Tag: ಬಾಣಂತಿ

  • ಕಲಬುರಗಿಯಲ್ಲಿ ಬಾಣಂತಿ, ನವಜಾತ ಶಿಶು ಸಾವು – ಕುಟುಂಬಸ್ಥರಿಂದ ಆಸ್ಪತ್ರೆ ಗಾಜು ಪುಡಿ ಪುಡಿ, ಪೀಠೋಪಕರಣ ಧ್ವಂಸ

    ಕಲಬುರಗಿಯಲ್ಲಿ ಬಾಣಂತಿ, ನವಜಾತ ಶಿಶು ಸಾವು – ಕುಟುಂಬಸ್ಥರಿಂದ ಆಸ್ಪತ್ರೆ ಗಾಜು ಪುಡಿ ಪುಡಿ, ಪೀಠೋಪಕರಣ ಧ್ವಂಸ

    ಕಲಬುರಗಿ: ಜಿಲ್ಲೆಯಲ್ಲಿ ಬಾಣಂತಿ ಸಾವಿನ (Mternal Death) ಪ್ರಕರಣ ಮುಂದುವರಿದಿದೆ. ಕಲಬುರಗಿಯ (Kalaburagi) ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ತಾಯಿ ಹಾಗೂ ನವಜಾತ ಶಿಶು ಇಬ್ಬರೂ ಸಾವನ್ನಪ್ಪಿದ್ದಾರೆ.

    ಸಭಾ ಪರ್ವಿನ್ ಎನ್ನುವ ಬಾಣಂತಿ ಸಾವನ್ನಪ್ಪಿದ್ದು, ಆಕೆಯ ನವಜಾತ ಶಿಶು ಕೂಡ ಮೃತಪಟ್ಟಿದೆ. ಕಲಬುರಗಿ ನಗರದ ಎಂಎಸ್‌ಕೆ ಮಿಲ್ ಬಡಾವಣೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಭಾನುವಾರ ಸಂಜೆಯೇ ಹೆರಿಗೆಗಾಗಿ ಸಭಾ ಪರ್ವಿನ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಹೆರಿಗೆಗೂ ಮುನ್ನ ಗರ್ಭದಲ್ಲಿಯೇ ಮಗು ಸಾವನ್ನಪ್ಪುವ ಸಾಧ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದರು. ಕಡೆಗೆ ಲೋ ಬಿಪಿಯಿಂದ ತಾಯಿಯೂ ಮೃತಪಟ್ಟಿದ್ದಾರೆ. ಇದನ್ನೂ ಓದಿ: Delhi Budget 2025 | ಇಂದಿನಿಂದ ದೆಹಲಿ ವಿಧಾನಸಭೆ ಅಧಿವೇಶನ – ನಾಳೆ ಬಜೆಟ್ ಮಂಡನೆ

    ವೈದ್ಯರ ನಿರ್ಲಕ್ಷತನವೇ ತಾಯಿ ಹಾಗೂ ಮಗು ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆ ಗಾಜು ಪುಡಿ ಪುಡಿ ಮಾಡಿ ಪೀಠೋಪಕರಣ ಧ್ವಂಸಗೊಳಿಸಿದ್ದಾರೆ. ಆರ್.ಜಿ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಇದನ್ನೂ ಓದಿ: Kodagu | ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದಾಗ ಬೆನ್ನುಮೂಳೆಗೆ ಘಾಸಿ – ಮೊಬೈಲ್ ಶಾಪ್ ಮಾಲೀಕ ಸಾವು

  • ಕಲಬುರಗಿ | ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು

    ಕಲಬುರಗಿ | ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು

    ಕಲಬುರಗಿ: ಇತ್ತೀಚಿಗೆ ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ (Maternal Deaths Case) ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ, ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ (GIMS Hospital) ಬಾಣಂತಿಯ ಹೊಟ್ಟೆಯಲ್ಲಿ ಬಟ್ಟೆಯ ಉಂಡೆಯನ್ನೇ ಬಿಟ್ಟು ವೈದ್ಯರು ಪ್ರಮಾದ ಮಾಡಿದ ಘಟನೆ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಬಾಣಂತಿಯ ಸಾವಾಗಿದೆ.

