Tag: ಬಾಲಸೋರ್

  • ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಒಡಿಶಾ ವಿಧಾನಸೌಧ ಬಳಿ ಭುಗಿಲೆದ್ದ ಆಕ್ರೋಶ

    ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಒಡಿಶಾ ವಿಧಾನಸೌಧ ಬಳಿ ಭುಗಿಲೆದ್ದ ಆಕ್ರೋಶ

    – ಪ್ರೊಫೆಸರ್‌ನಿಂದ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ವಿದ್ಯಾರ್ಥಿನಿ

    ಭುವನೇಶ್ವರ: ಲೈಂಗಿಕ ಕಿರುಕುಳದಿಂದ ಬೇಸತ್ತು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಖಂಡಿಸಿ ಒಡಿಶಾದಲ್ಲಿ (Odisha Protest) ಪ್ರತಿಭಟನೆಗಳು ಭುಗಿಲೆದ್ದಿವೆ.

    ವಿದ್ಯಾರ್ಥಿನಿ ತನ್ನ ಕಾಲೇಜಿನ ವಿಭಾಗದ ಮುಖ್ಯಸ್ಥರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಳು. ಈ ಬಗ್ಗೆ ದೂರು ಕೂಡ ನೀಡಿದ್ದರು. ಯಾವುದೇ ಕ್ರಮ ಜರುಗಿಸದ ಬಗ್ಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದನ್ನೂ ಓದಿ: ಹೆಣ್ಣು ಅಂತ 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಪಾಪಿ ತಂದೆ

    ಪ್ರಕರಣ ಖಂಡಿಸಿ ಒಡಿಶಾದ ವಿಧಾನಸೌಧದ ಎದುರು ಭಾರಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಿಜು ಜನತಾದಳ (ಬಿಜೆಡಿ) ಕಾರ್ಯಕರ್ತರು ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ‘ಬಾಲಸೋರ್ ಬಂದ್’ಗೆ ಕರೆ ನೀಡಿದ್ದಾರೆ.

    ಪ್ರತಿಭಟನಾಕಾರರು ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಶಿಕ್ಷಣ ಸಚಿವ ಸೂರ್ಯಬಂಶಿ ಸೂರಜ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಪ್ರಕರಣದಲ್ಲಿ ಅವರು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್

    ನಮ್ಮ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಸಂತ್ರಸ್ತೆಗೆ ನ್ಯಾಯ ಸಿಗಬೇಕು. ಮುಖ್ಯಮಂತ್ರಿ ಮತ್ತು ರಾಜ್ಯ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು. ನಾವು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಬಾಲಸೋರ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಬಿಜೆಡಿ ಕಾರ್ಯಕರ್ತರೊಬ್ಬರು ಒತ್ತಾಯಿಸಿದ್ದಾರೆ.

    ಒಡಿಶಾದ ಬಾಲೇಶ್ವರ ಜಿಲ್ಲೆಯ ಫಕೀರ್‌ ಮೋಹನ್ ಕಾಲೇಜಿನಲ್ಲಿ ಬಿ.ಎಡ್‌ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ನನಗೆ ಪ್ರಾಧ್ಯಾಪಕರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ಆದರೆ, ಆಕೆಯ ದೂರನ್ನು ಪರಿಗಣಿಸದ ಕಾರಣ ಬೇಸತ್ತು ಕಾಲೇಜು ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

  • ಒಡಿಶಾ ರೈಲು ದುರಂತ – ಅಪಘಾತವಾಗಿ 51 ಗಂಟೆಗಳ ಬಳಿಕ ಮೊದಲ ರೈಲು ಸಂಚಾರ

    ಒಡಿಶಾ ರೈಲು ದುರಂತ – ಅಪಘಾತವಾಗಿ 51 ಗಂಟೆಗಳ ಬಳಿಕ ಮೊದಲ ರೈಲು ಸಂಚಾರ

    ಭುವನೇಶ್ವರ: ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿಕೊಂಡ ಬಾಲಸೋರ್‌ನಲ್ಲಿ ನಡೆದ ರೈಲುಗಳ ಅಪಘಾತವಾಗಿ (Odisha Train Tragedy) ಇದೀಗ ಹಳಿಗಳನ್ನು ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಅಪಘಾತವಾಗಿ 51 ಗಂಟೆಗಳಲ್ಲಿ ಮೊದಲ ರೈಲು ಹಳಿಯಲ್ಲಿ ಸಂಚರಿಸಿದ್ದು, ಇದೀಗ ಕಾರ್ಯಾಚರಣೆ ಪುನರಾರಂಭವಾಗಿದೆ.

    ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ನಡೆದ ತ್ರಿವಳಿ ರೈಲು ಅಪಘಾತದಲ್ಲಿ (Train Accident) 275 ಜನರು ಸಾವನ್ನಪ್ಪಿದ್ದರು ಹಾಗೂ 1,100 ಕ್ಕೂ ಹೆಚ್ಚು ಜನರು ಗಾಯಗೊಂಡರು. ಘಟನೆ ಬಳಿಕ ದುರಸ್ತಿ ಮಾಡಲಾದ ಹಳಿಗಳ ಮೂಲಕ ಮೊದಲ ರೈಲು ಸಂಚರಿಸಿದ ಸಂದರ್ಭ ರೈಲ್ವೆ ಸಚಿವರು ಖುದ್ದಾಗಿ ಸ್ಥಳದಲ್ಲಿ ಹಾಜರಿದ್ದರು.

