Tag: ಬಸ್ತಾರ್

  • ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ – ಓರ್ವ ಸಿಬ್ಬಂದಿ ಸಾವು

    ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ – ಓರ್ವ ಸಿಬ್ಬಂದಿ ಸಾವು

    ರಾಯ್ಪುರ: ಭದ್ರತಾ ಪಡೆ (Security Personnel) ಹಾಗೂ ಮಾವೋವಾದಿಗಳ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ‌ (Chhattisgarh) ಬಸ್ತಾರ್ ಪ್ರದೇಶದಲ್ಲಿ ನಡೆದಿದೆ.

    ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮಾದ್‌ನ ಕಾಡಿನಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಮೀಸಲು ಗಾರ್ಡ್‌ನ (ಡಿಆರ್‌ಜಿ) ಹೆಡ್ ಕಾನ್ಸ್‌ಟೇಬಲ್ ಸನ್ನು ಕರಮ್ ತೀವ್ರಗಾಯಗೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಲಾಹಬ್ಬ 22ನೇ ಚಿತ್ರಸಂತೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

    ಗುಂಡಿನ ದಾಳಿ ಬಳಿಕ ನಾಲ್ವರು ಮಾವೋವಾದಿಗಳ ಮೃತದೇಹ ಮತ್ತು ಎಕೆ -47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು

  • Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ರಾಯಪುರ: ಛತ್ತೀಸ್‌ಗಢನ (Chattisgarh) ಅಬುಜ್ಮಾರ್‌ನಲ್ಲಿ (Abujhmarh) ಅ.3ರಂದು ನಡೆದ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳು ಹತರಾಗಿದ್ದು, ಬಸ್ತಾರ್‌ನಲ್ಲಿ ನಡೆದ ಅತೀ ದೊಡ್ಡ ಎನ್‌ಕೌಂಟರ್ ಇದಾಗಿದೆ.

    ಶುಕ್ರವಾರ ದಂತೇವಾಡ ಪೊಲೀಸರು (Dantewada Police) 9 ಗಂಟೆಗಳ ಕಾಲ ನಡೆಸಿದ ಗುಂಡಿನ ದಾಳಿಯಲ್ಲಿ ಒಟ್ಟು 38 ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ. ಒಟ್ಟು 2.6 ಕೋಟಿ ರೂ.ಗೂ ಅಧಿಕ ಬಹುಮಾನವನ್ನು ಪಡೆದುಕೊಂಡಿದ್ದಾರೆ.

    ಎನ್‌ಕೌಂಟರ್ ನಡೆದ ಒಂದು ದಿನದ ಬಳಿಕ 13 ಮಹಿಳೆಯರು ಸೇರಿದಂತೆ 31 ಮಾವೋವಾದಿಗಳ ಶವವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅ.13 ರಂದು ಮಾವೋವಾದಿಗಳು ತಮ್ಮ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಹೇಳಿಕೆಯ ಪ್ರಕಾರ ಒಟ್ಟು 35 ಮಾವೋವಾದಿಗಳು ಸಾವನ್ನಪ್ಪಿದ್ದು, ಅವರ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ. ಬಳಿಕ ತಮ್ಮ ಬಳಿಯಿದ್ದ ಮಾವೋವಾದಿಗಳ ಪಟ್ಟಿಯನ್ನು ಹಾಗೂ ಬಿಡುಗಡೆಗೊಳಿಸಿದ ಪಟ್ಟಿಯನ್ನು ತಾಳೆ ಮಾಡಿದಾಗ 7 ಹೆಚ್ಚುವರಿ ಹೆಸರಿರುವುದು ಗಮನಕ್ಕೆ ಬಂದಿದೆ.

    ದಂತೇವಾಡ ಎಸ್‌ಪಿ ಗೌರವ್ ರೈ ಮಾಹಿತಿ ಪ್ರಕಾರ, ಎನ್‌ಕೌಂಟರ್ ಸ್ಥಳದಿಂದ ಭದ್ರತಾ ಪಡೆಗಳು ಶವಗಳನ್ನು ಸಾಗಿಸದೇ ಇರುವ ಸಂದರ್ಭದಲ್ಲಿ ಕೆಲವು ನಕ್ಸಲರು ತಮ್ಮ ಕಾರ್ಯಕರ್ತರಿಂದ ಆ ಶವಗಳನ್ನು ಸಾಗಿಸುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಎನ್‌ಕೌಂಟರ್ ವೇಳೆ ಹಲವಾರು ನಕ್ಸಲರು (Naxals) ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವರು ಅಲ್ಲಿಂದ ತಪ್ಪಿಸಿಕೊಳ್ಳುವಾಗ ಕೆಲವರನ್ನು ಎಳೆದುಕೊಂಡು ಹೋಗಿರಬಹುದು. ಆದರೆ ಅವರಿಗೆ ವೈದ್ಯಕೀಯ ಆರೈಕೆಯಿಲ್ಲದೆ ಬದುಕುಳಿಯುವುದು ಕಷ್ಟ ಎಂದು ತಿಳಿಸಿದರು.

