Tag: ಬಾಯ್ಸ್‌ ಹಾಸ್ಟೆಲ್‌

  • ಕೋಲ್ಕತ್ತಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್; ನನ್ನ ಮಗಳ ಮೇಲೆ ಅತ್ಯಾಚಾರ ಆಗಿಲ್ಲ – ಸಂತ್ರಸ್ತೆ ಅಪ್ಪನ ಅಚ್ಚರಿ ಹೇಳಿಕೆ!

    ಕೋಲ್ಕತ್ತಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್; ನನ್ನ ಮಗಳ ಮೇಲೆ ಅತ್ಯಾಚಾರ ಆಗಿಲ್ಲ – ಸಂತ್ರಸ್ತೆ ಅಪ್ಪನ ಅಚ್ಚರಿ ಹೇಳಿಕೆ!

    ಕೋಲ್ಕತ್ತಾ: ಇಲ್ಲಿನ ಇನ್ಸ್ಟಿಟ್ಯೂಷನ್ ಆಫ್ ಮ್ಯಾನೇಜ್‌ಮೆಂಟ್ (IIM) ಕಾಲೇಜಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಸಂತ್ರಸ್ತೆಯ ತಂದೆ, ನನ್ನ ಮಗಳ ಮೇಲೆ ಅತ್ಯಾಚಾರ ನಡೆದಿಲ್ಲ. ಆಕೆ ಆಟೋ ರಿಕ್ಷಾದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ತೆ ತಂದೆ, ನನ್ನ ಮಗಳ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ. ಶುಕ್ರವಾರ ರಾತ್ರಿ 9:34ಕ್ಕೆ ನನಗೆ ಕರೆ ಮಾಡಿ ತಮ್ಮ ಮಗಳು ಆಟೋದಿಂದ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಆಕೆಯನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಯ ನರವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿತ್ತು. ಆಕೆಯನ್ನು ಪೊಲೀಸರು ರಕ್ಷಿಸಿ, ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ IIM ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

    ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಮಗಳೇ ತಿಳಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯಾರನ್ನೋ ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ಪೊಲೀಸರು ಏನಾದರೂ ಹೇಳಬೇಕೆಂದು ಹೇಳಿದ್ದರು. ಆದರೆ ಆಕೆ ಏನು ಹೇಳಿಲ್ಲ ಎಂದು ಮಗಳು ನನ್ನ ಬಳಿ ತಿಳಿಸಿದ್ದಾಳೆ. ಇದನ್ನೂ ಓದಿ: ಅವನೇ ಬೇಕು ಎಂದ ಯುವತಿ – ಕೊಲೆ ಅಪರಾಧಿ ಮದ್ವೆಗೆ 15 ದಿನ ಪೆರೋಲ್‌ ನೀಡಿದ ಹೈಕೋರ್ಟ್!

    ನಾನು ನನ್ನ ಮಗಳೊಂದಿಗೆ ಮಾತನಾಡಿದ್ದೇನೆ. ಯಾರೂ ಹಿಂಸಿಸಿಲ್ಲ ಮತ್ತು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿಲ್ಲ ಎಂದು ಅವಳು ಹೇಳಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ. ಬಂಧಿತ ವ್ಯಕ್ತಿಯೊಂದಿಗೆ ಅವಳಿಗೆ ಯಾವುದೇ ಸಂಬಂಧವಿಲ್ಲ. ನಾನು ಅವಳೊಂದಿಗೆ ಹೆಚ್ಚು ಸಮಯ ಮಾತನಾಡಲು ಸಾಧ್ಯವಾಗಲಿಲ್ಲ. ಅವಳು ವಿಶ್ರಾಂತಿ ಪಡೆಯುತ್ತಿದ್ದಳು, ನಂತರ ನಾನು ಅವಳೊಂದಿಗೆ ಮಾತನಾಡುತ್ತೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

