ಹಾಸನ: ಹೊಳೆನರಸೀಪುರ (Holenarasipura) ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳನ್ನು ವಿತರಣೆ ಮಾಡಲಾಗಿದೆ.
ಪಟ್ಟಣದ ಹೌಸಿಂಗ್ ಬೋರ್ಡ್‍ನ ಕಿಕ್ಕೇರಮ್ಮ ದೇವಸ್ಥಾನದ ಬಳಿಯಿರುವ ಅಂಗನವಾಡಿ ಕೇಂದ್ರದಲ್ಲಿ ತಾಯಿ ಕಾರ್ಡ್ ಹೊಂದಿರುವ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಇಂದು ಕೋಳಿ ಮೊಟ್ಟೆಗಳನ್ನು (Egg) ನೀಡಿದ್ದಾರೆ. ಮನೆಗೆ ಹೋಗಿ ಕೋಳಿ ಮೊಟ್ಟೆಗಳನ್ನು ಒಡೆದಾಗ ಮೊಟ್ಟೆಗಳು ಹಾಳಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಯತೀಂದ್ರ ನಮ್ಮ ಮನೆಯಲ್ಲಿದ್ದಾರೆ ಅಂತ ಆರೋಪ ಮಾಡೋದು ಸರಿಯಲ್ಲ – HDK ವಿರುದ್ಧ ಸಿಎಂ ವಾಗ್ದಾಳಿ
ಕೆಟ್ಟಿರುವ ಮೊಟ್ಟೆಗಳನ್ನು ಪೂರೈಕೆ ಮಾಡಿರುವವರ ವಿರುದ್ಧ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದು ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳು ಹಾಗೂ ಕೊಳೆತ ಮೊಟ್ಟೆಗಳನ್ನು ಪೂರೈಕೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಿಳೆಯರ ಒತ್ತಾಯಿಸಿದ್ದು, ಸಿಡಿಪಿಒ ಭಾಗ್ಯಮ್ಮ ಅವರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ತುಮಕೂರು (Tumakuru) ಜಿಲ್ಲಾ ಆಸ್ಪತ್ರೆ ವೈದ್ಯೆ ಮತ್ತು ಸಿಬ್ಬಂದಿಯ ಕ್ರೌರ್ಯಕ್ಕೆ ಬಲಿಯಾದ ಬಾಣಂತಿ, ಆಕೆಯ ಇಬ್ಬರು ನವಜಾತ ಶಿಶುಗಳ ದಾರುಣ ಸಾವು ವಿಚಾರದಲ್ಲಿ ಜನರ ದಾರಿ ತಪ್ಪಿಸಲೆತ್ನಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (K.Sudhakar) ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D.Kumaraswamy) ಅವರು ಟೀಕಾಪ್ರಹಾರ ಮುಂದುವರಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಹೆಚ್‌ಡಿಕೆ, ಅಮಾನುಷ ಸಾವುಗಳನ್ನು ಪ್ರಶ್ನಿಸಿದ ತಮ್ಮ ವಿರುದ್ಧವೇ ಲಘುವಾಗಿ ಟ್ವೀಟ್ ಮಾಡಿರುವ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ ಸಚಿವ ಸ್ಥಾನಕ್ಕೆ ಸುಧಾಕರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನೈತಿಕತೆ ಇದ್ದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ರಾಜೀನಾಮೆ ಪಡೆಯಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಪಡಿಸಿದ್ದಾರೆ. ಇದನ್ನೂ ಓದಿ: ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ – ಪ್ರಸವದ ವೇಳೆ ಬಾಣಂತಿ, ಅವಳಿ ಶಿಶುಗಳು ಸಾವು
ಟ್ವೀಟ್‌ನಲ್ಲೇನಿದೆ?
ಸಚಿವ ಸುಧಾಕರ್ ಅವರ ಮೇಲೆ ನೇರವಾಗಿಯೇ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು, ಮಾನ್ಯ ಸುಧಾಕರ್ ಅವರೇ ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ಸಾವುಗೇಡಿ ಸರ್ಕಾರದ ಆಡಳಿತದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಸಾವಿನ ಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ?
ರಾಜ್ಯದಲ್ಲಿ @BJP4Karnataka ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ.9/9
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 3, 2022
ಡಾ.ಸುಧಾಕರ್ ಅವರೇ ನಾನು ಎತ್ತಿದ ಪ್ರಶ್ನೆ ಏನು? ನೀವು ಕೊಟ್ಟ ಉತ್ತರವೇನು? ಮನುಷ್ಯತ್ವ ಇದೆಯಾ ನಿಮಗೆ? ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ ಆ ಬಾಣಂತಿ, ಆಕೆಯ ಎರಡು ನವಜಾತ ಶಿಶುಗಳ ದಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಃಸ್ಥಿತಿಗೆ ನನ್ನ ಧಿಕ್ಕಾರವಿದೆ.
ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಶ್ರೀ @BSBommai ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು. 8/9
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 3, 2022
ತುಮಕೂರು ಆಸ್ಪತ್ರೆಯಲ್ಲಿ ನಡೆದದ್ದೇನು? ಆ ವೈದ್ಯೆ ಮತ್ತು ಸಿಬ್ಬಂದಿಯ ನಿರ್ದಯ, ಕ್ರೌರ್ಯದ ವರ್ತನೆ, ಆಕೆಯನ್ನು ಆಸ್ಪತ್ರೆಗೆ ಕರೆತಂದ ಮಹಿಳೆಗೆ ಈಗ ಪೊಲೀಸರಿಂದ ಬೆದರಿಕೆ ಹಾಕಿಸುತ್ತಿರುವ ಬಗ್ಗೆ ನನಗೆ ಮಾಹಿತಿ ಇದೆ. ಅಧಿಕಾರ ಇದೆ ಎಂದು ಏನು ಬೇಕಾದರೂ ಮಾಡಬಹುದಾ? ಇನ್ನು ಆರೇ ತಿಂಗಳು, ನಿಮ್ಮ ಅಧಿಕಾರದ ಅಮಲು ಇಳಿಯುತ್ತದೆ. ಇದನ್ನೂ ಓದಿ: ಕಸದಲ್ಲಿ ಸಿಕ್ತು 50 ಗ್ರಾಂ ಮಾಂಗಲ್ಯ ಸರ – ಮಾಲೀಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕ
ಸಚಿವರೇ, ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ನಿಮಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ @BSBommai ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ನಿಮ್ಮ ಪಕ್ಷಕ್ಕೂ ಅಂಥ ನೈತಿಕತೆ @BJP4Karnataka ಸರಕಾರಕ್ಕೆ ಇದೆಯಾ? 10/10
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 5, 2022
ಇಂಥ ದಾರುಣ ಸಾವುಗಳಾದ ಮೇಲೆಯಾದರೂ ಹದಗೆಟ್ಟ ವ್ಯವಸ್ಥೆಯನ್ನು ಸರಿಪಡಿಸುವ ಬದಲು ಅದನ್ನೇ ಸಮರ್ಥಿಸಿಕೊಳ್ಳುವುದು ಎಂದರೆ ವಿಕಾರವಲ್ಲದೆ ಮತ್ತೇನು? ಜಿಲ್ಲಾಸ್ಪತ್ರೆಯಲ್ಲೇ ಇಂಥ ದುಃಸ್ಥಿತಿ ಇದ್ದರೆ ತಾಲೂಕು, ಅದಕ್ಕೂ ಕೆಳಹಂತದ ಆರೋಗ್ಯ ಕೇಂದ್ರಗಳ ಪಾಡೇನು? ಹೇಳಿ ಸಚಿವರೇ? ಆಸ್ಪತ್ರೆಯಿಂದ ನಿರ್ದಯವಾಗಿ ಹೊರಹಾಕಲ್ಪಟ್ಟ ಆ ತಾಯಿ, ನಾಲ್ಕು ಗೋಡೆಗಳ ನಡುವೆ ಇಡೀ ರಾತ್ರಿಯೆಲ್ಲಾ ನರಳಿ ಜೀವ ಚೆಲ್ಲಿದ್ದಾರೆ. ಜನಿಸಿದ ಕ್ಷಣದಲ್ಲೇ ಉಸಿರುಬಿಟ್ಟ ಆ ಎರಡು ಕಂದಮ್ಮಗಳ ಮರಣ ನಿಮ್ಮ ಅಂತಃಕರಣವನ್ನು ಕಲಕಿಲ್ಲವೇ ಸಚಿವರೇ? ಕರ್ನಾಟಕ ಕಂಡ ಅತ್ಯಂತ ಕರಾಳ ಕ್ರೌರ್ಯವಿದು. ಅದನ್ನು ನಾನು ಪ್ರಶ್ನಿಸಿದ್ದೇ ತಪ್ಪಾ?