    husband forced a woman to eat human bones to get pregnant

    ನಗರದ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಯಲ್ಲಿ (ESIC Hospital) ಲೋ ಬಿಪಿಯಿಂದ ಬಾಣಂತಿಯ ಸಾವಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ (32) ಮೃತ ದುರ್ದೈವಿ. ಇದನ್ನೂ ಓದಿ: ಹೇಯ್ಲಿ ಮ್ಯಾಥ್ಯೂಸ್‌, ಬ್ರಂಟ್‌ ಫಿಫ್ಟಿ ಆಟ – ಯುಪಿ ವಿರುದ್ಧ ಮುಂಬೈಗೆ 8 ವಿಕೆಟ್‌ಗಳ ಜಯ

    ಸೋಮವಾರ ಹೇರಿಗೆಗೆಂದು ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ, ಅಂದೇ ಗಂಡು ಮಗುವಿಗೆ ಜನ್ಮ ನೀಡಿದರು. ನಿರಂತರ ರಕ್ತ ನೀಡಿದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹೈವೇಯಲ್ಲಿ ಸರಣಿ ಅಪಘಾತ – ಈಶಾಗೆ ಬಂದಿದ್ದ ವಾಹನ ಸವಾರರ ಪರದಾಟ 

  • ‘ಪಬ್ಲಿಕ್ ಟಿವಿ’ ಇಂಪ್ಯಾಕ್ಟ್; ಸೀಜ್ ಆದ ಮನೆ ಬೀಗ ಓಪನ್ – ಮನೆಗೆ ಮರಳಿದ ಬಾಣಂತಿ ಕುಟುಂಬ

    ‘ಪಬ್ಲಿಕ್ ಟಿವಿ’ ಇಂಪ್ಯಾಕ್ಟ್; ಸೀಜ್ ಆದ ಮನೆ ಬೀಗ ಓಪನ್ – ಮನೆಗೆ ಮರಳಿದ ಬಾಣಂತಿ ಕುಟುಂಬ

    – ಆಸ್ಪತ್ರೆಯಲ್ಲಿದ್ದರೂ ಸ್ಪಂದಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಧನ್ಯವಾದ ತಿಳಿಸಿದ ಸಂತ್ರಸ್ತರು

    ಬೆಳಗಾವಿ: ಸಾಲ ಕಟ್ಟದ್ದಕ್ಕೆ ಖಾಸಗಿ ಫೈನಾನ್ಸ್ ಸಿಬ್ಬಂದಿಯಿಂದ ಒಂದು ತಿಂಗಳು ಮಗು ಸಮೇತ ಬಾಣಂತಿ ಹಾಗೂ ಕುಟಂಬಸ್ಥರನ್ನ ಮನೆಯಿಂದ ಹೊರಕ್ಕೆ ಹಾಕಿ ಮನೆ ಸೀಜ್ ಮಾಡಿರುವ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ‌ ತಾರಿಹಾರ ಗ್ರಾಮದಲ್ಲಿ ನಡೆದಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮತಕ್ಷೇತ್ರದ ತಾರೀಹಾಳ ಗ್ರಾಮದ ಗಣಪತಿ ಲೋಹಾರ ಕುಟುಂಬ ಬೀದಿಗೆ ಬಂದಿತ್ತು. ಇದೀಗ ಎಲ್ಲರೂ ಮತ್ತೆ ಮನೆ ಸೇರಿದ್ದಾರೆ.

    ಹೆರಿಗೆಗೆ ಬಂದಿದ್ದ ಗಣಪತಿ ಪುತ್ರಿ ಮಾಧುರಿ ತಂದೆ, ತಾಯಿ, ಮಗಳು ಮೊಮ್ಮಕ್ಕಳನ್ನ ಮನೆಯಿಂದ ನಿರ್ಧಯಿಯಾಗಿ ಫೈನಾನ್ಸ್ ಸಿಬ್ಬಂದಿ ಹೊರಹಾಕಿದ್ದರು. ಮನೆ ಕಟ್ಟಲು ಬೆಳಗಾವಿಯ ಅಪ್ಟುಸ್ ಫೈನಾನ್ಸ್‌ನಲ್ಲಿ 5 ಲಕ್ಷ ಸಾಲ ಪಡೆದಿದ್ದ ಗಣಪತಿ ಲೋಹಾರ 3.50 ಲಕ್ಷ ರೂ. ಸಾಲ ಮರುಪಾವತಿ ಮಾಡಿದ್ದರು. ಅನಾರೋಗ್ಯ, ಮಗಳ ಹೆರಿಗೆ ಕಾರಣದಿಂದ ಕಂತು ಕಟ್ಟಿರಲಿಲ್ಲ. 7 ಲಕ್ಷಕ್ಕೂ ಅಧಿಕ ಹಣ ಕಟ್ಟು ಅಂತಾ ಹೇಳಿ ಕೋರ್ಟ್‌ನಿಂದ ಆದೇಶ ತಂದು ಮನೆಗೆ ಬೀಗ ಜಡಿದು ಗೋಡೆ ಮೇಲೆ ಜಪ್ತಿ‌ ನೋಟಿಸ್ ಬರೆದು ಹೋಗಲಾಗಿತ್ತು. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ| ಸರ್ಕಾರ ಬದುಕಿದ್ಯಾ.. ಸತ್ತಿದ್ಯಾ?: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

