Tag: ಬಾನು ಮುಷ್ತಾಕ್‌

  • ಮಾತಾಡೋರು ಮಾತಾಡಲಿ, ಸೂಕ್ತ ವೇದಿಕೆಯಲ್ಲಿ ನಾನು ಮಾತಾಡ್ತೀನಿ: ಬಾನು ಮುಷ್ತಾಕ್

    ಮಾತಾಡೋರು ಮಾತಾಡಲಿ, ಸೂಕ್ತ ವೇದಿಕೆಯಲ್ಲಿ ನಾನು ಮಾತಾಡ್ತೀನಿ: ಬಾನು ಮುಷ್ತಾಕ್

    ಬೆಂಗಳೂರು: ಮಾತನಾಡುವವರು ಮಾತಾಡಲಿ, ಸೂಕ್ತ ವೇದಿಕೆಯಲ್ಲಿ ನಾನು ಈ ಬಗ್ಗೆ ಮಾತನಾಡುತ್ತೇನೆ ಎಂದು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ (Banu Mushataq) ಹೇಳಿದ್ದಾರೆ.

    `ಪಬ್ಲಿಕ್ ಟಿವಿ’ (PUBLiC TV) ಜೊತೆ ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧ ವಿಚಾರವಾಗಿ ಮಾತನಾಡಿದ ಅವರು, ಯಾರು ಏನು ಮಾತಾಡುತ್ತಾರೋ ಮಾತಾಡಲಿ. ನಾನು ಸೂಕ್ತ ಸಮಯದಲ್ಲಿ ಮಾತಾಡುತ್ತೇನೆ. ಈ ಹಿಂದೆ ನಾನು ಏನು ಮಾತಾಡಿದ್ದೇನೆ ಎಂದು ಸರಿಯಾಗಿ ತಿಳಿಕೊಂಡು ಮಾತಾಡಲಿ. ಯಾರೋ ವಿರೋಧ ಮಾಡಿದ್ರೆ ನಾನು ಉತ್ತರ ಕೊಡಬೇಕಾ? ಇದರ ಬಗ್ಗೆ ನಾನು ವಿವರವಾಗಿ ಮಾತಾಡ್ತೀನಿ ಎಂದಿದ್ದಾರೆ.ಇದನ್ನೂ ಓದಿ: ಈ ಬಾರಿ ಗಣೇಶೋತ್ಸವದಲ್ಲಿ ರಾರಾಜಿಸಲಿದೆ ಧರ್ಮಸ್ಥಳ

    ಸದ್ಯ ವಿರೋಧ ಮಾಡುವ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ವಿರೋಧ ಮಾಡುವವರು ಮಾಡಲಿ ಅದು ಅವರ ಸ್ವಾತಂತ್ರ‍್ಯ. ನಾನು ಅದಕ್ಕೆ ಪ್ರತಿಕ್ರಿಯೆ ಕೊಡಲ್ಲ. ನಾನು ಸೂಕ್ತವಾದ ವೇದಿಕೆಯಲ್ಲಿ ಸಕ್ಷಮವಾಗಿ ಮಾತಾಡ್ತೀನಿ ಎಂದು ತಿಳಿಸಿದ್ದಾರೆ.

    2025ರ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಉದ್ಘಾಟಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಘೋಷಿಸಿದ್ದರು. ಅದಾದ ಬಳಿಕ ಮಾಜಿ ಸಂಸದ ಪ್ರತಾಪ ಸಿಂಹ ಹಾಗೂ ಶಾಸಕ ಯತ್ನಾಳ್ ವಿರೋಧಿಸಿದ್ದರು.ಇದನ್ನೂ ಓದಿ: AI ವೀಡಿಯೋಗೆ ಸಾಕ್ಷಿ ಕೊಡಲು ತಡಬಡಿಸಿದ ಬುರುಡೆ ಸಮೀರ್

  • ಕನ್ನಡ ತಾಯಿ ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ನಾಡದೇವತೆಯನ್ನು ಒಪ್ಪುತ್ತಾರಾ: ಪ್ರತಾಪ್ ಸಿಂಹ ಪ್ರಶ್ನೆ

