Tag: ಬಾಕ್ಸರ್

  • ಕಾಮನ್‌ವೆಲ್ತ್‌ಗೆ ತೆರಳಿದ್ದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆ – PBF

    ಕಾಮನ್‌ವೆಲ್ತ್‌ಗೆ ತೆರಳಿದ್ದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆ – PBF

    ಬರ್ಮಿಂಗ್‌ಹ್ಯಾಮ್/ಇಸ್ಲಾಮಾಬಾದ್: ಬರ್ಮಿಂಗ್‌ಹ್ಯಾಮ್‌ನಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್-2022 ಕ್ರೀಡಾಕೂಟಕ್ಕೆ ತೆರಳಿದ್ದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆಯಾಗಿದ್ದಾರೆ ಎಂದು ನ್ಯಾಷನಲ್ ಫೆಡರೇಷನ್ ಹೇಳಿದೆ.

    ಪಾಕಿಸ್ತಾನದ ಬಾಕ್ಸಿಂಗ್ ಫೆಡರೇಶನ್ (ಪಿಬಿಎಫ್) ಕಾರ್ಯದರ್ಶಿ ನಾಸಿರ್ ಟಾಂಗ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪಾಕಿಸ್ತಾನ್ ತಂಡವು ಇಸ್ಲಾಮಾಬಾದ್‌ಗೆ ತೆರಳುವ ಒಂದೆರಡು ಗಂಟೆಗಳ ಮುನ್ನ ಬಾಕ್ಸರ್‌ಗಳಾದ ಸುಲೇಮಾನ್ ಬಲೋಚ್ ಮತ್ತು ನಜೀರುಲ್ಲಾ ನಾಪತ್ತೆಯಾಗಿದ್ದಾರೆ ಎಂದು ಖಚಿತಪಡಿಸಿದೆ. ಇದನ್ನೂ ಓದಿ: ಅರುಂಧತಿ ಸಿನಿಮಾ ನೋಡಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ

    ಕಾಮನ್‌ವೆಲ್ತ್ ಕ್ರೀಡಾಕೂಟವು ಸೋಮವಾರ ಕೊನೆಗೊಂಡಿತು. ನಂತರ ಅವರು ತಂಡದೊಂದಿಗೆ ಪಾಕಿಸ್ತಾನಕ್ಕೆ ತರಳಬೇಕಿತ್ತು. ಇದೇ ವೇಳೆ ಅವರು ಕಾಣೆಯಾಗಿದ್ದಾರೆ. ಆದರೆ ಅವರ ಪಾಸ್‌ಪೋರ್ಟ್ ಹಾಗೂ ಟ್ರಾವೆಲ್‌ಗೆ ಸಂಬಂಧಿಸಿದ ದಾಖಲೆಗಳು ಪಾಕಿಸ್ತಾನ ಬಾಕ್ಸಿಂಗ್ ಫೆಡರೇಷನ್ ಅಧಿಕಾರಿಗಳ ಬಳಿಯೇ ಇವೆ ಎಂದು ಹೇಳಿದ್ದಾರೆ.

    ಸುಲೇಮಾನ್ ಮತ್ತು ನಜೀರುಲ್ಲಾ ನಾಪತ್ತೆಯಾಗಿರುವ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಯುಕೆನಲ್ಲಿರುವ ಪಾಕಿಸ್ತಾನ ಹೈಕಮಿಷನ್ ಹಾಗೂ ಲಂಡನ್‌ನಲ್ಲಿರುವ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಈ ಬಗ್ಗೆ ತನಿಖೆ ನಡೆಸಲು ಪಾಕಿಸ್ತಾನ ಒಲಿಂಪಿಕ್ ಅಸೋಸಿಯೇಷನ್ (ಪಿಒಎ) 4 ಸದಸ್ಯರ ಸಮಿತಿಯನ್ನು ರಚಿಸಿದೆ ನಾಸಿರ್ ಟಾಂಗ್ ಹೇಳಿದ್ದಾರೆ. ಇದನ್ನೂ ಓದಿ: `ಮಾರ್ಕ್ ಆ್ಯಂಟನಿ’ ಚಿತ್ರೀಕರಣದಲ್ಲಿ ನಟ ವಿಶಾಲ್‌ಗೆ ಗಂಭೀರ ಗಾಯ

    2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪಾಕಿಸ್ತಾನ ವೇಟ್ ಲಿಫ್ಟಿಂಗ್ ಹಾಗೂ ಜಾವೆಲಿನ್ ಎಸೆತದಲ್ಲಿ ಎರಡು ಚಿನ್ನ ಸೇರಿದಂತೆ 8 ಪದಕಗಳೊಂದಿಗೆ ಹೊರಹೊಮ್ಮಿತು.

