Tag: ಬಾಬೂರಾವ್ ಚಿಂಚನಸೂರ್

  • ಈ ಬಾರಿ ಖರ್ಗೆ ಬದಲಾಗಿ ರಾಧಾಕೃಷ್ಣಗೆ ಕಲಬುರಗಿ ಎಂಪಿ ಟಿಕೆಟ್: ಚಿಂಚನಸೂರು

    ಈ ಬಾರಿ ಖರ್ಗೆ ಬದಲಾಗಿ ರಾಧಾಕೃಷ್ಣಗೆ ಕಲಬುರಗಿ ಎಂಪಿ ಟಿಕೆಟ್: ಚಿಂಚನಸೂರು

    ಯಾದಗಿರಿ: ಲೋಕಸಭಾ ಚುನಾವಣೆಯ (Loksabha Election) ಕಾವು ಈಗಿನಿಂದಲೇ ರಂಗೇರುತ್ತಿದೆ. ಕಾಂಗ್ರೆಸ್ (Congress) ಪಕ್ಷದಿಂದ ಇನ್ನೂ ಅಧಿಕೃತವಾಗಿ ಲೋಕಸಭಾ ಚುನಾವಣೆ ಅಧಿಕೃತ ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ (BabuRao Chinchanasur) ಅಚ್ಚರಿ ಹೇಳಿಕೆ ನೀಡಿದ್ದಾರೆ.

    ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರೇ ನಿಲ್ಲಬಹುದು ಅಂತಾ ಚಿಂಚನಸೂರು ಹೇಳಿದ್ದಾರೆ. ನನ್ನ ಪ್ರಕಾರ ರಾಧಾಕೃಷ್ಣ ಅವರನ್ನು ನಿಲ್ಲಿಸಬಹುದು, ರಾಧಾಕೃಷ್ಣ ಅವರು ನಿಂತರೆ ಅವರಿಗೆ ಹೆಚ್ಚಿನ ಮತ ನೀಡಿ ಎಂಪಿ ಮಾಡುತ್ತೇವೆ. ಇದನ್ನೂ ಓದಿ: ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್

    ಕಲಬುರಗಿ ಎಂಪಿ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸ್ತಾರೆ ಗೊತ್ತಿಲ್ಲ. ನಾವು ರಾಧಾಕೃಷ್ಣ ಅವರಿಗೆ ಟಿಕೆಟ್ ನೀಡಲು ಒತ್ತಾಯ ಮಾಡುತ್ತೇವೆ. ರಾಧಾಕೃಷ್ಣ ಲೋಕಸಭಾ ಚುನಾವಣೆಗೆ ನಿಂತರೆ ಒಳ್ಳೆಯದು ಅಂತಾ ಯಾದಗಿರಿಯ ಗುರುಮಠಕಲ್ ನಲ್ಲಿ ಬಾಬೂರಾವ್ ಚಿಂಚನಸೂರು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಧೂಳಿಪಟವಾಗಲಿದೆ: ಬಾಬುರಾವ್ ಚಿಂಚನಸೂರ್

    ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಧೂಳಿಪಟವಾಗಲಿದೆ: ಬಾಬುರಾವ್ ಚಿಂಚನಸೂರ್

    ಕಲಬುರಗಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ (BJP) ಪಕ್ಷ ಸಂಪೂರ್ಣ ಧೂಳಿಪಟವಾಗಲಿದೆ ಎಂದು ಕಾಂಗ್ರೆಸ್ (Congress) ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ (Baburao Chinchanasur) ಹೇಳಿದ್ದಾರೆ.

    ಗುರುವಾರ ನಗರದ ಕಾಂಗ್ರೆಸ್ ಕಚೇರಿ (Congress Office) ಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ಅಧ್ಯಕ್ಷರಾದ ಮೇಲೆ ಖರ್ಗೆಯವರ ಕೋಟೆ ಇನ್ನಷ್ಟು ಗಟ್ಟಿಯಾಗಿದೆ. ಚಿತಾಪುರ ಕ್ಷೇತ್ರದಲ್ಲಿ ಈ ಬಾರಿ ಪ್ರಿಯಾಂಕ್ ಖರ್ಗೆ (Priyank Kharge) ಗೆಲುವು ಸಾಧಿಸುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠ ಪಕ್ಷವಾಗಲಿದೆ ಎಂದರು.

    ಕಲ್ಯಾಣ ಕರ್ನಾಟಕದಲ್ಲಿ ಓಡಾಟ ಮಾಡಿ, ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುವ ಮೂಲಕ ನನ್ನ ಶಕ್ತಿಯನ್ನು ತೋರಿಸುತ್ತೇನೆ. ಕೋಲಿ, ಕಬ್ಬಲಿಗ ಸಮಾಜವನ್ನು ಎಸ್‍ಟಿಗೆ ಸೇರಿಸುವುದಾಗಿ ಹೇಳಿದ ಬಿಜೆಪಿ, ಇಲ್ಲಿಯವರೆಗೆ ಕೇವಲ ತುಟಿಗೆ ತುಪ್ಪ ಸವರುತ್ತಾ ಬಂದಿದೆ. ಹೀಗಾಗಿ ಅವರ ನಡೆಯಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಶಿವಮೊಗ್ಗ ನಗರ ಬಿಜೆಪಿ ಟಿಕೆಟ್‍ಗೆ ಫೈಟ್- ಈಶ್ವರಪ್ಪ V/S ಆಯನೂರು ಮಧ್ಯೆ ಜಟಾಪಟಿ