ನಿಮ್ಮ ಪರ್ಸಂಟೇಜ್ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮ ಒಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ. ʼಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲʼ ಸಚಿವರೇ. 9/10
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 5, 2022
ನನ್ನ ಸರ್ಕಾರವಿದ್ದಾಗ ಚಾಮರಾಜನಗರದ ಸುಳವಾಡಿಯ ದೇಗುಲದಲ್ಲಿ ನಡೆದ ವಿಷಪ್ರಸಾದ ಪ್ರಕರಣಕ್ಕೂ ಇದಕ್ಕೂ ಸಂಬಂಧವೇನು? ಆ ಘಟನೆ ನಡೆದಾಗ ನಾನು ಚೆನ್ನೈನಲ್ಲಿ ಅಧಿಕೃತ ಪ್ರವಾಸದಲ್ಲಿದ್ದೆ. ವಿಷಯ ಗೊತ್ತಾದ ಕೂಡಲೇ ಹಿಂದಿರುಗಿ ಸ್ಥಳಕ್ಕೆ ಭೇಟಿ ನೀಡಿದ್ದೆ. ಅದಕ್ಕೂ ಇದಕ್ಕೂ ಸಂಬಂಧವೇನು? ಅಲ್ಲಿ ನಡೆದಿದ್ದು ಷಡ್ಯಂತ್ರ, ಇಲ್ಲಿ ನಡೆದದ್ದು ಕ್ರೌರ್ಯ. ಅದೇ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಿಂದ 36 ಜನರ ಸಾವಿಗೆ ಕಾರಣರಾಗಿದ್ದು ಯಾರು? ನಿಮ್ಮ ವೈಫಲ್ಯವಲ್ಲವೇ? ರಾಜ್ಯದ ಉದ್ದಗಲಕ್ಕೂ ನಡೆದ ಸಾವುಗಳ ರಣಕೇಕೆ ನಿಮ್ಮ ಕಿವಿಗೆ ಇಂಪಾಗಿತ್ತಾ? ಕೋವಿಡ್ ಹೆಸರಿನಲ್ಲಿ ನಡೆದ ಕೊಳ್ಳೆ ಬಗ್ಗೆ ನನಗಿಂತ ನಿಮ್ಮ ಪಕ್ಷದವರಿಗೇ ಚೆನ್ನಾಗಿ ಗೊತ್ತು. ಇದನ್ನೂ ಓದಿ: ಶಿಕ್ಷಕಿ ಹೊಡೆತದಿಂದ ವಿದ್ಯಾರ್ಥಿನಿ ಸಾವು ಪ್ರಕರಣ – ನಮಗೆ ಹಣ ಬೇಡ, ನ್ಯಾಯ ಬೇಕು: ವಿದ್ಯಾರ್ಥಿನಿ ಅಜ್ಜಿ
ಮಾನ್ಯ @mla_sudhakar ಅವರೇ; ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ʼಸಾವುಗೇಡಿ ಸರಕಾರʼದ ಆಡಳಿತದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? 1/10
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 5, 2022
ಕಾಸಿಗಾಗಿ ಹುದ್ದೆ ಇದು ನಿಮ್ಮ ಸುಲಿಗೆ ನೀತಿ. ವೈದ್ಯರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಬಿಕರಿಗಿಟ್ಟಿದ್ದೀರಿ. ಅವರ ಒಂದು ವರ್ಷದ ವೇತನ ನೀವು ನಿಗದಿ ಮಾಡಿರುವ ದರ. ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯುತ್ತಿದೆ ಎಂದರೆ ಲೋಕಕ್ಕೆ ಕಾಣುವುದಿಲ್ಲವೇ? ಕಳ್ಳ ಬೆಕ್ಕಿನ ಆಟ ಕಾಲದುದ್ದಕ್ಕೂ ನಡೆಯುವುದಿಲ್ಲ, ನೆನಪಿರಲಿ ಸಚಿವರೇ. ನಿಮ್ಮ ಪರ್ಸಂಟೇಜ್ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮ ಒಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದಿರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ. ಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲ ಸಚಿವರೇ.
ಸಚಿವರೇ ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ನಿಮಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ಅಂಥ ನೈತಿಕತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಇದೆಯಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಮನಗರ: ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೂ ಈ ಮೂಢನಂಬಿಕೆ ಮಾತ್ರ ಇನ್ನೂ ಜೀವಂತವಾಗಿದೆ. ಗ್ರಾಮಕ್ಕೆ ಕೇಡಾಗುತ್ತದೆಯೆಂದು ಹೆದರಿ 20 ದಿನದ ಹಸುಗೂಸು ಹಾಗೂ ಬಾಣಂತಿಯನ್ನ ಗ್ರಾಮದ ಹೊರಗಿಟ್ಟಿರುವ ಘಟನೆ ನಡೆದಿದೆ.
ಹೌದು. ರಾಮನಗರ ತಾಲೂಕಿನ ದೇವರದೊಡ್ಡಿ ಗ್ರಾಮದ ಹೊರವಲಯದ ಪ್ರದೇಶದಲ್ಲಿ ಮೌಢ್ಯತೆಯ ಅನಾವರಣವಾಗಿದೆ. ಇಲ್ಲಿ ತಲೆಮಾರುಗಳಿಂದಲೂ ಋತುಮತಿಯಾದವರು, ಬಾಣಂತಿಯರನ್ನ 2 ತಿಂಗಳು 3 ದಿನ ಊರ ಹೊರಗಿಟ್ಟು ಮೌಢ್ಯತೆಯ ಪರಮಾವಧಿ ಮೀರಿದ್ದಾರೆ.
