Tag: ಬಾನು ಮುಷ್ತಾಕ್‌

  • ಹಾಸನಾಂಬ ದೇವಿ ದರ್ಶನ ಪಡೆದ ಬಾನು ಮುಷ್ತಾಕ್

    ಹಾಸನಾಂಬ ದೇವಿ ದರ್ಶನ ಪಡೆದ ಬಾನು ಮುಷ್ತಾಕ್

    ಹಾಸನ: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ (Banu Mushtaq) ಅವರು ಹಾಸನಾಂಬ ದೇವಿ (Hasanamba) ದರ್ಶನ ಪಡೆದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮೊದಲನೇ ಬಾರಿ ದರ್ಶನ ಪಡೆಯುತ್ತಿಲ್ಲ. ನಮ್ಮ ಮನೆ ಮುಂದಿನ ಬೀದಿಯಲ್ಲಿದೆ. ಚಿಕ್ಕಂದಿನಿಂದಲೂ ತಾಯಿಯ ಕೈ ಬೆರಳು ಹಿಡಿದುಕೊಂಡು ದೇವಿ ದರ್ಶನಕ್ಕೆ ಬರ್ತಿದ್ದೆ. ಆಗ ಯಾರಿಗೂ ಗೊತ್ತಾಗುತ್ತಿರಲಿಲ್ಲ ಇದು ಗೊತ್ತಾಗುತ್ತಿದೆ. ಭಾವೈಕ್ಯತೆಯ ಸಂಕೇತ ಇದು ಎಂದರು. ಇದನ್ನೂ ಓದಿ: ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ: ಬಾನು ಮುಷ್ತಾಕ್

    ಬಹಳ ಹಿಂದಿನಿಂದಲೂ ಮುಸ್ಲಿಮರು ಹಸನ್ ಬಿ ಹುಸೇನ್ ಬಿ ಎಂದು ನಂಬುವ ಕಾಲವಿತ್ತು. ನಮ್ಮ ಪೂರ್ವಿಕರು ಮುಸ್ಲಿಂ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದು ಹೇಳಿ ಕೊಡುತ್ತಿದ್ದರು. ಹಾಗಾಗಿ ಇದು ಭಾವೈಕ್ಯತೆಯ ಸ್ಥಳ ಎಂದರು. ಇದನ್ನೂ ಓದಿ: ಚಾಮುಂಡಿ ತಾಯಿ ಪೂಜೆ ವೇಳೆ ಬಾನು ಮುಷ್ತಾಕ್ ಭಾವುಕ

  • Photo Gallery | ಹೂವು ಚೆಲುವೆಲ್ಲಾ ತನ್ನದೆನ್ನುತ್ತಿದೆ.. ಸಂಗೀತ ಝೇಂಕಾರ ಮನಮುಟ್ಟುತ್ತಿದೆ – ದಸರಾ ಸೊಬಗು ಕಣ್ತುಂಬಿಕೊಳ್ಳಿ

    Photo Gallery | ಹೂವು ಚೆಲುವೆಲ್ಲಾ ತನ್ನದೆನ್ನುತ್ತಿದೆ.. ಸಂಗೀತ ಝೇಂಕಾರ ಮನಮುಟ್ಟುತ್ತಿದೆ – ದಸರಾ ಸೊಬಗು ಕಣ್ತುಂಬಿಕೊಳ್ಳಿ

    ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಉದ್ಘಾಟನೆ ನೆರವೇರಿಸಿದೆ. ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆಬಾನು ಮುಷ್ತಾಕ್ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡುವ ಮೂಲಕ ಮಹೋತ್ಸವಕ್ಕೆ ಚಾಲನೆ ಕೊಟ್ಟಿದ್ದಾರೆ. ಬಳಿಕ ಆಹಾರ ಮೇಳ, ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಶತಶತಮಾನಗಳ ಪಾರಂಪರಿಕ ಪ್ರತೀಕ ಹಬ್ಬವಾಗಿರುವ ದಸರಾ ಸೊಬಗು ಸಾಂಸ್ಕೃತಿಕ ನಗರಿಯಲ್ಲಿ ಕಳೆಗಟ್ಟಿದೆ. ಫಲಪುಷ್ಟ ಪ್ರದರ್ಶನ, ಆಹಾರದ ಮೇಳದ ಘಮಲು ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದ್ದರೆ, ಅತ್ತ ಅರಮನೆ ವೇದಿಕೆಯಲ್ಲಿ ಮೊಳಗುತ್ತಿರುವ ಸಂಗೀತ ಝೇಂಕಾರ ಕಿವಿಗೆ ಇಂಪು ನೀಡುತ್ತಿವೆ. ಇದೆಲ್ಲವೂ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿರುವ ಫೋಟೋಗಳಿವೆ ಕಣ್ತುಂಬಿಕೊಳ್ಳಿ…

  • ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್‌

    ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್‌

    – ನನ್ನ ಮಾವ ಮೈಸೂರು ಮಹಾರಾಜರ ಅಂಗರಕ್ಷಕರಾಗಿದ್ದರು
    – ಮೈಸೂರಿನ ಉರ್ದು ಭಾಷಿಕರೂ ನವರಾತ್ರಿ ಆಚರಿಸುತ್ತಾರೆ

    ಮೈಸೂರು: ದಸರೆ (Mysuru Dasara) ಹಬ್ಬ ಮಾತ್ರ ಅಲ್ಲ. ಇದು ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವ. ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ (Banu Mushtaq) ಬಣ್ಣಿಸಿದ್ದಾರೆ.

    ಚಾಮಂಡಿಬೆಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮೈಸೂರು ದಸರೆಗೆ ಚಾಲನೆ ನೀಡಿ ಮಾತನಾಡಿದ ಅವರು,  ನನ್ನ ಆಪ್ತ ಗೆಳತಿ ಬೂಕರ್‌ ಪ್ರಶಸ್ತಿ ಸಿಗಲೆಂದು ಚಾಮುಂಡಿ ತಾಯಿಯ ಬಳಿ ಹರಕೆ ಹೊತ್ತಿದ್ದಳು. ಈ ವಿಶಿಷ್ಟ ಸನ್ನಿವೇಶದಲ್ಲಿ ಹರಕೆ ಈಡೇರಿದೆ. ತಾಯಿ ಚಾಮುಂಡಿ ನನ್ನನ್ನು ಈ ವಿಶೇಷ ಸಂದರ್ಭದಲ್ಲಿ ಕರೆಸಿಕೊಂಡಿದ್ದಾಳೆ. ವೇದಿಕೆ ಮೇಲೆ ನಿಮ್ಮೆದುರು ನಿಲ್ಲುತ್ತಿರುವುದು ನನ್ನ ಜೀವನದ ಅತ್ಯಂತ ಗೌರವದ ಕ್ಷಣ ಎಂದು ಆರಂಭದಲ್ಲೇ ಹೇಳಿದರು.

    ಈ ನೆಲದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಈ ನಾಡಿನ ನಾಡಿ ಮಿಡಿತ, ಸ್ಪಂದನೆಯಿದೆ. ವಿಭಿನ್ನತೆಯಲ್ಲಿ ಏಕತೆ ಇರುವ ಹಬ್ಬವಿದು. ಮೈಸೂರಿನ ಉರ್ದು ಭಾಷಿಕರು ನವರಾತ್ರಿ ಪ್ರತಿ ದಿನಕ್ಕೂ ಒಂದೊಂದು ಹೆಸರು ಇಟ್ಟು ಕೊಂಡಿದ್ದಾರೆ. ಸಿಲ್ಹಿಂಗನ್ ಎಂದು ದಸರಾಕ್ಕೆ ಉರ್ದು ವಿನಲ್ಲಿ ಹೆಸರಿಟ್ಟುಕೊಂಡಿದ್ದಾರೆ. ಇದು ಎಲ್ಲರೂ ಒಟ್ಟಾಗಿ ಸೇರಿ ಆಚರಿಸುವ ಉತ್ಸವ ಎಂದು ಹೇಳಿದರು.

    ನನ್ನ ಮಾವ ಮೈಸೂರು ಮಹಾರಾಜರ ಅಂಗರಕ್ಷಕರಾಗಿದ್ದರು. ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಮರನ್ನು ನಂಬಿದ್ದರು. ತಮ್ಮ ರಕ್ಷಕರನ್ನಾಗಿ ಮಾಡಿಕೊಂಡಿದ್ದರು. ಮುಸ್ಲಿಮರನ್ನು ಅನುಮಾನದಿಂದ ನೋಡಿರಲಿಲ್ಲ ಎಂದು ತಿಳಿಸಿದರು.

     

    ಎಲ್ಲರನ್ನೂ ಒಳಗೊಳ್ಳುವ ಮನಸ್ಸು ನನ್ನದು. ಈ ನೆಲದಲ್ಲಿ ಮಾನವೀಯ ತುಡಿತ ಇದೆ. ತಾಯಿ ಚಾಮುಂಡಿ ನಮ್ಮಲ್ಲಿನ ದ್ವೇಷ, ಅಸಹಿಷ್ಣುತೆ ನಿವಾರಣೆ ಮಾಡಲಿ. ನನ್ನ ಧಾರ್ಮಿಕ ನಂಬಿಕೆಗಳ ಜೀವಪರವಾಗಿವೆ. ನಾವು ಅಸ್ತ್ರಗಳಿಂದ , ಹಗೆಗಳಿಂದ ಬದುಕವನ್ನು ಗೆಲ್ಲಲು ಸಾಧ್ಯವಿಲ್ಲ. ಅಕ್ಷರಗಳಿಂದ, ಪ್ರೀತಿಯಿಂದ ಬದುಕನ್ನು ಗೆಲ್ಲಬಹುದು ಎಂದು ಹೇಳುವ ಮೂಲಕ ತನ್ನನ್ನು ವಿರೋಧಿಸಿದವರಿಗೆ ಭಾವನಾತ್ಮಕ ತಿರುಗೇಟು ನೀಡಿದರು.

