Tag: ಬಾಯ್ಲರ್ ಸ್ಫೋಟ

  • Ramanagara| ಬಾಯ್ಲರ್ ಪೈಪ್ ಸ್ಫೋಟ – ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವು

    Ramanagara| ಬಾಯ್ಲರ್ ಪೈಪ್ ಸ್ಫೋಟ – ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವು

    ರಾಮನಗರ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು (Boiler Blast) ಗಾಯಗೊಂಡಿದ್ದ 5 ಕಾರ್ಮಿಕರ ಪೈಕಿ ಓರ್ವ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

    ಉಮೇಶ್ ಕುಮಾರ್ ಸಿಂಗ್ (32) ಮೃತ ಕಾರ್ಮಿಕ. ಕಳೆದ ಶನಿವಾರ ಬಿಡದಿಯ (Bidadi) ಭೈರಮಂಗಲ ಕ್ರಾಸ್ ಬಳಿ ಇರುವ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಪೈಪ್ ಸ್ಫೋಟಗೊಂಡು ಐದು ಮಂದಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದ್ದು, ಈ ಪೈಕಿ ಇಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಸಾಧು ಸಂತರೊಂದಿಗೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು – ಫೆ.4 ರಂದು ಉದ್ಘಾಟನೆ: ಈಶ್ವರಪ್ಪ

    ಒಣ ತ್ಯಾಜ್ಯ ಬರ್ನ್ ಆದ ನಂತರ ಬೂದಿ ಹೊರ ಹೋಗುವ ಬಾಯ್ಲರ್ ಪೈಪ್ ಕಟ್ಟಿಕೊಂಡಿದ್ದ ಪರಿಣಾಮ ಕಾರ್ಮಿಕರು ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಓಪನ್ ಮಾಡಿದ ಕಾರಣ ಅವಘಡ ಸಂಭವಿಸಿದೆ. ಅಲ್ಲದೇ ಇಂದು ಸಂಜೆ ಘಟನಾ ಸ್ಥಳಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಫೆ.5ಕ್ಕೆ ಚುನಾವಣೆ, ಫೆ.8 ರಂದು ಮತ ಎಣಿಕೆ

  • ಬಬಲೇಶ್ವರ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ

    ಬಬಲೇಶ್ವರ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ

    ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ (Nandi Cooperative Sugar Factory) ಮತ್ತೆ ಬಾಯ್ಲರ್ (Boiler) ಸ್ಫೋಟಗೊಂಡಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ಲ್ಲಿರೋ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ನಡೆದಿದೆ.

    ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಸುಕಿನ ಜಾವ ಟೀ‌ ಕುಡಿಯಲು 15 ಕಾರ್ಮಿಕರು ತೆರಳಿದ್ದ ವೇಳೆ ಬಾಯ್ಲರ್ ಬ್ಲಾಸ್ಟ್ ಆಗಿದೆ. ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಪಾರಾಗಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: 24 ಗಂಟೆಯಲ್ಲಿ ಟಿಬಿ ಡ್ಯಾಂಗೆ ಬಂತು 4 ಟಿಎಂಸಿ ನೀರು

    ಮುಂದಿನ ಅವಧಿಗೆ  ಕಬ್ಬು ನುರಿಸಲು ಕಾರ್ಖಾನೆ ಸಿದ್ದತೆ ಮಾಡುವ ವೇಳೆ ಬಾಯ್ಲರ್ ಬ್ಲಾಸ್ಟ್ ಆಗಿದೆ. ಈ‌ ಹಿಂದೆ 2023 ರ ಮಾರ್ಚ್ 4 ರಂದು ಕೂಡ ಬಾಯ್ಲರ್ ಬ್ಲಾಸ್ಟ್ ಆಗಿತ್ತು.

    ಈ ವೇಳೆ ಓರ್ವ ಕಾರ್ಮಿಕ ಮೃತಪಟ್ಟು ಇತರೇ ನಾಲ್ವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದವು. ಕಳಪೆ ಬಾಯ್ಲರ್ ನಿರ್ಮಾಣವೇ ಅವಘಢಕ್ಕೆ ಕಾರಣವೆಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ಇದನ್ನೂ ಓದಿ: ಆಟ ಆಡೋ ಮಕ್ಕಳೆಲ್ಲ ಮದ್ಯ ವ್ಯಸನಿಗಳಾಗಿದ್ದಾರೆ, ಬಾರ್ ಬಂದ್ ಮಾಡ್ಸಿ – ಸಚಿವರ ಬಳಿ ಮಹಿಳೆಯ ಅಳಲು

