Tag: ಬಹುಮತ

  • ಸಿಎಂಗೆ ಮಾನ, ಮರ್ಯಾದೆ ಇದ್ದರೆ ಸಂತೆ ಭಾಷಣ ಬಿಟ್ಟು ಬಹುಮತ ಸಾಬೀತು ಮಾಡಲಿ – ಆರ್.ಅಶೋಕ್

    ಸಿಎಂಗೆ ಮಾನ, ಮರ್ಯಾದೆ ಇದ್ದರೆ ಸಂತೆ ಭಾಷಣ ಬಿಟ್ಟು ಬಹುಮತ ಸಾಬೀತು ಮಾಡಲಿ – ಆರ್.ಅಶೋಕ್

    ಬೆಂಗಳೂರು: ಸಿಎಂಗೆ ಮಾನ, ಮರ್ಯಾದೆ ಇದ್ದರೆ ಸಂತೆ ಭಾಷಣ ಬಿಟ್ಟು ಬಹುಮತ ಸಾಬೀತು ಮಾಡಲಿ ಎಂದು ಬಿಜೆಪಿ ನಾಯಕ ಆರ್. ಅಶೋಕ್ ಮುಖ್ಯಮಂತ್ರಿಯವರಿಗೆ ಸವಾಲು ಹಾಕಿದ್ದಾರೆ.

    ಇಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ್ಯ ಮುಖ್ಯಮಂತ್ರಿ ಅವರಿಗೆ ಪ್ರಮಾಣ ವಚನ ಬೋಧನೆ ಮಾಡಿರುವುದು ಗವರ್ನರ್. ಅವರ ಮುಂದೆ ಬಹುಮತ ಸಾಬೀತು ಮಾಡಲಿ ಎಂದು ಹೇಳಿದರು.

    ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಆರಂಭವಾಗಿದೆ. ಜೆಡಿಎಸ್ ಪಕ್ಷಕ್ಕೆ ತಲೆಬುಡವಿಲ್ಲ. ಆದರೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸಹ ಮೌನವಹಿಸಿ ಸುಮ್ಮನೆ ಕಾಲಹರಣ ಮಾಡುತ್ತಿದೆ. ಈ ರೀತಿಯ ವಿಚಾರದಲ್ಲಿ ನಮ್ಮ ರಾಜ್ಯ ದೇಶಕ್ಕೆ ಮಾದರಿಯಗುವಂತಹ ನಡೆ ಇರಬೇಕಿತ್ತು ಎಂದು ಅಭಿಪ್ರಾಯಪಟ್ಟರು.

    ಸದನದಲ್ಲಿ ಶಾಸಕ ಶ್ರೀನಿವಾಸ್‍ಗೌಡ ಬಿಜೆಪಿ ನನಗೆ ಹಣದ ಆಮಿಷವನ್ನು ನೀಡಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಆರ್. ಅಶೋಕ್, ಈ ವಿಚಾರದ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿರುವ ಸಂಬಂಧ ಶ್ರೀನಿವಾಸ್‍ಗೌಡಗೆ ಮೂರು ಬಾರಿ ನೊಟೀಸ್ ನೀಡಲಾಗಿತ್ತು. ಅವರು ಎಸಿಬಿಗೆ ಉತ್ತರಿಸಲಾಗದೇ ಕದ್ದು ಮುಚ್ಚಿ ಓಡಾಡುತ್ತಿದ್ದಾರೆ ಎಂದು ಹೇಳಿದರು.

