Tag: ಬಾಕ್ಸ್ ಆಫೀಸ್

  • 2ನೇ ವಾರದಲ್ಲೂ ಬಾಕ್ಸ್ ಆಫೀಸ್ ತುಂಬಿಸಿದ ಕಾಟೇರ: ಒಟ್ಟು ಗಳಿಸಿದ್ದೆಷ್ಟು?

    2ನೇ ವಾರದಲ್ಲೂ ಬಾಕ್ಸ್ ಆಫೀಸ್ ತುಂಬಿಸಿದ ಕಾಟೇರ: ಒಟ್ಟು ಗಳಿಸಿದ್ದೆಷ್ಟು?

    ರ್ಶನ್ ನಟನೆಯ ಕಾಟೇರ ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈ ಕುರಿತಂತೆ ದರ್ಶನ್ (Darshan) ಅಭಿಮಾನಿಗಳು ಪೋಸ್ಟ್ ಮಾಡಿದ್ದರು. ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು  ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

    ಇದೀಗ ಅದೇ ಅಭಿಮಾನಿಗಳು ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು, ರಿಲೀಸ್ ಆಗಿ ಎರಡೇ ವಾರಕ್ಕೆ ಕಾಟೇರ ಸಿನಿಮಾ ಮತ್ತಷ್ಟು ಬಾಕ್ಸ್ ಆಫೀಸ್ ತುಂಬಿಸಿದೆ. ಬರೋಬ್ಬರಿ 157.42 ಕೋಟಿ ರೂಪಾಯಿ ಸಂಪಾದನೆ ಮಾಡಿದೆ. ಕಾಟೇರ ಚಿತ್ರ ಮೊದಲ ವಾರದಲ್ಲಿ 406 ಚಿತ್ರಮಂದಿರಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ  ಬಿಡುಗಡೆ ಯಾಗಿತ್ತು. 2 ನೇ ವಾರದಲ್ಲಿ462 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ  ಮುಂದುವರೆಸಿತ್ತು. ಇದೀಗ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಒಟ್ಟು 416 ಥೇಟರ್ ಗಳಲ್ಲಿ ಮತ್ತು 72 ಮಲ್ಟಿಫ್ಲೆಕ್ಸ್ ಗಳಲ್ಲಿ ತನ್ನ ಯಶಸ್ವಿ ಪ್ರದರ್ಶನ  ಮುಂದುವರೆಸಿದೆ.

    ಮೊನ್ನೆಯಷ್ಟೇ ಕಾಟೇರ (Katera) ಸಿನಿಮಾದ ಶೋ ದುಬೈನಲ್ಲಿ ನಡೆದಿದೆ. ದುಬೈನಲ್ಲೂ (Dubai) ಕಾಟೇರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ನಟ ದರ್ಶನ್, ನಿರ್ದೇಶಕ ತರುಣ್ ಸುಧೀರ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರತಂಡ ಭಾಗಿಯಾಗಿತ್ತು. ಅಭಿಮಾನಿಗಳ ಜೊತೆ ಸಿನಿಮಾ ನೋಡಿ ದರ್ಶನ್ ಸಂಭ್ರಮಿಸಿದ್ದರು.

    ದೇಶ ವಿದೇಶಗಳಲ್ಲಿ ಕಾಟೇರ ಗೆಲುವು ಸಾಧಿಸುತ್ತಿದ್ದರೆ, ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಅತೀ ಶೀಘ್ರದಲ್ಲೇ ಕಾಟೇರ ಸಿನಿಮಾವನ್ನು ಕಿಚ್ಚ ಸುದೀಪ್ (Sudeep) ನೋಡಲಿದ್ದಾರಂತೆ. ಸೆಲೆಬ್ರಿಟಿ ಶೋಗೆ ಬರುವಂತೆ ಸುದೀಪ್ ಅವರಿಗೆ ಕಾಟೇರ ತಂಡದಿಂದ ಕರೆ ಹೋಗಿತ್ತು. ಕಿಚ್ಚ ಶೂಟಿಂಗ್ ನಲ್ಲಿ ಇರುವ ಕಾರಣದಿಂದಾಗಿ ಬರುವುದಕ್ಕೆ ಆಗಿರಲಿಲ್ಲ. ಆದರೆ ಅತೀ ಶೀಘ್ರದಲ್ಲೇ ಸಿನಿಮಾ ನೋಡುವುದಾಗಿ ಸುದೀಪ್ ಹೇಳಿದ್ದಾರೆ ಎನ್ನುವುದು ಸದ್ಯದ ವರ್ತಮಾನ.

