Tag: ಬಾಲಕಿ ಅತ್ಯಾಚಾರ

  • 15ರ ಬಾಲಕಿ ಮೇಲೆ ಅತ್ಯಾಚಾರ, ಗರ್ಭಿಣಿಯಾಗಿದ್ದವಳ ಜೀವಂತ ಹೂತುಹಾಕಲು ಯತ್ನ – ಇಬ್ಬರು ಸಹೋದರರ ಬಂಧನ

    15ರ ಬಾಲಕಿ ಮೇಲೆ ಅತ್ಯಾಚಾರ, ಗರ್ಭಿಣಿಯಾಗಿದ್ದವಳ ಜೀವಂತ ಹೂತುಹಾಕಲು ಯತ್ನ – ಇಬ್ಬರು ಸಹೋದರರ ಬಂಧನ

    ಭುವನೇಶ್ವರ: 15ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿಯಾಗಿದ್ದ ಆಕೆಯನ್ನು ಜೀವಂತವಾಗಿ ಹೂತುಹಾಕಲು ಯತ್ನಿಸಿದ ಇಬ್ಬರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ.

    ಒಡಿಶಾದ (Odisha) ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ಇಬ್ಬರು ಸಹೋದರರು ಸೇರಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. 5 ತಿಂಗಳ ಗರ್ಭಿಣಿಯಾಗಿದ್ದ ಆಕೆಯನ್ನು ಜೀವಂತವಾಗಿ ಹೂತುಹಾಕಲು ಯತ್ನಿಸಿದ್ದರು. ಇದನ್ನೂ ಓದಿ: ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಬನಶಬರಾ ಗ್ರಾಮದಿಂದ ಭಾಗ್ಯಾಧರ್ ದಾಸ್ ಮತ್ತು ಪಂಚನನ್ ದಾಸ್ ಹೆಸರಿನ ಇಬ್ಬರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಮೂರನೆಯ ಶಂಕಿತ ಕಾಣೆಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

    ಆರೋಪಿಗಳು ಅಪ್ರಾಪ್ತೆ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ. ಆಕೆ ಗರ್ಭಿಣಿಯಾಗಿರುವುದನ್ನು ತಿಳಿದು, ತಮ್ಮ ಅಪರಾಧವನ್ನು ಮರೆಮಾಚಲು ಆಕೆ ಹತ್ಯೆಗೆ ಮುಂದಾಗಿದ್ದರು. ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಅಪ್ರಾಪ್ತೆ ತನ್ನ ತಂದೆಗೆ ಘಟನೆ ಬಗ್ಗೆ ವಿವರಿಸಿದ್ದಾಳೆ. ನಂತರ ಜಿಲ್ಲಾ ಪ್ರಧಾನ ಕಚೇರಿಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಳೆ. ಕುಜಾಂಗ್ ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ಸಲ್ಲಿಸಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Ullu, ALTT ಬಾಲಾಜಿ ಸೇರಿದಂತೆ 25 OTT ಪ್ಲಾಟ್‌ಫಾರಂಗಳು ಬ್ಯಾನ್‌

    ಬಂಧಿತ ಇಬ್ಬರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಒಂದು ವಾರದ ಅವಧಿಯಲ್ಲಿ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದ ಎರಡನೇ ಅತ್ಯಾಚಾರ ಪ್ರಕರಣ ಇದಾಗಿದೆ.

  • ಬಾಳೆಹಣ್ಣಿನ ಆಮಿಷವೊಡ್ಡಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

    ಬಾಳೆಹಣ್ಣಿನ ಆಮಿಷವೊಡ್ಡಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

    ಅಮರಾವತಿ: ಮೂರು ವರ್ಷದ ಬಾಲಕಿಗೆ ಬಾಳೆಹಣ್ಣು ಕೊಡಿಸುವ ಆಮಿಷವೊಡ್ಡಿ ಆಕೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ನಡೆದಿದೆ.