  • ಡಿಜಿ ನೀಲಮಣಿರಾಜುಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸೂಚನೆ

    ಡಿಜಿ ನೀಲಮಣಿರಾಜುಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸೂಚನೆ

    ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಬಹುಮತ ಸಾಬೀತು ಹಿನ್ನೆಲೆಯಲ್ಲಿ ಡಿಜಿ ನೀಲಮಣಿರಾಜು ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

    ಕುಮಾರಸ್ವಾಮಿ ಮನೆಗೆ ಡಿಜಿ ನೀಲಮಣಿರಾಜು ಭೇಟಿ ನೀಡಿ ಚರ್ಚೆ ನಡೆಸಿದ್ದು, ಭದ್ರತೆಯ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸಿಎಂ ಅವರು, ಯಾವುದೇ ಕಾರಣಕ್ಕೂ ಬಹುಮತ ಸಾಬೀತುಪಡಿಸುವ ಸಮಯದಲ್ಲಿ ಗೊಂದಲ, ಗಲಾಟೆ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ಶಾಸಕರು ವಿಧಾನಸೌಧಕ್ಕೆ ಬರುವ ಸಮಯದಲ್ಲಿ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದ್ದಾರೆ. ಸಿಎಂ ಜೊತೆ ಚರ್ಚೆ ನಡೆಸಿ ಡಿಜಿ ನೀಲಮಣಿ ರಾಜು ಹೊರಟ ಬಳಿಕ ಇಂಟಲಿಜೆನ್ಸ್ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರ ಬಳಿಯೂ ಸಿಎಂ ಮಾಹಿತಿ ಪಡೆದಿದ್ದಾರೆ.

    ಸದ್ಯ ವಿಧಾನಸೌಧದ ಸುತ್ತಾಮುತ್ತಾ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

  • ಸಮ್ಮಿಶ್ರ ಸರ್ಕಾರಕ್ಕಿಂದು ವಿಶ್ವಾಸ ಪರೀಕ್ಷೆ- ಗೆಲುವಿನ ನಿರೀಕ್ಷೆಯಲ್ಲಿ ಸಿಎಂ ಕುಮಾರಸ್ವಾಮಿ

    ಸಮ್ಮಿಶ್ರ ಸರ್ಕಾರಕ್ಕಿಂದು ವಿಶ್ವಾಸ ಪರೀಕ್ಷೆ- ಗೆಲುವಿನ ನಿರೀಕ್ಷೆಯಲ್ಲಿ ಸಿಎಂ ಕುಮಾರಸ್ವಾಮಿ

    ಬೆಂಗಳೂರು: ಕಳೆದ ವಾರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚಿಸುವ ಮುನ್ನವೇ ಬಿಎಸ್ ಯಡಿಯೂರಪ್ಪ ರಾಜೀನಾಮೆ ಕೊಟ್ಟು ಹೊರನಡೆದಿದ್ರು. ಇವತ್ತು ಕುಮಾರಸ್ವಾಮಿ ಸರದಿ. ವಿಧಾನಸೌಧದ ಮುಂದೆ 25ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಚ್‍ಡಿ ಕುಮಾರಸ್ವಾಮಿ ಇಂದು ವಿಧಾನಸೌಧದ ಒಳಗೆ ವಿಶ್ವಾಸಮತ ಪರೀಕ್ಷೆ ಎದುರಿಸಲಿದ್ದಾರೆ.

    ಮಧ್ಯಾಹ್ನ 12.15ಕ್ಕೆ ವಿಧಾನಸಭೆ ವಿಶೇಷ ಅಧಿವೇಶನ ಆರಂಭವಾಗಲಿದೆ. ಈಗಾಗಲೇ 221 ಶಾಸಕರ ಪ್ರಮಾಣವಚನ ಪ್ರಕ್ರಿಯೆ ನಡೆದಿದ್ದು, ಇಂದು ನೇರವಾಗಿ ಸದನದಲ್ಲಿ ಎಚ್‍ಡಿ ಕುಮಾರಸ್ವಾಮಿ ವಿಶ್ವಾಸಮತ ನಿರ್ಣಯ ಮಂಡನೆಯಾಗಲಿದೆ. ಬಳಿಕ ಸದನದಲ್ಲಿ ಬಹುಮತ ಸಾಬೀತುಪಡಿಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕೊಡಲಿದ್ದಾರೆ.

