Tag: ಬಾಂಗ್ಲಾ

  • ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್

    ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್

    ಢಾಕಾ: ‘ಇಸ್ಕಾನ್’ ವಿರುದ್ಧ ಮುಸ್ಲಿಂ ವ್ಯಾಪಾರಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಹಿಂದೂಗಳು ಬಾಂಗ್ಲಾದೇಶದ (Bangladesh) ಬಂದರು ನಗರವಾದ ಚಿತ್ತಗಾಂಗ್‌ನಲ್ಲಿ (Chittagong) ಪ್ರತಿಭಟನೆ ನಡೆಸಿದರು. ಈ ಕಾರಣಕ್ಕೆ ಬಾಂಗ್ಲಾ ಭದ್ರತಾ ಪಡೆಗಳು ಹಿಂದೂ ಸಮುದಾಯದ ಮೇಲೆ ಭಾರಿ ದಬ್ಬಾಳಿಕೆಯನ್ನು ನಡೆಸಿದೆ.

    ನ.5 ರಂದು ಹಜಾರಿ ಗಲಿ ಪ್ರದೇಶದಲ್ಲಿ ಈ ಘಟನೆಯು ಆರಂಭವಾಯಿತು. ಇಸ್ಲಾಮಿಕ್ ಗುಂಪಾದ ಜಮಾತ್-ಎ-ಇಸ್ಲಾಮಿ ಸದಸ್ಯ ಉಸ್ಮಾನ್ ಅಲಿ ಸಾಮಾಜಿಕ ಮಾಧ್ಯಮದಲ್ಲಿ ಹಿಂದೂ ಧರ್ಮ ಮತ್ತು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ISKON) ವಿರುದ್ಧ ಅವಹೇಳನಕಾರಿ ಹೇಳಿಕೆಯ ಪೋಸ್ಟ್ ಹಾಕಿದ್ದ. ಇದನ್ನು ಖಂಡಿಸಿ ಹಿಂದೂ ನಿವಾಸಿಗಳು ಅಲಿ ಅಂಗಡಿಯ ಹೊರಗೆ ಜಮಾಯಿಸಿ ಪ್ರತಿಭಟಿಸಿದರು. ಇದು ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಸುವ್ಯವಸ್ಥೆಯನ್ನು ಸರಿಪಡಿಸಲು ಬಾಂಗ್ಲಾದೇಶ ಸೇನೆ ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜಿಸಿದಾಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಬಹಿಷ್ಕೃತ ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸ್ರೀನ್ ಕೂಡ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮೂವರು ಮಕ್ಕಳನ್ನು ತುಂಗಭದ್ರಾ ನದಿಗೆ ತಳ್ಳಿ ವ್ಯಕ್ತಿ ಆತ್ಮಹತ್ಯೆ ಕೇಸ್‌ – ಇಬ್ಬರ ಮೃತದೇಹ ಪತ್ತೆ

    ಭದ್ರತಾ ಸಿಬ್ಬಂದಿ ನಾಗರಿಕರೊಂದಿಗೆ ಘರ್ಷಣೆ, ಅವರನ್ನು ಬೆನ್ನಟ್ಟಿ ಸೇನಾ ಸಿಬ್ಬಂದಿ ಹಾಗೂ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಕೆಲವರು ಸಿಸಿಟಿವಿ ಕ್ಯಾಮೆರಾಗಳನ್ನು ಹಾಳುಗೆಡವಿದ್ದಾರೆ. ಚಿತ್ತಗಾಂಗ್ ಮೆಟ್ರೋಪಾಲಿಟನ್ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರಿಗೆ, ಪ್ರತಿಭಟನಾಕಾರರು ಇಟ್ಟಿಗೆ ಮತ್ತು ಆಸಿಡ್ ಎಸೆದಿದ್ದಾರೆ. ಒಂಬತ್ತು ಅಧಿಕಾರಿಗಳು ಗಾಯಗೊಂಡಿದ್ದಾರೆ. ಮಂಗಳವಾರ ಅಧಿಕಾರಿಗಳು 582 ವ್ಯಕ್ತಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಕೃತ್ಯವೆಸಗಿದ 49 ಜನರನ್ನು ಬಂಧಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ. ಇದನ್ನೂ ಓದಿ: ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಬ್ರೇಕ್‌ ಹಾಕಲು ಮುಂದಾದ ಟ್ರಂಪ್‌

    ಹಿಂದೂ ಪ್ರಾಬಲ್ಯದ ವ್ಯಾಪಾರ ಪ್ರದೇಶವಾದ ಹಜಾರಿ ಗಲಿಯು ಭಾರೀ ಕಣ್ಗಾವಲಿನಲ್ಲಿದೆ ಮತ್ತು ನಡೆಯುತ್ತಿರುವ ಕಾರ್ಯಾಚರಣೆಗಳಿಂದಾಗಿ ಅನೇಕ ನಿವಾಸಿಗಳು ಹೊರಹೋಗಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಆ ಪ್ರದೇಶದಲ್ಲಿ ಮನೆ-ಮನೆಗೆ ತೆರಳಿ ಶೋಧ ನಡೆಸುತ್ತಿರುವ ಬಗ್ಗೆಯೂ ವರದಿಯಾಗಿದೆ. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಸೇನೆಯ ಗುಂಡಿಗೆ ಉಗ್ರ ಬಲಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

  • ಹಾಸನ| ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ

    ಹಾಸನ| ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ

    ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ ( District Crime Record Bureau) ಪೊಲೀಸರು ಬಂಧಿಸಿದ್ದಾರೆ.

    ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತರು. ಹಾಸನ (Hassan) ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವನ ಮನೆಯಲ್ಲಿ ಈ ಮೂವರು ವಾಸವಿದ್ದರು. ಜುಬೇರ್ ಮನೆಯ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಈ ಮೂವರು ಪಶ್ಚಿಮಬಂಗಾಳದ ವಿಳಾಸವಿರುವ ನಕಲಿ ಆಧಾರ್‌ಕಾರ್ಡ್ ಹೊಂದಿದ್ದರು. ಇದನ್ನೂ ಓದಿ: ಜೀವಭಯದಿಂದ ಹಿಜ್ಬುಲ್ಲಾ ಲೀಡರ್ ಇರಾನ್‌ಗೆ ಪಲಾಯನ

    ನುಸುಳುಕೋರರನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೀಪಾವಳಿಗೆ ಟಿಕೆಟ್‌ ದರ ಏರಿಸಿದ್ರೆ ನೋಂದಣಿ ರದ್ದು: ಖಾಸಗಿ ಬಸ್‌ ಕಂಪನಿಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ

  • ಭಾರತ-ಬಾಂಗ್ಲಾ 2ನೇ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ – ಮೊದಲ ದಿನದಂತ್ಯಕ್ಕೆ ಬಾಂಗ್ಲಾದೇಶ 107ಕ್ಕೆ 3 ವಿಕೆಟ್‌

    ಭಾರತ-ಬಾಂಗ್ಲಾ 2ನೇ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ – ಮೊದಲ ದಿನದಂತ್ಯಕ್ಕೆ ಬಾಂಗ್ಲಾದೇಶ 107ಕ್ಕೆ 3 ವಿಕೆಟ್‌

    – ದಿಗ್ಗಜ ಅನಿಲ್‌ ಕುಂಬ್ಳೆ ದಾಖಲೆ ಮುರಿದ ಅಶ್ವಿನ್‌

    ಕಾನ್ಪುರ: ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ (Ind vs Ban) ತಂಡಗಳು ಕಾದಾಟ ನಡೆಸುತ್ತಿವೆ. ಮಳೆಯ ಕಾಟದಿಂದಾಗಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ 2ನೇ ಟೆಸ್ಟ್‌ ಪಂದ್ಯದ (Test Cricket Match) ಮೊದಲ ದಿನ ಕೇವಲ 35 ಓವರ್‌ಗಳಿಗೆ ಮುಕ್ತಾಯಗೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ ಮೊದಲ ದಿನದ ಅಂತ್ಯಕ್ಕೆ 3 ವಿಕೆಟ್‌ ಕಳೆದುಕೊಂಡು 107 ರನ್‌ ಗಳಿಸಿದೆ.

    ಕಾನ್ಪುರದ (Kanpur) ಗ್ರೀನ್‌ ಪಾರ್ಕ್‌ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್‌ ಪಂದ್ಯಕ್ಕೆ ಮಳೆಯ ಕಾಟದಿಂದಾಗಿ ಟಾಸ್‌ ತಡವಾಯಿತು. ಜೊತೆಗೆ ಮೊದಲ ದಿನದಾಟವನ್ನು ಕೇವಲ 35 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ ತಂಡ 26 ರನ್‌ಳಿಗೆ ಮೊದಲ ವಿಕೆಟ್‌ ಪಡೆದರೂ ಬಳಿಕ ಮೊಮಿನುಲ್ ಹಕ್, ನಾಯಕ ನಜ್ಮುಲ್‌ ಹೊಸೈನ್‌ ಸ್ಯಾಂಟೋ (Najmul Hossain Shanto) ಅವರ ಸಾಧಾರಣ ಬ್ಯಾಟಿಂಗ್‌ ಪ್ರದರ್ಶನದಿಂದ 100 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: ವೆಸ್ಟ್ ಇಂಡೀಸ್ ಆಲ್‌ರೌಂಡರ್‌ ಡ್ವೇನ್ ಬ್ರಾವೋ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ

    ಶಾದ್ಮಾನ್‌ ಇಸ್ಲಾಂ 24 ರನ್‌ ಗಳಿಸಿದ್ರೆ, ಸ್ಯಾಂಟೋ 31 ರನ್‌ ಗಳಿಸಿ ಔಟಾದರು. ಮತ್ತೊಬ್ಬ ಆರಂಭಿಕ ಝಾಕಿರ್‌ ಹಸನ್‌ ಶೂನ್ಯ ಸುತ್ತಿದರು. ಇನ್ನೂ 81 ಎಸೆತಗಳಲ್ಲಿ 40 ರನ್‌ ಗಳಿಸಿರುವ ಮೊಮಿನುಲ್ ಹಕ್ ಮತ್ತು ಮುಶ್ಫಿಕರ್ ರಹೀಮ್ 6 ರನ್‌ ಗಳಿಸಿದ್ದು, ಕ್ರೀಸ್‌ನಲ್ಲಿದ್ದಾರೆ. ಶನಿವಾರ 2ನೇ ದಿನದಾಟ ಮುಂದುವರಿಸಲಿದ್ದಾರೆ.

    ಮೊದಲ ಟೆಸ್ಟ್‌ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಪಡೆದು ದಿಗ್ಗಜರ ಎಲೈಟ್‌ ಪಟ್ಟಿ ಸೇರಿದ್ದ ಆರ್‌. ಅಶ್ವಿನ್‌ 2ನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್‌ ಪಡೆದರೆ, ವೇಗಿ ಆಕಾಶ್‌ ದೀಪ್‌ 2 ವಿಕೆಟ್‌ ಪಡೆದು ಮಿಂಚಿದ್ದಾರೆ. ಇದನ್ನೂ ಓದಿ: IPL 2025 Auction: ಮೆಗಾ ಹರಾಜಿಗೂ ಮುನ್ನ ಬಿಸಿಸಿಐನಿಂದ ಆಗುತ್ತಾ ಪ್ರಮುಖ ಬದಲಾವಣೆ?