  • ಕೋಲ್ಕತ್ತಾ IIM ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

    ಕೋಲ್ಕತ್ತಾ IIM ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

    – ಮತ್ತು ಬರಿಸುವ ಪಾನೀಯ ಕೊಟ್ಟು ಕೃತ್ಯ

    ಕೋಲ್ಕತ್ತಾ: ಮತ್ತು ಬರಿಸುವ ಪಾನೀಯ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಇಂಡಿಯನ್ ಇನ್ಸ್ಟಿಟ್ಯೂಷನ್ ಆಫ್ ಮ್ಯಾನೇಜ್‌ಮೆಂಟ್‌ (IIM) ಕಾಲೇಜಿನ ಹುಡುಗರ ಹಾಸ್ಟೆಲ್‌ನಲ್ಲಿ (Boys Hostel) ನಡೆದಿದೆ.

    ಹರಿದೇವ್‌ಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಐಐಎಂ-ಕೋಲ್ಕತ್ತಾದ ಬಾಲಕರ ಹಾಸ್ಟೆಲ್ ಒಳಗೆ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಗುನ್ನಾ – ವಾರ್ಷಿಕ 40 ಲಕ್ಷ ವಹಿವಾಟು ಮೀರಿದ್ರೆ GST ಫಿಕ್ಸ್

    ತನ್ನನ್ನು ಕೌನ್ಸೆಲಿಂಗ್ ಸೆಷನ್‌ಗಾಗಿ ಹಾಸ್ಟೆಲ್‌ಗೆ ಕರೆಸಲಾಗಿತ್ತು. ನಂತರ ಹಾಸ್ಟೆಲ್‌ನಲ್ಲಿ ಡ್ರಗ್ಸ್ ಬೆರೆಸಿದ ಪಾನೀಯ ಸೇವಿಸಿದ ನಂತರ ಪ್ರಜ್ಞಾಹೀನಳಾದೆ. ಪ್ರಜ್ಞೆ ಮರಳಿದ ನಂತರ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಅರಿವಾಗಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ಇದನ್ನೂ ಓದಿ: 5 ಹುಲಿಗಳ ಸಾವು ಪ್ರಕರಣ – ಕಾರ್ಬೋಫುರಾನ್ ಕೀಟನಾಶಕ ಬಳಕೆ: ಸಿಸಿಎಫ್ ಹೀರಾಲಾಲ್

    ಅತ್ಯಾಚಾರವೆಸಗಿದ ಆರೋಪಿ ವಿದ್ಯಾರ್ಥಿಯನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕೋಲ್ಕತ್ತಾ ಐಐಎಂ ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

  • ಗೆಳತಿಯನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟು ಹಾಸ್ಟೆಲ್‌ಗೆ ತಂದು ಸಿಕ್ಕಿಬಿದ್ದ ಯುವಕ!

    ಗೆಳತಿಯನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟು ಹಾಸ್ಟೆಲ್‌ಗೆ ತಂದು ಸಿಕ್ಕಿಬಿದ್ದ ಯುವಕ!

    ಚಂಢೀಗರ್: ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಸೂಟ್‌ಕೇಸ್‌ನೊಳಗೆ ಬಚ್ಚಿಟ್ಟು ಬಾಲಕರ ಹಾಸ್ಟೆಲ್‌ಗೆ ಕರೆದೊಯ್ದ ವೇಳೆ ಸಿಕ್ಕಿ ಬಿದ್ದಿರುವ ಘಟನೆ ಹರಿಯಾಣದ (Haryana) ಸೋನಿಪತ್‌ನಲ್ಲಿರುವ ಒಪಿ ಜಿಂದಾಲ್ ವಿಶ್ವವಿದ್ಯಾಲಯದಲ್ಲಿ (OP Jindal Global University) ನಡೆದಿದೆ.