    ಈ ಕುರಿತು ‘ಪಬ್ಲಿಕ್‌ ಟಿವಿ’ ಬೆಳಗ್ಗಿನಿಂದ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಿಸಿದವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದರು. ‌ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತನ್ನ ಖಾಸಗಿ ಆಪ್ತ ಸಹಾಯಕರನ್ನ ಕರೆಸಿ ಲೋಹಾರ ಕುಟುಂಬಕ್ಕೆ ಧನ ಸಹಾಯದ ಜೊತೆಗೆ ದಿನಸಿ ಸಹಾಯ ಮಾಡಿದ್ದರು.

    ಅಲ್ಲದೇ, ಫೈನಾನ್ಸ್ ಕಂಪನಿಯ ಜೊತೆಗೆ ಸಂಪರ್ಕ ಸಾಧಿಸಿ ಕೇವಲ ಅಸಲು ಮಾತ್ರ ತುಂಬುವುದು ಹಾಗೂ ಕಂತು ತುಂಬಲು ಕಾಲಾವಕಾಶ ನೀಡುವಂತೆ ಕಂಪನಿಗೆ ಒತ್ತಾಯಿಸಿ, ಸೀಜ್ ಆದ ಬಾಣಂತಿ ಮನೆಯ ಬಾಗಿಲು ಓಪನ್ ಮಾಡಿಸಿದ್ದಾರೆ. ಇದನ್ನೂ ಓದಿ: ಎರಡು ಲಕ್ಷಕ್ಕೆ 25 ಲಕ್ಷ.. ಮೀಟರ್ ಬಡ್ಡಿ ದಂಧೆಯಲ್ಲಿ ಯಕ್ಷಗಾನ ಕಲಾವಿದನ ಮೇಲೆ ಮಾರಣಾಂತಿಕ ಹಲ್ಲೆ

    ಸಂಬಂಧಿಕರ ಮನೆಗೆ ತೆರಳಿದ್ದ ಕುಟುಂಬಸ್ಥರನ್ನ ಮರಳಿ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ನಿವಾಸಕ್ಕೆ ಹೆಬ್ಬಾಳ್ಕರ್‌ ಆಪ್ತರು ಕರೆ ತಂದರು. ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಗಂಭೀರವಾಗಿ ಪರಿಗಣಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಲ್ಲಿದ್ದರೂ ಘಟನೆ ಕುರಿತು ಮಾಹಿತಿ ಪಡೆದು ಲೋಹಾರ ಕುಟುಂಬಕ್ಕೆ ಸಹಾಯ‌ ಮಾಡಿದ್ದಾರೆ. ಬೀದಿಗೆ ಬಂದ ಕುಟುಂಬಕ್ಕೆ ಸಹಾಯಹಸ್ತ ಚಾಚಿದ ಎಲ್ಲರಿಗೂ ಲೋಹಾರ ಕುಟುಂಬ ಧನ್ಯವಾದ ತಿಳಿಸಿದೆ.

  • ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು

    ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು

    ಶಿವಮೊಗ್ಗ: ಹೆರಿಗೆಯಾದ ಕೆಲವೇ ಗಂಟೆಯಲ್ಲಿ ಬಾಣಂತಿಯೊಬ್ಬರು‌ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತಪಟ್ಟ ಬಾಣಂತಿಯನ್ನು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕವಿತಾ (24) ಎಂದು ಗುರುತಿಸಲಾಗಿದೆ.