     

  • ಕೆಮಿಕಲ್ ಕಂಪನಿಯ ಬಾಯ್ಲರ್ ಸ್ಫೋಟ – 3 ಸಾವು, 12 ಮಂದಿಗೆ ಗಾಯ

    ಕೆಮಿಕಲ್ ಕಂಪನಿಯ ಬಾಯ್ಲರ್ ಸ್ಫೋಟ – 3 ಸಾವು, 12 ಮಂದಿಗೆ ಗಾಯ

    ಮುಂಬೈ: ಕೆಮಿಕಲ್ ಕಂಪನಿಯೊಂದರ (Chemical Company) ಬಾಯ್ಲರ್ ಸ್ಫೋಟಗೊಂಡು (Boiler Explosion) ಭಾರೀ ಬೆಂಕಿ (Fire) ಉದ್ಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ ಬುಧವಾರ ನಡೆದಿದೆ.

    ಪಾಲ್ಘರ್ ಜಿಲ್ಲೆಯ ಬೋಯಿಸರ್ ಎಂಐಡಿಸಿ ಪ್ರದೇಶದಲ್ಲಿರುವ ರಾಸಾಯನಿಕ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಇದರಿಂದ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 12 ಜನರಿಗೆ ಗಾಯಗಳಾಗಿವೆ. ಇದನ್ನೂ ಓದಿ: ಖರ್ಗೆ ಅಭಿನಂದನಾ ಬ್ಯಾನರ್ ಹರಿದ ಕಿಡಿಗೇಡಿಗಳು – ಗ್ರಾಮಸ್ಥರಿಂದ ರಸ್ತೆ ತಡೆ

    ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಟ್ಟಡದೊಳಗೆ ಇನ್ನೂ ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯ್ ಕೊಲೆ ಆರೋಪಿ ಸ್ಥಳ ಮಹಜರ್ ವೇಳೆ ಪೊಲೀಸರಿಗೆ ಹಲ್ಲೆ – ಗುಂಡು ಹೊಡೆದ ಇನ್ಸ್‌ಪೆಕ್ಟರ್‌

    Live Tv
    [brid partner=56869869 player=32851 video=960834 autoplay=true]

  • ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

    ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

    ಲಕ್ನೋ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು 9 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿರುವ ಘಟನೆ ಇಂದು ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.

    ದೆಹಲಿಯಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

    ಹಾಪುರ್‍ನಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಘಟನೆಯ ಕುರಿತು ತನಿಖೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ್ ಇನ್‌ಸ್ಪೆಕ್ಟರ್ ಜನರಲ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

    ಪ್ರಧಾನಿ ನರೇಂದ್ರ ಮೋದಿ ದುರಂತದ ಕುರಿತು ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರವು ಗಾಯಾಳುಗಳ ಚಿಕಿತ್ಸೆಗೆ ತ್ವರಿತವಾಗಿ ತೊಡಗಿಸಿಕೊಂಡಿದೆ. ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಡೆದ ಘಟನೆ ಹೃದಯವಿದ್ರಾವಕವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪವನ್ನು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಘಟನೆಯ ಕುರಿತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಹ ಸಂತಾಪ ಸೂಚಿಸಿದ್ದು, ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಹೇಳಿದ್ದಾರೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಾದಷ್ಟೂ ಎಲ್ಲ ಸಹಾಯವನ್ನು ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಅಪಘಾತದ ಬಗ್ಗೆ ತಜ್ಞರಿಂದ ತನಿಖೆ ನಡೆಸುವಂತೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

  • ಬಾಯ್ಲರ್ ಸ್ಫೋಟ – 7 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

    ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿ ಭಾನುವಾರ ಬಾಯ್ಲರ್ ಸ್ಫೋಟ ಸಂಭವಿಸಿದ್ದು, ಕಾರ್ಖಾನೆಯ ಮಾಲೀಕರು ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

    ಬೇಲಾ ಇಂಡಸ್ಟ್ರಿಯಲ್ ಏರಿಯಾ, ಹಂತ-11 ರಲ್ಲಿರುವ ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಏಳು ಜನರು ಸಾವನ್ನಪ್ಪಿ ಮತ್ತು ನಾಲ್ವರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯ ಮಾಲೀಕ ವಿಕಾಸ್ ಮೋದಿ, ಅವರ ಪತ್ನಿ ಶ್ವೇತಾ ಮೋದಿ, ಮ್ಯಾನೇಜರ್ ಉದಯ್ ಶಂಕರ್, ಸೂಪರ್‌ವೈಸರ್, ಆಪರೇಟರ್ ಮತ್ತು ತಂತ್ರಜ್ಞರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಬೂಟಿನ ರುಚಿಗಾಗಿ ಹಪಹಪಿಸುವ ಪ್ರಶಾಂತ್ ಸಂಬರ್ಗಿ ಕನ್ನಡ ವಿರೋಧಿ: ಚಂದ್ರಚೂಡ್

