Tag: ಬಸಿಲ್ ರಾಜಪಕ್ಸೆ

  • ಅನುಮತಿಯಿಲ್ಲದೇ ದೇಶ ಬಿಟ್ಟು ಹೋಗಬೇಡಿ: ರಾಜಪಕ್ಸೆ ಕುಟುಂಬಕ್ಕೆ ಸುಪ್ರೀಂ ಕೋರ್ಟ್‌ ಆದೇಶ

    ಅನುಮತಿಯಿಲ್ಲದೇ ದೇಶ ಬಿಟ್ಟು ಹೋಗಬೇಡಿ: ರಾಜಪಕ್ಸೆ ಕುಟುಂಬಕ್ಕೆ ಸುಪ್ರೀಂ ಕೋರ್ಟ್‌ ಆದೇಶ

    ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜಪಕ್ಸೆ ಆಡಳಿತದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಅಂತೆಯೇ ಅವರ ಸಹೋದರರೂ ಪಲಾಯನಕ್ಕೆ ಮುಂದಾಗಿದ್ದಾರೆ. ಆದರೆ ಅದಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

    ಗೊಟಬಯ ರಾಜಪಕ್ಸೆ ಸಹೋದರರಾದ ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಹಾಗೂ ಮಾಜಿ ಸಚಿವ ಬಸಿಲ್‌ ರಾಜಪಕ್ಸೆ ದೇಶ ತೊರೆಯುವುದನ್ನು ಕೋರ್ಟ್‌ ತಡೆದಿದೆ. ಇದನ್ನೂ ಓದಿ: ಲಂಕಾ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅಧಿಕಾರಿ ಸ್ವೀಕಾರ

    ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಮಾಜಿ ಸಚಿವ ಬಸಿಲ್ ರಾಜಪಕ್ಸೆ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ಜುಲೈ 28 ರವರೆಗೆ ದೇಶವನ್ನು ತೊರೆಯದಂತೆ ಶ್ರೀಲಂಕಾದ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಹೊರಡಿಸಿದೆ.

    ದ್ವೀಪ ರಾಷ್ಟ್ರದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ರಾಜಪಕ್ಸೆ ಕುಟುಂಬ ಆಡಳಿತದಿಂದ ದೇಶ ದುಸ್ಥಿತಿಗೆ ತಲುಪಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. ಸಾವಿರಾರು ಮಂದಿ ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು. ಇದರಿಂದ ಭಯಭೀತರಾದ ಗೊಟಬಯ ರಾಜಪಕ್ಸೆ ವಿದೇಶಕ್ಕೆ ಪಲಾಯನಗೈದರು. ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದನ್ನೂ ಓದಿ: ಒಕ್ಕೂಟದ ಪತನದ ನಂತರ ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ

    ದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿರುವ ರನಿಲ್‌ ವಿಕ್ರಮಸಿಂಘೆ ಅವರು ಪ್ರತಿಭಟನೆ ತಿಳಿಗೊಳಿಸಲು ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆಯ ಸಹೋದರ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆಯ ಸಹೋದರ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಕೊಲೊಂಬೊ: ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಸಹೋದರ ಹಾಗೂ ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಗುರುವಾರ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ತೀವ್ರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಸರ್ಕಾರದಿಂದ ಹಿಂದೆ ಸರಿದ ಪ್ರಭಾವಿ ಕುಟುಂಬದ ಎರಡನೆಯವರಾಗಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ನಾನು ಯಾವುದೇ ಸರ್ಕಾರಿ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ. ಆದರೆ ನಾನು ರಾಜಕೀಯದಿಂದ ಹಿಂದೆಯೂ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ತಪ್ಪದ ಇಡಿ ಸಂಕಷ್ಟ – ಸತೇಂದ್ರ ಜೈನ್‍ಗೆ ಜೂನ್ 13ವರೆಗೂ ಕಸ್ಟಡಿ ವಿಸ್ತರಣೆ

    ಶ್ರೀಲಂಕಾದಾದ್ಯಂತ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಅಲ್ಲಿನ ಜನರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರ ಹಿರಿಯ ಸಹೋದರ ಮಹಿಂದಾ ರಾಜಪಕ್ಸೆ ಈ ಹಿಂದೆ ರಾಜೀನಾಮೆ ನೀಡಿದ್ದರು. ಆದರೆ ಸಂಸತ್ ಸದಸ್ಯರಾಗಿಯೇ ಮಹಿಂದಾ ರಾಜಪಕ್ಸೆ ಉಳಿದುಕೊಂಡಿದ್ದಾರೆ. ಇದನ್ನೂ ಓದಿ: ಏಮ್ಸ್ ಆಸ್ಪತ್ರೆಯ ಏಳನೇ ಮಹಡಿಯಿಂದ ಬಿದ್ದು ವೈದ್ಯ ಸಾವು