Tag: ಬಾರಾಮುಲ್ಲಾ

  • ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ಶ್ರೀನಗರ: ಭದ್ರತಾ ಪಡೆಯು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಮುಂದಾಗುತ್ತಿದ್ದ ಇಬ್ಬರು ಭಯೋತ್ಪಾದಕರನ್ನು (Terrorists) ಹತ್ಯೆ ಮಾಡಿದೆ.

    ಈ ಇಬ್ಬರು ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಪ್ರದೇಶದ ಮೂಲಕ ಒಳನುಸುಳಲು ಪ್ರಯತ್ನಿಸಿದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಐಷಾರಾಮಿ ಕಾರುಗಳಲ್ಲಿ ಪ್ರಯಾಣ, ಪಾಕ್‌ ಸೇನೆಯ ನಂಬಿಕಸ್ಥನೇ ದಾಳಿಯ ಮಾಸ್ಟರ್‌ ಮೈಂಡ್‌!

    ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು ತಡೆದಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಸತತ 1 ಗಂಟೆಯ ಕಾರ್ಯಾಚರಣೆ ನಂತರ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಯಿತು. ಈ ವೇಳೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: Pahalgam Terror Attack | ಹಿಂದೂಗಳೇ ಭಯೋತ್ಪಾದಕರ ಟಾರ್ಗೆಟ್!

    ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು (Pahalgam Terror Attack) ಪ್ರವಾಸಿಗರ ಮೇಲೆ ದಾಳಿ ನಡೆಸಿದ ಒಂದು ಘಟನೆಯ ನಂತರ ಈ ಕಾರ್ಯಾಚರಣೆ ನಡೆದಿದೆ. ಪಹಲ್ಗಾಮ್ ಭಯೋತ್ಪಾದಕರ ದಾಳಿಯಲಿ 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ನೌಕಾಪಡೆಯ ಒಬ್ಬ ಅಧಿಕಾರಿ ಹಾಗೂ ಗುಪ್ತಚರ ಬ್ಯೂರೋದ ಅಧಿಕಾರಿಯೊಬ್ಬರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Pahalgam Terror Attack | ಉಗ್ರರ ದಾಳಿಗೆ ಬೆಂಗಳೂರಿನ ಮಧುಸೂದನ್‌ ಬಲಿ

    ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಪ್ರಧಾನಿ ಮೋದಿಯವರು (Narendra Modi) ಖಂಡಿಸಿದ್ದಾರೆ. ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡಲಾಗುವುದಿಲ್ಲ. ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಮಂಗಳವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು

    ಸೌದಿ ಅರೇಬಿಯಾದ ತಮ್ಮ ಪ್ರವಾಸವನ್ನು ಅರ್ಧಕ್ಕೆ ಕೈಬಿಟ್ಟು ಬುಧವಾರ ಬೆಳಗ್ಗೆ ಭಾರತಕ್ಕೆ ಹಿಂತಿರುಗಿದರು. ಬಳಿಕ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಿದರು.

  • ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

    ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಬಾರಾಮುಲ್ಲಾದಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿಯನ್ನು ಮಸೀದಿಯ (Mosque) ಒಳಗಡೆಯೇ ಉಗ್ರರು (Terrorist) ಹತ್ಯೆ ಮಾಡಿದ್ದಾರೆ.

    ಮೊಹಮ್ಮದ್‌ ಶಾಫಿ ಉಗ್ರರ ಗುಂಡೇಟಿಗೆ ಬಲಿಯಾದ ನಿವೃತ್ತ ಪೊಲೀಸ್‌ ಅಧಿಕಾರಿ. ಮಸೀದಿಯ ಒಳಗಡೆ ಪ್ರಾರ್ಥನೆ ಮಾಡುತ್ತಿರುವಾಗಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

    ಪೊಲೀಸರು ಈಗ ಆ ಪ್ರದೇಶವನ್ನು ಸುತ್ತುವರಿದಿದ್ದು ಉಗ್ರರ ಪತ್ತೆಗೆ ಮುಂದಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಪೊಲೀಸರು ಮತ್ತು ಸೈನಿಕರ ಮೇಲೆ ಕಣಿವೆ ರಾಜ್ಯದಲ್ಲಿ ದಾಳಿಗಳು ಹೆಚ್ಚಾಗುತ್ತಿದೆ.   ಇದನ್ನೂ ಓದಿ: ಶಾಸಕ ಬಿ.ಆರ್ ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನ ಹತ್ಯೆ

    ಗುರುವಾರ ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಸಾಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು (Five Soldiers ) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದರು.

     

  • ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭಯೋತ್ಪಾದಕರು (Terrorist) ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ.

    ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆಗಳು (Security Force) ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿವೆ. ಭಯೋತ್ಪಾದಕರನ್ನು ಶರಣಾಗುವಂತೆ ಭದ್ರತಾ ಪಡೆಗಳು ಕೇಳಿದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಐವರು ಯೋಧರು ಸಾವು

    ಬಾರಾಮುಲ್ಲಾ ಎನ್‌ಕೌಂಟರ್‌ನ ಬಗ್ಗೆ ಮಾಹಿತಿ ನೀಡಿದ ಎಸ್‌ಎಸ್‌ಪಿ ಅಮೋದ್ ಅಶೋಕ್ ನಾಗ್‌ಪುರೆ, ಹತ್ಯೆಯಾದ ಭಯೋತ್ಪಾದಕ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯವನಾಗಿದ್ದು, ಲಷ್ಕರ್-ಎ-ತೈಬಾದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಿದ್ದಾರೆ. ಅಲ್ಲದೇ ಮುಂಬರುವ ಜಿ 20 ಸಭೆಯ ದೃಷ್ಟಿಯಿಂದ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಹತ್ಯೆಗೀಡಾದ ಭಯೋತ್ಪಾದಕನಿಗೆ ಜಿ 20 ಸಭೆಯ ಮೊದಲು ದೊಡ್ಡ ಭಯೋತ್ಪಾದಕ ದಾಳಿಯನ್ನು ನಡೆಸುವಂತೆ ಹೇಳಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು – ಬಹಿರಂಗ ಸಭೆಯಲ್ಲೇ ಪಾಕ್‌ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್‌

    ಮೇ 5 ರಂದು ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಜೌರಿ (Rajouri) ಜಿಲ್ಲೆಯ ಅರಣ್ಯದ ಕಂಡಿ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು ಮತ್ತು ಮೇಜರ್ ಗಾಯಗೊಂಡಿದ್ದರು. ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (PAFF) ದಾಳಿಯ ಹೊಣೆ ಹೊತ್ತುಕೊಂಡಿದೆ. ಪಿಎಎಫ್‌ಎಫ್ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸಂಯೋಜಿತವಾಗಿದೆ. ಇತ್ತೀಚಿಗಷ್ಟೆ ಸೇನೆಯ ವಾಹನದ ಮೇಲೆ ದಾಳಿ ನಡೆಸಿ ಐವರು ಯೋಧರ ಸಾವಿಗೆ ಕಾರಣರಾಗಿದ್ದ ಭಯೋತ್ಪಾದಕರನ್ನು ಹೊಡೆದುರುಳಿಸಲು ಸೇನೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಸ್ಫೋಟಕಗಳನ್ನು ಸಿಡಿಸಿದ್ದಾರೆ. ಪರಿಣಾಮ ಐವರು ಯೋಧರು ಮೃತಪಟ್ಟಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್

  • ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಹತ್ಯೆ – ಜಮ್ಮುವಿನಲ್ಲಿ ಹೈ ಅಲರ್ಟ್

    ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಹತ್ಯೆ – ಜಮ್ಮುವಿನಲ್ಲಿ ಹೈ ಅಲರ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು (Terrorists) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಳೆದ 24 ಗಂಟೆಗಳಲ್ಲಿ ಇದು 2ನೇ ಎನ್‌ಕೌಂಟರ್ ಆಗಿದೆ. ಮುಂದಿನ ಕೆಲವು ದಿನಗಳಲ್ಲಿ ಭಯೋತ್ಪಾದಕರು ದೊಡ್ಡ ಮಟ್ಟದ ದಾಳಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹೈ ಅಲರ್ಟ್ ಆಗಿದ್ದಾರೆ.

    ವನಿಗಮ್ ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಬಳಿಕ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ

    ಎನ್‌ಕೌಂಟರ್ ನಡೆಸಿದ ಪ್ರದೇಶದಿಂದ ಒಂದು ಎಕೆ ರೈಫಲ್ ಮತ್ತು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

    ಬುಧವಾರ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ನಡೆಸಿದ್ದಾರೆ. ಭಯೋತ್ಪಾದಕರು ಈ ಪ್ರದೇಶದಲ್ಲಿ ಕೆಲವು ಪ್ರಮುಖ ದಾಳಿಗೆ ತಯಾರಿ ನಡೆಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಹಿನ್ನೆಲೆ ಜಮ್ಮುವಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಯತ್ನಾಳ್‌, ಪ್ರಿಯಾಂಕ್‌ ಖರ್ಗೆಗೆ ಶೋಕಾಸ್‌ ನೋಟಿಸ್‌ ಜಾರಿ

  • ಜಮ್ಮು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡುತ್ತೇವೆ: ಅಮಿತ್ ಶಾ

    ಜಮ್ಮು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡುತ್ತೇವೆ: ಅಮಿತ್ ಶಾ

    ನವದೆಹಲಿ: 1990ರ ದಶಕದಿಂದೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದನೆಗೆ (Terrorism) 42,000 ಜನರು ಬಲಿಯಾಗಿದ್ದಾರೆ. ನಾವೇಕೆ ಪಾಕಿಸ್ತಾನದೊಂದಿಗೆ (Pakistan) ಮಾತುಕತೆ ನಡೆಸಬೇಕು? ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಪ್ರತಿಜ್ಞೆ ಮಾಡಿದರು.