    ತೀವ್ರ ರಕ್ತಸ್ರಾವವಾಗಿ ಹೃದಯಾಘಾತ ಸಂಭವಿಸಿ ಬಾಣಂತಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಜನವರಿ 1ರಂದು ಹೆರಿಗೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಕವಿತಾ, ಜನವರಿ 3ರಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸ್ವಲ್ಪ ಸಮಯದ ಬಳಿಕ ಕವಿತಾಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಕೆಲವೇ ಕ್ಷಣಕ್ಕೆ ಹೃದಯಾಘಾತ ಸಂಭವಿಸಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಮರದ ಕೊಂಬೆ ಬಿದ್ದು 15ರ ಬಾಲಕಿ ದುರ್ಮರಣ

     

    ಗರ್ಭ ಚೀಲದಲ್ಲಿ ನೀರಿನ ಅಂಶ ಸೋರಿಕೆಯಾಗಿ ಹೊರ ಬರುತ್ತದೆ. ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಈ ನೀರಿನ ಅಂಶ ರಕ್ತನಾಳಕ್ಕೆ ಸೇರುತ್ತದೆ. ಆಗ ತೀವ್ರ ರಕ್ತಸ್ರಾವ ಉಂಟಾಗುತ್ತದೆ. ಇಂತಹ ಸಂದರ್ಭ ಹೃದಯಾಘಾತ ಸಂಭವಿಸುತ್ತದೆ ಎಂದು  ಡಾ. ತಿಮ್ಮಪ್ಪ ಹೇಳಿದರು.

     

  • ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ಸಾವು

    ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ಸಾವು

    – ಸರ್ಕಾರಕ್ಕೆ ಜಿಲ್ಲಾಡಳಿತ ಸಲ್ಲಿಸಿದ ಆಡಿಟ್ ರಿಪೋರ್ಟ್‌ನಲ್ಲಿ ಬಯಲು

    ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ (Maternal Death) ಸರಣಿ ಸಾವಿನ ಬಳಿಕ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ಸಾವಾಗಿರುವ ಬಗ್ಗೆ ಸರ್ಕಾರಕ್ಕೆ ಜಿಲ್ಲಾಡಳಿತ ಸಲ್ಲಿಸಿದ ಆಡಿಟ್ ರಿಪೋರ್ಟ್‌ನಲ್ಲಿ (Audit Report) ಬೆಳಕಿಗೆ ಬಂದಿದೆ.

    ಜಿಲ್ಲೆಯಲ್ಲಿ ಏಪ್ರಿಲ್‌ನಿಂದ ಈವರೆಗೂ 23 ಬಾಣಂತಿಯರ ಸಾವಾಗಿದೆ. ಜಿಲ್ಲಾಸ್ಪತ್ರೆ, ವಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿಯರ ಸಾವಿನ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ (Prashanth Kumar Mishra) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆ ರೀತಿ ಹೇಳಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ – ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಸವಾಲ್‌

    ಹೆರಿಗೆ ಸಂದರ್ಭದಲ್ಲಿ ಬಾಣಂತಿಯರಿಗೆ ಅಪೌಷ್ಟಿಕತೆ, ಅನಿಮಿಯಾ ಇತರೆ ಕಾಯಿಲೆಗಳು ಕಾಡುತ್ತಿವೆ. ಹೀಗಾಗಿ ಸಿಜೇರಿಯನ್ ಆಗುವ ಬಾಣಂತಿಯರೇ ಹೆಚ್ಚು ಸಾವನ್ನಪ್ಪುತ್ತಿದ್ದಾರೆ. ಬಾಣಂತಿಯರ ಸಾವಿಗೆ ಕಡಿವಾಣ ಹಾಕಲು ವಿಶೇಷ ಕ್ರಮ ಕೈಗೊಳ್ಳುತ್ತೇವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಸಿ.ಟಿ ರವಿ ಪ್ರಕರಣ ಸಿಐಡಿಗೆ ಒಪ್ಪಿಸಲಾಗಿದೆ: ಪರಮೇಶ್ವರ್

  • ಬಳ್ಳಾರಿ ಸಿಸೇರಿಯನ್‌ ದುರಂತ: ಇಂದು ಮತ್ತೊಬ್ಬ ಬಾಣಂತಿ ಸಾವು!