    ಕನ್ನಡ ತಾಯಿ ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ನಾಡದೇವತೆಯನ್ನು ಒಪ್ಪುತ್ತಾರಾ: ಪ್ರತಾಪ್ ಸಿಂಹ ಪ್ರಶ್ನೆ

    ಮೈಸೂರು: ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ? ಎಂದು ಸಾಹಿತಿ ಬಾನು ಮುಷ್ತಾಕ್ (Banu Mushtaq) ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

    ಪೋಸ್ಟ್ ಹಂಚಿಕೊಂಡಿರುವ ಅವರು, 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಬಾನು ಮುಷ್ತಾಕ್ ಮಾತನಾಡಿದ್ದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಬರೆದು ಅಸಮಾಧಾನ ಹೊರಹಾಕಿದ್ದಾರೆ. ಭಾಷಣದಲ್ಲಿ ಬಾನು ಮುಷ್ತಾಕ್ ಕನ್ನಡ ಬಾವುಟದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಈಗ ಕನ್ನಡಿಗರ ಆಕ್ರೋಶಕ್ಕೂ ಗುರಿಯಾಗಿದೆ.ಇದನ್ನೂ ಓದಿ: ಟಾಕ್ಸಿಕ್ ಭರ್ಜರಿ ಆ್ಯಕ್ಷನ್ ಶುರು, ಹಾಲಿವುಡ್‌ನಿಂದ ಬಂದ್ರು ಜೆಜೆ ಪೆರ‍್ರಿ

    ಭಾನುವಾರ (ಆ.24) ಈ ಕುರಿತು ಪ್ರತಾಪ ಸಿಂಹ ಮಾಧ್ಯಮದವರೊಂದಿಗೆ ಮಾತನಾಡಿ, ಇತ್ತೀಚಿಗಷ್ಟೇ ಹಾರ್ಟ್ ಲ್ಯಾಂಪ್ ಸಾಹಿತಿ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು. ನೀವು ಈ ಪ್ರಶಸ್ತಿ ಪಡೆದ ಮೊದಲ ಕನ್ನಡತಿಯಾಗಿದ್ದೀರಿ. ಈ ಕುರಿತು ನಮಗೆ ಬಹಳ ಹೆಮ್ಮೆಯಿದೆ. ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರನ್ನು ನಾಡಹಬ್ಬ ದಸರಾದ ಉದ್ಘಾಟನೆಗೆ ಆಹ್ವಾನಿಸಿದೆ. ಅವರು ಕೂಡ ಒಪ್ಪಿಕೊಂಡಿದ್ದಾರೆ. ಬಾನು ಮುಸಲ್ಮಾನರು ಎಂಬ ಕಾರಣಕ್ಕೆ ನಾನು ಈ ಮಾತನ್ನು ಹೇಳುತ್ತಿಲ್ಲ. ನಿಮ್ಮ ಸಾಧನೆಗೆ ನಮ್ಮ ಹೆಮ್ಮಯಿದೆ. ನಿಮಗೆ ಬೂಕರ್ ಪ್ರಶಸ್ತಿ ಬಂದಿದೆ. ಇದು ರಾಜ್ಯದ ಜನರಿಗೆ ಖುಷಿ ಇದೆ. ಆದರೆ ದಸರಾ ಜಾತ್ಯತೀತತೆಯ ಪ್ರತೀಕ ಅಲ್ಲ, ಇದು ಧಾರ್ಮಿಕ ಆಚರಣೆ. ಇದು ನಮ್ಮ ಹಬ್ಬ. ಮೈಸೂರಿನ ಯದುವಂಶ ವಿಜಯನಗರ ಸಾಮ್ರಾಜ್ಯ ಪತನಗೊಂಡ ನಂತರ ಶ್ರೀರಂಗಪಟ್ಟಣದಲ್ಲಿ ಸಾಮ್ರಾಜ್ಯ ಸ್ಥಾಪನೆ ಮಾಡಿ ಆ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ. ಇಂದಿಗೂ ಕೂಡ ಅರಮನೆಯಲ್ಲಿ ಶಾಸ್ತ್ರೋಕ್ತವಾಗಿ ಎಲ್ಲ ವಿಧಿವಿಧಾನಗಳು ನಡೆಯುತ್ತವೆ. ಇಂದು ಪ್ರಜಾಪ್ರಭುತ್ವ ವ್ಯವಸ್ಥೆಯಿರುವುದರಿಂದ ಈ ಸಾರ್ವಜನಿಕ ಆಚರಣೆಯನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಆದರೆ ಇದು ಜಾತ್ಯಾತೀತ ಪ್ರತೀಕವಲ್ಲ ಎಂದರು.

    ತಾಯಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಅಲ್ಲಿ ಪುಪ್ಪಾರ್ಚನೆ ಮಾಡಿ, ಪೂಜೆ ಮಾಡಿ ವಿದ್ಯುಕ್ತವಾಗಿ ದಸರಾ ಆಚರಣೆ ಪ್ರಾರಂಭವಾಗುತ್ತದೆ. ಬಾನು ಮುಷ್ತಾಕ್ ಅವರಿಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದ್ಯಾ? ನಮ್ಮ ಆಚರಣೆಯನ್ನು ಅವರು ಪಾಲಿಸಿಕೊಂಡು ಬಂದಿದ್ದಾರಾ? ಈ ದಸರಾ ಆಚರಣೆಗೆ ಅವರನ್ನು ಆಹ್ವಾನಿಸುವುದಾದರೆ ಅವರು ಈವರೆಗೂ ಯಾವತ್ತಾದರೂ ತಾನು ತಾಯಿ ಚಾಮುಂಡಿ ಭಕ್ತೆ ಎಂದು ತೋರಿಸಿಕೊಂಡು ಬಂದಿದ್ದಾರಾ? ಹಾಗಾದ್ರೆ ಯಾಕೆ ಆಹ್ವಾನಿಸುತ್ತಿದ್ದೀರಾ? ಇದು ಮೈಸೂರು ಮಹಾರಾಜರು ಅಥವಾ ವಿಜಯನಗರ ಸಾಮ್ರಾಜ್ಯ ಪತನಗೊಂಡ ನಂತರ ಉಳಿಸಿಕೊಂಡು ಬಂದ ಪರಂಪರೆಯಾಗಿದೆ. ಅಧಿದೇವತೆ ತಾಯಿ ಚಾಮುಂಡಿಯನ್ನು ಭಕ್ತಿಭಾವದೊಂದಿಗೆ ಪೂಜಿಸಬೇಕು. ಇದು ರಿಬ್ಬನ್ ಕಟ್ ಮಾಡುವ ಸರ್ಕಾರಿ ಕಾರ್ಯಕ್ರಮವಲ್ಲ, ತಾಯಿ ಮೇಲೆ ಅಚಲವಾದ ನಂಬಿಕೆ, ವಿಶ್ವಾಸ ಪ್ರಕಟ ಮಾಡುವಂತ ಆಚರಣೆಯಾಗಿದೆ. ಇದಕ್ಕೆ ಬಾನು ಮುಷ್ತಾಕ್ ಅವರು ಸೂಕ್ತನಾ ಎನ್ನುವ ಪ್ರಶ್ನೆ. ಇದರ ಬದಲು ಮುಂದಿನ ಸಾಹಿತ್ಯ ಸಮ್ಮೇಳನಕ್ಕೆ ಕರೆದು ಅವರನ್ನು ಅಧ್ಯಕ್ಷರನ್ನಾಗಿ ಮಾಡಿ. ಆದರೆ ಧಾರ್ಮಿಕ ಹಬ್ಬಕ್ಕೆ ಅವರನ್ನು ಆಹ್ವಾನಿಸುವುದಕ್ಕೆ ಏನು ಸಂಬಂಭವಿದೆ? ಮಹಾರಾಜರ ಪರಂಪರೆಯನ್ನು ಯಾಕೆ ಒಡೆಯುತ್ತಿದ್ದೀರಾ? ಹಿಂದೆ ಬರಗೂರು ರಾಮಚಂದ್ರಪ್ಪ ಅವರು ಬಂದಾಗ ನಾನು ದೇವಸ್ಥಾನದೊಳಗೆ ಹೋಗಲ್ಲ, ದೀಪ ಹಚ್ಚಲ್ಲ ಎಂದರು. ಸಿದ್ದರಾಮಯ್ಯನವರೇ ಯಾಕೆ ಇಂತವರನ್ನು ಕರೆಯುತ್ತೀರಾ? ಹಿಂದೂ ಆಚರಣೆ, ನಂಬಿಕೆ ವಿರೋಧಿಗಳನ್ನೇ ಯಾಕೆ ಕರೆಯುತ್ತೀರಾ? ಹಿಂದೆ ಹಿಂದೂ ಧರ್ಮದ ಆಚರಣೆ ಬಗ್ಗೆ ತುಚ್ಛವಾಗಿ ಮಾತನಾಡಿದ್ದ ಗಿರೀಶ್ ಕಾರ್ನಾಡ್ ಅವರನ್ನು ಕರೆದಿದ್ದರು, ಈಗ ಬಾನು ಮುಷ್ತಾಕ್ ಅವರನ್ನು ಕರೆದಿದ್ದಿರಾ ಯಾಕೆ? ಎಂದು ಕಿಡಿಕಾರಿದರು.ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ, ಮನೆ ಮನೆ ಕಸ ಸಂಗ್ರಹದ ಆಟೋಗಳ ಸಮಯ ಬದಲಾವಣೆ