    ದಿಗ್ಗಜ ಅನಿಲ್‌ ಕುಂಬ್ಳೆ ದಾಖಲೆ ಮುರಿದ ಅಶ್ವಿನ್‌:
    ಬಾಂಗ್ಲಾ ನಾಯಕ ನಜ್ಮುಲ್‌ ಹುಸೇನ್‌ ಸ್ಯಾಂಟೋ ಅವರ ವಿಕೆಟ್‌ ಔಟ್‌ ಮಾಡಿದ ಭಾರತದ ರವಿಚಂದ್ರನ್‌ ಅಶ್ವಿನ್‌ (Ravichandran Ashwin) ಅವರು ಏಷ್ಯಾದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಸ್ಪಿನ್‌ ದಿಗ್ಗಜ ಅನಿಲ್‌ ಕಂಬ್ಳೆಯನ್ನು ಹಿಂದಿಕ್ಕಿದ್ದಾರೆ. ಆರ್‌ ಅಶ್ವಿನ್‌ ಎಸೆದ 29ನೇ ಓವರ್‌ನ ಕೊನೆಯ ಎಸೆತವನ್ನು ಅರಿಯುವಲ್ಲಿ ವಿಫಲರಾದ ಸ್ಯಾಂಟೋ ಚೆಂಡನ್ನು ಪ್ಯಾಡ್‌ ಮೇಲೆ ತಾಗಿಸಿಕೊಂಡರು. ಆ ಮೂಲಕ ಎಲ್‌ಬಿಡಬ್ಲ್ಯು ಔಟ್‌ಗೆ ತುತ್ತಾದರು. ಇದರೊಂದಿಗೆ ಅಶ್ವಿನ್‌ ಅವರು ಏಷ್ಯಾ ನೆಲದಲ್ಲಿ 420 ಟೆಸ್ಟ್‌ ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ 419 ವಿಕೆಟ್‌ಗಳನ್ನು ಕಬಳಿಸಿದ್ದ ಸ್ಪಿನ್ ದಿಗ್ಗಜ ಅನಿಲ್‌ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ.

  • ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ರಾಜಕೀಯ ಪ್ರೇರಿತ: ಭಾರತದ ವಿರುದ್ಧವೇ ಪ್ರಶ್ನೆ ಎತ್ತಿದ ಯೂನಸ್

    ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ರಾಜಕೀಯ ಪ್ರೇರಿತ: ಭಾರತದ ವಿರುದ್ಧವೇ ಪ್ರಶ್ನೆ ಎತ್ತಿದ ಯೂನಸ್

    ಢಾಕಾ: ದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಅತಿ ರಂಜನೆಗೊಳಿಸಲಾಗಿದೆ. ಬಾಂಗ್ಲಾದಲ್ಲಿ (Bangladesh) ಹಿಂದೂಗಳ ಮೇಲಿನ ಹಿಂಸಾತ್ಮಕ ದಾಳಿ ಕೋಮುವಾದಕ್ಕಿಂತಲೂ ಹೆಚ್ಚು ರಾಜಕೀಯ ಪ್ರೇರಿತವಾಗಿದೆ ಎಂದು ಬಾಂಗ್ಲಾ ಸರ್ಕಾರದ ಸಲಹೆಗಾರ ಮುಹಮ್ಮದ್ ಯೂನಸ್ (Muhammad Yunus) ಹೇಳಿಕೆ ನೀಡಿದ್ದಾರೆ.

    ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದಾಳಿಯ ಘಟನೆಗಳನ್ನು ಭಾರತ (India) ಬಿಂಬಿಸಿದ ರೀತಿಯನ್ನು ಯೂನಸ್ ಪ್ರಶ್ನಿಸಿದ್ದಾರೆ. ಈ ಬಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಹಿಂದೂಗಳ ಮೇಲಿನ ದಾಳಿ ಒಂದು ರಾಜಕೀಯ ಪ್ರೇರಿತವಾಗಿದೆ. ಇಲ್ಲಿನ ಹಿಂದೂಗಳು ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ಆದ್ದರಿಂದ ಈ ದೌರ್ಜನ್ಯ ಸಂಭವಿಸುತ್ತಿದೆ ಎಂದರು. ಇದನ್ನೂ ಓದಿ: ದರ್ಶನ್‌ ನೋಡಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿ

    ಭಾರತದ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ನಾನು ಇದನ್ನು ಮೋದಿಯವರಿಗೂ (Narendra Modi) ಹೇಳಿದ್ದೇನೆ. ಈ ಸಮಸ್ಯೆ ಹಲವಾರು ಆಯಾಮಗಳನ್ನು ಹೊಂದಿದೆ. ಹಸೀನಾ ಮತ್ತು ಅವಾಮಿ ಲೀಗ್‌ನ ದುಷ್ಕ್ರತ್ಯಗಳ ನಂತರ ದೇಶವು ಕ್ರಾಂತಿಯನ್ನು ಎದುರಿಸಿತು. ಈ ವೇಳೆ ಅವರೊಂದಿಗೆ ಇದ್ದವರು ಕೂಡ ದಾಳಿಗಳನ್ನು ಎದುರಿಸಿದರು ಎಂದು ಹೇಳಿದರು. ಇದನ್ನೂ ಓದಿ: ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ ಪ್ರಕರಣ; ಎಸ್‌ಡಿಪಿಐ ಕೇಳಿ ಈ ಸರ್ಕಾರ ನಡೀತಿದ್ಯಾ? – ಛಲವಾದಿ ಕಿಡಿ

    ಆಗಸ್ಟ್ 5ರ ನಂತರ ಮಾಜಿ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಿಗೊಳಿಸಲಾಯಿತು. ನಂತರ ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಪ್ರಾರಂಭಗೊಂಡಿದೆ. ದೇವಾಲಯಗಳು ಹಾಗೂ ಅಂಗಡಿಗಳನ್ನು ಧ್ವಂಸಗೊಳಿಸಲಾಯಿತು. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯಲ್ಲಿ ಭ್ರಷ್ಟಾಚಾರ- ಸಮಗ್ರ ಅಧ್ಯಯನ ವರದಿ ಪಡೆದು ಮುಂದುವರೆಯಿರಿ: ಸಿಎಂಗೆ ಸಿ.ಟಿ.ರವಿ ಆಗ್ರಹ