    ಈಗಾಗಲೇ ಜೆಡಿಎಸ್‍ನ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಮುಖ್ಯಸಚೇತಕ ನೇಮಕವಾಗಿಲ್ಲದ ಕಾರಣ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಎಚ್‍ಡಿ ಕುಮಾರಸ್ವಾಮಿಯವ್ರೇ ವಿಪ್ ಜಾರಿ ಮಾಡಿದ್ದಾರೆ. ಇನ್ನು ಗುರುವಾರ ನಡೆದ ಕಾಂಗ್ರೆಸ್‍ನ ಶಾಸಕಾಂಗ ಪಕ್ಷದ ಸಭೆಯಲ್ಲಿ 78 ಶಾಸಕರಿಗೂ ವಿಧಾನಪರಿಷತ್ ಮುಖ್ಯಸಚೇತಕ ಐವಾನ್ ಡಿಸೋಜಾ ವಿಪ್ ಜಾರಿ ಮಾಡಿದ್ದಾರೆ. ಇಂದು ವಿಶ್ವಾಸಮತ ಸಾಬೀತುಪಡಿಸಿದ್ರೆ ಇನ್ನು 6 ತಿಂಗಳ ಕಾಲ ಯಾವುದೇ ಸಮಸ್ಯೆ ಇಲ್ಲದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯ ನಿರ್ವಹಿಸಲಿದೆ.

    ವಿಶ್ವಾಸಮತ ಗೆಲುವಿಗೆ ಕನಿಷ್ಠ 111 ಸದಸ್ಯರ ಬೆಂಬಲ ಬೇಕು. ಕಾಂಗ್ರೆಸ್ ಸದಸ್ಯರ ಬಲ- 78, ಜೆಡಿಎಸ್ ಬಲ- 37 ಇರಬೇಕು. ಇಬ್ಬರು ಪಕ್ಷೇತರರ ಬೆಂಬಲದೊಂದಿಗೆ ಮೈತ್ರಿಕೂಟದ ಬಲ 117 ಹಾಗೂ ಬಿಜೆಪಿ ಶಾಸಕರ ಸಂಖ್ಯಾಬಲ 104 ಇರಬೇಕು. ಒಟ್ಟಿನಲ್ಲಿ ಮೈತ್ರಿಕೂಟ ಸೋಲಿಸಲು ಬಿಜೆಪಿಗೆ ಕನಿಷ್ಠ 7 ಶಾಸಕರ ಬೆಂಬಲ ಬೇಕು.

    ಬಹುಮತ ಸಾಬೀತು ಬಳಿಕ ಸಚಿವ ಸಂಪುಟ ರಚನೆ ಪ್ರಕ್ರಿಯೆ ಆರಂಭವಾಗಲಿದ್ದು, ಮಂತ್ರಿಗಿರಿಗಾಗಿ ಶಾಸಕರ ಲಾಬಿ ತೀವ್ರಗೊಂಡಿದೆ. ಸಚಿವ ಸ್ಥಾನ ಸಿಗದೇ ಇದ್ದವರು ಬಿಜೆಪಿ ಕಡೆಗೆ ವಾಲುವ ಭೀತಿ ಇರುವುದರಿಂದ 2 ಸ್ಥಾನ ಉಳಿಸಿಕೊಳ್ಳುವ ತಂತ್ರಗಾರಿಕೆಗೆ ಕಾಂಗ್ರೆಸ್ ಮುಂದಾಗಿದೆ. ಡಿಸಿಎಂ ಪಟ್ಟ ಸಿಗದ ಕಾರಣಕ್ಕೆ ಈಗಾಗಲೇ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವು ಶಾಸಕರೂ ಅವರ ಬೆನ್ನಿಗೆ ನಿಂತಿದ್ದಾರೆ.