    ಎರಡೂ ಹಳಿಗಳನ್ನು ದುರಸ್ತಿ ಮಾಡಲಾಗಿದೆ. 51 ಗಂಟೆಗಳಲ್ಲಿ ರೈಲುಗಳ ಸಂಚಾರವನ್ನು ಸಾಮಾನ್ಯಗೊಳಿಸಲಾಗಿದೆ. ಈಗಿನಿಂದ ರೈಲುಗಳ ಸಂಚಾರ ಮತ್ತೆ ಪ್ರಾರಂಭವಾಗುತ್ತದೆ. ಟ್ರ್ಯಾಕ್ ಲೈನ್ ಈಗ ರೈಲಿಗೆ ಸರಿಹೊಂದಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದನ್ನೂ ಓದಿ: ಭವಿಷ್ಯದ ಬಗ್ಗೆ ಮೋದಿ ಮಾತನಾಡಲ್ಲ, ವೈಫಲ್ಯಗಳಿಗೆ ಬೇರೆಯವರನ್ನು ದೂರುತ್ತಾರೆ: ರಾಹುಲ್ ಕಿಡಿ

    ಘಟನೆಯೇನು?
    3 ರೈಲುಗಳಾದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಹಾಗೂ ಗೂಡ್ಸ್ ರೈಲುಗಳ ನಡುವೆ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿತ್ತು. ಇದನ್ನು ಭಾರತದಲ್ಲೇ ಸಂಭವಿಸಿದ 3 ಅತ್ಯಂತ ಕೆಟ್ಟ ರೈಲ್ವೆ ಅಪಘಾತಗಳಲ್ಲಿ ಒಂದು ಎಂದು ಹೇಳಲಾಗಿದೆ.

    ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಅದರ ಹಲವು ಬೋಗಿಗಳು ಚದುರಿ ಹೋಗಿದ್ದವು. ಇದೇ ವೇಳೆ ಪಕ್ಕದ ಹಳಿಯಲ್ಲಿ ಹಾದು ಹೋಗುತ್ತಿದ್ದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ರೈಲಿಗೂ ಬೋಗಿಗಳು ಡಿಕ್ಕಿ ಹೊಡೆದು, ಅದರ ಕೆಲವು ಬೋಗಿಗಳೂ ಹಳಿ ತಪ್ಪಿದ್ದವು.

    ವರದಿಗಳ ಪ್ರಕಾರ ಸುಮಾರು 260 ಗಾಯಾಳುಗಳು ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಸುಮಾರು 900 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ ವಿಧ್ವಂಸಕ ಕೃತ್ಯವೇ? – ಪ್ರಾಥಮಿಕ ತನಿಖೆಯ ಬೆನ್ನಲ್ಲೇ ಎದ್ದಿವೆ ಹಲವು ಪ್ರಶ್ನೆಗಳು

  • ಒಡಿಶಾ ರೈಲು ದುರಂತ- ಗಾಯಾಳುಗಳಿಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಯುವಜನತೆ

    ಒಡಿಶಾ ರೈಲು ದುರಂತ- ಗಾಯಾಳುಗಳಿಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಯುವಜನತೆ

    ಭುವನೇಶ್ವರ: ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ಭೀಕರ ರೈಲು ಅಪಘಾತ (Train Accident) ನಡೆದಿದ್ದು, ಅಪಘಾತದ ನಂತರ ಗಾಯಾಳುಗಳಿಗೆ ರಕ್ತದಾನ (Blood Donation) ಮಾಡುವ ಸಲುವಾಗಿ ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ.

    ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದ್ದು, 900ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡು ಬಾಲಸೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಜನರು ಸ್ವಯಂಪ್ರೇರಿತರಾಗಿ ಗಾಯಾಳುಗಳಿಗೆ ರಕ್ತದಾನ ಮಾಡಲು ಕ್ಯೂನಲ್ಲಿ ನಿಂತಿದ್ದಾರೆ. ಅಪಘಾತದ ಸುದ್ದಿ ಹೊರಬೀಳುತ್ತಿದ್ದಂತೆ ರಾತ್ರಿಯಿಂದಲೇ ಸ್ಥಳೀಯ ನಿವಾಸಿಗಳು, ಅದರಲ್ಲೂ ಯುವಕರು ರಕ್ತದಾನ ಮಾಡಲು ಆಸ್ಪತ್ರೆಗೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ ಕಾರಣ- ಪ್ರಾಥಮಿಕ ವರದಿ