    ಮೈಸೂರು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು ನಾವು ಪರಸ್ಪರ ನಮ್ಮನ್ನು ನಾವು ಗೌರವಿಸಿಕೊಳ್ಳೋಣ. ಪ್ರತಿ ಹೂ ತನ್ನ ಬಣ್ಣದಲ್ಲಿ ಹಾಡಲಿ, ತನ್ನ ರಾಗದಲ್ಲೇ ಹಕ್ಕಿ ಕೂಗಲಿ. ಎಲ್ಲರೂ ಒಟ್ಟಾಗಿ ಸೇರಿ ಸೌಹಾರ್ದಯುತವಾಗಿ ನಡೆದುಕೊಳ್ಳೋಣ.ನಾವು ಎಲ್ಲರೂ ಒಂದೇ ಗಗನದ ಪಯಣಿಗರು.ಆಕಾಶ, ಭೂಮಿ ಯಾವತ್ತೂ ಯಾರನ್ನು ಬೇರೆ ಮಾಡುವುದಿಲ್ಲ.ನಾವು ಮನುಷ್ಯರು ಮಾತ್ರ ಗಡಿಗಳನ್ನು ಕಟ್ಟಿ ಕೊಂಡಿದ್ದೇವೆ. ನಾವು ಈ ಗಡಿಗಳನ್ನು ತೊಡೆದು ಹಾಕೋಣ ಎಂದು ಕರೆ ನೀಡಿದರು.

    ತಾಯಿ ಚಾಮುಂಡಿ ರಕ್ಷಕತ್ವದ ಸಂಕೇತ.ನಮ್ಮಲ್ಲರ ಒಳಗಿನ ದ್ವೇಷ, ಹಗೆಯನ್ನು ಚಾಮುಂಡಿ ನಾಶಮಾಡಲಿ. ಜಗತ್ತಿನಾದ್ಯಂತ ಶಾಂತಿ, ಸಹನುಭೂತಿ ನೆಲೆಸುವಂತೆ ಮಾಡಲಿ ಎಂದು ಪ್ರಾರ್ಥಿಸಿದರು. ಸಹಸ್ರ ಆರೋಪಗಳ‌ ನಡುವೆ ನಾನು ಒಂಟಿಯಾಗಿ ಧೈರ್ಯವಾಗಿ ನಿಂತಿದ್ದೇನೆ ಎಂದು ಕವನ ಓದುತ್ತಲೇ ವಿವರಣೆ ನೀಡಿದ ಅವರು ಪ್ರೀತಿಯ ಹೊಸ ಸಮಾಜ ಕಟ್ಟೋಣ ಎಂದು ಹೇಳಿದರು.

    ಭಾಷಣದ ಕೊನೆಯಲ್ಲಿ, ನಾನು ನೂರಾರು ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿದ್ದೇನೆ. ಮಂಗಳಾರತಿಯನ್ನೂ ನೂರಾರು ಬಾರಿ ಸ್ವೀಕರಿಸಿದ್ದೇನೆ. ನನ್ನ ಮತ್ತು ಹಿಂದೂ ಧರ್ಮದ ಬಾಂಧವ್ಯ ಹೇಗಿದೆ ಎಂದು ನನ್ನ ಆತ್ಮಕಥೆ ಯಲ್ಲಿ ಬರೆದಿದ್ದೇನೆ‌. ಈ ಪುಸ್ತಕ ನಾಳೆ ಬಿಡುಗಡೆಯಾಗಲಿದೆ. ಎಷ್ಟೇ ಸವಾಲು ಬಂದರೂ ದಿಟ್ಟವಾಗಿ ನಿಂತು ನನಗೆ ನೈತಿಕ ಬೆಂಬಲ ನೀಡಿದ ಸಿಎಂ ಸಿದ್ದರಾಮಯ್ಯನವರಿಗೆ ಧನ್ಯವಾದಗಳು ಎಂದು ಹೇಳಿ ತಮ್ಮ ಮಾತಿಗೆ ಪೂರ್ಣ ವಿರಾಮ ಹಾಕಿದರು.

  • ಚಾಮುಂಡಿ ತಾಯಿ ಪೂಜೆ ವೇಳೆ ಬಾನು ಮುಷ್ತಾಕ್ ಭಾವುಕ

    ಚಾಮುಂಡಿ ತಾಯಿ ಪೂಜೆ ವೇಳೆ ಬಾನು ಮುಷ್ತಾಕ್ ಭಾವುಕ

    ಮೈಸೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಹಿನ್ನೆಲೆ ತಾಯಿ ಚಾಮುಂಡಿಗೆ ಪೂಜೆ ವೇಳೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಭಾವುಕರಾಗಿದ್ದಾರೆ.

    ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ದಸರಾ ಉದ್ಘಾಟನೆ ಬಾನು ಮುಷ್ತಾಕ್ ಬಂದಿದ್ದರು. ತಾಯಿ ಚಾಮುಂಡೇಶ್ವರಿ ಪೂಜೆ ವೇಳೆ ಅವರು ಭಾವುಕರಾಗಿದ್ದು, ಕಣ್ಣಂಚಲಿ ಬಂದ ಕಣ್ಣೀರನ್ನು ಒರೆಸಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು ರೇಷ್ಮೆ ಸೀರೆ, ಮಲ್ಲಿಗೆ ಮುಡಿದು ಚಾಮುಂಡಿ ತಾಯಿಯ ಸೀರೆ ಪಡೆದ ಬಾನು ಮುಷ್ತಾಕ್‌

    ಈ ಹಿಂದೆ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಬಾನು ಮುಷ್ತಾಕ್ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿತ್ತು. ಆದರೆ ಸುಪ್ರೀಂ ಸಹ ಅರ್ಜಿ ವಜಾಗೊಳಿಸಿ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಇದನ್ನೂ ಓದಿ: Mysuru Dasara | ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ

    ಇದೀಗ ಎಲ್ಲಾ ಅಡೆತಡೆಗಳನ್ನು ಎದುರಿಸಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅಲ್ಲದೇ ತಾಯಿ ಚಾಮುಂಡೇಶ್ವರಿಗೆ ಸಂಪ್ರದಾಯ ಬದ್ಧವಾಗಿ ಪೂಜೆ ಸಲ್ಲಿಸುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

  • ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ

    ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ

    – ಹೋಟೆಲ್‌ ಬಳಿ 3 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ

    ಮೈಸೂರು: ನಾಡಹಬ್ಬ ದಸರಾ (Dasara) ಉದ್ಘಾಟಿಸಲಿರುವ ಬಾನು ಮುಷ್ತಾಕ್‌ (Banu Mushtaq) ಅವರು ಖಾಸಗಿ ಹೋಟೆಲಿನಲ್ಲಿ (Private Hotel) ವಾಸ್ತವ್ಯ ಹೊಂದಿದ್ದು ಸರ್ಕಾರ ಬಿಗಿ ಭದ್ರತೆ ನೀಡಿದೆ.

    ಸ್ಥಳದಲ್ಲಿ 3 ಕೆಎಸ್‌ಆರ್‌ಪಿ (KSRP) ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ 9:30ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ.

    ಬಾನು ಮುಷ್ತಾಕ್‌ ಆಯ್ಕೆ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಭಾರೀ ಭದ್ರತೆ ನೀಡಲಾಗಿದೆ. ಇದನ್ನೂ ಓದಿ: Navratri 2025 Day 1: ಶೈಲಪುತ್ರಿಯ ಮಹತ್ವವೇನು?

    ಉದ್ಘಾಟಕರ ಸ್ವಾಗತಕ್ಕೆ ಚಾಮುಂಡಿ ಬೆಟ್ಟ ಸಿದ್ಧವಾಗಿದ್ದು ಮಹಿಷಾಸುರ ಮೂರ್ತಿಯಿಂದ ದೇವಾಲಯದವರೆಗೆ ಸಾಂಪ್ರಾದಾಯಿಕ ಸ್ವಾಗತ ನೀಡಲಾಗುತ್ತದೆ. ರಸ್ತೆ ಉದ್ದಕ್ಕೂ ರಂಗೋಲಿ ಬಿಡಿಸಿ, ಬಾಳೆ ಕಂಬ ಕಟ್ಟಿ ಸ್ವಾಗತಿಸಲು ತಯಾರಿ ನಡೆದಿದೆ.

    ಮೂರು ಕಡೆ ಚೆಕ್ಕಿಂಗ್‌ ಪಾಯಿಂಟ್‌ ಇದ್ದು ಆಗಮಿಸುವ ಪ್ರತಿಯೊಬ್ಬರನ್ನು ಪರಿಶೀಲಿಸಿದ ಬಳಿಕವಷ್ಟೇ ಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗುತ್ತದೆ.

    ಉದ್ಘಾಟನೆಗೂ ಮುನ್ನ ಸಿಎಂ ಸಿದ್ದರಾಮಯ್ಯ, ಉದ್ಘಾಟಕರಾದ ಬಾನು ಮುಸ್ತಾಕ್ ಸೇರಿದಂತೆ ಗಣ್ಯರಿಗೆ ಮಹಿಷಾ ಮೂರ್ತಿ ಬಳಿ ಜಿಲ್ಲಾಡಳಿತ ಸ್ವಾಗತ ನೀಡಲಿದೆ. ಅಲ್ಲಿಂದ ಅಲ್ಲಿಂದ ತೆರೆದ ವಾಹನ ಅಥವಾ ಕಾಲ್ನಡಿಗೆ ಮೂಲಕ ಚಾಮುಂಡೇಶ್ವರಿ ದೇವಾಸ್ಥಾನಕ್ಕೆ ಗಣ್ಯರು ತೆರಳಲಿದ್ದಾರೆ. ದೇವರ ದರ್ಶನ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ.