    ಈಗ ಅವಾಮಿ ಲೀಗ್‌ನ ಕಾರ್ಯಕರ್ತರನ್ನು ಹೊಡೆಯುವಾಗ ಬಾಂಗ್ಲಾದಲ್ಲಿ ಹಿಂದೂಗಳು ಎಂದರೆ ಅವಾಮಿ ಲೀಗ್‌ನ ಬೆಂಬಲಿಗರು ಎಂಬ ಗ್ರಹಿಕೆಯಿಂದ ಈ ದೌರ್ಜನ್ಯ ನಡೆಯುತ್ತಿದೆ. ನಡೆಯುವುದು ಸರಿ ಎಂದು ನಾನು ಹೇಳುತ್ತಿಲ್ಲ. ಆದರೆ ಅದನ್ನೇ ನೆಪವಾಗಿ ಇಟ್ಟುಕೊಂಡು ಆಸ್ತಿಯನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಎರಡು ಲೀಗ್‌ಗಳ ನಡುವೆ ವ್ಯತ್ಯಾಸವೇನಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಶಿಕ್ಷಕರ ಸಮಸ್ಯೆಗೆ ಶೀಘ್ರವೇ ಪರಿಹಾರ: ಸಿದ್ದರಾಮಯ್ಯ

    ಇದು ರಾಜಕೀಯವೇ ಹೊರತು ಕೋಮುವಾದವಲ್ಲ. ಭಾರತ ಇದನ್ನು ದೊಡ್ಡ ರೀತಿಯಲ್ಲಿ ಪ್ರಚಾರ ಮಾಡುತ್ತಿದೆ. ನಾವು ಏನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಲಿಲ್ಲ. ನಾವು ಎಲ್ಲವನ್ನೂ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: Canada | ಅಲ್ಪ ಮತಕ್ಕೆ ಕುಸಿದ ಜಸ್ಟಿನ್‌ ಟ್ರುಡೊ ಸರ್ಕಾರ

  • ಗ್ಯಾಂಗ್ ರೇಪ್ ಪ್ರಕರಣ – ಯುವತಿಯಿಂದ ಸ್ಫೋಟಕ ಮಾಹಿತಿ ಬಹಿರಂಗ

    ಗ್ಯಾಂಗ್ ರೇಪ್ ಪ್ರಕರಣ – ಯುವತಿಯಿಂದ ಸ್ಫೋಟಕ ಮಾಹಿತಿ ಬಹಿರಂಗ

    ಬೆಂಗಳೂರು: ಬಾಂಗ್ಲಾದೇಶ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪೊಲೀಸ್ ತನಿಖೆ ಮುಂದುವರೆಯುತ್ತಿದೆ. ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಗೆ ಯುವತಿಯನ್ನು ಕರೆದೊಯ್ದು ಸಿಆರ್‍ಪಿಸಿ 161 ಅಡಿ ಹೇಳಿಕೆ ದಾಖಲಿಸಲಾಗಿದೆ. 161 ಹೇಳಿಕೆಯಲ್ಲಿ ಯುವತಿ ಕೆಲವೊಂದು ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾಳೆ.

    ಯುವತಿ ಪೊಲೀಸರ ಮುಂದೆ ಕೃತ್ಯ ನಡೆದ ಮರುದಿನವೇ ನಾನು ಕೇರಳಕ್ಕೆ ಹೋಗಿದ್ದೆ ಎಂದು ಯವತಿ ತಿಳಿಸಿದ್ದಾಳೆ. ಬಾಯ್ ಫ್ರೆಂಡ್‍ಗೆ ಕರೆ ಮಾಡಿ ಘಟನೆ ಬಗ್ಗೆ ಹೇಳಿದಾಗ ಬೆಂಗಳೂರಿನಲ್ಲಿ ಯಾರ ಜೊತೆಗೂ ಇರಬೇಡ ಕೇರಳಕ್ಕೆ ಬಾ ಎಂದು ಹೇಳಿದ ಹಿನ್ನೆಲೆಯಲ್ಲಿ ನಾನು ಕೇರಳಕ್ಕೆ ತೆರಳಿದ್ದೆ ಎಂದಿದ್ದಾಳೆ. ಇದನ್ನೂ ಓದಿ:  ವಿಕೃತಿ ಮೆರೆದ ಮರುದಿನವೇ ಪೊಲೀಸ್ ಠಾಣೆಗೆ ಹೋಗಿತ್ತು ಗ್ಯಾಂಗ್ ರೇಪ್ ಗ್ಯಾಂಗ್

    ಆರೋಪಿಗಳ ಭಯದಿಂದ ಬೆಂಗಳೂರು ಬಿಟ್ಟು ಕೇರಳದಲ್ಲಿ ಬಾಯ್ ಫ್ರೆಂಡ್ ಜೊತೆಗೆ ನಾನು ವಾಸವಾಗಿದ್ದು, ತನಗೆ ಕುಟುಂಬಸ್ಥರಿಲ್ಲ, ಪೋಷಕರಿಲ್ಲ. ಈ ಹಿಂದೆ ದುಬೈನಲ್ಲಿ ಕೆಲಸ ಮಾಡುತ್ತಿದ್ದೆ. ಡ್ಯಾನ್ಸರ್ ಸಹ ಆಗಿದ್ದೆ. ಆ ಬಳಿಕ ಆರೋಪಿಗಳ ಸಂಪರ್ಕ ಬೆಳೆದು ಢಾಕಾದಿಂದ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾಳೆ.

    ನನಗೆ ಹಣಕಾಸಿನ ವಿಚಾರವಾಗಿಯೇ ದೌರ್ಜನ್ಯ ಮಾಡಲಾಗಿದೆ. ಈ ಘಟನೆಯಲ್ಲಿ ಮತ್ತೋರ್ವ ಯುವತಿ ಸಹ ಇರುವುದಾಗಿ ಸಂತ್ರಸ್ತ ಯುವತಿ ಹೇಳಿಕೆ ನೀಡಿದ್ದು, ಆಕೆಗಾಗಿ ಇದೀಗ ಪೊಲೀಸರ ತಂಡ ಹುಡುಕಾಟ ಆರಂಭಿಸಿದೆ. ಜೊತೆಗೆ ಸಂಪರ್ಕದಲ್ಲಿದ್ದ ಸ್ನೇಹಿತರ ತೀವ್ರ ವಿಚಾರಣೆ ಸಹ ನಡೆಸಲಾಗುತ್ತಿದೆ. ಸಂತ್ರಸ್ತ ಯುವತಿಯ ಕೆಲವು ಹೇಳಿಕೆ ಅಸ್ಪಷ್ಟದಿಂದ ಕೂಡಿದ್ದು, ಯುವತಿ ಬಳಿ ಯಾವುದೇ ದಾಖಲೆ ಪತ್ತೆಯಾಗಿಲ್ಲ. ಪ್ರಕರಣದಲ್ಲಿ ಇದುವರೆಗಿನ ತನಿಖೆಯಲ್ಲಿ ಪ್ರಾಥಮಿಕ ಮಾಹಿತಿ ಪಡೆದಿರೋ ಪೊಲೀಸರ ತಂಡ ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರೆಸಿದೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ – ಕೇರಳದಿಂದ ಯುವತಿಯನ್ನು ಬೆಂಗ್ಳೂರಿಗೆ ಕರೆತಂದ ಪೊಲೀಸರು

