Tag: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದ ಹಂತಕರು

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದ ಹಂತಕರು

    ಮುಂಬೈ: ಮಹಾರಾಷ್ಟ್ರ (Maharashtra) ಮಾಜಿ ಸಚವ ಹಾಗೂ ಎನ್‌ಸಿಪಿ (NCP) ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ (Baba Siddique Murder Case) ಹಂತಕರು ರಾಯಗಢ ಜಲಪಾತದ (Raigad Falls) ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

    ಅ.12 ರಂದು ನಡೆದ ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಸಂಬಂಧ ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಇನ್ನೋರ್ವ ಆರೋಪಿ ಶಿವಕುಮಾರ್ ಎಂಬುವವನನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.ಇದನ್ನೂ ಓದಿ: ಆಪರೇಷನ್ ಆಲೌಟ್ ಜೆಡಿಎಸ್ – ಸಿಎಂ ಮುಂದೆ ಡಿಕೆಶಿ ಶಪಥ

    ಇದಕ್ಕೂ ಮುನ್ನ ಹತ್ಯೆಯ ಮೂರು ಆರೋಪಿಗಳಾದ ಧರ್ಮರಾಜ್ ಕಶ್ಯಪ್, ಗುರ್ಮೈಲ್ ಸಿಂಗ್ ಮತ್ತು ಪರಾರಿಯಾಗಿರುವ ಶಿವಕುಮಾರ್ ಯೂಟ್ಯೂಬ್ ನೋಡಿ ಶೂಟಿಂಗ್ ಕಲಿತಿದ್ದರು ಎಂದು ತನಿಖೆಯ ವೇಳೆ ಬೆಳಕಿಗೆ ಬಂದಿತ್ತು. ಇದೀಗ ಇನ್ನೊಂದು ಮಾಹಿತಿ ಲಭಿಸಿದ್ದು, ಹಂತಕರು ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸುತ್ತಿದ್ದರು.

    ಸೆಪ್ಟೆಂಬರ್ ತಿಂಗಳಲ್ಲಿ ಮುಂಬೈನ (Mumbai) ಹೊರವಲಯದಲ್ಲಿರುವ ಕರ್ಜತ್ ಎಂಬ ಪ್ರದೇಶದ ಬಳಿಯಿರುವ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬಾಬಾ ಸಿದ್ದಿಕಿಯನ್ನು ಹತ್ಯೆಮಾಡಲು ಥಾಣೆ ಮೂಲದ ನಿತಿನ್ ಸಪ್ರೆ, ರಾಮ್ ಕನೂಜಿಯಾ ನೇತೃತ್ವದ ಐದು ಸದಸ್ಯರ ತಂಡಕ್ಕೆ ಸುಪಾರಿಯನ್ನು ನೀಡಲಾಗಿತ್ತು. ಜೊತೆಗೆ ಅಪರಾಧಕ್ಕೆ ಬಳಸಲಾದ ಪಿಸ್ತೂಲ್‌ಗಳನ್ನು ಕೂಡ ರಾಜಸ್ಥಾನದಿಂದ ತರಿಸಲಾಗಿತ್ತು. ಸುಪಾರಿಗಾಗಿ 50 ಲಕ್ಷ ರೂ.ಯನ್ನು ಇರಿಸಲಾಗಿದ್ದು, ಈ ಮೊತ್ತದ ಬೇಡಿಕೆಯಲ್ಲಿ ಭಿನ್ನಾಭಿಪ್ರಾಯ ಉಂಟಾದ ಕಾರಣ ಈ ತಂಡ ಹಿಂದೆ ಸರಿಯಿತು.

    ಈ ವೇಳೆ ಬಾಬಾ ಸಿದ್ದಿಕಿ ಹಂತಕರು ಕರ್ಜತ್ ಸ್ಥಳದ ಸಮೀಪದ ಜಲಪಾತವು ನಿರ್ಜನ ಪ್ರದೇಶವಾಗಿದ್ದು, ಅರಣ್ಯದಿಂದ ಪ್ರದೇಶ ಸುತ್ತುವರೆದಿದೆ. ಆದ್ದರಿಂದ ಆ ಸ್ಥಳದಲ್ಲಿ ಹಂತಕರು ಶೂಟಿಂಗ್ ಅಭ್ಯಾಸ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಇದು ಸಾಧ್ಯತೆಯ ಕಲೆ: ಡಿಕೆ ಶಿವಕುಮಾರ್‌