    ಬಸ್ತಾರ್ ರೇಂಜ್ ಐಜಿ ಪಿ ಸುಂದರರಾಜ್ ಮಾತನಾಡಿ, ಹತ್ಯೆಯಾದವರಲ್ಲಿ ದಂಡಕಾರಣ್ಯ ವಿಶೇಷ ವಲಯ ಸಮಿತಿ ಸದಸ್ಯ, ವಿಭಾಗೀಯ ಸಮಿತಿ ಸದಸ್ಯ, ಪಿಎಲ್‌ಜಿಎ ಕಂಪನಿಯ 18 ಜನ, ಡಿಕೆಎಸ್‌ಜೆಡ್‌ಸಿ 2 ಗಾರ್ಡ್‌ಗಳು, 9 ಜನ ಕಮಿಟಿ ಸದಸ್ಯರು ಹಾಗೂ ಪ್ರದೇಶ ಕಮಿಟಿ ಸದಸ್ಯರು ಇದ್ದರು ಎಂದು ತಿಳಿಸಿದರು.

    ನಾರಾಯಣಪುರ ಮತ್ತು ದಾಂತೇವಾಡದಿಂದ ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆಯ ಸುಮಾರು 1,500 ಯೋಧರು 72 ಗಂಟೆಗಳ ಕಾಲ ಬೃಹತ್ ಕಾರ್ಯಾಚರಣೆಯನ್ನು ನಡೆಸಿದ್ದು, 303 ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ.

  • ಇಬ್ಬರು ಯುವತಿಯರನ್ನ ಪ್ರೀತಿಸಿ ಒಂದೇ ಮಂಟಪದಲ್ಲಿ ಮದವೆಯಾದ ಪುಣ್ಯಾತ್ಮ..!

    ಇಬ್ಬರು ಯುವತಿಯರನ್ನ ಪ್ರೀತಿಸಿ ಒಂದೇ ಮಂಟಪದಲ್ಲಿ ಮದವೆಯಾದ ಪುಣ್ಯಾತ್ಮ..!

    – ಒಂದೇ ಮನೆಯಲ್ಲಿದ್ದಾರೆ ಮೂವರು

    ರಾಯ್ಪುರ: ಪ್ರೀತಿ ಮಾಡಿ ಮನೆಯವರನ್ನು ಒಪ್ಪಿಸಿ ಮದುವೆಯಾಗಲು ಕಷ್ಟಪಟ್ಟರೂ ಎಷ್ಟೋ ಜನರಿಗೆ ಆ ಪ್ರೀತಿ ಉಳಿಸಿಕೊಳ್ಳಲು ಆಗುವುದಿಲ್ಲ. ಆದರೆ ಇಲ್ಲೊಬ್ಬ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವಂತೆ ಒಂದೇ ಮಂಟಪದಲ್ಲಿ ಪ್ರೀತಿ ಮಾಡಿದ ಇಬ್ಬರು ಯುವತಿಯರನ್ನು ಅವರ ಕುಟುಂಬಸ್ಥರ ಮುಂದೆಯೇ ಮದುವೆಯಾಗಿ ಸುದ್ದಿಯಾಗಿದ್ದಾನೆ.

    ಹೌದು. ವ್ಯಕ್ತಿಯೊಬ್ಬ ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಯುವತಿಯರನ್ನು ಮದುವೆಯಾದ ಅಚ್ಚರಿಯ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಜನವರಿ 5 ರಂದು ನಡೆದ ಈ ಮದುವೆಗೆ ಸುಮಾರು 600 ಜನರು ಸಾಕ್ಷಿಯಾಗಿದ್ದಾರೆ.