    ನಗರದ ಡಿಎಸ್‌ಪಿ ನೇತೃತ್ವದ ಬಿಹಾರ ಪೊಲೀಸ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ. ಇದಕ್ಕೂ ಮುನ್ನ, ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈ ಗೊಳ್ಳಲಾಗುತ್ತದೆ ಎಂದು ಬಿಹಾರ ಸಚಿವ ರಾಮ್‌ಸುರತ್ ರೈ ಭರವಸೆ ನೀಡಿದರು. ಇದನ್ನೂ ಓದಿ: 30 ಲಕ್ಷ ರೂ. ಮೌಲ್ಯದ ಗಾಂಜಾ ವಶ – 12 ಜನ ಅರೆಸ್ಟ್

    ಭಾನುವಾರದ ಟ್ವೀಟ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು (ಪಿಎಂಎನ್‌ಆರ್‌ಎಫ್) ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ನೀಡುವದಾಗಿ ಹೇಳಿದ್ದು, ಗಾಯಾಳುಗಳಿಗೆ ತಲಾ 50,000 ರೂಪಾಯಿ ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.

  • ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- 6 ಮಂದಿ ಸಾವು

    ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- 6 ಮಂದಿ ಸಾವು

    ಪಾಟ್ನಾ: ನೂಡಲ್ಸ್ ತಯಾರಿಕಾ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಶನಿವಾರ ರಾತ್ರಿ 10 ಗಂಟೆಗೆ ಸುಮಾರಿಗೆ ಬಿಹಾರದ ಮುಜಾಫರ್‍ಪುರ ಜಿಲ್ಲೆಯ ನೂಡಲ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟದ ಸದ್ದು ಸುಮಾರು 5 ಕಿ.ಮೀ ಸುತ್ತಲಿನ ಪ್ರದೇಶಕ್ಕೆ ಕೇಳಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಂಕಲ್ ಅಂದಿದ್ದೇ ತಪ್ಪಾಯ್ತು – ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ

    ರಕ್ಷಣಾ ಕಾರ್ಯಾಚರಣೆಯು ಮುಂದುವರಿದಿದ್ದು, ಕಾರ್ಖಾನೆಯ ಅವಶೇಷಗಳ ಅಡಿಯಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವುದಾಗಿ ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಸಮೀಪದ ಮತ್ತೊಂದು ಘಟಕಕ್ಕೂ ಹಾನಿಯಾಗಿದ್ದು, ಅದರಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರಿಗೂ ಗಾಯಗಳಾಗಿವೆ. ಇದನ್ನೂ ಓದಿ: ತನ್ನ ಬರ್ತ್‌ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್‌ಹೌಸ್‌ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!

    ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಮುಜಾಫರ್‍ಪುರದ ಪೊಲೀಸ್ ಎಸ್‌ಪಿ ಜಯಂತ್ ಕಾಂತ್ ಘಟನೆಯ ಬಗ್ಗೆ ಮಾತನಾಡಿ, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈವರೆಗೂ ಆರು ಮೃತ ದೇಹಗಳನ್ನು ಹೊರ ತೆಗೆದಿದ್ದೇವೆ. ಐವರು ಕಾರ್ಮಿಕರು ಗಾಯಗೊಂಡಿದ್ದು, ಶ್ರೀ ಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

  • ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ

    ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ

    ಬೆಂಗಳೂರು: ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ನಲ್ಲಿರುವ ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.

    ಮೃತರನ್ನು ಸೌರಭ್ ಮತ್ತು ಮನೀಶ್ ಎಂದು ಗುರುತಿಸಲಾಗಿದ್ದು. ಇವರು ಬಿಹಾರ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಸಚಿನ್, ಶಾಂತಿ ಹಾಗೂ ಧನಲಕ್ಷ್ಮಿ ಎಂಬವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಹಾಗೆಯೇ ಡಿಸಿಪಿ ಸಂಜೀವ್ ಪಾಟೀಲ್ ಕೂಡ ಭೇಟಿ ಕೊಟ್ಟಿದ್ದಾರೆ. ಇದನ್ನೂ ಓದಿ: ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

