Tag: ಬಾಣಸವಾಡಿ

  • ನನ್ನ ಗಂಡನಿಗೆ ಪುರುಷತ್ವ ಇಲ್ಲ ಎಂದು ಪೊಲೀಸರಿಗೆ ಪತ್ನಿ ದೂರು

    ನನ್ನ ಗಂಡನಿಗೆ ಪುರುಷತ್ವ ಇಲ್ಲ ಎಂದು ಪೊಲೀಸರಿಗೆ ಪತ್ನಿ ದೂರು

    ಬೆಂಗಳೂರು: ‘ನನ್ನ ಗಂಡನಿಗೆ ಪುರುಷತ್ವ ಇಲ್ಲ’ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವಿಚಾರ ಮೊದಲೇ ಗೊತ್ತಿದ್ದರೂ ತನ್ನ ಮಾವ ಹಾಗೂ ಅತ್ತೆ ನನ್ನ ಜೊತೆ ಮದುವೆ ಮಾಡಿಸಿದ್ದರು. ಈ ಮೂಲಕ ಇವರೆಲ್ಲಾ ಸೇರಿ ನನಗೆ ಮೋಸ ಮಾಡಿದ್ದಾರೆ ಎಂದು ಮಹಿಳೆ ಬಾಣಸವಾಡಿ ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರಿನಲ್ಲೇನಿದೆ?: 2014ರ ಜೂನ್ 5ರಂದು ನನಗೆ (ವಾಣಿ – ಹೆಸರು ಬದಲಿಸಲಾಗಿದೆ) ಎಡ್ವಿನ್ ಎಂಬಾತನ ಜೊತೆ ಮದುವೆ ಮಾಡಿಸಿದ್ದಾರೆ. ಮದುವೆ ಸಂದರ್ಭ ವರದಕ್ಷಿಣೆಯನ್ನೂ ನೀಡಿದ್ದೆವು.

    ಮದುವೆಯಾದ ಫಸ್ಟ್ ನೈಟಲ್ಲೇ ಪತಿಗೆ ಪುರುಷತ್ವ ಇಲ್ಲ. ಒಬ್ಬ ಗಂಡಸಿಗೆ ಇರಬೇಕಾದ ಯಾವುದೇ ರೀತಿಯ ಭಾವನೆಗಳಾಗಲೀ, ಲಕ್ಷಣಗಳಾಗಲೀ ಇಲ್ಲ ಎಂದು ನನಗೆ ಗೊತ್ತಾಯಿತು. ಇದರಿಂದ ನಾನು ತೀವ್ರ ಆಘಾತಕ್ಕೆ ಒಳಗಾಗಿ, ಮಾನಸಿಕವಾಗಿ ನೊಂದಿದ್ದೇನೆ.

    ನನ್ನ ಪತಿ ದುರ್ಬಲ ಎಂದು ಎಡ್ವಿನ್ ತಂದೆ ಆರೋಕ್ಯದಾಸ್ ಹಾಗೂ ತಾಯಿ ಸೆಲ್ವಿ ಅವರಿಗೆ ಗೊತ್ತಿತ್ತು. ಆದರೂ ಅವರು ಮದುವೆ ಮಾಡಿ ನನಗೆ ಮೋಸ ಮಾಡಿದ್ದಾರೆ. ಹಾಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಮಾರ್ಚ್ 15ರಂದು ನೀಡಿರುವ ದೂರಿನಲ್ಲಿ ಮಹಿಳೆ ಮನವಿ ಮಾಡಿಕೊಂಡಿದ್ದಾರೆ.

     

  • ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿ ಬಂಧನ

    ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿ ಬಂಧನ

    ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಗಗನ ಸಖಿಯೊಬ್ಬರ ಎದೆ ಮೇಲಿನ ಬಟ್ಟೆ ಎಳೆದು ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    28 ವರ್ಷದ ಪ್ರೇಮ್ ಕುಮಾರ್ ಬಂಧಿತ ಆರೋಪಿ. ಬಾಣಸವಾಡಿಯ ಮಾರುತಿ ಸೇವಾನಗರದ ನಿವಾಸಿಯಾಗಿರುವ ಈತ ಪೈಂಟರ್ ಕೆಲಸ ಮಾಡುತ್ತಿದ್ದಾನೆ.

    ಏನಿದು ಪ್ರಕರಣ?: ಕಳೆದ ಫೆ. 12ರಂದು ರಾತ್ರಿ ನಗರದ ಹೆಚ್‍ಬಿಆರ್ ಲೇಔಟ್‍ನ 99 ದೋಸಾ ಹೊಟೇಲ್‍ನಿಂದ ಊಟ ಮುಗಿಸಿ ಗಗನ ಸಖಿ ತನ್ನ ಗೆಳೆಯ ಅನಿಶ್ ಜೊತೆ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಎರಡು ಬೈಕಿನಲ್ಲಿ ಬಂದ ಹೆಲ್ಮೆಟ್‍ಧಾರಿ ದುಷ್ಕರ್ಮಿಗಳು ಆಕೆಯ ಎದೆಯ ಮೇಲಿನ ಬಟ್ಟೆ ಎಳೆದು ಅಸಭ್ಯವಾಗಿ ವರ್ತನೆ ಮಾಡಿದ್ದರು. ಕೂಡಲೇ ಯುವತಿ ಕಿರುಚಾಡಿದ್ದು, ಗೆಳೆಯನಿದ್ದ ಕಾರಣ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದರು.

    ಘಟನೆ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯ ಮೇಲೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.