    ಬಳ್ಳಾರಿ ಸಿಸೇರಿಯನ್‌ ದುರಂತ: ಇಂದು ಮತ್ತೊಬ್ಬ ಬಾಣಂತಿ ಸಾವು!

    • ಮೃತ ಬಾಣಂತಿಯರ ಸಂಖ್ಯೆ 5ಕ್ಕೇರಿಕೆ!

    ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿನ ಸರಣಿ ಮುಂದುವರಿದಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್‌ (Caesarean) ಮಾಡಿಸಿಕೊಂಡ ಬಳಿಕ ಮತ್ತೋರ್ವ ಬಾಣಂತಿ ಇಂದು ಸಾವನ್ನಪ್ಪಿದ್ದಾರೆ.

    ಸುಮಯಾ (25) ಮೃತ ಬಾಣಂತಿ. ಈಕೆ ಕಳೆದ 23 ದಿನಗಳಿಂದ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು (ಡಿ.5) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಪೈಕಿ ಮೃತ ಬಾಣಂತಿಯರ ಸಂಖ್ಯೆ 5ಕ್ಕೇರಿದೆ.

    ಸಿಸೇರಿಯನ್‌ ಮಾಡಿಸಿಕೊಂಡ ಬಳಿಕ ಸುಮಯಾ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ನವೆಂಬರ್ 12 ರಂದು ಸುಮಾಯ ಅವರನ್ನ ಬಿಮ್ಸ್‌ಗೆ ರವಾನೆ ಮಾಡಲಾಗಿತ್ತು. ಈ ನಡುವೆ ಕಿಡ್ನಿ ವೈಫಲ್ಯವಾಗಿ ಸತತ ಡಯಾಲಿಸಿಸ್ ಮಾಡಲಾಗ್ತಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ 23 ದಿನಗಳ ಬಳಿಕ ಸುಮಯಾ ಸಾವನ್ನಪ್ಪಿದ್ದಾರೆ.

    ಆರೋಗ್ಯವಾಗಿದ್ದ ಹಸುಗೂಸು ಏಕಾಏಕೀ ಸಾವು!:
    ಗುರುವಾರ (ಡಿ.5) ಮಧ್ಯಾಹ್ನ ಬಿಮ್ಸ್ ಆಸ್ಪತ್ರೆಯಲ್ಲೇ ನವಜಾತ ಶಿಶುವೊಂದು ಸಾವನ್ನಪ್ಪಿತ್ತು. ಹೆರಿಗೆ ಬಳಿಕ ಆರೋಗ್ಯವಾಗಿದ್ದ ಮಗು ಏಕಾಏಕೀ ಮೃತಪಟ್ಟಿತ್ತು. ಈ ಬೆನ್ನಲ್ಲೇ ಓರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

    ಐವಿ ದ್ರಾವಣ ಪೂರೈಕೆ ಕಂಪನಿ ವಿರುದ್ಧ ಕೇಸ್‌ಗೆ ತಾಕೀತು:
    ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಒಂದು ದಿನದ ಹಿಂದೆಯಷ್ಟೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಐವಿ ದ್ರಾವಣದ 22 ಬ್ಯಾಚ್‌ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದ್ದರು. ಈ ಬೆನ್ನಲ್ಲೇ ದುರಂತ ಸಂಭವಿಸಿದೆ.

  • ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮಾಸುವ ಮುನ್ನವೇ ಹೆರಿಗೆ ಬಳಿಕ ಮಗು ಸಾವು!

    ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮಾಸುವ ಮುನ್ನವೇ ಹೆರಿಗೆ ಬಳಿಕ ಮಗು ಸಾವು!

    ಬಳ್ಳಾರಿ: ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ (BIMS) ಹೆರಿಗೆ ಬಳಿಕ ಮಗು ಮೃತಪಟ್ಟಿದೆ.