    ಇಂದು ಸಂಜೆ 19 ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿರುವ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ಚರ್ಚಿಸಿ, ಖಾತೆ ಹಂಚಿಕೆ ಕುರಿತು ತೀರ್ಮಾನಕ್ಕೆ ಬರಲಿದ್ದಾರೆ. ಈ ಮಧ್ಯೆ ಸಚಿವರ ಅವಧಿಯನ್ನು 2 ವರ್ಷಕ್ಕೆ ಸೀಮಿತಗೊಳಿಸುವ ಸೂತ್ರದ ಬಗ್ಗೆಯೂ ಕಾಂಗ್ರೆಸ್‍ನಲ್ಲಿ ಚರ್ಚೆ ನಡೆಯುತ್ತಿದೆ. ಇನ್ನು ಜೆಡಿಎಸ್‍ನಲ್ಲೂ ಸಂಪುಟ ವಿಸ್ತರಣೆ ಕರಸತ್ತು ಆರಂಭವಾಗಿದ್ದು, ಎಚ್‍ಡಿ ದೇವೇಗೌಡರು ಸಿಎಂ ಕುಮಾರಸ್ವಾಮಿ ಜೊತೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

  • ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ- ಇಂದು ಕಾಂಗ್ರೆಸ್, ಜೆಡಿಎಸ್ ಸಭೆ

    ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ- ಇಂದು ಕಾಂಗ್ರೆಸ್, ಜೆಡಿಎಸ್ ಸಭೆ

    ಬೆಂಗಳೂರು: ಅಂತೂ ಇಂತೂ ರಾಜ್ಯದಲ್ಲಿ ಕುಮಾರಪರ್ವ ಆರಂಭ ಆಗಿದೆ. ಈ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮುಂದಿರೋ ಸವಾಲು ಶುಕ್ರವಾರ ಸದನದಲ್ಲಿ ವಿಶ್ವಾಸಮತ ಗೆಲ್ಲೋದು.

    ಈ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕಸರತ್ತು ಮುಂದುವರೆಸಿದ್ದಾರೆ. ಜೆಡಿಎಸ್ ಶಾಸಕರು ಇರೋ ರೆಸಾರ್ಟ್‍ಗೆ ತೆರಳಿದ ಕುಮಾರಸ್ವಾಮಿ ಅಲ್ಲೇ ರಾತ್ರಿ ಕಳೆದಿದ್ದಾರೆ. ಇದನ್ನೂ ಓದಿ: ಮೇ 25 ರಂದು ದೆಹಲಿಗೆ ಬನ್ನಿ -ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಬುಲಾವ್

    ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ ಅಂತಾ ಕಿವಿ ಮಾತು ಹೇಳಿದ್ದಾರೆ. ಅತ್ತ ಕಾಂಗ್ರೆಸ್ ಶಾಸಕರಿಗೂ ಇದೇ ರೀತಿಯ ಕಿವಿ ಮಾತನ್ನು ನಾಯಕರು ಹೇಳ್ತಿದ್ದಾರೆ. ನಿನ್ನೆ ಸೋನಿಯಾ ಮತ್ತು ರಾಹುಲ್ ಖುದ್ದು ಶಾಸಕರನ್ನು ಭೇಟಿ ನಮ್ಮೊಂದಿಗೆ ಇರಿ ಎಂದಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಮುಖ ನಾಯಕರು ಸಂಜೆ ನಗರದ ಖಾಸಗಿ ಹೋಟೆಲ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಡಿಕೆಶಿ ಜೊತೆ ರಾಹುಲ್, ಸೋನಿಯಾ ಗಾಂಧಿ ಪ್ರತ್ಯೇಕ ಚರ್ಚೆ

    ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಅನುರಿಸಬೇಕಾದ ತಂತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇನ್ನು ಸ್ಪೀಕರ್ ಆಯ್ಕೆಗೆ ವಿಧಾನಸಭೆ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ. ಮಧ್ಯಾಹ್ನ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ನಾಳೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಸೈಡ್ ಲೈನ್?