    ಭದ್ರತಾ ಸಿಬ್ಬಂದಿ ನಿಂತಿದ್ದ ವೇಳೆ ಅಲ್ಲೇ ಎದುರುಗಡೆ ಇದ್ದ ಸೂಟ್‌ಕೇಸ್ (Suitcase) ಅಲುಗಾಡಿ ತೆರೆದುಕೊಂಡಿದೆ. ಗಾಬರಿಗೊಂಡ ಭದ್ರತಾ ಸಿಬ್ಬಂದಿ ಸೂಟ್‌ಕೇಸ್ ನೋಡಿದಾಗ ಅದರ ಒಳಗೆ ಯುವತಿ ಅವಿತುಕೊಂಡಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ

    ಸೂಟ್‌ಕೇಸ್ ಒಳಗಿದ್ದ ಹುಡುಗಿಯ ಗುರುತು ಇನ್ನೂ ತಿಳಿದಿಲ್ಲ. ಆಕೆಯೂ ಒಪಿ ಜಿಂದಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಥವಾ ಬೇರೆ ಸಂಸ್ಥೆಯ ವಿದ್ಯಾರ್ಥಿನಿಯೇ ಎಂಬುದು ಖಚಿತವಿಲ್ಲ. ಇದನ್ನೂ ಓದಿ: ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ – ಜಮ್ಮು-ಕಾಶ್ಮೀರದಲ್ಲೂ ಭೂಮಿ ಕಂಪಿಸಿದ ಅನುಭವ

    ಈ ದೃಶ್ಯವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೀಡಿಯೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 4 ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದರು. ನೆಟ್ಟಿಗರು ಕಾಮೆಂಟ್‌ಗಳ ಸುರಿಮಳೆಯನ್ನು ಹರಿಸುವ ಮೂಲಕ ತಮ್ಮ ಕಾಲೇಜು ದಿನಗಳ ಅನುಭವವನ್ನು ಬರೆದುಕೊಂಡಿದ್ದಾರೆ. ಇದನ್ನೂ ಓದಿ: UPI Down | ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ – ಬ್ಯಾಂಕಿಂಗ್‌ ಸೇವೆಗಳ ಮೇಲೂ ಪರಿಣಾಮ

    ಈ ವಿಚಾರವಾಗಿ ವಿಶ್ವವಿದ್ಯಾಲಯದ ಪಿಆರ್‌ಓ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳು ತಮಾಷೆಗಾಗಿ ಈ ರೀತಿ ಮಾಡಿದ್ದಾರೆ. ನಮ್ಮಲ್ಲಿ ಭದ್ರತಾ ಸಿಬ್ಬಂದಿ ಬಿಗಿಯಾಗಿರುವುದರಿಂದ ವಿದ್ಯಾರ್ಥಿಯನ್ನು ಹಿಡಿಯಲಾಯಿತು. ಅದು ದೊಡ್ಡ ವಿಷಯವಲ್ಲ. ನಮ್ಮ ಭದ್ರತೆ ಯಾವಾಗಲೂ ಕಟ್ಟುನಿಟ್ಟಾಗಿರುತ್ತದೆ. ಈ ಘಟನೆಯ ಬಗ್ಗೆ ಯಾರೂ ಯಾವುದೇ ರೀತಿಯ ದೂರು ದಾಖಲಿಸಿಲ್ಲ ಎಂದು ಹೇಳಿದರು.

  • ‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ತೆಲುಗಿಗೆ ಡಬ್-‌ ಆಗಸ್ಟ್‌ 26ಕ್ಕೆ ಸಿನಿಮಾ ರಿಲೀಸ್

    ‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ತೆಲುಗಿಗೆ ಡಬ್-‌ ಆಗಸ್ಟ್‌ 26ಕ್ಕೆ ಸಿನಿಮಾ ರಿಲೀಸ್