    ಕೋಲಿ, ಕಬ್ಬಲಿಗ ಸಮಾಜ ಎಸ್‍ಟಿಗೆ ಸೇರಿಸಬೇಕಾದರೆ ಅದಕ್ಕೆ ಮಲ್ಲಿಕಾರ್ಜುನ್ ಖರ್ಗೆ ಅವರೊಬ್ಬರೇ ಸರಿಸಾಟಿ. ಈ ಹಿಂದೆ ಎಸ್.ಎಂ.ಕೃಷ್ಣ (S M Krishna) ನೇತೃತ್ವದ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ (D K Shivakumar) ಅವರು ನನಗೆ ಸಪ್ತ ಖಾತೆಗಳನ್ನು ಕೊಡಿಸಿದ್ದರು. ಅವರ ಋಣವನ್ನು ತಿರಿಸಲು ಸಾಧ್ಯವಿಲ್ಲ ಎಂದ ಅವರು, ಖರ್ಗೆ ಮತ್ತು ನನ್ನ ನಡುವೆ ಇದ್ದ ರಾಜಕೀಯ ಭಿನ್ನಾಭಿಪ್ರಾಯ ತಂದೆ-ಮಗನ ನಡುವಿನ ಮುನಿಸುನಂತಿತ್ತು. ಹೀಗಾಗಿಯೇ ನಾನು ಬಿಜೆಪಿಗೆ ಹೋಗಿದ್ದೆ. ಮತ್ತೆ ತವರು ಪಕ್ಷಕ್ಕೆ ಸೇರಿದ್ದು ಖುಷಿ ತಂದಿದೆ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗದೇವ್ ಗುತ್ತೇದಾರ, ಅಲ್ಲಮಪ್ರಭು ಪಾಟೀಲ್, ರಾಜಗೋಪಾಲ್ ರೆಡ್ಡಿ, ನೀಲಕಂಠ ಮೂಲಗೆ, ಚಂದ್ರಿಕಾ ಪರಮೇಶ್ವರ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಸಿಎಂ ಆಗೋದು ಪಕ್ಕಾ : ತೇಜಸ್ವಿ ಸೂರ್ಯ

  • ಕಮಲ ಬಿಟ್ಟು ಕೈ ಹಿಡಿಯಲು ಮುಂದಾದ ಬಾಬೂರಾವ್ ಚಿಂಚನಸೂರ್

    ಕಮಲ ಬಿಟ್ಟು ಕೈ ಹಿಡಿಯಲು ಮುಂದಾದ ಬಾಬೂರಾವ್ ಚಿಂಚನಸೂರ್

    ಕಲಬುರಗಿ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನನಿತ್ಯ ಬೆಳವಣಿಗೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಹಾಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಾಬೂರಾವ್ ಚಿಂಚನಸೂರ್ (BabuRao Chinchanasur) ಅವರು ಬಿಜೆಪಿ (BJP) ಬಿಟ್ಟು ಕೈ ಹಿಡಿಯಲು ಸಜ್ಜಾಗಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.

    ಇಂದು ಬಿಜೆಪಿ ಎಂಎಲ್ ಸಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಮೂಲಕ ಕೋಳಿ ಸಮಾಜದ ಪ್ರಭಾವಿ ಮುಖಂಡ ಮರಳಿ ಮಾತೃ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್

    ಈ ಬಗ್ಗೆ ಚಿಂಚನಸೂರ್ ಅವರು ಕೆಪಿಸಿಸಿ ಅಧ್ಯಕ್ಷರು, ಗುರುಮಠಕಲ್ ಹಾಗೂ ಚಿತ್ತಾಪುರ ಕೋಳಿ ಸಮಾಜದ ಮುಖಂಡರ ಮೂಲಕ ಕೈ ನಾಯಕರ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಕ್ಷ ಸೇರ್ಪಡೆಗೆ ಪ್ರಿಯಾಂಕ್ ಖರ್ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

    ಬಿಜೆಪಿಗೆ ರಾಜೀನಾಮೆ ಬಳಿಕ ಚಿಂಚನಸೂರ್ ಅವರು ಇದೇ ವಾರದಲ್ಲಿ ಕಾಂಗ್ರೆಸ್ (Congress) ಸೇರಲಿದ್ದಾರೆ. ಬಿಜೆಪಿಯಲ್ಲಿ ಕಡೆಗಣನೆ ಹಿನ್ನೆಲೆ ರಾಜೀನಾಮೆ ನೀಡುತ್ತಿದ್ದಾರೆ. ಇತ್ತ ಚಿಂಚನಸೂರ್ ಕೈ ಸೇರ್ಪಡೆಯಾಗುವುದನ್ನು ತಡೆಯಲು ಕಟೀಲ್ ಸೇರಿದಂತೆ ಹಲವು ನಾಯಕರು ಪ್ರಯತ್ನಿಸುತ್ತಿದ್ದಾರೆ. ಆದರೆ ಚಿಂಚನಸೂರ್ ಹಾಗೂ ಅವರ ಗನ್ ಮ್ಯಾನ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರಂತೆ.

    ಕೈ ಸೇರಿದ ಬಳಿಕ ಚಿಂಚನಸೂರ್ ಅವರು ಯಾದಗಿರಿಯ ಗುರುಮಠಕಲ್ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k