    ಸುಮಾರು 25 ಸ್ವಯಂಸೇವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಬಂದಿದ್ದೇವೆ. ನಮ್ಮ ರಕ್ತ ಒಬ್ಬರ ಜೀವ ಉಳಿಸಿದರೆ ಅದಕ್ಕಿಂತ ಸಂತೋಷ ಮತ್ತೊಂದಿಲ್ಲ ಎಂದು ಸರತಿ ಸಾಲಿನಲ್ಲಿ ನಿಂತಿದ್ದ ಸ್ವಯಂ ಸೇವಕರೊಬ್ಬರು ಹೇಳಿದ್ದಾರೆ. ಒಡಿಶಾದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜೆನಾ (Pradeep Kumar Jena) ಕೂಡ ಇಂತಹ ದುರಂತದ ಸಮಯದಲ್ಲಿ ರಕ್ತದಾನ ಮಾಡಿದ ಸ್ವಯಂಸೇವಕರಿಗೆ ಟ್ವೀಟ್ ಮೂಲಕ ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    ಬಾಲಾಸೋರ್‌ನಲ್ಲಿ ರಾತ್ರಿಯಿಡೀ 500 ಯೂನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ. ಪ್ರಸ್ತುತ 900 ಯೂನಿಟ್  ದಾಸ್ತಾನು ಇದೆ. ಇದು ಅಪಘಾತಕ್ಕೊಳಗಾದವರಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ರಕ್ತದಾನ ಮಾಡಿದ ಎಲ್ಲಾ ಸ್ವಯಂಸೇವಕರಿಗೆ ನಾನು ವೈಯಕ್ತಿಕವಾಗಿ ಋಣಿಯಾಗಿದ್ದೇನೆ ಮತ್ತು ಕೃತಜ್ಞನಾಗಿದ್ದೇನೆ ಎಂದು ಜೆನಾ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

  • ಹಳಿ ತಪ್ಪಿದ ರೈಲಿಗೆ ಯಶವಂತಪುರದಿಂದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಹಳಿ ತಪ್ಪಿದ ರೈಲಿಗೆ ಯಶವಂತಪುರದಿಂದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಭುವನೇಶ್ವರ: ಒಡಿಶಾದ (Odisha) ಬಾಲಸೋರ್ (Balasore) ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ (Yeshwantpur) ಹೌರಾದೆಡೆಗೆ (Howrah) ಸಾಗುತ್ತಿದ್ದ ಮತ್ತೊಂದು ರೈಲು (Train) ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೇ ವಕ್ತಾರ ಅಮಿತಾಬ್ ಶರ್ಮಾ, ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್‌ನ 10-12 ಬೋಗಿಗಳು ಬಾಲೇಶ್ವರ ಬಳಿ ಮತ್ತೊಂದು ಹಳಿ ಮೇಲೆ ಬಿದ್ದಿತ್ತು. ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ಹಲವರ ಸಾವಿನ ಶಂಕೆ

    ಸರಣಿ ಅಪಘಾತದಲ್ಲಿ ರೈಲುಗಳ ಬೋಗಿಯೊಳಗಡೆ ಹಲವರು ಸಿಕ್ಕಿಬಿದ್ದಿರುವುದಾಗಿ ವರದಿಗಳು ತಿಳಿಸಿವೆ. ಈಗಾಗಲೇ 50 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿ ಬಿದ್ದಿರುವುದರಿಂದ ಸಾವು ನೋವುಗಳ ಸಂಖ್ಯೆ ಹೆಚ್ಚುವ ಸಾದ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 200 ಯೂನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ವಾರ್ಷಿಕ ಸರಾಸರಿ ಅಸ್ತ್ರ ಬಳಸಿ ಬಿಲ್ ವಸೂಲಿ

    ಸಹಾಯವಾಣಿ ಸಂಖ್ಯೆಗಳು:
    ಹೌರಾ: 033-26382217
    ಖರಗ್‌ಪುರ: 8972073925 & 9332392339
    ಬಾಲಸೋರ್: 8249591559 & 7978418322
    ಶಾಲಿಮಾರ್: 9903370746

  • ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ಹಲವರ ಸಾವಿನ ಶಂಕೆ

    ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ಹಲವರ ಸಾವಿನ ಶಂಕೆ

    ಭುವನೇಶ್ವರ: ಒಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಹಲವರು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.

    ಮೂಲಗಳ ಪ್ರಕಾರ ಶಾಲಿಮಾರ್ – ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್ ಜಿಲ್ಲೆಯ ಬಹನಾಗಾ ರೈಲ್ವೇ ನಿಲ್ದಾಣದ ಬಳಿಕ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿನ 8 ಬೋಗಿಗಳು ಹಳಿತಪ್ಪಿವೆ. ಇದನ್ನೂ ಓದಿ: ಒಳ್ಳೆಯ ಬಟ್ಟೆ,‌ ದುಬಾರಿ ಸನ್‌ ಗ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ- 7 ಮಂದಿ ವಿರುದ್ಧ FIR

    ಎಕ್ಸ್‌ಪ್ರೆಸ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದ್ದು, ಹಲವು ಸಾವಾಗಿರುವುದಾಗಿ ಶಂಕಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧದ ಕುಸ್ತಿಪಟುಗಳ ಹೋರಾಟಕ್ಕೆ ಬಿಜೆಪಿ ಸಂಸದೆ ಬೆಂಬಲ