Tag: ಬಾನ ದಾರಿಯಲ್ಲಿ

  • ಬ್ಯೂಟಿಫುಲ್ ಹುಡುಗಿಯರ ಜೊತೆ ಬಾನ ದಾರಿಯಲ್ಲಿ ಕುಣಿದ ಗೋಲ್ಡನ್ ಸ್ಟಾರ್

    ಬ್ಯೂಟಿಫುಲ್ ಹುಡುಗಿಯರ ಜೊತೆ ಬಾನ ದಾರಿಯಲ್ಲಿ ಕುಣಿದ ಗೋಲ್ಡನ್ ಸ್ಟಾರ್

    ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ  ‘ಬಾನದಾರಿಯಲ್ಲಿ’ ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಕವಿರಾಜ್ ಬರೆದಿರುವ ‘ನಿನ್ನನ್ನು ನೋಡಿದ ನಂತರ’ ಎಂಬ ಗೀತೆ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಬಗ್ಗೆ ಮಾತನಾಡಿದರು.

    ‘ಇದು ಕೊರೋನ ಸಮಯದಲ್ಲಿ ಅಂದರೆ ಸುಮಾರು ಎರಡುವರೆ ವರ್ಷಗಳ ಹಿಂದೆ ನಾನು ಹಾಗೂ ಪ್ರೀತಾ ಜಯರಾಂ ಸೇರಿ ಮಾಡಿದ ಕಥೆ. ರಾಜ್ಯದ ನಾನಾ ಭಾಗಗಳಲ್ಲಿ ಶೂಟಿಂಗ್ ಮಾಡಿ ಇದೀಗ ಸಂಪೂರ್ಣ ಚಿತ್ರೀಕರಣ ಮುಗಕ್ತಾಯವಾಗಿದೆ. ನಾವು ಅಂದುಕೊಂಡಿದ್ದಕ್ಕಿಂತಲೂ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಸಿನಿಮಾದ ಮೊದಲ ಹಾಡನ್ನು ಈಗ ಬಿಡುಗಡೆ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು’ ನಿರ್ದೇಶಕ  ಪ್ರೀತಂ ಗುಬ್ಬಿ. ಇದನ್ನೂ ಓದಿ: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್

    ನಾಯಕನ ನಟ ಗಣೇಶ್ ಮಾತನಾಡಿ, ‘ ಈ ಹಾಡನ್ನು ಕವಿರಾಜ್ ಬರೆದಿದ್ದಾರೆ. ಹುಡುಗಾಟ ಚಿತ್ರದ ಮಂದಾಕಿನಿಯೇ ಹಾಡಿನಿಂದ ಶುರುವಾದ ನಮ್ಮ ಜರ್ನಿ ಈ ಹಾಡಿನ ತನಕ ಮುಂದುವರೆದಿದೆ. ನನ್ನ ಅನೇಕ ಹಿಟ್ ಹಾಡುಗಳನ್ನು ಕವಿರಾಜ್ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ಚಿತ್ರದ ಮತ್ತೊಂದು ಹೈಲೆಟ್ . ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿದ್ದಾರೆ. ಸಾಮಾನ್ಯವಾಗಿ ನಾನು ಡಬ್ಬಿಂಗ್ ಸಮಯದಲ್ಲಿ ಚಿತ್ರದ ಬಗ್ಗೆ ಹೇಳಿ ಬಿಡುತ್ತೇನೆ. ಈ ಚಿತ್ರದ ಡಬ್ಬಿಂಗ್ ಮಾಡಬೇಕಾದರೆ ಕೆಲವೊಮ್ಮೆ ತುಂಬಾ ಭಾವುಕನಾದೆ. ನಾಯಕಿಯರಾದ ರುಕ್ಮಿಣಿ ವಸಂತ್ ಹಾಗೂ ರೀಷ್ಮಾ ನಾಣಯ್ಯ ಸೇರಿದಂತೆ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಕೀನ್ಯಾ ಭಾಗದ  ಚಿತ್ರೀಕರಣವನ್ನು  ಮರೆಯಲು ಸಾಧ್ಯವಾಗುತ್ತಿಲ್ಲ. ನಾನು ಈ ಚಿತ್ರದಲ್ಲಿ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಂಡಿದ್ದೇನೆ’ ಎಂದಿದ್ದಾರೆ ಗಣೇಶ್.