  • ಧರ್ಮಸ್ಥಳ ಪ್ರಕರಣವನ್ನು ಸರ್ಕಾರ ಎನ್‌ಐಎಗೆ ವರ್ಗಾಯಿಸಬೇಕು: ಪ್ರತಾಪ್ ಸಿಂಹ ಆಗ್ರಹ

    ಧರ್ಮಸ್ಥಳ ಪ್ರಕರಣವನ್ನು ಸರ್ಕಾರ ಎನ್‌ಐಎಗೆ ವರ್ಗಾಯಿಸಬೇಕು: ಪ್ರತಾಪ್ ಸಿಂಹ ಆಗ್ರಹ

    – ಧಾರ್ಮಿಕ ಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ?

    ಮೈಸೂರು: ಧರ್ಮಸ್ಥಳ ಪ್ರಕರಣದಲ್ಲಿ (Dharmasthala Case) ತಮಿಳುನಾಡು, ಕೇರಳ, ಹೈದರಾಬಾದ್‌ಗೂ ಲಿಂಕ್ ಇದೆ. ಆದ್ದರಿಂದ ಈ ಕೇಸ್‌ನ್ನು ಎನ್‌ಐಎಗೆ ರಾಜ್ಯ ಸರ್ಕಾರ ವರ್ಗಾಯಿಸಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Prathap Simha) ಆಗ್ರಹಿಸಿದ್ದಾರೆ.

    ಧರ್ಮಸ್ಥಳ ಪ್ರಕರಣದ ಬಗ್ಗೆ ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಅಪಪ್ರಚಾರವು ವ್ಯವಸ್ಥಿತ ಪಿತೂರಿಯಾಗಿದೆ. ಇವೆಲ್ಲವೂ ಧರ್ಮಸ್ಥಳಕ್ಕೆ ಕಳಂಕವನ್ನು ಅಂಟಿಸುವ ಕೆಲಸವಾಗಿದೆ ಎಂಬುದು ಸ್ಟಷ್ಟವಾಗಿದೆ. ಈ ಪ್ರಕರಣದಲ್ಲಿ ಕೇರಳದಲ್ಲಿರುವ ಕಮ್ಯುನಿಸ್ಟ್ ಪಾರ್ಟಿ, ಎಸ್‌ಡಿಪಿಐ ಪ್ರಕರಣದಲ್ಲಿ ಧ್ವನಿ ಎತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಗವಾನ್‌ ಹನುಮಂತ ಮೊದಲ ಬಾಹ್ಯಾಕಾಶ ಯಾನಿ: ವಿದ್ಯಾರ್ಥಿಗಳಿಗೆ ಕೇಂದ್ರ ಮಾಜಿ ಸಚಿವ ಅನುರಾಗ್‌ ಠಾಕೂರ್‌ ಮಾಹಿತಿ