     

    ರಾಜ್ಯದಲ್ಲಿ ಕಾಟೇರ ಹವಾ ಜೋರಾಗಿದೆ. ಕರ್ನಾಟಕದಲ್ಲೇ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ರೂಪಾಯಿ ಹಣ ಹರಿದು ಬರುತ್ತಿದೆ. ಜೊತೆಗೆ ನೆರೆಯ ರಾಜ್ಯದಲ್ಲೂ ಕಾಟೇರ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೋವಾ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಕಾಟೇರ ಬಿಡುಗಡೆ ಆಗಿದ್ದು, ಅಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಥಿಯೇಟರ್ ಆಗಮಿಸಿದ್ದಾರೆ.

  • ಮೂರು ದಿನಕ್ಕೆ’ ಕಾಟೇರ’ ಗಳಿಸಿದ್ದೆಷ್ಟು?: ಗೆದ್ದ ಬಾಕ್ಸಾಫೀಸ್ ಸುಲ್ತಾನ್

    ಮೂರು ದಿನಕ್ಕೆ’ ಕಾಟೇರ’ ಗಳಿಸಿದ್ದೆಷ್ಟು?: ಗೆದ್ದ ಬಾಕ್ಸಾಫೀಸ್ ಸುಲ್ತಾನ್

    ಕಾಟೇರ ಸಿನಿಮಾದ ಅಬ್ಬರ ಮೂರನೇ ದಿನಕ್ಕೂ ಮುಂದುವರೆದಿದೆ. ಮೂರನೇ ದಿನದ ಕಲೆಕ್ಷನ್ ಬರೋಬ್ಬರಿ 20.94 ಕೋಟಿ ಎಂದು ಅಂದಾಜಿಸಲಾಗಿದೆ.  ವೀಕೆಂಡ್ ನಲ್ಲಿ ಕಾಟೇರ ದಾಖಲೆ ರೀತಿಯಲ್ಲಿ ಹಣ ಮಾಡಿದೆ. ಎರಡನೇ ದಿನದ ಕಲೆಕ್ಷನ್ 17.35 ಕೋಟಿ ರೂಪಾಯಿ ಆಗಿದ್ದರೆ. ಮೊದಲ ದಿನ ಮತ್ತು ಎರಡನೇ ದಿನ ಹಾಗೂ ಮೂರನೇ ದಿನದ ಸೇರಿ ಒಟ್ಟು ಮೂರು ದಿನಕ್ಕೆ 58.08 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ.

    ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

    ಮೊದಲ ದಿನ ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.

     

    ದರ್ಶನ್‌ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ಗುರುವಾರ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು ಅಭಿಮಾನಿಗಳ ಮನಗೆದ್ದಿದೆ. ಮೊದಲ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿತ್ತು.

  • ಮುಂದುವರೆದ ‘ಕಾಟೇರ’ ಅಬ್ಬರ: 2ನೇ ದಿನದ ಕಲೆಕ್ಷನ್ ಜೋರು

    ಮುಂದುವರೆದ ‘ಕಾಟೇರ’ ಅಬ್ಬರ: 2ನೇ ದಿನದ ಕಲೆಕ್ಷನ್ ಜೋರು

    ರ್ಶನ್ ನಟನೆಯ ಕಾಟೇರ ಸಿನಿಮಾದ ಅಬ್ಬರ ಎರಡನೇ ವಾರಕ್ಕೂ ಮುಂದುವರೆದಿದೆ. ಎರಡನೇ ದಿನದ ಕಲೆಕ್ಷನ್ 17.35 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಮೊದಲ ದಿನ ಮತ್ತು ಎರಡನೇ ದಿನ ಸೇರಿ ಒಟ್ಟು ಎರಡು ದಿನಕ್ಕೆ 37.14 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ.

    ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

    ಮೊದಲ ದಿನ ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.

     

    ದರ್ಶನ್‌ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ಗುರುವಾರ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು ಅಭಿಮಾನಿಗಳ ಮನಗೆದ್ದಿದೆ. ಮೊದಲ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿತ್ತು.

  • ‘ಕಾಟೇರ’ ಮೊದಲ ದಿನದ ಗಳಿಕೆ 19.79 ಕೋಟಿ ರೂಪಾಯಿ

    ‘ಕಾಟೇರ’ ಮೊದಲ ದಿನದ ಗಳಿಕೆ 19.79 ಕೋಟಿ ರೂಪಾಯಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಖತ್ ಸುದ್ದಿ. ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿದೆ. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ನಿನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

    ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.

    ದರ್ಶನ್‌ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್‌ ನಿನ್ನೆ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು ಅಭಿಮಾನಿಗಳ ಮನಗೆದ್ದಿದೆ. ಮೊದಲ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿತ್ತು.

     

    ‘ಕಾಟೇರ’ ಸಿನಿಮಾದ ಕಥೆ ನಡೆಯುವುದು 1974ರ ಕಾಲಘಟ್ಟದಲ್ಲಿ. ಭೀಮನಹಳ್ಳಿ ಎಂಬ ಊರಿನಲ್ಲಿ ಕುಲುಮೆ ಕೆಲಸ ಮಾಡುತ್ತಿರುವ ಯುವಕ ಕಾಟೇರ (ದರ್ಶನ್). ದುಡಿಮೆನೇ ದೇವ್ರು ಅಂತ ನಂಬಿರುವ ವ್ಯಕ್ತಿ. ಆದರೆ ಇದೇ ಊರಿನಲ್ಲಿ ಜಮಿನ್ದಾರನ ದಬ್ಬಾಳಿಕೆ ಇರುತ್ತದೆ, ಗೇಣಿದಾರರಿಗೆ ಅನ್ಯಾಯವಾಗುತ್ತಿರುತ್ತದೆ, ಭತ್ತ ಬೆಳೆಯುವ ರೈತನಿಗೆ ಬದುಕೋದೇ ಕಷ್ಟವಾಗಿರುತ್ತದೆ. ಅಷ್ಟಕ್ಕೂ ಆ ಊರಿನಲ್ಲಿ ಅಂಥದ್ದು ಏನಾಗುತ್ತಿರುತ್ತದೆ? ತನ್ನವರ ಮೇಲಿನ ದಬ್ಬಾಳಿಕೆಗೆ ಕಾಟೇರ ಯಾವ ರೀತಿ ಉತ್ತರ ಕೊಡುತ್ತಾನೆ ಎಂಬ ಕುತೂಹಲದೊಂದಿಗೆ ಸಿನಿಮಾ ಸಾಗುತ್ತದೆ.

  • ‘ಡಂಕಿ’ ಬಾಕ್ಸಾಫೀಸಿನ ಲೆಕ್ಕಾಚಾರ: 7 ದಿನದಲ್ಲಿ ಗಳಿಸಿದ್ದೆಷ್ಟು?

    ‘ಡಂಕಿ’ ಬಾಕ್ಸಾಫೀಸಿನ ಲೆಕ್ಕಾಚಾರ: 7 ದಿನದಲ್ಲಿ ಗಳಿಸಿದ್ದೆಷ್ಟು?