    Live Tv
    [brid partner=56869869 player=32851 video=960834 autoplay=true]

  • ಗುಂಡೇಟು ತಿಂದು ಬದುಕಿದ ಬಾಕ್ಸರ್‌ಗೆ  ಒಲಿದ 3ನೇ ಒಲಿಂಪಿಕ್ಸ್ ಚಿನ್ನ

    ಗುಂಡೇಟು ತಿಂದು ಬದುಕಿದ ಬಾಕ್ಸರ್‌ಗೆ ಒಲಿದ 3ನೇ ಒಲಿಂಪಿಕ್ಸ್ ಚಿನ್ನ

    ಟೋಕಿಯೋ: ದರೋಡೆಕೋರರ ಗುಂಡೇಟು ತಿಂದು ಸಾವು ಗೆದ್ದ ಬಾಕ್ಸರ್ ಇದೀಗ ಒಲಿಂಪಿಕ್ಸ್‌ನಲ್ಲಿ ಮೂರು ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

    ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಹೆವಿವೇಟ್ ಬಾಕಿಂಗ್ಸ್ ವಿಭಾಗದಲ್ಲಿ ಸ್ಪರ್ಧಿಸಿದ ಕ್ಯೂಬಾದ ಜೂಲಿಯೊ ಲಾ ಕ್ರೂಜ್ ಸತತ ಮೂರು ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಶುಕ್ರವಾರ ನಡೆದ ಹೆವಿವೇಟ್ ವಿಭಾಗದ ಫೈನಲ್ ಕಾದಾಟದಲ್ಲಿ ರಶ್ಯದ ಮುಸ್ಲಿಮ್ ಗಾಜಿಮಗೊಡೇವ್ ವಿರುದ್ಧ 5-0 ಅಂತರದಲ್ಲಿ ಗೆದ್ದು ಚಿನ್ನಕ್ಕೆ ಕೊರಳೊಡ್ಡಿದರು.

    2014ರಲ್ಲಿ ಜೂಲಿಯೊ ಲಾ ಕ್ರೂಜ್ ದರೋಡೆಕೋರರಿಂದ ಬೆನ್ನಿನ ಭಾಗಕ್ಕೆ ಗುಂಡೇಟು ತಿಂದು ಬದುಕುಳಿದಿದ್ದರು. ಆ ಬಳಿಕ ಮತ್ತೆ ಬಾಕ್ಸಿಂಗ್ ಅಖಾಡಕ್ಕೆ ಧುಮುಕಿದ ಕ್ರೂಜ್ 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ 1 ಚಿನ್ನದ ಪದಕ ಪಡೆದಿದ್ದರು. ಇದೀಗ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೂರು ಚಿನ್ನದ ಪದಕದ ಸಾಧನೆ ಗೈದಿದ್ದಾರೆ.

    2014ರಲ್ಲಿ ನಡೆದ ಆ ಘಟನೆ ನನ್ನನ್ನು ತುಂಬಾ ಘಾಸಿಗೊಳಿಸಿತ್ತು. ಆದರು ನಾನು ವಿಶ್ವಾಸ ಕಳೆದುಕೊಳ್ಳಲಿಲ್ಲ. ಈ ಚಿನ್ನದ ಬೇಟೆ ಮುಂದಿನ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲೂ ಮುಂದುವರಿಸುವ ಕನಸು ಕಂಡಿದ್ದೇನೆ ಎಂದು ಕ್ರೂಜ್ ಸಂತಸ ಹಂಚಿಕೊಂಡಿದ್ದಾರೆ.

  • ಸೆಮಿಯಲ್ಲಿ ಲವ್ಲೀನಾಗೆ ಸೋಲು – ಭಾರತಕ್ಕೆ ಕಂಚು

    ಸೆಮಿಯಲ್ಲಿ ಲವ್ಲೀನಾಗೆ ಸೋಲು – ಭಾರತಕ್ಕೆ ಕಂಚು

    ಟೋಕಿಯೋ: ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೆಮಿಯಲ್ಲಿ ಸೋತಿದ್ದು, ಕಂಚಿನ ಪದಕವನ್ನು ಗೆದ್ದಿದ್ದಾರೆ.

    69 ಕೆಜಿ ವಿಭಾಗದಲ್ಲಿ ಟರ್ಕಿಯ ಬುಸೆನಾಜ್ ಸುರ್ ಮನೇಲಿ ವಿರುದ್ಧ ಲವ್ಲೀನಾ 0-5 ಅಂಕಗಳಿಂದ ಸೋತಿದ್ದಾರೆ. ಈ ಪಂದ್ಯ ಸೋತರೂ ಬಾಕ್ಸಿಂಗ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಎಲ್ಲ ಸ್ಪರ್ಧಿಗಳಿಗೆ ಪದಕ ನೀಡುವ ಕಾರಣ ಲವ್ಲೀನಾ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ.

    ಮೀರಾಬಾಯಿ ಚಾನು ಮತ್ತು ಪಿ.ವಿ. ಸಿಂಧು ಈಗಾಗಲೇ ಭಾರತಕ್ಕೆ ಬೆಳ್ಳಿ ಮತ್ತು ಕಂಚಿನ ಪದಕವನ್ನು ಗೆದ್ದಿದ್ದಾರೆ.

  • ಗೋಧಿ ಕೊಯ್ಲು, ರಾಶಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಫುಲ್ ಬ್ಯುಸಿ

    ಗೋಧಿ ಕೊಯ್ಲು, ರಾಶಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಫುಲ್ ಬ್ಯುಸಿ

    ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಜಗತ್ತಿನಾದ್ಯಂತ ಒಲಿಂಪಿಕ್ಸ್, ಕ್ರಿಕೆಟ್ ಸೇರಿದಂತೆ ಅನೇಕ ಟೂರ್ನಿ ಹಾಗೂ ಕ್ರೀಡಾಕೂಡಗಳು ಮುಂದೂಡಲ್ಪಟ್ಟಿವೆ ಅಥವಾ ರದ್ದುಗೊಂಡಿವೆ. ಹೀಗಾಗಿ ಆಟಗಾರರು, ಕ್ರೀಡಾಪಟುಗಳು ಮನೆಯಲ್ಲೇ ಕಾಲ ಕಳೆಯುವಂತಾಗಿದೆ. ಆದರೆ ಕೆಲ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಗೋಧಿ ಕೊಯ್ಲು ಹಾಗೂ ರಾಶಿ ಮಾಡುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.