ಗ್ರಾಮದ ಶ್ರೀರಂಗಪ್ಪ ದೇವರಿಗಾಗಿ ಈ ಮೌಢ್ಯತೆಯನ್ನು ಆಚರಿಸಿಕೊಂಡು ಬರುತ್ತಿದ್ದು, ಉಲ್ಲಂಘಿಸಿದ್ರೇ ಗ್ರಾಮಕ್ಕೆ ಕೇಡಾಗುತ್ತೆ ಅನ್ನೋ ನಂಬಿಕೆ ಇಲ್ಲಿನ ಜನರನ್ನು ಆವರಿಸಿದೆ. ಈ ಮೌಢ್ಯ ಆಚರಣೆ ಕೇವಲ ಬಾಣಂತಿಯರಿಗೆ ಮಾತ್ರವಲ್ಲ, ಋತುಮತಿಗಳಿಗೆ ಹಾಗೂ ದೊಡ್ಡವರಾಗುವ ಬಾಲಕಿಯರಿಗೂ ಅನ್ವಯಿಸುತ್ತೆ. ಇವರಿಗಾಗಿ ಗ್ರಾಮದ ಹೊರಗೆ ಕೆಲವು ಕೊಠಡಿಗಳನ್ನು ನಿರ್ಮಿಸಿದ್ದಾರೆ. ತಮ್ಮ ದಿನದ ಅವಧಿ ಮುಗಿಯುವರೆಗೂ ಅವರು ಅಲ್ಲೇ ವಾಸವಿರಬೇಕು. ಇದನ್ನೂ ಓದಿ:ಮಕ್ಕಳು ಓಡಿ ಹೋಗದಂತೆ ತಡೆಯಲು ಕಾಲಿಗೆ ಕಬ್ಬಿಣ ಸರಪಳಿ ಕಟ್ಟಿದ ಮೌಲಾನಾ
ಲೆಕ್ಕ ಹಾಕಿದರೆ ದೇವರದೊಡ್ಡಿ ಗ್ರಾಮದಲ್ಲಿ ಕೇವಲ 100 ರಿಂದ 139 ಮನೆಗಳಿವೆ. ರಾಜಧಾನಿಯಿಂದ ಕೇವಲ 45 ಕಿ.ಮೀ ದೂರ. ರಾಜಧಾನಿಯಲ್ಲಿ ಆಧುನೀಕತೆ ಅಬ್ಬರವಿದ್ದರೆ ಈ ಗ್ರಾಮದಲ್ಲಿ ಮೌಢ್ಯತೆ ಮನೆ ಮಾಡಿರೋದು ಮಾತ್ರ ವಿರ್ಪಯಾಸವೇ ಸರಿ. ಇದನ್ನೂ ಓದಿ: ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದು ಮಗು ಸೇರಿದಂತೆ 4 ಮಂದಿ ಸಾವು
ಭವ್ಯ(19) ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ ಬಾಣಂತಿಯಾಗಿದ್ದಾಳೆ. ಆದರೆ ಭವ್ಯ ಪೋಷಕರು ಇದು ಕೊಲೆಯೆಂದು ಆರೋಪಿಸುತ್ತಿದ್ದಾರೆ. ಭವ್ಯ ಎರಡು ತಿಂಗಳ ಹಿಂದೆಯಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದು, ಕೊರೊನಾ ಕಾರಣದಿಂದ ಬಾಣಂತನಕ್ಕೆ ತವರು ಮನೆಗೆ ಹೋಗದೇ, ಗಂಡನ ಮನೆಯಲ್ಲಿಯೇ ಉಳಿದುಕೊಂಡಿದ್ದಳು. ಆದರೆ ಇಂದು ಭವ್ಯ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವಪ್ಪಿದ್ದಾಳೆ. ಇದನ್ನೂ ಓದಿ: ಆಶಾ ಕಾರ್ಯಕರ್ತೆಯರಿಗೆ ಬಾಗಿನ, ಚಿನ್ನದ ಮೂಗುತಿ ಗಿಫ್ಟ್ ಕೊಟ್ಟ ಯುವಕ
ಮೃತ ಭವ್ಯ ಸಂಬಂಧಿಕರು ಭವ್ಯ ಗಂಡ ಹಾಗೂ ಅವರ ಮನೆಯವರ ವಿರುದ್ಧ ಕೊಲೆ ಆರೋಪವನ್ನು ಮಾಡುತ್ತಿದ್ದಾರೆ. ಒಂದು ವರ್ಷದ ಹಿಂದೆ ಮೇಳೇನಹಳ್ಳಿ ಗ್ರಾಮದ ಭವ್ಯ ಅವರನ್ನು ತಿರುಪತಿ ಮಾಲೇಕಲ್ ಗ್ರಾಮದ ಜಗದೀಶ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯಾದಾಗಿನಿಂದಲೂ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಭವ್ಯ ಪೋಷಕರು ಆರೋಪಿಸುತ್ತಿದ್ದಾರೆ.
ಮಂಡ್ಯ: ಕೊರೊನಾದಿಂದ ಬಳಲುತ್ತಿದ್ದ ಗರ್ಭಿಣಯೊಬ್ಬರುÂ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲ ಗಂಟೆಗಳಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಜರುಗಿದೆ.
ಮದ್ದೂರು ತಾಲೂಕಿನ ಅರೆತಿಪ್ಪೂರು ಗ್ರಾಮದ ಗುಣಶ್ರೀ (35) ಸಾವನ್ನಪ್ಪಿರುವ ದುರ್ದೈವಿ. ಹಲವು ದಿನಗಳಿಂದ ಕೊರೊನಾದಿಂದ ಬಳಲುತ್ತಿದ್ದ ಗುಣಶ್ರೀ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ಗುಣಶ್ರೀ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆದರೆ ಮಗು ಹುಟ್ಟಿದ ಕೆಲ ಗಂಟೆಯಲ್ಲೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಗುಣಶ್ರೀ ಅವರು ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದವರು. ಕಳೆದ ನಾಲ್ಕು ವರ್ಷದ ಹಿಂದೆ ಮದ್ದೂರು ತಾಲೂಕಿನ ಅರೆತಿಪ್ಪೂರಿನ ಮನೋಹರಗೌಡ ಎಂಬವರೊಂದಿಗೆ ಮದುವೆಯಾಗಿದ್ದರು. ಗುಣಶ್ರೀ ಅವರು ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರದ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
ನಾಲ್ಕು ವರ್ಷದಿಂದ ಇವರಿಗೆ ಮಕ್ಕಳಾಗಿರಲಿಲ್ಲ. ಇದೀಗ ಮಗುವಿನ ನೀರಿಕ್ಷೆಯಲ್ಲಿ ಇದ್ದ ಕುಟುಂಬ ಗುಣಶ್ರೀ ಅವರ ಸಾವಿನಿಂದ ದುಃಖತಪ್ತವಾಗಿದೆ. ಇತ್ತ ಒಂದು ದಿನದ ಹಸುಗೂಸು ತಾಯಿಯನ್ನು ಕಳೆದುಕೊಂಡಿರುವುದು ಕಣ್ಣೀರು ತರಿಸುವಂತಿದೆ.
ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಎರಡು ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಡೂರು ತಾಲೂಕಿನ ಅಂಚೆಚೋಮನಹಳ್ಳಿ ಗ್ರಾಮದ ಶೀಲಾ(22) ಮೃತ ದುರ್ದೈವಿ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಸಂಬಂಧಿಕರು ಆರೋಪಿಸಿ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮೃತಳ ಶವವನ್ನು ಪೊಲೀಸ್ ಠಾಣೆ ಮುಂದಿಟ್ಟು ಸಂಬಂಧಿಕರು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ ಹಾಗೂ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮದುವೆಯಾಗಿ ಮೂರು ವರ್ಷವಾಗಿದೆ. ಮೊದಲ ಮಗು ಹೆಣ್ಣಾಗಿದ್ದು, ಈಗ ಮುದ್ದಾದ ಗಂಡು ಮಗು ಜನಿಸಿದೆ. ಆದರೆ ವೈದ್ಯರ ನಿರ್ಲಕ್ಷ್ಯದಿಂದ ಮಗು ಅಮ್ಮನನ್ನು ಕಳೆದುಕೊಂಡಿದೆ ಹಾಗೂ ಪೋಷಕರು ಮಗಳನ್ನು ಕಳೆದುಕೊಂಡಿದ್ದೇವೆ ಎಂದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಗೋಳಾಡಿದ್ದಾರೆ.
ಎರಡು ದಿನದ ಹಿಂದೆ ಡೆಲಿವರಿಯಾದ ಶೀಲಾಗೆ ತೀವ್ರವಾದ ರಕ್ತಸ್ರಾವ ಆಗುತ್ತಿತ್ತು. ನಂತರ ವೈದ್ಯರು ಬಾಣಂತಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುವಂತೆ ಸೂಚಿಸಿದ್ದರು. ಬಾಣಂತಿಯನ್ನು ಶಿವಮೊಗ್ಗಕ್ಕೆ ಕರೆದೊಯ್ದು ಚಿಕಿತ್ಸೆಗೆ ಸಿದ್ಧತೆ ನಡೆಸಿಕೊಳ್ಳುವ ಮುನ್ನವೇ ಸಾವಿಗೀಡಾಗಿದ್ದಾರೆ. 22 ವರ್ಷದ ಯುವತಿ ಸಾವಿಗೆ ಕಡೂರು ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಪೋಷಕರು ಆರೋಪಿಸಿ ವೈದ್ಯರ ವಿರುದ್ಧ ಪೊಲೀಸ್ ಠಾಣೆ ಮುಂದೆ ಕಣ್ಣೀರಿಡುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಅಕ್ಷಯ್, ಈಗಾಗಲೇ ಡಿ.ಎಚ್.ಓ ಜೊತೆ ಮಾತನಾಡಿದ್ದು, ತನಿಖೆ ಮಾಡುವುದಾಗಿ ತಿಳಿಸಿದ್ದಾರೆ. ತನಿಖೆಯ ರಿಪೋರ್ಟ್ ಬಂದ ಬಳಿಕ ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ರಾಯಚೂರು: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆಯಾದ ನಂತರ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಮೃತ ಮಹಿಳೆಯ ಸಂಬಂಧಿಕರು ಆರೋಪ ಮಾಡಿದ್ದಾರೆ.