    ಎಸ್‌ಐಟಿ (SIT) ತನಿಖೆಯಿಂದ ಇದರ ಸತ್ಯ ಬಯಲಾಗಲ್ಲ. ಇದಕ್ಕೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಆಗಬೇಕು. ಮಾಸ್ಕ್ ಮ್ಯಾನ್, ಸುಜಾತ ಭಟ್ ಇವರೆಲ್ಲರ ನಿಜ ಬಣ್ಣವು ಸಮಾಜದ ಎದುರು ಬಯಲಾಗಿದೆ. ಈ ಪ್ರಕಣದಲ್ಲಿ ಎಸ್‌ಡಿಪಿಐ ಅವರ ಕೈವಾಡ ಇರುವುದರಿಂದ ಎಸ್‌ಡಿಪಿಐಗೂ ಧರ್ಮಸ್ಥಳಕ್ಕೂ ಏನೂ ಸಂಬಂಧ ಎಂದು ಬಯಲಾಗಬೇಕಿದೆ. ಹೀಗಾಗಿ ರಾಷ್ಟ್ರೀಯ ತನಿಖಾ ದಳಕ್ಕೆ ಈ ಕೇಸ್‌ನ್ನು ಸರ್ಕಾರ ವರ್ಗಾಯಿಸಲಿ ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ

    ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ (Banu Mushtaq) ನಿಯೋಜನೆ ವಿಚಾರವಾಗಿ, ಅವರ ಬಗ್ಗೆ ನಮಗೆ ಹೆಮ್ಮೆ ಇದೆ. ಮುಸ್ಲಿಮರು ಎನ್ನುವ ಕಾರಣಕ್ಕೆ ನಾನು ಅಪಸ್ವರ ಎತ್ತುತ್ತಿಲ್ಲ. ಬಾನು ಮುಷ್ತಾಕ್ ಅವರ ಸಾಹಿತ್ಯದ ಬಗ್ಗೆಯೂ ನನಗೆ ಗೌರವವಿದೆ. ದಸರಾವು ಜಾತ್ಯಾತೀತತೆಯ ಪ್ರತೀಕ ಅಲ್ಲ. ಇದು ಧಾರ್ಮಿಕ ಆಚರಣೆಯಾಗಿದೆ ಎಂದು ಹೇಳಿದ್ದಾರೆ.

    ಬಾನು ಮುಷ್ತಾಕ್‌ಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದ್ಯಾ?
    ದುರ್ಗಾ ಪೂಜೆ, ನವರಾತ್ರಿ ಉತ್ಸವ ಇರುತ್ತದೆ. ಇದು ಯದುವಂಶ ಆರಂಭಿಸಿದ ಧಾರ್ಮಿಕ ಹಬ್ಬ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತದೆ. ಬಾನು ಮುಷ್ತಾಕ್, ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ? ಭಕ್ತಿ ಭಾವದಿಂದ ಮಾಡುವ ಆಚರಣೆ ದಸರಾ. ತಾಯಿ ಚಾಮುಂಡಿ ಮೇಲೆ ಭಕ್ತಿ ತೋರ್ಪಡಿಸುವ ಹಬ್ಬ ಇದು. ಧಾರ್ಮಿಕ ಸಂಕೇತವಾದ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂಬುದು ನನ್ನ ಪ್ರಶ್ನೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಮಹಾರಾಜರ ಮೇಲಿನ ದ್ವೇಷವನ್ನು ಸಿದ್ದರಾಮಯ್ಯ ತೀರಿಸಿಕೊಳ್ತಿದ್ದಾರೆ
    ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ರನ್ನು ಘೋಷಿಸಿ. ಯಾರ ತಕಾರರು ಇಲ್ಲ. ಬರಗೂರು ರಾಮಚಂದ್ರಪ್ಪ ದಸರಾ ಉದ್ಘಾಟನೆಗೆ ಬಂದು ನಾನು ದೀಪ ಹಚ್ಚಲ್ಲ, ದೇವಸ್ಥಾನಕ್ಕೆ ಹೋಗಲ್ಲ ಅಂದರು. ಇದು ದಸರಾಗೆ ಮಾಡಿದ ಅಪಮಾನ ಅಲ್ವಾ? ಹಿಂದೂ ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿದ್ದರಾಮಯ್ಯ ಕರೆಯುತ್ತಾರೆ? ಮಹಾರಾಜರ ಮೇಲಿನ ದ್ವೇಷವನ್ನು ಸಿದ್ದರಾಮಯ್ಯ ಬಗೆ ಬಗೆಯಾಗಿ ತೀರಿಸಿ ಕೊಳ್ಳುತ್ತಿದ್ದಾರೆ. ಮಹಾರಾಜರ ಪರಂಪರೆಯನ್ನು ಸಿದ್ದರಾಮಯ್ಯ ಹೀಗೆ ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