  • ವಾಜಪೇಯಿ ಘಟನೆಯನ್ನು ಪ್ರಸ್ತಾಪಿಸಿ ಹಾರಿಕೆಯ ಉತ್ತರ ಕೊಟ್ಟ ಸಿಟಿ ರವಿ!

    ವಾಜಪೇಯಿ ಘಟನೆಯನ್ನು ಪ್ರಸ್ತಾಪಿಸಿ ಹಾರಿಕೆಯ ಉತ್ತರ ಕೊಟ್ಟ ಸಿಟಿ ರವಿ!

    ಬೆಂಗಳೂರು: ಸುಪ್ರೀಂ ತೀರ್ಪಿನಂತೆ ಬಿಜೆಪಿ ಶನಿವಾರ ಬಹುಮತ ಸಾಬೀತು ಪಡಿಸುವ ಒತ್ತಡಕ್ಕೆ ಸಿಲುಕಿದ್ದು, ಸದ್ಯ ಪಕ್ಷದ ಸದಸ್ಯರಲ್ಲಿ ಈ ವಿಶ್ವಾಸ ಕಡಿಮೆ ಆಗಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.

    ಚಿಕ್ಕಮಗಳೂರು ಶಾಸಕ ಸಿಟಿ ರವಿ, 1996ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಬಹುಮತ ಸಾಬೀತು ಪಡಿಸುವ ವಿಚಾರವನ್ನು ಪ್ರಸ್ತಾಪ ಮಾಡಿದ ಕಾರಣ ಈಗ ಈ ಮೇಲಿನ ಪ್ರಶ್ನೆ ಎದ್ದಿದೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ನಮ್ಮದು ರಾಜಮಾರ್ಗ, ಶಾರ್ಟ್ ಕರ್ಟ್ ಇಲ್ಲದೇ ಬಹುಮತ ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು. ಮುಂದುವರಿಸಿ 1996 ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನ ಮಂತ್ರಿಯಾಗಿ ಬಹುಮತಗಳಿಸಲು ವಿಫಲವಾದಾಗ ರಾಜೀನಾಮೆ ನೀಡಿದರು ಎಂದರು.

    ವಾಜಪೇಯಿ ಹೆಸರನ್ನು ಪ್ರಸ್ತಾಪ ಮಾಡಿದ ಕೂಡಲೇ ಮಾಧ್ಯಮಗಳು ಕರ್ನಾಟಕದಲ್ಲೂ ಇತಿಹಾಸ ಮರುಕಳಿಸುತ್ತಾ ಎಂದು ಕೇಳಿದ್ದಕ್ಕೆ, ಆಗಿನ ಪರಿಸ್ಥಿತಿ ಈಗ ಇಲ್ಲ ಬಿಡಿ ಎಂದು ಹಾರಿಕೆಯ ಉತ್ತರ ನೀಡಿದರು.

    ಕಾಂಗ್ರೆಸ್ ಶಾಸಕರಿಗೆ ಜೀವ ಬೆದರಿಕೆ ಇದೆ ಎಂದು ಆರೋಪ ಮಾಡಿದ್ದ ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ಯಾವ ಕಾಂಗ್ರೆಸ್ ಶಾಸಕರಿಗೆ ಜೀವ ಬೆದರಿಕೆ ಇದೆ. ಯಾವ ಶಾಸಕರ ಪತ್ನಿ, ಮಕ್ಕಳು ರಮ್ಯಾ ಬಳಿ ಬಂದು ಜೀವ ಬೆದರಿಕೆಯ ಅಳಲು ತೋಡಿಕೊಂಡಿದ್ದಾರೆ ಎಂಬುದನ್ನು ಬಹಿರಂಗ ಪಡಿಸಲಿ ಎಂದು ಇದೇ ವೇಳೆ ಸವಾಲು ಎಸೆದರು.