    ಸಿರಗುಪ್ಪ ತಾಲೂಕಿನ ಸಿರಗೇರಿ ಗ್ರಾಮದ ಬಾಣಂತಿ (Pregnant Women) ಗಂಗೋತ್ರಿ ನಾರ್ಮಲ್ ಹೆರಿಗೆ ಮಾಡಿಸಲು ದಾಖಲಾಗಿದ್ದರು. ಆದರೆ ವೈದ್ಯರು ಸಿಸೇರಿಯನ್‌ ಮಾಡಿದ್ದಾರೆ. ಹೆರಿಗೆ ಬಳಿಕ ಆರಂಭದಲ್ಲಿ ಗಂಡು ಮಗು ಆರೋಗ್ಯವಾಗಿದೆ ಎಂದಿದ್ದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು – ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ: ಜನಾಕ್ರೋಶ

     

    ಗಂಡು ಮಗುವಿನ ಜನನವಾಯಿತು ಎಂದು ಗಂಗೋತ್ರಿ ಕುಟುಂಬಸ್ಥರು ಸಂತಸ ಪಟ್ಟಿದ್ದರು. ಆದರೆ ಮಧ್ಯಾಹ್ನ 12 ಗಂಟೆಯ ಬಳಿಕ ಮಗು (Baby) ಏಕಾಏಕಿ ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ.

    ಈಗ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವಾಗಿದೆ ಅಂತಾ ಪೋಷಕರು ಆರೋಪಿಸಿದ್ದಾರೆ. ವೈದ್ಯರು ಅವೈಜ್ಞಾನಿಕವಾಗಿ ಹೆರಿಗೆ ಮಾಡಿದ್ದಕ್ಕೆ ಮಗು ಸಾವಾಗಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗರ್ಭದಲ್ಲಿ ಮಲ ತಿಂದು ಮಗುವಿಗೆ ಶ್ವಾಸಕೋಶದ ತೊಂದರೆಯಾಗಿತ್ತು. ಇದೇ ಕಾರಣಕ್ಕೆ ಮಗು ಸಾವನ್ನಪ್ಪಿದೆ ಅಂತಾ ವೈದ್ಯರು ಸಮಜಾಯಿಷಿ ನೀಡಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಈ ರೀತಿಯ ದುರ್ಘಟನೆಗಳು ಪದೇ ಪದೇ ನಡೆಯುತ್ತಿರುವ ಕಾರಣ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗಿದ್ದಾರೆ.

     

  • ಬಳ್ಳಾರಿಯಲ್ಲಿ ಮುಂದುವರಿದ ಸರಣಿ ಸಾವು – ಬಿಮ್ಸ್‌ನಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವು

    ಬಳ್ಳಾರಿಯಲ್ಲಿ ಮುಂದುವರಿದ ಸರಣಿ ಸಾವು – ಬಿಮ್ಸ್‌ನಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವು

    ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಮುಂದುವರಿದಿದ್ದು, ವೈದ್ಯರ (Doctors) ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಾಪಕವಾಗಿದೆ.

    ಇತ್ತೀಚೆಗಷ್ಟೇ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ (Caesarean) ಮಾಡಿಸಿಕೊಂಡ ಬಳಿಕ ಮೂವರು ಬಾಣಂತಿಯರು (Pregnant) ಸಾವನ್ನಪ್ಪಿದ್ದರು. ಸೋಮವಾರ (ನ.25) ರಾತ್ರಿ ಹೊಸಪೇಟೆ ಮೂಲದ ಮುಸ್ಕಾನ್ (22) ಮಂಗಳವಾರ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಪ್ರತಿಭಟನೆ ವೇಳೆ ಹಿಂದೂ ವಕೀಲನ ಹತ್ಯೆ – ಮತ್ತೆ ಭುಗಿಲೆದ್ದ ಆಕ್ರೋಶ

    ಕೂಡ್ಲಿಗೆ ತಾಲೂಕಿನ ಹಾಲಸಾಗರ ಗ್ರಾಮದ ಮಹಾಲಕ್ಷ್ಮಿ (20) ಸಾವಿಗೀಡಾದ ಮಹಿಳೆ. ಭಾನುವಾರ ನಾರ್ಮಲ್ ಹೆರಿಗೆಯಾಗಿದ್ದ (ಸಾಮಾನ್ಯ ಹೆರಿಗೆ) ಮಹಾಲಕ್ಷ್ಮೀಗೆ ಗಂಡು ಮಗುವಿಗೆ ಜನಿಸಿತ್ತು. ಇದನ್ನೂ ಓದಿ: ನನ್ನ ಪ್ರೀತಿಯ RCBಗೆ…: ತಂಡದಿಂದ ಕೈಬಿಟ್ಟ ಆರ್‌ಸಿಬಿಗೆ ಸಿರಾಜ್‌ ಭಾವುಕ ವಿದಾಯ