    ಇಂದು ಮಧ್ಯಾಹ್ನ 1.30ರ ಸುಮಾರಿಗೆ ವಿಜಯ್ ಮೆಹ್ತಾ ಒಡೆತನದ ಸ್ನ್ಯಾಕ್ಸ್ ತಿಂಡಿ ಪದಾರ್ಥ ತಯಾರಿ ಮಾಡುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯ ವೇಳೆ ಫ್ಯಾಕ್ಟರಿ ಒಳಗಡೆ ಒಟ್ಟು 7 ಮಂದಿ ಕೆಲಸ ಮಾಡುತ್ತಿದ್ದರು. ಮಾಗಡಿ ರೋಡ್ ನಲ್ಲಿ ಇದ್ದ ಫ್ಯಾಕ್ಟರಿಗೆ ಈ ಹಿಂದೆ ಬೆಂಕಿ ಅವಘಡ ಸಂಭವಿಸಿತ್ತು. ಅಲ್ಲಿಂದ ಇಲ್ಲಿಗೆ ಫ್ಯಾಕ್ಟರಿಯನ್ನ ಶಿಫ್ಟ್ ಮಾಡಲಾಗಿತ್ತು. ಇಲ್ಲಿಗೆ ಶಿಪ್ಟ್ ಆಗಿ ಮೂರು ತಿಂಗಳಾಗಿದೆ. ಚಿಪ್ಸ್, ಚಕ್ಕುಲಿ, ಮೀಕ್ಷರ್ ಸೇರಿದಂತೆ ಬೇಕರಿ ಉತ್ಪನ್ನಗಳನ್ನ ತಯಾರಿಸುತ್ತಿದ್ದು, ಪಕ್ಕದಲ್ಲೇ ಶಾಲೆ ಕೂಡ ಇದೆ.

    ಸದ್ಯ ಪೊಲೀಸರು ಎಫ್‍ಎಸ್‍ಎಲ್‍ಟೀಂ ಗೆ ಸ್ಫೋಟದ ಬಗ್ಗೆ ಮಾಹಿತಿ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ತಂಡ ಫ್ಯಾಕ್ಟರಿಗೆ ಭೇಟಿ ಕೊಟ್ಟಿದ್ದು, ಬಾಯ್ಲರ್ ಸ್ಫೋಟಕ್ಕೆ ಕಾರಣ ಹುಡಕಲಿದೆ. ಇದನ್ನೂ ಓದಿ: ಮಿಸ್ ಫೈರಿಂಗ್ – ಡಿಎಆರ್ ಪೊಲೀಸ್ ಪೇದೆ ಸಾವು

  • ಮೆಡಿಸಿನ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಬ್ಲಾಸ್ಟ್- ವಿಷಾನಿಲ ಸೋರಿಕೆಯಿಂದ ಗ್ರಾಮಸ್ಥರು ಪರದಾಟ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಬ್ಲಾಸ್ಟ್- ವಿಷಾನಿಲ ಸೋರಿಕೆಯಿಂದ ಗ್ರಾಮಸ್ಥರು ಪರದಾಟ

    ತುಮಕೂರು: ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

    ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ ಮೇಲೆ ಬಿದ್ದಿದೆ. ಇದರಿಂದ ಗ್ರಾಮದ ನಾಲ್ವರು ಗಾಯಗೊಂಡಿದ್ದಾರೆ.

    ಬಾಯ್ಲರ್ ನಿಂದ ವಿಷಾನಿಲ ಸೋರಿಕೆಯಾಗಿ ಸುತ್ತಮುತ್ತಲ ಜನರ ಉಸಿರಾಟಕ್ಕೆ ತೊಂದರೆಯಾಗಿದೆ. ಹಾಗೆಯೇ ಘಟನೆಯಿಂದ ಸುಮಾರು ಮೂರು ಕಿಮೀ ದೂರದಷ್ಟು ಸ್ಫೋಟದ ತೀವ್ರತೆಗೆ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಆಗಮಿಸಿದ್ದಾರೆ.