    ಬಾಲಿವುಡ್ (Bollywood) ಬಾದ್ ಷಾ ಶಾರುಖ್​ ಖಾನ್​ (Shah Rukh Khan) ಅಭಿನಯದ ‘ಡಂಕಿ’  (Dunki) ಸಿನಿಮಾ ಬಿಡುಗಡೆಯಾಗಿ 7 ದಿನ ಕಳೆದಿದೆ. ಡಿಸೆಂಬರ್​ 21ರಂದು ಈ ಚಿತ್ರ ಬಿಡುಗಡೆ ಆಗಿತ್ತು. ಕ್ಲಾಸ್​ ಸಿನಿಮಾ ಆದ್ದರಿಂದ ಡಂಕಿ ನಿಧಾನಗತಿಯಲ್ಲಿ ಕಲೆಕ್ಷನ್​ ಮಾಡಿದೆ. ಒಟ್ಟು ಏಳು ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್​  305 ಕೋಟಿ ರೂಪಾಯಿ ಆಗಿದ್ದು, ಭಾರತದಲ್ಲಿಯೇ 150 ಬಾಚಿಕೊಂಡಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

    ಶಾರುಖ್ ಈ ಹಿಂದಿನ ಸಿನಿಮಾಗಳಾದ ಪಠಾಣ್ ಹಾಗೂ ಜವಾನ್ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿದ್ದವು. ಈ ಎರಡು ಚಿತ್ರಗಳು 1000 ಕೋಟಿ ಕ್ಲಬ್ ಸೇರಿದ್ದವು. ಅದರಂತೆ ಡಂಕಿ ಸಿನಿಮಾವೂ ಅದ್ಭುತ ಪ್ರದರ್ಶನ ಕಾಣುತಿದೆ. ರಿಲೀಸ್ ಆದ ಮೊದಲ ದಿನವೇ 29 ಕೋಟಿ ಕಲೆಕ್ಷನ್ ಮಾಡಿದ್ದ ಚಿತ್ರ ಹಂತ ಹಂತವಾಗಿ  ಒಳ್ಳೆ ಮೊತ್ತವನ್ನೇ ತನ್ನದಾಗಿಸಿಕೊಂಡಿದೆ.

    ‘ಡಂಕಿ’ ಸಿನಿಮಾದಲ್ಲಿ ಶಾರುಖ್​​ ಖಾನ್​ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಟುವವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ.

    ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ರಾಜ್ ಕುಮಾರ್ ಹಿರಾನಿ ಹಾಗೂ ಶಾರುಖ್ ಕಾಂಬಿನೇಷನ್ ವರ್ಕೌಟ್ ಆಗಿದ್ದು, ಪ್ರೇಕ್ಷಕರು ಈ ಜೋಡಿಯ ಸಿನಿಮಾಗೆ ಜೈಕಾರ ಹಾಕುತ್ತಿದ್ದಾರೆ.

  • ಸಲಾರ್ : ಬಾಕ್ಸಾಫಿಸಿಗೆ ಹರಿದು ಬಂತು 500 ಕೋಟಿ ರೂಪಾಯಿ

    ಸಲಾರ್ : ಬಾಕ್ಸಾಫಿಸಿಗೆ ಹರಿದು ಬಂತು 500 ಕೋಟಿ ರೂಪಾಯಿ

    ನ್ನಡದ ಹೆಮ್ಮೆಯ ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಮತ್ತೊಂದು ಸಲಾರ್ (Salaar) ಸಿನಿಮಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಕಳೆದ ಶುಕ್ರವಾರ ರಿಲೀಸ್ ಆಗಿರುವ ಈ ಸಿನಿಮಾ ಬಿಡುಗಡೆಯಾದ ಆರೇ ದಿನಕ್ಕೆ ವಿಶ್ವದಾದ್ಯಂತ 500 ಕೋಟಿಗೂ ಅಧಿಕ ಹಣವನ್ನು ಗಳಿಸಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ.

    ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿರುವ ಚಿತ್ರವು ಮೊದಲ ದಿನವೇ 178.7 ಕೋಟಿ ರೂ ಸಂಪಾದಿಸಿದರೆ, ಎರಡನೇ ದಿನಕ್ಕೆ 295.7 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮೂರನೇ ದಿನಕ್ಕೆ 350 ಕೋಟಿಗೂ ಅಧಿಕ ಗಳಿಕೆ ಆಗಿತ್ತು. ನಾಲ್ಕು, ಐದು ಮತ್ತು ಆರನೇ ದಿನದ ಒಟ್ಟು ಗಳಿಕೆ 500 ಕೋಟಿಗೂ ಅಧಿಕ ಎಂದು ಅಂದಾಜು ಮಾಡಲಾಗಿದೆ. ಸಲಾರ್ ಎನ್ನುವ ಅಧಿಕೃತ ಸೋಷಿಯಲ್ ಮೀಡಿಯಾ ಪುಟದಲ್ಲಿ ಪೋಸ್ಟರ್ ಕೂಡ ಹಾಕಲಾಗಿದೆ.

    ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ ದಾಖಲೆಯನ್ನು ಮಾಡಿದೆ. ಕನ್ನಡದ ನಿರ್ಮಾಣದ ಸಂಸ್ಥೆಯೊಂದು ರಾಷ್ಟ್ರೀಯ ಮಟ್ಟದಲ್ಲಿ ಇಂಥದ್ದೊಂದು ದಾಖಲೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

    ‘ಸಲಾರ್’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

     

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ (Prabhas) ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

  • ಬಿಡುಗಡೆಗೂ ಮುನ್ನ ‘ಕಾಟೇರ’ ದಾಖಲೆ: 72 ಗಂಟೆಯಲ್ಲಿ 50 ಸಾವಿರ ಟಿಕೆಟ್ ಮಾರಾಟ

    ಬಿಡುಗಡೆಗೂ ಮುನ್ನ ‘ಕಾಟೇರ’ ದಾಖಲೆ: 72 ಗಂಟೆಯಲ್ಲಿ 50 ಸಾವಿರ ಟಿಕೆಟ್ ಮಾರಾಟ

    ರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಬಿಡುಗಡೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ಡಿ.29ರಂದು ರಾಜ್ಯದಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಬುಕ್ ಮೈ ಶೋನಲ್ಲಿ ಮುಂಗಡ ಟಿಕೆಟ್ ಅನ್ನು ಖರೀದಿಸಬಹುದಾಗಿದೆ. ಟಿಕೆಟ್ ಬುಕ್ಕಿಂಗ್ ಶುರುವಾಗಿ ಕೇವಲ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರ ಟಿಕೆಟ್ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿ 48 ಗಂಟೆಗಳಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ಒಂದು ಕಡೆ ಕಲೆಕ್ಷನ್ ನಿಂದಾಗಿ ಸಿನಿಮಾ ಸುದ್ದಿ ಮಾಡುತ್ತಿದ್ದರೆ, ಮತ್ತೊಂದು ಕಡೆ ಆಯ್ಕೆ ಮಾಡಿಕೊಂಡ ಕಥೆಯ ಕಾರಣದಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

     

    ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.

  • ‘ಸಲಾರ್’ ಬಾಕ್ಸಾಫೀಸ್ ಕಲೆಕ್ಷನ್ ಭರ್ಜರಿ : 3 ದಿನಕ್ಕೆ 300ಕೋಟಿಗೂ ಅಧಿಕ

    ‘ಸಲಾರ್’ ಬಾಕ್ಸಾಫೀಸ್ ಕಲೆಕ್ಷನ್ ಭರ್ಜರಿ : 3 ದಿನಕ್ಕೆ 300ಕೋಟಿಗೂ ಅಧಿಕ

    ಹೊಂಬಾಳೆ ಫಿಲಂಸ್‍ (Hombale Films) ನಿರ್ಮಾಣದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್’ (Salaar), ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಚಿತ್ರವು ಮೊದಲ ದಿನವೇ 178.7 ಕೋಟಿ ರೂ ಸಂಪಾದಿಸಿದರೆ, ಎರಡನೇ ದಿನಕ್ಕೆ 295.7 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮೂರನೇ ದಿನಕ್ಕೆ 350 ಕೋಟಿಗೂ ಅಧಿಕ ಗಳಿಕೆ ಆಗಿದೆ ಎನ್ನುವ ಮಾಹಿತಿ ಇದೆ.

    ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ ದಾಖಲೆಯನ್ನು ಮಾಡಿದೆ. ಕನ್ನಡದ ನಿರ್ಮಾಣದ ಸಂಸ್ಥೆಯೊಂದು ರಾಷ್ಟ್ರೀಯ ಮಟ್ಟದಲ್ಲಿ ಇಂಥದ್ದೊಂದು ದಾಖಲೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

    ‘ಸಲಾರ್’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

     

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ (Prabhas) ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

  • ‘ಸಲಾರ್’ ಮೊದಲ ದಿನದ ಗಳಿಕೆ 178 ಕೋಟಿ ರೂಪಾಯಿ

    ‘ಸಲಾರ್’ ಮೊದಲ ದಿನದ ಗಳಿಕೆ 178 ಕೋಟಿ ರೂಪಾಯಿ

    ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ (Prashant Neel)ಕಾಂಬಿನೇಷನ್ ನ ಸಲಾರ್ (Salaar) ಸಿನಿಮಾ ನಿನ್ನೆಯಷ್ಟೇ ವಿಶ್ವದಾದ್ಯಂತ ರಿಲೀಸ್ ಆಗಿದೆ. ಜೊತೆ ಶಾರುಖ್ ಖಾನ್ ನಟನೆ ಡಂಕಿ ಕೂಡ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಹಾಗಾಗಿ ಈ ಎರಡೂ ಚಿತ್ರಗಳ ಬಾಕ್ಸ್ ಆಫೀಸ್ (Box Office) ಕಲೆಕ್ಷನ್ ಬಗ್ಗೆ ಸಹಜವಾಗಿಯೇ ಎಲ್ಲರಿಗೂ ಕುತೂಹಲವಿತ್ತು. ಇದೀಗ ಸಲಾರ್ ಅಧಿಕೃತ ಎಕ್ಸ್ ಖಾತೆಯಲ್ಲಿ ಒಂದು ದಿನದ ವಿಶ್ವದ ಗಳಿಕೆಯನ್ನು ಪೋಸ್ಟ್ ಮಾಡಲಾಗಿದೆ. ಮೊದಲ ದಿನ ಸಲಾರ್ ಚಿತ್ರ 178.7 ಕೋಟಿ ಗಳಿಸಿದೆ ಎಂದು ಘೋಷಿಸಿದೆ.

    ವಿಶ್ವದ್ದು 178.7 ಕೋಟಿ ರೂಪಾಯಿ ಗಳಿಕೆಯಾದರೆ, ಇಂಡಿಯನ್ ಬಾಕ್ಸ್ ಆಫೀಸಿನಲ್ಲಿ ಅಂದಾಜು 95 ಕೋಟಿ ರೂಪಾಯಿ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಡಂಕಿಗೆ ಹೋಲಿಸಿದರೆ, ಮೊದಲ ದಿನದ ಬಾಕ್ಸ್ ಆಫೀಸ್ ಗಳಿಗೆ ಸಲಾರದ್ದೇ ಹೆಚ್ಚಿದೆ. ಮತ್ತೆ ದಕ್ಷಿಣ ಭಾರತದ ಸಿನಿಮಾವೊಂದು ಬಾಲಿವುಡ್ ಚಿತ್ರಕ್ಕೆ ಸೆಡ್ಡು ಹೊಡೆದು, ಬಾಕ್ಸ್ ಆಫೀಸಿನಲ್ಲಿ ಮುನ್ನುಗ್ಗುತ್ತಿದೆ.

