Tag: ಬಿಎಲ್ ಶಂಕರ್

  • ರಾಜ್ಯಸಭೆಗೆ ಬಿಎಲ್‌ ಶಂಕರ್‌ ಆಯ್ಕೆ ಮಾಡಿ: ಮಲೆನಾಡು ಕರಾವಳಿ ಜನಪರ ಒಕ್ಕೂಟದಿಂದ ಒತ್ತಾಯ

    ರಾಜ್ಯಸಭೆಗೆ ಬಿಎಲ್‌ ಶಂಕರ್‌ ಆಯ್ಕೆ ಮಾಡಿ: ಮಲೆನಾಡು ಕರಾವಳಿ ಜನಪರ ಒಕ್ಕೂಟದಿಂದ ಒತ್ತಾಯ

    ಬೆಂಗಳೂರು: ರಾಜ್ಯಸಭೆ ಚುನಾವಣೆ (Rajya Sabha Election) ಘೋಷಣೆಯಾಗಿದ್ದು, ಆ ಸ್ಥಾನಕ್ಕೆ ಮಲೆನಾಡು ಮತ್ತು ಕರಾವಳಿ ಭಾಗದ ಸಮಸ್ಯೆಗಳಿಗೆ ಧ್ವನಿಯಾಗುವ ಕಾಂಗ್ರೆಸ್‌ನ (Congress) ಹಿರಿಯ ನಾಯಕ ಬಿ.ಎಲ್.ಶಂಕ‌ರ್ (BL Shankar) ಅವರನ್ನು ಆಯ್ಕೆ ಮಾಡಬೇಕು ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟ ಸಂಘಟನೆ ಒತ್ತಾಯಿಸಿದೆ.

    ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಲೆನಾಡು ಕರಾವಳಿ ಜನಪರ ಒಕ್ಕೂಟದ ಸದಸ್ಯರು ಮಲೆನಾಡು ಹಾಗೂ ಕರಾವಳಿಯಲ್ಲಿ ಅರಣ್ಯ ಇಲಾಖೆ, ಕಸ್ತೂರಿ ರಂಗನ್ ವರದಿ, ಹಳದಿ ಎಲೆ ರೋಗ ಸೇರಿ ಹಲವು ಸಮಸ್ಯೆಗಳು ಬಾಧಿಸುತ್ತಿವೆ.ಹಾಲಿ ಸಂಸದರುಗಳು ಜನರಿಗೆ, ರೈತರಿಗೆ ನ್ಯಾಯ ದೊರಕಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ರಾಷ್ಟ್ರ ಮಟ್ಟದಲ್ಲಿ ಇಲ್ಲಿನ ಸಮಸ್ಯೆಯನ್ನು ಬಿಂಬಿಸಿ ನ್ಯಾಯ ದೊರಕಿಸಲು ಬಿ.ಎಲ್.ಶಂಕರ್ ಅವರನ್ನು ಕಾಂಗ್ರೆಸ್‌ನಿಂದ ರಾಜ್ಯಸಭೆ ಸದಸ್ಯರಾಗಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಕೇಸ್‌ – ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

     

    ಕಾಂಗ್ರೆಸ್‌ ಪಕ್ಷಕ್ಕೆ ಬಿ.ಎಲ್.ಶಂಕರ್ ಅವರ ಶ್ರಮವನ್ನು ಮರೆಯುವಂತಿಲ್ಲ. ಆದ್ದರಿಂದ ಕಾಂಗ್ರೆಸ್‌ನಿಂದ ಶಂಕರ್‌ ಅವರನ್ನು ಅಯ್ಕೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದಿದ್ದಾರೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮನವಿ ಮಾಡುತ್ತೇವೆ ಎಂದು ಹೇಳಿದರು.

     

  • ಬೆಂಗಳೂರು ಉತ್ತರದಿಂದ ಮಾಜಿ ಶಿಷ್ಯನನ್ನು ಅಖಾಡಕ್ಕೆ ಇಳಿಸಲು ಎಚ್‍ಡಿಡಿ ಪ್ಲಾನ್!

    ಬೆಂಗಳೂರು ಉತ್ತರದಿಂದ ಮಾಜಿ ಶಿಷ್ಯನನ್ನು ಅಖಾಡಕ್ಕೆ ಇಳಿಸಲು ಎಚ್‍ಡಿಡಿ ಪ್ಲಾನ್!

    ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಎಲ್ ಶಂಕರ್ ಅವರನ್ನು ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.