    ಹೆರಿಗೆ ಬಳಿಕ ಮಹಾಲಕ್ಷ್ಮಿ ಆರೋಗ್ಯದಲ್ಲಿ ಏರುಪೇರಾಗಿತ್ತು, ಹೀಗಾಗಿ ಐಸಿಯುನಲ್ಲಿ ಇಟ್ಟು ಮೂರು ದಿನ ಚಿಕಿತ್ಸೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಹಾಲಕ್ಷ್ಮಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಗೆ ಕರೆತರುವ ಮುನ್ನ ಮಹಾಲಕ್ಷ್ಮಿ ಚೆನ್ನಾಗಿದ್ದಳು ಎಂದು ದೂರಿದ್ದಾರೆ. ಇದನ್ನೂ ಓದಿ: ಟ್ರಕ್‌ಗೆ ಸ್ಕಾರ್‌ಪಿಯೊ ಡಿಕ್ಕಿ – ಭೀಕರ ಅಪಘಾತಕ್ಕೆ ಐವರು ವೈದ್ಯರ ದುರ್ಮರಣ

    ಈ ಕುರಿತು ಬಿಮ್ಸ್ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಮಹಾಲಕ್ಷ್ಮಿಗೆ ಅನಿಮಿಯಾ ಇತ್ತು, ಮೊದಲು ಅವರು ಕೂಡ್ಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು, ಅಲ್ಲಿ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ನಾವು ಮೊದಲೇ ತಿಳಿಸಿದ್ವಿ, ಅಲ್ಲದೇ ನಮ್ಮ ಪ್ರಯತ್ನ ನಾವು ಮಾಡಿದ್ದೇವೆ ಎಂದು ಬಿಮ್ಸ್ ನಿರ್ದೇಶಕ ನಿರ್ದೇಶಕ ಗಂಗಾಧರ ಗೌಡ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

  • ಬಳ್ಳಾರಿ ಸಿಸೇರಿಯನ್‌ ದುರಂತ: ಮೃತ ಮಹಿಳೆಯರ ಸಂಖ್ಯೆ ನಾಲ್ಕಕ್ಕೆ ಏರಿಕೆ

    ಬಳ್ಳಾರಿ ಸಿಸೇರಿಯನ್‌ ದುರಂತ: ಮೃತ ಮಹಿಳೆಯರ ಸಂಖ್ಯೆ ನಾಲ್ಕಕ್ಕೆ ಏರಿಕೆ

    ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ (Caesarean) ಮಾಡಿಸಿಕೊಂಡ ಬಳಿಕ ಮೂವರು ಬಾಣಂತಿಯರ (Pregnant) ಸಾವು ಪ್ರಕರಣ ಮಾಸುವ ಮುನ್ನ ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ.

    ಹೊಸಪೇಟೆ ಮೂಲದ ಮುಸ್ಕಾನ್ (22) ಸಾವನ್ನಪ್ಪಿದ್ದಾರೆ. ಈ ಮೂಲಕ 15 ದಿನಗಳ ಅಂತರದಲ್ಲಿ ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮುಸ್ಕಾನ್ ಮೃತಪಟ್ಟಿದ್ದಾರೆ.

     

    ನ.10 ರಂದು ಮುಸ್ಕಾನ್ ಜಿಲ್ಲಾಸ್ಪತ್ರೆಯಲ್ಲಿ ಸಿಸೀರಿಯನ್‌ ಮಾಡಿಸಿಕೊಂಡಿದ್ದರು. ಸಿಸೇರಿಯನ್‌ ಬಳಿಕ ಮುಸ್ಕಾನ್‌ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿತ್ತು. ಬಳಿಕ 11 ರಂದು ಬಿಮ್ಸ್ (BIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಇದನ್ನೂ ಓದಿ: ಬಳ್ಳಾರಿ ಸಿಸೇರಿಯನ್‌ ದುರಂತ – ಮೂವರ ಸಾವಿಗೆ IV Fluid ಔಷಧಿಯೇ ಕಾರಣ? ಇನ್ನೂ ಬಳ್ಳಾರಿಗೆ ಭೇಟಿ ನೀಡಿಲ್ಲ ಜಮೀರ್‌ ಅಹ್ಮದ್‌

    ಬಿಮ್ಸ್ ನಲ್ಲಿ ಒಂದು ದಿನ ಇದ್ದು ಚಿಕಿತ್ಸೆ ಪಡೆದಿದ್ದ ಮುಸ್ಕಾನ್, ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ಡಯಾಲಿಸಿಸ್ ಮಾಡಿಸಲು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಸತತ 15 ದಿನ ಚಿಕಿತ್ಸೆ ಪಡೆದರೂ ಮುಸ್ಕಾನ್ ಬದುಕಲಿಲ್ಲ.

