Tag: ಬಹಿರಂಗ ಪ್ರಚಾರ

  • ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ – ಇನ್ನೇನಿದ್ದರೂ ಮನೆಮನೆ ಪ್ರಚಾರ

    ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ – ಇನ್ನೇನಿದ್ದರೂ ಮನೆಮನೆ ಪ್ರಚಾರ

    ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ, ಮುಂದಿನ ಲೋಕಸಭೆ ಚುನಾವಣೆ (Lok Sabha Election) ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿರುವ ಜಿದ್ದಾಜಿದ್ದಿನ ಅಖಾಡ ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲ ಅಂಕಕ್ಕೆ ಇಂದು ತೆರೆ ಬಿದ್ದಿದೆ.

    ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ (Campaign) ತೆರೆ ಬಿದ್ದಿದೆ. ಸ್ಥಳೀಯರಲ್ಲದ ನಾಯಕರು ಕ್ಷೇತ್ರಗಳನ್ನು ತೊರೆದರೆ ರಾಷ್ಟ್ರೀಯ ಮುಖಂಡರು ರಾಜ್ಯವನ್ನು ತೊರೆದಿದ್ದಾರೆ. ಇನ್ನು ಏನೇ ಇದ್ದರೂ ಮನೆ ಮನೆ ಪ್ರಚಾರದ ಆಟವಷ್ಟೇ ಬಾಕಿ ಉಳಿದಿದೆ. ಇದನ್ನೂ ಓದಿ: ಕೊಡಗು-ಕೇರಳ ಗಡಿಯಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್

    ಚುನಾವಣಾ ಅಧಿಸೂಚನೆ ಹೊರಬಿದ್ದ ಮೇ 13ರಿಂದ ಇವತ್ತು ಸಂಜೆ 6 ಗಂಟೆಯವರೆಗೆ ಮತದಾರನ ಓಲೈಕೆಗಾಗಿ ಕೇಂದ್ರ, ರಾಜ್ಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಬೃಹತ್ ಲಿಥಿಯಂ ನಿಕ್ಷೇಪ ಪತ್ತೆ – ಇದಕ್ಕಿದೆ ಭಾರತದ 80% ಬೇಡಿಕೆ ಪೂರೈಸುವ ಸಾಮರ್ಥ್ಯ

    ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಮುಂದಿನ ಮೂರು ದಿನ ಮದ್ಯ ಸಿಗುವುದಿಲ್ಲ. ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಮಂಗಳವಾರ ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ಎಂಟ್ರಿ ಕೊಡಲಿದ್ದಾರೆ.

  • 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದೇ ಕೊನೆಯ ದಿನ

    14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದೇ ಕೊನೆಯ ದಿನ

    ಬೆಂಗಳೂರು: 14 ಕ್ಷೇತ್ರಗಳಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ಇಂದು ಕೊನೆಯ ದಿನ. ಸಂಜೆಯವರೆಗೆ ಪ್ರಚಾರಕ್ಕೆ ಅವಕಾಶವಿದ್ದು ನಂತರ ಮನೆಮನೆ ಪ್ರಚಾರ ಮಾತ್ರ ನಡೆಸಲು ಅನುಮತಿಯಿದೆ.

    ಕೊನೆಯ ದಿನ ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳ ಸರ್ಕಸ್ ನಡೆಸುತ್ತಿದ್ದು, ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಈ ದಿನದ ಮೇಲೆ ಆಯೋಗ ಹದ್ದಿನಕಣ್ಣನ್ನು ಇಟ್ಟಿದೆ.

    ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಅಂದರೆ ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

    ಸ್ಥಳೀಯ ಮತದಾರರಲ್ಲದ ನಾಯಕರೂ ಇಂದು ಸಂಜೆಯೇ ಕ್ಷೇತ್ರಗಳನ್ನು ಬಿಟ್ಟು ಹೊರಡಬೇಕಾಗುತ್ತದೆ. ಈ ಕಾರಣಕ್ಕೆ ಬಹುತೇಕ ಅಭ್ಯರ್ಥಿಗಳು ರೋಡ್ ಶೋ ನಡೆಸಿ ಮತಯಾಚನೆ ನಡೆಸುತ್ತಾರೆ.

    ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಬಳಿಕ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಬುಧವಾರ ಮನೆ ಮನೆ ಪ್ರಚಾರ ನಡೆಸಲಿದ್ದಾರೆ. ಈ ಪ್ರಚಾರದ ವೇಳೆ ಮತದಾರರಿಗೆ ನಾನಾ ಆಮಿಷಗಳನ್ನು ಒಡ್ಡುವ ಸಾಧ್ಯತೆಯಿತೆ. ಈ ರೀತಿ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ.

  • ಚುನಾವಣಾ ಪ್ರಚಾರ ಸಭೆಗೆ ಬಾಡಿಗೆ ವಾಹನದಲ್ಲಿ ಜನ ಕರೆತರುವಂತಿಲ್ಲ: ಹೈಕೋರ್ಟ್

    ಚುನಾವಣಾ ಪ್ರಚಾರ ಸಭೆಗೆ ಬಾಡಿಗೆ ವಾಹನದಲ್ಲಿ ಜನ ಕರೆತರುವಂತಿಲ್ಲ: ಹೈಕೋರ್ಟ್

    ಚೆನ್ನೈ: ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಸಭೆಗಳಿಗೆ ಜನರನ್ನು ಬಾಡಿಗೆ ವಾಹನದ ಮೂಲಕ ಕರೆ ತರುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ.

    ಮದುರೈ ಮೂಲದ ಕಾರ್ಯಕರ್ತ ಕೆ.ವಿ.ರಮೇಶ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾ.ಕಿರುಬಕರನ್ ಮತ್ತು ನ್ಯಾ.ಎಸ್‍ಎಸ್ ಸುಂದರ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶವನ್ನು ಪ್ರಕಟಿಸಿದ್ದಾರೆ.

    ಲೋಕಸಭೆ ಚುನಾವಣಾ ಪ್ರಚಾರ ಸಭೆಗಳಿಗೆ ರಾಜಕೀಯ ಪಕ್ಷಗಳು ಜನರನ್ನು ಸೇರಿಸಲು ಅವರನ್ನು ಬಾಡಿಗೆ ರೂಪದ ಟ್ರಕ್, ಬಸ್ ಹಾಗೂ ವ್ಯಾನ್‍ಗಳಲ್ಲಿ ಕರೆತರುವಂತಿಲ್ಲ. ಈ ಸಂಬಂಧ ಮಾರ್ಚ್ 27ರೊಳಗೆ ಈ ಆದೇಶಕ್ಕೆ ತಮ್ಮ ಪ್ರತಿಕ್ರಿಯೆಯನ್ನು ತಿಳಿಸಬೇಕೆಂದು ರಾಜಕೀಯ ಪಕ್ಷಗಳಿಗೆ ಕೋರ್ಟ್ ಸೂಚನೆ ನೀಡಿದೆ.

    ಇದರ ಜೊತೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕುವಂತಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ಮಧ್ಯಂತರ ಆದೇಶ ಹೊರಡಿಸಿ ತಾಕೀತು ಮಾಡಿದೆ. ಈ ವೇಳೆ ವೋಟಿಗಾಗಿ ಹಣವನ್ನು ಪಡೆದುಕೊಂಡವರು ಮತ್ತು ಹಣವನ್ನು ನೀಡಿದವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ಕೋರ್ಟ್ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

    2016ರ ತಮಿಳುನಾಡು ಚುನಾವಣೆಯ ವೇಳೆ ಪಕ್ಷ ಒಂದರ ಬಹಿರಂಗ ಸಭೆಯ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಸಿಎಂ ಜಯಲಲಿತಾ ಅವರ ಪ್ರಚಾರದ ವೇಳೆ ತಾಪಮಾನ ಜಾಸ್ತಿ ಇದೆ ಎನ್ನುವ ಕಾರಣಕ್ಕೆ ಬಹಿರಂಗ ಸಭೆ ತಡವಾಗಿ ಆರಂಭವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv