Tag: ಬಸ್ ಪಲ್ಟಿ

  • ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ತುಮಕೂರು (Tumkur) ಜಿಲ್ಲೆಯ ಶಿರಾದ (Sira) ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ

    ಮಗು ಸೇರಿ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಬಸ್ಸಿನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ – ಗೋವಿಂದ ಕಾರಜೋಳ

  • ಬಸ್‌ ಪಲ್ಟಿಯಾಗಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    ಬಸ್‌ ಪಲ್ಟಿಯಾಗಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    ಚಂಡೀಗಢ: ಹರಿಯಾಣದ ಪಂಚಕುಲದಲ್ಲಿ (Panchakula Haryana) ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ.

    ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್‌ವೇಸ್ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಪಿಂಜೋರ್ ಆಸ್ಪತ್ರೆಗೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ಸದ್ಯ ಅಪಘಾತಕ್ಕೆ ಬಸ್ ಚಾಲಕನ ಅತಿ ವೇಗವೇ ಕಾರಣ ಎನ್ನಲಾಗಿದೆ. ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಅಂದರೆ ಓವರ್‌ಲೋಡ್ ಮತ್ತು ರಸ್ತೆಯ ಕಳಪೆ ಸ್ಥಿತಿ ಕೂಡ ಅಪಘಾತಕ್ಕೆ ಹೆಚ್ಚುವರಿ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಘಟನೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.

  • ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿ – 15 ಕ್ಕೂ ಅಧಿಕ ಜನರಿಗೆ ಗಾಯ

    ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿ – 15 ಕ್ಕೂ ಅಧಿಕ ಜನರಿಗೆ ಗಾಯ

    ವಿಜಯಪುರ: ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿಯಾದ (Bus Overturn) ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ನಲ್ಲಿ ನಡೆದಿದೆ.

    ಬಸ್‌ನ ಎಕ್ಸಲ್ ಕಟ್ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 40 ಕ್ಕೂ ಅಧಿಕ ಪ್ರಯಾಣಿಕರಿದ್ದರು. ಅಪಘಾತದ ಹಿನ್ನೆಲೆ 15 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.

    ಸಿಂದಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರ ತರಬೇತಿಗೆ ಸಿಬ್ಬಂದಿಯನ್ನು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಸಿಂದಗಿಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಆಡಿ ಕಾರು, ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

    ಘಟನೆಯ ವಿಷಯ ತಿಳಿದು ಮುದ್ದೇಬಿಹಾಳ ಚುನಾವಣಾಧಿಕಾರಿ ಚಂದ್ರಕಾಂತ್ ಪವಾರ್ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಧಾರಾಕಾರ ಸುರಿದ ಮಳೆಗೆ ಮನೆ ಕುಸಿತ – 20 ದಿನದ ಹಸುಗೂಸು, ವೃದ್ಧೆ ಸಾವು

  • ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಂಭೀರ ಗಾಯ

    ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಂಭೀರ ಗಾಯ

    ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ (Overturn) ಓರ್ವ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯ ಸುರಪುರ (Surapura) ತಾಲೂಕಿನ ಕವಡಿಮಟ್ಟಿ ಗ್ರಾಮದ ಬಳಿ ಭಾನುವಾರ ಮುಂಜಾನೆ ನಡೆದಿದೆ.

    ಖಾಸಗಿ ಬಸ್‌ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದು, ಬಸ್ ಬೆಂಗಳೂರಿನಿಂದ (Bengaluru) ಸುರಪುರ ಮಾರ್ಗವಾಗಿ ಹುಮ್ನಾಬಾದ್(Humnabad) ಕಡೆ ಚಲಿಸುತ್ತಿತ್ತು. ಬಸ್ ಓವರ್ ಸ್ಪೀಡ್ (Over Speed) ಇದ್ದ ಕಾರಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕವಡಿಮಟ್ಟಿ ಬಳಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಸುದ್ದಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ. ಬಸ್ ಪಲ್ಟಿಯ ರಭಸಕ್ಕೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಇದನ್ನು ಓದಿ: ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ 

    ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪಲ್ಟಿಯಾದ ಬಸ್ ತೆರವುಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯರ ನೆರವಿನೊಂದಿಗೆ ಸುರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಓದಿ: ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

  • ಕಂದಕಕ್ಕೆ ಉರುಳಿದ ಬಸ್ – 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

    ಕಂದಕಕ್ಕೆ ಉರುಳಿದ ಬಸ್ – 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

    ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯ ಕಾವಾಡಿಯಲ್ಲಿ ನಡೆದಿದೆ.

    ಹಾಸನ ಡಿಪೋಗೆ ಸೇರಿದ ಬಸ್ ಕೇರಳ ರಾಜ್ಯದ ಎರ್ನಾಕುಲಂ ನಿಂದ ಕೊಡಗಿನ ವಿರಾಜಪೇಟೆ ಮೂಲಕ ಹಾಸನಕ್ಕೆ ತೆರಳುತ್ತಿತ್ತು. ಮಂಗಳವಾರ ಮುಂಜಾನೆ 4:30ರ ವೇಳೆಗೆ ಬಸ್ ಕಂದಕಕ್ಕೆ ಉರುಳಿದೆ (Overturn). ಚಾಲಕ ಸೇರಿದಂತೆ 40 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ರಜೆ ಮುಗಿಸಿ ಸೇವೆಗೆ ಮರಳಿದ್ದ ರಾಯಚೂರಿನ ಯೋಧ ಸಾವು

    ದಟ್ಟ ಮಂಜು ಕವಿದಿದ್ದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಬಸ್ ಅನ್ನು ಮೇಲೆತ್ತಿ, ಹಾಸನ ಡಿಪೋಗೆ ರವಾನೆ ಮಾಡಲಾಗಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಪೇದೆಗೆ ಠಾಣೆಯಲ್ಲೇ ಸೀಮಂತ – ಮಂಡ್ಯ ಪೊಲೀಸರಿಗೆ ನೆಟ್ಟಿಗರಿಂದ ಮೆಚ್ಚುಗೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

    ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – 32 ಮಂದಿಗೆ ಗಾಯ

    ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಪಲ್ಟಿ ಹೊಡೆದು (Bus Overturn) ಬಸ್‌ನಲ್ಲಿದ್ದ 32 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ (ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

    ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿದ್ದು, ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. ಇದನ್ನೂ ಓದಿ: ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆ

    ಬಸ್‌ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರಿಗೆ ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಸಂಬಂಧ ಕೆಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುತ್ಯಾಲಮಡುವು ಪ್ರವಾಸಿತಾಣದಲ್ಲಿ ಈಜಲು ಹೋಗಿ ವ್ಯಕ್ತಿ ನೀರುಪಾಲು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಳಗಾವಿಯಲ್ಲಿ ಬಸ್ ಪಲ್ಟಿ – 9 ಜನರಿಗೆ ಗಾಯ

    ಬೆಳಗಾವಿಯಲ್ಲಿ ಬಸ್ ಪಲ್ಟಿ – 9 ಜನರಿಗೆ ಗಾಯ

    ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್ (Bus) ಒಂದು ಪಲ್ಟಿಯಾದ (Overturn) ಘಟನೆ ಖಾನಾಪೂರ ತಾಲೂಕಿನ ಓಲಮನಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ 9 ಜನರಿಗೆ ಗಾಯಗಳಾಗಿವೆ.

