Tag: ಬಾದಲ್ ನಂಜುಂಡಸ್ವಾಮಿ

  • ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹುಟ್ಟು ಹಬ್ಬಕ್ಕೆ ಸಿಕ್ತು ಭರ್ಜರಿ ಗಿಫ್ಟ್

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹುಟ್ಟು ಹಬ್ಬಕ್ಕೆ ಸಿಕ್ತು ಭರ್ಜರಿ ಗಿಫ್ಟ್

    ನಿನ್ನೆ ತಮ್ಮ 40ನೇ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ. ಈ ಬಾರಿ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲು ಜಪಾನ್ ಗೆ ತೆರಳಿದ್ದರು. ಹಾಗಾಗಿ ಅವರ ನಟನೆಯ ಹಾಗೂ ನಿರ್ಮಾಣದ ಯಾವುದೇ ಪೋಸ್ಟರ್ ರಿಲೀಸ್ ಆಗಿರಲಿಲ್ಲ. ಈ ಕಾರಣದಿಂದಾಗಿಯೇ ಅಭಿಮಾನಿಗಳಿಗೆ ಸಹಜವಾಗಿಯೇ ನಿರಾಸೆ ಆಗಿತ್ತು. ಆ ನಿರಾಸೆಯನ್ನು ಹೋಗಲಾಡಿಸಿದ್ದಾರೆ. ಖ್ಯಾತ ಯುವ ಚಿತ್ರಕಲಾವಿದ ಬಾದಲ್ ನಂಜುಂಡ ಸ್ವಾಮಿ.

    ತಮ್ಮ ವಿಶೇಷ ಕಲಾಕೃತಿ ಮತ್ತು ಅದನ್ನು ಪ್ರಸೆಂಟ್ ಮಾಡುವ ರೀತಿಯಲ್ಲಿ ಯಾವಾಗಲೂ ವಿಶೇಷವನ್ನೇ ಕಾಯ್ದುಕೊಂಡು ಬಂದಿರುವ ಬಾದಲ್, ಈ ಬಾರಿ ರಮ್ಯಾ ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿಸಿದ್ದಾರೆ. ಯಲಹಂಕ ಸಮೀಪದ ಗೋಡೆಯ ಮೇಲೆ 35 ಫೀಟ್ ರಮ್ಯಾ ಚಿತ್ರವನ್ನು ಬಿಡಿಸಿದ್ದಾರೆ. ಇದೇ ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಟಿಯೊಬ್ಬರ ಚಿತ್ರವು ಈ ಪ್ರಮಾಣದಲ್ಲಿ ಮೂಡಿ ಬಂದಿದೆ ಎನ್ನುವುದು ಮತ್ತೊಂದು ವಿಶೇಷ. ಇದನ್ನೂ ಓದಿ: ಜಪಾನ್ ನಲ್ಲಿ ಕುತ್ಕೊಂಡು ತನಗೀಗ 40 ವರ್ಷ ಎಂದು ಘೋಷಿಸಿಕೊಂಡ ರಮ್ಯಾ

    ಸದ್ಯ ರಮ್ಯಾ ಅವರು ಜಪಾನ್ ಗೆ ಹಾರಿದ್ದು, ಅಲ್ಲಿಂದಲೇ ಅಭಿಮಾನಿಗಳಿಗೆ ವಯಸ್ಸಿನ ಮೇಘ ಸಂದೇಶವನ್ನೂ ಕಳುಹಿಸಿದ್ದಾರೆ. ಇವತ್ತು ತಮಗೀಗ 40 ವರ್ಷ ತುಂಬಿದ್ದು, ನಲವತ್ತರ ಕ್ಲಬ್ ನ ಸದಸ್ಯೆಯಾಗಿ ಬಡ್ತಿ ಪಡೆದಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಸ್ವತಃ ರಮ್ಯಾ ಅವರೇ ಹಂಚಿಕೊಂಡಿದ್ದರಿಂದ ಒಂದು ರೀತಿಯಲ್ಲಿ ಅಚ್ಚರಿಯೂ ವ್ಯಕ್ತವಾಗಿತ್ತು.