    ಲಾಕ್‍ಡೌನ್‍ನಿಂದಾಗಿ ಕೃಷಿ ಕಾರ್ಮಿರ ಕೊರೊತೆ ಉಂಟಾಗಿ ರೈತರು ಹೆಚ್ಚಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಕೃಷಿ ಕೆಲಸದಲ್ಲಿ ನಿರತರಾಗಿದ್ದಾರೆ. ಬಾಕ್ಸರ್ ಅಮಿತ್ ಪಂಗಲ್, ಮನೋಜ್ ಕುಮಾರ್, ಮಹಿಳಾ ಹಾಕಿ ತಂಡದ ಆಟಗಾರ್ತಿ ಪೂನಂ ಮಲಿಕ್ ಅವರು ತಮ್ಮನ್ನ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

    ರಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಜಾವೆಲಿನ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ರಿಂಕು ಹುಡಾ, “9 ಎಕರೆ ಗೋಧಿಯನ್ನು ಯಂತ್ರದ ಸಹಾಯದಿಂದ ಕೊಯ್ಲು ಮಾಡಿದ್ದೇನೆ. ಇನ್ನೂ ಅರ್ಧ ಎಕರೆ ಉಳಿದಿದೆ. ಮಳೆಗೂ ಮುನ್ನವೇ ಗೋಧಿ ರಾಶಿ ಮಾಡಲಾಗುವುದು” ಎಂದು ಹೇಳಿದ್ದಾರೆ.

    ಕಳೆದ ವರ್ಷ ನಡೆದ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ದೇಶಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಮೊದಲ ಬಾಕ್ಸರ್ ಅಮಿತ್ ಪಂಗಲ್ ಅವರು ಸದ್ಯ ಹರ್ಯಾಣದ ರೋಹ್ಟಕ್‍ನ ತಮ್ಮ ಮಾನ್ಯ ಗ್ರಾಮದಲ್ಲಿದ್ದಾರೆ. ಅಲ್ಲಿ ಅವರು ಕುಟುಂಬಕ್ಕೆ ಕೃಷಿಯಲ್ಲಿ ಸಹಾಯ ಮಾಡುತ್ತಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಪಂಗಲ್, “ಯಾವಾಗಲೂ ನನ್ನ ಕುಟುಂಬಕ್ಕೆ ಕೃಷಿಯಲ್ಲಿ ಸಹಾಯ ಮಾಡುತ್ತೇನೆ. ಆದರೆ ಬಾಕ್ಸಿಂಗ್ ಕಾರಣದಿಂದಾಗಿ ಗೋಧಿ ಕೊಯ್ಲು ಮಾಡುವ ಸಮಯದಲ್ಲಿ ಹಳ್ಳಿಯಿಂದ ಹೊರಗುಳಿದಿದ್ದೆ. ಲಾಕ್‍ಡೌನ್‍ನಿಂದಾಗಿ ನಾನು ನಮ್ಮೂರಲ್ಲಿದ್ದೇನೆ. ಈಗ ಕುಟುಂಬದೊಂದಿಗೆ ಗೋಧಿ ಕೊಯ್ಲು ಮತ್ತು ಪ್ಯಾಕ್ ಮಾಡಲು ನನಗೆ ಅವಕಾಶ ಸಿಕ್ಕಿದೆ. ರೈತ ಮಗನಾಗಿ ಈ ಕೆಲಸ ಮಾಡಲು ನನಗೆ ತೃಪ್ತಿ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

    200 ಅಂತಾರಾಷ್ಟ್ರೀಯ ಹಾಕಿ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿರುವ ಹಿಸಾರ್ ಹಾಕಿ ಆಟಗಾರ್ತಿ ಪೂನಂ ಮಲಿಕ್ ಅವರು ಕೂಡ ಲಾಕ್‍ಡೌನ್‍ನಿಂದಾಗಿ ಹರ್ಯಾಣದ ತಮ್ಮ ಗ್ರಾಮ ಉಮ್ರಾದಲ್ಲಿದ್ದಾರೆ. ಕೊರೊನಾ ಭೀತಿಯಿಂದಾಗಿ ಹಾಕಿ ತರಬೇತಿ ಶಿಬಿರಗಳನ್ನು ಸಹ ಮುಂದೂಡಲಾಗಿದೆ. ಲಾಕ್‍ಡೌನ್‍ನಿಂದಾಗಿ ಕಾರ್ಮಿಕರು ಗೋಧಿ ಕೊಯ್ಲು ಮಾಡುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪೂನಂ ಕುಟುಂಬ ಸದಸ್ಯರೊಂದಿಗೆ ತಮ್ಮ ಜಮೀನಿಗೆ ಹೋಗಿ ಗೋಧಿಯನ್ನು ಕೊಯ್ಲು ಮಾಡಿದ್ದಾರೆ. ವಿಶೇಷವೆಂದರೆ ಅವರು ಮೊದಲ ಬಾರಿಗೆ ಗೋಧಿ ಕೊಯ್ಲು ಮಾಡಿದ್ದಾರೆ.