ಈ ಘಟನೆ ರಾಯಚೂರಿನ ದೇವದುರ್ಗದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದ್ದು, ದೇವದುರ್ಗದ ಯಲ್ಲಾದೊಡ್ಡಿ ತಾಂಡದ ಶಿವಮ್ಮ( 24) ಮೃತ ಬಾಣಂತಿ. ಹೆರಿಗೆಯಾದ ಬಳಿಕ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮಗು ಕ್ಷೇಮವಾಗಿದ್ದು, ತಾಯಿ ಮೃತಪಟ್ಟಿದ್ದಾರೆ.
ಶಿವಮ್ಮನಿಗೆ ಮಧ್ಯರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅಕೆಯನ್ನು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಬರುವ ಮಾರ್ಗಮಧ್ಯೆದಲ್ಲೇ ಹೆರಿಗೆಯಾಗಿದೆ. ಈ ವೇಳೆ ಬೆಳಗ್ಗಿನ ಜಾವ ನಾಲ್ಕು ಗಂಟೆಯಾಗಿದ್ದ ಕಾರಣ ಯಾವ ವೈದ್ಯರು ಬಾಣಂತಿಗೆ ಚಿಕಿತ್ಸೆ ನೀಡಲು ಬಂದಿಲ್ಲ. ಈ ಕಾರಣದಿಂದ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗದಗ: ಚೊಚ್ಚಲ ಹೆರಿಗೆ 108 ವಾಹನದಲ್ಲೇ ಆಗಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಿಸಿದರೂ ಅಂಬುಲೆನ್ಸ್ ಚಾಲಕ ಸಮಯಪ್ರಜ್ಞೆಯಿಂದ ಹೆರಿಗೆ ಮಾಡಿಸಿ ಜೀವ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ಶಿರಹಟ್ಟಿಯ 108 ಅಂಬುಲೆನ್ಸ್ ವಾಹನ ಚಾಲಕ ಮಹೇಶ್ ಮಾರನಬಸರಿ ಈ ಸಾಹಸ ಮಾಡಿದ್ದಾರೆ. ಅಂಬುಲೆನ್ಸ್ ವಾಹನದಲ್ಲಿ ನರ್ಸಿಂಗ್ ಸ್ಟಾಫ್ ಇಲ್ಲದಿದ್ದರೂ ವಾಹನದಲ್ಲೇ ಹೆರಿಗೆ ಮಾಡಿಸಿ ಚಾಲಕ 2 ಜೀವ ಉಳಿಸಿದ್ದಾರೆ. 108 ವಾಹನದಲ್ಲಿ ಚಾಲಕ ಒಬ್ಬನೇ ಇದ್ದು, ಹೆರಿಗೆ ಮಾಡಿಸಿಕೊಂಡು ಕ್ಲೀನಿಂಗ್ ಮಾಡಿ ಮಗು ಸಮೇತ ಮಹಿಳೆಯನ್ನು ಚಾಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿ ಅವರಿಗೆ ಚೊಚ್ಚಲ ಹೆರಿಗೆ ಆಗಿದೆ. ಗದಗ ತಾಲೂಕಿನ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದ್ದು, ಬಾಣಂತಿ ನಡೆದುಕೊಂಡು ಬಂದರೂ ವೀಲ್ ಚೇರ್, ಸ್ಟ್ರೀಟ್ರ್ ತರೆದೆ ಆಸ್ಪತ್ರೆ ಸಿಬ್ಬಂದಿ ದಿವ್ಯ ನಿರ್ಲಕ್ಷ್ಯ ಮೆರೆದಿದ್ದಾರೆ. ರಕ್ತ ಸ್ರಾವವಾಗುತ್ತಿದ್ದರೂ, ಬಾಣಂತಿ ವಾಹನದಿಂದ ಇಳಿದು ನಡೆದು ಬಂದಿದ್ದಾರೆ. ಆದರೆ ಚಾಲಕನ ಸಾಹಸದಿಂದಾಗಿ ಹೆರೆಗೆ ಸುಗಮವಾಗಿದೆ. ಆಸ್ಪತ್ರೆ ಸಿಬ್ಬಂದಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡ: ಜಿಲ್ಲೆಯ ಬಣದೂರ ಗ್ರಾಮದ ಹೊರಗೆ ಲಾಕ್‍ಡೌನ್‍ನಿಂದಾಗಿ ಊರಿಗೆ ಹೋಗಲಾಗದೇ ಬಾಣಂತಿ ಹಾಗೂ ಹಸುಗೂಸು ಹೆಳವರ ಮಧ್ಯೆ ಗೂಡ್ಸ್ ವಾಹನದಲ್ಲೇ ದಿನ ಕಳೆಯುತ್ತಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಮಾಡಿದ ಮಾನವೀಯ ವರದಿಗೆ ಸ್ಪಂದನೆ ಸಿಕ್ಕಿದೆ.