    ತಮ್ಮ ನೆಚ್ಚಿನ ನಟನ ಸಿನಿಮಾಗೆ ಭಾರೀ ಮೊತ್ತ ಕೊಟ್ಟು ಟಿಕೆಟ್ ಖರೀದಿಸಿದ್ದರು ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ (Rajamouli). ಬಾಹುಬಲಿ ಸಿನಿಮಾದಲ್ಲಿ ನಟಿಸಿದ್ದ ಪ್ರಭಾಸ್ ನಟನೆಯ ಸಲಾರ್ ಸಿನಿಮಾದ ಟಕೆಟ್ ಅನ್ನು ಬರೋಬ್ಬರಿ ಹತ್ತು ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದರಂತೆ ರಾಜಮೌಳಿ. ಬಿಡುಗಡೆ ದಿನ ಹೈದರಾಬಾದ್ ನ ಸಂಧ್ಯಾ ಚಿತ್ರಮಂದಿರದಲ್ಲಿ ಸಲಾರ್ ಸಿನಿಮಾ ವೀಕ್ಷಿಸಿದ್ದಾರೆ.

     

    ಕೆಜಿಎಫ್ (KGF) ಚಿತ್ರಕ್ಕಿಂತ ಐದು ಪಟ್ಟು ದೊಡ್ಡದು ಸಲಾರ್. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇನ್ನೊಂದು ಫಿಲ್ಮ್ ಸಿಟಿ ನಿರ್ಮಿಸಿದಂತಾಗಿತ್ತು ನಾವು ಹಾಕಿದ ಸೆಟ್ಟುಗಳು. ನೂರು ಎಕರೆ ಪ್ರದೇಶದಲ್ಲಿ ಸೆಟ್ ನಿರ್ಮಿಸಲಾಗಿತ್ತು. ಇಂಡಿಯಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಸೆಟ್ ನಿರ್ಮಿಸಿದ್ದು ಇಲ್ಲವೇ ಇಲ್ಲ. ಕೆಜಿಎಫ್ ಶೂಟ್ ಮಾಡಿದ್ದ ಸ್ಥಳದಲ್ಲಿ ಸಲಾರ್ ಶೂಟಿಂಗ್ ಮಾಡಿಲ್ಲ. ಅದು ಸುಳ್ಳು. ಶಿವಕುಮಾರ್ ಕಲಾ ನಿರ್ದೇಶನದಲ್ಲಿ ಹಿಂದೆಂದೂ ನೋಡದ ಕಾಣದ ಲೋಕ ತೋರಿಸಿದ್ದೇವೆ. ಕೋಟಿ ಕೋಟಿ ಸುರಿಯಲಾಗಿದೆ. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ಸಲಾರ್ ಅದ್ಭುತ ಅಪರೂಪದ ಜಗತ್ತು ತೋರಿಸಲಿದೆ.

  • ಬಾಕ್ಸ್ ಆಫೀಸ್ ವಿಚಾರದಲ್ಲಿ ಜವಾನ್‍ ಬೆನ್ನಟ್ಟಿದ ಅನಿಮಲ್

    ಬಾಕ್ಸ್ ಆಫೀಸ್ ವಿಚಾರದಲ್ಲಿ ಜವಾನ್‍ ಬೆನ್ನಟ್ಟಿದ ಅನಿಮಲ್

    ಬಾಲಿವುಡ್ ನ ಮತ್ತೊಂದು ಸಿನಿಮಾ ರಿಲೀಸ್ ಆದ ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದೆ. ಜೊತೆಗೆ ರಿಲೀಸ್ ದಿನದಿಂದ ಈವರೆಗೂ ಬಾಕ್ಸ್ ಆಫೀಸ್ (Box Office) ಕಲೆಕ್ಷನ್ ಏರುತ್ತಲೇ ಇದೆ. ಮೂರು ದಿನದ ಒಟ್ಟು ಕಲೆಕ್ಷನ್ ಮುನ್ನೂರು ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ಮೂಲಕ ಜವಾನ್ ನಂತರ ಬಾಲಿವುಡ್ ನ ಮತ್ತೊಂದು ಚಿತ್ರ ಕೋಟಿ ಕೋಟಿ ಲೆಕ್ಕದಲ್ಲಿ ಕಲೆಕ್ಷನ್ ಮಾಡುತ್ತಿದೆ.