    ಈ ಮೊದಲು ಲಲಿತಮ್ಮ, ನಂದಿನಿ, ರೋಜಾ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಬಾಣಂತಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

     

  • ಬೆಳಗ್ಗೆ ಹೆರಿಗೆಯಾಗಿದ್ದ ಬಾಣಂತಿ ರಾತ್ರಿ ಹೊಟ್ಟೆನೋವಿನಿಂದ ನರಳಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

    ಬೆಳಗ್ಗೆ ಹೆರಿಗೆಯಾಗಿದ್ದ ಬಾಣಂತಿ ರಾತ್ರಿ ಹೊಟ್ಟೆನೋವಿನಿಂದ ನರಳಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

    ಚಿಕ್ಕಮಗಳೂರು: ಹೆರಿಗೆಯಾಗಿದ್ದ ಬಾಣಂತಿ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

    ರಂಜಿತಾ ಬಾಯಿ (21) ಮೃತ ದುರ್ದೈವಿ. ಶನಿವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದ ಈಕೆ ರಾತ್ರಿ ವೇಳೆಗೆ ತೀವ್ರ ಹೊಟ್ಟೆನೋವಿನಿಂದ ನರಳಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಬಾಣಂತಿ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಮಗನ ಎಂಪಿ ಮಾಡಲು ನನ್ನ ಮೇಲೆ ಆರೋಪ ಮಾಡ್ತಿದ್ದೀರಿ: ಸಿದ್ದು ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ

    ರಂಜಿತಾ ಮೂಲತಃ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ವಡೇರಹಳ್ಳಿ ತಾಂಡ್ಯದ ನಿವಾಸಿ, ಒಂದು ವರ್ಷದ ಹಿಂದೆಯಷ್ಟೇ ಶಶಿಧರ್ ನಾಯಕ್ ಎಂಬವರೊಂದಿಗೆ ವಿವಾಹವಾಗಿದ್ದರು.

    ಚಲಿಸುತ್ತಿದ್ದ ಅಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ: 

    ಮತ್ತೊಂದು ಘಟನೆಯಲ್ಲಿ ತುಂಬುಗರ್ಭಿಣಿಯನ್ನ ಹೆರಿಗೆಗೆಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಅಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಭಗವಂತ ಶಿವನ ಚಿತ್ರ ಬಳಸಿ ಅಪಮಾನ – ಕಾಂಗ್ರೆಸ್‌ನಿಂದ ದೂರು

    ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನ 108 ಅಂಬುಲೆನ್ಸ್‌ನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಹೊಟ್ಟೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ವೇಗವಾಗಿ ಚಲಾಯಿಸಿದ್ದಾರೆ. ಆದಾಗ್ಯೂ ಮಹಿಳೆ ಚೀರಾಡಿದ್ದಾಳೆ, ಕೊನೆಗೆ ಶುಶ್ರೂಷಕಿ ಮಂಜುಳಾ ಅಂಬುಲೆನ್ಸ್‌ನಲ್ಲೇ ಮಹಿಳೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಹಿಳೆ ಮಗುವಿಗೆ ಜನ್ಮ ನೀಡಿದ ಬಳಿಕ ಅಂಬುಲೆನ್ಸ್‌ನಲ್ಲೇ ಪ್ರಥಮ ಚಿಕಿತ್ಸೆ ನೀಡಿ, ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಪತಿ ತಿಳಿಸಿದ್ದಾರೆ. ಇದರಿಂದ ಶುಶ್ರೂಷಕಿ ಮಂಜುಳಾ ಹಾಗೂ ಚಾಲಕ ಗಂಗಾಧರ್ ಕರ್ತವ್ಯಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.