕ್ಕೆ ಮುಕ್ತಾಯಗೊಂಡಿದೆ. ಮಲೆಮಹದೇಶ್ವರ ಬೆಟ್ಟದಿಂದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ಪ್ರಾರಂಭವಾಗಿದ್ದು, ಇಂದು 29ನೇ ದಿವಸಕ್ಕೆ ನಮ್ಮ ಬೃಹತ್ ಅಭಿಯಾನ ಕಾಲಿಟ್ಟಿದೆ. ಕರ್ನಾಟಕದ ಸೆ.7 ರಷ್ಟು ಭಾಗ ಪೂರೈಸಿ ಬೆಳಗಾವಿಗೆ ಬಂದಿದ್ದೇವೆ ಎಂದರು.  ಇದನ್ನೂ ಓದಿ:  ಕೊರೊನಾ ಇಳಿಮುಖ – ಉಡುಪಿ ಕೃಷ್ಣಮಠದಲ್ಲಿ ಸಾರ್ವಜನಿಕ ಅನ್ನಪ್ರಸಾದ ಸೇವೆ ಆರಂಭ

    ಅಧಿವೇಶನದಲ್ಲಿ ಕೊಟ್ಟ ಮಾತು ನೆನಪಿಸಲು ಭಾರತದ ಬಾಹುಬಲಿ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರಾದ ಅರವಿಂದ್ ಬೆಲ್ಲದ, ಸಿದ್ದು ಸವದಿ, ಶಿವಾನಂದ ಪಾಟೀಲ್ ಅವರು ಸಹ ಇದಕ್ಕೆ ಸಾಥ್ ಕೊಟ್ಟಿದ್ದಾರೆ. ಯತ್ನಾಳ್ ಅವರ ಜೊತೆ ದನಿಗೂಡಿಸಿ ಧರಣಿ ಮಾಡ್ತಿದ್ದಾರೆ. ಇದನ್ನು ನೋಡಿದ್ರೆ ಪಂಚಮಸಾಲಿ ಮೀಸಲಾತಿ ಕೆಲವೇ ದಿನಗಳಲ್ಲಿ ನ್ಯಾಯ ಪಡೆದುಕೊಳ್ಳುವ ನಿರೀಕ್ಷೆ ಹೆಚ್ಚಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನಾವು ಸಹ ಅಧಿವೇಶನ ಮುಕ್ತಾಯದೊಳಗೆ ಯಾರಾದರೂ ಈ ಕುರಿತು ಧ್ವನಿ ಎತ್ತುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ವಿ. ಆಡಳಿತಾರೂಢ ಪಕ್ಷದ ಶಾಸಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಧ್ವನಿ ಎತ್ತಿದ್ದಾರೆ. ನಮ್ಮ ಜೊತೆ ಮೀಸಲಾತಿ ಬಯಸುವ ಎಲ್ಲ ಸಮುದಾಯದ ಪರ ಎಲ್ಲರೂ ಸಹ ಧ್ವನಿ ಎತ್ತಿದ್ದಾರೆ. ಪಂಚಮಸಾಲಿಗಳು ಎಲ್ಲರ ಜೊತೆ ಕೂಡಿ ಬಾಳೋರು ಎಂಬುದನ್ನು ಅಧಿವೇಶನದಲ್ಲಿ ತೋರಿಸುವ ಕೆಲಸ ಯತ್ನಾಳ್ ಗೌಡರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ 