    ಏನಿದು ಪ್ರಕರಣ?
    ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟೆಲ್ ಇರಿಸಿ ಕಾಮುಕರು ವಿಕೃತಿ ಮರೆದಿದ್ದಾರೆ. ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ವರು ಕಾಮುಕರಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಅತ್ಯಾಚಾರ ಪ್ರಕರಣ- ಕಾಮುಕರ ಕಾಲಿಗೆ ಗುಂಡು ಹೊಡೆದ ಪೊಲೀಸರು

    ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳು. ಆರೋಪಿಗಳು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸಂತ್ರಸ್ಥೆ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ವಾಸವಾಗಿದ್ದರು. ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಯನ್ನು ಕಿರಾತಕರು ವೀಡಿಯೋ ಮಾಡಿದ್ದಾರೆ. ಯುವತಿಯ ಮೇಲೆ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

    ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಅತ್ಯಾಚಾರದ ವೀಡಿಯೋ ವೈರಲ್ ಆಗಿತ್ತು. ಅಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಅಸ್ಸಾಂ ರಾಜ್ಯದ ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ವೀಡಿಯೋದಲ್ಲಿ ಬಾಂಗ್ಲಾ ಪ್ರಜೆಗಳು ಭಾಗಿಯಾಗಿದ್ದರಿಂದ ಅಲ್ಲಿನ ಪೊಲೀಸರಿಗೂ ಮಾಹಿತಿ ರವಾನಿಸಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ತೆಯ ಕುಟುಂಬಸ್ಥರನ್ನ ಪತ್ತೆ ಮಾಡಿದ್ದಾರೆ. ಆ ನಂತರ ಘಟನೆ ಬೆಂಗಳೂರಿನಲ್ಲಿ ನಡೆದಿರೋದು ಬಗ್ಗೆ ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗ್ಳೂರಿನಲ್ಲೊಂದು ನಿರ್ಭಯಾ ಪ್ರಕರಣ – ಅತ್ಯಾಚಾರಗೈದು ಗುಪ್ತಾಂಗಕ್ಕೆ ಬಾಟಲ್ ಇರಿಸಿ ವಿಕೃತಿ!

  • ರೇವಣ್ಣ ಹೇಳಿದಾಗೇ ಕೇಳಲು ನಾನು ಬಾಂಗ್ಲಾದಿಂದ ಬಂದಿಲ್ಲ: ಪ್ರೀತಂಗೌಡ

    ರೇವಣ್ಣ ಹೇಳಿದಾಗೇ ಕೇಳಲು ನಾನು ಬಾಂಗ್ಲಾದಿಂದ ಬಂದಿಲ್ಲ: ಪ್ರೀತಂಗೌಡ

    ಹಾಸನ: ರೇವಣ್ಣ ಹೇಳಿದ ಹಾಗೇ ಕೇಳಿಕೊಂಡು ಕುಳಿತುಕೊಳ್ಳುವುದಕ್ಕೆ ನಾನು ಬಾಂಗ್ಲಾ ಹಾಗೂ ನೇಪಾಳದಿಂದ ಬಂದಿಲ್ಲ ಶಾಸಕ ಪ್ರೀತಂಗೌಡ ಮಾಜಿ ಸಚಿವ ರೇವಣ್ಣ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಈ ಹಿಂದೆ ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ವಿತರಿಸಿದ್ದ ಶಾಸಕ ಪ್ರೀತಂಗೌಡ ಅದರಲ್ಲಿ ತಮ್ಮ ಫೋಟೋ ಹಾಕಿಸಿಕೊಂಡಿದ್ದರು. ಈ ಬಗ್ಗೆ ಆಕ್ರೋಶ ಹೊರಹಾಕಿದ್ದ ಮಾಜಿ ಸಚಿವ ರೇವಣ್ಣ ಶಾಸಕ ಪ್ರೀತಂಗೌಡ ಫೋಟೋ ತೆಗೆಯುವಂತೆ ಆಗ್ರಹಿಸಿದ್ದರು. ಅಷ್ಟೇ ಅಲ್ಲದೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ಗುತ್ತಿಗೆದಾರರ ಹಣ ಬಿಡುಗಡೆಯಾಗುತ್ತಿಲ್ಲ ಎಂದು ರೇವಣ್ಣ ಆರೋಪ ಮಾಡಿದ್ದರು.

    ರೇವಣ್ಣ ಎಲ್ಲ ಆರೋಪಕ್ಕೂ ಖಾರವಾಗಿ ತಿರುಗೇಟು ನೀಡಿರುವ ಶಾಸಕ ಪ್ರೀತಂಗೌಡ, ನಾನು ಹಾಸನದಲ್ಲೇ ಹುಟ್ಟಿರುವುದು ನನಗೂ ರಾಜಕಾರಣ ಮಾಡುವುದಕ್ಕೆ ಗೊತ್ತಿದೆ. ನನ್ನ ಕ್ಷೇತ್ರದಲ್ಲಿ ನಾನು ಅಭಿವೃದ್ಧಿ ಮಾಡುವುದು ಗೊತ್ತಿದೆ. ಅವರ ಕ್ಷೇತ್ರದಲ್ಲಿ ಅವರು ಅಭಿವೃದ್ಧಿ ಮಾಡಲಿ. ಇವರನ್ನು ಬಿಟ್ಟು ಜಿಲ್ಲೆಯಲ್ಲಿ ಯಾರು ಬೆಳೆಯಬಾರದು. ಕೆಂಪು ಲೈಟ್ ಹಾಕೊಂಡು ಓಡಾಡಬಾರದು, ಅಧಿಕಾರ ಇರಲಿ ಬಿಡಲಿ ಅವರದ್ದೇ ನಡೆಯಬೇಕು ಅಂದುಕೊಂಡಿದ್ದಾರೆ ಎಂದರು.