  • ನಾಡಹಬ್ಬ ದಸರಾ ಮಹೋತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ – ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

    ನಾಡಹಬ್ಬ ದಸರಾ ಮಹೋತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ – ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

    – ಬೃಹತ್ ವೇದಿಕೆ ನಿರ್ಮಾಣ, 1 ಸಾವಿರ ಆಸನದ ವ್ಯವಸ್ಥೆ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವಕ್ಕೆ ನಾಳೆ ವಿಧ್ಯುಕ್ತಚಾಲನೆ ಸಿಗಲಿದ್ದು, ಇಂದು ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ನಾಡಹಬ್ಬಕ್ಕೆ ಅದ್ಧೂರಿ ಚಾಲನೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ.

    ದಸರಾ ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ನಾಳೆ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆ ಆಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಲೇಖಕಿ ಬಾನು ಮುಷ್ತಾಕ್ ಈ ಬಾರಿ ದಸರಾ ಉದ್ಘಾಟನೆ ನೆರವೇರಿಸಲಿದ್ದು, ಇದಕ್ಕೆ ಪರ-ವಿರೋಧ ಚರ್ಚೆ ಜೋರಾಗಿದೆ. ಇದರ ನಡುವೆ ಸರ್ಕಾರ ಬಾನು ಮುಷ್ತಾಕ್‌ರಿಂದ ದಸರಾ ಮಹೋತ್ಸವಕ್ಕೆ ಚಾಲನೆ ಕೊಡಿಸಲು ಬಿಗಿ ಬಂದೋಬಸ್ತ್ ಜೊತೆಗೆ ಬೃಹತ್ ವೇದಿಕೆ ತಯಾರಿ ಮಾಡಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದಿಂದ ಮೈಸೂರಿಗೆ ದಸರಾ ಬಂದಿದ್ದು ಹೇಗೆ?

    ಈಗಾಗಲೇ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಶುಚಿಗೊಳಿಸಿರುವ ಅರ್ಚಕರು, ತಾಯಿಗೆ ಹಸಿರು ಸೀರೆಯುಡಿಸಿ ತಯಾರಿ ಮಾಡಿಕೊಂಡಿದ್ದಾರೆ. ನಾಳೆ ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾಕೈಂಕರ್ಯಗಳು ನೆರವೇರಲಿದ್ದು, ಬಳಿಕ ಬೆಳ್ಳಿರಥಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ ವೇದಿಕೆಗೆ ತಂದು ಪುಷ್ಪಾರ್ಚನೆ ಮಾಡಲಿದ್ದಾರೆ. ಬೆಳಗ್ಗೆ 10:10 ರಿಂದ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಲೇಖಕಿ ಬಾನು ಮುಷ್ತಾಕ್‌ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟನೆ ಮಾಡಲಿದ್ದಾರೆ.

    Banu Mushtaq

    ಇನ್ನೂ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, 1 ಸಾವಿರ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ಹಿನ್ನೆಲೆ ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದ್ದು, ವಿವಿಐಪಿ, ವಿಐಪಿ ಹಾಗೂ ಪಾಸ್ ಹೊಂದಿದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ದಸರಾ ಉದ್ಘಾಟನೆ ಮುಗಿಯುವವರೆಗೂ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ನಿರ್ಬಂಧ ಹೇರಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಸಚಿವರು, ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕ ಶ್ರೀವತ್ಸ, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ FIR

    ದಸರಾ ಉದ್ಘಾಟನೆಗೊಂಡ ಬಳಿಕ ಹಲವು ದಸರಾ ಕಾರ್ಯಕ್ರಮಗಳಿಗೆ ನಾಳೆಯೇ ಚಾಲನೆ ಸಿಗಲಿದೆ. ಮಧ್ಯಾಹ್ನ 12.30ಕ್ಕೆ ಫಲಪುಷ್ಪ ಪ್ರದರ್ಶನ ಉದ್ಘಾಟನೆ, ಬಳಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳಕ್ಕೆ ಚಾಲನೆ, ಸಂಜೆ 4ಕ್ಕೆ ದೇವರಾಜ ಅರಸು ಕ್ರೀಡಾಂಗಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿಗೆ ಉದ್ಘಾಟನೆ ಭಾಗ್ಯ. ಅರಮನೆ ಆರವಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಗುತ್ತೆ. ಸಂಜೆ 6.30ಕ್ಕೆ ಸಯ್ಯಾಜಿರಾವ್ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರ ಉದ್ಘಾಟನೆ ಭಾಗ್ಯ ಸಿಗಲಿದೆ.