    ಧ್ವನಿ ಎತ್ತಿದ ನಾಲ್ಕು ನಾಯಕರಿಗೆ ಪಂಚಮಸಾಲಿ ಸಮುದಾಯದ ಪರ ಅನಂತ ಅನಂತ ಧನ್ಯವಾದ. ಕೂಡಲೇ ಯತ್ನಾಳ್, ಬೆಲ್ಲದ್‍ರವರ ಹಕ್ಕೊತ್ತಾಯ ಮಂಡನೆಗೆ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ಕೊಡಬೇಕು. ನಾಳೆ ಬೆಳಗಾವಿಗೆ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಬರ್ತಿದ್ದಾರೆ. ನಮ್ಮ ಸಮಾಜದ ಎಲ್ಲ ನಾಯಕರು ಬೆಳಗಾವಿಗೆ ಬರ್ತಿದ್ದಾರೆ. ನಾಳೆ ಜಿಲ್ಲಾ ಮಟ್ಟದ ಪ್ರತಿಜ್ಞಾ ಪಂಚಾಯತ್ ಅಭಿಯಾನ ಗಾಂಧಿ ಭವನದಲ್ಲಿ ನಡೆಯುತ್ತಿದೆ. ಇದಾದ ಬಳಿಕ ರಾಜ್ಯ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ. ಮುಂದಿನ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ:  ಮೃತನ ಕುಟುಂಬಕ್ಕೆ ಬಹುಮಾನದ ಹಣ ನೀಡಿದ ಮೈಸೂರು ಪೊಲೀಸರು

    ಬೊಮ್ಮಾಯಿ ಅವರು ಸಹ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಸಚಿವರಾದ ಸಿ.ಸಿ.ಪಾಟೀಲ್ ಹಾಗೂ ಯತ್ನಾಳ್ ಜೊತೆ ಸಿಎಂ ಚರ್ಚಿಸಿದ್ದಾರೆ. ಅಕ್ಟೋಬರ್ ಒಂದನೇ ತಾರೀಖಿನೊಳಗೆ ನಾವು ಗಡುವು ಕೊಟ್ಟಿದ್ದೇವೆ. ಒಂದನೇ ತಾರೀಖಿನೊಳಗೆ ನಮಗೆ ಸರ್ಕಾರ ನ್ಯಾಯ ದೊರಕಿಸಿಕೊಡುತ್ತೆಂಬ ವಿಶ್ವಾಸ ಇದೆ. ನಮ್ಮ ಅಭಿಯಾನ ಮುಕ್ತಾಯ ಆಗೋದ್ರೊಳಗಾಗಿ ನ್ಯಾಯ ಸಿಗದಿದ್ರೆ ಮತ್ತೆ ಧರಣಿ ಸತ್ಯಾಗ್ರಹ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದರು.

  • ಉತ್ತರ ಕರ್ನಾಟಕ ಅಭಿವೃದ್ಧಿ: ಸಿಎಂ ಎಚ್‍ಡಿಕೆಗೆ ದಿಂಗಾಲೇಶ್ವರ ಶ್ರೀ ಎಚ್ಚರಿಕೆ

    ಉತ್ತರ ಕರ್ನಾಟಕ ಅಭಿವೃದ್ಧಿ: ಸಿಎಂ ಎಚ್‍ಡಿಕೆಗೆ ದಿಂಗಾಲೇಶ್ವರ ಶ್ರೀ ಎಚ್ಚರಿಕೆ

    ದಾವಣಗೆರೆ: ಉತ್ತರ ಕರ್ನಾಟಕದ ಅಭಿವೃದ್ಧಿ ಮಾಡದಿದ್ದರೆ ಎಲ್ಲಾ ಮಠಾಧೀಶರು ಪ್ರತ್ಯೇಕ ರಾಜ್ಯದ ಪರ ನಿಲ್ಲಬೇಕಾಗುತ್ತದೆ ಎಂದು ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಎಚ್ಚರಿಕೆ ನೀಡಿದ್ದಾರೆ.