    ನಾಲ್ಕು ದಿನ ಗೋಧಿ ಕೊಯ್ಲು ಮಾಡಲು ತನ್ನ ಕುಟುಂಬ ಸದಸ್ಯರೊಂದಿಗೆ ಹೋಗಿದ್ದಾಗಿ ಪೂನಂ ಮಲಿಕ್ ಹೇಳಿದ್ದಾರೆ. ಅವರು ಮತ್ತು ಕುಟುಂಬದ ಇತರ ನಾಲ್ಕು ಸದಸ್ಯರೊಂದಿಗೆ ನಾಲ್ಕು ದಿನಗಳಲ್ಲಿ ಒಂದು ಎಕರೆ ಗೋಧಿ ಕೊಯ್ಲು ಮಾಡುವ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಅವರು ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಗೋಧಿ ಕೊಯ್ಲು ಮಾಡಲು ಹೊಲಕ್ಕೆ ಹೋಗುತ್ತಿದ್ದರು.

    ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ಬಾಕ್ಸಿಂಗ್ ತಂಡವನ್ನು ಪ್ರತಿನಿಧಿಸಿರುವ ಮನೋಜ್ ಕುಮಾರ್ ಕೂಡ ಗೋಧಿ ಕೊಯ್ಲು ಮಾಡಿದ್ದಾರೆ. ಅವರು ಬಾಲ್ಯದಲ್ಲಿ ಹಿರಿಯರು ಗೋಧಿ ಕೊಯ್ಲು ಮಾಡುವುದನ್ನು ನೋಡಿದ್ದರು. ಅನೇಕ ಬಾರಿ ಸುಮ್ಮನೆ ಗೋಧಿ ಕೊಯ್ಲು ಮಾಡಲು ಅವರೊಂದಿಗೆ ಹೋಗುತ್ತಿದ್ದರು. ಆದರೆ ಲಾಕ್‍ಡೌನ್‍ನಿಂದಾಗಿ ಕಾರ್ಮಿಕರು ಸಿಗದೆ ಇರುವುದಿಂದ ಮನೋಜ್ ಕುಮಾರ್ ಜಮೀನಿಗೆ ಹೋಗಿ ಗೋಧಿ ಕೊಯ್ಲು ಮಾಡಿದ್ದಾರೆ.

  • ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

    ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

    – ಏರ್ ಅಂಬುಲೆನ್ಸ್ ಮೂಲಕ ದೆಹಲಿಗೆ ಶಿಫ್ಟ್‌

    ಇಂಫಾಲ್: ಪಿತ್ತಜನಕಾಂಗದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಭಾರತೀಯ ಬಾಕ್ಸರ್ ಡಿಂಕೊ ಸಿಂಗ್ ಅವರನ್ನು ಸ್ಪೈಸ್‍ ಜೆಟ್ ಏರ್ ಅಂಬುಲೆಂನ್ಸ್ ಮೂಲಕ ದೆಹಲಿಯ ಆಸ್ಪತ್ರೆಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ.

    ಡಿಂಕೊ ಸಿಂಗ್ ಭಾರತದ ಪರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಣಿಪುರದ ರಾಜಧಾನಿ ಇಂಫಾಲ್‍ನಲ್ಲಿ ವಾಸಿಸುತ್ತಿರುವ 41 ವರ್ಷದ ಡಿಂಕೊ ಅವರಿಗೆ ಲಾಕ್‍ಡೌನ್‍ನಿಂದಾಗಿ ವಿಕಿರಣ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆಗಾಗಿ ಅವರನ್ನು ಸ್ಪೈಸ್ ಜೆಟ್‍ನ ಏರ್ ಅಂಬುಲೆನ್ಸ್ ಮೂಲಕ ಇಂಫಾಲ್‍ನಿಂದ ದೆಹಲಿಗೆ ಕರೆತರಲು ಸಿದ್ಧತೆ ನಡೆದಿದೆ.

    ಬಾಕ್ಸರ್ ಡಿಂಕೊ ಸಿಂಗ್ ಅವರಿಗೆ ಸ್ಪೈಸ್ ಜೆಟ್ ಸಂಸ್ಥೆಯು ಉಚಿತವಾಗಿ ಏರ್ ಅಂಬುಲೆನ್ಸ್ ಸೇವೆ ನೀಡಲು ಮುಂದೆ ಬಂದಿದೆ. ಈ ನಿರ್ಧಾರವನ್ನು ಸ್ಪೈಸ್‍ಜೆಟ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಪ್ರಕಟಿಸಿದ್ದಾರೆ. ಅಜಯ್ ಸಿಂಗ್ ಅವರು ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾದ (ಬಿಎಫ್‍ಐ) ಅಧ್ಯಕ್ಷರೂ ಆಗಿದ್ದಾರೆ.