    ಅವಘಡ ಸಂಭವಿಸುವ ವೇಳೆ ಫ್ಯಾಕ್ಟರಿಯಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಬೆಳಗ್ಗಿನ ಸಮಯವಾಗಿದ್ದರಿಂದ ತಿಂಡಿಗೆ ಸಿಬ್ಬಂದಿ ತೆರಳಿದ್ದರು. ಹೀಗಾಗಿ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಅಲ್ಲದೆ ಈ ಹಿಂದೆ ಕೂಡ ಈ ರೀತಿ ಬಾಯ್ಲರ್ ಸ್ಫೋಟಗೊಂಡಿತ್ತು. ಆಗ ಕೂಡ ವಿಷಾನಿಲ ಸೋರಿಕೆಯಾಗಿ ಗ್ರಾಮಸ್ಥರು ಉಸಿರಾಡಲು ಕಷ್ಟಪಟ್ಟಿದ್ದರು. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ಈ ಭಾಗದ ಸುತ್ತಮುತ್ತ ವಾಸಿಸುತ್ತಿರುವ ಜನರು ತೊಂದರೆ ಅನುಭವಿಸುವಂತಗಿದೆ. ಅನಾರೋಗ್ಯದಿಂದ ಬಳಲುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಸದ್ಯ ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಗೆ ಸ್ಫೋಟ ಸಂಭವಿಸಿತು ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

  • ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- ನಾಲ್ವರ ಸಾವು

    ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- ನಾಲ್ವರ ಸಾವು

    ಪಾಟ್ನಾ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ಗೋಪಾಲ್‍ಗಂಜ್ ಜಿಲ್ಲೆಯಲ್ಲಿ ನಡೆದಿದೆ.

    ಇಲ್ಲಿನ ಸಾಸ ಮೂಸಾ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 9 ಜನರಿಗೆ ಗಾಯವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

    ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಬಾಯ್ಲರ್ ಸಮೀಪ ಕೆಲಸ ಮಾಡುತ್ತಿದ್ದ ಮೂವರ ದೇಹಗಳು ಛಿದ್ರಛಿದ್ರವಾಗಿವೆ. ಘಟನೆ ನಡೆದ ವೇಳೆ ಫ್ಯಾಕ್ಟರಿಯಲ್ಲಿ ಸುಮಾರು 100 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರಬಹುದೆಂದು ಶಂಕಿಸಲಾಗಿದೆ. ಘಟನೆಯ ನಂತರ ನಾಪತ್ತೆಯಾಗಿದ್ದ ಸಕ್ಕರೆ ಕಾರ್ಖಾನೆಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

    ಗಾಯಾಳುಗಳನ್ನ ಗೋಪಾಲ್‍ಗಂಜ್‍ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭಿರವಾಗಿದೆ ಎಂದು ವರದಿಯಾಗಿದೆ. ಮೂವರು ವ್ಯಕ್ತಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಪಿಎಮ್‍ಸಿಹೆಚ್ ಆಸ್ಪತ್ರೆಗೆ ಕಳಿಸಿದ್ದಾರೆ. ಘಟನೆಯ ನಂತರ ಪೊಲೀಸರು ಹಾಗೂ ಗೋಪಾಲ್‍ಜಂಜ್‍ನ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.

    ಅತೀಯಾದ ತಾಪದಿಂದಾಗಿ ಬಾಯ್ಲರ್ ಸ್ಫೋಟಗೊಂಡಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೂ ನಿರ್ದಿಷ್ಟ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಬಾಯ್ಲರ್ ಸ್ಫೋಟದಿಂದ ಕೆಮಿಕಲ್ ಕಾರ್ಖಾನೆಗೆ ಬೆಂಕಿ – ಕಾರ್ಮಿಕ ಸಾವು

    ಬಾಯ್ಲರ್ ಸ್ಫೋಟದಿಂದ ಕೆಮಿಕಲ್ ಕಾರ್ಖಾನೆಗೆ ಬೆಂಕಿ – ಕಾರ್ಮಿಕ ಸಾವು

    ಬೀದರ್: ಬಾಯ್ಲರ್ ಸ್ಫೋಟದಿಂದ ಕೆಮಿಕಲ್ ಕಾರ್ಖಾನೆಗೆ ಬೆಂಕಿ ಬಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಆರ್.ಟಿ.ಓ ಚೆಕ್ ಪೋಸ್ಟ್ ಬಳಿ ನಡೆದಿದೆ.

    ಹೈದ್ರಾಬಾದ್ ಮೂಲದ 38 ವರ್ಷದ ವೆಂಕಟೇಶ್ ಸಾವನ್ನಪ್ಪಿರೋ ಕಾರ್ಮಿಕ ಅಂತ ಗೊತ್ತಾಗಿದೆ. ಆರ್.ಕೆ ಆರ್ಗಾನಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಮೂರು ಅಗ್ನಿಶಾಮಕ ವಾಹನಗಳು ಬಂದು ಬೆಂಕಿ ನಂದಿಸಿವೆ.

    ಘಟನೆ ಬಗ್ಗೆ ಮಾಹಿತಿ ತಿಳಿದು ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.