    ಬಸ್ತಾರ್ ಜಿಲ್ಲೆಯ ರೈತ ಮತ್ತು ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದು ಮೌರ್ಯ(21), ಬುಡಕಟ್ಟು ಯುವತಿ ಸುಂದರಿ ಕಶ್ಯಪ್ ಅವರನ್ನು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಫೋನ್ ಕರೆಯಲ್ಲಿ ಮಾತನಾಡುತ್ತಾ ಇವರ ಮಧ್ಯೆ ಪ್ರೀತಿ ಚಿಗುರಿ, ಈ ಜೋಡಿ ಮದುವೆಯಾಗಲು ನಿರ್ಧರಿಸಿದರು. ಆದರೆ ವಿಧಿ ಚಂದು ಸಂಬಂಧಿಕರ ಮದುವೆಯಲ್ಲಿ ಭೇಟಿಯಾಗಿದ್ದ ಹಸೀನಾಳನ್ನು ಮತ್ತೆ ಪ್ರೀತಿಸುವಂತೆ ಮಾಡಿತು.

    ಚಂದು ಈಗಾಗಲೇ ಒಬ್ಬರನ್ನು ಪ್ರೀತಿಸುತ್ತಿದ್ದಾರೆ ಎಂದು ತಿಳಿದ ಬಳಿಕ ಕೂಡ ಅದನ್ನು ಒಪ್ಪಿಕೊಂಡ ಹಸೀನಾ ತನ್ನೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿರುವಂತೆ ಚಂದುವನ್ನು ಒತ್ತಾಯಿಸಿದಳು. ಹಸೀನಾ ಮತ್ತು ಸುಂದರಿ ಇಬ್ಬರೂ ಒಬ್ಬರಿಗೊಬ್ಬರು ಪರಸ್ಪರ ತಿಳಿದುಕೊಂಡ ಬಳಿಕ ನನ್ನೊಂದಿಗೆ ಸಂಬಂಧ ಹೊಂದಲು ಒಪ್ಪಿಕೊಂಡರು. ಹೀಗೆ ಮೂವರು ದೂರವಾಣಿ ಕರೆಯಲ್ಲಿಯೇ ಸಂಪರ್ಕ ಹೊಂದಿದ್ದೆವು. ಆದರೆ ಒಂದು ದಿನ ಹಸೀನಾ ನನ್ನೊಂದಿಗೆ ವಾಸಿಸಲು ನನ್ನ ಮನೆಗೆ ಬಂದಳು. ಇದನ್ನು ತಿಳಿದ ಸುಂದರಿ ಕೂಡ ನನ್ನ ಬಳಿ ಬಂದಳು. ಅಂದಿನಿಂದ ನಾವು ಒಂದೇ ಮನೆಯಲ್ಲಿ ಕುಟುಂಬದಂತೆ ವಾಸಿಸಲು ಆರಂಭಿಸಿದ್ದೇವೆ.

    ಇಬ್ಬರು ಮಹಿಳೆಯೊಂದಿಗೆ ಸಂಬಂಧ ಹೊಂದಿ ಒಂದೇ ಮನೆಯಲ್ಲಿ ವಾಸಿಸುವುದರ ಬಗ್ಗೆ ಗ್ರಾಮಸ್ಥರು ಪ್ರಶ್ನೆ ಮಾಡಲು ಆರಂಭಿಸಿದರು. ಹಾಗಾಗಿ ಇಬ್ಬರನ್ನು ಮದುವೆಯಾಗಲು ನಿರ್ಧರಿಸಿದೆ. ಇಬ್ಬರೂ ಮಹಿಳೆಯರೂ ನನ್ನನ್ನು ಪ್ರೀತಿಸುತ್ತಾರೆ. ಇಬ್ಬರಿಗೂ ನಾನು ದ್ರೋಹ ಮಾಡಲು ಆಗುವುದಿಲ್ಲ. ಅವರಿಬ್ಬರನ್ನು ಮದುವೆಯಾಗಿ ಶಾಶ್ವತವಾಗಿ ಇಬ್ಬರೊಟ್ಟಿಗೆ ವಾಸಿಸಲು ಒಪ್ಪಿರುವುದಾಗಿ ತಿಳಿಸಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಸೀನಾ ಅವರ ಕುಟುಂಬ ಸದಸ್ಯರು ಬಂದಾಗ, ಸುಂದರಿ ಕುಟುಂಬದ ಸದಸ್ಯರು ಸಮಾರಂಭದಿಂದ ಹಿಂದಿರುಗಿದರು. ಒಟ್ಟಾರೆಯಾಗಿ ನಾವು ಮೂವರು ಕೂಡ ರೈತರಾಗಿ ಕೆಲಸ ಮಾಡುವುದರ ಮೂಲಕ ಜೀವನವನ್ನು ಸಂತೋಷದಿಂದ ನಡೆಸುತ್ತೇವೆ ಎಂದು ಚಂದು ಹೇಳಿದ್ದಾರೆ.