    ನ್ನಡ ಚಿತ್ರರಂಗಕ್ಕೆ ಹೊಸ ಹುರುಪು ನೀಡಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagidaare) ಸಿನಿಮಾವೀಗ ತೆಲುಗಿನತ್ತ (Tollywood) ಹೆಜ್ಜೆ ಇಟ್ಟಿದೆ. ಕನ್ನಡ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆ ಪಡೆದಿಕೊಂಡಿರುವ ಈ ಚಿತ್ರವನ್ನು ‌’ಬಾಯ್ಸ್ ಹಾಸ್ಟೆಲ್’ ಹೆಸರಿನಡಿ ತೆಲುಗಿಗೆ ಡಬ್ ಮಾಡಲಾಗ್ತಿದೆ. ಇದೇ ತಿಂಗಳ‌ 26ಕ್ಕೆ ಸಿನಿಮಾ ತೆಲುಗು ಪ್ರೇಕ್ಷಕರ ಎದುರು ಸಿನಿಮಾ ಹಾಜರಾಗಲಿದೆ. ಇದನ್ನೂ  ಓದಿ:ಎವರ್‌ಗ್ರೀನ್ ನಟಿ ಶ್ರೀದೇವಿ 60ನೇ ಜನ್ಮದಿನಕ್ಕೆ ಗೂಗಲ್ ಡೂಡಲ್ ಗೌರವ

    ನಿತಿನ್ ಕೃಷ್ಣಮೂರ್ತಿ (Nitin Krishnamurthy) ಚೊಚ್ಚಲ ಪ್ರಯತ್ನದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ರಾಜ್ಯ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯ ಹಾಗೂ ವಿದೇಶದಲ್ಲಿಯೂ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿತ್ತು. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕಾಮಿಡಿ ಕ್ವಾಟ್ಲೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಟ್ಟಿತ್ತು. ಇದೀಗ ಆಂಧ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಬಾಯ್ಸ್ ಹಾಸ್ಟೆಲ್ ಟೈಲಟ್ ನಡಿ ತೆಲುಗು ಭಾಷೆಗೆ ಡಬ್ ಆಗ್ತಿರೋದು ಖುಷಿ ವಿಚಾರ.

    ಚಾಯ್ ಬಿಸ್ಕೆಟ್ ಫಿಲ್ಮ್ಸ್ ಮತ್ತು ಅನ್ನಪೂರ್ಣ ಸ್ಟುಡಿಯೋಸ್ ಜಂಟಿಯಾಗಿ ತೆಲುಗಿನಲ್ಲಿ ’ಬಾಯ್ಸ್ ಹಾಸ್ಟೆಲ್’ ಶೀರ್ಷಿಕೆಯಲ್ಲಿ ಈ ಚಿತ್ರವನ್ನು ಆಗಸ್ಟ್ 26ರಂದು ಬಿಡುಗಡೆ ಮಾಡುತ್ತಿವೆ. ಕನ್ನಡದಲ್ಲಿ ಈ ಚಿತ್ರವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಪರವಃ ಪಿಕ್ಚರ್ಸ್ ಬ್ಯಾನರ್‌ ಅಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ(Rishab Shetty), ರಮ್ಯಾ(Ramya), ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ಇನ್ನಿತರರು ಸಾಥ್ ಕೊಟ್ಟಿದ್ದಾರೆ. ಗುಲ್ಮೊಹರ್ ಫಿಲ್ಮ್ಸ್ ಮತ್ತು ವರುಣ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

    ಸ್ಯಾಂಡಲ್‌ವುಡ್‌ನಲ್ಲಿ ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಟಾಲಿವುಡ್‌ನಲ್ಲಿ ಈ ಬಾಯ್ಸ್‌ ಹಾಸ್ಟೆಲ್‌ ಕಥೆ ಹೇಳಲು ರೆಡಿಯಾಗಿದ್ದಾರೆ. ಆಗಸ್ಟ್‌ 26ಕ್ಕೆ ರಿಲೀಸ್‌ ಆಗ್ತಿರೋ ಈ ಚಿತ್ರ ತೆಲುಗಿನಲ್ಲೂ ಸಕ್ಸಸ್‌ ಕಾಣುತ್ತಾ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]