    ಸಂತ್ರಸ್ತೆಯ ಪೋಷಕರು ಆಕೆಯನ್ನು ಹಳ್ಳಿಯೊಂದರ ಸಂಬಂಧಿಕರ ಮದುವೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ದುರುಳನೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಉಗ್ರರ ದಾಳಿಯಿಂದ 20,000 ಭಾರತೀಯರು ಸಾವು: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಭಾರತ ಕಿಡಿ

    ಬಾಲಕಿ ಹೊರಗೆ ಆಟವಾಡುತ್ತಿದ್ದಾಗ, ಆರೋಪಿ ರಹಮತ್‌-ಉಲ್ಲಾ ಬಾಳೆಹಣ್ಣಿನ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

    ಸಂತ್ರಸ್ತೆಯ ಪೋಷಕರು ಆಕೆಗಾಗಿ ಹುಡುಕಾಡಿದರೂ ಪತ್ತೆಯಾಗಲಿಲ್ಲ. ನಂತರ, ಆಕೆಯ ಶವ ಪೊದೆಯಲ್ಲಿ ಕಂಡುಬಂದಿದೆ. ನಂತರ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‌| ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ನಕ್ಸಲ್‌ ನಾಯಕರ ಎನ್‌ಕೌಂಟರ್‌

  • ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ – ಪಕ್ಕದ ಮನೆಯವನಿಂದಲೇ ಹೀನಕೃತ್ಯ

    ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ – ಪಕ್ಕದ ಮನೆಯವನಿಂದಲೇ ಹೀನಕೃತ್ಯ

    ಹಾಸನ: ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಎರಡು ಮಕ್ಕಳ ತಂದೆ, ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

    ಬಾಲಕಿಯ ಪಕ್ಕದ ಮನೆಯ ನಿವಾಸಿಯಿಂದಲೇ ಈ ಹೀನಕೃತ್ಯ ನಡೆದಿದೆ. ಮಂಗಳವಾರ ಬಾಲಕಿಯ ಮನೆಯವರು ಸಂಬಂಧಿಕರೊಬ್ಬರ ಬೀಗರ ಔತಣ ಕಾರ್ಯಕ್ರಮಕ್ಕೆ ಹೋಗಿದ್ದರು. ಬಾಲಕಿ ಒಬ್ಬಳೇ ಮನೆಯಲ್ಲಿದ್ದಳು. ಇದೇ ಸಮಯಕ್ಕಾಗಿ ಕಾದಿದ್ದ ಆರೋಪಿ, ಚಾಕೊಲೆಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

    ಸಂಜೆ ವೇಳೆಗೆ ಪೋಷಕರು ಬಂದಾಗ ಬಾಲಕಿಯ ವರ್ತನೆ ಬದಲಾಗಿತ್ತು. ಒಂದೇ ಸಮನೆ ಅಳಲಾರಂಭಿಸಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಗೆ ತೋರಿಸಿದಾಗ ಅತ್ಯಾಚಾರ ನಡೆದಿದೆ ಎಂಬುದು ದೃಢವಾಗಿದೆ.

    ವಿಷಯ ತಿಳಿಯುತ್ತಿದ್ದಂತೆ ಆರೋಪಿ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿ ತಲೆ ಮರೆಸಿಕೊಂಡಿದ್ದಾನೆ. ಬಾಲಕಿ ಪೋಷಕರು ಹಳೆಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

  • 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ

    ಭೋಪಾಲ್: ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಬಟ್ಟೆಯಿಂದ ಸುತ್ತಿರುವ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಮನೆಯ ಮೇಲ್ಛಾವಣಿ ಮೇಲೆ ಪತ್ತೆಯಾಗಿದೆ ಎಂದು ಸೊಹಾಗ್‍ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ರಜಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತ್ನಿ

    ಭಾನುವಾರ ರಾತ್ರಿ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಯ ನೆರೆಮನೆಯಲ್ಲಿ ವಾಸಿಸುತ್ತಿರುವ ಸಂಶಯಾಸ್ಪದ ವ್ಯಕ್ತಿಯನ್ನು ಪೊಲೀಸರು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

    POLICE JEEP

    ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದು, ಆಕೆಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕಿ ಶವ ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಪತ್ತೆಯಾದ ಹಿನ್ನೆಲೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

    ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆ ಸೆಕ್ಷನ್‍, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೋ) ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.