    ರಮ್ಯಾ ಅವರಿಗೆ ಡಾಲಿ ಧನಂಜಯ್, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಶುಭಾಶಯ ಕೋರಿದ್ದಾರೆ. ಬಹುತೇಕ ಸಂದೇಶಗಳಿಗೆ ಅವರು ಪ್ರತಿಕ್ರಿಯೆ ಕೂಡ ನೀಡಿದ್ದಾರೆ.  ಈ ಹುಟ್ಟು ಹಬ್ಬಕ್ಕೆ ರಮ್ಯಾ ಅವರಿಗೆ ಡಬಲ್ ಧಮಾಕಾ. ಒಂದು ಕಡೆ ಅವರ ನಿರ್ಮಾಣ ಸಂಸ್ಥೆಯಿಂದ ಬರುತ್ತಿರುವ ಸಿನಿಮಾ ಶೂಟಿಂಗ್ ಮುಗಿಸಿದೆ. ಮತ್ತೊಂದು ಕಡೆ ಇನ್ನಷ್ಟೇ ಅವರ ನಟನೆಯ ಉತ್ತರ ಕಾಂಡ ಚಿತ್ರ ಶೂಟಿಂಗ್ ಆಗಬೇಕಿದೆ. ಹಾಗಾಗಿ ರಮ್ಯಾ ಅವರಿಗೆ ಈ ಹುಟ್ಟು ಹಬ್ಬ ವಿಶೇಷವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಲತಾ ಮಂಗೇಶ್ಕರ್‌ಗೆ ಕಲಾವಿದ ಬಾದಲ್ ನಂಜುಂಡಸ್ವಾಮಿ ವಿಶೇಷ ನಮನ

    ಲತಾ ಮಂಗೇಶ್ಕರ್‌ಗೆ ಕಲಾವಿದ ಬಾದಲ್ ನಂಜುಂಡಸ್ವಾಮಿ ವಿಶೇಷ ನಮನ

    ಬೆಂಗಳೂರು: ಭಾರತದ ರತ್ನ ಪ್ರಶಸ್ತಿ ಪುರಸ್ಕೃತೆ ಲತಾ ಮಂಗೇಶ್ಕರ್ ಅವರ ನಿಧನಾಗಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಕಲಾವಿದರೊಬ್ಬರು ಲತಾ ಮಂಗೇಶ್ಕರ್ ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.

    ಲತಾ ಮಂಗೇಶ್ಕರ್ ಅವರ ಚಿತ್ರವನ್ನು ಎಂ ಸ್ಯಾಂಡ್ ಮೇಲೆ ಬಿಡಿಸಿದ್ದಾರೆ. ಈ ಮೂಲಕವಾಗಿ ಕಲಾವಿದ ಬಾದಲ್ ನಂಜುಂಡಸ್ವಾಮಿ ವಿಶೇಷವಾಗಿ ಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

    ಬಾದಲ್ ನಂಜುಂಡಸ್ವಾಮಿ ಅವರು ಈ ಹಿಂದೆ ಕೊರೊನಾ ಜಾಗೃತಿಯನ್ನು ತಮ್ಮ ಕಲೆಯ ಮೂಲಕವಾಗಿ ಮೂಡಿಸಿದ್ದರು. ಇದೀಗ ಅವರು ತಮ್ಮ ವಿಶೇಷವಾದ ಕಲೆಯ ಮೂಲಕವಾಗಿ ಮೃತರಾದ ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನವನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

    ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಕೊನೆಯುಸಿರೆಳದಿದ್ದಾರೆ. ಮುಂಬೈನ ಕ್ಯಾಂಡಿ ಆಸ್ಪತ್ರೆಯ ತ್ರೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲ ಅಗಲಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?

    ಸೋಂಕಿನ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ.

    ಲತಾ ಮಂಗೇಶ್ಕರ್ (ಸೆಪ್ಟೆಂಬರ್ 28, 1929) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. 1967ರಲ್ಲಿ ಬಿಡುಗಡೆಯಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕನ್ನಡ ಚಲನಚಿತ್ರದಲ್ಲಿನ ಬೆಳ್ಳನೆ ಬೆಳಗಾಯಿತು ಮತ್ತು ಎಲ್ಲಾರೆ ಇರತೀರೋ ಎಂದಾರೆ ಬರತೀರೋ ಹಾಡುಗಳನ್ನು ಹಾಡಿದ್ದಾರೆ.