    ವರದಿಗಳ ಪ್ರಕಾರ ಬೆಳಗಾವಿ (Belagavi) ಜಿಲ್ಲೆಯ ಖಾನಾಪೂರ ತಾಲೂಕಿನ ಓಲಮನಿ ಗ್ರಾಮದ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ಗೋವಾ ರಾಜ್ಯದ ಮಡಗಾಂವ್ ನಿಂದ ಬೈಲೂರು ಗ್ರಾಮಕ್ಕೆ ಹೋಗುತ್ತಿತ್ತು. ಬಸ್ ನಲ್ಲಿದ್ದವರು ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸಿಂದಗಿಯಲ್ಲಿ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

    ಇಂದು ಬೆಳಗಿನ ಜಾವ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 9 ಜನರಿಗೆ ಗಾಯಗಳಾಗಿವೆ. ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಸದ್ಯ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ಕುರಿತು ಖಾನಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗಂಟಲಲ್ಲಿ ಸಿಕ್ಕಿಕೊಂಡ ಚಾಕ್ಲೇಟ್- 9 ವರ್ಷದ ಬಾಲಕ ಉಸಿರುಗಟ್ಟಿ ಸಾವು

    Live Tv
    [brid partner=56869869 player=32851 video=960834 autoplay=true]

  • ಪಾವಗಡ, ಬೀದರ್ ಬಳಿಕ ಚಾಮರಾಜನಗರದಲ್ಲೂ ಖಾಸಗಿ ಬಸ್ ಪಲ್ಟಿ

    ಪಾವಗಡ, ಬೀದರ್ ಬಳಿಕ ಚಾಮರಾಜನಗರದಲ್ಲೂ ಖಾಸಗಿ ಬಸ್ ಪಲ್ಟಿ

    ಚಾಮರಾಜನಗರ: ಶನಿವಾರ ಪಾವಗಡ ಹಾಗೂ ಬೀದರ್‌ನಲ್ಲಿ ಬಸ್‌ಗಳು ಪಲ್ಟಿಯಾಗಿ 8ಕ್ಕೂ ಹೆಚ್ಚು ಮಂದಿ ದಾರುಣ ಸಾವನ್ನಪ್ಪಿದ್ದರು. ಅನೇಕರಿಗೆ ಗಂಭೀರ ಗಾಯವಾಗಿ, ಶನಿವಾರ ಕರಾಳ ದಿನ ಎನಿಸಿಕೊಂಡಿತ್ತು. ಇದರ ಬೆನ್ನಲ್ಲೇ ಭಾನುವಾರವೂ ಮತ್ತೊಂದು ಬಸ್ ಪಲ್ಟಿಯಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಚಾಮರಾಜನಗರದ ಹನೂರು ತಾಲೂಕು ಮಂಗಲ-ಕಾಮಗೆರೆ ನಡುವಿನ ರಸ್ತೆಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಒಂದು ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಹಳ್ಳಕ್ಕೆ ಮಗುಚಿ ಬಿದ್ದಿದೆ. ಇದನ್ನೂ ಓದಿ: ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ – ಮೂವರು ಆರೋಪಿಗಳ ಬಂಧನ

    ಅದೃಷ್ಟವಶಾತ್ ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಬಸ್ ಪಲ್ಟಿಯಾದಾಗ 10 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಬಗ್ಗೆ ಇರಲಿ ಎಚ್ಚರ – ಮಂಗಳೂರಿನಲ್ಲೂ ಸೈಬರ್ ವಂಚನೆ ಬೆಳಕಿಗೆ

    ಹನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

  • 30 ಮಂದಿಯಿದ್ದ ವಾಯುವ್ಯ ಸಾರಿಗೆ ಬಸ್ ಪಲ್ಟಿ- 20 ಪ್ರಯಾಣಿಕರು ಗಂಭೀರ

    30 ಮಂದಿಯಿದ್ದ ವಾಯುವ್ಯ ಸಾರಿಗೆ ಬಸ್ ಪಲ್ಟಿ- 20 ಪ್ರಯಾಣಿಕರು ಗಂಭೀರ

    ಧಾರವಾಡ: ವಾಯುವ್ಯ ಸಾರಿಗೆ ನಿಗಮಕ್ಕೆ ಸೇರಿದ ಬಾಗಲಕೋಟೆ-ಹುಬ್ಬಳ್ಳಿ ಬಸ್ ಪಲ್ಟಿಯಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆಹಳ್ಳದ ಬಳಿ ನಡೆದಿದೆ.