    ಇದು ಪಾಳೇಗಾರರ ಕಾಲವಲ್ಲ, ಮೊದಲು ಇಂಥ ಮನಸ್ಥಿತಿಯಿಂದ ಹೊರ ಬರಲಿ. ಹಾಸನ ಕ್ಷೇತ್ರಕ್ಕೂ ರೇವಣ್ಣಗೂ ಸಂಬಂಧ ಏನು? ಬೇಕಾದರೇ ರೇವಣ್ಣ ಹಾಸನ ಕ್ಷೇತ್ರಕ್ಕೆ ಬಂದು ಚುನವಾಣೆಗೆ ನಿಲ್ಲಲಿ ಎಂದು ಸವಾಲು ಹಾಕಿದ ಬಿಜೆಪಿ ಶಾಸಕ ಪ್ರೀತಂಗೌಡ, ಮುಂದಿನ ದಿನಗಳಲ್ಲಿ ರೇವಣ್ಣ ಅವರ ಮನಸ್ಥಿತಿಯನ್ನು ಚೇಂಜ್ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

  • ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದ್ರೆ, ವಿರಾಟ್ ಮನುಷ್ಯನೇ ಅಲ್ಲ: ತಮೀಮ್ ಇಕ್ಬಾಲ್

    ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದ್ರೆ, ವಿರಾಟ್ ಮನುಷ್ಯನೇ ಅಲ್ಲ: ತಮೀಮ್ ಇಕ್ಬಾಲ್

    ದುಬೈ: ಭಾರತ ಕ್ರಿಕೆಟ್ ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದರೇ, ಅವರನ್ನು ಮನುಷ್ಯನ ರೂಪದಲ್ಲಿ ಕಾಣಲು ಸಾಧ್ಯವೇ ಇಲ್ಲವೆಂದು ಬಾಂಗ್ಲಾ ಓಪನಿಂಗ್ ಬ್ಯಾಟ್ಸ್‌ಮನ್ ತಮೀಮ್ ಇಕ್ಬಾಲ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಹೌದು, ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಶೈಲಿಗೆ ಕ್ರಿಕೆಟ್ ದಿಗ್ಗಜರೇ ಮಾರುಹೋಗಿದ್ದಾರೆ. ತನ್ನ ಅಗ್ರೆಸ್ಸೀವ್ ಆಟದ ಮೂಲಕ ಎಲ್ಲರನ್ನೂ ತನ್ನತ್ತ ವಿರಾಟ್ ಸೆಳೆದುಕೊಂಡಿದ್ದಾರೆ.

    ವಿರಾಟ್ ಬ್ಯಾಟಿಂಗ್ ಕುರಿತು ಪ್ರತಿಕ್ರಿಯಿಸಿರುವ ಇಕ್ಬಾಲ್, ನಾನು ಹಲವು ಬಾರಿ ವಿರಾಟ್ ಅವರ ಆಟವನ್ನು ನೋಡಿದ್ದೇನೆ. ಕೆಲವೊಮ್ಮೆ ವಿರಾಟ್ ಮನುಷ್ಯ ಅಂತ ನಮಗೆ ಅನ್ನಿಸುವುದೇ ಇಲ್ಲ. ಬ್ಯಾಟ್ ಹಿಡಿದು ಕ್ರಿಸ್‍ಗೆ ಬಂದರೆ, ನಿಜಕ್ಕೂ ಆತ ಮನುಷ್ಯನೇ ಆಗಿರುವುದಿಲ್ಲ. ಪ್ರತಿ ಬಾರಿಯೂ ಶತಕ ದಾಖಲಿಸುತ್ತಲೇ ಹೋಗುತ್ತಾರೆ ಎಂದು ಹೊಗಳಿದ್ದಾರೆ.

    ಕೊಹ್ಲಿಯವರ ಪ್ರದರ್ಶನ ಅತ್ಯಂತ ರೋಚಕವೆನಿಸುತ್ತದೆ. ಎಲ್ಲಾ ದರ್ಜೆಯ ಕ್ರಿಕೆಟ್‍ಗಳಲ್ಲೂ ಅವರೇ ನಂ.1. ಅವರಿಂದ ನಾವು ಕಲಿಯುವುದು ಸಾಕಷ್ಟು ಇದೆ. ಆತನೋರ್ವ ಅದ್ಭುತ ಆಟಗಾರ. ನಾನು ನನ್ನ 12 ವರ್ಷಗಳ ಕ್ರಿಕೆಟ್ ಬದುಕಿನಲ್ಲಿ ಸಾಕಷ್ಟು ಆಟಗಾರರೊಂದಿಗೆ ಆಡಿದ್ದೇನೆ. ಅವರೆಲ್ಲರಿಗೂ ಅವರದ್ದೇ ಆದ ಬಲವಾದ ಅಂಶಗಳನ್ನು ಹೊಂದಿದ್ದರು. ಆದರೆ ಕೊಹ್ಲಿಯವರ ರೀತಿಯಲ್ಲಿ ಯಾರನ್ನು ನೋಡಿಲ್ಲ. ಅವರ ಆಟವು ಪ್ರತಿ ಪಂದ್ಯದಲ್ಲೂ ವಿಭಿನ್ನವಾಗಿರುತ್ತದೆ. ಕೊಹ್ಲಿಯ ಎಲ್ಲಾ ಆಟಗಾರರನು ಮೀರಿಸುತ್ತಾರೆ ಎಂದು ಹೇಳಿದ್ದಾರೆ.