    ಸಂದೀಪ್ ರೆಡ್ಡಿ ವಂಗ ನಿರ್ದೇಶನದ  ಹಾಗೂ ರಣ್ ಬೀರ್ ಕಪೂರ್ (Ranbir Kapoor) , ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna),  ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಅನಿಮಲ್ (Animal) ಡಿಸೆಂಬರ್ 1 ರಂದು ತೆರೆಗೆ ಬಂದಿದೆ. ಚಿತ್ರಕ್ಕೆ ಸೆನ್ಸಾರ್ (Censor) ಮಂಡಳಿಯು ‘ಎ’ ಪ್ರಮಾಣ ಪತ್ರ ನೀಡಿದ್ದರೂ, ಜೊತೆಗೆ ರಶ್ಮಿಕಾ ಮತ್ತು ರಣಬೀರ್ ಜೋಡಿಯ ಹಸಿಬಿಸಿ ದೃಶ್ಯಗಳನ್ನು ಸಿನಿಮಾ ಒಳಗೊಂಡಿದ್ದರೂ ಪ್ರೇಕ್ಷಕನಿಗೆ ಚಿತ್ರ ಹಿಡಿಸಿದೆ.

    ಈ ಚಿತ್ರದ ಬಗ್ಗೆ ಚಿತ್ರತಂಡಕ್ಕೆ ಸಾಕಷ್ಟು ನಿರೀಕ್ಷೆ ಇತ್ತು. ನಟ ರಣಬೀರ್ ಕಪೂರ್ ಸಿನಿಮಾದ ಬಗ್ಗೆ ಮಾತನಾಡುತ್ತಾ, ‘ಇದು ವಿಭಿನ್ನವಾದ ಸಿನಿಮಾ. ತಂದೆ – ಮಗನ ಬಾಂಧವ್ಯದ ಜೊತೆ ಜೊತೆಗೆ ಹಿಂಸೆ ಮತ್ತು ಕ್ರೌರ್ಯಕ್ಕೆ ಒತ್ತು ನೀಡಿದ್ದಾರೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ. ಸೆಂಟೆಮೆಂಟ್ ಅಥವಾ ಹಿಂಸೆಗೆ ಎಷ್ಟು ಪ್ರಾಧಾನ್ಯತೆ ನೀಡಲಾಗಿದೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು. ಹಿರಿಯ ನಟರಾದ ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಅವರ ಜೊತೆ ನಟನೆ ಮಾಡಿದ್ದು ಒಳ್ಳೆಯ ಅನುಭವ. ಜೊತೆಗೆ ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಜೀವ  ತುಂಬಿದ್ದಾರೆ’ ಎಂದಿದ್ದರು.

     

    ನಟಿ ರಶ್ಮಿಕಾ ಮಂದಣ್ಣ ಕೂಡ ಮಾತನಾಡಿ, ಚಿತ್ರದಲ್ಲಿ ರಣಬೀರ್ ಕಪೂರ್ ಹೆಂಡತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ.‌ ವಿಭಿನ್ನವಾದ ಪಾತ್ರ. ನಿರ್ದೇಶಕರ ಕಲ್ಪನೆಗೆ ತಕ್ಕಂತೆ, ಅವರು ಹೇಳಿದಂತೆ ಕೆಲಸ ಮಾಡಿದ್ದೇನೆ ಎಂದಿದ್ದರು. ಹಿರಿಯ ನಟ ಬಾಬಿ ಡಿಯೋಲ್ ಮಾತನಾಡಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರಕ್ಕಾಗಿ ಸಾಕಷ್ಟು  ಪ್ರಯತ್ನ ಮತ್ತು ಎಫರ್ಟ್ ಹಾಕಿದ್ದೇನೆ ಎಂದು ತಿಳಿಸಿದ್ದರು. ಈ ಎಲ್ಲರ ಎಫರ್ಟ್ ಇದೀಗ ಸಕ್ಸಸ್ ಕಂಡಿದೆ.