Tag: ಬಾಟಲಿ

  • ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    ಹನುಮ ಜಯಂತಿ ವೇಳೆ ಗಲಾಟೆ – ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ

    ಮೈಸೂರು:  ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಟಿ. ನರಸೀಪುರ (T. Narseepur) ಪಟ್ಟಣದ ಹೊರವಲಯದಲ್ಲಿ ನಡೆದಿದೆ.

    ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಹನುಮಜಯಂತಿ ವೇಳೆ 2 ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಬಳಿಕ ದುಷ್ಕರ್ಮಿಗಳು ಬಾಟಲಿಯಿಂದ ಇರಿದು ವೇಣುಗೋಪಾಲ್‌ನ ಹತ್ಯೆ ನಡೆಸಿದ್ದಾರೆ.

    ಟಿ. ನರಸೀಪುರ ಪಟ್ಟಣದ ಶ್ರೀರಾಂಪುರ ಕಲೋನಿಯ ನಿವಾಸಿಯಾಗಿದ್ದ ವೇಣುಗೋಪಾಲ್ ಯುವಬ್ರಿಗೇಡ್‌ನ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ ನಡೆದಿದೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

    ಘಟನೆಗೆ ಸಂಬಂಧಿಸಿದಂತೆ ಟಿ. ನರಸೀಪುರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಜೈನಮುನಿ ಕೊಲೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಜ್ರಿವಾಲ್ ಮೇಲೆ ಬಾಟಲಿ ಎಸೆದ ಕಿಡಿಗೇಡಿಗಳು

    ಕೇಜ್ರಿವಾಲ್ ಮೇಲೆ ಬಾಟಲಿ ಎಸೆದ ಕಿಡಿಗೇಡಿಗಳು

    ಗಾಂಧಿನಗರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮೇಲೆ ಪ್ಲಾಸ್ಟಿಕ್ ಬಾಟಲಿ (Plastic water bottle) ಎಸೆದ ಘಟನೆ ಗುಜರಾತ್‌ನ (Gujarat) ರಾಜ್‌ಕೋಟ್‌ನ ಗರ್ಬಾದಲ್ಲಿ ನಡೆದಿದೆ.

    ಶನಿವಾರ ರಾತ್ರಿ ಖೋಡಲ್ಧಾಮ್ ದೇವಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿಯಾದ ಕೇಜ್ರಿವಾಲ್ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ನಿರತರಾಗಿದ್ದರು. ಆ ಸಂದರ್ಭದಲ್ಲಿ ಕೇಜ್ರಿವಾಲ್ ಮೇಲೆ ಯಾರೋ ಬಾಟಲಿಯನ್ನು ಎಸೆದಿದ್ದಾರೆ. ಆದರೆ ಅವರಿಗೆ ಆ ಬಾಟಲಿ ತಾಗಲಿಲ್ಲ. ಈ ಘಟನೆ ವೀಡಿಯೋವೊಂದರಲ್ಲಿ ಬಹಿರಂಗವಾಗಿದೆ. ಇದನ್ನೂ ಓದಿ: ಶಿಕ್ಷಕರ ಮಧ್ಯೆ ಮಾರಾಮಾರಿ – ಕಿವಿಯೊಳಗಿನ ಪರದೆ ಹರಿಯುವಂತೆ ಸಹ ಶಿಕ್ಷಕನಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ

    Arvind Kejriwal

    ಕೇಜ್ರಿವಾಲ್ ಅವರು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ 2 ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಯಾವುದೇ ಕಾರ್ಯಕರ್ತರೂ ಈವರೆಗೆ ದೂರು ದಾಖಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗಾಂಧಿ ಜಯಂತಿ- ದ್ರೌಪದಿ ಮುರ್ಮು, ಸೋನಿಯಾ ಗಾಂಧಿ ಸೇರಿ ಗಣ್ಯರಿಂದ ನಮನ

    Live Tv
    [brid partner=56869869 player=32851 video=960834 autoplay=true]

  • ಪೌರತ್ವ ಕಾಯ್ದೆಯ ಜ್ವಾಲೆ – ಬಾಟಲಿಗಳಿಗೆ ಪೆಟ್ರೋಲ್ ಹಾಕದಂತೆ ಬಂಕ್ ಮಾಲೀಕರಿಗೆ ನೋಟಿಸ್

    ಪೌರತ್ವ ಕಾಯ್ದೆಯ ಜ್ವಾಲೆ – ಬಾಟಲಿಗಳಿಗೆ ಪೆಟ್ರೋಲ್ ಹಾಕದಂತೆ ಬಂಕ್ ಮಾಲೀಕರಿಗೆ ನೋಟಿಸ್

    ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ಜ್ವಾಲೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಕಳೆದ 10 ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಯ ಕಾವು ತೀವ್ರ ಸ್ವರೂಪ ಪಡೆದಿದೆ.

    ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಹಿಂಸಾತ್ಮಕ ಕೃತ್ಯಗಳು ನಡೆಯಬಾರದು, ನಗರದಲ್ಲಿ ಕಂಡ ಕಂಡಲ್ಲಿ ಟೈಯರ್ ಗೆ ಬೆಂಕಿ ಹಚ್ಚುವ ಕೃತ್ಯಗಳು ಜರುಗಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಪೆಟ್ರೋಲ್ ಬಂಕ್ ಗಳಲ್ಲಿ ಬಾಟಲಿಗಳಿಗೆ, ಕ್ಯಾನ್ ಗಳಿಗೆ ಪೆಟ್ರೋಲ್ ಹಾಕದಂತೆ ಬಂಕ್ ಮಾಲೀಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಂಕ್ ಗಳಿಗೆ ಆ ವ್ಯಾಪ್ತಿಯ ಪೊಲೀಸರಿಂದ ನೋಟಿಸ್ ನೀಡಲಾಗಿದೆ.

    ನೋಟಿಸ್‍ಗೆ ಬೆಲೆ ನೀಡದೇ ಬಾಟಲಿ, ಕ್ಯಾನ್ ಗಳಲ್ಲಿ ಪೆಟ್ರೋಲ್, ಡಿಸೇಲ್ ಹಾಕಿದ್ರೆ ಕಠಿಣ ಕಾನೂನು ಕ್ರಮ ಕೈಗೊಳ್ಳೋದಾಗಿ ಪೊಲೀಸರು ಬಂಕ್ ಮಾಲೀಕರಿಗೆ ಎಚ್ಚರಿಸಿದ್ದಾರೆ. ಆದರೂ ಕೆಲವು ಬಂಕ್‍ಗಳಲ್ಲಿ ನೋಟಿಸ್ ಗೆ ಕಿಮ್ಮತ್ತು ಕೊಡದೇ ಪೆಟ್ರೋಲ್, ಡೀಸೆಲ್ ನ್ನು ಕ್ಯಾನ್, ಬಾಟಲಿಗೆ ಹಾಕಲಾಗುತ್ತಿದೆ.