    ವಿರಾಟ್ ತಮ್ಮ 10,000 ರನ್ ಪೂರೈಸಲು ಕೇವಲ 81 ರನ್‍ಗಳು ಮಾತ್ರ ಬಾಕಿ ಇವೆ. ಈ ಮೊದಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ 259 ಇನ್ನಿಂಗ್ಸ್ ಗಳಲ್ಲಿ 10,000ರನ್ ಪೂರೈಸಿದ್ದರೇ, ವಿರಾಟ್ ಕೇವಲ 204 ಇನ್ನಿಂಗ್ಸ್ ಗಳಲ್ಲಿ 10 ಸಾವಿರ ರನ್‍ಗಳ ಗಡಿಗೆ ಸಮೀಪದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

    ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

    ಢಾಕಾ: ಭಾರತದ ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾರವರಿಗೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಾಂಗ್ಲಾ ಕ್ರಿಕೆಟಿಗ ಶಬ್ಬೀರ್ ರೆಹಮಾನ್‍ಗೆ ಬಾಂಗ್ಲಾ ಕ್ರಿಕೆಟ್ ಮಂಡಳಿ 6 ತಿಂಗಳ ಕಾಲ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ.

    2014 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯಬ್ ಮಲ್ಲಿಕ್ ಹಾಗೂ ಪತ್ನಿ ಸಾನಿಯಾ ಮಿರ್ಜಾ ಬಾಂಗ್ಲಾ ದೇಶಕ್ಕೆ ಪಂದ್ಯವೊಂದಕ್ಕೆ ಆಗಮಿಸಿದ್ದರು. ಈ ವೇಳೆ ಮೈದಾನವನ್ನು ಪ್ರವೇಶಿಸುತ್ತಿರುವಾಗ ಶಬ್ಬೀರ್ ರೆಹಮಾನ್ ಸಾನಿಯಾರವನ್ನು ಚುಡಾಯಿಸಿದ್ದರು. ಇದರಿಂದ ಕೋಪಗೊಂಡ ಶೋಯಬ್ ಮಲ್ಲಿಕ್ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಾಗೂ ಢಾಕಾ ಮೆಟ್ರೋ ಪೊಲೀಸ್ ಮುಖ್ಯಸ್ಥರಿಗೆ ದೂರು ನೀಡಿದ್ದರ ಬಗ್ಗೆ ಬಾಂಗ್ಲಾ ಮಾಧ್ಯಮಗಳು ವರದಿ ಪ್ರಕಟಿಸಿದ್ದವು.

    ಮೈದಾನದ ಒಳಗೂ ಹಾಗೂ ಹೊರಗಡೆ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಶಬ್ಬೀರ್ ರೆಹಮಾನ್‍ರಿಂದಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿ ತೀವ್ರ ಮುಜುಗರಕ್ಕೀಡಾಗಿತ್ತು. ಹೀಗಾಗಿ ಪ್ರಕರಣಗಳ ತನಿಖೆ ನಡೆಸಲು ಶಿಸ್ತು ಪಾಲನಾ ಸಮಿತಿಯನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ನೇಮಕ ಮಾಡಿತ್ತು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಬಾಂಗ್ಲಾ ಕ್ರಿಕೆಟ್ ಮಂಡಳಿ, ಶಬ್ಬೀರ್ ರೆಹಮಾನ್‍ಗೆ 6 ತಿಂಗಳ ಕಾಲ ಎಲ್ಲಾ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ.

    ಈ ಮೊದಲು ಸಹ ಶಬ್ಬೀರ್ ಖಾಸಗಿ ಹೋಟೆಲ್‍ಗೆ ಅನುಮತಿ ಇಲ್ಲದೆ ಮಹಿಳೆಯನ್ನು ಕರೆದುಕೊಂಡು ಬಂದು ಕೊಠಡಿಯಲ್ಲಿರಿಸಿಕೊಂಡಿದ್ದಕ್ಕೆ 6 ತಿಂಗಳು ನಿಷೇಧಕ್ಕೆ ಒಳಗಾಗಿದ್ದರು. ಇನ್ನು ಶಿಕ್ಷೆಯ ಪ್ರಮಾಣ ಮುಗಿಯದೇ ಇರುವಾಗಲೇ ಮತ್ತೊಂದು ಶಿಕ್ಷೆಗೆ ಗುರಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ವ್ಯವಸ್ಥೆ- ಡಿಸಿಎಂ ಪರಮೇಶ್ವರ್

    ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ವ್ಯವಸ್ಥೆ- ಡಿಸಿಎಂ ಪರಮೇಶ್ವರ್

    ಮಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ವ್ಯವಸ್ಥೆ ಮಾಡಲಾಗಿದೆ ಅಂತಾ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಹೇಳಿದ್ದಾರೆ.

    ನಗರದಲ್ಲಿ ಸದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾ ದೇಶಿಗರು ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಮಾಹಿತಿಯಿದೆ. ಇದಲ್ಲದೆ, ಇತರೇ ದೇಶದ ನಿವಾಸಿಗಳೂ ರಾಜ್ಯದಲ್ಲಿ ನೆಲೆಸಿದ್ದರೆ ಅವರನ್ನು ಪತ್ತೆ ಮಾಡಿ ಸಂಬಂಧಿತ ದಾಖಲೆಗಳನ್ನು ಹೊಂದಿಲ್ಲದಿದ್ದರೆ ತಕ್ಷಣವೇ ಏರ್ ಟಿಕೆಟ್ ಮಾಡಿ ಆಯಾ ದೇಶಕ್ಕೆ ಕಳಿಸ್ತಿದ್ದೇವೆ. ಈ ಬಗ್ಗೆ ಅಲ್ಲಿನ ರಾಯಭಾರ ಕಚೇರಿಗಳಿಗೂ ತಿಳಿಸಲಾಗಿದೆ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ಹಿಂದೂಗಳ ಕಡೆಗಣನೆಯೇ ಕಾಂಗ್ರೆಸ್ ಸೋಲಿಗೆ ಕಾರಣವೆಂದ ಜೆಡಿಎಸ್- ಸಚಿವ ಖಾದರ್ ತಿರುಗೇಟು

    ಇದೇ ವೇಳೆ, ಹಿಂದೂಗಳ ಕಡೆಗಣಿಸಿದ್ದರಿಂದ ಕಾಂಗ್ರೆಸ್ಸಿಗೆ ಸೋಲಾಗಿದೆ ಎಂಬ ಜೆಡಿಎಸ್ ಮುಖಂಡ ಬೋಜೇಗೌಡರ ಮಾತಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅದು ಅವರ ಅಭಿಪ್ರಾಯ ಇದ್ದಿರಬಹುದು. ನಮ್ಮ ಪಕ್ಷದ ವತಿಯಿಂದ ಮಾಡಿರುವ ಅನಾಲಿಸಿಸ್ ಬೇರೆಯದ್ದೇ ಇದೆ. ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳೋದಿಲ್ಲ. ಈ ಬಗ್ಗೆ ಈಗಾಗ್ಲೇ ಕೆಪಿಸಿಸಿ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ ಅಂದ್ರು.