    ನಗರದ ತೊಗಟಿವೀರಪ್ಪ ಕಲ್ಯಾಣ ಮಂಟಪದಲ್ಲಿ ಮಾತನಾಡಿದ ಅವರು, ಸಿ.ಎಂ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ಆಶ್ವಾಸನೆ ನೀಡಿ, ಸರ್ಕಾರ ರಚನೆಯಾದ ಬಳಿಕ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ. ಉತ್ತರ ಕರ್ನಾಟಕವನ್ನು ಮೈಸೂರು, ತುಮಕೂರು, ಬೆಂಗಳೂರು, ಹಾಸನದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿದರು.

    ಉತ್ತರ ಕರ್ನಾಟಕದಲ್ಲಿ ಕೇವಲ ಇಲ್ಲ, ಇಲ್ಲ ಎನ್ನುವ ಧ್ವನಿ ಕೇಳಿಬರುತ್ತಿದೆ. ಕೇವಲ ದಕ್ಷಿಣ ಕರ್ನಾಟಕದ ಭಾಗಗಳು ಮಾತ್ರ ಅಭಿವೃದ್ಧಿಯಾಗಿವೆ. ಬೆಂಗಳೂರಿನಿಂದ 50 ಕಿ.ಮೀ. ದೂರವಿರುವ ಹಳ್ಳಿಗಳಿಗೂ ಮೂಲಸೌಕರ್ಯ ನೀಡಲಾಗಿದೆ. ಆದರೆ ಉತ್ತರ ಕರ್ನಾಟಕ ನಗರ ಪ್ರದೇಶದಲ್ಲಿ ಇಂತಹ ಮೂಲಸೌಕರ್ಯಗಳಿಲ್ಲ. ದಕ್ಷಿಣ ಕರ್ನಾಟಕದಲ್ಲಿ ಬಳಕೆ ಮಾಡಿ ಬಿಟ್ಟ ಬಸ್ಸುಗಳನ್ನು ನಮ್ಮ ಹಳ್ಳಿಗಳಿಗೆ ಬಿಡಲಾಗುತ್ತದೆ. ಇದು ಯಾವ ನ್ಯಾಯ? ತಾರತಮ್ಯ ಹೀಗೆ ಮುಂದುವರಿದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯವಾಗುತ್ತದೆ ಎಂದು ಕಿಡಿಕಾರಿದರು.

    ಜುಲೈ 31ಕ್ಕೆ ಉ.ಕ ಶ್ರೀಗಳ ಸಭೆ:
    ಇದೇ ವೇಳೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಜುಲೈ 31ರಂದು ಉತ್ತರ ಕರ್ನಾಟಕ ಸ್ವಾಮೀಜಿಗಳ ಸಭೆ ಆಯೋಜಿಸಲಾಗಿದೆ. ನಮ್ಮ ಪ್ರತಿಭಟನೆ ವ್ಯಾಪಕವಾಗುವ ಮುನ್ನವೇ ಸಂಬಂಧಪಟ್ಟ ರಾಜಕೀಯ ನಾಯಕರು ಹಾಗೂ ಅಧಿಕಾರಿಗಳು ನಿಗಾವಹಿಸಬೇಕು. ಬೆಳಗಾವಿಯನ್ನು 2ನೇ ರಾಜಧಾನಿಯಾಗಿ ಮಾಡಬೇಕು. ಜೊತೆಗೆ 20 ಮುಖ್ಯ ಇಲಾಖೆಗಳು ಉತ್ತರ ಕರ್ನಾಟಕದಲ್ಲಿ ವಿಕೇಂದ್ರೀಕೃತವಾಗಬೇಕು. ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಿದರೆ ಪ್ರತ್ಯೇಕ ರಾಜ್ಯದ ಕೂಗು ಶಮನವಾಗುತ್ತದೆ. ಇಲ್ಲದಿದ್ದರೇ ಪ್ರತಿಭಟನೆ ಬಿಸಿ ಸಿಎಂ ಕುಮಾರಸ್ವಾಮಿ ಅವರಿಗೆ ತಟ್ಟಲಿದೆ ಎಂದು ಖಾರವಾಗಿಯೇ ನುಡಿದರು.