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ – ಯೂಟ್ಯೂಬ್ ನೋಡಿ ಶೂಟಿಂಗ್ ಕಲಿತಿದ್ದ ಹಂತಕರು

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ – ಯೂಟ್ಯೂಬ್ ನೋಡಿ ಶೂಟಿಂಗ್ ಕಲಿತಿದ್ದ ಹಂತಕರು

    ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ, ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಅವರ ಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದೆ. ಮುಂಬೈ ಕ್ರೈಂ ಬ್ರ‍್ಯಾಂಚ್ (Mumbai Crime Branch) ಪೊಲೀಸರ ತನಿಖೆಯಲ್ಲಿ ಹಲವು ಆಘಾತಕಾರಿ ಸಂಗತಿಗಳು ಬಹಿರಂಗಗೊಂಡಿದ್ದು, ಬಂಧಿತ ಆರೋಪಿಗಳು ಯೂಟ್ಯೂಬ್ ನೋಡಿ ಹತ್ಯೆಗಾಗಿ ಶೂಟಿಂಗ್ ತರಬೇತಿ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತನಾಡಿ, ಆರೋಪಿಗಳು ಮೂರು ತಿಂಗಳ ಹಿಂದೆಯೇ ಪುಣೆಯಲ್ಲಿ ಬಾಬಾ ಸಿದ್ದಿಕಿ ಹತ್ಯೆಗೆ ಯೋಜನೆ ರೂಪಿಸಿದ್ದರು. ಆದರೆ ಅದು ಯಶಸ್ವಿಯಾಗಿರಲಿಲ್ಲ. ಬಳಿಕ ಮುಂಬೈನಲ್ಲಿ ಹತ್ಯೆಗೆ ಪ್ಲ್ಯಾನ್‌ ಮಾಡಿ, ಕಳೆದ ಶನಿವಾರ ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಗುರ್ಮೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಆರು ಸುತ್ತು ಗುಂಡು ಹಾರಿಸಿದ್ದರು ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಮಳೆ ಬಂದಾಗ ನೀರನ್ನು ವಾಪಸ್ ಆಕಾಶಕ್ಕೆ ಕಳಿಸೋಕಾಗಲ್ಲ – ಬಿಜೆಪಿ ಟೀಕೆಗೆ ಪರಮೇಶ್ವರ್ ತಿರುಗೇಟು

    ಹಂತಕರು ಯೂಟ್ಯೂಬ್‌ನಿಂದ ಶೂಟ್ ಮಾಡುವುದು ಹೇಗೆಂದು ಕಲಿತಿದ್ದರು. ಅಷ್ಟೇ ಅಲ್ಲದೇ ಈ ಕುರಿತು ಸ್ನ್ಯಾಪ್‌ಚಾಟ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಮಾತ್ರ ಪರಸ್ಪರ ಸಂವಹನ ನಡೆಸುತ್ತಿದ್ದರು. ಸದ್ಯ ಪೊಲೀಸರು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಅಧಿಕಾರಿಗಳಿಂದ ಪೋಸ್ಟ್ ಕುರಿತು ಹೆಚ್ಚಿನ ಮಾಹಿತಿ ಕೇಳಿದ್ದಾರೆ.

    ಹಲವು ಸಾಕ್ಷಿಗಳನ್ನು ಒಳಗೊಂಡಿರುವ ಈ ಪ್ರಕರಣದಲ್ಲಿ ಮುಂಬೈ ಕ್ರೈಂ ಬ್ರ‍್ಯಾಂಚ್ ಇದುವರೆಗೆ 15ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಎನ್‌ಸಿಪಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಹರೀಶ್ ಕುಮಾರ್ ನಿಶಾದ್‌ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದು ನಾಲ್ಕನೇ ಬಂಧನವಾಗಿದೆ. ಆರೋಪಿಗಳಿಗೆ ಹರೀಶ್ ಹಣ ಮತ್ತು ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕೂ ಮುನ್ನ ಪುಣೆಯಿಂದ ಸಂಚುಕೋರ ಪ್ರವೀಣ್ ಲೋಂಕರ್‌ನನ್ನು ಬಂಧಿಸಲಾಗಿತ್ತು.ಇದನ್ನೂ ಓದಿ:ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಮುಂಬೈ: ಮಹಾರಾಷ್ಟ್ರದ (Maharashtra) ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ (Baba Siddique Murder Case)  ಸಂಬಂಧ ಓರ್ವ ಕೊಲೆ ಆರೋಪಿಯನ್ನು ಅ.21 ರವರೆಗೆ ಪೊಲೀಸ್‌ ಕಸ್ಟಡಿಗೆ ಮುಂಬೈ ಕೋರ್ಟ್ (Mumbai Case) ಒಪ್ಪಿಸಿದೆ

