Tag: ಬಾಸಿಲ್

  • ಒಟಿಟಿಗೂ ಬಂದ ರಾಜ್ ಬಿ ಶೆಟ್ಟಿ ಅವರ ಟೋಬಿ

    ಒಟಿಟಿಗೂ ಬಂದ ರಾಜ್ ಬಿ ಶೆಟ್ಟಿ ಅವರ ಟೋಬಿ

    ವರ್ಷ ತೆರೆಕಂಡ ಅನೇಕ ಸಿನಿಮಾಗಳಲ್ಲಿ ಪ್ರೇಕ್ಷಕರಿಂದ  ಅಪಾರ ಪ್ರಶಂಸೆಗೆ, ಚರ್ಚೆಗೆ ಒಳಗಾದ ಚಿತ್ರ ಟೋಬಿ (Toby) . ರಾಜ್ ಬಿ ಶೆಟ್ಟಿ ((Raj B Shetty)) ಬರೆದು, ನಟಿಸಿದ ದೊಡ್ಡ ವೆಚ್ಚದ ಚಿತ್ರ ಟೋಬಿ ಭಾಷೆಯ ಎಲ್ಲೆಯನ್ನೂ ಮೀರಿ ದೇಶದಾದ್ಯಂತ ಮೆಚ್ಚುಗೆಯನ್ನು ಪಡೆದಿತ್ತು.

    ಥಿಯೇಟರ್ ನಲ್ಲಿ ಗೆದ್ದ ಟೋಬಿಯನ್ನು ಒಟಿಟಿಯಲ್ಲಿ ನೋಡಲು ಕಾಯುತ್ತಿದ್ದ ಸಿನಿ ರಸಿಕರಿಗೆ ಹೊಸ ಮಾಹಿತಿಯೊಂದು ಬಂದಿದೆ, ಹೌದು ಟೋಬಿ ಚಿತ್ರ ಇದೇ ಡಿಸೆಂಬರ್ 22 ಕ್ಕೆ ಪ್ರಖ್ಯಾತ ಸೋನಿ ಲಿವ್ ಒಟಿಟಿ ಆ್ಯಪ್ ನಲ್ಲಿ ಬಿಡುಗಡೆಗೊಳ್ಳಲಿದೆ. ಒಟಿಟಿಯಲ್ಲಿ  ನೋಡಬೇಕು ಎಂದು ಕಾದವರಿಗೆ ಅವಕಾಶ ಸಿಕ್ಕಿದೆ.

    ಪುನೀತ್ ರಾಜ್ ಕುಮಾರ್ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ನ ನಂತರ ಸೋನಿ ಸಂಸ್ಥೆ ಯಲ್ಲಿ ಬಿಡುಗಡೆಗೊಳ್ಳಲಿರುವ ಎರಡನೇ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಯೂ ಟೋಬಿಗೆ ಸಿಕ್ಕಿದೆ. ಜೇಮ್ಸ್ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತ್ತು. ಈ ಸಿನಿಮಾಗೂ ಸಿಗಲಿದೆ ಎನ್ನುವ ವಿಶ್ವಾಸ ಸಂಸ‍್ಥೆಯದ್ದು.

    ರಾಜ್ ಬಿ ಶೆಟ್ಟಿ ಬರೆದು ನಟಿಸಿರುವ ಚಿತ್ರಕ್ಕೆ ಬಾಸಿಲ್ ಅಲ್ಚಾಲಕ್ಕಲ್ ನಿರ್ದೇಶನವಿದ್ದು,  ಪ್ರವೀಣ್ ಶ್ರೀಯಾನ್ ಛಾಯಗ್ರಹಣ ಮತ್ತು ಮಿಥುನ್ ಮುಕುಂದನ್ ಸಂಗೀತ ನೀಡಿದ್ದಾರೆ. ಈ ಚಿತ್ರವನ್ನು ಲೈಟರ್ ಬುದ್ಧ ಫಿಲ್ಮ್ಸ್, ಅಗಸ್ತ್ಯ ಫಿಲ್ಮ್ಸ್, ಕಾಫಿ ಗ್ಯಾಂಗ್ ಸ್ಟುಡಿಯೋಸ್ ಮತ್ತು ಸ್ಮೂತ್ ಸೈಲರ್ಸ್ ಜಂಟಿಯಾಗಿ ನಿರ್ಮಿಸಿದ್ದಾರೆ. ರಾಜ್ ಬಿ ಶೆಟ್ಟಿ ಯ ಜೊತೆಗೆ ಚೈತ್ರ ಜೆ ಆಚಾರ್, ಸಂಯುಕ್ತ ಹೊರನಾಡು, ಗೋಪಾಲಕೃಷ್ಣ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ, ಭರತ್ ಜಿ.ಬಿ ಮತ್ತಿತರ ತಾರಗಣವಿದೆ.