    ಬೆಳಗಾವಿಯಿಂದ ಹೆದ್ದಾರಿ ಪ್ರಾಧಿಕಾರದ ಕೆಶಿಪ್ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರ ಮಾಡಿದ್ರ ಬಗ್ಗೆ ಕಾಂಗ್ರೆಸ್ ಸಚಿವರ ವಿರೋಧ ನಿಲುವಿಗೆ ಪರಮೇಶ್ವರ್ ಸಮಜಾಯಿಷಿ ನೀಡಿದ್ದಾರೆ. ಆಡಳಿತ ಕಾರಣದಿಂದ ಸ್ಥಳಾಂತರ ಮಾಡಿದ್ದಿರಬಹುದು, ಇದರಿಂದ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಮಾಡಿದಂತಾಗಲ್ಲ ಅಂತಾ ಸಮರ್ಥನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • `ಬಾಂಗ್ಲಾ’ ಆಗಲಿದೆ `ಪಶ್ಚಿಮ ಬಂಗಾಳ’ – ಹೆಸರು ಬದಲಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಶಿಫಾರಸ್ಸು

    `ಬಾಂಗ್ಲಾ’ ಆಗಲಿದೆ `ಪಶ್ಚಿಮ ಬಂಗಾಳ’ – ಹೆಸರು ಬದಲಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಶಿಫಾರಸ್ಸು

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಹೆಸರು ಬದಲಾವಣೆಗೆ ರಾಜ್ಯದ ವಿಧಾನಸಭೆಯಲ್ಲಿ ಇಂದು ಒಪ್ಪಿಗೆ ಸಿಕ್ಕಿದ್ದು, ಕೇಂದ್ರದ ಅಂತಿಮ ಸಮ್ಮತಿಗೆ ಶಿಫಾರಸ್ಸು ಮಾಡಲಾಗಿದೆ.

    ಪಶ್ಚಿಮ ಬಂಗಾಳ ಹೆಸರು ಎಲ್ಲಾ ಭಾಷೆಗಳಲ್ಲಿ ಬಾಂಗ್ಲಾ ಎಂದು ರೂಢಿಗೆ ಬರಲಿದೆ. ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಹೆಸರು ಬದಲಿಸಲು ಮುಂದಾಗಿದ್ದು, ಈ ನಡೆಗೆ ಎಲ್ಲ ಪಕ್ಷಗಳು ಬೆಂಬಲ ನೀಡಿದೆ. 1999 ರಲ್ಲೇ ಹೆಸರು ಪಶ್ಚಿಮ ಬಂಗಾಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದನ್ನು ನೆನಪು ಮಾಡಬಹುದಾಗಿದೆ.

    ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಕಳೆದ 2 ವರ್ಷಗಳ ಹಿಂದೆ ರಾಜ್ಯದ ಹೆಸರು ಬದಲಿಸುವ ಪ್ರಸ್ತಾವನೆ ಸಲ್ಲಿಸಿತ್ತು. ಈ ವೇಳೆ ಪಶ್ಚಿಮ ಬಂಗಾಳ ಹೆಸರನ್ನು ಆಂಗ್ಲ ಭಾಷೆಯಲ್ಲಿ ಬೆಂಗಾಲ್, ಹಿಂದಿಯಲ್ಲಿ ಬಂಗಾಳ ಹಾಗೂ ಬಾಂಗ್ಲಾ ಭಾಷೆಯಲ್ಲಿ ಬೆಂಗಾಳ ಎಂದು ಬದಲಿಸಲು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು. ಈ ವೇಳೆ ಕೇಂದ್ರ ಸರ್ಕಾರ, ಎಲ್ಲಾ ಭಾಷೆಗಳಲ್ಲಿ ಒಂದು ಹೆಸರು ಮಾತ್ರ ಬರುವಂತೆ ಸೂಚಿಸಿ ಎಂದು ಸಲಹೆ ನೀಡಿತ್ತು.

    ರಾಜ್ಯದ ಹೆಸರು ಬದಲಾವಣೆಗೆ ಮಮತಾ ಬ್ಯಾನರ್ಜಿ ಸರ್ಕಾರ ನಿರಂತರವಾಗಿ ಪ್ರಯತ್ನ ನಡೆಸಿತ್ತು. ಆಂಗ್ಲ ಭಾಷೆಯಲ್ಲಿ ಎಲ್ಲ ರಾಜ್ಯಗಳ ಕ್ರಮಾಂಕ ಬಂದಾಗ ವೆಸ್ಟ್ ಬೆಂಗಾಲ್ ಹೆಸರು ಕೊನೆಯಲ್ಲಿ ಪ್ರಕಟಗೊಳ್ಳುತ್ತದೆ. ಈ ಕಾರಣಕ್ಕೆ ಹೆಸರು ಬದಲಾವಣೆ ಮಾಡಲು ಮುಂದಾಗಿತ್ತು.

    ಸ್ಥಳೀಯವಾಗಿ ಸಿಗುವ ಮದ್ಯಕ್ಕೆ ಪಶ್ಚಿಮ ಬಂಗಾಳದಲ್ಲಿ ‘ಬಾಂಗ್ಲಾ’ ಎಂದು ಕರೆಯಲಾಗುತ್ತದೆ. ಹೀಗಾಗಿ ಸರ್ಕಾರ ಸೂಚಿಸಿರುವ ಹೊಸ ಹೆಸರು ಸಹ ಬೆಂಗಾಲಿ ಭಾಷಿಕರಿಗೆ ಕಷ್ಟವಾಗಲಿದೆ ಎನ್ನಲಾಗಿದೆ.