    ಬಂಧಿತ ಆರೋಪಿಗಳನ್ನು ಹರಿಯಾಣ ಮೂಲದ ಗುರ್ಮೈಲ್ ಸಿಂಗ್ ಹಾಗೂ ಉತ್ತರ ಪ್ರದೇಶ ಮೂಲದ ಧರ್ಮರಾಜ್ ಸಿಂಗ್ ಕಶ್ಯಪ್ ಎಂದು ಗುರುತಿಸಲಾಗಿದೆ. ಇಂದು (ಅ.13) ಬೆಳಗ್ಗೆ ಮುಂಬೈ ಪೊಲೀಸರು ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈನ ಎಸ್ಪ್ಲೇನೇಡ್‌ ಕೋರ್ಟ್‌ಗೆ (Esplanade Court) ಹಾಜರುಪಡಿಸಿದ್ದಾರೆ.ಇದನ್ನೂ ಓದಿ: ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್‌ – ಪೊಲೀಸ್‌ ಡ್ರೆಸ್‌ನಲ್ಲಿ ವೇಗಿ

    ಇಬ್ಬರು ಆರೋಪಿಗಳ ಪೈಕಿ ಗುರ್ಮೈಲ್ ಸಿಂಗ್‌ನನ್ನು ಅ.21ರವರೆಗೆ ಮುಂಬೈ ಕ್ರೈಂ ಬ್ರ್ಯಾಂಚ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಆರೋಪಿ ಧರ್ಮರಾಜ್ ಸಿಂಗ್ ಕಶ್ಯಪ್ ತಾನು ಅಪ್ರಾಪ್ತ ಎಂದು ಹೇಳಿಕೊಂಡಿದ್ದ. ಅದಕ್ಕೆ ಕೋರ್ಟ್, ಆತನಿಗೆ ಮೂಳೆ ಪರೀಕ್ಷೆಯ ಬಳಿಕ ಮತ್ತೆ ಕೋರ್ಟ್‌ಗೆ ಹಾಜರುಪಡಿಸುವಂತೆ ಸೂಚಿಸಿದೆ.

    ಆಸಿಫೀಕೇಶನ್ ಪರೀಕ್ಷೆ (Ossification Test) (ಮೂಳೆ ಪರೀಕ್ಷೆ) ಎಂದರೆ ಮೂಳೆಗಳ ಸಮ್ಮಿಲನದ ಆಧಾರದ ಮೇಲೆ ವಯಸ್ಸಿನ ಪತ್ತೆ ಹಚ್ಚುವಿಕೆ ಪರೀಕ್ಷೆಯಾಗಿರುತ್ತದೆ. ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ವಯಸ್ಸು ಪತ್ತೆ ಹಚ್ಚಲು ಈ ಪರೀಕ್ಷಾ ವಿಧಾನವನ್ನು ಬಳಸುತ್ತಾರೆ.

    ಆರೋಪಿ ಸಿದ್ದಾರ್ಥ ಅಗರವಾಲ್‌ನ ವಕೀಲರು ಮಾತನಾಡಿ, ಪೊಲೀಸರು ಆರೋಪಿಗಳನ್ನು ಹಾಜರುಪಡಿಸಿದ್ದಾರೆ. ನಾವು ಕೆಲವು ಆಧಾರಗಳನ್ನು ನೀಡಿದ್ದೇವೆ. ಅವುಗಳ ಆಧಾರದ ಮೇಲೆ ಓರ್ವ ಆರೋಪಿಗೆ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಇನ್ನೋರ್ವ ಆರೋಪಿಯನ್ನು ಆಸಿಫೀಕೇಶನ್ ಪರೀಕ್ಷೆಗೆ ಕಳಿಸಿದ್ದಾರೆ.

    ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಗುರುತಿಸಲಾಗಿದ್ದು, ಮೊಹಮ್ಮದ್ ಜೀಶನ್ ಅಖ್ತರ್ ಎಂದು ಪತ್ತೆಹಚ್ಚಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