ಲಾಕ್‍ಡೌನ್‍ನಿಂದ ಹೆಳವರ ಮಧ್ಯೆ ಸಿಕ್ಕಿ ಹಾಕಿಕೊಂಡಿರುವ ಸರಸ್ವತಿ ತನ್ನ ತಾಯಿಯೊಂದಿಗೆ ಗೂಡ್ಸ್ ವಾಹನದಲ್ಲಿ ನೆಲೆಸಿದ್ದಾರೆ. ಸಮಾನ್ಯವಾಗಿ ಬಾಣಂತಿಗೆ ಈ ಸಮಯದಲ್ಲಿ ಬೀಗರ ಸಂಬಂಧಿಕರು ಕೊಬ್ಬರಿ, ಸಕ್ಕರೆ, ಬೆಲ್ಲ ಹಾಗೂ ಡ್ರೈ ಫ್ರೂಟ್ಸ್ ನಂತಹ ಪೌಷ್ಟಿಕಾಂಶದ ಆಹಾರಗಳನ್ನು ನೀಡುವ ಸಂಪ್ರದಾಯ ಇದೆ. ಲಾಕ್‍ಡೌನ್ ಕಾರಣ ಯಾವ ಸಂಬಂಧಿಕರಿಗೂ ಬಂದು ಮಗುವಿನ ಮುಖ ನೋಡಲು ಆಗಿರಲಿಲ್ಲ.
ಈ ವಿಷಯ ತಿಳಿದ ಧಾರವಾಡದ ಸಮಾಜ ಸೇವಕ ಸಾಹಿಲ್ ಡಾಂಗೆ ಹಾಗೂ ಆತನ ತಂದೆ ಸಾವಿರಾರು ರೂಪಾಯಿ ಮೌಲ್ಯದ ಡ್ರೈ ಫ್ರೂಟ್ಸ್ ಸಹಿತ ಕೊಬ್ಬರಿ, ಬೆಲ್ಲದ ಬುತ್ತಿಯೊಂದಿಗೆ ಆಗಮಿಸಿ ಬಾಣಂತಿ ಸರಸ್ವತಿಗೆ ಧೈರ್ಯ ತುಂಬಿದರು. ಅಲ್ಲದೇ ಬಾಣಂತಿಗೆ ಸೀರೆ ಕೂಡ ಕೊಟ್ಟು ಗೌರವಿಸಿದ್ದಾರೆ. ಈ ಬಾಣಂತಿ ಜೊತೆಯಲ್ಲಿ ಇರುವ ಅಕ್ಕ ಪಕ್ಕದ ಹೆಳವರ ಕುಟುಂಬಗಳಿಗೆ 30ಕ್ಕೂ ಹೆಚ್ಚು ದಿನಸಿ ಕಿಟ್ ಸಹ ನೀಡಿದರು. ಇದನ್ನೂ ಓದಿ: ಹಸುಗೂಸು ಜೊತೆ ಬಾಣಂತಿ ಬಯಲಲ್ಲೇ ಜೀವನ – ಮಿನಿ ಗೂಡ್ಸ್ ವಾಹನದಲ್ಲಿ ಬದುಕು
ಲಾಕ್‍ಡೌನ್ ವೇಳೆ ಈ ಜನರಿಗೆ ಸ್ಥಳೀಯ ಶಾಸಕರು ಸಹಾಯಕ್ಕೆ ಬರದೇ ಇರುವುದಕ್ಕೆ ಆಕ್ರೋಶ ಕೂಡ ವ್ಯಕ್ತವಾಗಿದ್ದು, ಈ ಜನರಿಗೆ ಸ್ಥಳೀಯ ಜನಪ್ರತಿನಿಧಿಗಳು ಸಹಾಯ ಮಾಡಲಿ ಎಂದು ಸಾರ್ವಜನಿಕರು ಒತ್ತಾಯಿಸಿದರು.