    ಚಿತ್ರ ತುಂಬಾ ಚೆನ್ನಾಗಿದೆ. ಇಂದು ಬಿಡುಗಡೆಯಾಗಿರುವ ಹಾಡು ಅಷ್ಟೇ ಇಂಪಾಗಿದೆ. ನಾನು ಈ ಹಾಡಿಗಾಗಿ ಸರ್ಫಿಂಗ್ ಅಭ್ಯಾಸ ಮಾಡಿದ್ದೇನೆ ಎಂದು ನಾಯಕಿ ರುಕ್ಮಿಣಿ ವಸಂತ್ ಹೇಳಿದರೆ, ಗಣೇಶ್ ಹಾಗೂ ರಂಗಾಯಣ ರಘು ಅವರು ನನಗೆ ಸಾಕಷ್ಟು ಹೇಳಿಕೊಟ್ಟಿದ್ದಾರೆ.  ಕಳೆದ ವರ್ಷ ಅನೇಕ ಕನ್ನಡ ಚಿತ್ರಗಳು ಗೆದ್ದು ದಾಖಲೆ ನಿರ್ಮಿಸಿವೆ. ಈ ವರ್ಷವೂ ಎಲ್ಲಾ ಕನ್ನಡ ಚಿತ್ರಗಳು ದೊಡ್ಡಮಟ್ಟದ ಯಶಸ್ಸು ಕಾಣಲಿ. ಅದರಲ್ಲಿ ಬಾನದಾರಿಯಲ್ಲಿ ಚಿತ್ರವೂ ಇರಲಿ ಎನ್ನುತ್ತಾರೆ ಚಿತ್ರದ ಮತ್ತೊಬ್ಬ ನಾಯಕಿ ರೀಷ್ಮಾ ನಾಣಯ್ಯ.

    ಬಾನದಾರಿಯಲ್ಲಿ ಹಾಡು ಹುಟ್ಟಿದ ಸಮಯವನ್ನು ವರ್ಣಿಸಿದ  ಗೀತರಚನೆಕಾರ ಕವಿರಾಜ್, ಮುಂಬೈನ ಖ್ಯಾತ ಯಶ್ ರಾಜ್ ಸ್ಟುಡಿಯೋದಲ್ಲಿ ಈ ಹಾಡಿನ ರೆಕಾರ್ಡಿಂಗ್ ನಡೆದಿದೆ. ಖ್ಯಾತ ಗಾಯಕ ಸೋನು ನಿಗಮ್ ಸುಮಧುರವಾಗಿ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ ಎಂದು ತಿಳಿಸಿದರು.  ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ ಸೇರಿದಂತೆ ಅನೇಕ ತಂತ್ರಜ್ಞರು ತಮ್ಮ ಅನುಭವ ಹಂಚಿಕೊಂಡರು. ಶ್ರೀವಾರಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸಂತೋಷ್ ಹಾಗೂ ವೇಣು ಬಂಡವಾಳ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಯಕಿ ರುಕ್ಮಿಣಿ ಜೊತೆ ಆಫ್ರಿಕಾಗೆ ಹೊರಟು ನಿಂತ ಗೋಲ್ಡನ್ ಸ್ಟಾರ್ ಗಣೇಶ್

    ನಾಯಕಿ ರುಕ್ಮಿಣಿ ಜೊತೆ ಆಫ್ರಿಕಾಗೆ ಹೊರಟು ನಿಂತ ಗೋಲ್ಡನ್ ಸ್ಟಾರ್ ಗಣೇಶ್

    ಗೋಲ್ಡನ್ ಸ್ಟಾರ್ ಗಣೇಶ್ (Ganesh) – ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬರುತ್ತಿದೆ ಮತ್ತೊಂದು ಸುಂದರ ಚಿತ್ರ. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಈ ಹಿಂದೆ ಕೆಲವು ಚಿತ್ರಗಳು ಪ್ರೇಕ್ಷಕರನ್ನು ಮೋಡಿ ಮಾಡಿದೆ. ಈಗ ಇದೇ ಕಾಂಬಿನೇಷನ್ ನಲ್ಲಿ ” ಬಾನ ದಾರಿಯಲ್ಲಿ” (Banadariyalli) ಚಿತ್ರ ಬರುತ್ತಿದೆ.

    ಸ್ಪೋರ್ಟ್ಸ್ ಜಾನರ್ ನ ಈ ಚಿತ್ರದಲ್ಲಿ ಗಣೇಶ್ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ರುಕ್ಮಿಣಿ ವಸಂತ್ (Rukmini Vasanth) ಈಜುಗಾರ್ತಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.  ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್‌ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ (Africa) ನಡೆಯಲಿದ್ದು, ಸದ್ಯದಲ್ಲೇ ಚಿತ್ರತಂಡ ಆಫ್ರಿಕಾಗೆ ತೆರಳಲಿದೆ.

    ಪ್ರೀತಂ ಗುಬ್ಬಿ (Pritam Gubbi) ನಿರ್ದೇಶನದ ಈ ಚಿತ್ರದ ಕಥೆ ಪ್ರೀತಾ ಜಯರಾಂ ಅವರದು. ಮಾಸ್ತಿ ಸಂಭಾಷಣೆ,  ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಶ್ರೀವಾರಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಬಾನ ದಾರಿಯಲ್ಲಿ” ಚಿತ್ರದ ತಾರಾಬಳಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರೀಶ್ಮಾ ನಾಣಯ್ಯ, ರಂಗಾಯಣ ರಘು ಮುಂತಾದವರಿದ್ದಾರೆ‌. ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಭಿನಯದ ಹಾಡೊಂದರ ಸಾಲು ಚಿತ್ರದ ಶೀರ್ಷಿಕೆಯಾಗಿದ್ದು, “ಬಾನ ದಾರಿಯಲ್ಲಿ” ಶೀರ್ಷಿಕೆ ಈಗಾಗಲೇ ಜನರ ಮನ ಗೆದ್ದಿದೆ.

    Live Tv
    [brid partner=56869869 player=32851 video=960834 autoplay=true]