    ಹೌದು. ದೋಸ್ತಿ ಪಕ್ಷಗಳ ಸೀಟು ಹಂಚಿಕೆ ಪ್ರಕಾರ ಬೆಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಪಾಲಾಗಿದೆ.  ಈ ಕ್ಷೇತ್ರದಲ್ಲಿ  ಜೆಡಿಎಸ್ ಪ್ರಬಲ ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮಾಜಿ ಶಿಷ್ಯ, ಬಿಎಲ್ ಶಂಕರ್ ಅವರನ್ನು ಕಣಕ್ಕೆ ಇಳಿಸಲು ದೇವೇಗೌಡರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಕಣಕ್ಕೆ ನಿಲ್ಲುವುದು ಅಧಿಕೃತವಾದ ಹಿನ್ನೆಲೆಯಲ್ಲಿ ದೇವೇಗೌಡರು ಬೆಂಗಳೂರು ಉತ್ತರ, ತುಮಕೂರು ಈ ಕ್ಷೇತ್ರಗಳ ಪೈಕಿ ಎಲ್ಲಿ ನಿಲ್ಲಲ್ಲಿದ್ದಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈಗ  ತುಮಕೂರು ಕ್ಷೇತ್ರದಲ್ಲಿ ನಿಲ್ಲುವುದು ಅಧಿಕೃತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರದಿಂದ ಬಿಎಲ್ ಶಂಕರ್ ಅವರನ್ನು ನಿಲ್ಲಿಸುವ ಪ್ರಸ್ತಾಪವನ್ನು ಎಚ್‍ಡಿಡಿ ಮುಂದಿಟ್ಟಿದ್ದಾರೆ.

    ‘ಕೋಟಾ ನಮ್ಮದು ಕ್ಯಾಂಡಿಡೇಟ್’ ನಿಮ್ಮದು ಸೂತ್ರದ ಅಡಿ ದೇವೇಗೌಡರು ಈ ವಿಚಾರವನ್ನು ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿದ್ದಾರೆ. ಈ ಸಂಬಂಧ ಬಿ.ಎಲ್.ಶಂಕರ್ ಅವರ ಜೊತೆಗೂ ದೇವೇಗೌಡರು ಚರ್ಚೆ ನಡೆಸಿದ್ದಾರೆ. ಕೈ ಮತ್ತು ತೆನೆ ನಾಯಕರು ಚರ್ಚೆ ನಡೆಸಿದ ಬಳಿಕ ತನ್ನ ನಿರ್ಧಾರ ಪ್ರಕಟಿಸಲು ಶಂಕರ್ ಅವರು ಕಾಲಾವಕಾಶ ಕೇಳಿದ್ದಾರೆ ಎನ್ನುವ ವಿಚಾರ ಈಗ ತಿಳಿದುಬಂದಿದೆ.

    ಜೆಡಿಎಸ್ ಸ್ಪರ್ಧಿಸಲ್ಲ ಯಾಕೆ?
    ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದ, ಕೇಂದ್ರ ಸಚಿವ ಸದಾನಂದ ಗೌಡ ಅವರು ಈ ಬಾರಿಯೂ ಈ ಕ್ಷೇತ್ರದಿಂದಲೇ ಕಣಕ್ಕೆ ಇಳಿಯುವುದು ಬಹುತೇಕ ಅಂತಿಮವಾಗಿದೆ. ಕಳೆದ ಚುನಾವಣೆಯಲ್ಲಿ ಡಿವಿಎಸ್ 2.29 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜಯಗಳಿಸಿದ್ದರು. ಡಿವಿಎಸ್ 7,18,326 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಸಿ.ನಾರಾಯಣ ಸ್ವಾಮಿ 4,88,562 ಮತಗಳನ್ನು ಪಡೆದಿದ್ದರು. ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಅಬ್ದುಲ್ ನಜೀಂ ಕೇವಲ 92,681 ಮತಗಳನ್ನು ಪಡೆದಿದ್ದರು. 1996ರ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ನಾರಾಯಣ ಸ್ವಾಮಿ ಗೆಲುವು ಪಡೆದಿದಿದ್ದರು. ನಂತರ ನಡೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಜಾಫರ್ ಷರೀಫ್ ಆಯ್ಕೆ ಆಗಿದ್ದರು. 2004, 2009, 2014ರವರೆಗೆ ನಡೆದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಬಿಜೆಪಿ ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿತ್ತು.