Tag: ಬಾಳೆಕಾಯಿ ಕಬಾಬ್

  • ಗರಂ ಗರಂ ಬಾಳೆಕಾಯಿ ಕಬಾಬ್ ಮಾಡುವ ಸರಳ ವಿಧಾನ ನಿಮಗಾಗಿ

    ಗರಂ ಗರಂ ಬಾಳೆಕಾಯಿ ಕಬಾಬ್ ಮಾಡುವ ಸರಳ ವಿಧಾನ ನಿಮಗಾಗಿ

    ವಿಶೇಷವೇನಿಲ್ಲ, ಆದರೂ ರುಚಿಯಾಗಿ ಏನಾದರೂ ತಿನ್ನಬೇಕು ಅನ್ನಿಸುತ್ತದೆ.  ಹಾಗಾದರೆ ನೀವು ಹೋಟೆಲ್‌ನಲ್ಲಿ ನಾಲಿಗೆ ಚಪ್ಪರಿಸಿ ತಿನ್ನುವ ಬಾಳೆಕಾಯಿ ಕಬಾಬ್ ಮನೆಯಲ್ಲಿ ಮಾಡಿ ಸವಿಯಿರಿ.

    ಬೇಕಾಗುವ ಸಾಮಗ್ರಿಗಳು:
    *ಬಾಳೆಕಾಯಿ- 4
    * ಮೈದಾ- 2 ಕಪ್
    * ಅರಿಶಿಣ ಪುಡಿ- 1 ಚಮಚ
    * ಏಲಕ್ಕಿ ಪುಡಿ- ಸ್ವಲ್ಪ
    * ಸಕ್ಕರೆ- ಸ್ವಲ್ಪ
    * ರುಚಿಗೆ ತಕ್ಕಷ್ಟು ಉಪ್ಪು
    * ಜೀರಿಗೆ- 1 ಚಮಚ
    * ಅಡುಗೆ ಎಣ್ಣೆ- 2 ಕಪ್

    ಮಾಡುವ ವಿಧಾನ:

    * ಬಾಳೆಕಾಯಿ ಸಿಪ್ಪೆ ತೆಗೆದು ಕಟ್ ಮಾಡಿಕೊಳ್ಳಬೇಕು.
    * ಮೈದಾಹಿಟ್ಟು, ಅರಿಶಿಣ, ಉಪ್ಪು, ಏಲಕ್ಕಿ ಪುಡಿ, ಸಕ್ಕರೆ ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಬೇಕು. ಇದನ್ನೂ ಓದಿ: ಮಂಗಳೂರು ಸ್ಟೈಲ್ ಚಿಕನ್ ಸುಕ್ಕಾ ಮಾಡೋ ಸುಲಭ ವಿಧಾನ

    * ಬಾಣಲೆಯಲ್ಲ ಅಡುಗೆ ಎಣ್ಣೆಯನ್ನು ಹಾಕಿ ಕಾಯಿಸ ಬೇಕು
    * ನಂತರ ಹಿಟ್ಟಿನ ಮಿಶ್ರಣದಲ್ಲಿ ಬಾಳೆಕಾಯಿಗಳನ್ನು ಅದಕ್ಕಿ ಬೋಂಡಾದಂತೆ ಕರಿಯಬೇಕು. ಇದನ್ನೂ ಓದಿ: ಅಕ್ಕಿ ರೊಟ್ಟಿಗೆ ಕಾಂಬಿನೇಷನ್ ಖಾರವಾದ ಚಿಕನ್ ಮಸಾಲ
    * ಈಗ ರುಚಿ ರುಚಿಯಾದ ಬಾಳೆಕಾಯಿ ಕಬಾಬ್ ಸವಿಯಲು ಸಿದ್ಧವಾಗುತ್ತದೆ.