    ಒಟ್ಟಾರೆ, ಒಂದೆಡೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದ್ರೆ ಅತ್ತ ಅರಮನೆಯಲ್ಲೂ ನಾಳೆಯಿಂದ ವಿವಿಧ ಪೂಜಾ ಕೈಂಕರ್ಯ ಹಾಗೂ ಖಾಸಗಿ ದರ್ಬಾರ್ ಆರಂಭಗೊಳ್ಳಲಿದೆ. ನವರಾತ್ರಿಯ ವೈಭವ ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ಮೈಸೂರಿನತ್ತ ಬರ್ತಿದ್ದು, ಪ್ರವಾಸಿಗರ ಆಕರ್ಷಿಸಲು ಮೈಸೂರು ಸಜ್ಜಾಗಿದೆ. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನಕ್ಕೆ ವಿರೋಧ; ಸುಪ್ರೀಂನಲ್ಲೂ ಅರ್ಜಿ ವಜಾ

  • ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನಕ್ಕೆ ವಿರೋಧ; ಸುಪ್ರೀಂನಲ್ಲೂ ಅರ್ಜಿ ವಜಾ

    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನಕ್ಕೆ ವಿರೋಧ; ಸುಪ್ರೀಂನಲ್ಲೂ ಅರ್ಜಿ ವಜಾ

    ನವದೆಹಲಿ: ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಅನೇಕರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಅನುಮೋದಿಸಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ವಜಾ ಮಾಡಿದೆ.

    ಅರ್ಜಿದಾರರ ಪರ ಹಿರಿಯ ವಕೀಲ ಪಿ.ಬಿ. ಸುರೇಶ್, ಹಿಂದೂಯೇತರ ವ್ಯಕ್ತಿಗೆ ಪೂಜೆಗಳನ್ನು ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ವಾದಿಸಿದರು. ದೇವಸ್ಥಾನದ ಒಳಗೆ ಪೂಜೆ ಮಾಡುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲಾಗುವುದಿಲ್ಲ. ಇದು ಸಂಪೂರ್ಣವಾಗಿ ರಾಜಕೀಯ. ಧಾರ್ಮಿಕ ಚಟುವಟಿಕೆಗಾಗಿ ಅವರನ್ನು ದೇವಸ್ಥಾನದ ಒಳಗೆ ಕರೆತರಲು ಯಾವುದೇ ಕಾರಣವಿಲ್ಲ ಎಂದು ವಾದ ಮಂಡಿಸಿದರು.

    ದಸರಾ ಉದ್ಘಾಟನೆಗೆ ಆಹ್ವಾನಿತರಾದವರು ಹಿಂದೆ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅಂತಹವರನ್ನು ಆಹ್ವಾನಿಸಿರುವುದು ಸರಿಯಲ್ಲ ಎಂದು ಪಿ.ಬಿ.ಸುರೇಶ್‌ ವಾದಿಸಿದರು. ವಾದದ ಸಂದರ್ಭದಲ್ಲೇ ನ್ಯಾಯಮೂರ್ತಿ ನಾಥ್‌ ಅವರು, ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದರು.

  • ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ನವದೆಹಲಿ: ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ (Banu Mushtaq) ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್‌ (Supreme Court) ಅಂಗಳಕ್ಕೆ ತಲುಪಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್‌ ಗೌರವ್‌ ಎಂಬವರು ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ.

    ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಇವರು ಇದೆ 22 ರಂದು ದಸರಾ ಉದ್ಘಾಟನೆ ನಡೆಯಲಿದೆ. ಹೀಗಾಗಿ ತುರ್ತು ಅರ್ಜಿ ವಿಚಾರಣೆ ಮಾಡಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಿದ್ದಾರೆ. ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್‌ ಶುಕ್ರವಾರ ನಡೆಸುವುದಾಗಿ ಹೇಳಿದೆ.

    ಕರ್ನಾಟಕ ಹೈಕೋರ್ಟ್‌ನಲ್ಲಿ ಏನಾಗಿತ್ತು?
    ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಗಳನ್ನು ಸೆ.15 ರಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ನೇತೃತ್ವದ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.  ಇದನ್ನೂ ಓದಿ: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ: ಸುದ್ದಿಗೋಷ್ಠಿಯಲ್ಲಿ ರಾಹುಲ್‌ ಗಾಂಧಿ ಗಂಭೀರ ಆರೋಪ

    ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಭಿನ್ನ ಧರ್ಮದ ವ್ಯಕ್ತಿ ಭಾಗಿಯಾಗುವುದು, ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಹೇಗೆ ಉಲ್ಲಂಘಿಸುತ್ತದೆ? ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ವಿರುದ್ಧ ಹೇಗೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿತ್ತು.

    ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಲು ನಿಮಗೆ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಹಕ್ಕು ಏನಿದೆ ಹೇಳಿ? ಶಿಷ್ಟಾಚಾರ ಪಾಲಿಸುವುದು ಬಾನು ಮುಷ್ತಾಕ್ ಅವರಿಗೆ ಸೇರಿದ ವಿಚಾರ. ವಿಜಯದಶಮಿ ಎಂದರೇನು? ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ ಅಲ್ವಾ? ಈ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ .

    ಈ ವೇಳೆ ವಾದಕ್ಕೆ ಮುಂದಾದ ಪ್ರತಾಪ್ ಸಿಂಹ ವಕೀಲ ಸುದರ್ಶನ್ ಮುಂದಾದಾಗ ನೀವು ಹೀಗೇ ವಾದಿಸಿದರೆ ಆದೇಶ ಆಗಿದೆ. ದಂಡ ವಿಧಿಸ್ಬೇಕಾ ಎಂದು ಕಟುವಾಗಿ ಪ್ರಶ್ನಿಸಿ ಈ ನ್ಯಾಯಾಲಯದಲ್ಲಿ ನೀವು ಹೀಗೆಲ್ಲಾ ಮಾಡಲಾಗದು ಎಂದು ಹೇಳಿತು.

  • ಕೊಪ್ಪಳ | ದಲಿತ ಮಹಿಳೆಗೆ ಅವಹೇಳನ ಆರೋಪ – ಯತ್ನಾಳ್ ವಿರುದ್ಧ FIR

    ಕೊಪ್ಪಳ | ದಲಿತ ಮಹಿಳೆಗೆ ಅವಹೇಳನ ಆರೋಪ – ಯತ್ನಾಳ್ ವಿರುದ್ಧ FIR

    ಕೊಪ್ಪಳ: ದಲಿತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಈ ಕುರಿತು ಕೊಪ್ಪಳ (Koppal) ನಗರದ ದಲಿತ ಸಂಘಟನೆಯ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ಅವರು ದೂರು ದಾಖಲಿಸಿದ್ದು, ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ದೂರಿನನ್ವಯ ಕೊಪ್ಪಳ ನಗರ ಠಾಣೆಯಲ್ಲಿ SC/ST ಕಾಯ್ದೆಯಡಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ವಿಜಯಪುರ| ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 3 ತಿಂಗಳು ರಜೆಯಲ್ಲಿದ್ದ ಸೆಕ್ಯುರಿಟಿ ಗಾರ್ಡ್‌; ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲು

    ದೂರಿನಲ್ಲಿ ಏನಿದೆ?
    ಕಳೆದ ಎರಡು ದಿನಗಳ ಹಿಂದೆ ಯತ್ನಾಳ್ ಅವರು ಮಾಧ್ಯಮಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ, ಹಿಂದೂಗಳ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿರುವ ಬಾನು ಮುಷ್ತಾಕ್ ವಿರುದ್ಧ ಮಾತನಾಡುವ ಭರಾಟೆಯಲ್ಲಿ ಸನಾತನ ಧರ್ಮದವರು ಮಾತ್ರ ತಾಯಿ ಚಾಮುಂಡಿಗೆ ಹೂ ಮುಡಿಸಬೇಕು ಹೊರತು ಒಬ್ಬ ದಲಿತ ಮಹಿಳೆಗೂ ಅವಕಾಶ ಕೊಡಲ್ಲ ಎಂದು ಹೇಳಿಕೆ ನೀಡಿ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ದಲಿತ ಹೆಣ್ಣುಮಕ್ಕಳ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿರುವುದು ದಲಿತ ಸಮುದಾಯಕ್ಕೆ ನೋವಾಗಿದೆ. ಅವರು ಮಾತನಾಡಿರುವ ವಿಡಿಯೋ ಆಧಾರದಲ್ಲಿ ಅವರ ವಿರುದ್ಧ SC/ST ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಮತ್ತು ಯತ್ನಾಳ್ ಅವರು ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳಿ ಕೋಮು ಸಂಘರ್ಷ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಮದುವೆ ವಿಚಾರಕ್ಕೆ ಗಲಾಟೆ; ಮನನೊಂದು ಯುವತಿ ಆತ್ಮಹತ್ಯೆ – ರಕ್ಷಣೆಗೆ ಹೋದ ತಾಯಿಯೂ ಸಾವು

  • ದಸರಾ ಉದ್ಘಾಟಕಿ ಬಾನು ಮುಷ್ತಾಕ್‌ಗೆ ಹೈಕೋರ್ಟ್ ಸಿಗ್ನಲ್ – ವಾದ, ಪ್ರತಿವಾದ ಹೇಗಿತ್ತು?

    ದಸರಾ ಉದ್ಘಾಟಕಿ ಬಾನು ಮುಷ್ತಾಕ್‌ಗೆ ಹೈಕೋರ್ಟ್ ಸಿಗ್ನಲ್ – ವಾದ, ಪ್ರತಿವಾದ ಹೇಗಿತ್ತು?

    ಬೆಂಗಳೂರು: ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ರಾಜ್ಯ ಹೈಕೋರ್ಟ್ (High Court) ವಜಾಗೊಳಿಸಿದೆ.

    ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ನೇತೃತ್ವದ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

    ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಭಿನ್ನ ಧರ್ಮದ ವ್ಯಕ್ತಿ ಭಾಗಿಯಾಗುವುದು, ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಹೇಗೆ ಉಲ್ಲಂಘಿಸುತ್ತದೆ? ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ವಿರುದ್ಧ ಹೇಗೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿತು.

    ಪ್ರತಾಪ್‌ ಸಿಂಹ ಪರ ವಕೀಲ ಎಸ್‌ ಸುದರ್ಶನ್‌ ವಾದ ಮಂಡಿಸಿದರೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು.

     

    ಪ್ರತಾಪ್ ಸಿಂಹ ವಕೀಲರ ವಾದ ಏನು?
    ಬಾನು ಮುಷ್ತಾಕ್ ಹಿಂದೂ ಸಂಪ್ರದಾಯ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಆಯ್ಕೆಯಾದವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಶಿಷ್ಟಾಚಾರ. ಇದನ್ನು ಪಾಲಿಸಲಾಗಿಲ್ಲ. ಬಾನು ಮುಷ್ತಾಕ್‌ಗೆ ಅರಿಶಿಣ-ಕುಂಕುಮದ ಮೇಲೆ ನಂಬಿಕೆ ಇಲ್ಲ. ದಸರಾ ಹಿಂದೂ ಹಬ್ಬವಾಗಿದ್ದು, ಜಾತ್ಯತೀತ ಹಬ್ಬವಲ್ಲ

    ಸರ್ಕಾರದ ವಾದ ಏನು?
    ಪ್ರತಾಪ್ ಸಂಸದರಾಗಿದ್ದಾಗ ನಿಸಾರ್ ಅಹ್ಮದ್ ದಸರಾ ಉದ್ಘಾಟಿಸಿದ್ದರು. ಬಾನು ಮುಷ್ತಾಕ್ ಬುಕರ್ ಪ್ರಶಸ್ತಿ ಪುರಸ್ಕೃತರಾಗಿದ್ದು ಆಹ್ವಾನಿಸಲಾಗಿದೆ. ನಿಸಾರ್ ಅಹ್ಮದ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದಾಗ ಪ್ರತಾಪ್ ಸಿಂಹ ಈ ವಿಚಾರ ಎತ್ತಿಲ್ಲ.

    ಇದು ರಾಜ್ಯದ ಹಬ್ಬವಾಗಿದ್ದು, ಸರ್ಕಾರದ ನಿರ್ಧಾರವು ಸಂವಿಧಾನದ 15ನೇ ವಿಧಿಗೆ ಪೂರಕವಾಗಿದೆ. ಎಲ್ಲಾ ಪಕ್ಷಗಳ ಮುಖಂಡರ ದಸರಾ ಸಮಿತಿಯು ಅತಿಥಿ ಆಯ್ಕೆಯನ್ನು ಮುಖ್ಯಮಂತ್ರಿಗಳಿಗೆ ನೀಡಿತ್ತು. ಸಿಎಂ ಅವರು ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಾರೆ.

    ದಸರಾ ಜಾತ್ಯತೀತ ಹಬ್ಬ, ಆದರೆ ಧಾರ್ಮಿಕ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಹಿಂದೂ-ಮುಸ್ಲಿಂ ಎಂದು ಕಂದಕ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮವಾಗಬೇಕು. ಇದನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅರ್ಜಿದಾರ ಪ್ರತಾಪ್ ಸಿಂಹ ಅವರಿಗೆ ದಂಡ ವಿಧಿಸಬೇಕು.

     

    ಕೋರ್ಟ್ ಹೇಳಿದ್ದೇನು?
    ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಲು ನಿಮಗೆ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಹಕ್ಕು ಏನಿದೆ ಹೇಳಿ? ಶಿಷ್ಟಾಚಾರ ಪಾಲಿಸುವುದು ಬಾನು ಮುಷ್ತಾಕ್ ಅವರಿಗೆ ಸೇರಿದ ವಿಚಾರ. ವಿಜಯದಶಮಿ ಎಂದರೇನು? ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ ಅಲ್ವಾ? ಈ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ .

    ಈ ವೇಳೆ ವಾದಕ್ಕೆ ಮುಂದಾದ ಪ್ರತಾಪ್ ಸಿಂಹ ವಕೀಲ ಸುದರ್ಶನ್ ಮುಂದಾದಾಗ ನೀವು ಹೀಗೇ ವಾದಿಸಿದರೆ ಆದೇಶ ಆಗಿದೆ.. ದಂಡ ವಿಧಿಸ್ಬೇಕಾ ಎಂದು ಕಟುವಾಗಿ ಪ್ರಶ್ನಿಸಿ ಈ ನ್ಯಾಯಾಲಯದಲ್ಲಿ ನೀವು ಹೀಗೆಲ್ಲಾ ಮಾಡಲಾಗದು ಎಂದು ಹೇಳಿತು.