    ಹಿರಿಯ ಬಾಕ್ಸರ್ ಗಳಾದ ವಿಜೇಂದರ್ ಸಿಂಗ್ ಮತ್ತು ಭಾರತದ ಮನೋಜ್ ಕುಮಾರ್ ಕೂಡ ಅರ್ಜುನ್ ಮತ್ತು ಪದ್ಮಾ ಪ್ರಶಸ್ತಿ ಪುರಸ್ಕೃತ ಡಿಂಕೊ ಸಿಂಗ್ ಅವರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುತ್ತಿದ್ದಾರೆ. ”ನಾವು ವಾಟ್ಸಾಪ್ ಗ್ರೂಪ್ ‘ಹಮ್ ಮೇನ್ ಹೈ ದಮ್’ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದೇವೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಗ್ರಹಿಸಿದ್ದೇವೆ. ಅದು ನೇರವಾಗಿ ಡಿಂಕೊ ಅವರ ಖಾತೆಗೆ ಹೋಗುತ್ತದೆ” ಎಂದು ವಿಜೇಂದರ್ ಹೇಳಿದ್ದಾರೆ.

    ಡಿಂಕೊ ಸಿಂಗ್ ಅವರನ್ನು ಏಪ್ರಿಲ್ 25ರಂದು ದೆಹಲಿಗೆ ಕರೆತರಲಾಗುವುದು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಜಯ್ ಸಿಂಗ್, ”ಲಾಕ್‍ಡೌನ್‍ನಿಂದಾಗಿ ಡಿಂಕೊ ಸಿಂಗ್ ಅವರ ಚಿಕಿತ್ಸೆ ಮಧ್ಯದಲ್ಲಿ ನಿಂತುಹೋಯಿತು. ಇದು ನಿಜವಾಗಿಯೂ ದುರದೃಷ್ಟಕರ. ನಮ್ಮ ದೇಶದ ವೀರನಿಗೆ ಏರ್ ಅಂಬುಲೆನ್ಸ್ ಸೇವೆಯನ್ನು ಒದಗಿಸುವುದು ಮತ್ತು ಅವರನ್ನು ದೆಹಲಿಗೆ ಕರೆತರುವುದು ಸ್ಪೈಸ್‍ಜೆಟ್‍ಗೆ ಒಂದು ಭಾಗ್ಯವಾಗಿದೆ. ಭಾರತೀಯ ಬಾಕ್ಸರ್ ಡಿಂಕೊ ಅನೇಕ ದೊಡ್ಡಮಟ್ಟದ ಪಂದ್ಯಗಳನ್ನು ಗೆದ್ದಿದ್ದಾರೆ. ಈ ಯುದ್ಧದಲ್ಲಿಯೂ ಅವರು ಗೆಲ್ಲಬೇಕು ಎಂಬುದು ನಮ್ಮ ಪ್ರಾರ್ಥನೆ” ಎಂದು ತಿಳಿಸಿದ್ದಾರೆ.

    ಈ ಹಿಂದೆ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಮಣಿಪುರ ಸರ್ಕಾರದೊಂದಿಗೆ ಮಾತನಾಡಿ ಡಿಂಕೊ ಸಿಂಗ್ ಅವರ ಚಿಕಿತ್ಸೆಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಿದ್ದರು. 1998ರಲ್ಲಿ ಬ್ಯಾಂಕಾಕ್‍ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಬಾಂಟಮ್‍ವೈಟ್ ಬಾಕ್ಸರ್ ಡಿಂಕೊ ಸಿಂಗ್ ಚಿನ್ನದ ಪದಕ ಗೆದ್ದರು.

  • ಬಾಕ್ಸರ್‌ಗಾಗಿ ತೆಲುಗಿಗೆ ಹೊರಟ ಉಪೇಂದ್ರ

    ಬಾಕ್ಸರ್‌ಗಾಗಿ ತೆಲುಗಿಗೆ ಹೊರಟ ಉಪೇಂದ್ರ

    ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರು ಬಾಕ್ಸರ್ ಎಂಬ ತೆಲುಗಿನ ಚಿತ್ರಕ್ಕಾಗಿ ಟಾಲಿವುಡ್ ಮತ್ತೆ ರೀ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಟಾಲಿವುಡ್‍ನಲ್ಲಿ ಈ ಹಿಂದೆ ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಉಪ್ಪಿ, 2015 ರಲ್ಲಿ ತೆರೆಕಂಡಿದ್ದ ಅಲ್ಲು ಅರ್ಜುನ್ ನಟನೆಯ ‘ಸನ್ ಆಫ್ ಸತ್ಯಮೂರ್ತಿ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದಾದ ನಂತರ ಯಾವುದೇ ತೆಲುಗು ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಈಗ ವರುಣ್ ತೇಜ್ ಅಭಿನಯದ ಬಾಕ್ಸರ್ ಚಿತ್ರದಲ್ಲಿ ಉಪ್ಪಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತದೆ.

    ಕಬ್ಜ, ಬುದ್ಧಿವಂತ-2, ಹೋಂ ಮಿನಿಸ್ಟರ್ ಮತ್ತು ರವಿಚಂದ್ರ ಎಂಬ ಸಾಲು ಸಾಲು ಚಿತ್ರದಲ್ಲಿ ಬ್ಯುಸಿ ಇರುವ ಉಪ್ಪಿ, ತೆಲುಗಿನಲ್ಲಿ ಹೊಸ ನಿರ್ದೇಶಕ ಕಿರಣ್ ಕೊರ್ರಪಟ್ಟಿ ನಿರ್ದೇಶನದ ಬಾಕ್ಸರ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಈಗಾಗಲೇ ಚಿತ್ರತಂಡ ಉಪೇಂದ್ರ ಅವರನ್ನು ಭೇಟಿಯಾಗಿ ಮಾತುಕತೆ ಮಾಡಿದೆ ಎಂದು ಹೇಳಲಾಗಿದೆ. ಎಲ್ಲ ಅಂದುಕೊಂಡಂತೆ ಅದರೆ ಉಪ್ಪಿ ತೆಲುಗಿನಲ್ಲಿ ಮತ್ತೆ ಅಭಿನಯಿಸಲಿದ್ದಾರೆ.