  • ಖ್ಯಾತ ಕಥೆಗಾರ ಟಿ.ಕೆ. ದಯಾನಂದ್ ಬರೆದ ಕಥೆಯೇ ‘ಟೋಬಿ’ ಸಿನಿಮಾ

    ಖ್ಯಾತ ಕಥೆಗಾರ ಟಿ.ಕೆ. ದಯಾನಂದ್ ಬರೆದ ಕಥೆಯೇ ‘ಟೋಬಿ’ ಸಿನಿಮಾ

    ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ (Raj B Shetty) ನಾಯಕರಾಗಿ ನಟಿಸಿರುವ ‘ಟೋಬಿ’ (Toby) ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ.

    ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮತ್ತೊಂದು ಖುಷಿ ಸಂಗತಿ ಅಂದರೆ, ಈ ಚಿತ್ರಕ್ಕೆ ಕಥೆ ಬರೆದದ್ದು ಖ್ಯಾತ ಕಥೆಗಾರ ಟಿ.ಕೆ ದಯಾನಂದ್ (T.K Dayanand). ಸಂಭಾಷಣೆಗಾರರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿರುವ ಟಿ.ಕೆ ದಯಾನಂದ್, ಬೆಲ್ ಬಾಟಮ್, ಅಶೋಕ ಬ್ಲೇಡ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಟೋಬಿಗೂ ಕೂಡ ಇವರದ್ದೇ ಕಥೆಯಿದೆ.  ಇದನ್ನೂ ಓದಿ:8 ವರ್ಷದ ಪ್ರೀತಿಗೆ ಸೈನಿಕನ ಜೊತೆ ಮದುವೆಯೆಂಬ ಮುದ್ರೆ ಒತ್ತಲು ರೆಡಿಯಾದ ‘ಗಿಣಿರಾಮ’ ನಟಿ

    ರಾಜ್ ಬಿ ಶೆಟ್ಟಿ  ಈವರೆಗಿನ ಚಿತ್ರಗಳ ಪೈಕಿ ಟೋಬಿ ಬಿಗ್ ಬಜೆಟ್ ನ ಚಿತ್ರವಾಗಿದೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

     

    ಮೂಲಕಥೆ ಟಿ.ಕೆ ದಯಾನಂದ್ ಅವರದು. ರಾಜ್ ಬಿ ಶೆಟ್ಟಿ ರಚೆನೆ ಹಾಗೂ ಬಾಸಿಲ್ (Basil) ಅವರ ನಿರ್ದೇಶನ ಈ ಚಿತ್ರಕ್ಕಿದೆ. ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ, ಪ್ರವೀಣ್ ಶ್ರೀಯನ್ ಛಾಯಾಗ್ರಹಣ –  ಸಂಕಲನ ಹಾಗೂ ಅರ್ಜುನ್ ರಾಜ್ – ರಾಜಶೇಖರ್ ಅವರ ಸಾಹಸ ನಿರ್ದೇಶನ ಟೋಬಿ ಚಿತ್ರಕಿದ್ದು,  ರಾಜ್ ಬಿ ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಆಚಾರ್, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್ ರಾಜ್ ಶೆಟ್ಟಿ  ಮುಂತಾದವರು  ತಾರಾಬಳಗದಲ್ಲಿದ್ದಾರೆ.