    ಬುಧವಾರ ಬಾರಾಮುಲ್ಲಾದಲ್ಲಿ (Baramullah) ನಡೆದ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, 70 ವರ್ಷಗಳ ಕಾಲ ಆಡಳಿತ ನಡೆಸಿದವರು ಇಂದು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಒತ್ತಾಯಿಸುತ್ತಿದ್ದಾರೆ. ನಾವೇಕೆ ಪಾಕಿಸ್ತಾನದೊಂದಿಗೆ ಮಾತನಾಡಬೇಕು? ನಾವು ಮಾತನಾಡುವುದಿಲ್ಲ. ಬದಲಿಗೆ ಬಾರಾಮುಲ್ಲಾದ ಜನರೊಂದಿಗೆ, ಕಾಶ್ಮೀರದ ಜನರೊಂದಿಗೆ ಮಾತನಾಡುತ್ತೇವೆ. ಆ ಪ್ರದೇಶವನ್ನು ದೇಶದ ಅತ್ಯಂತ ಶಾಂತಿಯುತ ಪ್ರದೇಶವನ್ನಾಗಿ ಮಾಡಲು ನಾವು ಬಯಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಚಾಲನೆ – ರಾಜಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ ಅಭಿಮನ್ಯು

    ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ 2014ರಿಂದ ಇಲ್ಲಿಯವರೆಗೆ 9 ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿದ್ದೇವೆ. 1 ಲಕ್ಷ ಮನೆಗಳನ್ನು ಕಟ್ಟಿಸಿದ್ದೇವೆ. ಪಾಕ್ ಆಕ್ರಮಿತ ಕಾಶ್ಮಿರ ಸೇರಿದಂತೆ ಕಾಶ್ಮೀರದ ಎಲ್ಲಾ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಡಚಾದ್ರಿ ಸೇರಿದಂತೆ ದೇಶದ 18 ಕಡೆ ರೋಪ್‌ವೇ ನಿರ್ಮಿಸಲು ಕೇಂದ್ರ ಯೋಜನೆ

    Live Tv
    [brid partner=56869869 player=32851 video=960834 autoplay=true]

  • ಬಾರಾಮುಲ್ಲಾದಲ್ಲಿ ಎನ್‌ಕೌಂಟರ್ – ಟಾಪ್ ಲಷ್ಕರ್ ಕಮಾಂಡರ್ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುರುವಾರ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ)ದ ಕಮಾಂಡರ್ ಹತ್ಯೆಯಾಗಿದ್ದಾನೆ.

    ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿ, ಎಲ್‌ಇಟಿ ಭಯೋತ್ಪಾದಕ ಕಮಾಂಡರ್ ಯೂಸುಫ್ ಕಾಂಟ್ರೋನನ್ನು ಹತ್ಯೆ ಮಾಡಿದ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ(ಐಜಿಪಿ) ವಿಜಯ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    ಇತ್ತೀಚೆಗೆ ಭಯೋತ್ಪಾದಕ ಯೂಸುಫ್ ಬಗ್ದಾಮ್ ಜಿಲ್ಲೆಯಲ್ಲಿ ಎಸ್‌ಪಿಒ ಹಾಗೂ ಅವರ ಸಹೋದರ ಸೇರಿದಂತೆ, ನಾಗರಿಕರು ಹಾಗೂ ಭದ್ರತಾ ಪಡೆಗಳ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದ್ದಾರೆ. ಎನ್‌ಕೌಂಟರ್ ಬಳಿಕ ಭಯೋತ್ಪಾದಕರ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ವಸ್ತುಗಳನ್ನು ವಶಪಡಿಸಿಕೊಳ್ಳಾಗಿದೆ ಎಂದು ವಿಜಯ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ದೆಹಲಿ ಕಾರ್ಯಾಚರಣೆ ಅಪರಾಧ ಕೃತ್ಯ: ಶಶಿ ತರೂರ್‌

    ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆ ಹಚ್ಚಲು ಮೌಲ್ವಾ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಭಯೋತ್ಪಾದಕರನ್ನು ಶರಣಾಗುವಂತೆ ಕೇಳಿದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಲು ಯತ್ನಿಸಿದ್ದಾರೆ. ಎನ್‌ಕೌಂಟರ್ ವೇಳೆ ಮೂವರು ಸೈನಿಕರು ಹಾಗೂ ಒಬ್ಬ ನಾಗರಿಕನಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.