    ಈ ಬಾಕ್ಸರ್ ಚಿತ್ರಕ್ಕೆ ತೆಲುಗಿನ ವರುಣ್ ತೇಜ್ ನಾಯಕರಾಗಿದ್ದು, ಈ ಚಿತ್ರದಲ್ಲಿ ಅವರು ಕಿಕ್ ಬಾಕ್ಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಬಹುಮುಖ್ಯವಾದ ಅತಿಥಿ ಪಾತ್ರವಿದ್ದು, ಅದಕ್ಕೆ ದಕ್ಷಿಣ ಭಾರತದಲ್ಲಿ ಸ್ಟಾರ್ ಹೀರೋ ಒಬ್ಬರ ಆಗತ್ಯವಿದೆ. ಈ ಕಾರಣಕ್ಕಾಗಿ ಚಿತ್ರತಂಡ ಉಪ್ಪಿ ಅವರನ್ನು ಸಂಪರ್ಕಿಸಿದೆ. ಉಪೇಂದ್ರ ಅವರು ಈ ಹಿಂದೆ ಸತ್ಯಂ, ಟಾಸ್, ಒಕೆ ಮಾಟಾ ಹೀಗೆ ಹಲವು ತೆಲಗು ಚಿತ್ರದಲ್ಲಿ ನಟಿಸಿದ್ದರು.

    ಸದ್ಯ ಉಪ್ಪಿ ಅವರು ಕಬ್ಜ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಆರ್.ಚಂದ್ರು ಇದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಈ ಮೂಲಕ ಐ ಲವ್ ಯು ಚಿತ್ರದ ಬಳಿಕ ಮತ್ತೆ ಉಪೇಂದ್ರ ಹಾಗೂ ಆರ್.ಚಂದ್ರು ಜೋಡಿ ಒಂದಾಗುತ್ತಿದೆ. ಚಿತ್ರ ಭೂಗತ ಲೋಕದ ಕಥೆಯನ್ನು ಒಳಗೊಂಡಿದೆ. ಬರೀ ಲಾಂಗು, ಮಚ್ಚು ಮಾತ್ರವಲ್ಲದೆ ಲವ್ ಹಾಗೂ ಸೆಂಟಿಮೆಂಟ್‍ಗಳನ್ನೂ ಒಳಗೊಂಡಿದೆಯಂತೆ. ಅಲ್ಲದೆ ಉಪೇಂದ್ರ ನಿರ್ದೇಶನದ ಓಂ ಚಿತ್ರಕ್ಕೆ ಇದನ್ನು ಹೋಲಿಸಲಾಗುತ್ತಿದೆ.

  • ಮದುವೆ ನಿರಾಕರಿಸಿದ ಬಾಕ್ಸಿಂಗ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ

    ಮದುವೆ ನಿರಾಕರಿಸಿದ ಬಾಕ್ಸಿಂಗ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ

    ಚಂಡೀಗಢ್: ಮದುವೆ ಆಗಲು ನಿರಾಕರಿಸಿದ್ದಕ್ಕೆ ತರಬೇತುದಾರ ಬಾಕ್ಸಿಂಗ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ಘಟನೆ ಮಂಗಳವಾರ ಹರಿಯಾಣದ ಪಟೌದಿಯಲ್ಲಿ ನಡೆದಿದೆ.

    ಸರಿತಾ(25) ಮೃತಪಟ್ಟ ಯುವತಿ. ಸರಿತಾ ಟೇಕ್ವಾಂಡೋ (ಬಾಕ್ಸರ್) ಆಟಗಾರ್ತಿಯಾಗಿದ್ದು, ಆಕೆ ಬಾಕ್ಸಿಂಗ್ ಕಲಿಯುತ್ತಿದ್ದಳು. ಸರಿತಾಗೆ ಬಾಕ್ಸಿಂಗ್ ಹೇಳಿಕೊಡುತ್ತಿದ್ದ ತರಬೇತಿದಾರ ಸೋಮ್‍ಬೀರ್ ಆಕೆಯನ್ನು ಪ್ರೀತಿಸಲು ಶುರು ಮಾಡಿದ್ದನು.

    ಸೋಮ್‍ಬೀರ್ ಮದುವೆಯಾಗುವಂತೆ ಸರಿತಾ ಬಳಿ ಕೇಳಿಕೊಂಡಿದ್ದಾನೆ. ಆದರೆ ಸರಿತಾ ಇದಕ್ಕೆ ಒಪ್ಪಲಿಲ್ಲ. ಇದರಿಂದ ಕೋಪಗೊಂಡ ತರಬೇತುದಾರ ಆಕೆಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಅಲ್ಲದೆ ಆಕೆಯ ತಾಯಿಗೆ ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ.