    30 ಜನ ಪ್ರಯಾಣಿಸುತ್ತಿದ್ದ ಬಸ್‍ನಲ್ಲಿ 20 ಮಂದಿಗೆ ಗಂಭೀರ ಗಾಯವಾಗಿದೆ. ಬಸ್ ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆ ಸಂಚರಿಸುತ್ತಿದ್ದು, ಸ್ಟೇರಿಂಗ್ ತುಂಡಾಗಿ ಪಲ್ಟಿಯಾಗಿದೆ. ಬಸ್ ರಸ್ತೆಯ ಪಕ್ಕದ ಹೊಲಕ್ಕೆ ನುಗ್ಗಿ, ಹಳ್ಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಇದನ್ನೂ ಓದಿ: ಜೆಡಿಎಸ್‍ನಿಂದ ನೂತನ ಕೋರ್ ಕಮಿಟಿ ರಚನೆ- ಪಟ್ಟಿ ಬಿಡುಗಡೆ ಮಾಡಿದ ಹೆಚ್‍ಡಿಕೆ

    ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ, ಗಾಯಾಳುಗಳನ್ನು ನವಲಗುಂದ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಅವರಿಗೆ ಕೆಲಸ ಇಲ್ಲ: ನಾರಾಯಣಗೌಡ

  • ಗದಗದಲ್ಲಿ ಸರ್ಕಾರಿ ಬಸ್ ಪಲ್ಟಿ – 5 ಜನರಿಗೆ ಗಾಯ

    ಗದಗದಲ್ಲಿ ಸರ್ಕಾರಿ ಬಸ್ ಪಲ್ಟಿ – 5 ಜನರಿಗೆ ಗಾಯ

    ಗದಗ: ಗದಗ ತಾಲೂಕಿನ ಚಿಂಚಲಿ ಗ್ರಾಮದ ಬಳಿ ಹುಬ್ಬಳ್ಳಿ ಘಟಕಕ್ಕೆ ಸೇರಿದ ಸರ್ಕಾರಿ ಬಸ್ ಪಲ್ಟಿಯಾಗಿ ಐದು ಜನರಿಗೆ ಗಾಯಗಳಾಗಿವೆ.

    ಹುಬ್ಬಳ್ಳಿಯಿಂದ ಕೋಳುವಾಡ, ಮುಳಗುಂದ ಮಾರ್ಗವಾಗಿ ಶಿರಹಟ್ಟಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದೆ. ಮೇವು ತುಂಬಿದ ಟ್ರ್ಯಾಕ್ಟರ್‍ವೊಂದು ಜಮೀನಿನಿಂದ ರಸ್ತೆ ಕಡೆಗೆ ಬರುತ್ತಿತ್ತು. ಏಕಾಏಕಿ ಬಂದ ಟ್ರ್ಯಾಕ್ಟರ್ ಅನ್ನು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ರಸ್ತೆ ಪಕ್ಕಕ್ಕೆ ಉರುಳಿದೆ. ಈ ಸಮಯದಲ್ಲಿ ಟ್ರ್ಯಾಕ್ಟರ್ ಕೂಡಾ ಆಯತಪ್ಪಿ ಕಂದಕಕ್ಕೆ ಸಿಲುಕಿದೆ.

    ಬಸ್ಸಿನಲ್ಲಿ ಇದ್ದ ಒಟ್ಟು 17 ಜನ ಪ್ರಯಾಣಿಕರ ಪೈಕಿ ಐದು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಗೊಂಡ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗದಗ ತಾಲೂಕಿನ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.