    ಒಂದು ವೇಳೆ ಜೀವ ಬೆದರಿಕೆ ಇರುವುದು ಬಹಿರಂಗ ಪಡಿಸಿದರೆ ತಾವೇ ಸ್ವತಃ ಡಿಜಿ ಅವರ ಮೂಲಕ ಶಾಸಕರಿಗೆ ರಕ್ಷಣೆ ಕೊಡಿಸುತ್ತೇನೆ. ಅಲ್ಲದೇ ರಮ್ಯಾ ಅವರಿಗೂ ಜೀವ ಬೆದರಿಕೆ ಇದ್ದರೆ ಅವರಿಗೂ ರಕ್ಷಣೆ ಕೊಡುವಂತೆ ನಾನು ಡಿಜಿಗೆ ಮನವಿ ಮಾಡಲಿದ್ದೇನೆ ಎಂದು ವ್ಯಂಗ್ಯವಾಡಿದರು.

  • ರಾತ್ರಿಯಿಡೀ ಖಾಸಗಿ ಹೋಟೆಲ್‍ನಲ್ಲಿ ಬಿಎಸ್‍ವೈ ಮೀಟಿಂಗ್-ಬಹುಮತ ಹೇಗೆ ಸಾಬೀತು ಮಾಡ್ತಾರೆ?

    ರಾತ್ರಿಯಿಡೀ ಖಾಸಗಿ ಹೋಟೆಲ್‍ನಲ್ಲಿ ಬಿಎಸ್‍ವೈ ಮೀಟಿಂಗ್-ಬಹುಮತ ಹೇಗೆ ಸಾಬೀತು ಮಾಡ್ತಾರೆ?

    ಬೆಂಗಳೂರು: ಇಂದು ಸುಪ್ರೀಂಕೋರ್ಟ್ ಮುಂದೆ ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಬೇಕಿದೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಹೈಡ್ರಾಮಗಳ ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಸಂಖ್ಯಾಬಲವನ್ನು ಹೊಂದಿಸೋ ಬಗ್ಗೆ ಹಾಗು ಮುಂದಿನ ರಣತಂತ್ರಗಳ ಬಗ್ಗೆ ರಾತ್ರಿಯಿಡೀ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ.

    ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್, ಜೆಪಿ ನಡ್ಡಾ, ಧಮೇಂದ್ರ ಪ್ರಧಾನ್ ಮತ್ತು ಅನಂತ್ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ರು.

    ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜ್ಯದ ಬಾರ್ಡರ್ ದಾಟಿದ್ದು ಬಿಎಸ್‍ವೈಗೆ ಫುಲ್ ಟೆನ್ಶನ್ ತರಿಸಿದೆ. ರಾತ್ರಿ ಮನೆಗೆ ಕೂಡ ಹೋಗದೇ ಮುಂದೇನು ಮಾಡಬೇಕು ಅನ್ನೋ ಬಗ್ಗೆ ತಲೆಕೆಡಿಸಿಕೊಂಡು ಕುಳಿತಿದ್ರು ಅಂತಾ ಎನ್ನಲಾಗಿದೆ. ಕೆಲವೇ ಕ್ಷಣಗಳ ಹಿಂದೆ ಬಿಎಸ್‍ವೈ ಮನೆಗೆ ಹಿಂದಿರುಗಿದ್ದಾರೆ. ಈ ನಡುವೆ ನೇರವಾಗಿ ಎಲ್ಲೂ ಕಾಣಿಸಿಕೊಳ್ಳದಿರಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