    ರಾಜ್ಯಮಟ್ಟದ ಕುಸ್ತಿ ಆಟಗಾರನಾಗಿರುವ ಸೋಮ್‍ಬೀರ್ ಆಗಾಗ ಸರಿತಾ ಮನೆಗೆ ಭೇಟಿ ನೀಡುತ್ತಿದ್ದನು. ಸೋಮ್‍ಬೀರ್ ವಿರುದ್ಧ ಬಿಲಾಸ್‍ಪುರ್ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಆತ ಯಾವಾಗಲೂ ನಶೆಯಲ್ಲಿ ತೇಲಾಡುತ್ತಿದ್ದನು.

    ಸೋಮ್‍ಬೀರ್, ಸರಿತಾಳನ್ನು ಮದುವೆ ಆಗಲು ಇಚ್ಛಿಸಿದ್ದನು. ಆದರೆ ಸರಿತಾ, ಸೋಮ್‍ಬೀರ್ ನಶೆ ಮಾಡುವುದನ್ನು ನೋಡಿದ್ದಳು. ಹಾಗಾಗಿ ಆಕೆ ಸೋಮ್‍ಬೀರ್ ನನ್ನು ಮದುವೆ ಆಗಲು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಸೋಮ್‍ಬೀರ್ ಆಕೆಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ.

  • ಅಭ್ಯಾಸದ ವೇಳೆ ಕುಸಿದು ಮೃತಪಟ್ಟ 20 ವರ್ಷದ ಬಾಕ್ಸರ್

    ಅಭ್ಯಾಸದ ವೇಳೆ ಕುಸಿದು ಮೃತಪಟ್ಟ 20 ವರ್ಷದ ಬಾಕ್ಸರ್

    ಕೋಲ್ಕತ್ತಾ: ಅಭ್ಯಾಸದ ವೇಳೆ 20 ವರ್ಷದ ಬಾಕ್ಸರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬಾವಾನಿಪುರದಲ್ಲಿ ನಡೆದಿದೆ.

    ಜ್ಯೋತಿ ಪ್ರಧಾನ್ ಮೃತಪಟ್ಟ ಬಾಕ್ಸರ್. ಜ್ಯೋತಿ ಕಿಡ್ಡರ್ ಪುರ ಪ್ರದೇಶದ ಭೂಕೈಲಾಶ್‍ನ ನಿವಾಸಿಯಾಗಿದ್ದು, ಜೋಗೇಶ್ ಚಂದ್ರ ಚೌಧರಿ ಕಾನೂನು ಕಾಲೇಜಿನಲ್ಲಿ ಪದವಿ ಓದುತ್ತಿದ್ದರು. ಜ್ಯೋತಿ ರಾಷ್ಟ್ರೀಯ ಟೂರ್ನಿಮೆಂಟ್‍ನಲ್ಲಿ ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಿದ್ದರು.

    ಬುಧವಾರ ಜ್ಯೋತಿ ಭವಾನಿಪುರದ ಬಾಕ್ಸಿಂಗ್ ಅಸೋಸಿಯೇಶನ್‍ನಲ್ಲಿ ಬಾಕ್ಸಿಂಗ್ ಅಭ್ಯಾಸ ನಡೆಸುತ್ತಿದ್ದರು. ಈ ವೇಳೆ ಜ್ಯೋತಿ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಹತ್ತಿರದ ಎಸ್‍ಎಸ್‍ಕೆಎಂ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಈ ಘಟನೆ ಬಗ್ಗೆ ಹತ್ತಿರದ ಪೊಲೀಸ್ ಠಾಣೆಯ ಪೊಲೀಸರಿಗೆ ಯಾವುದೇ ದೂರು ಬಂದಿಲ್ಲ. ಸದ್ಯ ಜ್ಯೋತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ನಾವು ಈಗ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಬಳಿಕ ಸಾವಿನ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

  • ಲೋಕಸಭಾ ಚುನಾವಣೆಯಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಕಾಂಗ್ರೆಸ್ಸಿನಿಂದ ಸ್ಪರ್ಧೆ

    ಲೋಕಸಭಾ ಚುನಾವಣೆಯಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಕಾಂಗ್ರೆಸ್ಸಿನಿಂದ ಸ್ಪರ್ಧೆ

    ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿಯಿಂದ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಸ್ಪರ್ಧಿಸುತ್ತಿದ್ದಾರೆ.

    ವಿಜೇಂದರ್ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಪಕ್ಷ ಸೋಮವಾರ ಘೋಷಣೆ ಮಾಡಿದೆ. ಹೀಗಾಗಿ ಬಿಜೆಪಿಯ ರಮೇಶ್ ಬಿಧುರಿ ಹಾಗೂ ಆಮ್ ಆದ್ಮಿ ಪಕ್ಷದ ರಾಘವ್ ಚಂದ್ರ ವಿರುದ್ಧ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.