– ಊಟವಿಲ್ಲದೇ ಬಳಲುತ್ತಿರುವ ನಿರಾಶ್ರಿತ ಹಕ್ಕಿ-ಪಿಕ್ಕಿ ಕುಟುಂಬಗಳು
ಚಿಕ್ಕಮಗಳೂರು: ಕೊರೊನಾ ಎಫೆಕ್ಟ್‍ನಿಂದ ಹೊಟ್ಟೆ ತುಂಬಾ ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗಿದೆ.
ಹಣ್ಣು-ತರಕಾರಿ ಸೇರಿದಂತೆ ಪೌಷ್ಠಿಕ ಆಹಾರ ಸಿಗದೆ ಬಾಣಂತಿಯೂ ಸೊರಗಿದ್ದು, ಹಸುಗೂಸಿಗೆ ತಾಯಿಯ ಎದೆಹಾಲು ಕೂಡ ಸರಿಯಾಗಿ ಸಿಗುತ್ತಿಲ್ಲ. ನಗರದ ಹಿರೇಮಗಳೂರಿನ ರೈಲ್ವೆ ಬ್ರಿಡ್ಜ್ ಕೆಳಗೆ ಬಯಲಲ್ಲಿ ಶೆಡ್ ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತ ಕುಟುಂಬಗಳು ಶೋಚನಿಯ ಸ್ಥಿತಿ ತಲುಪಿವೆ. ಅಂದೇ ದುಡಿದು ಅಂದೇ ತಿನ್ನುತ್ತಿದ್ದ ಈ ನಿರಾಶ್ರಿತ ಹಕ್ಕಿ-ಪಿಕ್ಕಿ ಕುಟುಂಬಗಳಿಗೆ ಕೊರೊನಾ ಕಾಲದಲ್ಲಿ ಹೊಟ್ಟೆ ತುಂಬಾ ಊಟವೂ ಸಿಗದಂತಹ ಸ್ಥಿತಿ ನಿರ್ಮಾಣವಾಗಿದೆ.
ಮಗುವಿಗೆ ಜನ್ಮ ನೀಡಿರುವ ಬಾಣಂತಿಯ ಆರೋಗ್ಯದಲ್ಲೂ ಏರುಪೇರಾಗಿದ್ದು ಹೊಟ್ಟೆ ತುಂಬಾ ಊಟವಿಲ್ಲದೆ ಆಕೆ ಬಳಲುತ್ತಿದ್ದರೆ, ಹೊಟ್ಟೆ ತುಂಬಾ ತಾಯಿಯ ಎದೆ ಹಾಲು ಸಿಗದ ಹಸುಗೂಸು ಸೊರಗಿ ಹೋಗಿದೆ. ಆರಂಭದ ದಿನದಲ್ಲಿ ದಿನಕ್ಕೆ ಒಂದು ಹೊತ್ತು ಯಾರಾದರೂ ತಂದುಕೊಟ್ಟರೆ ಊಟ ಮಾಡುತ್ತಿದ್ದರು. ಆದರೆ ಈಗ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ವಾರದ ಹಿಂದೆ ಉಳ್ಳವರು ತಂದು ಕೊಟ್ಟ ಸಾಮಾಗ್ರಿಗಳ ಕಿಟ್ ಮುಗಿದು ಹೋಗಿದ್ದು ಈ ಕುಟುಂಬಗಳು ನಾಳೆಯ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ.
14 ಕುಟುಂಬಗಳು ವಾಸವಿರುವ ಈ ಬಯಲಲ್ಲಿ 20ಕ್ಕೂ ಹೆಚ್ಚು ಮಕ್ಕಳಿವೆ. ಯಾರಾದರು ಬಂದರೆ ಮಕ್ಕಳು ಏನಾದರು ಕೊಡುತ್ತಾರೆಂದು ಬಂದವರ ಕೈಯನ್ನೆ ನೋಡುತ್ತವೆ. ನಾವು ಕೆಲಸಕ್ಕೆ ಹೋಗಿದ್ದರೆ ಏನೂ ಬೇಡವಾಗಿತ್ತು. ಆದರೆ ಈಗ ತಿಂಗಳಿಂದ ಕೆಲಸಕ್ಕೆ ಹೋಗಿಲ್ಲ. ಆಸ್ಪತ್ರೆಗೆ ಹೋಗಲು ದುಡ್ಡಿಲ್ಲ. ಊಟಕ್ಕೂ ಕಷ್ಟದ ಸ್ಥಿತಿ ಎದುರಾಗಿದೆ. ಯಾರಾದರೂ ರೇಷನ್ ಕೊಟ್ಟರೆ ಬದುಕುತ್ತೇವೆ ಎಂದು ಅಲ್ಲಿನ ಜನರು ಕಷ್ಟವನ್ನು ತೋಡಿಕೊಂಡಿದ್ದಾರೆ.