    ಬಹುಮತ ಹೇಗೆ ಸಾಬೀತು ಮಾಡಬಹುದು ಯಡಿಯೂರಪ್ಪ ಅನ್ನೋದನ್ನು ನೋಡೋದಾದ್ರೆ:
    * ಶಾಸಕರು ಪ್ರಮಾಣ ಸ್ವೀಕಾರ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್‍ನ ಕೆಲವರನ್ನು ಸೆಳೆದು ರಾಜೀನಾಮೆ ಕೊಡಿಸಬಹುದು.
    * ಒಂದು ಪಕ್ಷದ ಒಟ್ಟು ಸಂಖ್ಯೆಯ 3ನೇ 2ರಷ್ಟು ಶಾಸಕರನ್ನು ಬಿಜೆಪಿಗೆ ಬರುವಂತೆ ಮಾಡುವುದು.
    * ಕಾನೂನಿನ ರಿಸ್ಕ್ ತೆಗೆದುಕೊಂಡು ಶಾಸಕರಿಂದ ಅಡ್ಡ ಮತದಾನ ಮಾಡಿಸಬಹುದು.
    * ಚುನಾಯಿತ ಸದಸ್ಯರನ್ನು ಪ್ರಮಾಣ ವಚನದಿಂದ ದೂರ ಉಳಿಸಿ ಸದನದ ಸಂಖ್ಯಾಬಲ ಕುಗ್ಗಿಸಬಹುದು.
    * ಬಹುಮತ ಸಾಬೀತಿನ ಬಳಿಕ ಆ ಪ್ರತಿನಿಧಿಗಳನ್ನ ಶಪಥ ಸ್ವೀಕರಿಸುವಂತೆ ಮಾಡಬಹುದು.
    * ಜೆಡಿಎಸ್ ಬೆಂಬಲ ಪಡೆಯಲು ಮತ್ತೊಂದು ಸುತ್ತು ಮಾತುಕತೆಗೆ ಮುಂದಾಗಬಹುದು.
    * ಕಾಂಗ್ರೆಸ್ ರೀತಿಯಲ್ಲಿ ಭೇಷರತ್ ಬೆಂಬಲವನ್ನು ಜೆಡಿಎಸ್‍ಗೆ ಬಿಜೆಪಿಯೂ ನೀಡಬಹುದು.

    ರಾಜ್ಯಪಾಲರಿಗೆ ಸರ್ಕಾರ ರಚನೆ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಬರೆದಿರುವ ಪತ್ರದಲ್ಲಿ ಏನಿದೆ? ಬಹುಮತ ಸಾಬೀತಿಗೆ ಬೇಕಾದ ಬೆಂಬಲ ಯಾರು ನೀಡ್ತಾರೆ? ಎಂಬೆಲ್ಲ ಮಾಹಿತಿ ಆಧರಿಸಿ ವಿಚಾರಣೆ ನಡೆಯಲಿದೆ. ಇದರ ಜೊತೆಗೆ ಹಿರಿಯ ವಕೀಲ ರಾಮ್ ಜೇಠ್ಮಾಲಾನಿ ಕೂಡಾ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದು, ಯಾವ ಆಯಾಮದಲ್ಲಿ ವಾದ ಮಂಡಸಿಲಿದ್ದಾರೆ ಎಂಬ ಕುತೂಹಲ ಮೂಡಿದೆ.

    ಈ ಎಲ್ಲ ಅರ್ಜಿಯ ಜೊತೆಗೆ ಆಂಗ್ಲೋ ಇಂಡಿಯನ್ ಶಾಸಕರನ್ನು ತರಾತುರಿಯಲ್ಲಿ ರಾಜ್ಯಪಾಲರು ನೇಮಕ ಮಾಡಿದ್ದಾರೆ ಅಂತಾ ಆರೋಪಿಸಿರುವ ಕಾಂಗ್ರೆಸ್ ಜೆಡಿಎಸ್ ಜಂಟಿಯಾಗಿ ಮತ್ತೊಂದು ಅರ್ಜಿಯೊಂದನ್ನ ಸುಪ್ರಿಂಕೊರ್ಟ್ ಗೆ ಸಲ್ಲಿಸಿದ್ದು, ಒಟ್ಟು ನಾಲ್ಕು ಅರ್ಜಿಗಳು ಏಕ ಕಾಲದಲ್ಲಿ ವಿಚಾರಣೆಗೆ ಬರಲಿದೆ. ಒಟ್ಟಿನಲ್ಲಿ ಇಂದು ಬಿಎಸ್‍ವೈ ಭವಿಷ್ಯ ನಿರ್ಧರವಾಗಿದೆ.