    ಈ ಬಗ್ಗೆ ವಿಜೇಂದರ್ ಕೂಡ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಪಕ್ಷ ಕೊಟ್ಟ ಅವಕಾಶ ಹಾಗೂ ಜವಾಬ್ದಾರಿಗಾಗಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

    ಟ್ವೀಟ್‍ನಲ್ಲೇನಿದೆ?
    20 ವರ್ಷಗಳ ವೃತ್ತಿಪರ ಬಾಕ್ಸಿಂಗ್‍ನಲ್ಲಿ ಸದಾ ದೇಶ ಹೆಮ್ಮೆಪಡುವಂಥ ಸಾಧನೆ ಮಾಡಿದ್ದೇನೆ. ಇದೀಗ ದೇಶದ ಜನರಿಗಾಗಿ ಕೊಡುಗೆ ಹಾಗೂ ಸೇವೆ ಸಲ್ಲಿಸಲು ಒಳ್ಳೆಯ ಸಂದರ್ಭ ಒದಗಿಬಂದಿದೆ. ಒಟ್ಟಿನಲ್ಲಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಹೊಸ ಜವಾಬ್ದಾರಿಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿಧುರಿ ಅವರು ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲುವು ತನ್ನದಾಗಿಸಿಕೊಂಡಿದ್ದರು. ದೆಹಲಿಯ 7 ಲೋಕಸಭಾ ಕ್ಷೇತ್ರಗಳಿಗೆ ಮೇ 12ರಂದು ಚುನಾವಣೆ ನಡೆಯಲಿದ್ದು, 23ಕ್ಕೆ ಫಲಿತಾಂಶ ಹೊರಬೀಳಲಿದೆ.

  • 35ನೇ ವಯಸ್ಸಿನಲ್ಲಿ 6ನೇ ಚಿನ್ನದ ಪದಕಕ್ಕೆ ಮುತ್ತಿಟ್ಟ ಮೇರಿ ಕೋಮ್

    35ನೇ ವಯಸ್ಸಿನಲ್ಲಿ 6ನೇ ಚಿನ್ನದ ಪದಕಕ್ಕೆ ಮುತ್ತಿಟ್ಟ ಮೇರಿ ಕೋಮ್

    ನವದೆಹಲಿ: ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‍ಶಿಪ್ ಪಂದ್ಯಾವಳಿಯಲ್ಲಿ ಭಾರತದ ಸ್ಟಾರ್ ಬಾಕ್ಸರ್ ಮೇರಿ ಕೋಮ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ 6ನೇ ಬಾರಿಗೆ ಚಿನ್ನದ ಜಯಿಸಿ ಅತಿಹೆಚ್ಚು ವಿಶ್ಚ ಚಾಂಪಿಯನ್‍ಶಿಪ್ ಜಯಿಸಿದ ದಾಖಲೆ ಹೊಂದಿರುವ ಕ್ಯೂಬಾ ದಂತಕಥೆ ಫೆಲಿಕ್ಸ್ ಸ್ಯಾವನ್ ದಾಖಲೆಯನ್ನು ಸರಿಗಟ್ಟಿದ್ದಾರೆ.

    ವಿಶ್ವ ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‍ಶಿಪ್‍ನ 45 ಕೆಜಿ ವಿಭಾಗದಲ್ಲಿ ಗುರುವಾರ ಫೈನಲ್ ಪ್ರವೇಶ ಮಾಡಿದ್ದ ಮೇರಿಕೋಮ್ ಇಂದು ಉಕ್ರೇನ್ ದೇಶದ ಎಚ್ ಓಖೋಟಾ ವಿರುದ್ಧ 5-0 ಅಂಕಗಳಿಂದ ಗೆಲುವು ದಾಖಲಿಸಿದರು.

    ವಿಶ್ವ ಬಾಕ್ಸಿಂಗ್ ಚಾಂಪಿಯನ್‍ನಲ್ಲಿ ಚಿನ್ನ ಗೆಲ್ಲುವ ಮೂಲಕ 6 ಚಿನ್ನ, 1 ಬೆಳ್ಳಿ ಪದಕ ಪಡೆದಿದ್ದಾರೆ. 2006 ರಲ್ಲಿ ಸ್ವದೇಶದಲ್ಲೇ ಚಿನ್ನದ ಪದಕ ಗೆದ್ದಿದ್ದ ಮೇರಿ ಕೋಮ್ 2ನೇ ಬಾರಿಗೆ ತವರಿನ ಅಭಿಮಾನಿಗಳ ಮುಂದೇ ಈ ಸಾಧನೆ ಮಾಡಿದ್ದಾರೆ. 2010 ರಲ್ಲಿ 48 ಕೆಜಿ ವಿಭಾಗದಲ್ಲಿ ಭಾಗವಹಿಸಿದ್ದ ಮೇರಿ ಕೋಮ್ ಚಿನ್ನದ ಪದಕ ಪಡೆದಿದ್ದರು.

    ಈ ಕುರಿತು ಪಂದ್ಯದ ಬಳಿಕ ಮಾತನಾಡಿದ ಮೇರಿ ಕೋಮ್, ತನ್ನ ಈ ಸಾಧನೆಯನ್ನು ಹಾಗೂ ಪದಕವನ್ನು ದೇಶಕ್ಕೆ ಅರ್ಪಿಸುವುದಾಗಿ ತಿಳಿಸಿದರು. ಟೂರ್ನಿಯ ಸೆಮಿ ಫೈನಲ್‍ನಲ್ಲಿ ಗುರುವಾರ ಉತ್ತರ ಕೊರಿಯಾದ ಕಿಮ್ ಹ್ಯಾಂಗ್ ಮಿ ಅವರನ್ನ ಎದುರಿಸಿದ್ದ ಗೆಲುವು ಪಡೆದಿದ್ದ ಮೇರಿ ಕೋಮ್ ಫೈನಲ್ ಪ್ರವೇಶಿಸಿದ್ದರು.