     

    ಅಲ್ಲಾ ಬಿಟ್ಟರೆ ಬೇರೆ ಯಾರು ದೇವರಿಲ್ಲ ಎನ್ನುತ್ತದೆ ಇಸ್ಲಾಂ. ಹಾಗಾದರೆ ಬಾನು ಮುಷ್ತಾಕ್ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ, ಅವರ ಮಾತನ್ನು ಒಪ್ಪುತ್ತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೇಮಾವತಿ ನದಿಗೆ ಬಿದ್ದ ಕಾರು – ಇಬ್ಬರ ಶವ ಪತ್ತೆ, ಮತ್ತಿಬ್ಬರು ಕೊಚ್ಚಿ ಹೋಗಿರೋ ಶಂಕೆ

    ಎಸ್.ಎಲ್.ಭೈರಪ್ಪ ಸರಸ್ವತಿ ಪುತ್ರ, ಅವರನ್ನು ಯಾರಿಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಕಾಂತಾರದ ರಿಷಬ್ ಶೆಟ್ಟಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಅವರನ್ನು ದಸರಾ ಉದ್ಘಾಟನೆಗೆ ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಕಾಂತಾರ ಹಿಂದೂ ಧರ್ಮಕ್ಕೆ ಪೂರಕವಾದ ಸಿನಿಮಾ. ಆ ಸಿನಿಮಾದ ನಿರ್ದೇಶಕ, ನಟ ರಿಷಭ್ ಶೆಟ್ಟಿ ಅವರನ್ನು ಕರೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.

    ವೇಶ್ಯಾವಾಟಿಕೆಯನ್ನು ಪ್ರಿಯಾಂಕ ಖರ್ಗೆ ಕಾನೂನು ಬದ್ಧ ಮಾಡಲಿ:
    ಆನ್‌ಲೈನ್ ಗೇಮ್‌ನ್ನು ಸಂಪೂರ್ಣ ಬ್ಯಾನ್ ಮಾಡುವುದರಿಂದ ರಾಜ್ಯದ ಆದಾಯಕ್ಕೆ ನಷ್ಟ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಯಾರ ಮಕ್ಕಳ ಹಾಳಾದರೇನೂ ಅವರಿಗೇನು? ಅವರಿಗೆ ಆದಾಯ ಬೇಕು ಅಷ್ಟೆ. ಡ್ರೀಮ್ ಇಲೆವನ್ ರೂಪದ ಎಲ್ಲಾ ಗೇಮ್ ಬ್ಯಾನ್ ಮಾಡಬೇಕು. ಪ್ರಿಯಾಂಕ ಖರ್ಗೆ ಬಾಯಲ್ಲಿ ದಲಿತ ಎಂದು ಹೇಳುತ್ತ ಬೆಂಗಳೂರಿನ ಸದಾಶಿವ ನಗರದಲ್ಲಿ ಐಷಾರಾಮಿ ಜೀವನ ನಡೆಸುತ್ತಾರೆ. ಅವರಿಗೆ ಬಡ ಕುಟುಂಬದ ಸ್ಥಿತಿ ಏನೂ ಗೊತ್ತು? ಆದಾಯ ಹೆಚ್ಚು ಬೇಕಾದರೆ ವೇಶ್ಯಾವಾಟಿಕೆಯನ್ನು ಪ್ರಿಯಾಂಕ ಖರ್ಗೆ ಕಾನೂನು ಬದ್ಧ ಮಾಡಲಿ ಬಿಡಿ. ಅದರಿಂದಲೂ ಹೆಚ್ಚು ಆದಾಯ ಬರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

  • ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ

    ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ

    – ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸುವುದು ಸ್ವಂತ ಧಾರ್ಮಿಕ ನಂಬಿಕೆಗೆ ವಿರುದ್ಧ: ಶಾಸಕ

    ಬೆಂಗಳೂರು: ಸಾಹಿತಿ ಬಾನು ಮುಷ್ತಾಕ್‌ (Banu Musthaq) ಅವರು ದಸರಾ ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಯತ್ನಾಳ್‌, ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ

    ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ, ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಬಾನು ಮುಷ್ತಾಕ್ ಅವರು ಸ್ಪಷ್ಟನೆ ನೀಡುವುದು ಅಗತ್ಯ. ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

    ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ?

  • ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ

    ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ

    ಬೆಂಗಳೂರು: ಈ ಬಾರಿ ದಸರಾವನ್ನು (Mysuru Dasara) ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ (Banu Mushtaq) ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದ ಒಬ್ಬ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಬಹಳ ಸಂತೋಷ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು. ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿರುವ ಪ್ರಗತಿ ಪರ ಚಿಂತಕರು. ಹಾಗಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ ಎಂದರು.  ಇದನ್ನೂ ಓದಿ: ಧರ್ಮಸ್ಥಳ ಕೇಸ್‌- ಮೊದಲ ಬಾರಿಗೆ ಮೌನ ಮುರಿದ ಸಿಎಂ

    ಈ ಬಾರಿ 11 ದಿನ ದಸರಾ ನಡೆಯಲಿದೆ. ಸೆಪ್ಟೆಂಬರ್‌ 22ರಿಂದ ದಸರಾ ಆರಂಭ ಆಗಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ ಇದೆ. ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸ್ಪಷ್ಟಪಡಿಸಿದರು.

  • ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ?

    ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ?

    – ಸೆ.22ರಿಂದ 11 ದಿನಗಳ ಕಾಲ ವಿಜೃಂಭಣೆಯ ದಸರಾ

    ಬೆಂಗಳೂರು/ಮೈಸೂರು: ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದ್ದು, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ (Banu Mushtaq) ಅಥವಾ ದೀಪಾ ಭಾಸ್ತಿ (Deepa Bhasthi) (ಬರಹಗಾರ್ತಿ ಮತ್ತು ಅನುವಾದಕಿ) ಅವರನ್ನ ಉದ್ಘಾಟಕರಾಗಿ ಪರಿಗಣಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.

    ಈ ಬಾರಿ ಮಹಿಳೆಯರ ಹೆಸರೇ ಅಂತಿಮಗೊಳಿಸಲು ಸಿಎಂ ನಿರ್ಧರಿಸಿದ್ರೆ ಅವರಿಬ್ಬರಲ್ಲಿ ಒಬ್ಬರು ದಸರಾ (Mysuru Dasara) ಉದ್ಘಾಟಕರಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಉದ್ಘಾಟಕರ ಆಯ್ಕೆ ಅಧಿಕಾರ ನನಗೆ ನೀಡಿದ್ದಾರೆ. ಒಂದು ವಾರ ಅಥವಾ 15 ದಿನದಲ್ಲಿ ವಿಚಾರ ಮಾಡಿ ತಿಳಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: Mysuru Dasara | ಸೆ.22ರಿಂದ 11 ದಿನಗಳ ಕಾಲ ವಿಜೃಂಭಣೆಯ ದಸರಾ

    ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕೋಡಿಮಠ ಸ್ವಾಮೀಜಿ ಚಿನ್ನಾಭರಣ ಕಳ್ಳತನ; 7 ವರ್ಷಗಳ ಬಳಿಕ ಆರೋಪಿ ಬಂಧನ

    ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ಕಳೆದ 100 ವರ್ಷದಲ್ಲಿ 8 ನೇ ಬಾರಿ 11 ದಿನದ ದಸರಾ ಆಚರಣೆ ಮಾಡಲಾಗುತ್ತಿದೆ. ಈ ಬಾರಿಯೂ 21 ದಿನಗಳ ಕಾಲ ದೀಪ ಅಲಂಕಾರ ಇರಲಿದೆ. ಈ ಬಾರಿ ಅಂದಾಜು 10 ಲಕ್ಷ ಜನ ದಸರಾದಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

    ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು. ದಸರಾ ಕೊನೆಯ ದಿನ ಅಕ್ಟೋಬರ್ 2 ಗಾಂಧಿ ಜಯಂತಿ, ಹೀಗಾಗಿ ಟ್ಯಾಬ್ಲೋದಲ್ಲಿ ಗಾಂಧಿ ಜಯಂತಿಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ S-400 ಯಶಸ್ವಿ ಕಾರ್ಯಾಚರಣೆ; S-500 ರಕ್ಷಣಾ ವ್ಯವಸ್ಥೆ ಖರೀದಿಗೂ ಆಸಕ್ತಿ ತೋರಿದ ಭಾರತ

  • ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿದ್ದರಾಮಯ್ಯ

    ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿದ್ದರಾಮಯ್ಯ

    ಬೆಂಗಳೂರು: ಸಾಹಿತ್ಯಕ್ಕೆ (Literature) ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ (Vidhana Soudha) ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಕರ್ನಾಟಕ ಸರ್ಕಾರ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೂಕರ್ ಪ್ರಶಸ್ತಿ ವಿಜೇತರಿಗೆ ಸನ್ಮಾನ ಮಾಡಿದ ಬಳಿಕ ಸಿಎಂ ಮಾತನಾಡಿದರು. ಇದನ್ನೂ ಓದಿ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್

    ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ. ಬಾನು ಅವರ ಕತೆಗಳನ್ನು ಇಂಗ್ಲಿಷ್‌ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು. ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: Chikkaballapura | ಲಾಂಗ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ – ಆಟೋ ಚಾಲಕ ಅರೆಸ್ಟ್

    ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿಯನ್ನು ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಏಕದಿನಕ್ಕೆ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ದಿಢೀರ್‌ ನಿವೃತ್ತಿ

    ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ. ಬಸವಣ್ಣನವರು ಇವ ನಮ್ಮವ ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು. ಇದನ್ನೂ ಓದಿ: 4,000 ಸಕ್ರಿಯ ಕೊರೊನಾ ಕೇಸ್‌ಗಳ ಸನಿಹದಲ್ಲಿ ಭಾರತ – ಕೇರಳದಲ್ಲಿಯೇ 1,400 ಪ್ರಕರಣ

    ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಗೆ ಸರ್ಕಾರದಿಂದ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು. ಇದನ್ನೂ ಓದಿ: ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ

  • ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ – ಸಿಎಂ, ಹೆಚ್‌ಡಿಕೆ ಅಭಿನಂದನೆ

    ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ – ಸಿಎಂ, ಹೆಚ್‌ಡಿಕೆ ಅಭಿನಂದನೆ

    ಬೆಂಗಳೂರು: ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್(Banu Mushtaq) ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(HD Kumaraswamy) ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ(Siddaramaiah) ಅವರು, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮ್ಯಾನೇಜರ್ ದಿಢೀರ್ ವರ್ಗಾವಣೆ

    ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ `ಹೃದಯ ದೀಪ’ವನ್ನು ಇಂಗ್ಲಿಷ್‌ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ

    ಅಭಿನಂದಿಸಿದ ಹೆಚ್‌ಡಿಕೆ
    ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ. ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ನಮ್ಮ ನಾಡಿನ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಹಾಗೆಯೇ, ಬೂಕರ್ ಪ್ರಶಸ್ತಿ ಭಾಜನವಾಗಿರುವ ಅವರ `ಹೃದಯ ದೀಪ’ ಕೃತಿಯನ್ನು ಇಂಗ್ಲಿಷ್ ಭಾಷೆಗೆ ಅನುವಾದಿಸಿರುವ ಲೇಖಕಿ ದೀಪಾ ಭಸ್ತಿ ಅವರಿಗೂ ಅಭಿನಂದನೆಗಳು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 26 ನಕ್ಸಲರು ಬಲಿ, ಯೋಧ ಹುತಾತ್ಮ

    ಬಾನು ಮುಷ್ತಾಕ್ ಅವರಿಂದ ಇದೇ ರೀತಿಯಲ್ಲಿ ಇನ್ನಷ್ಟು ಉತ್ತಮ ಕೃತಿಗಳು ಬರಲಿ. ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತವಾಗಲಿ ಹಾಗೂ ಜಗತ್ತಿನ ಉದ್ದಗಲಕ್ಕೂ ಕನ್ನಡದ ಕಂಪು ಹರಡಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್ ಮೂಲಕ ಶುಭಕೋರಿದ್ದಾರೆ.